Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಶಿಕ್ಷಣದ ಗುಣಮಟ್ಟ ವ್ಯಕ್ತಿತ್ವದ ನಿರ್ಮಾಣಕ್ಕೆ ಸಹಾಯಕವಾಗಬೇಕು. ಅಂತಹ ಶಿಕ್ಷಣ ಆಂತರ್ಯದ ಶಕ್ತಿಯನ್ನು ಉದ್ದೀಪನಗೊಳಿಸಿ ಜ್ಞಾನ ಸಂಪಾದಿಸುವಂತಾಗಬೇಕಾದರೆ ಪಠ್ಯದೊಂದಿಗೆ ಪಠ್ಯಪೂರಕ ಚಟುವಟಿಕೆಗಳು ಮುಖ್ಯ. ಅವುಗಳಿಂದ ಶಿಕ್ಷಣ ಪರಿಪೂರ್ಣವಾಗಲು ಸಾಧ್ಯ. ಈ ರೀತಿಯ ಚಟುವಟಿಕೆಗಳು ವರ್ತಮಾನದ ತುರ್ತು ಎಂದು ಉಡುಪಿಯ ಎಮ್‌ಜಿಎಮ್ ಕಾಲೇಜಿನ ನಿವೃತ್ತ ಪ್ರಾಧ್ಯಾಪಕರಾದ ಕೆ. ಸುರೇಂದ್ರನಾಥ್ ಶೆಟ್ಟಿ ಹೇಳಿದರು. ಅವರು ಇಲ್ಲಿನ ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಕಾಲೇಜಿನ ಐಕ್ಯೂಎಸಿ ಘಟಕ ಆಯೋಜಿಸಿದ 4 ದಿನಗಳ ಪೂರ್ವ ಪರಿಚಯ ‘ಪ್ರೇರಣಾ’ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಕಾಲೇಜಿನ ಪ್ರಾಂಶುಪಾಲರಾದ ಕೆ. ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಉಪ-ಪ್ರಾಂಶುಪಾಲರಾದ ಡಾ| ಚೇತನ್ ಶೆಟ್ಟಿ ಕೋವಾಡಿ ಸ್ವಾಗತಿಸಿ, ಆಡಳಿತ ನಿಕಾಯಕರು ಹಾಗೂ ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ರಕ್ಷಿತ್ ರಾವ್ ಗುಜ್ಜಾಡಿ ಪ್ರಸ್ತಾಪಿಸಿದರು. ವಾಣಿಜ್ಯ ಪ್ರಾಧ್ಯಾಪಕ ಸತೀಶ್ ಶೆಟ್ಟಿ ಅತಿಥಿಗಳನ್ನು ಪರಿಚಯಿಸಿದರು. ಶೈಕ್ಷಣಿಕ ನಿಕಾಯಕ ಶ್ರೀ ಗಿರಿರಾಜ್ ಭಟ್ ಉಪಸ್ಥಿತರಿದ್ದರು. ಕನ್ನಡ ಸಹಾಯಕ ಪ್ರಾಧ್ಯಾಪಕಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಪ್ರಧಾನ ಮಂತ್ರಿ ಸೂರ್ಯ ಘರ್ ಯೋಜನೆ ಜನರಿಗೆ ಅನಗತ್ಯ ಆರ್ಥಿಕ ಹೊರೆಯನ್ನು ಹೊರೆಸುವ ಯೋಜನೆ. ಇದರಿಂದ ಜನಸಾಮಾನ್ಯರಿಗೆ ಯಾವುದೇ ಪ್ರಯೋಜನವಿಲ್ಲ ಎಂದು ಜಿಲ್ಲಾ ಕಾಂಗ್ರೆಸ್ ವಕ್ತಾರ ಕೆ. ವಿಕಾಸ್ ಹೆಗ್ಡೆ ಹೇಳಿದರು. ಪ್ರಧಾನ ಮಂತ್ರಿ ಸೂರ್ಯ ಘರ್ ಯೋಜನೆ ಹೆಸರಿನಲ್ಲಿ ಮನೆಗಳಿಗೆ ಸೌರ ಫಲಕಗಳನ್ನು ಅಳವಡಿಸಲು ಸಬ್ಸಿಡಿ ಹಾಗೂ ಕಡಿಮೆ ಬಡ್ಡಿ ದರದಲ್ಲಿ ಸಾಲ ನೀಡುವುದಾಗಿ ಕೇಂದ್ರ ಸರ್ಕಾರ ಜಾಹಿರಾತುಗಳನ್ನು ನೀಡುತ್ತಿದ್ದು ಇದೊಂದು ಅನುಪಯುಕ್ತ ಹಾಗೂ ಜನಸಾಮಾನ್ಯರನ್ನು ಆರ್ಥಿಕ ಹೊರೆಯನ್ನು ಹೇರುವ ಯೋಜನೆಯಾಗಿದೆ. ಈಗಾಗಲೇ ಕರ್ನಾಟಕದಲ್ಲಿ ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರ್ಕಾರ ಗೃಹ ಜ್ಯೋತಿ ಯೋಜನೆಯ ಮೂಲಕ ಇನ್ನೂರು ಯೂನಿಟ್ ತನಕ ಉಚಿತ ವಿದ್ಯುತ್ ನೀಡುತ್ತಿದ್ದು ರಾಜ್ಯದ ಸುಮಾರು 80% ಕ್ಕಿಂತ ಹೆಚ್ಚಿನ ಫಲಾನುಭವಿಗಳು ಉಚಿತ ವಿದ್ಯುತ್ ಸೌಲಭ್ಯ ಪಡೆಯುತ್ತಿದ್ದಾರೆ. ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಸೂರ್ಯ ಘರ್ ಉಚಿತ ವಿದ್ಯುತ್ ಯೋಜನೆ ಹೆಸರಿಗೆ ಮಾತ್ರ ಉಚಿತ ಆದರೆ ಸಬ್ಸಿಡಿ ಹೆಸರಿನಲ್ಲಿ ಫಲಾನುಭವಿಗಳಿಗೆ ಸಾಲ ನೀಡಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಮೂಡುಬಿದಿರೆ: ದಕ್ಷಿಣ ಕನ್ನಡ ಜಿಲ್ಲಾ ಪದವಿ ಪೂರ್ವ ಗಣಿತ ಉಪನ್ಯಾಸಕರ ಸಂಘ, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಹಾಗೂ ದ. ಕ. ಜಿಲ್ಲಾ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರ ಸಂಘದ ಸಹಾಭಾಗಿತ್ವದಲ್ಲಿ ಒಂದು ದಿನದ ಕಾರ್ಯಾಗಾರ ಆಳ್ವಾಸ್ ಕಾಲೇಜಿನ ಕುವೆಂಪು ಸಭಾಂಗಣದಲ್ಲಿ ನಡೆಯಿತು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಮೋಹನ್ ಎಂ. ಆಳ್ವ ಕಾರ್ಯಕ್ರಮದಲ್ಲಿ ಮಾತನಾಡಿ, ಗಣಿತವು ಭೌತಶಾಸ್ತ್ರ, ರಸಾಯನಶಾಸ್ತ್ರ ಮತ್ತು ಎಲ್ಲಾ ತಾರ್ಕಿಕ ವಿಜ್ಞಾನಗಳಿಗೆ ಹೇಗೆ ಅಡಿಪಾಯವನ್ನು ಹಾಕುತ್ತದೆ ಎಂಬುದನ್ನು ಉಲ್ಲೇಖಿಸಿದರು. ದಕ್ಷಿಣ ಕನ್ನಡ ಜಿಲ್ಲೆಯ ವಿದ್ಯಾರ್ಥಿಗಳು ಬೋರ್ಡ್ ಪರೀಕ್ಷೆಗಳಲ್ಲಿ ಉತ್ತಮ ಪ್ರದರ್ಶನ ನೀಡುತ್ತಾರೆ ಆದರೆ ಜೆ.ಇ.ಇ., ಎನ್.ಎ.ಟಿ.ಎ., ಎನ್.ಡಿ.ಎ., ಬಿ. ನಂತಹ ರಾ?ಮಟ್ಟದ ಪರೀಕ್ಷೆಗಳಿಗೆ ಬಂದಾಗ ವಿದ್ಯಾರ್ಥಿಗಳು ಹಿಂದುಳಿಯುತ್ತಾರೆ. ಪಿ.ಯು.ಸಿ. ಮಟ್ಟದಲ್ಲಿ ಫಲಿತಾಂಶಗಳನ್ನು ಹೆಚ್ಚಿಸಲು ಗಣಿತದ ಅಡಿಪಾಯವನ್ನು ಬಲಪಡಿಸಲು ಉಪನ್ಯಾಸಕರು ಕಾರ್ಯ ಪ್ರವೃತರಾಗಬೇಕೆಂದರು. ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದ ದ. ಕ. ಜಿಲ್ಲಾ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರ ಸಂಘದ ಅಧ್ಯಕ್ಷ ಜಯಾನಂದ, ಶಿಕ್ಷಕರು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ. ಗಂಗೊಳ್ಳಿ: ಇಲ್ಲಿನ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಘಟಕ ಮತ್ತು  ಇಂಟೆಗ್ರೇಟೆಡ್ ಎಂಟರ್ಪ್ರೈಸಸ್ ಉಡುಪಿ ಇವರ ಜಂಟಿ ಆಶ್ರಯದಲ್ಲಿ ಸರಸ್ವತಿ ವಿದ್ಯಾಲಯದ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗಾಗಿ ಮ್ಯೂಚುಯಲ್ ಫಂಡ್ ಹೂಡಿಕೆ ಮತ್ತು ಉಳಿತಾಯದ ಕುರಿತಾದ ಮಾಹಿತಿ  ಕಾರ್ಯಕ್ರಮವು ಇಲ್ಲಿನ ಗುಜ್ಜಾಡಿ ಗೋಪಾಲ ನಾಯಕ್ ರೋಟರಿ ಸಭಾಂಗಣದಲ್ಲಿ ನೆರವೇರಿತು.  ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ಎಚ್‌ಡಿಎಫ್‌ಸಿ ಮ್ಯೂಚುಯಲ್ ಫಂಡ್ ರಿಲೇಷನ್ಶಿಪ್ ಮ್ಯಾನೇಜರ್ ಸುದೀಪ್ ಆರ್ ಅವರು ಮಾತನಾಡಿ, ಗಳಿಕೆಯನ್ನು ಖರ್ಚು ಮಾಡುವ ಮೊದಲು ಸಮರ್ಪಕ ಯೋಜನೆಯನ್ನು ರೂಪಿಸಿಕೊಳ್ಳಬೇಕು. ಉಳಿಕೆಯನ್ನು ಜೀವನದ ಒಂದು ಭಾಗವಾಗಿ ರೂಪಿಸಿಕೊಂಡು ಉಳಿಕೆಯ ಮೂಲಕ ಗಳಿಕೆಯನ್ನು ಪಡೆಯುವಲ್ಲಿ ಪ್ರಯತ್ನಿಸಬೇಕು ಎಂದರು  ಇಂಟೆಗ್ರೇಟೆಡ್ ಎಂಟರ್ಪ್ರೈಸಸ್ ಮಂಗಳೂರು ವಿಭಾಗದ ಸೀನಿಯರ್ ಮ್ಯಾನೇಜರ್ ಧನ್ಯ ಬಿ. ಅವರು ವಿದ್ಯಾರ್ಥಿಗಳಿಗೆ ಉಳಿಕೆಯ ಮಹತ್ವದ ಬಗ್ಗೆ ಮಾಹಿತಿ ನೀಡಿದರು. ಇಂಟಿಗ್ರೇಟೆಡ್ ಎಂಟರ್ಪ್ರೈಸಸ್ ಜನಾರ್ಧನ ಪೂಜಾರಿ ಮತ್ತು ಆದರ್ಶ ಶುಭ ಹಾರೈಸಿದರು. ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲೆ ಕವಿತಾ ಎಂ.…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಕೋಟತಟ್ಟು ಗ್ರಾಮಪಂಚಾಯತ್ ಕೊರಗ ಸಮುದಾಯದ ಬಗೆಗಿನ ಕಾಳಜಿ ಅವರಿಗೆ ಮೂಲ ಸೌಕರ್ಯ ಒದಗಿಸುವಲ್ಲಿ ಬುಮುಖ್ಯ ಪಾತ್ರ ವಹಿಸುತ್ತಿರುವುದು ಶ್ಲಾಘನೀಯ ಕಾರ್ಯ ಎಂದು ಬ್ರಹ್ಮಾವರ ತಾಲೂಕು ಪಂಚಾಯತ್‌ನ ಕಾರ್ಯನಿರ್ವಹಣಾಧಿಕಾರಿ ಹೆಚ್.ವಿ. ಇಬ್ರಾಹಿಂಪುರ ಅಭಿಪ್ರಾಯ ವ್ಯಕ್ತಪಡಿಸಿದರು. ಅವರು ಕೋಟತಟ್ಟು ಗ್ರಾಮ ಪಂಚಾಯತ್ ನೇತೃತ್ವದಲ್ಲಿ ಕೋಟತಟ್ಟು ವ್ಯಾಪ್ತಿಯ ಚಿಟ್ಟಿಬೆಟ್ಟು ಪರಿಸರದ ಎಂಟು ಕೊರಗ ಕುಟುಂಬಕ್ಕೆ ಮನೆ ನಿರ್ಮಿಸುತ್ತಿರುವ ಸ್ಥಳಕ್ಕೆ ಭೇಟಿ ನೀಡಿ ಮಾತನಾಡಿದರು. ಈ ಸಂದರ್ಭದಲ್ಲಿ ತಾ.ಪಂ ಸಹಾಯಕ ನಿರ್ದೇಶಕ ಮಹೇಶ್, ಕೋಟತಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷ ಕೆ ಸತೀಶ್ ಕುಂದರ್ ಬಾರಿಕೆರೆ, ಉಪಾಧ್ಯಕ್ಷರಾದ ಸರಸ್ವತಿ, ಸದಸ್ಯರಾದ ಎಚ್. ಪ್ರಮೋದ್ ಹಂದೆ, ವಾಸು ಪೂಜಾರಿ, ಸೀತಾ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ರವೀಂದ್ರ ರಾವ್ ಹಾಗೂ ಕೊರಗ ಕುಟುಂಬದ ಫಲಾನುಭವಿಗಳು ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಮೈಸೂರಿನ ಸಿದ್ದಾರ್ಥನಗರದ ಚಾಮರಾಜೇಂದ್ರ ಸರ್ಕಾರಿ ದೃಶ್ಯಕಲಾ ಕಾಲೇಜು (ಕಾ.ವಾ) ಸಂಸ್ಥೆಯಲ್ಲಿ ಬ್ಯಾಚುಲರ್ ಆಫ್ ವಿಜ್ಯುಯಲ್ ಆರ್ಟ್ಸ್ (ಬಿ.ವಿ.ಎ) ಪ್ರಥಮ ವರ್ಷದ ಬಾಕಿ ಉಳಿದಿರುವ ಸೀಟುಗಳ ಪ್ರವೇಶಾತಿಗೆ ದ್ವಿತೀಯ ಪಿ.ಯು.ಸಿ ಪರೀಕ್ಷೆ-2 ಮತ್ತು 3 ರಲ್ಲಿ ಉತ್ತೀರ್ಣರಾದ ಹಾಗೂ ದ್ವಿತೀಯ ಪಿ.ಯು.ಸಿ ಗೆ ಸಮನಾಂತರ ಕೋರ್ಸು ಮಾಡಿದ ಅರ್ಹ ವಿದ್ಯಾರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಸದರಿ ಪದವಿಯಲ್ಲಿ 3 ನೇ ಸೆಮಿಸ್ಟರ್‌ನಿಂದ ಚಿತ್ರಕಲೆ, ಶಿಲ್ಪಕಲೆ, ಗ್ರಾಫಿಕ್ಸ್ ಕಲೆ (ಅಚ್ಚುಕಲೆ), ಅನ್ವಯಕಲೆ, ಕಲಾ ಇತಿಹಾಸ ಹಾಗೂ ಛಾಯಾಚಿತ್ರ ಮತ್ತು ಛಾಯಾಚಿತ್ರ ಪತ್ರಿಕೋದ್ಯಮ ವಿಭಾಗಗಳಲ್ಲಿ ವಿಶೇಷ ಅಧ್ಯಯನದ ಸ್ನಾತಕ ಪದವಿಯಾಗಿರುತ್ತದೆ. ಅರ್ಜಿ ಸಲ್ಲಿಸಲು ಜುಲೈ 30 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಕಾರ್ಯಾಲಯದ ಸಹಾಯವಾಣಿ ಸಂಖ್ಯೆ:0821-2438931 ಅನ್ನು ಕಚೇರಿ ವೇಳೆಯಲ್ಲಿ ಅಥವಾ ವೆಬ್‌ಸೈಟ್ htts://uucms.karnataka.gov.in ಅಥವಾ https://www.cavamysore.karnataka.gov.in ಅನ್ನು ಸಂಪರ್ಕಿಸಬಹುದಾಗಿದೆ ಎಂದು ಸಂಸ್ಥೆಯ ಡೀನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ವರದಿ.ಕುಂದಾಪ್ರ ಕನ್ನಡದ್ ತಾಕತ್ತೇ ಅಂತದ್ ಕಾಣಿ. ಅದ್ರೊಳಗ್ ಭಾವ-ಬಂಧ ಎರಡೂ ಇತ್ತ್. ಹಂಗಾಯೇ ಕುಂದಾಪ್ರ ಭಾಷಿ ಮಾತಾಡ್ವರ್ ಯಾರ್ ಯಾರ್ ಎಲ್ಲೆಲ್ಲಿದ್ರೋ ಅಲ್ಲಲ್ಲೇ ಭಾಷಿ ಉಳ್ಸಿ-ಬೆಳ್ಸು ಬಗ್ಗ್ ಒಂಚೂರಾರೂ ನಿಗಾ ವಯ್ಸ್ಲಿ ಅಂದೇಳಿ ಆಟಿ ಅಮಾಸಿ ದಿನವೇ ’ವಿಶ್ವ ಕುಂದಾಪ್ರ ಕನ್ನಡ ದಿನ ‘ ಅಂದೇಳಿ ಆಚರಿಸ್ತಿದ್ರ್ ಈ ಸರ್ತಿ ಊರಂಗೆ, ಪರೂರಂಗೆ ಬೇರ್ಬೇರೆ ಕಾರ್ಯಕ್ರಮ ಆತಿತ್ತ್. ಬ್ರಹ್ಮಾವರದಿಂದ ಹಿಡ್ದ್ ಶಿರೂರ್ ತನಕ, ಕಾರ್ಕಳ, ಹೆಬ್ರಿ, ಬೆಂಗಳೂರಂಗೂ ಕಾರ್ಯಕ್ರಮ ಮಾಡ್ತಿದ್ರ್. ಊರಂಗ್ ಕಾರ್ಯಕ್ರಮ ಮಾಡುದ್ ಒಂದ್ ನಮ್ನಿ. ಆರೆ ಪರೂರಂಗ್ ಇಪ್ಪು ಕುಂದಾಪ್ರ ಕನ್ನಡ ಮಾತಾಡ್ವರೆಲ್ಲಾ ಒಟ್ಟಾಯಿ ಕಾರ್ಯಕ್ರಮ ಮಾಡುದ್ ಸಣ್ಣಾಟದ್ ಮಾತಲ್ಲ ಕಾಣಿ. ಕುಂದಾಪ್ರ ಕನ್ನಡ ಭಾಷೆಗೆ ತನ್ನದೇ ಆದ ಹಿರಿಮೆ-ಗರಿಮೆ ಇದೆ. ಕನ್ನಡ ಭಾಷೆಯ ಅತ್ಯಂತ ಸರಳ ಹಾಗೂ ಸಂಕ್ಷಿಪ್ತ ರೂಪವೆನಿಸಿಕೊಂಡಿರುವ ಕುಂದಾಪ್ರ ಕನ್ನಡ ಸರಿಸುಮಾರು ಬ್ರಹ್ಮಾವರದಿಂದ ಶಿರೂರಿನ ತನಕ ಮೂರು ತಾಲೂಕುಗಳಲ್ಲಿ ವ್ಯಾಪಿಸಿಕೊಂಡಿದೆ. ಕುಂದಾಪ್ರ ಕನ್ನಡ ಭಾಷಿಕರು ರಾಜ್ಯ ರಾಜಧಾನಿ ಸೇರಿದಂತೆ ಪ್ರಪಂಚದ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಭಾರತೀಯ ಹವಾಮಾನ ಇಲಾಖೆ/ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಬೆಂಗಳೂರು ಇವರ ಮುನ್ಸೂಚನೆಯಂತೆ ರಾಜ್ಯದ ಕರಾವಳಿ ಭಾಗದಲ್ಲಿ ಜು.23 ರಿಂದ 29ರ ವರೆಗೆ ಜಿಲ್ಲೆಯಲ್ಲಿ ಹೆಚ್ಚಿನ ಗಾಳಿ (ಸುಮಾರು 50 ಕೆ.ಎಂ.ಪಿ.ಹೆಚ್) ಯಿಂದ ಕೂಡಿದ ಮಳೆಯಾಗಲಿದ್ದು, ಅರಬ್ಬಿ ಸಮುದ್ರದಲ್ಲಿ ಹೆಚ್ಚಿನ ಗಾಳಿ ಬೀಸುವ ಸಾಧ್ಯತೆಯಿದ್ದು, ಸಮುದ್ರದ ಅಲೆಗಳ ಎತ್ತರವು ಹೆಚ್ಚಾಗಿರುತ್ತದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ. ಈ ಹಿನ್ನಲೆ, ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಮುಂಜಾಗ್ರತಾ ಕ್ರಮವಾಗಿ ಸಾರ್ವಜನಿಕರಿಗೆ ಹಾಗೂ ಅಧಿಕಾರಿಗಳಿಗೆ ಸಲಹೆ ಸೂಚನೆಗಳನ್ನು ಈ ಕೆಳಗಿನಂತೆ ನೀಡಿರುತ್ತದೆ. ಸಾರ್ವಜನಿಕರು, ಪ್ರವಾಸಿಗರು ಹಾಗೂ ಮೀನುಗಾರರು ನದಿ/ನೀರಿರುವ ಪ್ರದೇಶ ಮತ್ತು ಸಮುದ್ರಕ್ಕೆ ಇಳಿಯದಂತೆ ಕಟ್ಟೆಚ್ಚರ ವಹಿಸಬೇಕು ಮತ್ತು ಸಾರ್ವಜನಿಕರು, ಮಕ್ಕಳು ಹಾಗೂ ಕಾರ್ಮಿಕರು ಮಳೆ ಗಾಳಿ, ಸಿಡಿಲು ಬೀಳುವ ಸಂದರ್ಭದಲ್ಲಿ ಹೊರಗೆ ತಿರುಗಾಡದೆ, ಸೂಕ್ತ ಕಟ್ಟಡದಲ್ಲಿ ಆಶ್ರಯ ಪಡೆಯಬೇಕು. ಕೃಷಿಕರು ಮಳೆ/ಸಿಡಿಲಿನಂತಹ ಸಂದರ್ಭದಲ್ಲಿ ಹೊರಗಿನ ಕೃಷಿ ಚಟುವಟಿಕೆಯಿಂದ ದೂರವಿರಬೇಕು. ಈ ಸಂದರ್ಭದಲ್ಲಿ ಮಕ್ಕಳು/ಸಾರ್ವಜನಿಕರು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಕುಂದಾಪ್ರ ಭಾಷೆ, ಇಲ್ಲಿನ ವಿವಿಧ ಜನಾಂಗದ ಬದುಕಿನ ಜೀವನ ಪರಿ ವಿಶ್ವಮಟ್ಟದಲ್ಲಿ ಪಸರಿಸಿಕೊಂಡಿದೆ. ಈ ಬಗ್ಗೆ ಅಧ್ಯಯನ ಅಗತ್ಯ  ಮುಂದಿನ ತಲೆಮಾರಿಗೆ ಅನುಕೂಲವಾಗಲಿದೆ ಎಂದು ಮಣೂರು ಗೀತಾನಂದ ಫೌಂಡೇಶನ್ ಪ್ರವರ್ತಕ ಆನಂದ್ ಸಿ. ಕುಂದರ್ ಅಭಿಪ್ರಾಯಪಟ್ಟರು. ಅವರು ಬುಧವಾರ ಕೋಟದ ಪಂಚವರ್ಣ ಮಹಿಳಾ ಮಂಡಲದ ನೇತೃತ್ವದಲ್ಲಿ ಮಾತೃಸಂಸ್ಥೆ ಪಂಚವರ್ಣ ಯುವಕ ಮಂಡಲದ ಮಾರ್ಗದರ್ಶನದಲ್ಲಿ ಆ.10ರಂದು ಕೋಟದ ಹಂದಟ್ಟಿನಲ್ಲಿ ನಡೆಯಲಿರುವ  ಊರ್ ಕೇರಿ ಬದ್ಕಿನ ಹಬ್ಬ ಎಂಬ ಆಸಾಡಿ ಒಡ್ರ್ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿ ಮಾತನಾಡಿದರು. ನಮ್ಮ ಜೀವನ ಪದ್ದತಿ, ಭಾಷೆ ಜಗತ್ತನಲ್ಲಿ ಶೇಷ್ಠತೆ ಪಡೆದುಕೊಂಡಿದೆ. ಅದನ್ನು ಉಳಿಸಿ ಬೆಳೆಸಬೇಕಾದರೆ ಈ ರೀತಿಯ ಕಾರ್ಯಕ್ರಮಗಳು ಆಗಿಂದಾಗ ನಡೆಯುತ್ತಿರಬೇಕು. ನಮ್ಮ ಭಾಷೆ, ಬದುಕಿನ ವಿಚಾರಧಾರೆಗಳು ಉಳಿಯಬೇಕಾದರೆ ನಮ್ಮ ಮನೆಯಲ್ಲಿ ಅದನ್ನು ದೈನಂದಿನ ಬದುಕಿನಲ್ಲಿ ಅಳವಡಿಸಿ ಯುವ ಜನಾಂಗಕ್ಕೆ ಊಣಬಡಿಸಬೇಕು ಎಂದು ಪಂಚವರ್ಣ ಮಹಿಳಾ ಮಂಡಲದ ಈ ರೀತಿಯ ಕಾರ್ಯಕ್ರಮವನ್ನು ಶ್ಲಾಘಿಸಿದರು. ಇದೇ ವೇಳೆ ಗಣ್ಯರ ಸಮ್ಮುಖದಲ್ಲಿ ಆನಂದ್…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಉಡುಪಿ ಜಿಲ್ಲಾ ಪದವಿ ಪೂರ್ವ ಕಾಲೇಜು ರಸಾಯನಶಾಸ್ತ್ರ ಉಪನ್ಯಾಸಕರ ವೇದಿಕೆ, ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜು ಇವರ ಸಹಭಾಗಿತ್ವದಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನಲ್ಲಿ ರಸಾಯನ ಶಾಸ್ತ್ರ ಉಪನ್ಯಾಸಕರಿಗೆ ಒಂದು ದಿನದ ಕಾರ್ಯಾಗಾರವನ್ನು ಆಯೋಜಿಸಲಾಗಿತ್ತು. ಶ್ರೀ ವೆಂಕಟರಮಣ ದೇವ್ ಎಜುಕೇಶನಲ್ & ಕಲ್ಚರಲ್ ಟ್ರಸ್ಟ್ ಇದರ ಕಾರ್ಯದರ್ಶಿಯವರಾದ ಕೆ. ರಾಧಾಕೃಷ್ಣ ಶೆಣೈ ಅವರು ದೀಪ ಪ್ರಜ್ವಲಿಸುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಉ.ಜಿ.ಪ.ಪೂ.ಕಾ. ರಸಾಯನಶಾಸ್ತ್ರ ಉಪನ್ಯಾಸಕರ ವೇದಿಕೆ ಅಧ್ಯಕ್ಷರಾದ ಮಂಜುನಾಥ್ ಭಟ್ ವಹಿಸಿದ್ದರು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ Academics and Training, USAMEC, ಬೆಂಗಳೂರು ಇದರ ನಿರ್ದೇಶಕರಾದ ಡಾ. ಸಿ. ಕೆ. ಮಂಜುನಾಥ್ ಮಾತನಾಡಿ, ವಿದ್ಯಾರ್ಥಿಗಳು ಆಸಕ್ತಿ ಇಲ್ಲದ ಕ್ಷೇತ್ರದಲ್ಲಿ ಮುಂದುವರೆಯುವಂತೆ ಒತ್ತಾಯ ಮಾಡುವುದರಿಂದ ಸಮಾಜದಲ್ಲಿ ಅನೇಕ ದುರಂತಗಳು ನಡೆಯುತ್ತಿರುವುದನ್ನು ನೋಡುತ್ತಿದ್ದೇವೆ. ಅದಕ್ಕೆ ಅವಕಾಶ ಕೊಡದೇ ಅವರ ಆಸಕ್ತಿಯ ಕ್ಷೇತ್ರವನ್ನು ಆಯ್ಕೆ ಮಾಡಿಕೊಳ್ಳಲು ಅನುವು ಮಾಡಿಕೊಡಬೇಕುಎಂದರು. ಉ.ಜಿ.ಪ.ಪೂ.ಕಾ. ರಸಾಯನಶಾಸ್ತ್ರ ಗೌರವಾಧ್ಯಕ್ಷರಾದ ರಮಾಕಾಂತ್ ರೇವಣ್ ಕರ್, ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಸಂದೀಪ್…

Read More