Author: ನ್ಯೂಸ್ ಬ್ಯೂರೋ

ಕುಂದಾಪುರ: ರಾಷ್ಟ್ರೀಯ ಯುವ ಸಾಪ್ತಾಹದ ಅಂಗವಾಗಿ ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನ ವಿದ್ಯಾರ್ಥಿಗಳಿಂದ ಸ್ವಾಮಿ ವಿವೇಕಾನಂದರ ಸಂದೇಶ ಜಾಥಾ ಜರುಗಿತು. ಪದವಿ ಕಾಲೇಜಿನ ಪ್ರಾಂಶುಪಾಲ ಡಾ. ಎನ್.ಪಿ. ನಾರಾಯಣ ಶೆಟ್ಟಿ ಹಾಗೂ ಪದವಿಪೂರ್ವ ಕಾಲೇಜಿನ ಪ್ರಾಶುಪಾಲ ಜಿ.ಎಂ ಗೊಂಡ ಅವರ ನೇತೃತ್ವದಲ್ಲಿ ಸಾವಿರಾರು ವಿಧ್ಯಾರ್ಥಿಗಳು ಜಾಥಾದಲ್ಲಿ ಭಾವಹಿಸಿದ್ದರು. ಕಾಲೇಜು ಆವರಣದಿಂದ ಹೊರಟ ಜಾಥಾ ಕುಂದಾಪುರ ಮಾಸ್ತಿ ಕಟ್ಟೆಯವರೆಗೆ ಸಾಗಿ ಪುರಸಭೆ ರಸ್ತೆ ಮೂಲಕ ಮತ್ತೆ ಸ್ವಸ್ಥಾನಕ್ಕೆ ತೆರಳುವ ಮೂಲಕ ಸಮಾಪನಗೊಂಡಿತು.

Read More

ಕುಂದಾಪುರ: ಜನಪ್ರತಿನಿಧಿ ಎಂದೆನಿಸಿಕೊಂಡವರಿಗೆ ಊರಿನ ಪ್ರತಿ ಮನೆಯ ಮಾತು ಹಾಗೂ ಮನೆಯ ಪ್ರತಿಯೊಬ್ಬರ ಮನಸ್ಸಿನ ಮಾತು ತಿಳಿದಿರಬೇಕು. ಅದರೊಂದಿಗೆ ಜನಸಾಮಾನ್ಯರ ಬದುಕು ಹಸನಾಗಿಸಲು ಬೇಕಾದ ಯೋಚನೆ ಹಾಗೂ ಯೋಜನೆಯನ್ನು ಅನುಷ್ಠಾನಗೊಳಿಸುವ ಬದ್ಧತೆ ಇರುಬೇಕು ಎಂದು ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಪುರಸಭೆಯ ವಿ.ಎಸ್. ಆಚಾರ್ಯ ಸಭಾಂಗಣದಲ್ಲಿ ಉಚಿತ ಗ್ಯಾಸ್ ಸಂಪರ್ಕ ವಿತರಣೆ ಕಾರ್ಯಕ್ರಮದಲ್ಲಿ ಅಭಿನಂದನೆ ಸ್ವೀಕರಿಸಿದ ಬಳಿಕ ಫಲಾನುಭವಿಗಳಿಗೆ ಸವಲತ್ತು ವಿತರಿಸಿ ಅವರು ಮಾತನಾಡಿದರು. ಸಂಸದರು ಹಾಗೂ ಶಾಸಕರ ಕ್ಷೇತ್ರ ವ್ಯಾಪ್ತಿ ದೊಡ್ಡದಿರುವುದರಿಂದ ಎಲ್ಲಾ ಜನರನ್ನು ತಲುಪಲು ಸಾಧ್ಯವಿಲ್ಲ. ಆದರೆ ಸ್ಥಳೀಯಾಡಳಿತ ಪ್ರತಿನಿಧಿಗಳಿಗೆ ಆ ಅವಕಾಶವಿದೆ. ತಮ್ಮ ಕ್ಷೇತ್ರದ ಪ್ರತಿ ಮನೆಯ ವ್ಯಕ್ತಿಯನ್ನೂ ಸಂಪರ್ಕಿಸಿ ಅಲ್ಲಿನ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸುವ ಕೆಲಸವಾಗಬೇಕು ಎಂದರು. ಪುರಸಭೆ ಅಧ್ಯಕ್ಷೆ ಕಲಾವತಿ ಅಧ್ಯಕ್ಷತೆ ವಹಿಸಿದ್ದರು. ಮುಖ್ಯಾಧಿಕಾರಿ ಗೋಪಾಲಕೃಷ್ಣ ಶೆಟ್ಟಿ ಸ್ವಾಗತಿಸಿದರು. ಪುರಸಭಾ ಸದಸ್ಯರ ಪರವಾಗಿ ಗುಣರತ್ನ ಅಭಿನಂದಿಸಿದರು. ಶಲಿತಾ ಫನಾನುಭವಿಗಳ ಪಟ್ಟಿ ವಾಚಿಸಿದರು. ಜ್ಯೋತಿ ನಿರೂಪಿಸಿದರು.

Read More

ಕುಂದಾಪುರ: ತಲ್ಲೂರಿನಿಂದ ಕುಂದಾಪುರ ಕಡೆಗೆ ತೆರಳುತ್ತಿದ್ದ ವ್ಯಕ್ತಿಯೋರ್ವರಿಗೆ ಹಿಂದಿನಿಂದ ಬಂದ ಗೂಡ್ಸ್ ರಿಕ್ಷಾವೊಂದು ಡಿಕ್ಕಿ ಹೊಡೆದು ಸ್ಥಳದಲ್ಲೇ ಮೃತಪಟ್ಟ ಘಟನೆ ಇಂದು ವರದಿಯಾಗಿದೆ. ಬೋನಿಪಾಸ್ ಲೇವಿಸ್(52) ಮೃತ ದುರ್ದೈವಿ. ಬೋನಿಪಾಸ್ ಕುಂದಾಪುರಕ್ಕೆ ಕೂಲಿ ಕೆಲಸಕ್ಕೆ ತೆರಳುತ್ತಿದ್ದಾಗ ಹಿಂದಿನಿಂದ ಬಂದ ಗೂಡ್ಸ್ ರಿಕ್ಷಾ ಢಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಬಿದ್ದು ಮೃತಪಟ್ಟಿದ್ದಾರೆ. ಕುಂದಾಪುರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಗಂಗೊಳ್ಳಿ : ಸ್ವಾಮಿ ವಿವೇಕಾನಂದರು ಇಡೀ ಜಗತ್ತಿಗೆ ಬೆಳಕು ನೀಡಿದ ದಾರ್ಶನಿಕ. ಅವರ ವಿಚಾರಧಾರೆಗಳ ಬಗೆಗೆ ನಮ್ಮ ಯುವಕರ ನಡುವೆ ವಿಚಾರ ಮಂಥನಗಳು ನಡೆಯಬೇಕು ಎಂದು ಸರಸ್ವತಿ ವಿದ್ಯಾಲಯದ ಪ್ರಭಾರ ಪ್ರಾಂಶುಪಾಲೆ ಕವಿತಾ ಎಮ್ .ಸಿ ಹೇಳಿದರು. ಅವರು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನಲ್ಲಿ ವಿವೇಕ ಸಪ್ತಾಹದ ಅಂಗವಾಗಿ ವಿದ್ಯಾರ್ಥಿಗಳಲ್ಲಿ ವಿವೇಕಾನಂದರ ತತ್ವಗಳ ಕುರಿತಂತೆ ಜಾಗೃತಿ ಮೂಡಿಸುವ ಉದ್ದೇಶದಿಂದ ನಡೆದ ವಿದ್ಯಾರ್ಥಿ ವಿವೇಕ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು. ಇಂದು ಸಮಾಜದ ಯುವಶಕ್ತಿ ಒಂದು ನಿರ್ದಿಷ್ಠ ಗುರಿಯಿಲ್ಲದೆ ಮುಂದೆ ಸಾಗುತ್ತಿರುವುದು ತಮ್ಮ ಜವಾಬ್ದಾರಿಗಳನ್ನು ಮರೆತಿರುವುದು ವಿಷಾದಕರ.ವಿವೇಕಾನಂದರ ಬದುಕು ಮತ್ತು ಸಾಧನೆಗಳು ಅವರಿಗೆ ಉತ್ತಮ ಬದುಕು ಕಟ್ಟಿಕೊಳ್ಳುವಲ್ಲಿ ಪ್ರೇರೆಪಣೆ ನೀಡುತ್ತವೆ ಎಂದು ಅವರು ಹೇಳಿದರು. ವಿದ್ಯಾರ್ಥಿಗಳಾದ ವಿನ್‌ಸ್ಟ್‌ನ್ ಪಿಂಟೋ,ತಿರುಮಲೇಶ ಭಟ್, ಹೃತಿಕ್ ಖಾನೋಜಿ,ನಾಗರಾಜ ನಾಯಕ್, ಸುನೈನಾ ಬಾನು, ಆಶ್ಮಿತಾ, ಅನುಷಾ ಪೂಜಾರಿ,ನಿಶ್ಮಿತಾ ಮತ್ತು ರಕ್ಷಿತಾ ಕೊತ್ವಾಲ್ ವಿವೇಕಾನಂದರ ಬದುಕು ಮತ್ತು ಅವರು ಪ್ರತಿಪಾದಿಸಿದ ವಿಚಾರಗಳ ಬಗೆಗೆ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡರು. ವಿದ್ಯಾರ್ಥಿನಿ ಆಶಾ ಪ್ರಾರ್ಥಿಸಿದರು.…

Read More

: ಭಾನುವಾರ ಮುಂಜಾನೆ ಹರಿದ್ವಾರದಲ್ಲಿ ಅಸ್ತಂಗತರಾಗಿರುವ ಶ್ರೀ ಕಾಶೀ ಮಠಾಧೀಶ ಶ್ರೀಮದ್ ಸುಧೀಂದ್ರ ತೀರ್ಥ ಸ್ವಾಮೀಜಿಯವರಿಗೆ ಗಂಗೊಳ್ಳಿಯ ಜಿಎಸ್‌ಬಿ ಸಮಾಜಬಾಂಧವರು ಭಕ್ತಿಪೂರ್ವಕ ಶ್ರದ್ಧಾಂಜಲಿ ಅರ್ಪಿಸಿದರು. ಗಂಗೊಳ್ಳಿಯ ಪೇಟೆ ಶ್ರೀ ವಿಠಲ ರಕುಮಾಯಿ ತಥಾ ಮುಖ್ಯಪ್ರಾಣ ದೇವಸ್ಥಾನದ ದೇವ ಸನ್ನಿಧಿಯಲ್ಲಿ ಗೌರ ಸಾರಸ್ವತ ಸಮಾಜದ ಭಕ್ತಾದಿಗಳು ಹಾಗೂ ಸಮಾಜ ಬಾಂಧವರು ಶ್ರೀದೇವರಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿ ಶ್ರೀಗಳ ಆತ್ಮಕ್ಕೆ ದೇವರು ಚಿರಶಾಂತಿ ಸದ್ಗತಿ ಕರುಣಿಸಲಿ ಎಂದು ಪ್ರಾರ್ಥನೆ ಸಲ್ಲಿಸಿ ಭಕ್ತಿಪೂರ್ವಕ ಶ್ರದ್ಧಾಂಜಲಿ ಅರ್ಪಿಸಿದರು. ವೇದಮೂರ್ತಿ ಕೆ.ರಾಮದಾಸ ಭಟ್, ವೇದಮೂರ್ತಿ ಜಿ.ನಾರಾಯಣ ವಿಶ್ವನಾಥ ಆಚಾರ್ಯ, ವೇದಮೂರ್ತಿ ಜಿ.ವೇದವ್ಯಾಸ ಕೃಷ್ಣಾನಂದ ಆಚಾರ್ಯ, ಎಚ್.ರಂಗನಾಥ ಕಾಮತ್ ಹಾಗೂ ಎಂ.ಜಿ.ಪ್ರಕಾಶ ಪೈ ಶ್ರೀಗಳಿಗೆ ಗಂಗೊಳ್ಳಿಯ ಮೇಲಿದ್ದ ಅಭಿಮಾನ ಪ್ರೀತಿ ವಿಶ್ವಾಸ ಬಗ್ಗೆ ಮಾತನಾಡಿ ನುಡಿ ನಮನ ಸಲ್ಲಿಸಿದರು. ದೇವಳದ ಪ್ರಧಾನ ಅರ್ಚಕ ವೇದಮೂರ್ತಿ ಜಿ.ಮೋಹನದಾಸ ಭಟ್, ಶ್ರೀ ಅಂಬಿಕಾ ದೇವಸ್ಥಾನದ ಪ್ರಧಾನ ಅರ್ಚಕ ವೇದಮೂರ್ತಿ ಜಿ.ಅನಂತಕೃಷ್ಣ ಭಟ್, ಮಲ್ಯರಮಠ ಶ್ರೀ ವೆಂಕಟರಮಣ ದೇವಸ್ಥಾನದ ಪ್ರಧಾನ ಅರ್ಚಕ ವೇದಮೂರ್ತಿ ಎಸ್.ವೆಂಕಟರಮಣ…

Read More

ಬೈಂದೂರು: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಸಮುದಾಯ ಆರೋಗ್ಯ ಕೇಂದ್ರ ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮ ಬೈಂದೂರು ಸಮುದಾಯ ಆರೋಗ್ಯ ಕೇಂದ್ರದಲ್ಲಿ ನಡೆಯಿತು. ಜಿಪಂ ಸದಸ್ಯೆ ಗೌರಿ ದೇವಾಡಿಗ ಮತ್ತು ತಾಪಂ ಸದಸ್ಯ ಎಸ್.ರಾಜು ಪೂಜಾರಿ ಜಂಟಿಯಾಗಿ ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಸಂದರ್ಭ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ.ಮಹೇಂದ್ರ ಕುಮಾರ್ ಶೆಟ್ಟಿ, ರೋಟರಿ ಅಧ್ಯಕ್ಷ ರಘುರಾಮ ಶೆಟ್ಟಿ ಹಾಗೂ ಆಸ್ಪತ್ರೆಯ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. ಗಂಗೊಳ್ಳಿ: ಗಂಗೊಳ್ಳಿಯ ಪ್ರಾಥಮಿಕ ಆರೋಗ್ಯ ಕೇಂದ್ರದ ವಠಾರದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಪ್ರಾಥಮಿಕ ಆರೋಗ್ಯ ಕೇಂದ್ರ ಗಂಗೊಳ್ಳಿ ಹಾಗೂ ರೋಟರಿ ಕ್ಲಬ್ ಗಂಗೊಳ್ಳಿ ಇವರ ಸಂಯುಕ್ತ ಆಶ್ರಯದಲ್ಲಿ ಹಮಿಕೊಳ್ಳಲಾಗಿದ್ದ ರಾಷ್ಟ್ರೀಯ ಪಲ್ಸ್ ಪೋಲಿಯೊ ಲಸಿಕಾ ಕಾರ್ಯಕ್ರಮ – 2016ಕ್ಕೆ ಗಂಗೊಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷೆ ರೇಷ್ಮಾ ಆರ್.ಖಾರ್ವಿ ಚಾಲನೆ ನೀಡಿದರು. ತಾಲೂಕು ಪಂಚಾಯತ್ ಸದಸ್ಯೆ ಪೂರ್ಣಿಮಾ…

Read More

ಬೈಂದೂರು: ಪ್ರಧಾನಿ ನರೇಂದ್ರ ಮೋದಿ ಅವರಲ್ಲಿ ರಾಜ್ಯದ ಬರಗಾಲ, ಬತ್ತಿರುವ ಜಲಾಶಯ ಹಾಗೂ ರೈತ ಆತ್ಮಹತ್ಯೆಯ ಕಾರಣವೊಡ್ಡಿ ವಿಶೇಷ ಅನುದಾನ ನೀಡುವಂತೆ ವಿನಂತಿ ಮಾಡಿಕೊಂಡಿದ್ದೆವು. ಅದರಂತೆ ಕರ್ನಾಟಕ ರಾಜ್ಯಕ್ಕೆ 1540ಕೋಟಿ ಅನುದಾನ ಬಿಡುಗಡೆಯಾಗಿದೆ. ಪ್ರಧಾನಮಂತ್ರಿಗಳಿಗೆ ಸದಾ ಬೆಟ್ಟು ತೋರಿಸಿ ಟೀಕೆ ಮಾಡುವ ಸಿದ್ಧರಾಮಯ್ಯನವರು ಇನ್ನಾದರೂ ಅನುದಾನವನ್ನು ಸದ್ಬಳಕೆ ಮಾಡಿಕೊಂಡು ರಾಜ್ಯದ ಜನರ ನೋವಿಗೆ ಸ್ಪಂದಿಸಲಿ ಎಂದು ಮಾಜಿ ಮುಖ್ಯಮಂತ್ರಿ, ಹಾಲಿ ಸಂಸದ ಬಿ. ಎಸ್. ಯಡಿಯೂರಪ್ಪ ಸಲಹೆಯಿತ್ತರು. ಭಾನುವಾರ ಬೈಂದೂರು ಬೈಪಾಸ್ ಬಳಿ ಬಿಜೆಪಿ ಬೈಂದೂರು ಘಟಕ ಆಯೋಜಿಸಿದ್ದ ಕಾರ್ಯಕರ್ತರ ಸಾರ್ವಜನಿಕ ಸಭೆಯಲ್ಲಿ ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಅವರನ್ನು ಅಭಿನಂದಿಸಿ ಬಳಿಕ ಮಾತನಾಡಿದರು. ಕರ್ನಾಟಕದ ಕಾಂಗ್ರೆಸ್ ಸರಕಾರ ಬದುಕಿದೆಯೋ ಸತ್ತಿದೆಯೋ ಎಂಬ ಅನುಮಾನ ಕಾಡುತ್ತಿದೆ. ಆಡಳಿತ ಯಂತ್ರ ನಿಧಾನಗತಿಯಲ್ಲಿ ಸಾಗುತ್ತಿದೆ. ಅಹಿಂದ್ ಸರಕಾರ ಎಂದು ಹೇಳಿಕೊಳ್ಳುತ್ತಿದ್ದ ಮುಖ್ಯಮಂತ್ರಿಗಳು ಪರಿಶಿಷ್ಟ ಜಾತಿ, ಪಂಗಡದ ಫಲಾನುಭವಿಗಳಿಗೆ ಸೇರಬೇಕಾದ ಹಣವನ್ನು ಇಲಾಖೆಯಲ್ಲಿಯೇ ಉಳಿಸಿಕೊಂಡು ಅಧಿಕಾರಿಗಳ ಮೇಲೆ ರೇಗಾಡುತ್ತಿರುವುದು ಮತ್ತೆ ಅಹಿಂದ್ ಜನರ…

Read More

ಕುಂದಾಪುರ: ಕಂಡ್ಲೂರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆಶ್ರಯದಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮ ನಡೆಯಿತು. ಕಾವ್ರಾಡಿ ಗ್ರಾಪಂ ಅಧ್ಯಕ್ಷೆ ಗೌರಿ ಆರ್. ಅಮೀನ್ ಲಸಿಕೆ ಅಭಿಯಾನಕ್ಕೆ ಚಾಲನೆ ನೀಡಿದರು. ಸ್ಥಳೀಯ ರೋಟರಿ ಅಧ್ಯಕ್ಷ ಸಂತೋಷ್‌ಕುಮಾರ್ ಶೆಟ್ಟಿ, ಕಾರ್ಯದರ್ಶಿ ಕಾಳಿಂಗ ಶೆಟ್ಟಿ ಹಾಗೂ ಸದಸ್ಯರು, ಇಲಾಖೆಯ ಸಿಬ್ಬಂದಿಗಳು, ಅಂಗನವಾಡಿ, ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು. ವೈದ್ಯಾಧಿಕಾರಿ ಡಾ. ಲತಾ ನಾಯಕ್ ಪ್ರಾಸ್ತಾವಿಸಿ ವಂದಿಸಿದರು.

Read More

ಬೈಂದೂರು: ಇಲ್ಲಿನ ಹೋಲಿಕ್ರಾಸ್ ಚರ್ಚಿಗೆ ಉಡುಪಿ ಕ್ರೈಸ್ತ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಡಾ. ಜೆರಾಲ್ಡ್ ಐಸಾಕ್ ಲೋಬೋ ಭೇಟಿ ನೀಡಿ ಚರ್ಚ್ ಸಿಮಿಟ್ರಿ ದ್ವಾರ ಹಾಗೂ ಹಾಗೂ ಏಸುವಿನ ಗುಡಿಯನ್ನು ಲೋಕಾರ್ಪಣೆಗೊಳಿಸಿದರು. ಸಾಮೂಹಿಕ ಪ್ರಾರ್ಥನೆಯ ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿ ಪ್ರತಿ ಧರ್ಮದ ಜನರಲ್ಲೂ ಬಡವರ ಬಗ್ಗೆ ಕಾಳಜಿ ವಹಿಸಿ ಕೆಲಸ ಮಾಡುವ ಗುಣ ಬೆಳೆದಾಗ ಮಾನವೀಯ ಮೌಲ್ಯಗಳಿಗೆ ಅರ್ಥ ಬರುತ್ತದೆ ಎಂದರು. ಚರ್ಚಿನ ರರ್ಸೆ ಹಾಗೂ ಇನ್ನಿತರ ಮೂಲಭೂತ ಸೌಕರ್ಯಗಳನ್ನು ಓದಗಿಸುತ್ತಿರುವ ಬೈಂದೂರು ಶಾಸಕ ಗೋಪಾಲ ಪೂಜಾರಿ ಹಾಗೂ ತಾಲೂಕು ಪಂಚಾಯತ್ ಸದದ್ಯ ರಾಜು ಪೂಜಾರಿ ಅವರನ್ನು ಚರ್ಚಿನ ವತಿಯಿಂದ ಸನ್ಮಾನಿಸಲಾಯಿತು. ಬೈಂದೂರು ಧರ್ಮಪ್ರಾಂತದ ಧರ್ಮಗುರು ರೋನಾಲ್ಡ್ ಮಿರಾಂದ, ಕ್ಯಾಥೋಲಿಕ್ ಸಭಾದ ಅಧ್ಯಕ್ಷ ಡೆನಿಯಲ್ ನಜ್ರತ್, ಯಡ್ತರೆ ಗ್ರಾ.ಪಂ ಸದಸ್ಯ ಮಾರ್ಟಿನ್ ಎವರೆಸ್ಟ್ ಡಯಾಸ್ ಮೊದಲಾದವರು ಉಪಸ್ಥಿತರಿದ್ದರು.

Read More

ಕುಂದಾಪುರ: ಭಾರತೀಯ ಜೀವ ವಿಮಾ ನಿಗಮ ಕುಂದಾಪುರ ಶಾಖೆಯ ವಿಮಾ ಸಲಹೆಗಾರರಾದ ಪ್ರಕಾಶ್ಚಂದ್ರ ಶೆಟ್ಟಿ ಚಿತ್ತೂರು ಅವರು 2015ರಲ್ಲಿ ಉತ್ತಮ ಜೀವ ವಿಮೆ ವ್ಯವಹಾರವನ್ನು ನಡೆಸಿ ಎಂಡಿಅರ್‌ಟಿ ಸದಸ್ಯರಾಗಿ ಆಯ್ಕೆಯಾಗಿದ್ದಾರೆ. ಕೋಣಿಯ ಮಾತಾ ಮಾಂಟೆಸ್ಸೋರಿ ಮಕ್ಕಳ ಶಾಲೆಯ ವ್ಯವಸ್ಥಾಪಕ ನಿರ್ದೇಶಕರಾಗಿರುವ ಪ್ರಕಾಶ್ಚಂದ್ರ ಶೆಟ್ಟಿ ಚಿತ್ತೂರು ಅವರು ಕೆನಡಾದಲ್ಲಿ ನಡೆಯಲಿರುವ ಮಿಲಿಯನ್ ಡಾಲರ್ ರೌಂಡ್ ಟೇಬಲ್ ಜಾಗತಿಕ ಸಮಾವೇಶದಲ್ಲಿ ಭಾಗವಹಿಸಲಿದ್ದು, ಪ್ರೀಮಿಯಂ ಆಧಾರದಲ್ಲಿ ಇವರು ಅರ್ಹತೆಯನ್ನು ಪಡೆದಿದ್ದಾರೆ. ಕುಂದಾಪುರದ ಹಿರಿಯ ಜೀವವಿಮಾ ಅಭಿವೃದ್ಧಿ ಅಧಿಕಾರಿ ಕೆ. ಕರುಣಾಕರ ಶೆಟ್ಟಿ ಅವರ ಮಾರ್ಗದರ್ಶನದಲ್ಲಿ ಈ ಸಾಧನೆ ಮಾಡಿದ್ದಾರೆ. ಅಸಿಸ್ಟೆಂಟ್ ಮೆನೇಜರ್ ಗುರುರಾಜ್ ಎಂ. ಎ, ಶಾಖೆಯ ಸರ್ವ ಸಿಬ್ಬಂದಿ ವರ್ಗದವರು ಸಹಕರಿಸಿದ್ದಾರೆ ಎಂದು ಕುಂದಾಪುರ ಶಾಖೆ ಹಿರಿಯ ಶಾಖಾಧಿಕಾರಿ ಪ್ರೇಮನಾಥ ರಾವ್ ತಿಳಿಸಿದ್ದಾರೆ.

Read More