ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ವಿಶ್ವ ಪರಿಸರ ದಿನದ ಅಂಗವಾಗಿ ಪಡುವರಿ ಗ್ರಾಮ ಪಂಚಾಯತ್ ಆಶ್ರಯದಲ್ಲಿ ಗ್ರಾಮ ಪಂಚಾಯತ್ ಸಮೀಪದ ಸ.ಹಿ.ಪ್ರಾ.ಶಾಲೆ ಕೋಟೆಬಾಗಿಲು ಆವರಣದಲ್ಲಿ ವನಮಹೋತ್ಸವ ಕಾರ್ಯಕ್ರಮ ಆಚರಿಸಲಾಯಿತು. ಪಡುವರಿ ಗ್ರಾ ಪಂ ಅಧ್ಯಕ್ಷೆ ದೀಪಾ ಶೆಟ್ಟಿ ಹಾಗೂ ಉಪಾಧ್ಯಕ್ಷ ಸದಾಶಿವ ಡಿ ಪಡುವರಿ ಹಾಗೂ ಗೀಡಗಳನ್ನು ನೆಟ್ಟರು. ಕೋಟೆಬಾಗಿಲು ಶಾಲೆ ಮುಖ್ಯೋಪಾಧ್ಯಾಯ ಸುರೇಶ, ಗ್ರಾ ಪಂ ಅಭಿವೃದ್ಧಿ ಅಧಿಕಾರಿ ಗಣೇಶ್ ಹೆಬ್ಬಾರ್, ದ್ವೀತಿಯ ದರ್ಜೆ ಲೆಕ್ಕ ಪರಿಶೋದಕ ಸಹಾಯಕಿ ಜಯಲಕ್ಷ್ಮೀ ಸಿ ವಿ, ಗ್ರಾ ಪಂ ಸಿಬ್ಬಂದಿಗಳು ಹಾಗೂ ಶಾಲಾ ಮಕ್ಕಳು ಹಾಜರಿದ್ದರು.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಜಿಲ್ಲೆಯಲ್ಲಿ ಆಕ್ರಮ-ಸಕ್ರಮಕ್ಕಾಗಿ ಅರ್ಜಿ ಸಲ್ಲಿಸಿರುವ ಎಷ್ಟೋ ಅರ್ಜಿಗಳನ್ನು ಇದೇ ರೀತಿಯ ಕುಂಟು ನೆವಗಳನ್ನು ಹೇಳಿ ತಡೆ ಹಿಡಿಯಲಾಗುತ್ತಿದೆ. ಬರಗಾಲವಿದೆ ಎನ್ನುವ ಕಾರಣವನ್ನು ನೀಡಿ ಬಿತ್ತನೆಯ ಬೀಜಗಳನ್ನು ನೀಡುವಲ್ಲಿಯೂ ಕೊರತೆಯನ್ನು ಕಾಣುವಂತಾಗಿದೆ. ಕೋಟೇಶ್ವರದಲ್ಲಿ ಹೆದ್ದಾರಿಯ ಬದಿಯಲ್ಲಿ ವಿಶಾಲವಾದ ಬೀಜ ಉತ್ಪಾದನ ಪ್ರದೇಶಗಳಿದ್ದರೂ, ಅದರ ಸಮರ್ಪಕ ಬಳಕೆಯಾಗಿಲ್ಲ. ಈ ಉದ್ದೇಶಕ್ಕಾಗಿ ಮೀಸಲಿರಿಸಿದ ಪ್ರದೇಶಗಳಲ್ಲಿ ಒಂದಷ್ಟು ಎಕ್ರೆ ಪ್ರದೇಶಗಳನ್ನು ಬೇರೆ ಉದ್ದೇಶಗಳಿಗಾಗಿ ನೀಡಲಾಗಿದೆ ಎಂದು ಹೇಳಿದ ಉಡುಪಿ ಜಿಲ್ಲಾ ರೈತ ಸಂಘದ ಅಧ್ಯಕ್ಷ ಹಾಗೂ ವಿಧಾನಪರಿಷತ್ ಸದಸ್ಯ ಕೆ.ಪ್ರತಾಪ್ಚಂದ್ರ ಶೆಟ್ಟಿ ಹೇಳಿದರು. ಇಲ್ಲಿನ ಸರ್ಕಾರಿ ನೌಕರರ ಸಂಘದ ಸಭಾಂಗಣದಲ್ಲಿ ನಡೆದ ಉಡುಪಿ ಜಿಲ್ಲಾ ರೈತ ಸಂಘದ ಪದಾಧಿಕಾರಿಗಳ ಹಾಗೂ ಪ್ರತಿನಿಧಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ತೋಟಗಾರಿಕೆ ಹಾಗೂ ಕೃಷಿ ಇಲಾಖೆಯಲ್ಲಿ ಸರ್ಕಾರಿ ಸವಲತ್ತುಗಳನ್ನು ನೀಡಲು ಸ್ವಷ್ಟವಾದ ಮಾನದಂಡಗಳನ್ನು ಅನುಸರಿಸದೆ ಇದ್ದ ಕಾರಣದಿಂದಾಗಿ ಸರ್ಕಾರ ಉದ್ದೇಶದಂತೆ ಯೋಜನೆಗಳು ಫಲಾನುಭವಿಗಳಿಗೆ ದೊರಕುತ್ತಿಲ್ಲ. ಕಟಾವು ಮುಗಿದ ಬಳಿಕ ಭತ್ತದ ಬೀಜಗಳ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಹೆರಿಗೆಗಾಗಿ ಆಸ್ಪತ್ರೆಗೆ ದಾಖಲಾಗಲು ಬಂದಿದ್ದ ಗರ್ಭಿಣಿಯನ್ನು ನಡುರಾತ್ರಿಯೇ ಆಸ್ಪತ್ರೆಯಿಂದ ಹೊರಕಳುಹಿಸಿದ ಅಮಾನವೀಯ ಘಟನೆ ಕುಂದಾಪುರದ ಸಾರ್ವಜನಿಕ ಆಸ್ಪತ್ರೆಯಲ್ಲಿ ನಡೆದಿದೆ. ಕೋಡಿ ಹಳೆ ಅಳಿವೆ ನಿವಾಸಿ ಆಶಾ (29) ಎಂಬುವವರಿಗೆ ಸರಕಾರಿ ಆಸ್ಪತ್ರೆಯಲ್ಲಿ ಹೆರಿಗೆ ಮಾಡಲು ನಿರಾಕರಿಸಿದ್ದು ಬಳಿಕ ಕುಂದಾಪುರದ ಖಾಸಗಿ ಆಸ್ಪತ್ರೆಯೊಂದಿರಲ್ಲಿ ಹೆಣ್ಣುಮಗುವಿಗೆ ಜನ್ಮ ನೀಡಿದ್ದಾರೆ. ಕುಂದಾಪ್ರ ಡಾಟ್ ಕಾಂ. ಆಗಿದ್ದೇನು? ಗರ್ಭಿಣಿಯಾಗಿದ್ದ ಆಶಾ ಅವರಿಗೆ ಶನಿವಾರ ತಡರಾತ್ರಿ ಹೊಟ್ಟೆನೋವು ಕಾಣಿಸಿಕೊಂಡಿದ್ದರಿಂದ ಅವರ ತಾಯಿ ಹಾಗೂ ಚಿಕ್ಕಮ್ಮ ಆಟೋದಲ್ಲಿ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದರು. ಆಸ್ಪತ್ರೆಯಲ್ಲಿ ಪರೀಕ್ಷೆಗೆ ಕರೆದೊಯ್ದ ದಾದಿಯರು ಈಗ ಹೆರಿಗೆ ಆಗುವುದಿಲ್ಲ. ವೈದ್ಯರು ಕೂಡ ರಜೆಯಲ್ಲಿದ್ದಾರೆ ಎಂದು ಸಬೂಬು ಹೇಳಿದ್ದಾರೆ. ಗರ್ಭೀಣಿ ಹೊಟ್ಟೆ ನೋವಿನಿಂದ ಕೂಗಾಡುತ್ತಿದ್ದಾಗ ವೈದ್ಯರಿಗೆ ಕರೆ ಮಾಡಿದರೂ ತಾನು ರಜೆಯಲ್ಲಿದ್ದೇನೆ ಬದಲಿ ವೈದ್ಯರೂ ಇಲ್ಲ ಎಂದು ಹೇಳಿದ್ದಾರೆ. ಬಳಿಕ ಅದೇ ಸ್ಥಿತಿಯಲ್ಲಿ ಉಡುಪಿಯ ಆಸ್ಪತ್ರೆಗೆ ದಾಖಲಿಸಿ ಎಂದು ಹೇಳಿ ಅವರನ್ನು ಹೊರಕಳುಹಿಸಿದ್ದಾರೆ. ಆಶಾ ಅವರ ಚಿಕ್ಕಮ್ಮ 108ಕ್ಕೆ ಕರೆ ಮಾಡಿದರೂ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕಠಿಣ ಪರಿಶ್ರಮ ಸಾಧಿಸಬೇಕೆಂಬ ಛಲ ನಮ್ಮಲ್ಲಿ ಆತ್ಮ ವಿಶ್ವಾಸವನ್ನು ನೆಲೆಗೊಳಿಸಿ ಉನ್ನತಿಯೆಡೆಗೆ ಕೊಂಡೊಯ್ಯುವ ಜೊತೆಗೆ ಯಶಸ್ಸನ್ನು ನೀಡುತ್ತದೆ ಎಂದು ಕುಂದಾಪುರ ಉಪವಿಭಾಗಾಧಿಕಾರಿ ಶಿಲ್ಪಾ ನಾಗ್ ಹೇಳಿದರು. ಅವರು ರೋಟರಿ ಕ್ಲಬ್ ಕುಂದಾಪುರದ ಆಶ್ರಯದಲ್ಲಿ ನಡೆದ ಕುಟುಂಬ ಸಂಮಿಲನ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ೨೦೧೬-೧೭ರ ಸಾಲಿನಲ್ಲಿ ಅತ್ಯುತ್ತಮ ಸಾಧನೆ ತೋರಿದ ವಿದ್ಯಾರ್ಥಿಗಳನ್ನು ಅಭಿನಂಧಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ೬೨೫ರಲ್ಲಿ ೬೨೨(ಶೇ.೯೯.೫೨) ಅಂಕ ಪಡೆದು ರಾಜ್ಯಮಟ್ಟದಲ್ಲಿ ನಾಲ್ಕನೇ ಸ್ಥಾನ, ಉಡುಪಿ ಜಿಲ್ಲೆಯಲ್ಲಿ ಪ್ರಥಮ ಸ್ಥಾನ ಪಡೆದ ವಂಡ್ಸೆ ಸರಕಾರಿ ಫ್ರೌಡಶಾಲೆಯ ಚಿನ್ಮಯಿ, ಬೈಂದೂರು ಸರಕಾರಿ ಫ್ರೌಡಶಾಲೆಯ ಮಂಜೇಶ್, ಉಪ್ಪುಂದ ಸರಕಾರಿ ಫ್ರೌಡಶಾಲೆಯ ರಂಜಿತಾ ಅವರನ್ನು ಸನ್ಮಾನಿಸಲಾಯಿತು. ಪಿಯುಸಿಯಲ್ಲಿ ಅತ್ಯುತ್ತಮ ಸಾಧನೆ ಮಾಡಿದ ರೋಟರಿ ಕುಟುಂಬದ ಸದಸ್ಯರಾದ ಮೇಘನಾ ನಾಯರ್, ರಾಷ್ಟ್ರೀಯ ಶಿಕ್ಷಣ ಸಂಸ್ಥೆಯ ಅರ್ಹತಾ ಪರೀಕ್ಷೆಯಲ್ಲಿ ೯ನೇ ರ್ಯಾಂಕ್ ಪಡೆದ ಚೈತನ್ಯ ಲಕ್ಷ್ಮೀ ಅವರನ್ನು ಗೌರವಿಸಲಾಯಿತು. ರೋಟರಿ ಕ್ಲಬ್ ಕುಂದಾಪುರದ ಅಧ್ಯಕ್ಷ ಉದಯಕುಮಾರ್…
ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ : ಸರಕಾರಿ ಶಾಲೆಗಳಲ್ಲಿ ಖಾಸಗಿ ಸಹಭಾಗಿತ್ವದಲ್ಲಿ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಕಾರ್ಯ ನಡೆಯಬೇಕು. ಸರಕಾರಿ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಮಕ್ಕಳ ದಾಖಲಾತಿ ಕಡಿಮೆಯಾಗುತ್ತಿರುವ ಮತ್ತು ಆಂಗ್ಲ ಮಾಧ್ಯಮ ಶಾಲೆಗಳತ್ತ ಪೋಷಕರು ಹೆಚ್ಚಿನ ಒಲವು ತೋರಿಸುತ್ತಿರುವ ಹಿನ್ನಲೆಯಲ್ಲಿ ಸರಕಾರಿ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಆಂಗ್ಲ ಭಾಷೆ ಬೋಧನೆಗೆ ಸರಕಾರ ಅನುಮತಿ ನೀಡಿದೆ. ಹೀಗಾಗಿ ಮುಂದಿನ ದಿನಗಳಲ್ಲಿ ಸರಕಾರಿ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಮಕ್ಕಳ ದಾಖಲಾತಿ ಇಮ್ಮಡಿಗೊಳ್ಳುವ ಸಾಧ್ಯತೆ ಇದೆ ಎಂದು ಬೈಂದೂರು ಶಾಸಕ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷ ಕೆ.ಗೋಪಾಲ ಪೂಜಾರಿ ಹೇಳಿದರು. ಅವರು ಗುಜ್ಜಾಡಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಠಾರದಲ್ಲಿ ಜರಗಿದ ಶಾಲಾ ವಾಹನ ಹಸ್ತಾಂತರ ಸಮಾರಂಭದಲ್ಲಿ ಐಶ್ವರ್ಯ ಡಿ.ಮೇಸ್ತ ಅವರು ಶಾಲೆಗೆ ಕೊಡುಗೆಯಾಗಿ ನೀಡಿದ ನೂತನ ಶಾಲಾ ವಾಹನವನ್ನು ಉದ್ಘಾಟಿಸಿ ಮಾತನಾಡಿದರು. ಶತಮಾನದ ಹೊಸ್ತಿಲಲ್ಲಿರುವ ಗುಜ್ಜಾಡಿ ಶಾಲೆಯು ಕಟ್ಟಡ ನವೀಕರಣವನ್ನು ದಾನಿಗಳ ಸಹಕಾರದಿಂದ ಮಾಡಿಕೊಂಡಿದ್ದು, ಇದೀಗ ಶಾಲೆಯ ಮಕ್ಕಳ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕರ್ನಾಟಕ ಗ್ರಾಮೀಣ ರಸ್ತೆ ಅಭಿವೃದ್ಧಿ ಸಂಸ್ಥೆಯ ಗಾಂಧಿಪಥ-ಗ್ರಾಮಪಥ ಯೋಜನೆಯಡಿಯಲ್ಲಿ ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಿವಿಧ ಗ್ರಾಮಗಳಲ್ಲಿ ಅಂದಾಜು 22.01 ಕೋಟಿ ರೂಪಾಯಿ ವೆಚ್ಚದಲ್ಲಿ 13 ಕಾಮಗಾರಿಗಳನ್ನು ನಿರ್ಮಿಸಲು ಉದ್ದೇಶಿಸಲಾಗಿದೆ. ಎಸ್ಇಪಿ ಯೋಜನೆಯಡಿಯಲ್ಲಿ 1 ಕೋಟಿ ರೂಪಾಯಿ ಅನುದಾನ ಕ್ಷೇತ್ರಕ್ಕೆ ಮಂಜೂರಾಗಿದ್ದು ಇದರ ಸದ್ಭಳಿಕೆಯನ್ನು ಮಾಡಲಾಗುವುದು ಎಂದು ಬೈಂದೂರು ಕ್ಷೇತ್ರದ ಶಾಸಕ ಹಾಗೂ ರಾಜ್ಯ ರಸ್ತೆ ಸಾರಿಗೆ ಅಭಿವೃದ್ಧಿ ನಿಗಮದ ಅಧ್ಯಕ್ಷ ಕೆ.ಗೋಪಾಲ ಪೂಜಾರಿ ಹೇಳಿದರು. ಹೊಸಾಡು ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. ಬಾವಿ ಸೇತುವೆಗೆ ಕಾಯಕಲ್ಪ: ವೈಯಕ್ತಿಕ ಬಾವಿ ನಿರ್ಮಾಣಕ್ಕಾಗಿ ಹಾಗೂ ರಸ್ತೆ ಅಭಿವೃದ್ಧಿಗಾಗಿ ಕರ್ನಾಟಕ ನೀರಾವರಿ ಅಭಿವೃದ್ಧಿ ನಿಗಮದ ವರಾಹಿ ಯೋಜನೆಯಡಿಯಲ್ಲಿ ತಲಾ 4.5 ಕೋಟಿ ಅನುದಾನವನ್ನು ಕಾಯ್ದಿಡಲಾಗಿದೆ. ವಂಡ್ಸೆಯ ಮೋರ್ಟ್ ಸೇತುವೆ, ಕಟ್ಬೇಲ್ತೂರು ಬಾಳಿಕೆರೆ ರಸ್ತೆ ಸೇರಿದಂತೆ ಕ್ಷೇತ್ರದ ಜನರ ಅಗತ್ಯತೆಗಳಿಗೆ ಆದ್ಯತೆ ನೀಡಿ ಲೋಕೋಪಯೋಗಿ ಇಲಾಖೆಯ ವಿವಿಧ ಅನುದಾನಗಳನ್ನು ಜೋಡಿಸಿಕೊಂಡು ಕ್ಷೇತ್ರ ವ್ಯಾಪ್ತಿಯಲ್ಲಿ ಅಂದಾಜು…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಹಳ್ಳಿಯ ಪ್ರದೇಶಗಳಲ್ಲಿ ರೈತರು ಹಿಂದಿನಿಂದಲೂ ನಡೆದುಬಂದ ಸಂಪ್ರದಾಯದಂತೆ ಕೃಷಿ ಹಾಗೂ ತೋಟಗಾರಿಕೆ ಮಾಡುತ್ತಿದ್ದಾರೆ. ಆದರೆ ಇಂದಿನ ಆಧುನಿಕ ಪದ್ದತಿಯ ಬಗ್ಗೆ ತಿಳುವಳಿಕೆ ಕಡಿಮೆ ಹಾಗೂ ಸಮರ್ಪಕ ಮಾಹಿತಿ ಕೊರತೆಯಿಂದಾಗಿ ಕೃಷಿಯಲ್ಲಿ ಸ್ವಲ್ಪಮಟ್ಟಿನ ನಷ್ಟ ಅನುಭವಿಸುತ್ತಿದ್ದಾರೆ. ಕೃಷಿ ಸಂಬಂಧಿತ ಎಲ್ಲ ಇಲಾಖೆಗಳು ಸಮನ್ವಯತೆಯಿಂದ ಕೃಷಿಯ ಕುರಿತಾದ ಸಮಗ್ರ ಮಾಹಿತಿ, ಸರಕಾರದ ಯೋಜನೆಗಳನ್ನು ರೈತರಿಗೆ ಮನವರಿಕೆ ಮಾಡುವುದರ ಮೂಲಕ ಅವರಿಗೆ ಸ್ಪಂದಿಸಬೇಕು ಎಂದು ಕಾಲ್ತೋಡು ಗ್ರಾಪಂ ಅಧ್ಯಕ್ಷ ಬಿ. ಅಣ್ಣಪ್ಪ ಶೆಟ್ಟಿ ಭಟ್ನಾಡಿ ಹೇಳಿದರು. ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘ ಪ್ರಾಯೋಜಿತ ರೈತ ಶಕ್ತಿ, ರೈತ ಸೇವಾ ಒಕ್ಕೂಟ, ಉಪ್ಪುಂದ ಇವರ ಸಹಯೋಗದೊಂದಿಗೆ ಶನಿವಾರ ಕಾಲ್ತೋಡು ಅಂಬೇಡ್ಕರ ಭವನದಲ್ಲಿ ನಡೆದ ಅಡಿಕೆ, ತೆಂಗು, ಕಾಳುಮೆಣಸು ಬೇಸಾಯ ಕ್ರಮ ಹಾಗೂ ತೋಟಗಾರಿಕಾ ಮತ್ತು ಕೃಷಿ ಇಲಾಖೆಯಿಂದ ಸಿಗುವ ಸರಕಾರಿ ಸೌಲಭ್ಯಗಳ ಮಾಹಿತಿ ಶಿಬಿರ ಉದ್ಘಾಟಿಸಿ ಮಾತನಾಡಿದರು. ಮಣ್ಣಿನ ಫಲವತ್ತತೆಯ ಅರಿವು, ನೀರಿನ ಸಂರಕ್ಷಣೆ ಮತ್ತು ಸಮರ್ಪಕ ಬಳಕೆ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಉಪ್ಪುಂದದ ಶ್ರೀ ವರಲಕ್ಷ್ಮೀ ಸೌಹಾರ್ದ ಸಹಕಾರಿ ಸಂಘದಲ್ಲಿ ಕಾರ್ಯನಿರ್ವಹಣಾಧಿಕಾರಿಯಾಗಿ ಸೇವೆ ಸಲ್ಲಿಸಿ ನಿವೃತ್ತರಾಗುತ್ತಿರುವ ಅನಂತಪದ್ಮನಾಭ ನಾರಿ ಇವರನ್ನು ಸಹಕಾರಿ ಅಧ್ಯಕ್ಷ ಗೋವಿಂದ ಬಾಬು ಪೂಜಾರಿ ಸನ್ಮಾನಿಸಿ ಬೀಳ್ಕೊಟ್ಟರು. ಈ ಸಂದರ್ಭ ಸಂಸ್ಥೆಯ ಉಪಾಧ್ಯಕ್ಷ ಸುಧಾಕರ ಪೂಜಾರಿ, ನಿರ್ದೇಶಕರಾದ ರಾಘವೇಂದ್ರ ಪೂಜಾರಿ, ನರಸಿಂಹ ಬಿ. ನಾಯಕ್, ಮಾಲತಿ ಪೂಜಾರಿ, ಶಾಖಾ ವ್ಯವಸ್ಥಾಪಕ ನಾಗರಾಜ, ಸಿಬ್ಬಂದಿಗಳಾದ ಉದಯ್, ಅಶ್ವಿನಿ ಇದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: 2016-17ನೇ ಸಾಲಿನ ಸಿಬಿಎಸ್ಇ 10ನೇ ತರಗತಿ ಪರೀಕ್ಷೆಯಲ್ಲಿ ಬೈಂದೂರು ಸೈಂಟ್ ಥೋಮಸ್ ರೆಸಿಡೆನ್ಸಿಯಲ್ ಸ್ಕೂಲ್ನ ವಿದ್ಯಾರ್ಥಿ ರಾಹುಲ್ ಪೂಜಾರಿ 10 ಸಿ.ಜಿ.ಪಿ.ಎ ಅಂಕಗಳನ್ನು ಪಡೆದು ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ. ಈತ ಜಿಲ್ಲಾ ಕೆಡಿಪಿ ಸದಸ್ಯ ಎಸ್. ರಾಜು ಪೂಜಾರಿ ಹಾಗೂ ರತಿ ದಂಪತಿಗಳು ಪ್ರಥಮ ಪುತ್ರ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಯುವಕರ ನೀಡುತ್ತಿದ್ದ ಕಿರುಕುಳದಿಂದ ಬೇಸತ್ತ ಯುವತಿಯೋರ್ವಳು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದ್ದು, ಗಂಭೀರ ಸ್ಥಿತಿಯಲ್ಲಿರುವ ಆಕೆ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಎಸೆಸೆಲ್ಸಿ ಓದಿನ ಬಳಿ ಹೆಬ್ರಿಯಲ್ಲಿ ಹೊಲಿಗೆ ತರಬೇತಿಗೆ ಹೋಗುತ್ತಿದ್ದ ಯುವತಿಗೆ ಮೊಬೈಲ್ ಕರೆಯಲ್ಲಿ ಹಾಗೂ ಎದುರಿನಲ್ಲಿ ಸಿಕ್ಕಾಗ ಕಳೆದ ಮೂರು ತಿಂಗಳಿನಿಂದ ಈ ಮೂವರು ಯುವಕರು ಅಸಭ್ಯವಾಗಿ ವರ್ತಿಸುತ್ತಿದ್ದರು. ಆಕೆಯನ್ನು ತಾವು ಹೇಳಿದ ಸ್ಥಳಕ್ಕೆ ಬರುವಂತೆ ಒತ್ತಾಯಿಸಿ ಬೆದರಿಕೆ ಹಾಕಿದ್ದರು ಎನ್ನುವ ಎಂದು ಯುವತಿ ಆರೋಪಿಸಿದ್ದಾಳೆ. ಈ ಬಗ್ಗೆ ಶೇಡಿಮನೆಯ ಪ್ರಸಾದ್ ಹೆಗ್ಡೆ, ಪ್ರಶಾಂತ್ ಹೆಗ್ಡೆ ಮತ್ತು ವಿನಯ ಶೆಟ್ಟಿ ವಿರುದ್ಧ ಪೋಕೊÕà ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಯುವಕರ ಬೆದರಿಕೆಯಿಂದ ಹೆದರಿದ ಯುವತಿ ಅದೇ ದಿನ ಮನೆಯಲ್ಲಿ ವಿಷ ಪದಾರ್ಥ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಳು. ಅಸ್ವಸ್ಥಗೊಂಡ ಯುವತಿಯನ್ನು ಮನೆಯವರು ಮಣಿಪಾಲ ಆಸ್ಪತ್ರೆಗೆ ದಾಖಲಿಸಿದ್ದು, ಗಂಭೀರ ಸ್ಥಿತಿಯಲ್ಲಿರುವ ಆಕೆಗೆ ಚಿಕಿತ್ಸೆ ಮುಂದುವರಿದಿದೆ. ಆಸ್ಪತ್ರೆಗೆ ತೆರಳಿರುವ ಅಮಾಸೆಬೈಲು ಪೊಲೀಸರು ಯುವತಿಯಿಂದ ಹೇಳಿಕೆ…
