Author: ನ್ಯೂಸ್ ಬ್ಯೂರೋ

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಸುವರ್ಣಾವಕಾಶ – ಪಿಯುಸಿ ಶಿಕ್ಷಣಕ್ಕೆ ಶೇ.100ರಷ್ಟು ವಿದ್ಯಾರ್ಥಿವೇತನ ಪಡೆಯುವ ಅವಕಾಶ ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಡಾ. ರಮೇಶ್ ಶೆಟ್ಟಿ ಅವರ ನೇತೃತ್ವದ ಸುಜ್ಞಾನ ಎಜುಕೇಶನಲ್ ಟ್ರಸ್ಟ್ ಕುಂದಾಪುರ ವತಿಯಿಂದ ಪ್ರಸ್ತುತ ಸಾಲಿನಲ್ಲಿ ಎಸ್‌ಎಸ್‌ಎಲ್‌ಸಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗಾಗಿ ಡಿಸೆಂಬರ್ 6ರಂದು ಕುಂದಾಪುರದ ಯಡಾಡಿ–ಮತ್ಯಾಡಿಯ ವಿದ್ಯಾರಣ್ಯ ಕ್ಯಾಂಪಸ್‌ನಲ್ಲಿರುವ ಸುಜ್ಞಾನ ಪಿಯು ಕಾಲೇಜಿನಲ್ಲಿ ವಿದ್ಯಾರ್ಥಿವೇತನ ಪರೀಕ್ಷೆಯನ್ನು ಆಯೋಜಿಸಲಾಗಿದೆ. ಕನ್ನಡ ಮತ್ತು ಆಂಗ್ಲ ಮಾಧ್ಯಮ ಸೇರಿದಂತೆ ರಾಜ್ಯ ಪಠ್ಯಕ್ರಮ, ಸಿಬಿಎಸ್‌ಇ ಹಾಗೂ ಐಸಿಎಸ್‌ಇ ಪಠ್ಯಕ್ರಮಗಳಲ್ಲಿ ವ್ಯಾಸಂಗ ಮಾಡುತ್ತಿರುವ ಎಲ್ಲಾ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೂ ಈ ಪರೀಕ್ಷೆಯಲ್ಲಿ ಭಾಗವಹಿಸಲು ಅವಕಾಶವಿದೆ. ಗುಣಮಟ್ಟದ ಶಿಕ್ಷಣಕ್ಕೆ ಹೆಸರಾದ ಸುಜ್ಞಾನ ಸಂಸ್ಥೆ:ಕಳೆದ ಐದು ವರ್ಷಗಳಿಂದ ಕುಂದಾಪುರದಲ್ಲಿ ಗುಣಮಟ್ಟದ ಶಿಕ್ಷಣ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿಯಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ಸುಜ್ಞಾನ ಎಜುಕೇಶನಲ್‌ ಟ್ರಸ್ಟ್, ಸಿಇಟಿ, ನೀಟ್, ಜೆಇಇ, ಸಿಎ ಮತ್ತು ಸಿಎಸ್ ಮುಂತಾದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ವಿದ್ಯಾರ್ಥಿಗಳನ್ನು ಸಮರ್ಥವಾಗಿ ಸಿದ್ಧಪಡಿಸುತ್ತಿದೆ. ವಿದ್ಯಾರ್ಥಿಗಳನ್ನು ಐಐಟಿ, ವೈದ್ಯಕೀಯ ಕಾಲೇಜುಗಳು ಹಾಗೂ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಶ್ರೀ ತಿರುಮಲ ಯುವ ಕ್ರೀಡಾ ಮತ್ತು ಕಲಾ ಸಂಘ ರಿ. ತಗ್ಗರ್ಸೆ ಇದರ ದಶಮ ಸಂಭ್ರಮ ಕಾರ್ಯಕ್ರಮದ ಪೋಸ್ಟರ್ ಅನಾವರಣವು ಆದಿತ್ಯವಾರದಂದು ತಗ್ಗರ್ಸೆ ತಿರುಮಲ ವೆಂಕಟರಮಣ ದೇವಸ್ಥಾನದಲ್ಲಿ ನೆರವೇರಿಸಲಾಯಿತು. ಪೋಸ್ಟರನ್ನು ಹಿರಿಯ ರಂಗ ಕಲಾವಿದರಾದ ಗಣೇಶ್ ಕಾರಂತ ಅವರು ನೆರವೇರಿಸಿದರು. ಈ ಸಂದರ್ಭದಲ್ಲಿ ಸಮಿತಿಯ ಅಧ್ಯಕ್ಷರು ಕಾರ್ಯದರ್ಶಿಗಳು ಮತ್ತು ಸಮಿತಿಯ ಸರ್ವ ಸದಸ್ಯರು ಹಾಗೂ ಊರಿನ ಗಣ್ಯರು ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಗಂಗೊಳ್ಳಿ: ಕೊಸೆಸಾಂವ್ ಮಾತೆಯ ದೇವಾಲಯ ಗಂಗೊಳ್ಳಿ, ಇಂಡಿಯನ್ ಕ್ಯಾನ್ಸರ್ ಸೊಸೈಟಿ ಕರ್ನಾಟಕ, ಸಮುದಾಯ ವೈದ್ಯಕೀಯ ವಿಭಾಗ, ಕೆ.ಎಂ.ಸಿ. ಮಣಿಪಾಲ ಹಾಗೂ ಆರೋಗ್ಯ ಆಯೋಗ, ಸ್ತ್ರೀ ಆಯೋಗ ಮತ್ತು ಸ್ಪರ್ಶ ಸಂಪದ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಉಚಿತ ಕ್ಯಾನ್ಸರ್, ಕಣ್ಣಿನ ಹಾಗೂ ಆರೋಗ್ಯ ತಪಾಸಣಾ ಶಿಬಿರ ಗಂಗೊಳ್ಳಿಯ ಕೊಸೆಸಾಂವ್ ಮಾತೆಯ ಚರ್ಚ್ ಸಭಾಂಗಣದಲ್ಲಿ ಶುಕ್ರವಾರ ನಡೆಯಿತು. ಶಿಬಿರವನ್ನು ಸಂಪದದ ನಿರ್ದೇಶಕ, ಧರ್ಮಗುರು ರೀಕ್ಸನ್ ಮೊಂತೆರೊ ಅವರು ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಚರ್ಚಿನ ಧರ್ಮಗುರು ಥೋಮಸ್ ರೋಶನ್ ಡಿಸೋಜ ಶುಭ ಹಾರೈಸಿದರು. ಡಾ. ತನ್ಮಯ್, ಪಾಲನಾ ಮಂಡಳಿಯ ಕಾರ್ಯದರ್ಶಿ ಗ್ಲೋರಿಯಾ ಡಿಸೋಜ, 20 ಆಯೋಗಗಳ ಸಂಯೋಜಕಿ ಜಸಿಂತ ಡಿಸೋಜ, ಸಚೇತಕಿಯಾದ ಧರ್ಮಭಗಿನಿ ಗ್ರೇಸಿ ಲೋಬೊ, ಸ್ವಸಹಾಯ ಸಂಘದ ಮಾರ್ಗದರ್ಶಕಿ ಸಿಂತಿಯಾ ರೊಡ್ರಿಗಸ್, ಸ್ತ್ರೀ ಸಂಘಟನೆಯ ಅಧ್ಯಕ್ಷೆ ಅನಿತಾ ಫೆನಾಂಡಿಸ್ ಹಾಗೂ ಸ್ಟ್ಯಾನ್ಲಿ ಫೆನಾಂಡಿಸ್ ಉಪಸ್ಥಿತರಿದ್ದರು. ಗ್ಲೋರಿಯಾ ಡಿಸೋಜ ಸ್ವಾಗತಿಸಿದರು. ಐರಿನ್ ನಜರೆತ್ ವಂದಿಸಿದರು. ರೀಟಾ ಡಾಯಸ್ ಕಾರ್ಯಕ್ರಮ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಕಿರಿಮಂಜೇಶ್ವರದ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್‌ನ ಶಿಕ್ಷಣ ಕ್ಷೇತ್ರದಲ್ಲೇ ಮೊಟ್ಟಮೊದಲ ಬಾರಿಗೆ ಪ್ರೀ ಕೆಜಿ, ಎಲ್‌ಕೆಜಿ ಮತ್ತು ಯುಕೆಜಿ ವಿದ್ಯಾರ್ಥಿಗಳ ವಾರ್ಷಿಕ ಕ್ರೀಡಾಕೂಟವು ಸಂಭ್ರಮದಿಂದ ಜರುಗಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಜನತಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಗಣೇಶ ಮೊಗವೀರ ಅವರು ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿ, “ಮಕ್ಕಳ ಸರ್ವತೋಮುಖ ಬೆಳವಣಿಗೆಯಲ್ಲಿ ಕ್ರೀಡೆಗಳು ಮಹತ್ವದ ಪಾತ್ರ ವಹಿಸುತ್ತವೆ. ಚಿಕ್ಕ ವಯಸ್ಸಿನಿಂದಲೇ ಮಕ್ಕಳಲ್ಲಿ ಕ್ರೀಡಾಸಕ್ತಿ, ಆತ್ಮವಿಶ್ವಾಸ, ಶಿಸ್ತು, ಸಮಯಪ್ರಜ್ಞೆ ಹಾಗೂ ಸ್ಪರ್ಧಾ ಮನೋಭಾವವನ್ನು ಬೆಳೆಸುವುದು ಅಗತ್ಯ. ಸೋಲು-ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ. ಇಂತಹ ಕ್ರೀಡಾಕೂಟಗಳು ಮಕ್ಕಳ ಪ್ರತಿಭೆಯನ್ನು ಹೊರತರುವುದರ ಜೊತೆಗೆ ಅವರ ದೈಹಿಕ ಮತ್ತು ಮಾನಸಿಕ ಬೆಳವಣಿಗೆಗೆ ಸಹಕಾರಿಯಾಗುತ್ತವೆ” ಎಂದು ನುಡಿದರು. ಜನತಾ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿಗಳಾದ ಶ್ಯಾಮಲಾ ಗಣೇಶ್, ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲಿನ ಮುಖ್ಯ ಶಿಕ್ಷಕಿಯಾದ ದೀಪಿಕಾ ಆಚಾರ್ಯ, ದೈಹಿಕ ಶಿಕ್ಷಣ ಶಿಕ್ಷಕರು, ಶಿಕ್ಷಕ- ಶಿಕ್ಷಕೇತರ ಸಿಬ್ಬಂದಿಗಳು ಹಾಗೂ ಪೋಷಕರು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಹಟ್ಟಿಅಂಗಡಿಯ ಶ್ರೀ ಸಿದ್ಧಿವಿನಾಯಕ ವಸತಿಶಾಲೆಯಲ್ಲಿ ಮಕ್ಕಳ ದಿನಾಚರಣೆಯನ್ನು ಮತ್ತು ಕನ್ನಡ ರಾಜ್ಯೋತ್ಸವವನ್ನು ಸಡಗರ ಸಂಭ್ರಮದಿಂದ ಆಚರಿಸಲಾಯಿತು. ಕನ್ನಡಾಂಬೆಗೆ ಹಟ್ಟಿಅಂಗಡಿ ಶ್ರೀ ಸಿದ್ಧಿ ಶೈಕ್ಷಣಿಕ ಪ್ರತಿಷ್ಠಾನದ ಕಾರ್ಯದರ್ಶಿಗಳು ಮತ್ತು ಶಾಲೆಯ ಪ್ರಾಂಶುಪಾಲರಾದ ಶರಣ ಕುಮಾರ ಪುಷ್ಪಾರ್ಪಣೆ ಸಲ್ಲಿಸಿ, ಮಾತನಾಡಿ, ಇಂದಿನ ಮಕ್ಕಳೇ ನಾಳೆಯ ಪ್ರಜೆಗಳು. ಭವಿಷ್ಯದ ನಾಯಕರು. ಜಪಾನ್, ರಷ್ಯಾದಂತಹ ರಾಷ್ಟ್ರಗಳಲ್ಲಿ ಮಾತೃಭಾಷೆಯನ್ನು ಬಿಟ್ಟು ಬೇರೆ ಭಾಷೆಯನ್ನು ಜನ ನುಡಿಯದೆ ತಮ್ಮ ಸ್ವಾಭಿಮಾನವನ್ನು ತೋರಿಸಿಕೊಡುತ್ತಿದ್ದಾರೆ. ಕರ್ನಾಟಕದಲ್ಲಿ ನಾವು ಕನ್ನಡ ಮಾತಾಡಲು ಹಿಂಜರಿಯುತ್ತಿದ್ದೇವೆ. ನಾವಿಂದು ಮಕ್ಕಳಿಗೆ ಈ ನೆಲ, ನುಡಿಗಳ ಬಗ್ಗೆ ತಿಳಿಸಲು ಅನುಕೂಲವಾದ ರೀತಿಯಲ್ಲಿ ಕಾರ್ಯಕ್ರಮವನ್ನು ಆಯೋಜಿಸಿರುತ್ತೇವೆ. ಮಕ್ಕಳು ಉದ್ಯೋಗಾದಿಗಳಿಗಾಗಿ ಅನಿವಾರ್ಯವಾಗಿ ಇಂಗ್ಲೀಷ್ ಭಾಷೆಯನ್ನು ಚೆನ್ನಾಗಿ ಅಭ್ಯಾಸ ಮಾಡಬೇಕಾಗಿದ್ದರಿಂದ ನಾವು ಇಂಗ್ಲೀಷ್‌ಗೆ ಒತ್ತು ನೀಡುತ್ತಿದ್ದೇವೆ. ಆದರೂ, ಹುಟ್ಟಿದ ನೆಲದ ನುಡಿಯನ್ನು ಎಂದಿಗೂ ಮರೆಯಬಾರದು. ನಮ್ಮ ನೆಲದ ಸಂಸ್ಕೃತಿಯನ್ನು ಉಳಿಸಿ ಬೆಳೆಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. ಎನ್ನುತ್ತಾ ಕನ್ನಡದ ಸಂಸ್ಕೃತಿಯ ಪರಿಚಯಗೈಯ್ದರು. ಈ ಸಮಯದಲ್ಲಿ ಶಾಲಾ ಉಪಪ್ರಾಂಶುಪಾಲರಾದ ರಾಮ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗ ಹಾಗೂ ಮಹಿಳಾ ಸಬಲೀಕರಣ ಘಟಕದ ಜಂಟಿ ಆಶ್ರಯದಲ್ಲಿ ವಿಸ್ತರಣಾ ಚಟುವಟಿಕೆಯ ಅಂಗವಾಗಿ ಮುಳ್ಳುಗುಡ್ಡೆಯ ಸೌಪರ್ಣಿಕಾ ಗೇರುಬೀಜ ಕಾರ್ಖಾನೆಯಲ್ಲಿ ಮಹಿಳಾ ಕಾರ್ಮಿಕರಿಗಾಗಿ ಮಹಿಳಾ ಆರೋಗ್ಯ ಮತ್ತು ನೈರ್ಮಲ್ಯ ಜಾಗೃತಿ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಕಾರ್ಯಕ್ರಮದಲ್ಲಿ ಕಾಲೇಜಿನ ವಿದ್ಯಾರ್ಥಿಗಳು ಆರೋಗ್ಯ ಮತ್ತು ನೈರ್ಮಲ್ಯದ ಮಹತ್ವವನ್ನು ವಿವರಿಸುವ ಪವರ್‌ಪಾಯಿಂಟ್ ಪ್ರಸ್ತುತಿಯನ್ನು ನೀಡಿದರು. ವೈಯಕ್ತಿಕ ಸ್ವಚ್ಛತೆ, ಕೈತೊಳೆಯುವ ಸರಿಯಾದ ವಿಧಾನ, ಆರೋಗ್ಯಕರ ಆಹಾರ ಪದ್ಧತಿ, ಮುಟ್ಟಿನ ಸಮಯದ ನೈರ್ಮಲ್ಯ ಹಾಗೂ ಕೆಲಸದ ಸ್ಥಳದಲ್ಲಿ ವಹಿಸಬೇಕಾದ ಸುರಕ್ಷತಾ ಕ್ರಮಗಳ ಕುರಿತು ಮಾಹಿತಿ ಹಂಚಿಕೊಂಡರು. ಜೊತೆಗೆ ವಿದ್ಯಾರ್ಥಿಗಳು ಕಿರು ಪ್ರಹಸನದ ಮೂಲಕ ನೈರ್ಮಲ್ಯ ಮತ್ತು ಆರೋಗ್ಯದ ಕುರಿತು ಅರಿವು ಮೂಡಿಸಿದರು. ಈ ಚಟುವಟಿಕೆ ಮಹಿಳಾ ಕಾರ್ಮಿಕರಿಗೆ ದೈನಂದಿನ ಜೀವನದಲ್ಲಿ ಆರೋಗ್ಯಕರ ಅಭ್ಯಾಸಗಳನ್ನು ಅಳವಡಿಸಿಕೊಳ್ಳಲು ಪ್ರೇರಣೆ ನೀಡಿತು. ಕಾಲೇಜಿನ ಪ್ರಾಂಶುಪಾಲ ಡಾ. ಕೆ ಉಮೇಶ್ ಶೆಟ್ಟಿ, ಉಪ ಪ್ರಾಂಶುಪಾಲ ಡಾ. ಚೇತನ್ ಶೆಟ್ಟಿ ಕೋವಾಡಿ,…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಕೋಟೇಶ್ವರದ ಎಂ. ವರದರಾಜ ಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ನೂತನ ಗ್ರೇಡ್‌ – 1 ಪ್ರಾಂಶುಪಾಲರಾಗಿ ಡಾ. ಸುಬ್ರಹ್ಮಣ್ಯ ಎ. ಬಳಸು ಅವರು ನೇಮಕಗೊಂಡಿದ್ದಾರೆ. ಸುಬ್ರಹ್ಮಣ್ಯ ಅವರು ಈ ಹಿಂದೆ ಕೊಟೇಶ್ವರದ ಹಾಗೂ ಕೋಟ ಪಡುಕೆರೆ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸಹಾಯಕ ಪ್ರಾದ್ಯಾಪಕ ಹಾಗೂ ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿದ್ದರು. ‘ಖಜಾನೆ ಹೊಣೆಗಾರಿಕೆ ಮತ್ತು ಆಯವ್ಯಯ ನಿರ್ವಹಣೆ ಮಸೂದೆ – 2003 ನಂತರದಲ್ಲಿ ಕೇಂದ್ರ ಸರಕಾರದ ಖಜಾನೆ ನೀತಿ ಪರಿಪಾಲನೆ: ಒಂದು ಸಮಗ್ರ ಅಧ್ಯಯನ’ ಎಂಬ ಪ್ರಬಂಧಕ್ಕೆ ಮಂಗಳೂರು ವಿಶ್ವವಿದ್ಯಾನಿಲಯ ಪಿಎಚ್‌ಡಿ ಪದವಿ ಪಡೆದಿದ್ದರು. ಸುಬ್ರಹ್ಮಣ್ಯ ಅವರು ಬೈಂದೂರು ಪಡುವರಿಯ ಅಪ್ಪಯ್ಯನ ಮನೆ ದಿ. ವೆಂಕಟರಮಣ ಹಾಗೂ ಲಕ್ಷ್ಮೀ ಅವರ ಪುತ್ರರಾಗಿದ್ದಾರೆ. ಪ್ರಸ್ತುತ ಅವರು ಕಾಳವಾರದಲ್ಲಿ ವಾಸಿಸುತ್ತಿದ್ದಾರೆ. ಇದನ್ನೂ ಓದಿ ► ಪ್ರಾಧ್ಯಾಪಕ ಸುಬ್ರಹ್ಮಣ್ಯ ಎ. ಅವರಿಗೆ ಪಿಎಚ್‌ಡಿ ಪದವಿ – https://kundapraa.com/?p=29082 .

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ. ಕೋಟ: ಬೆಂಗಳೂರಿನ ಬಿಡದಿ ಸಮೀಪ ಸಂಭವಿಸಿದ ಬೈಕ್‌ಗಳ ಮುಖಾಮುಖಿ ಡಿಕ್ಕಿಯಲ್ಲಿ ಕೋಟ ಪಡುಕರೆ ನಿವಾಸಿ, ಹೋಟೆಲ್ ಉದ್ಯಮಿ ವಿಶ್ವನಾಥ ಎಚ್.(55) ಅವರು ಮೃತಪಟ್ಟಿದ್ದಾರೆ. ಮಣೂರು- ಪಡುಕರೆಯ ಜಟ್ಟಿಗೇಶ್ವರ ದೈವಸ್ಥಾನದ ಸಮೀಪದ ನಿವಾಸಿಯಾಗಿದ್ದರು. ಬೆಂಗಳೂರಿನಲ್ಲಿ ಹೋಟೆಲ್ ಉದ್ಯಮ ನಡೆಸುತ್ತಿದ್ದ ಅವರು, ಇತ್ತೀಚೆಗೆ ಬೆಂಗಳೂರಿನ ಬಿಡದಿಯಲ್ಲಿ ಕರಾವಳಿ ಕಿಚನ್ ಹೆಸರಿನ ಹೋಟೆಲ್ ನಡೆಸುತ್ತಿದ್ದರು. ಗುರುವಾರ ರಾತ್ರಿ ಹೋಟೆಲ್‌ನ ದೈನಂದಿನ ವ್ಯವಹಾರ ಮುಗಿಸಿ ಮನೆಗೆ ತೆರಳುತ್ತಿದ್ದ ಸಂದರ್ಭ ಅಪಘಾತ ಸಂಭವಿಸಿತ್ತು. ಅವರು ಚಲಾಯಿಸುತ್ತಿದ್ದ ಬೈಕ್‌ಗೆ ಮತ್ತೊಂದು ಬೈಕ್‌ ಮುಖಾಮುಖಿಯಾಗಿ ಡಿಕ್ಕಿ ಹೊಡೆದ ಪರಿಣಾಮ ವಿಶ್ವನಾಥ್‌ ಅವರು ಗಂಭೀರವಾಗಿ ಗಾಯಗೊಂಡಿದ್ದರು. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ. ಮೃತರು ಪತ್ನಿಹಾಗೂ ಇಬ್ಬರು ಪುತ್ರರನ್ನು ಅಗಲಿದ್ದಾರೆ. ಇದ್ದಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಸಾಂಸ್ಕೃತಿಕ ವಿಶ್ವ ಮನ್ನಣೆ ಪಡೆಯಲು ರಾಜ್ಯದ ಎಲ್ಲಾ ಭಾಗವು ತನ್ನದೇ ಆದ  ಕೊಡುಗೆಯನ್ನು ನೀಡಿದೆ. ಕರಾವಳಿ ಕರ್ನಾಟಕದಲ್ಲಿ ಯಕ್ಷಗಾನವು ಶಾಸ್ರ್ತೀಯ ಶಿಸ್ತು ಮತ್ತು ಜಾನಪದ ಸ್ವಾತಂತ್ರ್ಯದಿಂದ ಜನಮನ್ನಣೆಯನ್ನು ಪಡೆದಿದೆ. ಚೌಕಟ್ಟು ಮೀರಿದರೂ ಸರಿ ತಪ್ಪು ಹೇಳುವ ಕೋರ್ಟು ಸೃಷ್ಟಿಯಾಗಿಲ್ಲ ಎಂದು ಕರ್ನಾಟಕ ಯಕ್ಷಗಾನ ಅಕಾಡೆಮಿ ಮಾಜಿ ಅಧ್ಯಕ್ಷ ಎಂ.ಎಲ್.ಸಾಮಗ ಹೇಳಿದ್ದಾರೆ. ಅವರು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮೈಸೂರು ವಿಭಾಗ ಹಾಗೂ ಉಡುಪಿ ಜಿಲ್ಲೆ ವತಿಯಿಂದ ಕುಂಜಿಬೆಟ್ಟು ಶಾರದಾ ರೆಸಿಡೆನ್ಸಿಯಲ್ ಸ್ಕೂಲಿನ ಸಭಾಂಗಣದಲ್ಲಿ ಬುಧವಾರ ನಡೆದ ಸಾಧಕರೊಂದಿಗೆ ಸಂವಾದದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದರು. ಶಾಸ್ರ್ತೀಯ ಕಲಾವಿದರಿಗೆ ಪಂಚ ತಾರಾ ಆತಿಥ್ಯ, ಯಕ್ಷಗಾನ/ಜನಪದ ಕಲಾವಿದರಿಗೆ ಕಲ್ಯಾಣ ಮಂಟಪದಲ್ಲಿ ಉಳಿದುಕೊಳ್ಳಬಹುದಾದ ವ್ಯವಸ್ಥೆಯ ತಾರತಮ್ಯ ಸಲ್ಲದು. ಯಕ್ಷಗಾನ ಗಂಡಸರಿಗೆ ಸೀಮಿತವಾದ ಕಲೆಯಲ್ಲ, ಎಲ್ಲರಿಗೂ ಸೇರಿದ ಕಲೆ. ಸಾಹಿತ್ಯ ಕಾರ್ಯಕ್ರಮದಲ್ಲಿ ತೊಡಗುವಿಕೆ ಸಂತೋಷ ನೀಡುತ್ತದೆ. ಬದುಕಿನಲ್ಲಿ  ಉತ್ತಮ ಕಲಾವಿದರಾಗಲು ಅನುಭವ ವಿಸ್ತಾರ, ವೀಕ್ಷಣೆಯ ಕುತೂಹಲ ಬಹುಮುಖ್ಯ ಎಂದರು. ತಮ್ಮ ಸುದೀರ್ಘ ಅರವತ್ತು ವರ್ಷದ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಅಂಚೆ ಕಚೇರಿಯ ಬ್ಯಾಂಕ್ ಆದ ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ (IPPB), ಉಡುಪಿ ಶಾಖೆಯು ಜಿಲ್ಲೆಯ ಜನರಿಗೆ ಅಗತ್ಯ ಬ್ಯಾಂಕಿಂಗ್ ಸೇವೆಗಳನ್ನು ಒದಗಿಸಲು ಕಮಿಷನ್ ಆಧಾರಿತ ವೈಯಕ್ತಿಕ ಬಿಸಿನೆಸ್ ಕರೆಸ್ಪಾಂಡೆಂಟ್‌ಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಉಡುಪಿ ಶಾಖೆಯಲ್ಲಿ ಒಟ್ಟು 30 ಹುದ್ದೆಗಳು ಲಭ್ಯವಿದ್ದು, ಜಿಲ್ಲೆಯ ಆಸಕ್ತರು, ನಿವೃತ್ತ ನೌಕರರು, ಸಾಮಾನ್ಯ ಸೇವಾ ಕೇಂದ್ರಗಳ ನಿರ್ವಾಹಕರು ಅಥವಾ ಇತರ ವ್ಯಾಪಾರ ಸಂಸ್ಥೆಗಳು ಮತ್ತು ಉದ್ಯಮಗಳನ್ನು ನಡೆಸುತ್ತಿರುವ 18 ರಿಂದ 70 ವರ್ಷದೊಳಗಿನ, ಎಸ್.ಎಸ್.ಎಲ್.ಸಿ ಉತ್ತೀರ್ಣರಾದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಇದು ಕಮಿಷನ್ ಆಧಾರಿತ ಕೆಲಸವಾಗಿದ್ದು, ನಿಗದಿತ ಮಾಸಿಕ ವೇತನ ಇರುವ ಉದ್ಯೋಗವಲ್ಲ. ಅಭ್ಯರ್ಥಿಗಳು ಒದಗಿಸುವ ಬ್ಯಾಂಕಿಂಗ್ ಸೇವೆಗಳು ಮತ್ತು ನಡೆಸುವ ವಹಿವಾಟುಗಳ ಆಧಾರದ ಮೇಲೆ ಕಮಿಷನ್ ಪಡೆಯಲಿದ್ದಾರೆ. ಅರ್ಜಿ ಸಲ್ಲಿಸಲು ಡಿಸೆಂಬರ್ 5 ಕೊನೆಯ ದಿನವಾಗಿದ್ದು, ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್, ಉಡುಪಿ ಶಾಖೆ ದೂ.ಸಂಖ್ಯೆ: 0820-2522005, ಮೊ.ನಂ: 7899971688…

Read More