ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭವು ಮಂಗಳವಾರ ನಡೆಯಿತು. ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಜ್ಞಾನಸುಧಾ ಸಂಸ್ಥೆಗಳ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಮತ್ತು ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ದಿನೇಶ್ ಎಂ. ಕೊಡವೂರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ, ಜೀವನದಲ್ಲಿ ಕಷ್ಟ ಅಂಥ ಯಾವುದು ಇಲ್ಲ ಅದು ನಾವು ನೋಡುವ ದೃಷ್ಟಿಕೋನದಲ್ಲಿದೆ. ಜ್ಞಾನ ಸಂಪಾದನೆಗೆ ಶ್ರಮಿಸಿದಷ್ಟು ವ್ಯಕ್ತಿತ್ವ ವಿಕಸನಗೊಳ್ಳುತ್ತದೆ. ಉಜ್ವಲ ಭವಿಷ್ಯವನ್ನು ಹೊಂದಲು ನಾಂದಿಯಾಗುತ್ತದೆ ಎಂದರು. ಶ್ರೀ ವೆಂಕಟರಮಣ ದೇವ್ ಎಜುಕೇಶನಲ್ & ಕಲ್ಚರಲ್ ಟ್ರಸ್ಟ್ ನ ಕಾರ್ಯದರ್ಶಿ ಕೆ. ರಾಧಾಕೃಷ್ಣ ಶೆಣೈ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ, ತಂದೆ, ತಾಯಿ, ಗುರುಗಳಿಗೆ ಗೌರವ ನೀಡಿ ಸಮಾಜದಲ್ಲಿ ಸತ್ಪ್ರಜೆಯಾಗಿ ಯಶಸ್ವಿ ಬದುಕನ್ನು ಸಾಗಿಸಿ ಎಂದು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಕಾಲೇಜಿನ ಪ್ರಾಂಶುಪಾಲರಾದ ಸಂದೀಪ್ ಗಾಣಿಗ, ಉಪ ಪ್ರಾಂಶುಪಾಲರಾದ ಸುಜೇಯ್ ಕೋಟೆಗಾರ್, ಶ್ರೀ ವೆಂಕಟರಮಣ ಪ್ರಾಥಮಿಕ ವಿಭಾಗದ ಮುಖ್ಯೋಪಾಧ್ಯಾಯಿನಿ ರೇಷ್ಮಾ ಡಿಸೋಜಾ, ಪೂರ್ವ ಪ್ರಾಥಮಿಕ ವಿಭಾಗದ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಆರೋಗ್ಯ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಕಭೀ ಕಾರ್ಯಕ್ರಮದಡಿಯಲ್ಲಿ ಖಾಲಿಯಿರುವ ವಿವಿಧ ಹುದ್ದೆಗಳನ್ನು ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಮಾರ್ಚ್ 18 ರಿಂದ ಅರ್ಜಿ ಆಹ್ವಾನಿಸಲಾಗಿದೆ. ಅಸಕ್ತ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಹಾಗೂ ಅರ್ಜಿ ನಮೂನೆಗಾಗಿ Udupi.nic.in ನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕಾಸರಗೋಡು: ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ ರಿ. ಕಾಸರಗೋಡು ಇದರ 35ನೇ ಸಂಸ್ಥಾಪನಾ ವರ್ಷಾಚರಣೆಯ ಸಂಭ್ರಮದ ಪ್ರಯುಕ್ತ ಕಾಸರಗೋಡು ಕನ್ನಡ ಗ್ರಾಮದಲ್ಲಿ ನಿರ್ಮಾಣವಾಗುತ್ತಿರುವ “ಕಾಸರಗೋಡು ಗೋ-ಕುಟೀರ”ದ ಕಾಮಗಾರಿಗೆ ಗೋ- ಭಕ್ತರು, ಗೋ -ಪೋಷಕರು, ದಾನಿಗಳಿಂದ ಆರ್ಥಿಕ ಸಹಾಯ, ಸಹಕಾರ ಪ್ರೋತ್ಸಾಹವನ್ನು ನೀಡುವಂತೆ ಮನವಿ ಮಾಡಲಾಗಿದೆ. ದೇಸಿ ಗೋವುಗಳನ್ನು ಉಳಿಸಿ ಬೆಳೆಸುವುದಕ್ಕಾಗಿ ಸುಮಾರು 25 ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಕಾಸರಗೋಡು ಗೋ – ಕುಟೀರವನ್ನು ಜಗಜ್ಜನನಿ ಗೋಮಾತೆಯ ಆಶೀರ್ವಾದವನ್ನು ಪಡೆಯುವ ಉದ್ದೇಶದಿಂದ ಒಂದು ಧಾರ್ಮಿಕ ಶ್ರದ್ಧಾ ಕೇಂದ್ರವನ್ನಾಗಿ ರೂಪುಗೊಳಿಸುವುದಕ್ಕಾಗಿ ದೈವಾರ್ಷಿಕ ಕಾರ್ಯ ಯೋಜನೆಯನ್ನು ಕೈಗೊಳ್ಳಲಾಗಿದೆ. ಪ್ರತಿಯೊಬ್ಬರೂ ಕುಟುಂಬ ಸಮೇತರಾಗಿ ಕಾಸರಗೋಡು ಕನ್ನಡ ಗ್ರಾಮಕ್ಕೆ ಆಗಮಿಸಿ ಕಾಸರಗೋಡು ಗೋ-ಕುಟೀರದಲ್ಲಿ ಗೋವುಗಳಿಗೆ ಗೋ-ಗ್ರಾಸ ನೀಡಿ, ಗೋ- ಆರತಿಯನ್ನು ಬೆಳಗಿಸಿ, ಗೋ-ಸಂಕೀರ್ತನೆಯನ್ನು ಹಾಡಿ, ಗೋ-ಕುಟೀರದಲ್ಲಿ ಪ್ರಾರ್ಥನೆಯನ್ನು ಸಲ್ಲಿಸಿ ತಮ್ಮ ಇಷ್ಟಾರ್ಥವನ್ನು ಶ್ರದ್ಧಾ ಭಕ್ತಿಯಿಂದ ಪಡೆಯಲು ಅವಕಾಶ ಕಲ್ಪಿಸಲಾಗುವುದು. ತಮ್ಮ ಮನೆಗಳಲ್ಲಿ ನಡೆಯುವ ಶುಭ ಸಮಾರಂಭಗಳ ನಿಮಿತ್ತ ಕಾಸರಗೋಡು ಗೋ -ಕುಟೀರಕ್ಕೆ ಆಗಮಿಸಿ ಗೋ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಸಿರಿಧಾನ್ಯಗಳಲ್ಲಿ ನಾರಿನಾಂಶ, ಕಬ್ಬಿಣಾಂಶಗಳು ಹೆಚ್ಚಾಗಿರುವುದರಿಂದ ಇದು ಪೋಷಕಾಂಶಗಳ ಕಣಜವಿದ್ದಂತೆ. ದೈನಂದಿನ ಆಹಾರ ಪದ್ಧತಿಯಲ್ಲಿ ಪ್ರತಿಯೊಬ್ಬರೂ ಸಿರಿಧಾನ್ಯ ಬಳಸುವುದರಿಂದ ಆರೋಗ್ಯದಲ್ಲಿ ಸಮತೋಲನ ಕಾಪಾಡಿಕೊಳ್ಳಬಹುದಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಡಾ. ಉದಯ್ ಕುಮಾರ್ ಶೆಟ್ಟಿ ಹೇಳಿದರು. ಅವರು ಮಂಗಳವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ರಾಷ್ಟ್ರೀಯ ಖಾದ್ಯ ತೈಲ ಅಭಿಯಾನ- ಎಣ್ಣೆಕಾಳು ಯೋಜನೆ ಅಡಿ ಜಿಲ್ಲಾ ಮಟ್ಟದ ಕಾರ್ಯಾಗಾರ ಹಾಗೂ ರಾಷ್ಟ್ರೀಯ ಆಹಾರ ಭದ್ರತೆ ಮತ್ತು ಪೌಷ್ಠಿಕ ಅಭಿಯಾನ ಯೋಜನೆ ಅಡಿ ಜಿಲ್ಲಾ ಮಟ್ಟದ ಸಿರಿಧಾನ್ಯ ಹಬ್ಬವನ್ನು ಉದ್ಘಾಟಿಸಿ ಮಾತನಾಡಿದರು. ಇತ್ತೀಚಿನ ದಿನಗಳಲ್ಲಿ ಕೃಷಿ ಚಟುವಟಿಕೆಗೆ ಹೆಚ್ಚು ಉತ್ತೇಜನ ನೀಡುವ ನಿಟ್ಟಿನಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಅನೇಕ ಯೋಜನೆಗಳು ಹಾಗೂ ಕಾರ್ಯಕ್ರಮಗಳನ್ನು ಜಾರಿಗೊಳಿಸುವುದರೊಂದಿಗೆ ಕೃಷಿ ಕ್ಷೇತ್ರಕ್ಕೆ ವಿಫುಲ ಅವಕಾಶ ಕಲ್ಪಿಸಿದೆ. ಕೃಷಿ ಪ್ರಧಾನವಾದ ದೇಶದಲ್ಲಿ ಶೇ. 60 ರಷ್ಟು ಜನರು ಕೃಷಿ ಚಟುವಟಿಕೆಗಳನ್ನು ಕೈಗೊಳ್ಳುತ್ತಿದ್ದರೂ ಸಹ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಸಂಜೀವ ಪೂಜಾರಿ ಎಂಬ ಕಲಾ ಶಕ್ತಿ ಗ್ರಾಮೀಣ ಭಾಗದಲ್ಲಿ ಕಲಾಸಕ್ತಿಯ ಕೇಂದ್ರವಾಗಿಸಿ ಯುವ ಸಮೂಹಕ್ಕೆ ದಾರಿದೀಪವಾಗಿದೆ ಎಂದು ಕೋಟ ಅಮೃತೇಶ್ವರೀ ದೇಗುಲದ ಆಡಳಿತ ಮಂಡಳಿಯ ಅಧ್ಯಕ್ಷ ಆನಂದ್ ಸಿ. ಕುಂದರ್ ಹೇಳಿದರು. ಅವರು ಸೋಮವಾರ ಕೋಟದ ಕದ್ರಿಕಟ್ಟು ಊರ ಹತ್ತು ಸಮಸ್ತರಿಂದ ವರ್ಷಂಪ್ರತಿ ನಡೆಸಲ್ಪಡುವ 35ನೇ ವರ್ಷದ ಶ್ರೀ ಕ್ಷೇತ್ರ ಅಮೃತೇಶ್ವರೀ ದಶಾವತಾರ ಯಕ್ಷಗಾನ ಮಂಡಳಿಯ ಯಕ್ಷಗಾನ, ಸತ್ಯನಾರಾಯಣ ಪೂಜಾ ಕಾರ್ಯಕ್ರಮ, ರಂಗಕರ್ಮಿ ಕಲಾವಿದ ಕದ್ರಿಕಟ್ಟು ಸಂಜೀವ ಪೂಜಾರಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಮಾತನಾಡಿದರು. ಸಂಜೀವ ಕದ್ರಿಕಟ್ಟು ಅಪ್ರತಿಮಾ ಕಲಾವಿದನಾಗಿ ಕಲಾ ಕ್ಷೇತ್ರಕ್ಕೆ ನೀಡಿದ ಕೊಡುಗೆ ಅನನ್ಯ ಎಂದರು. ಈ ವೇಳೆ ಅಮೃತೇಶ್ವರೀ ಮೇಳದ ಸ್ತ್ರೀ ವೇಷಧಾರಿ ಮಾಧವ ಜೋಗಿ ನಾಗೂರು ಅವರಿಗೆ ಕದ್ರಿಕಟ್ಟು ಸಂಜೀವ ಪೂಜಾರಿ ಪ್ರಶಸ್ತಿ ನೀಡಿ ಗೌರವಿಸಲಾಯಿತು. ರಾಜ್ಯ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯಕ್ಷಕಲಾವಿದ ಕೋಟ ಸುರೇಶ್ ಬಂಗೇರ ಅವರಿಗೆ ವಿಶೇಷ ಅಭಿನಂದನೆ ಸಲ್ಲಿಸಲಾಯಿತು. ಕಾರ್ಯಕ್ರಮದದಲ್ಲಿ ಕೋಟ ಅಮೃತೇಶ್ವರೀ ದೇಗುಲದ ಟ್ರಸ್ಟಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ನಮ್ಮ ದೇಶ ಸಾಂಸ್ಕೃತಿಕವಾಗಿ ಗಟ್ಟಿ ನೆಲೆಯಾಗಿ ಕಲಾವಿದರ ಸೃಷ್ಠಿಯ ತಾಣವಾಗಿದೆ ಎಂದು ವಿಶ್ವ ವಿಖ್ಯಾತ ಸಾಲಿಗ್ರಾಮ ಮಕ್ಕಳ ಮೇಳದ ನಿರ್ದೇಶಕ ಎಚ್. ಸುಜಯೀಂದ್ರ ಹಂದೆ ಹೇಳಿದರು. ಕೋಟತಟ್ಟು ಪಡುಕರೆ ಅರಮ ದೇಗುಲದ ಸಮೀಪ ಟೀಮ್ ಭವಾಬ್ಧಿ ಪಡುಕರೆ ಇವರ ಐದನೇ ವರ್ಷದ ವರ್ಷೋತ್ಸವ ಕಡಲೂರ ಸನ್ಮಾನ ಕಾರ್ಯಕ್ರಮದಲ್ಲಿ ಅಭಿನಂದನಾ ನುಡಿಗಳನ್ನಾಡಿ ಮಾತನಾಡಿದರು. ದೇಶದ ಯಾವುದೇ ವ್ಯವಸ್ಥೆಯನ್ನು ಹಾಳುಗೆಡವ ಬಹುದು ಆದರೆ ಇಲ್ಲಿನ ಸಂಸ್ಕ್ರತಿ ನಾಶಮಾಡಲು ಯಾರಿಂದಲೂ ಸಾಧ್ಯವಿಲ ಇದು ಶ್ರೀಮಂತ ಪರಂಪರೆಯ ದೇಶವಾಗಿದೆ,ಕರಾವಳಿ ಸಂಘ ಸಂಸ್ಥೆಗಳ ತವರೂರಾಗಿ ಸಾಕಷ್ಟು ಸಮಾಜಮುಖಿ ಕಾರ್ಯಗಳಿಗೆ ವೇದಿಕೆ ಕಲ್ಪಿಸಿದೆ, ಕಲಾವಿದರಿಗೆ ಗರ್ವವಿರಬಾರದು ಗರ್ವ ಇದ್ದವರು ಕಲಾವಿದರಾಗಿ ಉಳಿಯಲು ಸಾಧ್ಯವಿಲ್ಲಾ ಎಂದರು. ಈ ವೇಳೆ ಗೀತಾನಂದ ಫೌಂಡೇಶನ್ ಪ್ರವರ್ತಕ ಆನಂದ್ ಸಿ. ಕುಂದರ್ ಅವರು ಭಾಗವತ, ಭಜಕ ಪ್ರಶಾಂತ್ ಪಡುಕರೆ ಅವರಿಗೆ ಕಡಲೂರ ಸನ್ಮಾನ ನೀಡಿ ಗೌರವಿಸಿದರು. ಸಾಲಿಗ್ರಾಮದ ಹೊಸಬದುಕು ಆಶ್ರಮಕ್ಕೆ ವಾಟರ್ ಫಿಲ್ಟರ್ ನ್ನು ಗಣ್ಯರ ಸಮ್ಮುಖದಲ್ಲಿ ಹಸ್ತಾಂತರಿಸಲಾಯಿತು. ಸಭೆಯ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ನಡೂರಿನ ಶ್ರೀವಾಣಿ ಪ್ರೌಢ ಶಾಲೆಯಲ್ಲಿ ನಡೆಯುತ್ತಿರುವ ಶ್ರೀ ಕಾಳವರ ವರದರಾಜ ಎಂ. ಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸಾತಕೋತರ ಅಧ್ಯಯನ ಕೇಂದ್ರ ಕುಂದಾಪುರ ಕೋಟೇಶ್ವರ ರಾಷ್ಟ್ರೀಯ ಸೇವಾ ಯೋಜನೆ ಇದರ 2025-26ನೇ ಸಾಲಿನ ವಾರ್ಷಿಕ ವಿಶೇಷ ಶಿಬಿರದಲ್ಲಿ ಕಾವಿ ಕಲೆಯ ಕುರಿತು ಪರಿಚಯ ಮತ್ತು ಪ್ರಾತ್ಯಕ್ಷಿಕೆ ಕಾರ್ಯಕ್ರಮ ನಡೆಯಿತು. ಕಲಾವಿದರಾದ ಜನಾರ್ದನ ಹಾವಂಜೆ ಅವರು ಈ ಕಲೆಯ ವಿಶಿಷ್ಟತೆ, ಇತಿಹಾಸ ಮತ್ತು ಸಮಕಾಲೀನ ಸಂದರ್ಭದಲ್ಲಿ ಅದರ ಸಂರಕ್ಷಣೆಯ ಕುರಿತು ಶಿಬಿರಾರ್ಥಿಗಳಿಗೆ ಮಾಹಿತಿ ನೀಡಿದರು. ಪಾರಂಪರಿಕವಾದ ಈ ಕಲೆಯ ಕುರಿತು ಅಧ್ಯಯನ ಮತ್ತು ಸಂಶೋಧನೆ ನಡೆಸಿರುವ ಜನಾರ್ದನ ಹಾವಂಜೆ ಅವರು ಚಿತ್ರಕಲೆಯ ವಿವಿಧ ಪ್ರಕಾರಗಳಲ್ಲಿ ಕಾವಿ ಕಲೆಯ ವೈಶಿಷ್ಟ್ಯ ಮತ್ತು ವಿಭಿನ್ನತೆಯ ಕುರಿತು ಮಾತನಾಡಿದರು. ಕಲೆಯ ಕುರಿತಾದ ಆಸಕ್ತಿಗಳನ್ನು ವಿದ್ಯಾರ್ಥಿಗಳಲ್ಲಿ ಧನಾತ್ಮಕ ಚಿಂತನೆ ಸೌಂದರ್ಯ ಪ್ರಜ್ಞೆ, ನಾಗರಿಕ ಪ್ರಜ್ಞೆಯನ್ನು ಮೂಡಿಸುವಲ್ಲಿ ಸಹಕಾರಿ ಆಗಬಲ್ಲದು ಎಂದರು. ಲಲಿತ ಕಲೆಗಳ ಕ್ಷೇತ್ರದಲ್ಲಿ ಲಭ್ಯವಿರುವ ಉದ್ಯೋಗಾವಕಾಶಗಳ ಸಾಧ್ಯತೆಯ ಕುರಿತು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಶಂಕರನಾರಾಯಣ: ಪ್ರತಿಷ್ಠಿತ ಇನ್ ಸ್ಪಾಯರ್ ಅವಾರ್ಡ್ಗೆ ಉಡುಪಿ ಜಿಲ್ಲೆಯ ಐದು ತಾಲೂಕುಗಳಲ್ಲಿ 196 ವಿದ್ಯಾರ್ಥಿಗಳು ಆಯ್ಕೆಯಾಗಿದ್ದು, ಅದರಲ್ಲಿ 53 ವಿದ್ಯಾರ್ಥಿಗಳು ಕುಂದಾಪುರ ವಲಯದಿಂದ ಆಯ್ಕೆಯಾಗಿರುತ್ತಾರೆ. ಈ ಪ್ರತಿಷ್ಠಿತ ಇನ್ ಸ್ಪಾಯರ್ ಅವಾರ್ಡ್ಗೆ ಮದರ್ ತೆರೇಸಾ ಶಾಲೆಯ ಹೈಸ್ಕೂಲ್ ವಿಭಾಗದ 9ನೇ ತರಗತಿಯ ಮೋಕ್ಷಿತ್ ವಿ. ಶೆಟ್ಟಿ ಹಾಗೂ ಹಿರಿಯ ಪ್ರಾಥಮಿಕ ಶಾಲೆಯ 8ನೇ ತರಗತಿಯ ಕಿಶನ್ ಶೆಟ್ಟಿ ಆಯ್ಕೆ ಆಗಿರುತ್ತಾರೆ. ವಿದ್ಯಾರ್ಥಿಗಳಿಗೆ ಮದರ್ ತೆರೇಸಾ ಶಾಲೆಯ ವಿಜ್ಞಾನ ಶಿಕ್ಷಕಿಯರಾದ ಮೆಲಿಶಾ ಹಾಗೂ ಗ್ರೇಸಿಯವರು ಮಾರ್ಗದರ್ಶನ ನೀಡಿರುತ್ತಾರೆ. ಈ ಇಬ್ಬರು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಶಾಲಾ ಆಡಳಿತಮಂಡಳಿ, ಮುಖ್ಯೋಪಾಧ್ಯಾಯಿನಿ ಹಾಗೂ ಸಿಬ್ಬಂದಿಗಳು ಅಭಿನಂದಿಸಿ, ಮುಂದಿನ ಹಂತಕ್ಕೆ ಶುಭ ಹಾರೈಸಿರುತ್ತಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಬೆಂಗಳೂರಿನಲ್ಲಿ ನಡೆಯುತ್ತಿರುವ ರಾಜ್ಯ ವಿಧಾನ ಮಂಡಲದ ಬಜೆಟ್ ಅಧಿವೇಶನದಲ್ಲಿ ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕ ಗುರುರಾಜ್ ಶೆಟ್ಟಿ ಗಂಟಿಹೊಳೆಯವರು ಪ್ರಸ್ತುತ ರಾಜ್ಯದಲ್ಲಿ ಎಪಿಎಲ್ ಪಡಿತರ ಚೀಟಿ ಕೋರಿ ಸಲ್ಲಿಕೆಯಾಗಿ ಅನುಮೋದನೆಗೆ ಬಾಕಿ ಇರುವ ಹಾಗೂ ಪ್ರಸ್ತುತ ಪಡಿತರ ಚೀಟಿ ಅರ್ಜಿ ಹಾಕಿದ ನಂತರ ಸಕಾಲದಲ್ಲಿ ಪಡಿತರ ಚೀಟಿ ದೊರಕದೇ ಇರುವ ಕಾರಣ ಅರ್ಜಿದಾರರು ವಿವಿಧ ಸರ್ಕಾರಿ ಸೌಲಭ್ಯಗಳಿಂದ ವಂಚಿತರಾಗುತ್ತಿರುವ ಬಗ್ಗೆ ಕೇಳಿರುವ ಚುಕ್ಕೆ ಗುರುತಿಲ್ಲದ ಪ್ರಶ್ನೆಗೆ ಕೇಳಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ ರಾಜ್ಯ ಆಹಾರ ನಾಗರೀಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರಾದ ಕೆ. ಹೆಚ್ ಮುನಿಯಪ್ಪ ರವರು ಉತ್ತರಿಸಿ ರಾಜ್ಯದಲ್ಲಿ ದಿನಾಂಕ :22-02-2026 ರ ಅಂತ್ಯಕ್ಕೆ ಎಪಿಎಲ್ ಪಡಿತರ ಚೀಟಿ ಕೋರಿ 1,38,778 ಅರ್ಜಿಗಳು ಬಾಕಿ ಇರುವುದಾಗಿದೆ. ಹಾಗೂ ಸರ್ಕಾರದ ಆದೇಶ ಸಂಖ್ಯೆ ಆನಾಸ 211 ಡಿಆರ್ ಎ 2021 ದಿನಾಂಕ : 29-09-2023 ರಲ್ಲಿ ಎಪಿಎಲ್ ಪಡಿತರ ಚೀಟಿಗಳನ್ನು ಕೋರಿ ಸಲ್ಲಿಕೆಯಾಗಿರುವ ಅರ್ಜಿಗಳಿಗೆ ಅನುಮೋದನೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಒಬ್ಬಂಟಿಯಾಗಿ ವಾಸುತ್ತಿದ್ದ ವ್ಯಕ್ತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಿಜೂರು ಗ್ರಾಮದ ಸಾಲಿಮಕ್ಕಿಯಲ್ಲಿ ಸಂಭವಿಸಿದೆ. ಉಪ್ಪುಂದ ನಿವಾಸಿ ಕೃಷ್ಣ ಗಾಣಿಗ (67) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಕೂಲಿ ಕೆಲಸ ಮಾಡಿಕೊಂಡಿದ್ದ ಅವರು ಜೀವನದಲ್ಲಿ ಜಿಗುಪ್ಸೆಗೊಂಡು ಆತ್ಮಹತ್ಯೆ ಮಾಡಿಕೊಂಡಿರಬೇಕು ಎಂದು ಸಂಶಯಿಸಲಾಗಿದೆ. ಅವರ ಪತ್ನಿ, ಮಕ್ಕಳು ಉಡುಪಿಯಲ್ಲಿ ನೆಲೆಸಿದ್ದರು. ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
