Author: ನ್ಯೂಸ್ ಬ್ಯೂರೋ

ಕುಂದಾಪುರ: ನೂರಾರು ವರ್ಷಗಳ ಇತಿಹಾಸ ಹೊಂದಿರುವ ಗೊಂಬೆಯಾಟವನ್ನು ರಾಷ್ಟ್ರೀಯ ರಂಗಕಲೆ ಎಂದು ಗುರುತಿಸದೇ ಹೋದರೇ ಅದು ಕೇವಲ ಒಂದು ಪ್ರದೇಶಕ್ಕಷ್ಟೇ ಸೀಮಿತವಾಗಿಬಿಡುವ ಅಪಾಯವಿದೆ. ಕಲೆಯ ಶಕ್ತಿ ಸಾಮರ್ಥ್ಯಗಳನ್ನು ಗ್ರಹಿಸದಿರುವುದರಿಂದ ಈ ರಂಗಪ್ರಕಾರವನ್ನು ಸಮರ್ಥವಾಗಿ ಬೆಳೆಸಲು ಸಾಧ್ಯವಾಗುತ್ತಿಲ್ಲ ಎಂದು ಕರ್ನಾಟಕ ಜನಪದ ವಿಶ್ವವಿದ್ಯಾನಿಲಯದ ಕುಲಪತಿ ಡಾ. ಚಿನ್ನಪ್ಪ ಗೌಡ ಹೇಳಿದರು. ಅವರು ಉಪ್ಪಿನಕುದ್ರು ಗೊಂಬೆಮನೆಯಲ್ಲಿ ಉಪ್ಪಿನಕುದ್ರು ಶ್ರೀ ದೇವಣ್ಣ ಪದ್ಮನಾಭ ಕಾಮತ್ ಮೆಮೋರಿಯಲ್ ಯಕ್ಷಗಾನ ಗೊಂಬೆಯಾಟ ಟ್ರಸ್ಟ್ ವಾರ್ಷಿಕೋತ್ಸವ ಸಮಾರಂಭದಲ್ಲಿ ಕೊಗ್ಗ ದೇವಣ್ಣ ಕಾಮತ್ ಪ್ರಶಸ್ತಿ ಪ್ರದಾನಿಸಿ ಮಾತನಾಡಿದರು. ಪುರಾತನ ಕಲೆಗಳನ್ನು ಮುಂದುವರಿಸಿಕೊಂಡು ಹೋಗುವುದು ಸುಲಭವಲ್ಲ. ಪರಂಪರೆಯ ಗಾಂಭೀರ್ಯ, ಆಧುನಿಕತೆಯ ವಿಸ್ತಾರವನ್ನು ಒಳಗೊಳ್ಳುವ ಅನಿವಾರ್ಯತೆ ಕಲಾಕಾರನ ಮುಂದಿದೆ. ಸಮಾಜದಲ್ಲಿ ಸ್ವಸ್ಥ, ಸುಸಂಸ್ಕೃತ ಮನಸ್ಸುಗಳನ್ನು ಕಟ್ಟುವ ಕೆಲಸವಾದರೇ ಕಲೆಯ ಉದ್ದೇಶ ಸಾರ್ಥಕ್ಯಗೊಳ್ಳುತ್ತದೆ ಎಂದರು. ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷ ಹರಿಕೃಷ್ಣ ಪುನರೂರು ವಾರ್ಷಿಕೊತ್ಸವವನ್ನು ಉದ್ಘಾಟಿಸಿ ಶುಭ ಹಾರೈಸಿದರು. ಸಿಂಡಿಕೇಟ್ ಬ್ಯಾಂಕ್ ನಿವೃತ್ತ ಸಿನಿಯರ್ ಮ್ಯಾನೆಜರ್ ಬಾಬುರಾಯ್ ಶೆಣೈ, ಕುಂದಾಪುರದ ಚಾರ್ಟೆಟ್ ಅಕೌಂಟೆಂಟ್ ಪಿ.…

Read More

ಭರತೇಶ ಅಲಸಂಡೆಮಜಲು. | ಕುಂದಾಪ್ರ ಡಾಟ್ ಕಾಂ ಲೇಖನ ವಾರ್ಷಿಕ ಪರೀಕ್ಷೆ ಮುಗಿದು ಫಲಿತಾಂಶ ಏಪ್ರಿಲ್ 10ಕ್ಕೆ ಪ್ರಕಟಗೊಂಡರೆ ನಂತರ ಮುಂಗಾರಿನ ಮಳೆಯ ಮೊದಲ ಸಿಂಚನದವರೆಗೂ ಪರ್ವಕಾಲ ದೊಡ್ಡ ರಜೆ, ಮಲ್ಲ ರಜೆ, ಬೇಸಗೆ ರಜೆ. ಮಾರ್ನೆಮಿ ರಜೆಯಲ್ಲಿ ಗಳಿಸದೇ ಉಳಿಸಿದನ್ನು ದೊಡ್ಡ ರಜೆಯಲ್ಲಿ ಸಾಧಿಸುವ ಪ್ರಯತ್ನ. ಮೊದಲ ನೀರ ಹನಿಗೆ ಚಾತಕಪಕ್ಷಿ ಕಾಯುವಂತೆ, ಬೇಸಗೆ ರಜೆಗಾಗಿ ಕಾದು ಮೊದಲ ಅದ್ಯತೆಯೆಂಬಂತೆ ಅಜ್ಜಿಮನೆಗೆ ದಾಳಿಯಿಡುವುದು. ಹೆಚ್ಚಾಗಿ ಅಜ್ಜಿ ಮನೆಯೆಂದರೆ ಅಮ್ಮನ ಮನೆಯೇ ಆಗಿರುತಿದ್ದದ್ದು ಅಲಿಖಿತ ನಿಯಮದಂತೆ. ದಿನಕ್ಕೊಂದು ಪುಟ ಕಾಪಿ ಬರಿಯಿರಿ ಎಂದು ನಮ್ಮ ಸರಕಾರಿ ಶಾಲಾ ಶಿಕ್ಷಕಿ ಶೇಸಮ್ಮ ಟೀಚರ್ ನ ಅಜ್ಞಾಪಾಲಕರಾಗಿ ನಾನು ರಜೆ ದೊರೆತ ಮೊದಲೆರಡು ದಿನಗಳಲ್ಲೇ ತಮ್ಮನಿಗೆ ಪೈಪೋಟಿ ನೀಡುತ್ತಾ, ಪುಟ ಸಂಖ್ಯೆ ನಮೂದಿಸುತ್ತಾ, 50 – 60 ಪುಟ ಬರೆದು ಅಜ್ಜಿ ಮನೆಗೆ ಹೊರಡಲು ಸಿದ್ಧರಾಗುತಿದ್ದೇವು. ಆಗ ನಮಗೆ ಬೇಕಿರುತ್ತಿದ್ದದ್ದು ತಿಂಡಿ ಮತ್ತು ಆಟ. ಅಪ್ಪ , ಅಮ್ಮನ ಪ್ರೀತಿಯ ಬೈಗುಳಗಳ ಹೊಡೆತ ತಪ್ಪಿಸಿಕೊಂಡು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ. ಎ.24: ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟಪೂರ್ವಾಧ್ಯಕ್ಷ ಪುಂಡಲೀಕ ಹಾಲಂಬಿ (65) ಇಂದು ಬೆಳಿಗ್ಗೆ ಬೆಂಗಳೂರಿನ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ  ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇಂದು ಚಿಕಿತ್ಸೆಗೆ ಸ್ಪಂದಿಸದೇ ಅವರು ನಿಧನರಾಗಿದ್ದಾರೆ. ಮೃತರು ಮಡದಿ ಹಾಗೂ ಈರ್ವ ಗಂಡು ಮಕ್ಕಳನ್ನು ಅಗಲಿದ್ದಾರೆ. ಹಾಲಂಬಿ ಅವರ ನಿಧನಕ್ಕೆ ನಾಡಿನ ಗಣ್ಯರು, ಸಾಹಿತಿಗಳು ಹಾಗೂ ಅಪಾರ ಸಂಖ್ಯೆಯ ಅಭಿಮಾನಿಗಳು ಕಂಬನಿ ಮಿಡಿಸಿದ್ದಾರೆ. ಸರಳ ವ್ಯಕ್ತಿತ್ವ, ಸ್ಪುಟವಾದ ಮಾತುಗಾರಿಕೆ, ಸ್ನೇಹಪರತೆ, ಸೇವಾ ಮನೋಭಾವ, ಕ್ರೀಯಾಶೀಲತೆ, ಅಭಿವೃದ್ಧಿ ಪರ ಚಿಂತನೆ, ಸಂಘಟನಾ ಕೌಶಲ್ಯ, ಹೋರಾಟದ ಹಾದಿ ಇವೇ ಮುಂತಾದ ಗುಣಗಳ ಮೂಲಕ ಕನ್ನಡ ನಾಡಿನಲ್ಲಿ ಚಿರಸ್ಥಾಯಿಯಾಗಿ ಉಳಿದವರು ಪುಂಡಲೀಕ ಹಾಲಂಬಿಯವರು. ಹಾಲಂಬಿ ನಡೆದ ಹಾದಿ ಕನ್ನಡ ಸಾಹಿತ್ಯ ಪರಿಚಾರಿಕೆಯ ಮೂಲಕ ಗುರುತಿಸಿಕೊಂಡಿದ್ದ ಹಾಲಂಬಿಯವರು ಸಂಘಟನೆ, ಆಡಳಿತ ನಿರ್ವಹಣೆಯ ಮೂಲಕ ತನ್ನದೇ ಆದ ಛಾಪು ಮೂಡಿಸಿದವರು. ಕಸಾಪ ನಿಟಕಪೂರ್ವ ಅಧ್ಯಕ್ಷರಾಗಿ, ಹತ್ತಾರು ವರ್ಷಗಳ ಕಾಲ ಕಸಾಪದ ವಿವಿಧ ಹುದ್ದೆಗಳನ್ನಲಂಕರಿಸಿ ನಾಡಿನಾದ್ಯಂತ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ರಾಜ್ಯ ಸರಕಾರ ಸಿಹಿನೀರು ಮತ್ತು ಉಪ್ಪು ನೀರಿಗೆ ಭಿನ್ನ ಮರಳು ನೀತಿ ಜಾರಿಗೊಳಿಸಿದ್ದರಿಂದಾಗಿ ಜಿಲ್ಲೆಯಾದ್ಯಂತ ಮರಳು ಅಭಾವ ಕಾಣಿಸಿಕೊಂಡು ಸಮಸ್ಯೆಯಾಗಿ ಪರಿಣಮಿಸಿದೆ. ಸರಕಾರವು ಏಕರೂಪ ಮರಳು ನೀತಿ ಜಾರಿಗೊಳಿಸಿ ಈ ಸಮಸ್ಯೆಗೊಂದು ಶಾಶ್ವತ ಪರಿಹಾರ ಕಂಡುಕೊಳ್ಳಬೇಕಿದೆ ಎಂದು ಮಾಜಿ ಸಚಿವ ಜಯಪ್ರಕಾಶ್ ಹೆಗ್ಡೆ ಹೇಳಿದರು. ಜಿಲ್ಲೆಯಾದ್ಯಂತ ಈ ಮರಳು ಸಮಸ್ಯೆಯಿಂದಾಗಿ ಖಾಸಗಿ ಮನೆ ಮತ್ತಿತರ ವಾಣಿಜ್ಯ ಕಟ್ಟಡಗಳ ಕಾಮಗಾರಿ ಸಂಪೂರ್ಣವಾಗಿ ಸ್ಥಗಿತಗೊಂಡಿದೆ, ಸಾಲ ಮಾಡಿ ಕಟ್ಟಡ ನಿರ್ಮಾಣದಲ್ಲಿ ಹಣ ತೊಡಗಿಸಿದವರ ಸ್ಥಿತಿಯಂತೂ ಹೇಳತೀರದು. ಅತ್ತ ಮರಳು ಸಿಗದ ಕಾರಣಕ್ಕಾಗಿ ಕಟ್ಟಡ ಕಾಮಗಾರಿಯೂ ಪೂರ್ಣಗೊಳ್ಳದೇ ಇತ್ತ ಪಡೆದ ಸಾಲದ ಕಂತನ್ನು ಮರುಪಾವತಿಸಲಾಗದೇ ಪರದಾಡುತ್ತಿದ್ದಾರೆ. ಕಾಮಗಾರಿ ಸ್ಥಗಿತಗೊಂಡ ಕಾರಣಕ್ಕೆ ಹಣ ತೊಡಗಿಸಿದ ಗುತ್ತಿಗೆದಾರರ ಬಿಲ್ ಪಾವತಿಯಾಗುತ್ತಿಲ್ಲ. ದಿನಗೂಲಿ ನಂಬಿರುವ ಕಟ್ಟಡದ ಕಾರ್ಮಿಕರು ಕೆಲಸವಿಲ್ಲದೇ ಊಟಕ್ಕಿಲ್ಲದೇ ಪರಿತಪಿಸುತ್ತಿದ್ದಾರೆ. ಆದರೆ ಈ ಸಮಸ್ಯೆಗಳನ್ನು ಅರ್ಥೈಸಿಕೊಂಡು ಏಕರೂಪ ಮರಳು ನೀತಿ ಜಾರಿಗೊಳಿಸುವ ಕುರಿತು ಸರಕಾರಕ್ಕೆ ಒತ್ತಡ ಹೇರುವ ಬದಲಾಗಿ ನಮ್ಮ ಜನಪ್ರತಿನಿಧಿಗಳು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ತಾಲೂಕಿನ ಪಂಚಶಂಕರನಾರಾಯಣ ಕ್ಷೇತ್ರಗಳಲ್ಲೊಂದಾದ ಬೆಳ್ವೆ ಶ್ರೀ ಶಂಕರನಾರಾಯಣ ದೇವಸ್ಥಾನದ ವಾರ್ಷಿಕ ಮನ್ಮಹಾರಥೋತ್ಸವ ಧಾರ್ಮಿಕ ವಿಧಿವಿಧಾನಗೊಂದಿಗೆ ವಿಜ್ರಂಭಣೆಯಿಂದ ಜರುಗಿತು. ಕ್ಷೇತ್ರದ ತಂತ್ರಿ ವೇ.ಮೂ ಸದಾಶಿವ ಭಟ್ ಅವರ ನೇತೃತ್ವದಲ್ಲಿ ಧಾರ್ಮಿಕ ಕಾರ್ಯಗಳ ಆರಂಭಗೊಂಡು ವಾರ್ಷಿಕ ಮನ್ಮಹಾರಥೋತ್ಸವ ಹಾಗೂ ಇನ್ನಿತರ ವಿಧಿಗಳೊಂದಿಗೆ ಸಂಪನ್ನಗೊಂಡಿತು. ರಥೋತ್ಸವದಲ್ಲಿ ದೇವಳದ ಆಡಳಿತ ಮೊಕ್ತೇಸರ ಬಿ. ಶಂಕರ ಶೆಟ್ಟಿ, ಪವಿತ್ರಪಾಣಿ ಶಂಕರನಾರಾಯಣ ಅಲ್ಸೆ, ಇತರ ಮುಕ್ತೇಸರರು ಪಾಲ್ಗೊಂಡಿದ್ದರು. ಬೆಳ್ವೆ ಪರಿಸರದ ಸಾವಿರಾರು ಮಂದಿ ರಥೋತ್ಸವ ಹಾಗೂ ವಾರ್ಷಿಕ ಜಾತ್ರೆಯಲ್ಲಿ ಪಾಲ್ಗೊಂಡು ಪುನೀತರಾದರು

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಮಕ್ಕಳ ಉಜ್ವಲ ಭವಿಷ್ಯಕ್ಕೆ ಪೂರ್ವ ಪ್ರಾಥಮಿಕ ಶಿಕ್ಷಣ ಅತ್ಯಂತ ಭದ್ರ ತಳಪಾಯ ಅವರನ್ನು ಸ್ವತಂತ್ರ ಹಾಗೂ ಸ್ವಾವಲಂಭಿಗಳಾಗಿ ದಿನ ನಿತ್ಯದ ಬದುಕಿನಲ್ಲಿ ತಮ್ಮ ಕೆಲಸಗಳನ್ನು ತಾವೇ ಮಾಡಿಕೊಳ್ಳುವ ಕೌಶಲ್ಯವನ್ನು ಮಾಂಟೇಸ್ಸೊರಿ ಶಿಕ್ಷಣ ಹೆಚ್ಚಿಸುತ್ತದೆ ಎಂದು ಎಕ್ಸೆಲೆಂಟ್ ಪಿಯು ಕಾಲೇಜಿನ ಪ್ರಾಂಶುಪಾಲೆ ಚಿತ್ರ ಕಾರಂತ್ ಹೇಳಿದರು. ಅವರು ಕೋಣಿಯ ಮಾತಾ ಮಾಂಟೆಸ್ಸೊರಿ ಶಾಲೆಯ ವಾರ್ಷಿಕೋತ್ಸವದಲ್ಲಿ ಪಾಲ್ಗೊಂಡು ಮಾತನಾಡಿದರು. ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ ವಿಜೇತರಾದ ಪುಟಾಣಿಗಳಿಗೆ ಬಹುಮಾನ ವಿತರಿಸಲಾಯಿತು. ನಿವೃತ್ತ ಮುಖ್ಯೋಪಾಧ್ಯಾಯಿನಿ ಸುಲೋಚನ ಎಸ್. ಶೆಟ್ಟಿ ಉಪಸ್ಥಿತರಿದ್ದರು. ಸಂಸ್ಥೆಯ ವ್ಯವಸ್ಥಾಪಕ ಪ್ರಕಾಶ್ಚಂದ್ರ ಶೆಟ್ಟಿ ಚಿತ್ತೂರು ಅತಿಥಿಗಳನ್ನು ಸ್ವಾಗತಿಸಿದರು. ಶಾಲೆಯ ಪ್ರಾಂಶುಪಾಲೆ ಭಾರತಿ ಪ್ರಕಾಶ್ ಶೆಟ್ಟಿ ಬಹುಮಾನ ವಿಜೇತರ ಪಟ್ಟಿ ವಾಚಿಸಿದರು. ಶಿಕ್ಷಕಿ ಸುಮಿತ್ರ ವಂದಿಸಿದರು. ಗೀತಾ ಶೆಟ್ಟಿ, ಶಕ್ತಿ ಶೆಟ್ಟಿ, ಸಹಕರಿಸಿದರು. ಪ್ರಭಾವ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಮಾಂಟೆಸ್ಸೊರಿ ಪುಟಾಣಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಮಂಗಳೂರಿನ ಕೋಟೆಕಾರ್‌ನ ದೇವರ ಅರಮನೆಯಲ್ಲಿ ಮರಕಡದ ಶ್ರೀ ಗುರು ಪರಾಶಕ್ತಿ ಮಠದ ಶ್ರೀ ನರೇಂದ್ರನಾಥ ಯೋಗೀಶ್ವರೇಶ್ವರ ಸ್ವಾಮೀಜಿಯವರ ಪುನರುತ್ಥಾನ ಸಂಕಲ್ಪದಂತೆ ನಡೆಯಲಿರುವ ಪ್ರತಿಷ್ಠಾ ಬ್ರಹ್ಮಕಲಶೋತ್ಸವಕ್ಕೆ ಕುಂದಾಪುರದ ಭಕ್ತ ವೃಂದದವರಿಂದ ಹೊರೆ ಕಾಣಿಕೆ ಸಮರ್ಪಿಸಲಾಯಿತು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕೆನರ ಬ್ಯಾಂಕ್ ಚೀಫ್ ಮ್ಯಾನೇಜರ್ ವಿಷ್ಣುದಾಸ ಭಟ್‌ರವರು ವಾಟರ್ ಕೂಲರ್‌ನ್ನು ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರಾದ ಬಿ.ಎಮ್. ಸುಕುಮಾರ ಶೆಟ್ಟಿಯವರಿಗೆ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಕುಂದಪ್ರಭ ಸಂಪಾದಕ ಯು.ಎಸ್. ಶೆಣೈ, ಕಾಲೇಜು ಆಡಳಿತ ಮಂಡಳಿಯ ಕಾರ್ಯದರ್ಶಿ ಸೀತರಾಮ ನಕ್ಕತ್ತಾಯ, ಆಡಳಿತ ಮಂಡಳಿಯ ಸದಸ್ಯ ಅನಿಲ್ ಚಾತ್ರ, ಕಾಲೇಜಿನ ಪ್ರಾಂಶುಪಾಲ ಪ್ರೊ. ದೋಮ ಚಂದ್ರಶೇಖರ, ಆರ್.ಎನ್.ಶೆಟ್ಟಿ ಪಿ.ಯು. ಕಾಲೇಜಿನ ಪ್ರಾಂಶುಪಾಲ ನವೀನ್ ಕುಮಾರ್ ಶೆಟ್ಟಿ, ವಿ.ಕೆ.ಆರ್. ಆಚಾರ್ಯ ಪ್ರೌಢ ಶಾಲೆಯ ಮುಖ್ಯೋಪಾಧ್ಯಾಯ ಕೃಷ್ಣ ಅಡಿಗ ಉಪಸ್ಥಿತರಿದ್ದರು.

Read More

ಕುಂದಾಪುರ: ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿಯ ಪ್ರಥಮ ವಾರ್ಷಿಕೋತ್ಸವ ಸಮಾರಂಭ ಎ. ೨೪ರಂದು ಮಧ್ಯಾಹ್ನ ೩ಗಂಟೆಗೆ ನಡೆಯಲಿದೆ. ಈ ಸಂದರ್ಭದಲ್ಲಿ ಯಕ್ಷಗಾನ ಕ್ಷೇತ್ರಕ್ಕೆ ಅನನ್ಯ ಕೊಡುಗೆ ನೀಡಿದ ಸಾಲಿಗ್ರಾಮ ಮಕ್ಕಳ ಮೇಳದ ಸಂಚಾಲಕ ಶ್ರೀಧರ ಹಂದೆಯವರಿಗೆ ಪ್ರತಿಷ್ಠಿತ ಕೊಗ್ಗ ದೇವಣ್ಣ ಕಾಮತ್ ಪ್ರಶಸ್ತಿ ಹಾಗು ನಗದು ಪುರಸ್ಕಾರ ನೀಡಿ ಗೌರವಿಸಲಾಗುತ್ತಿದೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹಾವೇರಿಯ ಕರ್ನಾಟಕ ಜನಪದ ವಿಶ್ವವಿದ್ಯಾಲಯದ ಕುಲಪತಿ ಡಾ. ಚಿನ್ನಪ್ಪ ಗೌಡ ವಹಿಸಲಿದ್ದು ನವದೆಹಲಿಯ ಹರಿಗುರು ಸೇವಾ ಪ್ರತಿಷ್ಠಾನದ ಮುಖ್ಯಸ್ಥ ಕೆ. ಶ್ರೀನಿವಾಸ ಅನಂತ ಪ್ರಭು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಬೈಂದೂರು ಶಾಸಕ ಕೆ. ಗೋಪಾಲ ಪೂಜಾರಿ, ವಿಧಾನ ಪರಿಷತ್ ಸದಸ್ಯ ಶ್ರೀನಿವಾಸ ಪೂಜಾರಿ, ಹೋಟೆಲ್ ಉದ್ಯಮಿ ಆನಂದರಾಮ ಉಳ್ಳೂರು, ಸಿಂಡಿಕೇಟ್ ಬ್ಯಾಂಕ್ ನಿವೃತ್ತ ಸೀನಿಯರ್ ಮ್ಯಾನೆಜರ್ ಬಾಬುರಾಯ ಶೆಣೈ, ಕುಂದಾಪುರದ ಚಾರ್ಟೆಡ್ ಅಕೌಂಟೆಂಟ್ ಪಿ. ಪ್ರಭಾಕರ್ ಮಯ್ಯ ಭಾಗವಹಿಸಲಿದ್ದಾರೆ ಎಂದು ಅಕಾಡೆಮಿಯ ನಿರ್ದೇಶಕ ಭಾಸ್ಕರ ಕೊಗ್ಗ ಕಾಮತ್ ತಿಳಿಸಿದ್ದಾರೆ

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ತಾಲೂಕಿನ ಬಸ್ರೂರು ಶ್ರೀ ಮಹಾಲಿಂಗೇಶ್ವರ ದೇವಳ ವಾರ್ಷಿಕ ಮನ್ಮಹಾರಥೋತ್ಸವ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ವಿಜೃಂಭಣೆಯಿಂದ ಜರುಗಿತು. ದೇವಳದ ಪ್ರಧಾನ ತಂತ್ರಿಗಳ ನೇತೃತ್ವದಲ್ಲಿ ವಾರ್ಷಿಕ ಧಾರ್ಮಿಕ ಕಾರ್ಯಕ್ರಮಗಳು ಸಂಪನ್ನಗೊಂಡಿತು. ರಥೋತ್ಸವದಲ್ಲಿ ದೇವಸ್ಥಾನದ ಆಡಳಿತ ಮೊಕ್ತೇಸರ ಬಿ. ಅಪ್ಪಣ್ಣ ಹೆಗ್ಡೆ ಮೊದಲಾದವರು ಪಾಲ್ಗೊಂಡಿದ್ದರು.

Read More