ಗಂಗೊಳ್ಳಿ : ಗಂಗೊಳ್ಳಿ ಮೇಲ್ಗಂಗೊಳ್ಳಿಯ ಶ್ರೀ ಬಸವೇಶ್ವರ ದೇವಸ್ಥಾನದ ಪ್ರಾಯೋಜಿತ ಓಂ ಶ್ರೀ ಮಾತೃ ಮಂಡಳಿ ನೇತೃತ್ವದಲ್ಲಿ ಶಿವ ಪಾರ್ವತಿ ಕಲ್ಯಾಣೋತ್ಸವ ಕಾರ್ಯಕ್ರಮ ಭಾನುವಾರ ಸಂಜೆ ಗೋಧೂಳಿ ಲಗ್ನ ಸುಮೂರ್ಹತದಲ್ಲಿ ಶ್ರೀ ಬಸವೇಶ್ವರ ದೇವಸ್ಥಾನದಲ್ಲಿ ವಿಜೃಂಭಣೆಯಿಂದ ಜರಗಿತು. ಶಿವ ಪಾರ್ವತಿಯ ವಿಗ್ರಹವನ್ನು ನಾಯಕವಾಡಿಯ ಶ್ರೀ ಸಂಗಮೇಶ್ವರ ದೇವಸ್ಥಾನದ ಬಳಿಯಿಂದ ವೈಭವೋಪಿತ ಪುರಮೆರವಣಿಗೆಯಲ್ಲಿ ತರಲಾಯಿತು. ವೇದಮೂರ್ತಿ ಶ್ರೀಪತಿ ಭಟ್ ಮಂಕಿ ನೇತೃತ್ವದಲ್ಲಿ ಪುರೋಹಿತರು ಕಲ್ಯಾಣೋತ್ಸವದ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಿದರು. ವಧು ನಿರೀಕ್ಷಣೆ, ಅರಶಿನ ಕುಂಕುಮ ಸಮರ್ಪಣೆ, ಧಾರೆಮಣಿ ಕಟ್ಟುವಿಕೆ, ಶಿವನಿಗೆ ಮಧುಪರ್ಕ ಸಮರ್ಪಣೆ, ಮಾಲಾಧಾರಣೆ, ಕನ್ಯಾದಾನ, ಕಂಕಣ ಮಾಂಗಲ್ಯ ಸೂತ್ರ ಧಾರಣೆ, ಚಿನ್ನಾಭರಣಾಧಿ ಕಪ್ಪ ಕಾಣಿಕೆಗಳ ಸಮರ್ಪಣೆ, ಪ್ರಸನ್ನ ಪೂಜೆ, ಅಷ್ಟಾವಧಾನ ಸೇವೆಗಳ ಮೂಲಕ ಕಲ್ಯಾಣೋತ್ಸವ ಕಾರ್ಯಕ್ರಮವನ್ನು ಯಶಸ್ವಿಯಾಗಿ ಭಕ್ತಿ ಶ್ರದ್ಧಾಪೂರ್ವಕ ನೆರವೇರಿಸಲಾಯಿತು. ಓಂ ಶ್ರೀ ಮಾತೃ ಮಂಡಳಿಯ ಅಧ್ಯಕ್ಷೆ ಭೂದೇವಿ, ಗೌರವಾಧ್ಯಕ್ಷೆ ಪದ್ಮಾವತಿ, ಪ್ರಧಾನ ಕಾರ್ಯದರ್ಶಿ ಜ್ಯೋತಿ, ಕಾರ್ಯದರ್ಶಿ ಶಾಂತಿ, ದೇವಸ್ಥಾನದ ಆಡಳಿತ ಮೊಕ್ತೇಸರ ಈಶ್ವರ ಜಿ., ಜಿಪಂ ಸದಸ್ಯೆ ಶೋಭಾ ಪುತ್ರನ್,…
Author: ನ್ಯೂಸ್ ಬ್ಯೂರೋ
ಬೈಂದೂರು: ಸೃಷ್ಠಿಯ ದೃಷ್ಠಿಯಲ್ಲಿ ನಾವೆಲ್ಲರೂ ಪ್ರಕೃತಿಯ ಮಕ್ಕಳು. ಹಾಗೆಯೇ ಸಸ್ಯ ಸಂಕುಲಗಳು ಆಯಾಯ ಪ್ರಾಂತ್ಯ, ಪ್ರದೇಶಗಳಲ್ಲಿ ಬೆಳೆಯುತ್ತಿದ್ದರೂ ಅವುಗಳು ಸಿಹಿಯನ್ನು ನೀಡುತ್ತವೆ. ಆದರೆ ಇಂದು ಸಮಾಜದಲ್ಲಿ ಹಿರಿಯರು ವಿಕೃತ ವಿಚಾರಗಳು ಹೆಚ್ಚು ಪ್ರಕಟಮಾಡುತ್ತಿರುವ ಹಿನ್ನೆಲೆಯಲ್ಲಿ ಬಾಲ್ಯದಲ್ಲಿಯೇ ಮಗುವಿನ ಮಗ್ಧ ಮನಸುಗಳು ಇಂತಹ ಕೃತ್ಯಗಳಿಂದ ಆಕರ್ಷಿತರಾಗಿ ಮುಂದೆ ತಪ್ಪುದಾರಿಯಲ್ಲಿ ಸಾಗುವುದರ ಮೂಲಕ ರಾಷ್ಟ್ರವಿರೋಧಿಯಾಗಿ ಬಿಂಬಿಸಲ್ಪಡುತ್ತಾನೆ ಎಂದು ನಂದಗೋಕುಲ ಶಿಶುಮಂದಿರದ ವ್ಯವಸ್ಥಾಪಕ ಪ್ರೇಮಾನಂದ ಶೆಟ್ಟಿ ಕಟ್ಗೇರಿ ಹೇಳಿದರು. ಅರಮಕೋಡಿ ಶ್ರೀ ಈಶ್ವರ ಸೇವಾ ಸಮಿತಿ ಆಶ್ರಯದಲ್ಲಿ ನಾಲ್ಕು ದಿನಗಳ ಕಾಲ ಆಯೋಜಿಸಿದ ಉಪ್ಪುಂದೋತ್ಸವದಲ್ಲಿ ಮಗು ಮತ್ತು ಸಂಸ್ಕಾರಯುಕ್ತ ಶಿಕ್ಷಣ ಹಾಗೂ ರಾಷ್ಟ್ರ ದೇವೋಭವದ ಕುರಿತು ಉಪನ್ಯಾಸ ನೀಡಿದರು. ಸಂಸ್ಕಾರದ ಶಿಕ್ಷಣ ಮನೆಯಿಂದಲೇ ಪ್ರಾರಂಭವಾಗುವುದರಿಂದ ಮೊದಲು ತಾಯಂದಿರಿಗೆ ತಯಾರು ಮಾಡಬೇಕು. ಬಾಲ್ಯದಲ್ಲಿ ಮಕ್ಕಳ ಮನಸ್ಸಿನೊಳಗೆ ಪ್ರಜ್ಞೆ ಮೂಡಿಸುವ ವಿವೇಕವನ್ನು ತುಂಬುವುದನ್ನು ಬಿಟ್ಟು, ಸ್ವಾಭಾವಿಕ ಕಲಿಕೆಯ ಅವಕಾಶ ಕೊಡದೇ ಅವರ ಭಾವನೆಗಳಗೆ ವಿರೋಧವಾಗಿ ಬೆಳೆಸುವುದರಿಂದ ರಾಷ್ಟ್ರದ್ರೋಹಿಯಾಗಲು ಪರೋಕ್ಷವಾಗಿ ಆಸ್ಪದ ನೀಡಿದಂತಾಗುತ್ತದೆ. ಜಾತಿ, ಧರ್ಮದ ವಿಷಬೀಜ ಬಿತ್ತಿ ಮುಗ್ಧ…
ಗಂಗೊಳ್ಳಿ : ದೇವರಿಗೆ ಭಕ್ತಿ ಪ್ರದಾನವೇ ಹೊರತು ನಾವು ಅರ್ಪಿಸುವ ವಸ್ತುಗಳಲ್ಲ. ದೇವರನ್ನು ಭಕ್ತಿ ಶ್ರದ್ಧಾಪೂರ್ವಕವಾಗಿ ಸ್ತುತಿಸಿ ಭಜಿಸಿದರೆ ದೇವರು ನಮ್ಮ ಇಷ್ಟಾರ್ಥಗಳನ್ನು ಈಡೇರಿಸುತ್ತಾನೆ. ಭಜನೆಯಿಂದ ದೇವರನ್ನು ಸುಲಭವಾಗಿ ಒಲಿಸಿಕೊಳ್ಳಲು ಸಾಧ್ಯವಿದೆ. ಭಜನೆಯು ದೇವರ ಮತ್ತು ಮನುಷ್ಯರ ನಡುವಿನ ಸೇತುವೆಯಾಗಿ ಕೊಂಡಿಯಾಗಿ ಕಾರ್ಯನಿರ್ವಹಿಸುತ್ತದೆ. ಭಜನೆಯಿಂದ ಸಮಾಜದಲ್ಲಿ ಸುಖ ಶಾಂತಿ ನೆಮ್ಮದಿ ಲಭಿಸಿ ಸಮಾಜದ ಏಳಿಗೆ ಸಾಧ್ಯವಾಗುತ್ತದೆ ಎಂದು ಬಸ್ರೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರ ಬಿ.ಅಪ್ಪಣ್ಣ ಹೆಗ್ಡೆ ಹೇಳಿದರು. ಅವರು ಗಂಗೊಳ್ಳಿ ಮೇಲ್ಗಂಗೊಳ್ಳಿ ಶ್ರೀ ಬಸವೇಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಮಹೋತ್ಸವ ಅಂಗವಾಗಿ ಆಯೋಜಿಸಲಾಗಿದ್ದ ಧಾರ್ಮಿಕ ಸಮಾರಂಭ ಹಾಗೂ ಉಡುಪಿ ಜಿಲ್ಲಾ ಮಟ್ಟದ ಕುಣಿತ ಭಜನಾ ಸ್ಪರ್ಧೆಯನ್ನು ಉದ್ಘಾಟಿಸಿ ಮಾತನಾಡಿದರು.ಇತ್ತೀಚಿನ ದಿನಗಳಲ್ಲಿ ನಮ್ಮಲ್ಲಿನ ಜಾತಿ ಧರ್ಮಗಳ ನಡುವಿನ ಗೊಂದಲಗಳಿಂದ ಸಮಾಜದಲ್ಲಿ ಗೊಂದಲದ ವಾತಾವರಣ ಸೃಷ್ಟಿಯಾಗಿ ಧಾರ್ಮಿಕ ಚಟುವಟಿಕೆಗಳು ಕಡಿಮೆಯಾಗುತ್ತಿದೆ. ಸಂಜೆ ಹೊತ್ತು ಪ್ರತಿ ಮನೆ ಮನೆಗಳಲ್ಲಿ ಭಜನೆ ನಡೆದು ಯುವ ಜನರಲ್ಲಿ ಧಾರ್ಮಿಕ ಭಾವನೆಗಳು ಹೆಚ್ಚುವಂತೆ ಮಾಡುವ ಮೂಲಕ ಸಮಾಜ ಮುನ್ನಡೆಸಬೇಕು…
ಉಪ್ಪುಂದ: ಇಲ್ಲಿನ ದೇವಾಡಿಗ ಸಂಘದ ಆಶ್ರಯದಲ್ಲಿ ಜಿಲ್ಲಾ ಹಾಗೂ ತಾಲೂಕು ಪಂಚಾಯತ್ಗೆ ಆಯ್ಕೆಯಾದ ಸಮುದಾಯದ ಅಭ್ಯರ್ಥಿಗಳಿಗೆ ಅಭಿನಂದನಾ ಸಮಾರಂಭ ಉಪ್ಪುಂದ ಮಾತೃಶ್ರೀ ಸಭಾಭವನದಲ್ಲಿ ಜರುಗಿತು. ಸಂಘದ ಅಧ್ಯಕ್ಷರಾದ ಬಿ.ಎ. ಮಂಜು ದೇವಾಡಿಗ ಅಧ್ಯಕ್ಷತೆವಹಿಸಿದ್ದರು. ಈ ಸಂದರ್ಭದಲ್ಲಿ ಖಂಬದಕೋಣೆ ಕ್ಷೇತ್ರದಿಂದ ಜಿಪಂಗೆ ಆಯ್ಕೆಯಾದ ಗೌರಿ ದೇವಾಡಿಗ, ಹೆಮ್ಮಾಡಿ ಕ್ಷೇತ್ರದಿಂದ ತಾಪಂಗೆ ಆಯ್ಕೆಯಾದ ರಾಜು ದೇವಾಡಿಗ ತ್ರಾಸಿ, ಉಪ್ಪುಂದ ಕ್ಷೇತ್ರದಿಂದ ತಾಪಂಗೆ ಆಯ್ಕೆಯಾದ ಪ್ರಮೀಳಾ ದೇವಾಡಿಗ, ಬೀಜೂರು ಕ್ಷೇತ್ರದಿಂದ ತಾಪಂಗೆ ಆಯ್ಕೆಯಾದ ಜಗದೀಶ ದೇವಾಡಿಗ, ಯಡ್ತರೆ ಕ್ಷೇತ್ರದಿಂದ ತಾಪಂಗೆ ಆಯ್ಕೆಯಾದ ಸುಜಾತ ದೇವಾಡಿಗ ಇವರನ್ನು ಸನ್ಮಾನಿಸಲಾಯಿತು. ಅಥಿತಿಗಳಾಗಿ ಯು. ಧರ್ಮಪಾಲ ದೇವಾಡಿಗ ಮುಂಬೈ, ಮೋಹನದಾಸ ಹಿರಿಯಡಕ, ನಾಗರಾಜ ಡಿ ಪಡುಕೋಣೆ, ಅಣ್ಣಯ್ಯ ಶೇರಿಗಾರ್, ಜನಾರ್ದನ ದೇವಾಡಿಗ ಬಾರ್ಕೂರು, ಯು. ಎ. ಮಂಜು ದೇವಾಡಿಗ, ಉಪಸ್ಥಿತರಿದ್ದರು. ಚಂದ್ರ ದೇವಾಡಿಗ ಸ್ವಾಗತಿಸಿ, ಮಂಜುನಾಥ ದೇವಾಡಿಗ ವಂದಿಸಿದರು. ನಾರಾಯಣರಾಜು ಕಾರ್ಯಕ್ರಮ ನಿರೂಪಿಸಿದರು.
ಗಂಗೊಳ್ಳಿ : ಕೆಲಸದ ಮೇಲೆ ಇರುವ ಆಸಕ್ತಿ ಮತ್ತು ಶ್ರದ್ಧೆ ಎರಡೂ ಕೂಡ ವ್ಯಕ್ತಿಯನ್ನು ಸಮಾಜದಲ್ಲಿ ಎಲ್ಲರಿಂದಲೂ ಗೌರವಿಸಲ್ಪಡುವಂತೆ ಮಾಡುತ್ತದೆ.ಒಳ್ಳೆಯತನ ಸಾವಿರಾರು ಸ್ನೇಹಿತರನ್ನು ಸೃಷ್ಟಿಸಬಲ್ಲುದು. ವ್ಯಕ್ತಿಯ ಶ್ರೇಷ್ಠ ಮೌಲ್ಯದಿಂದ ಸಂಸ್ಥೆಯ ಗೌರವ ಘನತೆಗಳು ಹೆಚ್ಚುತ್ತವೆ ಎಂದು ಉಡುಪಿ ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಆರ್.ಬಿ. ನಾಯಕ್ ಅಭಿಪ್ರಾಯಪಟ್ಟರು. ಅವರು ಇಲ್ಲಿಯ ರೋಟರಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯದಲ್ಲಿ ಸತತ ಮೂವತ್ತೆಂಟು ವರುಷಗಳ ಕಾಲ ರಸಾಯನ ಶಾಸ್ತ್ರ ಪ್ರಾಧ್ಯಾಪಕರಾಗಿ, ಕಳೆದ ಎರಡು ವರುಷ ಪ್ರಾಂಶುಪಾಲರಾಗಿ ಸೇವೆ ಸಲ್ಲಿಸಿ ಸೇವಾನಿವೃತ್ತರಾದ ರಮಾಕಾಂತ್ ಎನ್ ರೇವಣ್ ಕರ್ ಅವರನ್ನು ಬೀಳ್ಗೊಡುವ ಸಮಾರಂಭದಲಿ ಅವರನ್ನು ಅಭಿನಂದಿಸಿ ಮಾತನಾಡಿದರು. ಜಿ.ಎಸ್ ವಿ.ಎಸ್ ಅಸೋಶಿಯೇಶನ್ನಿನ ಕಾರ್ಯದರ್ಶಿ ಹೆಚ್ ಗಣೇಶ್ ಕಾಮತ್, ಸರಸ್ವತಿ ವಿದ್ಯಾಲಯದ ಕಾರ್ಯದರ್ಶಿ ಎನ್ ಸದಾಶಿವ ನಾಯಕ್, ಜಿ.ಎಸ್ ವಿ.ಎಸ್ ಅಸೋಶಿಯೇಶನ್ನಿನ ಅಧ್ಯಕ್ಷರಾದ ಡಾ.ಕಾಶೀನಾಥ ಪೈ , ಕಛೇರಿ ಸಿಬ್ಬಂದಿ ವರ್ಗದವರು ಉಪನ್ಯಾಸಕ ಮತ್ತು ಅಧ್ಯಾಪಕ ವೃಂದದವರು ಉಪಸ್ಥಿತರಿದ್ದರು. ಸಾಹಿತಿ ಕೋ. ಶಿವಾನಂದ ಕಾರಂತ,…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ತಾಲೂಕಿನ ಹತ್ತಾರು ಶಿವ ದೇವಾಲಯಗಳಲ್ಲಿ ಶಿವರಾತ್ರಿ ಆಚರಣೆಗೆ ಭಕ್ತಿ ಭಾವದಿಂದ ಜೋರಾಗಿಯೇ ನಡೆಯುತ್ತಿದೆ. ಸಹಸ್ರಾರು ಭಕ್ತರು ಈಶ್ವರ ದೇವಾಲಯಗಳಿಗೆ ಭೇಟಿ ನೀಡಿ ಭಕ್ತಿಪೂರ್ವಕವಾಗಿ ಶ್ರೀ ದೇವರಿಗೆ ನವಿಸಿ ಶಿವಸ್ತುತಿ, ಶಿವನಾಮ ಪಾರಾಯಣದಿಂದ ಪುನಿತರಾದರೇ, ಉಪವಾಸವನ್ನು ಆಚರಿಸಿ ಕೃತಾರ್ಥರಾದರು. ಶಿವರಾತ್ರಿಯ ಅಂಗವಾಗಿ ಬೈಂದೂರು ವಣಕೊಡ್ಲುವಿನ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶಿವಲಿಂಗವನ್ನು ಮುಟ್ಟಿ ಪೂಜಿಸುವ ಅಪೂರ್ವ ಅವಕಾಶವಿದ್ದರೇ ಗುಜ್ಜಾಡಿಯ ಗುಹೇಶ್ವರ ದೇವಾಲಯದಲ್ಲಿ ಗುಹೆಯ ಒಳಗೆ ದೇವರ ದರ್ಶನ ಪಡೆಯವ ಅವಕಾಶ ಭಕ್ತರದ್ದಾಗಿತ್ತು. ಕುಂದಾಪ್ರ ಡಾಟ್ ಕಾಂ ಸುದ್ದಿ ಬೈಂದೂರು ಐತಿಹಾಸಿಕ ಶ್ರೀ ಸೇನೇಶ್ವರ ದೇವಾಲಯ, ಪಡುವರಿಯ ಶ್ರೀ ಸೋಮೇಶ್ವರ ದೇವಾಲಯ, ಕಿರಿಮಂಜೇಶ್ವರದ ಶ್ರೀ ಅಗಸ್ತೇಶ್ವರ ದೇವಾಲಯ, ಹೆರಂಜಾಲಿನ ಶ್ರೀ ಗುಡೆಮಹಾಲಿಂಗೇಶ್ವರ ದೇವಾಲಯ, ಮರವಂತೆ ಶ್ರೀ ಗಂಗಾಧರೇಶ್ವರ ದೇವಾಲಯ, ಗಂಗೊಳ್ಳಿಯ ಶ್ರೀ ವೀರಶೈವ ದೇವಸ್ಥಾನ, ಶ್ರೀ ಇಂದುಧರ ದೇವಾಲಯ, ನಾಯಕವಾಡಿಯ ಶ್ರೀ ಸಂಗಮೇಶ್ವರ ದೇವಾಲಯ, ತಲ್ಲೂರು ಶ್ರೀ ಮಹಾಲಿಂಗೇಶ್ವರ ದೇವಾಲಯ, ಕುಂದಾಪುರದ ಶ್ರೀ ಕುಂದೇಶ್ವರ ದೇವಾಲಯ, ಶ್ರೀ ಕೊಟೇಶ್ವರ ಕೋಟಿಲಿಂಗೇಶ್ವರ…
ಮಾಘ ಮಾಸ ಕೃಷ್ಣ ಪಕ್ಷದ ಚತುರ್ದಶಿಯಂದು ಆಚರಿಸಲಾಗುವ ಶಿವರಾತ್ರಿ, ಶಿವ ಭಕ್ತರ ಪಾಲಿಗೆ ಮಂಗಳಕರ ರಾತ್ರಿ. ಹಗಲು ಉಪವಾಸವಿದ್ದು, ರಾತ್ರಿ ವೇಳೆ ಜಾಗರಣೆ ಮಾಡಿ, ಶಿವಧ್ಯಾನ ಮಾಡಿ ಶಿವನ ಕೃಪೆಗೆ ಪಾತ್ರವಾಗುವ ಶುಭ ದಿನ. ಈ ದಿನ ಶಿವನನ್ನು ಭಕ್ತಿಯಿಂದ ಪೂಜಿಸಿದರೆ, ತಾವು ಮಾಡಿದ ಪಾಪಗಳೆಲ್ಲವೂ ಪರಿಹಾರವಾಗಿ, ಮೋಕ್ಷ ಪ್ರಾಪ್ತವಾಗುತ್ತದೆ ಎಂಬುದು ಭಕ್ತರ ಬಲವಾದ ನಂಬಿಕೆ. ಮದುವೆಯಾಗದ ಹೆಣ್ಣುಮಕ್ಕಳು ಶಿವಗುಣರೂಪಿಯಾದ ಅನುರೂಪ ಪತಿಗಾಗಿ ಪ್ರಾರ್ಥಿಸಿದರೆ, ಮುತ್ತೈದೆಯರು ಪತಿಯ ಶ್ರೇಯೋಭಿವೃದ್ಧಿಗಾಗಿ ಪ್ರಾರ್ಥಿಸುವುದು ಸಂಪ್ರದಾಯ. ಶಿವರಾತ್ರಿಯಂದು ಶಿವನನ್ನು ಪೂಜಿಸಿದರೆ, ಸುಖ, ಶಾಂತಿ, ಸಮೃದ್ಧಿ ದೊರೆಯುವುದೆಂಬ ನಂಬಿಕೆ ಆಸ್ತಿಕರದು. ಶಿವರಾತ್ರಿಯ ಮಹಿಮೆ: ಕೈಲಾಸವಾಸಿ ಶಿವನಿಗೆ ಶಿವರಾತ್ರಿ ಅತ್ಯಂತ ಪ್ರಿಯವಾದ ದಿನ. ಶಿವರಾತ್ರಿಯಂದು ತನ್ನನ್ನು ಪೂಜಿಸುವ ಭಕ್ತರಿಗೆ ತಾನು ವಿಶೇಷವಾಗಿ ಅನುಗ್ರಹ ನೀಡುವುದಾಗಿ ಸ್ವತ: ಶಿವನೇ ಪಾರ್ವತಿಯಲ್ಲಿ ಅರುಹಿದ್ದಾನೆ ಎನ್ನುತ್ತದೆ ಶಿವಪುರಾಣ. ಶಿವ-ಪಾರ್ವತಿಯರ ವಿವಾಹ ಮಹೋತ್ಸವದ ದಿನವಿದು ಎಂಬುದು ವಿಶೇಷ. ಹಿಮವಂತನ ಮಗಳು ಪಾರ್ವತಿ ಈ ದಿನದಂದು ರಾತ್ರಿಯಿಡಿ ಶಿವನಾಮ ಪಠಿಸುತ್ತಾ, ತಪಸ್ಸು ಮಾಡಿ, ಶಿವನನ್ನು ಮೆಚ್ಚಿಸಿ,…
ತೆಕ್ಕಟ್ಟೆಯಲ್ಲಿ ಜರುಗಿದ ವಿರಾಟ್ ಹಿಂದೂ ಸಮಾಜೋತ್ಸವ ಚಿತ್ರಗಳನ್ನು ನೋಡಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ ಚಿತ್ರಗಳು – ಇಲ್ಲಿ ಕ್ಲಿಕ್ ಮಾಡಿ Photos – Click Here ಸುದ್ದಿ ►ತೆಕ್ಕಟ್ಟೆ ವಿರಾಟ ಹಿಂದೂ ಸಮಾಜೋತ್ಸವದಲ್ಲಿ ಹಿಂದೂ ಜನಸಾಗರ, ಮೊಳಗಿದ ಹಿಂದೂ ಧ್ವನಿ.- http://kundapraa.com/?p=11808 .
ಕುಂದಾಪ್ರ ಡಾಟ್ ಕಾಂ ವರದಿ ಕುಂದಾಪುರ: ಜಗತ್ತಿಗೆ ಸಂಸ್ಕೃತಿ, ಶಾಂತಿ-ಸೌಹಾರ್ದತೆಯ ನೀತಿ ಅರುಹಿದ ಹಿಂದೂಗಳ ಮೇಲೆ ನಿರಂತರವಾಗಿ ಆಕ್ರಮಣವಾಗುತ್ತಲೇ ಬಂದಿದೆ. ಇಲ್ಲಿಯವರೆಗೂ ಸಹನಶೀಲರೇ ಆಗಿದ್ದ ಹಿಂದೂಗಳು ಇನ್ನು ಸಮಾಜದ ಮೇಲಿನ ದುಷ್ಕೃತ್ಯವನ್ನು ಸಹಿಸೋಲ್ಲ. ಗ್ರಾಮ ಗ್ರಾಮಗಳಲ್ಲಿಯೂ ಹಿಂದೂ ಯುವಕರು ಜಾಗೃತರಾಗಿದ್ದಾರೆ. ಹಿಂದೂ ಯುವಕರನ್ನು ಕೆಣಕಿದವರನ್ನು ಮನೆಗೆ ಕಳುಹಿಸುವ ವಾತಾವರಣ ನಿರ್ಮಾಣವಾಗಿದೆ ಎಂದು ವಿಶ್ವ ಹಿಂದೂ ಪರಿಷತ್ ಕ್ಷೇತ್ರೀಯ ಸಂಘಟನಾ ಕಾರ್ಯದರ್ಶಿ ಗೋಪಾಲಜಿ ಹೇಳಿದರು. ಭಾನುವಾರ ಮಧ್ಯಾಹ್ನ ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳದ ತೆಕ್ಕಟ್ಟೆ ಘಟಕದ ಆಶ್ರಯದಲ್ಲಿ ಆಯೋಜಿಸಲಾಗಿದ್ದ ವಿರಾಟ ಹಿಂದೂ ಸಮಾಜೋತ್ಸವದಲ್ಲಿ ದಿಕ್ಸೂಚಿ ಭಾಷಣದಲ್ಲಿ ಅವರ ವಾಕ್ಸಮರಕ್ಕಿಳಿದರು. ಇಸ್ಲಾಂ ಧರ್ಮದ ಮತಾಂಧ ಶಕ್ತಿಗಳು ಇಂದಿಗೂ ಗೋಹತ್ಯೆ, ಲವ್ ಜಿಹಾದ್ ನಂತಹ ಸಮಾಜ ಘಾತುಕ ಶಕ್ತಿಗಳನ್ನು ನಿರಾತಂಕವಾಗಿ ಮುಂದವರಿಸಿಕೊಂಡು ಬರುತ್ತಿವೆ. ಬುದ್ದಿವಂತರನ್ನು ವಿಚಾರವಾದಿಗಳನ್ನಾಗಿ ತಯಾರಿಸಿ ಹಿಂದೂ ಧರ್ಮಕ್ಕೆ ಅಪಮಾನವೆಸಗುವ ಕೆಲಸವನ್ನು ನಿರಾತಂಕವಾಗಿ ಮಾಡುತ್ತಲೇ ಬರುತ್ತಿದ್ದಾರೆ. ಇದಕ್ಕೆ ದೇಶದ ಕೆಲವು ಮಾಧ್ಯಮಗಳು ಸಾಥ್ ನೀಡುತ್ತಿರುವುದು ದುರದೃಷ್ಟಕರ ಎಂದರು. ಕುಂದಾಪ್ರ ಡಾಟ್ ಕಾಂ ವರದಿ ಗೋಭಕ್ಷನಿಗೆ ರಕ್ಷಣೆ…
ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಸಮಾಜದಲ್ಲಿ ಒಳ್ಳೆಯ ವ್ಯಕ್ತಿತ್ವನ್ನು ರೂಪಿಸಿಕೊಳ್ಳಬೇಕಾದರೇ ಶಿಕ್ಷಣ ಅತ್ಯಗತ್ಯ. ಶಾಲಾ ಕಾಲೇಜಿನಲ್ಲಿ ಕಲಿತ ಬಳಿಕ ಅಲ್ಲಿನ ಋಣವನ್ನು ಮರೆಯದೇ ಶಾಲೆಯ ಅಭಿವೃದ್ಧಿಗಾಗಿ ಚಿಂತಿಸುವ ನೆಲೆಯಲ್ಲಿ ಪುನರ್ಮಿಲನಗೊಂಡ ಹಳೆ ವಿದ್ಯಾರ್ಥಿಗಳ ಶ್ರಮ ಶ್ಲಾಘನೀಯ ಎಂದು ಲಕ್ಷ್ಮಿ ಸೋಮ ಬಂಗೇರ ಸರಕಾರಿ ಪ್ರಥಮ ದರ್ಜೆ ಕಾಲೇಜು ಸ್ಥಾಪನಾ ಸಮಿತಿ ಗೌರವಾಧ್ಯಕ್ಷ ನಾಡೋಜ ಡಾ. ಜಿ. ಶಂಕರ ಹೇಳಿದರು. ಅವರು ಕೋಟ-ಪಡುಕೆರೆ ಲಕ್ಷ್ಮಿ ಸೋಮ ಬಂಗೇರ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಹಳೆ ವಿದ್ಯಾರ್ಥಿ ಸಂಘ ಆಯೋಜಿಸದ ಪುನರ್ಮಿಲನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಚಿತ್ರನಟ ವಿಜಯ ರಾಘವೇಂದ್ರ ಮಾತನಾಡಿ ಹಳೆಯ ದಿನಗಳನ್ನು ಹೊಸತಾಗಿ ನೆನಪಿಸುವ ಕಾರ್ಯಕ್ರಮದಲ್ಲಿ ಭಾಗಿಯಾಗಿರುವುದು ಖುಷಿ ನೀಡಿದೆ ಎಂದು ಕೊನೆಯಲ್ಲಿ ಬಾನಿಗೊಂದು ಎಲ್ಲೆ ಎಲ್ಲಿದೆ ಹಾಡು ಹಾಡಿದಾಗ ವಿದ್ಯಾರ್ಥಿಗಳು ಚಪ್ಪಾಳೆಯ ಸ್ಪಂದನ ನೀಡಿದರು. ಕುಂದಾಪ್ರ ಡಾಟ್ ಕಾಂ ಸುದ್ದಿ ಮಾಜಿ ಸಂಸದ ಜಯಪ್ರಕಾಶ್ ಹೆಗ್ಡೆ ಮಾತನಾಡಿ ಬದುಕಿನಲ್ಲಿ ಪ್ರಯತ್ನವಿಲ್ಲದೇ ಯಶಸ್ಸನ್ನು ಕಾಣಲು ಸಾಧ್ಯವಿಲ್ಲ. ಪ್ರಯತ್ನ ಪಡುವಿದರಲ್ಲಿಯೇ ಸೋತರೆ ಯಶಸ್ಸು…
