Author: ನ್ಯೂಸ್ ಬ್ಯೂರೋ

ಬೈಂದೂರು: ರಾಜ್ಯದ ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅತಿಥಿ ಉಪನ್ಯಾಸಕರುಗಳಿಗೆ ಕೆಲಸ ಭದ್ರತೆ ನೀಡಬೇಕಿದ್ದ ಸರಕಾರ ಖಾಯಂ ಉಪನ್ಯಾಸಕರ ನೇಮಕಾತಿಯಲ್ಲಿ ತಾರತಮ್ಯ ನೀತಿ ತಳೆದು ನಮ್ಮನ್ನು ಬೀದಿ ತರುವ ಹುನ್ನಾರ ನಡೆಸಿದೆ ಎಂದು ಉಡುಪಿ ಜಿಲ್ಲಾ ಅತಿಥಿ ಉಪನ್ಯಾಸಕರ ಸಂಘದ ಜಿಲ್ಲಾಧಕ್ಷ ರಂಜಿತ್‌ಕುಮಾರ್ ಶೆಟ್ಟಿ ವಕ್ವಾಡಿ ಆರೋಪಿಸಿದರು. [quote font_size=”16″ bgcolor=”#ffffff” arrow=”yes” align=”right”]ಸ್ಥಳಕ್ಕಾಗಮಿಸಿದ ಬೈಂದೂರು ಶಾಸಕ ಕೆ. ಗೋಪಾಲ ಪೂಜಾರಿ ಪ್ರತಿಭಟನಾಕಾರರ ಮನವಿ ಸ್ವೀಕರಿಸಿ ಮಾತನಾಡಿ, ಈ ವಿಚಾರವನ್ನು ನೇರವಾಗಿ ಮುಖ್ಯಮಂತ್ರಿಗಳ ಗಮನಕ್ಕೆ ತಂದು ಚರ್ಚಿಸುತ್ತೇನೆ. ನಿಮ್ಮ ಹೋರಾಟಕ್ಕೆ ಧನಿಯಾಗಿ ನಿಲ್ಲುತ್ತೇನೆ. ಸದ್ಯ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಚುನಾವಣೆಯ ಬಳಿಕ ಮುಂದಿನ ನಿರ್ಣಯ ಕೈಗೊಳುವ ಬಗ್ಗೆ ಚಿಂತಿಸುವುದಾಗಿ ತಿಳಿಸಿದರು. ಸಮಾಜದ ಸತ್ಪ್ರಜೆಗಳನ್ನು ರೂಪಿಸುವ ನೀವುಗಳೇ ಚುನಾವಣೆ ಬಹಿಷ್ಕಾರದಂತಹ ನಿರ್ಣಯ ಕೈಗೊಳ್ಳುವುದು ಸರಿಯಲ್ಲ ಎಂದು ಪ್ರತಿಭಟನಾಕಾರ ಮನವೋಲಿಸಿದರು.[/quote] ಬೈಂದೂರು ವಿಶೇಷ ತಹಶೀಲ್ದಾರರ ಕಛೇರಿ ಎದುರು ಅತಿಥಿ ಉಪನ್ಯಾಸಕರ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಹಮ್ಮಿಕೊಳ್ಳಲಾದ ಪ್ರತಿಭಟನೆಯ ನೇತೃತ್ವ ವಹಿಸಿ…

Read More

ಗಂಗೊಳ್ಳಿ: ಇತ್ತೀಚಿನ ದಿನಗಳಲ್ಲಿ ಸಂಸ್ಕೃತಿ ಸಂಸ್ಕಾರದ ಕೊರತೆಯಿಂದ ಯುವಜನರು ದಾರಿ ತಪ್ಪುತ್ತಿದ್ದಾರೆ. ಇಂದು ಮಕ್ಕಳಿಗೆ ಹೆಚ್ಚೆಚ್ಚು ಕಲಿಯಲು ಪ್ರೋತ್ಸಾಹ ದೊರೆಯುತ್ತಿದ್ದರೂ ಅವರಲ್ಲಿ ಸರಿಯಾದ ಮಾರ್ಗದರ್ಶನದ ಕೊರತೆ ಎದ್ದು ಕಾಣುತ್ತಿದೆ. ಹೀಗಾಗಿ ಮಕ್ಕಳಿಗೆ ಬಾಲ್ಯದಲ್ಲಿ ಸಂಸ್ಕೃತಿ ಹಾಗೂ ಸಂಸ್ಕಾರದ ಶಿಕ್ಷಣ ನೀಡಬೇಕಾದ ಅವಶ್ಯಕತೆ ಇದೆ ಎಂದು ತೆಕ್ಕಟ್ಟೆ ಸೇವಾ ಸಂಗಮದ ವಿಶ್ವಸ್ಥ ಕೃಷ್ಣರಾಯ ಶ್ಯಾನುಭಾಗ್ ಅಭಿಪ್ರಾಯಪಟ್ಟರು. ಅವರು ಗಂಗೊಳ್ಳಿಯ ಸೇವಾ ಸಂಗಮ ನಿವೇದಿತಾ ಶಿಶು ಮಂದಿರದ ಆಶ್ರಯದಲ್ಲಿ ಶಿಶು ಮಂದಿರದ ನಗರ ಜಯವಂತ ನಾಯಕ್ ಸಭಾಭವನದಲ್ಲಿ ಜರಗಿದ ಪಾಲಕರ ಮಿಲನ ಕಾರ್ಯಕ್ರಮದಲ್ಲಿ ಬೌದ್ಧಿಕ್ ನೀಡಿ ಮಾತನಾಡಿದರು. ನಾವು ನಮ್ಮ ಜೀವನದ ಅವಲೋಕನ ಮಾಡಿಕೊಳ್ಳಬೇಕಾದ ಅನಿವಾರ್ಯತೆ ಇದೆ. ಮಕ್ಕಳನ್ನು ಮುದ್ದು ಮಾಡುವುದು, ಅವರ ಅವಶ್ಯಕತೆಗಳನ್ನು ಪೂರೈಸುವುದು ಸಹಜ. ಆದರೆ ಜೊತೆಗೆ ಅವರ ಸರ್ವತೋಮುಖ ಬೆಳವಣಿಗೆ ಬಗ್ಗೆ ಹೆಚ್ಚಿನ ಗಮನಹರಿಸಬೇಕಾದುದು ಅತ್ಯವಶ್ಯಕ. ಅವರು ಉತ್ತಮ ಶಿಕ್ಷಣ ಪಡೆದು ಸಮಾಜದಲ್ಲಿ ಉತ್ತಮ ಸ್ಥಾನಮಾನ ಪಡೆದು ಗುರುತಿಸಿಕೊಳ್ಳುವಂತಾಗಬೇಕು. ಈ ನಿಟ್ಟಿನಲ್ಲಿ ಹೆತ್ತವರ ಹಾಗೂ ಪೋಷಕರು ತಮ್ಮ ಮಕ್ಕಳ ಕಡೆ…

Read More

ಬೈಂದೂರು: ಇಲ್ಲಿನ ಐತಿಹಾಸಿಕ ಪ್ರಸಿದ್ದ ವತ್ತಿನಕಟ್ಟೆ ಶ್ರೀ ಮಹಾಸತಿ ಅಮ್ಮನವರ ದೇವಸ್ಥಾನದಲ್ಲಿ ಫೆ.09ರಿಂದ ಫೆ.13ರವರೆಗೆ ನಡೆಯಲಿರುವ ಸಾರ್ವಜನಿಕ ಲಕ್ಷಮೋದಕ ಗಣಪತಿ ಮಹಾಯಾಗ ಮತ್ತು ಫೆ.13ರಂದು ನಡೆಯುವ ವಿಶೇಷ ಚತುಃಪವಿತ್ರ ನಾಗಮಂಡಲೋತ್ಸವ ಕಾರ್ಯಕ್ರಮಕ್ಕೆ ಅಂತಿಮ ಹಂತದ ಸಿದ್ದತೆ ಪೂರ್ಣಗೊಂಡಿದೆ. ಧಾರ್ಮಿಕ ಪೂಜೆಗಳು ನಡೆಯುವ ಸ್ಥಳದಲ್ಲಿ ಬೃಹತ್ ಚಪ್ಪರ, ಪಾರ್ಕಿಂಗ್ ವ್ಯವಸ್ಥೆ ಹಾಗೂ ಸುಮಾರು 20 ಸಾವಿರ ಜನರು ಕುಳಿತುಕೊಳ್ಳಬಹುದಾದ ಅನ್ನಸಂತರ್ಪಣೆ ಚಪ್ಪರಗಳನ್ನು ನಿರ್ಮಾಣ ಮಾಡಲಾಗಿದೆ. ಪ್ರತಿಯೊಂದು ಹಂತದಲ್ಲಿಯೂ ಕೂಡಾ ಸ್ವಯಂಸೇವಕರು ವಿಶೇಷ ಮುತುವರ್ಜಿವಹಿಸಿ ಕೆಲಸ ಮಾಡುತ್ತಿದ್ದಾರೆ. ಫೆ.09 ಬೆಳಿಗ್ಗೆ ಸಾಮೂಹಿಕ ಪ್ರಾರ್ಥನೆಯೊಂದಿಗೆ ಧಾರ್ಮಿಕ ವಿಧಿ-ವಿಧಾನಗಳು ಪ್ರಾರಂಭಗೊಳ್ಳಲಿದೆ. ಸಂಜೆ ರಾಕ್ಷೋಘ್ನಹೋಮ, ವಾಸ್ತುಪೂಜೆ, ಬಲಿ ಕುಂಡಮಂಟಪ ಸಂಸ್ಕಾರ, ಅಗ್ನಿಜನನ ನಡೆಯಲಿದೆ. ಫೆ.10ರಂದು ಬೆಳಿಗ್ಗೆ ಲಕ್ಷಮೋದಕ ಗಣಪತಿ ಮಹಾಯಾಗಾರಂಭ ಹಾಗೂ ಸಂಜೆ ವಿಶೇಷ ಪೂಜೆ, ಅಷ್ಟಾವಧಾನ ಸೇವೆ, ಶ್ರೀಮಹಾಸತಿ ಅಮ್ಮನವರ ಸನ್ನಿಧಿಯಲ್ಲಿ ವರ್ಧಂತಿ ಅಂಗವಾಗಿ ಅಷ್ಟೋತ್ತರ ಶತಕಲಶ ಸ್ಥಾಪನೆ, ಕಲಾತತ್ವಹೋಮ ನಡೆಯಲಿದೆ. ಫೆ.11ರಂದು ಬೆಳಿಗ್ಗೆ ಲಕ್ಷಮೋದಕ ಗಣಪತಿ ಮಹಾಯಾಗ, ಶ್ರೀಮಹಾಸತಿ ಅಮ್ಮನವರಿಗೆ ಬ್ರಹ್ಮಕಲಾಶಾಭಿಷೇಕ, ಮಹಾಪೂಜೆ ಹಾಗೂ ಸಂಜೆ…

Read More

ಬೈಂದೂರು: ಮನುಷ್ಯನ ಆರೋಗ್ಯಕ್ಕೆ ಯಾವುದೇ ತೊಂದರೆಯಾದಾಗ ಮನಕ್ಲೇಷ ಉಂಟಾಗುತ್ತದೆ. ಆಗ ಏನಿದ್ದರೂ ಸುಖ ಅನುಭವಿಸಲು ಅಸಾಧ್ಯ. ಸುಖಕ್ಕೆ ಆರೋಗ್ಯವೇ ಮೂಲ ಕಾರಣ. ಆದುದರಿಂದ ಆರೋಗ್ಯ ರಕ್ಷಣೆಗೆ ಪ್ರಾಶಸ್ತ್ಯ ನೀಡಬೇಕು ಎಂದು ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಧನ್ವಂತರಿ ಆಯುರ್ವೇದ ಕಾಲೇಜಿನ ಪ್ರಾಚಾರ್ಯರಾದ ಡಾ. ರೂಪಾ ಆರ್. ಭಟ್ ಹೇಳಿದರು. ಹೊಸ ಆಡಳಿತದಡಿ ಪುನರಾರಂಭಗೊಂಡ ಬೈಂದೂರಿನ ಅಂಜಲಿ ಆಸ್ಪತ್ರೆಯಲ್ಲಿ ಭಾನುವಾರ ಏರ್ಪಡಿಸಿದ್ದ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಅವರು ಉದ್ಘಾಟಿಸಿ ಮಾತನಾಡಿದರು. ಅನಾರೋಗ್ಯ ಕಾಡಿದಾಗ ಮಾತ್ರ ವೈದ್ಯರ ಬಳಿ ಹೋಗುವ ಪ್ರವೃತ್ತಿ ಸರಿಯಾದುದಲ್ಲ. ನಿಗದಿತವಾಗಿ ಆರೋಗ್ಯ ತಪಾಸಣೆ ಮಾಡಿಕೊಳ್ಳುವುದರಿಂದ ಆರೋಗ್ಯ ಕಾಪಾಡಿಕೊಳ್ಳುವುದು ಸುಲಭವಾಗುತ್ತದೆ. ಜೀವನ ಮೌಲ್ಯಗಳನ್ನು ಕಡೆಗಣಿಸಿ, ಐಷಾರಾಮಿ ಬದುಕಿಗೆ ಹಾತೊರೆಯುವುದರಿಂದ ಮಾನಸಿಕ ಕಾಯಿಲೆಗಳು ಹೆಚ್ಚುತ್ತಿವೆ. ಈ ದಿಕ್ಕಿನಲ್ಲಿಯೂ ಜನರು ಚಿಂತಿಸಬೇಕು ಎಂದು ಅವರು ಹೇಳಿದರು. ಅಧ್ಯಕ್ಷತೆ ವಹಿಸಿದ್ದ ನಿವೃತ್ತ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಬಿ. ಜಗನ್ನಾಥ ಶೆಟ್ಟಿ ಡಾ. ಸುಬ್ರಹ್ಮಣ್ಯ ಭಟ್ ನೇತೃತ್ವದಲ್ಲಿ ಪುನರಾರಂಭವಾಗಿರುವ ಅಂಜಲಿ ಆಸ್ಪತ್ರೆ ಉತ್ತಮ ಸೇವೆ ನೀಡುವ…

Read More

ಬೈಂದೂರು: ಬಿಜೂರು ಗ್ರಾಮದ 2ನೇ ವಾರ್ಡಿನ ಸಾಲಿಮಕ್ಕಿ ಭಾಗದ ನಿವಾಸಿಗಳು ಈ ಬಾರಿಯ ಜಿಲ್ಲಾ ಪಂಚಾಯತ್ ಹಾಗೂ ತಾಲೂಕು ಪಂಚಾಯತ್ ಚುನಾವಣೆಯನ್ನು ಬಹಿಷ್ಕರಿಸಿದ ಹಿನ್ನೆಲೆಯಲ್ಲಿ ಈ ಪ್ರದೇಶಕ್ಕೆ ಭೇಟಿ ನೀಡಿದ ಶಾಸಕ ಕೆ. ಗೋಪಾಲ ಪೂಜಾರಿ ಅವರನ್ನು ಗ್ರಾಮಸ್ಥರು ತರಾಟೆಗೆ ತೆಗೆದುಕೊಂಡರು. ಈ ಭಾಗದಲ್ಲಿ ಸಮರ್ಪಕ ರಸ್ತೆ ದುರಸ್ತಿ, ಚರಂಡಿ, ಕುಡಿಯುವ ನೀರು, ದಾರಿದೀಪ, ಸೇತುವೆ ನಿರ್ಮಾಣ ಮೊದಲಾದ ಮೂಲಸೌಕರ್ಯಕ್ಕಾಗಿ ನಾವು ಕಳೆದ ನಾಲ್ಕು ದಶಕದಿಂದ ಹೋರಾಟ ನಡೆಸುತ್ತಾ ಬಂದಿದ್ದೇವೆ, ಆದರೆ ಇದುವರೆಗೂ ನಮ್ಮ ಬೇಡಿಕೆ ಈಡೇರಿಲ್ಲ. ಚುನಾವಣಾ ಸಂದರ್ಭದಲ್ಲಿ ಈ ಭಾಗಕ್ಕೆ ಭೇಟಿ ನೀಡುವ ಜನಪ್ರತಿನಿಧಿಗಳು ಸಮಸ್ಯೆ ಬಗೆಹರಿಸುವ ಭರವಸೆ ನೀಡಿ ನುಣುಚಿಕೊಳ್ಳುತ್ತಾರೆ ಎಂದು ಗ್ರಾಮಸ್ಥರು ಆರೋಪಿಸಿದ್ದರು. ಇಲ್ಲಿನ ಸಮಸ್ಯೆಗಳಿಗೆ ಮತ್ತು ಮತದಾನ ಬಹಿಷ್ಕಾರ ಹಾಕಿದ ಗ್ರಾಮಸ್ಥರನ್ನು ಸ್ಪಂದಿಸಿದ ’ವಿಜಯವಾಣಿ’ ಸಚಿತ್ರ ವರದಿ ಪ್ರಕಟಿಸಿತ್ತು. ಗ್ರಾಮಸ್ಥರ ಸಮಸ್ಯೆ ಆಲಿಸಿದ ಶಾಸಕರು ಈಗ ಚುನಾವಣಾ ನೀತಿ ಸಂಹಿತೆಯ ಹಿನ್ನೆಲೆಯಲ್ಲಿ ಭರವಸೆ ನೀಡಲು ಸಾಧ್ಯವಿಲ್ಲ, ಚುನಾವಣೆಯ ಬಳಿಕ ಇಲ್ಲಿನ ರಸ್ತೆ ದುರಸ್ತಿ ಹಾಗೂ…

Read More

ಕುಂದಾಪುರ: ಹಿಂದೆ ಮೌಲ್ಯಾಧಾರಿತ ಶಿಕ್ಷಣಕ್ಕೆ ಹೆಚ್ಚು ಪ್ರಧಾನತೆ ನೀಡುತ್ತಿದ್ದು, ಪ್ರಸಕ್ತ ಕಾಲಘಟ್ಟದಲ್ಲಿ ಶಿಕ್ಷದಲ್ಲಿ ಮೌಲ್ಯ ಕಡಿಮೆಯಾಗುತ್ತಿದೆ. ಸಂಘಟನೆ ಮೂಲಕ ವೇದ, ಸಂಸ್ಕಾರ, ಪುರಾಣದೊಟ್ಟಿಗೆ ನಮ್ಮತನದ ಅರಿವು ಮೂಡಿಸುವ ಶಿಕ್ಷಣ ಕೊಡಬೇಕಿದೆ ಎಂದು ಶ್ರೀ ಕ್ಷೇತ್ರ ಗೋಕರ್ಣ ವೇ.ಮೂ. ಸುಬ್ರಹ್ಮಣ್ಯ ಅಡಿ ಹೇಳಿದ್ದಾರೆ. ಕುಂದಾಪುರ ತಾಲೂಕ್ ದ್ರಾವಿಡ ಬ್ರಾಹ್ಮಣ ಪರಿಷತ್ ಮರವಂತೆ ವಲಯ, ವಿಪ್ರ ಯುವ ವೇದಿಕೆ, ವಿಪ್ರ ಮಹಿಳಾ ವೇದಿಕೆ ಆಶ್ರಯದಲ್ಲಿ ಹೊರ್ಣಿ ಗುಡ್ಡೇರ‍್ಮನೆಯಲ್ಲಿ ನಡೆದ ಏಕ್ ವಿಂಶತಿ ವಿಪ್ರ ಅಧಿವೇಶನ ಉದ್ಘಾಟಿಸಿ ಮಾತನಾಡುತ್ತಿದ್ದರು. ಬ್ರಾಹ್ಮಣ ಸಂಘನಾ ಶಕ್ತಿಯಿಂದ ಜಗತ್ತಿನ ಸ್ಥಿತಿ ಬದಾಲಾಯಿಸುವ ತಾಕತ್ತಿದ್ದು, ಇಂದಿನ ಪರೀಸ್ಥಿತಿಯಲ್ಲಿ ಸಂಘಟನೆ ಪ್ರಾಮುಖ್ಯವಾಗಿದೆ. ಸಂಘಟನೆ ಬಲಪಡಿಸಲು ಯುವಕರಲ್ಲಿ ಜಾಗೃತಿ ಮೂಡಿಸುವ ಹರ್ಕತ್ತಿದೆ ಎಂದು ಹೇಳಿದರು. ದ್ರಾವಿಡ ಬ್ರಾಹ್ಮಣ ಪರಿಷತ್ ಮರವಂತೆ ವಲಯ ಅಧ್ಯಕ್ಷ ಕೆ.ನಾಗಪ್ಪಯ್ಯ ಹೆಬ್ಬಾರ್ ಅಧ್ಯಕ್ಷತೆ ವಹಿಸಿದ್ದರು. ಕುಂದಾಪುರ ತಾಲೂಕ್ ದ್ರಾವಿಡ ಬ್ರಾಹ್ಮಣ ಪರಿಷತ್ ಅಧ್ಯಕ್ಷ ಗಣೇಶ್ ರಾವ್ ಕುಂಭಾಶಿ, ತಾಲೂಕ್ ದ್ರಾವಿಡ ಬ್ರಾಹ್ಮಣ ಪರಿಷತ್ ನಿಕಟಪೂರ್ವ ಅಧ್ಯಕ್ಷರಾದ ಶ್ರೀನಿವಾಸ ಹೆಬ್ಬಾರ್, ಯ.ಲಕ್ಷ್ಮೀನಾರಾಯಣ…

Read More

ಕುಂದಾಪುರ: ಇಲ್ಲಿನ ಗಾಂಧಿ ಮೈದಾನದಲ್ಲಿ ಯಕ್ಷಗಾನ ಪ್ರದರ್ಶನಕ್ಕೆ ಅವಕಾಶ ಕೊಟ್ಟಿದ್ದರಿಂದ ಹಾಸ್ಟೆಲ್‌ನಲ್ಲಿರುವ ಐನೂರಕ್ಕೂ ಮಿಕ್ಕ ವಿದ್ಯಾರ್ಥಿಗಳು ಓದು, ಬರಹಕ್ಕೆ ತೊಂದರೆ ಆಗುತ್ತದೆ. ಯಕ್ಷಗಾನ ಪ್ರದರ್ಶನದಿಂದ ವಿದ್ಯಾರ್ಥಿಗಳು ನಿದ್ದೆಯಿಲ್ಲದೆ ರಾತ್ರಿ ಕಳೆಯುವ ಸ್ಥಿತಿ. ಪರಿಸರವೂ ಗಬ್ಬೆದ್ದು ಹೋಗುತ್ತಿದ್ದು, ಯಕ್ಷಗಾನ ಪ್ರದರ್ಶನಕ್ಕೆ ಬೇರೆ ಕಡೆ ಅವಕಾಶ ಮಾಡಿಕೊಡಿ. ಕುಂದಾಪುರ ಡಾ.ವಿ.ಎಸ್.ಆಚಾರ್ಯ ಸಭಾಂಗಣದಲ್ಲಿ ನಡೆದ ಕುಂದಾಪುರ ಪುರಸಭೆ ಸಾಮಾನ್ಯ ಸಭೆಯಲ್ಲಿ ಕಾಂಗ್ರೆಸ್ ಸದಸ್ಯರು ಯಕ್ಷಗಾನ ಪ್ರದರ್ಶನದ ವಿರುದ್ಧ ತಾಗಿಬಿದ್ದರು. ವಿಷಯ ಪ್ರಸ್ತಾಪಿಸಿದ ಚಂದ್ರಶೇಖರ ಖಾರ್ವಿ, ಗಾಂಧಿ ಮೈದಾನ ಸುತ್ತಾಮುತ್ತಾ ಶಾಲೆ, ಹಾಸ್ಟೆಲ್ ಇದ್ದು, ರಾತ್ರಿ ನಡೆಯುವ ಯಕ್ಷಗಾನ ಪ್ರದರ್ಶನದಿಂದ ವಿದ್ಯಾರ್ಥಿಗಳ ಏಕಾಗ್ರತೆಗೆ ಭಂಗ ಬರುತ್ತಿದೆ. ಮಕ್ಕಳ ವಿದ್ಯಾಭ್ಯಾಸ ಕುಂಟಿತವಾಗುವ ಸಂಭವವಿದ್ದು, ಯಕ್ಷಗಾನ ಪ್ರದರ್ಶನ ಕೋಡಿಗೆ ಶಿಪ್ಟ್ ಮಾಡುವಂತೆ ಆಗ್ರಹಿಸಿದರು. ಯಕ್ಷಗಾನ ಸಂಸ್ಕೃತಿ ಪ್ರತೀಕವಾಗಿದ್ದು, ಪರ್ಯಾಯ ವ್ಯವಸ್ಥೆಯಿಲ್ಲದೆ ಗಾಂಧಿ ಮೈದಾನದಲ್ಲಿ ಯಕ್ಷಗಾನ ಪ್ರದರ್ಶನ ರದ್ದು ಮಾಡೋದ್ರಿಂದ ಕಲಾಪ್ರಕಾರಕ್ಕೆ ಹಿನ್ನೆಡೆಯಾಗಲಿದೆ. ಸೂಕ್ತ ಪರ್ಯಾಯ ವ್ಯವಸ್ಥೆ ಬಗ್ಗೆ ಸದಸ್ಯರು ಮಾಹಿತಿ ನೀಡಿದರೆ ಚಿಂತನೆ ಮಾಡಲಾಗುತ್ತದೆ ಎಂದು ಕುಂದಾಪುರ ಪುರಸಭೆ ಮುಖ್ಯಾಧಿಕಾರಿ…

Read More

ಬೈಂದೂರು: ವಲಯದ ರಾಗಿಹಕ್ಲು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ 2015-16 ನೇ ಸಾಲಿನ ವಾರ್ಷಿಕ ಸಂಚಿಕೆ ’ನಿರುಪಮ2’ ಇತ್ತೀಚೆಗೆ ಶಾಲೆಯ ಸಭಾಂಗಣದಲ್ಲಿ ಬೈಂದೂರು ಕ್ಷೇತ್ರ ಶಿಕ್ಷಣಾಧಿಕಾರಿ ನಾಗೇಶ ನಾಯ್ಕ್ ಬಿಡುಗಡೆ ಮಾಡಿದರು. ಶಾಲೆಯ ಪ್ರಭಾರ ಮುಖ್ಯ ಶಿಕ್ಷಕ ಮಹಾದೇವ ಮಂಜ, ನಿಕಟಪೂರ್ವ ಮುಖ್ಯ ಶಿಕ್ಷಕ ಮಹಾಬಲ ಗೌಡ, ಶಾಲೆಯ ಎಲ್ಲಾ ಶಿಕ್ಷಕರು, ವಿದ್ಯಾರ್ಥಿಗಳು ಮತ್ತು ಪೋಷಕರು ಉಪಸ್ಥಿತರಿದ್ದರು.

Read More

ಕುಂದಾಪುರ: ಸ್ಪರ್ಧಾತ್ಮಕ ಯುಗದಲ್ಲಿ ವಿಜ್ಞಾನ ಎತ್ತರದ ಸ್ಥರದಲ್ಲಿ ಹೊಸ ಹೊಸಾ ಅವಿಷ್ಕಾರಗಳು ನಡೆಯುತ್ತಿದೆ. ವಿದ್ಯಾರ್ಥಿಗಳಲ್ಲಿ ವಿಜ್ಞಾನದ ಬಗ್ಗೆ ಆಸಕ್ತಿ ಮೂಡಿಸಲು ವಿಜ್ಞಾನ ಮಾದರಿ ಸ್ಪರ್ಧೆ ಬೌದ್ಧಿಕ ಮಟ್ಟದ ವೃದ್ಧಿಗೆ ಪೂರಕಾವಾಗಿದೆ ಎಂದು ಹಂಗಳೂರು ಚಿಕ್ಕ ಮಹಾಲಿಂಗೇಶ್ವರ ಫ್ರೆಂಡ್ಸ್ ಮಾರ್ಗದರ್ಶಕ ಕೆ.ಆರ್.ನಾಯ್ಕ್ ಹೇಳಿದ್ದಾರೆ. ಹಂಗಳೂರು ಚಿಕ್ಕ ಮಹಾಲಿಂಗೇಶ್ವರ ಫ್ರೆಂಡ್ಸ್, ಅಂಕದಕಟ್ಟೆ ಹಳೆ ವಿದ್ಯಾರ್ಥಿಗಳ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಆಶ್ರಯದಲ್ಲಿ ಅಂಕದಕಟ್ಟೆ ಸರಕಾರಿ ಮಾದರಿ ಶಾಲಾ ವೇದಿಕೆಯಲ್ಲಿ ನಡೆದ ಕುಂದಾಪುರ ವಲಯ ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳ ವಿಜ್ಞಾನ ಮಾದರಿ ಸ್ಪರ್ಧೆ ಮತ್ತು ಪ್ರದರ್ಶನ ಉದ್ಘಾಟಿಸಿ ಮಾತನಾಡುತ್ತಿದ್ದರು. ಬೇರೆ ಬೇರೆ ಕಡೆಯಿಂದ ಸ್ಪರ್ಧೆಗೆ ಬಂದ ವಿದ್ಯಾರ್ಥಿಗಳು ಒಂದೆಡೆ ಕಲೆತು ವಿಷಯ ವಿನಿಮಯದಿಂದ ಜ್ಞಾನ ವೃದ್ಧಿಗೆ ಸಹಕಾರಿಯಾಗಲಿದೆ. ಹಿಂದೆ ವಿದ್ಯಾರ್ಥಿಗಳಿಗೆ ಕಲಿಕೆ ಅವಕಾಶ ಕಮ್ಮಿಯಿದ್ದು, ಪ್ರಸಕ್ತ ಕಲಿಕೆಗೆ ವಿಫುಲ ಅವಕಾಶ ವಿದ್ಯಾರ್ಥಿಗಳಿಗೆ ಸಿಗುತ್ತಿದೆ ಎಂದು ಹೇಳಿದರು. ಅಂಕದಕಟ್ಟೆ ಸರಕಾರಿ ಮಾದರಿ ಶಾಲಾ ಎಸ್‌ಡಿಎಂಸಿ ಅಧ್ಯಕ್ಷ ರಾಘವೇಂದ್ರ ವರ್ಣ ಅಧ್ಯಕ್ಷತೆ ವಹಿಸಿದ್ದರು. ಶಾಲಾ…

Read More

ಕುಂದಾಪುರ: ದೇಶದ ಭವಿಷ್ಯ ಯುವಶಕ್ತಿಯನ್ನು ಅವಲಂಬಿಸಿದೆ. ಇಂದಿನ ಯುವಶಕ್ತಿ ಆ ನಿಟ್ಟಿನಲ್ಲಿ ಒಂದಾಗಬೇಕಿದೆ. ಇಂಥಹ ಅಗತ್ಯತೆಯಲ್ಲಿ ಯುವಕರೆಲ್ಲರನ್ನು ಒಂದುಗೂಡಿಸಿದ ಪ್ರೇರಣಾ ಯುವ ವೇದಿಕೆ ಸಮಾಜಮುಖಿ ಕಾರ್ಯಕ್ರಮ ಮಾಡುತ್ತಿದೆ ಎಂದು ಭಾರತ ಸರ್ಕಾರ ಅಂಕಿ ಅಂಶ ಇಲಾಖೆಯ ಸಾಂಖ್ಯಕ ಅಧಿಕಾರಿ ತಾರಾನಾಥ ಹೊಳ್ಳ ಹೇಳಿದರು. ಪ್ರೇರಣಾ ಯುವ ವೇದಿಕೆಯ ತೃತೀಯ ವಾರ್ಷಿಕೋತ್ಸವವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಕೊಲ್ಲೂರು ಮಾಜಿ ಧರ್ಮದರ್ಶಿ ಬಿ.ಎಮ್.ಸುಕುಮಾರ್ ಶೆಟ್ಟಿ ಮಾತನಾಡಿ ಆಡಂಬರರಹಿತ ,ದುಂದುವೆಚ್ಚಲ್ಲಿದೆ, ಅರ್ಥಪೂರ್ಣ ಕಾರ್ಯಕ್ರಮ ಆಯೋಜಿಸುವ ಪ್ರೇರಣಾ ವೇದಿಕೆಯ ಶ್ಲಾಘನೀಯ ಎಂದರು. ತದನಂತರ ಗ್ರಾಮೀಣ ಕ್ರೀಡಾಕೂಟದ ವಿಜೇತರಿಗೆ ಬಹುಮಾನ ನೀಡಲಾಯಿತು, ಹಿರಿಯ ಕೃಷಿಕರಾದ ರಾಮಯ್ಯ ಶೆಟ್ಟಿ ನೈಕಂಬ್ಳಿ, ಹಿರಿಯ ಯಕ್ಷಗಾನ ಕಲಾವಿದರಾದ ನಾರಾಯಣ ದೇವಾಡಿಗ ಮಾರಣಕಟ್ಟೆ, ರಾಜ್ಯಮಟ್ಟದ ಸ್ಥಳೀಯ ಕ್ರೀಡಾಪಟು ಚೇತನಾ ಎಂ ಇವರಿಗೆ ಪ್ರೇರಣಾ ಪುರಸ್ಕಾರ ನೀಡಿ ಗೌರವಿಸಲಾಯಿತು. ಪ್ರೇರಣಾ ಯುವ ವೇದಿಕೆಯ ಅಧ್ಯಕ್ಷ ಚಂದ್ರ ಶೆಟ್ಟಿ ನೈಕಂಬ್ಳಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕುಂದಾಪುರ ತಾಲೂಕು ಡಿ.ವೈ.ಎಸ್.ಪಿ ಮಂಜುನಾಥ ಶೆಟ್ಟಿ, ಉಡುಪಿಯ ಯುವ ಚಿಂತಕ ಶ್ರೀಕಾಂತ…

Read More