ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ರಸ್ತೆ ದಾಟುತ್ತಿದ್ದ ಮಹಿಳೆಗೆ ಬೈಕ್ ಡಿಕ್ಕಿಯಾಗಿ ಗಂಭೀರ ಗಾಯಗೊಂಡ ಘಟನೆ ಕೋಟದಲ್ಲಿ ಸಂಭವಿಸಿದೆ. ಮಣೂರು ಬಾಳೆಬೆಟ್ಟು ನಿವಾಸಿ ಉಷಾ ಗಾಣಿಗ (53) ಗಂಭೀರ ಗಾಯಗೊಂಡವರು. ಅವರು ಕೋಟ ಬಸ್ ನಿಲ್ದಾಣದ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ರಸ್ತೆ ದಾಟಲು ನಿಂತಿದ್ದಾಗ ಕುಂದಾಪುರ ಕಡೆಯಿಂದ ಬ್ರಹ್ಮಾವರ ಕಡೆ ಸಂಚರಿಸುತ್ತಿದ್ದ ಬೈಕ್ ಚಾಲಕ ಅತೀ ವೇಗ ಹಾಗೂ ಅಜಾಗರೂಕತೆಯಿಂದ ಬೈಕ್ ಚಲಾಯಿಸಿ ಢಿಕ್ಕಿ ಹೊಡೆದಿದ್ದ ಪರಿಣಾಮ ಉಷಾ ಅವರು ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದಾರೆ. ತಕ್ಷಣ ಅವರನ್ನು ಜೀವನ್ ಮಿತ್ರ ಆ್ಯಂಬುಲೆನ್ಸ್ ನಲ್ಲಿ ಕೋಟೇಶ್ವರ ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಯಿತು. ಈ ಬಗ್ಗೆ ಕೋಟ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಸೇವೆಯಲ್ಲಿ ಪ್ರಾಮಾಣಿಕತೆ ಜನಸ್ನೇಹಿಯಾದರೆ ಅದೇ ನಿಜವಾದ ಭಗವಂತನ ಸೇವೆ ಎಂದು ಸಾಲಿಗ್ರಾಮ ಶ್ರೀ ಗುರುನರಸಿಂಹ ದೇಗುಲದ ಆಡಳಿತ ಮಂಡಳಿಯ ಸದಸ್ಯ ಕೆ. ಅನಂತಪದ್ಮನಾಭ ಐತಾಳ್ ಹೇಳಿದರು. ಅವರು ಕೋಟದ ಪಂಚವರ್ಣ ಯುವಕ ಮಂಡಲ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲದ ನೇತೃತ್ವದಲ್ಲಿ ಇತ್ತೀಚಿಗೆ ಕೋಟ ಕರ್ಣಾಟಕ ಬ್ಯಾಂಕ್ನಿಂದ ಬಡ್ತಿಹೊಂದಿ ಹಾಸನ ಜಿಲ್ಲೆಗೆ ವರ್ಗಾವಣೆಗೊಂಡ ಪಂಚವರ್ಣದ ಸದಸ್ಯ ನಾಗೇಶ್ ಮಯ್ಯ ಮಣೂರು ಅವರಿಗೆ ಅಭಿನಂದನಾ ಸಭೆಯಲ್ಲಿ ಮಾತನಾಡಿದರು. ಯಾವುದೇ ಸಂಸ್ಥೆಯಲ್ಲಿ ಸೇವೆ ಸಲ್ಲಿಸಲಿ ಆದರೆ ಆ ಸಂಸ್ಥೆಯ ಕಾರ್ಯವೈಕರಿ ಜನಸಾಮಾನ್ಯರ ಮನಸ್ಸನ್ನು ಗೆಲುವುದೇ ನಿಜವಾದ ಸೇವೆಯ ಅರ್ಥ, ನಾಗೇಶ್ ಮಯ್ಯರು ಅದೇ ರೀತಿಯಲ್ಲಿ ಕೋಟ ಕರ್ಣಾಟಕ ಬ್ಯಾಂಕ್ನಲ್ಲಿ ಜನಮಾನಸದಲ್ಲಿ ಅಚ್ಚಳಿಯದೆ ಉಳಿದುಕೊಂಡಿದ್ದಾರೆ. ಇಂತಹ ಸಿಬ್ಬಂದಿಗಳು ಪ್ರತಿಯೊಂದು ಕ್ಷೇತ್ರದಲ್ಲಿ ಇದ್ದರೆ ಆ ಕ್ಷೇತ್ರಗಳು ಅಭಿವೃದ್ಧಿಗೊಳ್ಳುವುದರಲ್ಲಿ ಅನುಮಾನವೇ ಇಲ್ಲ. ಅವರು ಪಂಚವರ್ಣದ ಸದಸ್ಯರೆಂಬುದನ್ನು ಸೇವೆಯ ಮೂಲಕ ಸಾಬೀತುಪಡಿಸಿದ್ದಾರೆ ಎಂದು ಅಭಿನಂದನೆ ಸಲ್ಲಿಸಿದರು. ಇದೇ ವೇಳೆ ಗಣ್ಯರು ನಾಗೇಶ್ ಮಯ್ಯರನ್ನು ಅಭಿನಂದಿಸಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಜಿಲ್ಲೆಗೆ ಆಗಮಿಸುವ ಪ್ರವಾಸಿಗರ ಉಪಯೋಗಕ್ಕೆ ಅಗತ್ಯವಿರುವ ಎಲ್ಲಾ ರೀತಿಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವುದರ ಜೊತೆಗೆ ಅವರ ಸುರಕ್ಷತೆಗೆ ಪ್ರಥಮ ಆದ್ಯತೆ ನೀಡಬೇಕು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ಶುಕ್ರವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮಲ್ಪೆ ಬೀಚ್ ಅಭಿವೃದ್ಧಿ ಕಾಮಗಾರಿ ಕೈಗೊಳ್ಳುವ ಕುರಿತು ನಿರ್ಮಿತಿ ಕೇಂದ್ರವು ಯೋಜನಾ ಕಾಮಗಾರಿಗಳ ನೀಲನಕ್ಷೆ ಹಾಗೂ ಅಂದಾಜು ಪಟ್ಟಿಯನ್ನು ಪ್ರಸ್ತುತ ಪಡಿಸಿದ್ದು, ಮಲ್ಪೆಯ ಹಾಲಿ ಇರುವ ಬೀಚ್, ಬೀಚ್ ಉತ್ತರ ಭಾಗದಲ್ಲಿರುವ ಜಾಗವನ್ನು ಸ್ವಾಧೀನಪಡಿಸಿಕೊಂಡು ವಲಯವಾರು ಅಭಿವೃದ್ಧಿ ಪಡಿಸಲು ಒತ್ತು ನೀಡಲಾಗಿದೆ ಹಾಗೂ ಸೈಂಟ್ ಮೇರೀಸ್ ದ್ವೀಪದಲ್ಲಿಯೂ ಅಭಿವೃದ್ಧಿ ಪಡಿಸಲು ಇದರಲ್ಲಿ ಕಲ್ಪಿಸಲಾಗಿದೆ. ಮುಂಬರುವ ದಿನಗಳಲ್ಲಿ ಅನುದಾನದ ಲಭ್ಯತೆಯನ್ನು ಆಧರಿಸಿ ಇಲ್ಲಿನ ಅಭಿವೃದ್ಧಿ ಕಾಮಗಾರಿಗಳನ್ನು ಸುರಕ್ಷತೆಗೆ ಒತ್ತು ನೀಡಲಾಗುವುದು ಎಂದರು. ಪ್ರವಾಸಿಗರು ಬೋಟ್ ಗಳಲ್ಲಿ ಸಂಚರಿಸುವಾಗ ಲೈಫ್ ಜಾಕೆಟ್…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಉಪ್ಪುಂದ ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘದ ಪ್ರಧಾನ ಕಛೇರಿಗೆ ಬೈಂದೂರು ತಾಲೂಕು ತಹಶೀಲ್ದಾರರಾದ ರಾಮಚಂದ್ರಪ್ಪನವರು ಭೇಟಿ ನೀಡಿ, ಸಂಘದ ಕಾರ್ಯವೈಖರಿಗಳ ಬಗ್ಗೆ ಶ್ಲಾಘಿಸಿದರು. ಅವರನ್ನು ಸಂಘದ ವತಿಯಿಂದ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಸಹಕಾರ ಸಂಘಗಳ ವಲಯ ಮೇಲ್ವಿಚಾರಕರಾದ ಶಿವರಾಮ ಪೂಜಾರಿ, ಸಂಘದ ಸಿಇಒ ವಿಷ್ಙು ಪೈ, ವ್ಯವಸ್ಥಾಪಕರಾದ ಎಚ್. ರಾಮ, ಭಾಸ್ಕರ ದೇವಾಡಿಗ ಕೆ., ಪ್ರಭಾರ ವ್ಯವಸ್ಥಾಪಕರಾದ ರಿತೇಶ್ ಕಿಣಿ ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕುಂದಾಪುರ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ, ಖ್ಯಾತ ಧಾರ್ಮಿಕ ಹಾಗೂ ಸಾಮಾಜಿಕ ಮುಂದಾಳು ಬಸ್ರೂರು ಅಪ್ಪಣ್ಣ ಹೆಗ್ಡೆ (91 ವರ್ಷ) ಅವರು ಶನಿವಾರ ಬೆಳಿಗ್ಗೆ ನಿಧನರಾದರು. ಅವರು ವಯೋಸಹಜ ಅಸೌಖ್ಯದಿಂದ ಕೊನೆಯುಸಿರೆಳೆದಿದ್ದಾರೆ. ರಾಜಕೀಯ, ಸಾಮಾಜಿಕ ಹಾಗೂ ಧಾರ್ಮಿಕ ಕ್ಷೇತ್ರಗಳಲ್ಲಿ ತನ್ನದೇ ಆದ ಛಾಪು ಮೂಡಿಸಿದ್ದ ಅಪ್ಪಣ್ಣ ಹೆಗ್ಡೆ ಅವರ ನಿಧನದಿಂದ ಜಿಲ್ಲೆಯ ಸಾರ್ವಜನಿಕ ವಲಯದಲ್ಲಿ ಶೋಕದ ಛಾಯೆ ಆವರಿಸಿದೆ. ಅವರ ನಿಧನಕ್ಕೆ ವಿವಿಧ ರಾಜಕೀಯ, ಸಾಮಾಜಿಕ ಹಾಗೂ ಧಾರ್ಮಿಕ ಮುಖಂಡರು ಸಂತಾಪ ಸೂಚಿಸಿ ಕಂಬನಿ ಮಿಡಿದಿದ್ದಾರೆ. ಅಪ್ಪಣ್ಣ ಹೆಗ್ಡೆ ಅವರು 1960 ರಿಂದ 1983ರ ವರೆಗೆ ಗ್ರಾಮ ಪಂಚಾಯತ್ ಸದಸ್ಯ ಹಾಗೂ ಅಧ್ಯಕ್ಷರಾಗಿ ರಾಜಕೀಯ ಜೀವನ ಆರಂಭಿಸಿದ್ದರು. ಬಳಿಕ 1983ರಿಂದ 1994ರವರೆಗೆ ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾಗಿ ಸೇವೆ ಸಲ್ಲಿಸಿ, ಕ್ಷೇತ್ರದ ಅಭಿವೃದ್ಧಿಗೆ ಮಹತ್ವದ ಕೊಡುಗೆ ನೀಡಿದ್ದರು. ಜನಸಂಪರ್ಕ, ಸರಳ ಜೀವನಶೈಲಿ ಹಾಗೂ ಜನಪರ ಕಾರ್ಯಗಳಿಂದ ಅವರು ಜನಮಾನಸದಲ್ಲಿ ವಿಶೇಷ ಸ್ಥಾನ ಪಡೆದಿದ್ದರು. ರಾಜಕೀಯದ ಜೊತೆಗೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಇಲ್ಲಿನ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ರೋಬೋ ಸಾಫ್ಟ್ ಟೆಕ್ನಾಲಜಿಸ್ ಸಂಸ್ಥೆಯ ಸಿಎಸ್ಆರ್ ನಿಧಿ ಮೂಲಕ ಶಾಲಾ ಕೊಠಡಿಯ ನಿರ್ಮಾಣವಾಗಲಿದ್ದು ಶುಕ್ರವಾರ ಶಾಸಕ ಗುರುರಾಜ್ ಗಂಟಿಹೊಳೆ ಅವರು ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದರು. ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಗಂಟಿಗೊಳೆ ಅವರು ಈ ಕನಸಿಗೆ ರೆಕ್ಕೆಪುಕ್ಕ ನೀಡಿದ್ದು ಬೈಂದೂರು ಉತ್ಸವ. ಬೈಂದೂರು ಉತ್ಸವದ ಯಶಸ್ಸು, ಗುರಿ ಇಂದು ಬೈಂದೂರು ಕ್ಷೇತ್ರದಲ್ಲಿ ಇಂತಹ ಕಾರ್ಯಗಳನ್ನು ನಮ್ಮಿಂದ ದಾನಿಗಳ ಮೂಲಕ ಮಾಡಿಸುತ್ತಿದೆ. ಬೈಂದೂರು ಉತ್ಸವ ಯಶಸ್ಸು ಈ ರೀತಿಯ ಕಾರ್ಯಕ್ರಮಗಳ ಮೂಲಕ ಪ್ರತಿಧ್ವನಿಸುತ್ತಿರುವುದು ಬೈಂದೂರಿನ ಗೆಲುವಾಗಿದೆ ಎಂದರು. ಕಾರ್ಯಕ್ರಮದಲ್ಲಿ ರೋಬೋಸಾಫ್ಟ್ ಟೆಕ್ನಾಲಜೀಸ್ ಸಂಸ್ಥೆಯ ಸಿಇಒ ರಾನ್ ಮಹಾನ್, ಗ್ಲೋಬಲ್ ಸೇಲ್ಸ್ ಸಂಸ್ಥೆಯ Executive Vice-President ಸ್ಟೀಫನ್, Global Delivery ಇದರ Executive Vice-President ಶ್ರೀನಿಧಿ ರಾವ್, ಎಚ್ಆರ್ ರೀನಾ ಮಲಿಕ್ ಮತ್ತು ಪ್ರಮುಖರು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಇದೇ ಬರುವ ಮಾಚ್೯1ರಂದು ಕೋಟದ ಅಮೃತೇಶ್ವರೀ ದೇಗುಲದ ವತಿಯಿಂದ ನಡೆಯಲಿರುವ ಏಕ: ಪವಿತ್ರ ನಾಗಮಂಡಲೋತ್ಸವಕ್ಕೆ ಚಪ್ಪರ ಮುಹೂರ್ತ ಶುಕ್ರವಾರ ಜರಗಿತು. ಶ್ರೀ ದೇಗುಲದ ನಾಗದೇವರಿಗೆ ಹಾಗೂ ಅಮೃತೇಶ್ವರೀ ದೇವಿಗೆ ವಿಶೇಷ ಪೂಜೆ ಸಲ್ಲಿಸಿ ನಾಗಮಂಡಲ ನಡೆಯಲಿರುವ ಕೋಟ ಗಾಂಧಿ ಮೈದಾನದಲ್ಲಿ ಚಪ್ಪರ ಮುಹೂರ್ತ ಕಾರ್ಯಕ್ರಮವನ್ನು ವೇ.ಮೂ ಮಧುಸೂದನ್ ಬಾಯರಿ ನೇತೃತ್ವದಲ್ಲಿ ಧಾರ್ಮಿಕ ವಿಧಿವಿಧಾನಗಳನ್ನು ಸಲ್ಲಿಸಿಕೊಂಡು ದೇಗುಲದ ಅಧ್ಯಕ್ಷ ಆನಂದ್ ಸಿ. ಕುಂದರ್ ಅಡಿಕೆ ಮರವನ್ನು ನಿಲ್ಲಿಸುವ ಮೂಲಕ ಚಪ್ಪರ ಕಾರ್ಯಕ್ಕೆ ಚಾಲನೆ ನೀಡಲಾಯಿತು. ಚಪ್ಪರ ಮುಹೂರ್ತ ಕಾರ್ಯದಲ್ಲಿ ಶ್ಯಾಮಿಯಾನ ಮಾಲಿಕರಾದ ದೇವದಾಸ್ ಕಾಂಚನ್ ಹಾಗೂ ಮಂಡಲದ ಚಪ್ಪರ ನೇತೃತ್ವ ಪಡೆದ ಭರತ್ ಗಾಣಿಗ, ಮೇಸ್ತ್ರೀ ಅಶೋಕ್ ಪೂಜಾರಿ ಅರ್ಚಕರಲ್ಲಿ ಪ್ರಸಾದ ಸ್ವೀಕರಿಸಿ ಪಾಲ್ಗೊಂಡರು. ದೇಗುಲದ ಟ್ರಸ್ಟಿಗಳಾದ ರತನ್ ಐತಾಳ್, ಸುಧಾ ಎ. ಪೂಜಾರಿ, ಶಿವ ಪೂಜಾರಿ, ಸುಭಾಷ್ ಶೆಟ್ಟಿ, ಗಣೇಶ್ ನೆಲ್ಲಿಬೆಟ್ಟು, ಜ್ಯೋತಿ ಡಿ. ಕಾಂಚನ್, ಚಂದ್ರ ಆಚಾರ್, ಸುಬ್ರಾಯ ಜೋಗಿ, ಮಾಜಿ ಟ್ರಸ್ಟಿ ಚಂದ್ರ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶುದ್ಧ ಪರಿಸರದಲ್ಲಿ ನಿರ್ಮಿತವಾದ ಹಟ್ಟಿಯಂಗಡಿಯ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯು ತನ್ನ ಪರಿಸರಸ್ನೇಹಿ ಕಾರ್ಯಗಳ ಮೂಲಕ ಸತತ ನಾಲ್ಕನೆಯ ಬಾರಿಗೆ ರಾಷ್ಟ್ರಮಟ್ಟದ ಪ್ರತಿಷ್ಠಿತ ಗ್ರೀನ್ ಸ್ಕೂಲ್ ಅವಾರ್ಡನ್ನು ತನ್ನದಾಗಿಸಿಕೊಂಡು, ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ಈ ಪ್ರಶಸ್ತಿಯನ್ನು ಪಡೆದ ಉಡುಪಿ ಜಿಲ್ಲೆಯ ಏಕೈಕ ಶಾಲೆ ಎಂಬ ಹಿರಿಮೆಗೆ ಪಾತ್ರವಾಯಿತು. ವಿದ್ಯಾರ್ಥಿಗಳಲ್ಲಿ ಪರಿಸರ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಸೆಂಟರ್ ಫಾರ್ ಸೈನ್ಸ್ ಅಂಡ್ ಎನ್ವಿರಾನ್ಮೆಂಟ್ (ಸಿಎಸ್ಇ) ಈ ಪ್ರಶಸ್ತಿ ಪ್ರದಾನ ಕಾರ್ಯಕ್ರಮವನ್ನು ಆಯೋಜಿಸುತ್ತಾ ಬಂದಿದೆ. ಈ ಬಾರಿ 20,000 ಕ್ಕೂ ಹೆಚ್ಚು ಶಾಲೆಗಳು ಸ್ಪಧೆಯಲ್ಲಿ ಭಾಗವಹಿಸಿದ್ದವು. ಶುದ್ಧ ಗಾಳಿ, ಇಂಧನ, ಆಹಾರ, ಭೂಮಿ, ನೀರು, ತ್ಯಾಜ್ಯದ ವ್ಯವಸ್ಥಿತ ನಿರ್ವಹಣೆಯ ಮಾನದಂಡದಲ್ಲಿ ಈ ಪ್ರಶಸ್ತಿಯನ್ನು ನೀಡಲಾಗುತ್ತದೆ. ನವದೆಹಲಿಯಲ್ಲಿ ನಡೆದ ದಿ ಗ್ರೀನ್ ಸ್ಕೂಲ್ಸ್ ಕಾರ್ನಿವಲ್ 2026ರ ಕಾರ್ಯಕ್ರಮದಲ್ಲಿ ಶಾಲೆಯ ಶಿಕ್ಷಕಿಯರಾದ ಸಂಗೀತಾ ಕೆ.ಆರ್. ಹಾಗೂ ವಿದ್ಯಾ ಅಮೀನ್ ಅವರು ಪ್ರಶಸ್ತಿಯನ್ನು ಸ್ವೀಕರಿಸಿದರು. ವಿದ್ಯಾರ್ಥಿಗಳಾದ ವಿಹಾನ್ ಹಂಚಿನಾಳ, ಗೌರೀಶ್ ಬಸವರಾಜ, ರಾಹುಲ್ ಉಳ್ಳೂರು, ನೇಚರ್…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಮೂಡ್ಲಕಟ್ಟೆ ತಾಂತ್ರಿಕ ವಿದ್ಯಾಲಯದ ಎಂಬಿಎ ವಿಭಾಗದ ವತಿಯಿಂದ ಕಾರ್ಪೊರೇಟ್ ಪರ್ಫಾರ್ಮೆನ್ಸ್ ಮ್ಯಾನೇಜ್ಮೆಂಟ್ ಎಂಬ ವಿಷಯದ ಬಗ್ಗೆ ಟ್ರೈನಿಂಗ್ ಅಂಡ್ ಪ್ಲೇಸ್ಮೆಂಟ್ ಸೆಲ್ ಮತ್ತು ಡಿಪಾರ್ಟ್ಮೆಂಟ್ ಆಫ್ ಮ್ಯಾನೇಜ್ಮೆಂಟ್ ಸ್ಟಡೀಸ್ ಜೊತೆಗೂಡಿ ಪ್ರಥಮ ವರ್ಷದ ಎಂಬಿಎ ವಿದ್ಯಾರ್ಥಿಗಳಿಗೆ ಕಾರ್ಯಗಾರವನ್ನು ಕೈಗೊಳ್ಳಲಾಯಿತು. ಈ ಕಾರ್ಯಗಾರದ ಸಂಪನ್ಮೂಲ ವ್ಯಕ್ತಿಗಳಾಗಿ ಬಿ. ದಯಾನಂದ್ ಶೆಟ್ಟಿ , ಡೈರೆಕ್ಟರ್ ಅಂಡ್ ಸೀನಿಯರ್ ಕನ್ಸಲ್ಟೆಂಟ್ ಪ್ರೊಜಿನ್ ಟೆಕ್ಸ್ ಅವರು ಆಗಮಿಸಿ ಹೇಗೆ ವಿದ್ಯಾರ್ಥಿಗಳು ತಮ್ಮ ವೈಯಕ್ತಿಕ ಕಾರ್ಯಕ್ಷಮತೆಯನ್ನು ಹೆಚ್ಚಿಸಿಕೊಳ್ಳಬಹುದು ಮತ್ತು ಅದಕ್ಕೆ ವಿದ್ಯಾರ್ಥಿಗಳು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ತಿಳಿಸಿದರು. ಈ ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಡಾ. ರಾಮಕೃಷ್ಣ ಹೆಗಡೆ, ಎಂಬಿಎ ವಿಭಾಗದ ಮುಖ್ಯಸ್ಥೆ ಡಾ. ಸುಚಿತ್ರಾ ಪೂಜಾರಿ ಹಾಗೂ ಇತರ ಉಪನ್ಯಾಸಕರು ಉಪಸ್ಥಿತರಿದ್ದರು. ಎಂಬಿಎ ವಿದ್ಯಾರ್ಥಿನಿ ಅದಿತಿ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಬ್ರಹ್ಮಾವರ, ಜ್ಞಾನವಿಕಾಸ ಮಹಿಳಾ ಕಾರ್ಯಕ್ರಮದಡಿಯಲ್ಲಿ ಬ್ರಹ್ಮಾವರ ತಾಲೂಕಿನ ಕೋಟತಟ್ಟು ಕಾರ್ಯಕ್ಷೇತ್ರದಲ್ಲಿ 25 ಮಂದಿ ಅಭ್ಯರ್ಥಿಗಳಿಗೆ ಸೀರೆ ಗುಚ್ಚು ಹಾಕುವ ಮೂರು ದಿನದ ತರಬೇತಿ ಕಾರ್ಯಕ್ರಮದ ಸಮಾರೋಪ ಸಮಾರಂಭವು ಕೋಟತಟ್ಟು ಪಂಚಾಯತ್ ಸಭಾಂಗಣದಲ್ಲಿ ಇತ್ತೀಚಿಗೆ ಜರಗಿತು. ಕಾರ್ಯಕ್ರಮವನ್ನು ಬ್ರಹ್ಮಾವರ ತಾಲೂಕಿನ ಯೋಜನಾಧಿಕಾರಿ ರಮೇಶ್ ಪಿ.ಕೆ. ಉದ್ಘಾಟಿಸಿ, ಕೌಶಲ್ಯಾಭಿವೃದ್ಧಿ ತರಬೇತಿ ಅಡಿಯಲ್ಲಿ ಸೀರೆಗುಚ್ಚು ಹಾಕುವ ತರಬೇತಿಯು ನಿಮಗೆ ಒಂದು ಉತ್ತಮ ಅವಕಾಶ ಕಲ್ಪಿಸಿಕೊಟ್ಟಿದೆ, ಸ್ವಉದ್ಯೋಗ ಮಾಡುವುದರಿಂದ ಸ್ವಾವಲಂಬನೆ ಜೀವನ ನಡೆಸಲು ಸುಲಭ ಸಾಧ್ಯ ಎಂದು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಸಭೆಯ ಅಧ್ಯಕ್ಷತೆ ವಹಿಸಿದ ಕೋಟತಟ್ಟು ಗ್ರಾಮ ಪಂಚಾಯಿತಿಯ ಅಧ್ಯಕ್ಷ ಸತೀಶ್ ಕುಂದರ್ ಅವರು ಧರ್ಮಸ್ಥಳ ಗ್ರಾಮಾಭಿವೃದ್ಧಿ ಕಾರ್ಯಕ್ರಮಗಳ ಬಗ್ಗೆ ಹೆಮ್ಮೆ ವ್ಯಕ್ತಪಡಿಸಿ ಮಹಿಳೆಯರಿಗೆ ಇಂದು ಸ್ವಾವಲಂಬನೆಯಾಗಿ ಬದುಕಲು ಉತ್ತಮ ಅವಕಾಶ ಕೊಟ್ಟಿದೆ ಎಂದರು. ರಾಷ್ಟ್ರೀಯ ಸ್ವಸಹಾಯ ಸಂಘ ತರಬೇತಿ ಸಂಸ್ಥೆ ಉಡುಪಿ ಇದರ ತರಬೇತಿ ಶಿಕ್ಷಕಿ ರೀನಾ ಎಲ್ಲ…
