ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಮಹಿಳೆ ಸ್ವಾವಲಂಬಿಯಾಗಿ ಜೀವನ ನಡೆಸುವಂತಾಗಬೇಕೆಂಬ. ಉದ್ದೇಶದಿಂದ ಆದಾಯಯುಕ್ತ ಚಟುವಟಿಕೆಗಳನ್ನು ನಡೆಸಲು ತರಬೇತಿ, ಸಹಾಯಧನ ಒದಗಿಸಿ ಸ್ವ ಉದ್ಯೋಗ ಮಾಡಲು ಸರಕಾರ ಅವಕಾಶ ಮಾಡಿಕೊಟ್ಟಿದ್ದಾರೆ ಎಂದು ಗಂಗೊಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಜಯಂತಿ ಖಾರ್ವಿ ಹೇಳಿದರು. ಅವರು ಗಂಗೊಳ್ಳಿ ಗ್ರಾಮ ಪಂಚಾಯತ್‌ನ ಗಂಗೋತ್ರಿ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟದ ವಾರ್ಷಿಕ ಮಹಾಸಭೆಯನ್ನು ಉದ್ಘಾಟಿಸಿ ಮಾತನಾಡಿದರು. ಮಹಿಳೆಯರು ಸರಕಾರದ ಯೋಜನೆಗಳ ಸದ್ಭಳಕೆ ಮಾಡಿಕೊಳ್ಳಬೇಕು, ಸ್ವ ಉದ್ಯೋಗಕ್ಕೆ ದೊರಕಿದ ಸಹಾಯಧನವನ್ನು ನ್ಯಾಯವಾಗಿ ಬಳಸಿಕೊಂಡು ಕುಟುಂಬದ ಆದಾಯವನ್ನು ಹೆಚ್ಚಿಸಿಕೊಳ್ಳಬೇಕು ಒಕ್ಕೂಟದ ಅಧ್ಯಕ್ಷೆ ಕಮಲ ಖಾರ್ವಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಗ್ರಾಪಂ ಪಿಡಿಒ ಶೋಭಾ ಎಸ್., ಕಾರ್ಯದರ್ಶಿ ಅನೂಪ್ ಶೇಟ್, ಚಿತ್ತಾರ ಸಂಜೀವಿನಿ ತಾಲೂಕು ಒಕ್ಕೂಟದ ಕಾರ್ಯದರ್ಶಿ ನಾಗರತ್ನ ಶುಭ ಹಾರೈಸಿದರು. ಸಂಪನ್ಮೂಲ ವ್ಯಕ್ತಿಗಳಾದ ಪಶು ವೈದ್ಯಾಧಿಕಾರಿ ಡಾ. ಅರುಣ್ ಕೆ.ಪಿ., ಗಂಗೊಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಎಚ್‌ಒ ನಯನಾ ತಾಂಡೇಲ, ಗಂಗೊಳ್ಳಿ ರೋಟರಿ ಕ್ಲಬ್ ಅಧ್ಯಕ್ಷೆ ಚಂದ್ರಕಲಾ ತಾಂಡೇಲ, ರುಡ್‌ಸೆಟ್…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಪ್ರಸಕ್ತ ಸಾಲಿನಲ್ಲಿ ಆರೋಗ್ಯ ಇಲಾಖೆಯ ಕಭೀ ಕಾರ್ಯಕ್ರಮದಡಿಯಲ್ಲಿ ಖಾಲಿಯಿರುವ ವಿವಿಧ ಹುದ್ದೆಗಳನ್ನು ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜೂನ್ 23 ರ ಕೊನೆಯ ದಿನ. ಆಸಕ್ತ ಅಭ್ಯರ್ಥಿಗಳು ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ವೆಬ್‌ಸೈಟ್ Udupi.nic.in ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಆಳ್ವಾಸ್ ಕಾಲೇಜು (ಸ್ವಾಯತ್ತ) ವತಿಯಿಂದ 2025-26 ನೇ ಸಾಲಿನ ಪದವಿ ತರಗತಿಗಳ ಪ್ರಾರಂಭೋತ್ಸವ ಕಾರ್ಯಕ್ರಮ ’ಅಂಕುರ’ ಆಳ್ವಾಸ್ ನ ಕೃಷಿಸಿರಿ ವೇದಿಕೆಯಲ್ಲಿ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವ್ಯವಸ್ಥಾಪಕ ಟ್ರಸ್ಟಿ ವಿವೇಕ್ ಆಳ್ವ, ಶಿಕ್ಷಣ ಸಂಸ್ಥೆಗಳು ಬಹುಮಹಡಿ ಕಟ್ಟಡಗಳಿದ್ದ ಮಾತ್ರಕ್ಕೇ ಶ್ರೇಷ್ಠವೆನಿಸಿಕೊಳ್ಳಲಾರವು. ಆ ಕಟ್ಟಡಗಳಿಗೆ ಜೀವಕಳೆ ವಿದ್ಯಾರ್ಥಿಗಳಿಂದ ಮಾತ್ರ ತುಂಬಲು ಸಾಧ್ಯ. ಅಂತಹ ವಿದ್ಯಾರ್ಥಿ ಸಮೂಹ ನೀವಾಗಬೇಕು. ಆಳ್ವಾಸ್ ನ ವಿದ್ಯಾರ್ಥಿಗಳೇ ’ಆಳ್ವಾಸ್ ಬ್ರ್ಯಾಂಡ್ʼ ಎಂದರು. ವಿದ್ಯಾರ್ಥಿಗಳು ಪದವಿ ಕಾಲೇಜಿಗೆ ಸೇರುವ ಮೂಲ ಉದ್ದೇಶವನ್ನು ಅರಿಯಬೇಕು. ಆಳ್ವಾಸ್ ಶಿಕ್ಷಣ ಸಂಸ್ಥೆ ತನ್ನ ಸಮಕಾಲೀನ ಶಿಕ್ಷಣದ ಮೂಲಕ ವಿದ್ಯಾರ್ಥಿಗಳಿಗೆ ಪ್ರಪಂಚದ ಆಧುನಿಕ ಅಗತ್ಯಗಳಿಗೆ ತಕ್ಕಂತಹ ಜ್ಞಾನ ಮತ್ತು ಕೌಶಲಗಳನ್ನು ಸದಾ ನೀಡುತ್ತಿದೆ. ಸ್ವಾಯತ್ತ ಕಾಲೇಜಿನ ನೆಲೆಯಲ್ಲಿ ನಿತ್ಯ ಬದಲಾಗುತ್ತಿರುವ ಉದ್ಯೋಗ ಮಾರುಕಟ್ಟೆ, ತಂತ್ರಜ್ಞಾನ, ಸಾಮಾಜಿಕ ಬದಲಾವಣೆಗಳಿಗೆ ತಕ್ಕಂತೆ ಪಠ್ಯ ಕ್ರಮವನ್ನು ರೂಪಿಸಲಾಗುತ್ತಿದೆ. ಇವು ವಿದ್ಯಾರ್ಥಿಗಳಲ್ಲಿ ವಾಸ್ತವಿಕ ಜ್ಞಾನ, ತಂತ್ರಜ್ಞಾನಾಧಾರಿತ ಕೌಶಲಗಳು, ಸೃಜನಾತ್ಮಕತೆ ಮತ್ತು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶ್ರೀ ಯೋಗಾನಂದೇಶ್ವರ ಸರಸ್ವತಿ ಮಠ, ಎಡತೊರೆ ಮೈಸೂರು ಇದರ ಪೀಠಾಧಿಪತಿಗಳಾದ ಶ್ರೀ ಶಂಕರ ಭಾರತೀ ಸ್ವಾಮೀಜಿ ಅವರು ಹಟ್ಟಿಅಂಗಡಿಯ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಗೆ ಭೇಟಿಯನ್ನಿಟ್ಟು ಆಶೀರ್ವದಿಸಿದರು. ಶಾಲೆಯ ಎಲ್ಲಾ ಚಟುವಟಿಕೆಗಳ ಬಗ್ಗೆ ಮಾಹಿತಿಯನ್ನು ತಿಳಿದುಕೊಂಡು, ವಿದ್ಯಾರ್ಥಿಗಳು ಪ್ರತಿನಿತ್ಯ ಭಜನೆಯನ್ನು ನಡೆಸುತ್ತಿರುವುದನ್ನು ತಿಳಿದು ಹರ್ಷ ವ್ಯಕ್ತಪಡಿಸಿದರು. ವಿದ್ಯಾರ್ಥಿಗಳು ಗುರ್ವಷ್ಟಕವೇ ಮೊದಲಾದ ಶಂಕರಾಚಾರ್ಯರ ಕೃತಿಗಳನ್ನೂ, ಭಜನೆಗಳನ್ನೂ ಹಾಡಿ ಗುರುಗಳನ್ನು ನಮಿಸಿದರು. ಹತ್ತು ವರ್ಷಗಳ ಹಿಂದೆ ತಾವು ಈ ಶಾಲೆಗೆ ಭೇಟಿ ನೀಡಿರುವುದನ್ನು ಸ್ಮರಿಸಿಕೊಂಡು, ನಂತರ ಇಲ್ಲಾದ ಬದಲಾವಣೆಗಳನ್ನು ಕೇಳಿ ತಿಳಿದುಕೊಂಡು ಆಶೀರ್ವದಿಸುತ್ತಾ ವಿದ್ಯಾರ್ಥಿ ಜೀವನದಿಂದಲೇ ಶಿಸ್ತನ್ನು ಅಳವಡಿಸಿಕೊಂಡು, ಯೋಗಾಭ್ಯಾಸವನ್ನು ನಿತ್ಯಭಜನೆಯನ್ನೂ ನಡೆಸುವುದು ವಿದ್ಯಾರ್ಥಿಗಳ ಜ್ಞಾಪಕಶಕ್ತಿಯನ್ನು ವೃದ್ಧಿಸುವಂತೆ ಮಾಡುವುದು. ದೇವರು ಎಲ್ಲಾ ಕಡೆಯಲ್ಲೂ ಇದ್ದು ನಮ್ಮನ್ನು ಹರಸುತ್ತಿರುತ್ತಾರೆ. ಯಾರೂ ಇಲ್ಲದ ಸ್ಥಳದಲ್ಲಿ ಬಾಳೆಹಣ್ಣು ತಿನ್ನಲು ಗುರುಗಳ ಅಪ್ಪಣೆಯಂತೆ ಹುಡುಕ ಹೊರಟ ಕನಕದಾಸರಿಗೆ ದೇವನು ಎಲ್ಲಾ ಕಡೆಯಲ್ಲೂ ಇರುವನೆಂದು ತಿಳಿಯಿತು. ಅದರಂತೆ ವಿದ್ಯಾರ್ಥಿಗಳು ಭಗವಂತನ ಆರಾಧನೆಯಲ್ಲಿ ಸದಾ ತೊಡಗಿದರೆ ಭಗವಂತ ಸದಾ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮದ ವತಿಯಿಂದ ಅನುಷ್ಠಾನಗೊಳಿಸಲಾಗುತ್ತಿರುವ ವಿವಿಧ ಯೋಜನೆಯಡಿ ಸಾಲ ಮತ್ತು ಸಹಾಯಧನ ಸೌಲಭ್ಯ ಪಡೆಯಲು ಪ್ರವರ್ಗ-3-ಬಿ ಅಡಿಯಲ್ಲಿ 2(ಎ) ಯಿಂದ 2(ಎಫ್) ವರೆಗೆ ಬರುವ ಸಮುದಾಯಕ್ಕೆ ಸೇರಿರುವ ಅರ್ಹ ಫಲಾಪೇಕ್ಷಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಶ್ರೀ ಶಹಜೇರಾಜೇ ಸಮೃದ್ಧಿ ಯೋಜನೆ (ಸ್ವಯಂ ಉದ್ಯೋಗ ನೇರ ಸಾಲ ಮತ್ತು ಸಹಾಯಧನ), ಜೀಜಾವು ಜಲಭಾಗ್ಯ ಯೋಜನೆ (ಗಂಗಾ ಕಲ್ಯಾಣ ನೀರಾವರಿ ಯೋಜನೆ), ಅರಿವು ಶೈಕ್ಷಣಿಕ ಸಾಲ ಯೋಜನೆ, ರಾಜಶ್ರೀ ಶಾಹುಮಹಾರಾಜ ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಾಂಗ ಸಾಲ ಯೋಜನೆ, ಮರಾಠ ಮಿಲ್ಟಿç ಹೋಟೆಲ್ ಯೋಜನೆ, ವಾಣಿಜ್ಯ ಬ್ಯಾಂಕುಗಳ ಸಹಯೋಗದೊಂದಿಗೆ ಸ್ವಯಂ ಉದ್ಯೋಗ ಸಾಲ ಯೋಜನೆ ಹಾಗೂ ಸ್ವಾವಲಂಬಿ ಸಾರಥಿ ಯೋಜನೆಯಡಿ ಸಾಲ ಸೌಲಭ್ಯ ಪಡೆಯಲು ಸೇವಾಸಿಂಧು ಪೋರ್ಟಲ್ ಮುಖಾಂತರ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಹಾಗೂ ಸ್ವಾತಂತ್ರ್ಯ ಅಮೃತ್ ಮಹೋತ್ಸವದ ಮುನ್ನಡೆ ಯೋಜನೆಯ ಸೌಲಭ್ಯ ಪಡೆಯಲು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಸಂಘನೆಯಿಂದ ಬಲವೃದ್ಧಿಸಿಕೊಳ್ಳಿ ಎನ್ನುವ ಬ್ರಹ್ಮಶ್ರೀ ನಾರಾಯಣಗುರುಗಳ ತತ್ವ ಆದರ್ಶಗಳನ್ನು ಪ್ರತಿಯೊಬ್ಬರು ಹಾಗೂ ಸಂಘಸಂಸ್ಥೆಗಳು ಮೈಗೂಡಿಸಿಕೊಂಡರೆ ಅಭಿವೃದ್ಧಿ ತನ್ನಿಂತ್ತಾನೆ ಗೊಳ್ಳುತ್ತದೆ ಎಂದು ಉಡುಪಿ ಜಿಲ್ಲಾ ಟ್ಯಾಕ್ಸಿಮೆನ್ಸ್ ಮತ್ತು ಮ್ಯಾಕ್ಸಿಕ್ಯಾಬ್ ಅಸೋಸಿಯೇಷನ್ ಪ್ರಧಾನಕಾರ್ಯದರ್ಶಿ ರಮೇಶ್ ಕೆ. ಕೋಟ್ಯಾನ್ ಹೇಳಿದರು. ಅವರು ಮಂಗಳವಾರ ಟ್ಯಾಕ್ಸಿಮೆನ್ಸ್ ಮತ್ತು ಮ್ಯಾಕ್ಸಿಕ್ಯಾಬ್ ಅಸೋಸಿಯೇಷನ್ ಸಾಸ್ತಾನ ಘಟಕದ ಕಛೇರಿ ಉದ್ಘಾಟಿಸಿ ಮಾತನಾಡಿದರು. ನಾವು ಉನ್ನತಿ ಸಾಧಿಸುವುದರ ಜತೆಗೆ ಸಂಘಟನೆಗಳನ್ನು ವರ್ಷದಿಂದ ವರ್ಷಕ್ಕೆ ಅಭಿವೃದ್ಧಿಗೊಳಿಸಬೇಕು, ಜಿಲ್ಲಾ ಮಟ್ಟದ ಸಂಘಟನೆಯಿಂದ ಸಾಕಷ್ಟು ಹೋರಾಟಗಳು ನಡೆದಿವೆ ಯಶಸ್ಸು ಕಂಡಿದ್ದೇವೆ ರಘುಪತಿ ಭಟ್ ನೇತೃತ್ವದಲ್ಲಿ ಜಿಲ್ಲಾ ಸಂಘಟನೆ ಸದೃಢವಾಗಿ ಬೆಳೆದು ನಿಂತಿದೆ ಎಂದರು. ಸಾಸ್ತಾನ ಘಟಕದ ಅಧ್ಯಕ್ಷ ಓಣಿಮನೆ ಜಿ. ರಾಘವೇಂದ್ರ ಪೂಜಾರಿ ಅಧ್ಯಕ್ಷತೆಯನ್ನು ವಹಿಸಿದ್ದರು. ಮುಖ್ಯ ಅಭ್ಯಾಗತರಾಗಿ ಬ್ರಹ್ಮಾವರ ತಾ.ಪಂ ಮಾಜಿ ಅಧ್ಯಕ್ಷೆ ಜ್ಯೋತಿ ಉದಯ್ ಕುಮಾರ್, ಟ್ಯಾಕ್ಸಿಮೆನ್ಸ್ ಮತ್ತು ಮ್ಯಾಕ್ಸಿಕ್ಯಾಬ್ ಅಸೋಸಿಯೇಷನ್ ಜಿಲ್ಲಾ ಸಂಘಟನೆಯ ಉಪಾಧ್ಯಕ್ಷರಾದ ಕೃಷ್ಣ ಕೋಟ್ಯಾನ್, ದಿನೇಶ್ ಕಿಣಿ, ಜಯಕರ ಕುಂದರ್, ಸತೀಶ್ ನಾಯಕ್, ಸಂಘಟನಾಕಾರ್ಯದರ್ಶಿ ವಿಕ್ರಮ್…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಉಡುಪಿ ಜಿಲ್ಲೆಯ ಹಾಲಿ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಅವರನ್ನು ಬೆಂಗಳೂರಿಗೆ ವರ್ಗಾಯಿಸಿ, ನೂತನ ಜಿಲ್ಲಾಧಿಕಾರಿಯಾಗಿ ಸದಸ್ಯ ಗ್ರಾಮಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆಯಲ್ಲಿ ಇ-ಗವರ್ನೆನ್ಸ್‌ನ ನಿರ್ದೇಶಕಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಸ್ವರೂಪ ಟಿ.ಕೆ. ಐಎಎಸ್ ಅವರನ್ನು ರಾಜ್ಯ ಸರಕಾರ ವರ್ಗಾಯಿಸಿದೆ. ಟೈಕ್ಸ್‌ಟೈಲ್ ಇಂಜಿನಿಯರಿಂಗ್‌ನಲ್ಲಿ ಐಐಟಿ ದಿಲ್ಲಿಯಿಂದ ಎಂಟೆಕ್ ಪದವಿ ಪಡೆದಿರುವ ಸ್ವರೂಪ ಅವರು 2025ರ ಫೆಬ್ರವರಿಯಿಂದ ಆರ್‌ಡಿಪಿಆರ್ ಇಲಾಖೆಯಲ್ಲಿ ಇ-ಗವರ್ನೆನ್ಸ್‌ನ ನಿರ್ದೇಶಕಿಯಾಗಿ ಕಾರ್ಯ ನಿರ್ವಹಿಸುತಿದ್ದಾರೆ. ಅದಕ್ಕೆ ಮುನ್ನ ಅವರು ಧಾರವಾಡ ಜಿಲ್ಲಾ ಪಂಚಾಯತ್‌ನಲ್ಲಿ ಸಿಇಓ ಹಾಗೂ ನೇಶನಲ್ ರೂರಲ್ ಲೈಲ್ಲಿಹುಡ್ ಮಿಷನ್‌ನ ಸಿಓಓ ಹಾಗೂ ಸಹಾಯಕ ನಿರ್ದೇಶಕಿಯಾಗಿ ಕಾರ್ಯನಿರ್ವಹಿಸಿದ್ದರು. 2023ರ ಜುಲೈ 14ರಿಂದ ಉಡುಪಿಯ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದ ಡಾ.ವಿದ್ಯಾಕುಮಾರಿ ಅವರನ್ನು ಬೆಂಗಳೂರಿಗೆ ವರ್ಗಾಯಿಸಲಾಗಿದ್ದು, ಯಾವುದೇ ಹುದ್ದೆಯನ್ನು ತೋರಿಸಿಲ್ಲ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಶಿರಿಯಾರ ಗ್ರಾಮದ ಸಾಫ್ಟ್‌ವೇರ್ ಇಂಜಿನಿಯರ್ ಒಬ್ಬರು ಆನ್‌ಲೈನ್ ಉದ್ಯೋಗ ಹಗರಣದಲ್ಲಿ ಒಟ್ಟು 28,01,095 ರೂ. ಕಳೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಬ್ರಹ್ಮಾವರ ತಾಲೂಕಿನ ಶಿರಿಯಾರ ಗ್ರಾಮದ ನಿವಾಸಿ ಹಾಗೂ ಸಾಫ್ಟ್‌ವೇರ್ ಇಂಜಿನಿಯರ್ ಆಗಿರುವ ಶಶಿಧರ್ (31) ಎಂಬುವರು ಕಳೆದ 15 ದಿನಗಳಿಂದ ಬೆಂಗಳೂರಿನ ಖಾಸಗಿ ಕಂಪನಿಯೊಂದಕ್ಕೆ ಮನೆಯಿಂದಲೇ ಕೆಲಸ ಮಾಡುತ್ತಿದ್ದರು. ಮೇ 29 ರಂದು, ಅವರಿಗೆ ತಮ್ಮ ಮೊಬೈಲ್ ಫೋನ್‌ಗೆ ಗೂಗಲ್‌ನಲ್ಲಿ ರೆಸ್ಯೂಮ್ ಸಲ್ಲಿಸುವ ಬಗ್ಗೆ ಸಂದೇಶವೊಂದು ಬಂದಿದೆ. ಲಿಂಕ್ ಅನ್ನು ಕ್ಲಿಕ್ ಮಾಡಿದಾಗ, ಅವರಿಗೆ ಟೆಲಿಗ್ರಾಮ್ ಅಪ್ಲಿಕೇಶನ್‌ಗೆ ಮರುನಿರ್ದೇಶಿಸಲಾಯಿತು. ಅಲ್ಲಿ ಶರ್ಮಾಯ್ ರಾಣಿ ಎಂಬ ವ್ಯಕ್ತಿ ಅವರನ್ನು ಸಂಪರ್ಕಿಸಿದ್ದಾರೆ. ಶರ್ಮಾಯ್ ರಾಣಿ ಅವರು ಶಶಿಧರ್ ಅವರನ್ನು ‘ಕಿಂಗ್ಸ್ ಡಿಜಿಲಕ್ಸ್ ಪ್ರೈವೇಟ್ ಲಿಮಿಟೆಡ್’ ಎಂಬ ಟೆಲಿಗ್ರಾಮ್ ಗುಂಪಿಗೆ ಸೇರಿಸಿದರು. ಅಲ್ಲಿ ಅವರಿಗೆ ಆನ್‌ಲೈನ್ ಕಾರ್ಯಗಳನ್ನು ನೀಡಲಾಯಿತು. ಆರಂಭದಲ್ಲಿ, ದೂರುದಾರರು ಕೆಲವು ಕಾರ್ಯಗಳನ್ನು ಪೂರ್ಣಗೊಳಿಸಿ ಹಣವನ್ನು ಪಡೆದರು. ಇದು ಗುಂಪಿನ ಬಗ್ಗೆ ಅವರ ನಂಬಿಕೆಯನ್ನು ಹೆಚ್ಚಿಸಿತು. ನಂತರ, ಆರೋಪಿಗಳು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಆರ್ಥಿಕ ಸಮಸ್ಯೆಯ ಕಾರಣದಿಂದ ವಿದ್ಯಾರ್ಥಿಗಳು ಯಾವುದೇ ಕಾರಣಕ್ಕೂ ವಿದ್ಯಾಭ್ಯಾಸವನ್ನು ಮೊಟಕುಗೊಳಿಸಬಾರದು. ಕಟ್ಟಡ ಕಾರ್ಮಿಕರ ಮಕ್ಕಳು ಕಟ್ಟಡ ಕಾರ್ಮಿಕರಾಗದೆ, ಉನ್ನತ ವ್ಯಾಸಂಗ ಪಡೆದು ಸಮಾಜದಲ್ಲಿ ಉನ್ನತ ಸ್ಥಾನಮಾನ ಪಡೆಯುವಂತಾಗಬೇಕು. ಈ ದಿಸೆಯಲ್ಲಿ ವಿದ್ಯಾಭ್ಯಾಸಕ್ಕೆ ಮಕ್ಕಳನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಪುಸ್ತಕ ಮತ್ತಿತರ ಶೈಕ್ಷಣಿಕ ಪರಿಕರಗಳನ್ನು ಉಚಿತವಾಗಿ ವಿತರಿಸಲಾಗುತ್ತಿದೆ ಎಂದು ಗಂಗೊಳ್ಳಿ ಟೌನ್ ಸೌಹಾರ್ದ ಸಹಕಾರಿ ನಿಯಮಿತ ಅಧ್ಯಕ್ಷ ಜಿ.ವೆಂಕಟೇಶ ಶೆಣೈ ಹೇಳಿದರು. ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸಂಘ ಗಂಗೊಳ್ಳಿ ಘಟಕ ಇದರ ಆಶ್ರಯದಲ್ಲಿ ಗಂಗೊಳ್ಳಿಯ ಶ್ರೀ ಶಾರದಾ ಮಂಟಪದಲ್ಲಿ ಭಾನುವಾರ ಜರಗಿದ 8ನೇ ವರ್ಷದ ಪುಸ್ತಕ ವಿತರಣಾ ಮತ್ತು ಅಭಿನಂದನಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸಂಘ ಗಂಗೊಳ್ಳಿ ಘಟಕ ಅಧ್ಯಕ್ಷ ಚಿಕ್ಕ ಮೊಗವೀರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಗಂಗೊಳ್ಳಿ ರೋಟರಿ ಕ್ಲಬ್ ಅಧ್ಯಕ್ಷೆ ಚಂದ್ರಕಲಾ ಎಸ್.ತಾಂಡೇಲ, ನಿವೃತ್ತ ಪಿಎಲ್‌ಡಿ ಬ್ಯಾಂಕ್ ಮ್ಯಾನೇಜರ್ ಪೂರ್ಣಿಮಾ ಭವಾನಿಶಂಕರ, ಗಂಗೊಳ್ಳಿ ಗ್ರಾಪಂ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಹಟ್ಟಿಅಂಗಡಿಯ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯ ಶ್ರೀ ಸಿದ್ಧಿ ಶೈಕ್ಷಣಿಕ ಪ್ರತಿಷ್ಠಾನದ ಆಡಳಿತದಲ್ಲಿ ನಡೆಯುತ್ತಿದ್ದು, ಶಾಲಾ ಆರಂಭದ ಸಮಯದಲ್ಲಿ ಶಿಕ್ಷಕರೊಂದಿಗೆ ಆಡಳಿತ ಮಂಡಳಿಯ ಸಭೆಯು ಸೋಮವಾರದಂದು ಜರುಗಿತು. ಪ್ರಗತಿ ಪರಿಶೀಲನೆಯ ಸಲುವಾಗಿ, ನಡೆದ ಈ ಸಭೆಯಲ್ಲಿ ಶ್ರೀ ಸಿದ್ಧಿ ಶೈಕ್ಷಣಿಕ ಪ್ರತಿಷ್ಠಾನದ ಟ್ರಸ್ಟಿಗಳಾದ ಎ. ನಾರಾಯಣ ರಾವ್ ಮಾತನಾಡಿ, ಶಿಕ್ಷಕರು ತಮ್ಮನ್ನು ತಾವು ಅಧ್ಯಾಪನ ಕಾರ್ಯದಲ್ಲಿ ಸದಾ ತೊಡಗಿಸಿಕೊಳ್ಳಬೇಕು. ಪುಸ್ತಕದ ವಿಚಾರ ತಲುಪಿಸುವುದರ ಜೊತೆಗೆ ಅವರಲ್ಲಿ ಉತ್ತಮ ಸಂಸ್ಕಾರಗಳನ್ನು ಬಿತ್ತಬೇಕು. ಶಿಕ್ಷಣಸಂಸ್ಥೆ ಹೆಸರು ಮಾಡುವುದು ಉತ್ತಮ ಅಧ್ಯಾಪಕ ವೃಂದದಿಂದಲೇ. ಶಿಕ್ಷಕವೃತ್ತಿ ಅತ್ಯಂತ ಗುರುತರವಾದ ಕೆಲಸ. ತನ್ನ ವ್ಯಕ್ತಿತ್ವವನ್ನು ವಿಕಾಸಗೊಳಿಸಿಕೊಂಡು ತಾಳ್ಮೆಯಿಂದ ವರ್ತಿಸಬೇಕು. ಮಕ್ಕಳ ಮಾತನ್ನು ಕೇಳುವ ಗುಣ ಬೆಳೆಸಿಕೊಳ್ಳಬೇಕು. ಉತ್ತಮಸಂಸ್ಕಾರವಂತರನ್ನಾಗಿ ವಿದ್ಯಾರ್ಥಿಗಳನ್ನು ರೂಪಿಸಬೇಕಾದುದು ತಮ್ಮ ಆದ್ಯ ಕರ್ತವ್ಯವಾಗಿದೆ. ನನ್ನಿಂದ ನೂರಾರು ಜನ ಕಲಿಯುತ್ತಿದ್ದಾರೆಂಬ ಜ್ಞಾನವಿದ್ದು, ಕಾರ್ಯದಲ್ಲಿತೊಡಗಿಕೊಳ್ಳಿ ಎಂದು ಶಿಕ್ಷಕರಿಗೆ ಕಿವಿಮಾತುಗಳನ್ನಾಡಿದರು. ಶ್ರೀ ಸಿದ್ಧಿ ಶೈಕ್ಷಣಿಕ ಪ್ರತಿಷ್ಠಾನದ ಟ್ರಸ್ಟಿಗಳಾದ ಗಣೇಶ್ ಕಾಮತ್ ಮಾತನಾಡುತ್ತಾ ನಾವು ಕೊಡಪಾನ…
