ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಆಡಳಿತವನ್ನು ಜನರ ಮನೆಬಾಗಿಲಿಗೆ ಕರೆದೊಯ್ಯುವ ಉದ್ದೇಶದಿಂದಾಗಿ ರಾಜ್ಯ ಸರ್ಕಾರವು ಮಹತ್ವಾಕಾಂಕ್ಷಿ ಪ್ರಜಾಸೇವಾ ಆಂದೋಲನ ಸಭೆಗಳನ್ನು ಪ್ರಾರಂಭಿಸಿದೆ. ಜನಸಾಮಾನ್ಯರ ಸಮಸ್ಯೆಗಳನ್ನು ಆದ್ಯತೆಯ ಮೇಲೆ ಬಗೆಹರಿಸುವುದು ಅಧಿಕಾರಿಗಳ ಮುಖ್ಯ ಜವಾಬ್ದಾರಿಯಾಗಿದ್ದು, ಇದಕ್ಕೆ ಒತ್ತು ನೀಡಬೇಕು ಎಂದು ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಹೇಳಿದರು. ಅವರು ಮಣಿಪುರ ಗ್ರಾಮದ ಶ್ರೀ ನಾರಾಯಣ ಗುರು ಸಭಾಭವನದಲ್ಲಿ ಪ್ರಜಾಸೇವಾ ಇಲಾಖೆ ತಾಲೂಕು ಆಡಳಿತ ಉಡುಪಿ ಇವರ ವತಿಯಿಂದ ನಡೆದ ಉಡುಪಿ ತಾಲೂಕು ಪ್ರಜಾಸೇವಾ ಆಂದೋಲನ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸಾರ್ವಜನಿಕರ ಸೇವೆಯನ್ನು ಮಾಡುವುದರೊಂದಿಗೆ ಸಮಾಜದ ಋಣ ತೀರಿಸಲು ಭಗವಂತ ಅವಕಾಶ ಮಾಡಿಕೊಟ್ಟಿದ್ದಾನೆ. ಸಮಾಜದಲ್ಲಿ ನೊಂದವರು, ಬೆಂದವರು, ಅಸಹಾಯಕರು ಇರುತ್ತಾರೆ. ಅವರುಗಳ ಸಮಸ್ಯೆಗಳನ್ನು ಹಗುರವಾಗಿ ಭಾವಿಸದೇ ಪ್ರಜೆಗಳ ಸೇವೆಯೇ ಪರಮಾತ್ಮನ ಸೇವೆ ಎಂಬ ಭಾವನೆಯಿಂದ ಕೆಲಸ ಮಾಡೋಣ ಎಂದರು. ಈವರೆಗೆ ನಡೆದ ಸಭೆಗಳಲ್ಲಿ ಸಾಮಾನ್ಯವಾಗಿ ಸಾಮಾಜಿಕ ಭದ್ರತಾ ಪಿಂಚಣಿ ಯೋಜನೆಗಳು ನಿಂತು ಹೋಗಿದೆ, ಸಂಧ್ಯಾ ಸುರಕ್ಷಾ, ವೃದ್ಧಾಪ್ಯ ವೇತನ, ವಿಧವಾ ವೇತನಗಳು…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕನ್ನಡ ನಾಡು, ನುಡಿ, ಸಾಹಿತ್ಯ ಹಾಗೂ ಶ್ರೀಮಂತ ಸಾಂಸ್ಕೃತಿಕ ಪರಂಪರೆಯನ್ನು ಎತ್ತಿಹಿಡಿಯುವ ಉದ್ದೇಶದಿಂದ ಇಲ್ಲಿನ ಸುಜ್ಞಾನ ನ್ಯಾಷನಲ್ ಪದವಿ ಪೂರ್ವ ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ‘ಕನ್ನಡ ಸಿರಿನುಡಿ ಸಂಭ್ರಮ’ಕಾರ್ಯಕ್ರಮವು ಅತ್ಯಂತ ಸಂಭ್ರಮ-ಸಂಭ್ರಮದಿಂದ ಜರುಗಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸುಜ್ಞಾನ ಎಜುಕೇಷನಲ್ ಟ್ರಸ್ಟ್ನ ಅಧ್ಯಕ್ಷ ಡಾ. ರಮೇಶ್ ಶೆಟ್ಟಿ ಅವರು ಭುವನೇಶ್ವರಿ ದೇವಿಯ ಭಾವಚಿತ್ರಕ್ಕೆ ದೀಪ ಬೆಳಗಿಸಿ, ಪುಷ್ಪನಮನ ಸಲ್ಲಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. “ಕನ್ನಡ ಭಾಷೆಯ ಉಳಿವು ಮತ್ತು ಬೆಳವಣಿಗೆಯಲ್ಲಿ ಯುವಜನತೆಯ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ವಿದ್ಯಾರ್ಥಿಗಳು ಕನ್ನಡವನ್ನು ಕೇವಲ ಒಂದು ಭಾಷೆಯಾಗಿ ಕಲಿಯದೆ, ಪ್ರೀತಿಸಿ, ಗೌರವಿಸಿ, ದೈನಂದಿನ ಬದುಕಿನಲ್ಲಿ ಹೆಮ್ಮೆಯಿಂದ ಬಳಸಬೇಕು” ಎಂದು ಕರೆ ನೀಡಿದರು. ಮುಖ್ಯ ಅತಿಥಿಯಾಗಿದ್ದ ಟ್ರಸ್ಟ್ನ ಕೋಶಾಧಿಕಾರಿ ಭರತ್ ಶೆಟ್ಟಿ ಮಾತನಾಡಿ, “ಕನ್ನಡ ರಾಜ್ಯೋತ್ಸವದ ಆಚರಣೆ ಕೇವಲ ಒಂದು ದಿನಕ್ಕೆ ಸೀಮಿತವಾಗದೆ, ವರ್ಷವಿಡೀ ಭಾಷೆಯ ಬೆಳವಣಿಗೆ ಹಾಗೂ ಪ್ರಚಾರಕ್ಕೆ ಪ್ರತಿಯೊಬ್ಬರೂ ಕೊಡುಗೆ ನೀಡಬೇಕು” ಎಂದರು. ಕಾಲೇಜಿನ ಪ್ರಾಂಶುಪಾಲ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ವಿಜಯ ಮಕ್ಕಳ ಕೂಟ, ಅತ್ರಾಡಿಯಲ್ಲಿ ಆಯೋಜಿಸಲಾಗಿದ್ದ ಯೋಗಾಸನ ಸ್ಪರ್ಧೆಯಲ್ಲಿ ಕಿರಿಮಂಜೇಶ್ವರದ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್ನ 3 ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆಗೈದು ಶಾಲೆಗೆ ಕೀರ್ತಿ ತಂದಿದ್ದಾರೆ. 14 ವರ್ಷ ವಯೋಮಾನದ ವಿಭಾಗದಲ್ಲಿ ನಡೆದ ಆರ್ಟಿಸ್ಟಿಕ್ ಯೋಗ ವೈಯಕ್ತಿಕ ಸ್ಪರ್ಧೆಯಲ್ಲಿ ವಂಶಿತ್ ಹಾಗೂ ಅಮೂಲ್ಯ ಹಾಗೂ ಸಾಂಪ್ರದಾಯಿಕ ಯೋಗ ಸ್ಪರ್ಧೆಯ ವೈಯಕ್ತಿಕ ವಿಭಾಗದಲ್ಲಿ ಅನುಷ್ಕಾ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ. ಇದೇ ವಯೋಮಾನದ ಸಾಂಪ್ರದಾಯಿಕ ಯೋಗ ಜೋಡಿ ಸ್ಪರ್ಧೆಯಲ್ಲಿ ಅಮೂಲ್ಯ ಮತ್ತು ಅನುಷ್ಕಾ ಪ್ರಥಮ ಸ್ಥಾನ ಗಳಿಸಿದ್ದಾರೆ. 17 ವರ್ಷದೊಳಗಿನ ವಿಭಾಗದ ಆರ್ಟಿಸ್ಟಿಕ್ ಯೋಗ ವೈಯಕ್ತಿಕ ಸ್ಪರ್ಧೆಯಲ್ಲಿ ಸಾನಿಧ್ಯಾ ದ್ವಿತೀಯ ಸ್ಥಾನ ಪಡೆದರೆ, ಸಾಂಪ್ರದಾಯಿಕ ಯೋಗ ಸ್ಪರ್ಧೆಯಲ್ಲಿ ಅನಿಷ್ಕಾ ದ್ವಿತೀಯ ಸ್ಥಾನ ಗಳಿಸಿದ್ದಾರೆ. ರಿದಮಿಕ್ ಯೋಗ ಜೋಡಿ ಸ್ಪರ್ಧೆಯಲ್ಲಿ ಸಾನಿಧ್ಯಾ ಮತ್ತು ಅನಿಷ್ಕಾ ದ್ವಿತೀಯ ಸ್ಥಾನ ಪಡೆದು ಗಮನಾರ್ಹ ಸಾಧನೆ ಮಾಡಿದ್ದಾರೆ. ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿಗಳು ಜಿಲ್ಲಾಮಟ್ಟದಿಂದ ವಿಭಾಗೀಯ ಮಟ್ಟದ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕರ್ನಾಟಕ ಸರಕಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ಆಯುಷ್ ಇಲಾಖೆ ಉಡುಪಿ, ಸರಕಾರಿ ಆಯುರ್ವೇದ ಚಿಕಿತ್ಸಾಲಯ ಕಾಲ್ತೋಡು, ಗ್ರಾಮ ಪಂಚಾಯತ್ ಗುಜ್ಜಾಡಿ, ಶ್ರೀ ಚೆನ್ನಬಸವೇಶ್ವರ ಯುವಕ ಮಂಡಲ ರಿ. ನಾಯಕವಾಡಿ – ಗುಜ್ಜಾಡಿ, ಪ್ರಾಥಮಿಕ ಆರೋಗ್ಯ ಕೇಂದ್ರ ಮರವಂತೆ ದೃಷ್ಟಿ ಪ್ರದಾನ ಯೋಜನೆ ಪಾರ್ವತಿ ಮಹಾಬಲ ಶೆಟ್ಟಿ ಚಾರಿಟೇಬಲ್ ಟ್ರಸ್ಟ್, ಶಿರೂರು ಮುದ್ದು ಮನೆ, ಬಯೋಲಿನ್ ಲ್ಯಾಬೋರೇಟರಿ ಲೈಫ್ ಕೇರ್ ಡಯಾಗ್ನೋಸ್ಟಿಕ್ ಸೆಂಟರ್ ಕುಂದಾಪುರ ಸಮೃದ್ಧಿ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ರಿ. ಗುಜ್ಜಾಡಿ, ಕಟ್ಟಡ ಮತ್ತು ಇತರ ಕಾರ್ಮಿಕರ ಸಂಘ ಗಂಗೊಳ್ಳಿ ಇವರ ಸಂಯುಕ್ತ ಆಶ್ರಯದಲ್ಲಿ ಉಚಿತ ಆಯುಷ್ ಆರೋಗ್ಯ ತಪಾಸಣೆ, ಔಷಧಿ ವಿತರಣೆ, ಉಚಿತ ನೇತ್ರ ತಪಾಸಣೆ ಮತ್ತು ಶಸ್ತ್ರಚಿಕಿತ್ಸಾ ಶಿಬಿರವು ನಾಯಕವಾಡಿ ಗುಜ್ಜಾಡಿಯ ಶ್ರೀರಾಮ ಭಗವಾನ್ ಬ್ರಹ್ಮಶ್ರೀ ನಾರಾಯಣಗುರು ಮಂದಿರದಲ್ಲಿ ಭಾನುವಾರದಂದು ಯಶಸ್ವಿಯಾಗಿ ಜರುಗಿತು. ಗುಜ್ಜಾಡಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶೋಭಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಇಂತಹ ಜನ ಮುಖಿ ಕಾರ್ಯಕ್ರಮಗಳನ್ನು ಸಂಘ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಕಠಿಣ ಪರಿಶ್ರಮ ಮತ್ತು ಉದ್ಯಮಶೀಲತೆಯ ದೃಢ ಸಂಕಲ್ಪದ ರೋಚಕ ಕಥೆಗೆ ಸಾಕ್ಷಿಯಾಗಿರುವ ವೀರೇಂದ್ರ ಎಸ್. ಪೂಜಾರಿ ಅವರಿಗೆ ಅಮೆರಿಕದ ಫ್ರಾಂಕ್ಪರ್ಡ್ ಇಂಟರ್ನ್ಯಾಷನಲ್ ಯೂನಿವರ್ಸಿಟಿಯು ‘ಬಿಸಿನೆಸ್ ಡೆವಲಪ್ಮೆಂಟ್’ (ವ್ಯಾಪಾರ ಅಭಿವೃದ್ಧಿ) ವಿಭಾಗದಲ್ಲಿ ಗೌರವ ಡಾಕ್ಟರೇಟ್ ನೀಡಿ ಗೌರವಿಸಿದೆ. ನವದೆಹಲಿಯಲ್ಲಿ ನಡೆದಿರುವ ಭವ್ಯ ಸಮಾರಂಭದಲ್ಲಿ ಈ ಪ್ರತಿಷ್ಠಿತ ಗೌರವ ಡಾಕ್ಟರೇಟ್ ನೀಡಿ ಗೌರವಿಸಲಾಗಿದೆ. ಬೈಂದೂರು ತಾಲೂಕಿನ ಕೋಣ್ಕಿಯ ಅತ್ಯಂತ ಸಾಧಾರಣ ಹಿನ್ನೆಲೆಯಿಂದ ಬಂದ ವೀರೇಂದ್ರ ಪೂಜಾರಿ ಅವರ ನಿರಂತರ ಪರಿಶ್ರಮಕ್ಕೆ ಗೌರವ ಡಾಕ್ಟರೇಟ್ ಸಿಕ್ಕಿದೆ.ವ್ಯವಹಾರ ಅಭಿವೃದ್ಧಿ, ಸುಸ್ಥಿರ ಬೆಳವಣಿಗೆ ಮತ್ತು ಆರ್ಥಿಕ ಸಬಲೀಕರಣದಲ್ಲಿ ಅವರ ನವೀನ ತಂತ್ರಗಳು ಗ್ರಾಮೀಣ ಭಾಗದಲ್ಲಿ ಉದ್ಯೋಗ ಅವಕಾಶವನ್ನು ಸೃಷ್ಟಿಸಿದ್ದಾರೆ. ಹಾಗೇ ನಾಯಕತ್ವ, ಕಾರ್ಯತಂತ್ರದ ವಿಸ್ತರಣೆ ಮತ್ತು ಸಮುದಾಯ ಆಧಾರಿತ ಉದ್ಯಮ ಅಭಿವೃದ್ಧಿಗೆ ನೀಡಿರುವ ಅಸಾಧಾರಣ ಕೊಡುಗೆಯನ್ನು ಗುರುತಿಸಿ ಫ್ರಾಂಕ್ವರ್ಪ್ ಇಂಟರ್ನ್ಯಾಷನಲ್ ಯೂನಿವರ್ಸಿಟಿಯು ಶ್ರೀ ಪೂಜಾರಿ ಅವರನ್ನು ಈ ಗೌರವಕ್ಕೆ ಆಯ್ಕೆ ಮಾಡಿದೆ. ಸಣ್ಣ ಹಳ್ಳಿಗಳಿಂದಲೂ ನಾಯಕತ್ವವು ಹೊರಹೊಮ್ಮಿ ಜಾಗತಿಕ ಮಟ್ಟದಲ್ಲಿ ಗಮನಾರ್ಹ ಪ್ರಭಾವ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಸಂಸ್ಥೆಯ ಹಿರಿಯ ವಿದ್ಯಾರ್ಥಿನಿ, ಪ್ರಸ್ತುತ ಆಳ್ವಾಸ್ (ಸ್ವಾಯತ್ತ) ಕಾಲೇಜಿನ ದೈಹಿಕ ಶಿಕ್ಷಣ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಮೀನಾಕ್ಷಿ ಬಿ. ಅವರು ದೈಹಿಕ ಶಿಕ್ಷಣ ವಿಷಯದಲ್ಲಿ ಮಂಗಳೂರು ವಿವಿಯಿಂದ ಪಿಎಚ್.ಡಿ. ಪದವಿ ಪಡೆದುಕೊಂಡಿದ್ದಾರೆ. ಮಂಗಳೂರು ವಿಶ್ವವಿದ್ಯಾನಿಲಯದ ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕ ಹಾಗೂ ಮುಖ್ಯಸ್ಥರಾದ ಡಾ. ಜೆರಾಲ್ಡ್ ಸಂತೋಷ ಡಿಸೋಜ ಅವರ ಮಾರ್ಗದರ್ಶನದಲ್ಲಿ ’ಭಾರತೀಯ ಸನ್ನಿವೇಶದಲ್ಲಿ ಕ್ರೀಡಾಪಟುಗಳ ಲಿಂಗ, ವಯಸ್ಸು ಹಾಗೂ ಕ್ರೀಡೆಯ ಪ್ರಕಾರಗಳ ಆಧಾರದಲ್ಲಿ ಉಂಟಾಗುವ ಒತ್ತಡ ಮತ್ತು ಅದನ್ನು ನಿಭಾಯಿಸುವ ತಂತ್ರಗಳ ನಡುವಿನ ಸಂಬಂಧ’ ಎಂಬ ವಿಷಯದ ಕುರಿತು ಸಂಶೋಧನಾ ಪ್ರಬಂಧ ಮಂಡಿಸಿ ಡಾಕ್ಟರೇಟ್ ಪದವಿ ಗಳಿಸಿದ್ದಾರೆ. 2002ರಲ್ಲಿ ಕ್ರೀಡಾ ದತ್ತು ಸ್ವೀಕಾರ ಯೋಜನೆಯಡಿ ಆಳ್ವಾಸ್ ಪಿಯು ಕಾಲೇಜಿಗೆ ಪ್ರವೇಶ ಪಡೆದಿದ್ದ ಮೀನಾಕ್ಷಿಯವರು ಪದವಿ, ಬಿ.ಪಿ.ಎಡ್. ಹಾಗೂ ಎಂ.ಪಿ.ಎಡ್. ಶಿಕ್ಷಣವನ್ನು ಆಳ್ವಾಸ್ನಲ್ಲಿಯೇ ಪೂರೈಸಿದ್ದಾರೆ. ರಾಷ್ಟ್ರೀಯ ಮಟ್ಟದ 4*400 ಮೀಟರ್ ರಿಲೇ ಸ್ಪರ್ಧೆಯಲ್ಲಿ ತೃತೀಯ ಸ್ಥಾನ ಗಳಿಸಿರುವ ಅವರು ಉತ್ತಮ ಕ್ರೀಡಾಪಟುವಾಗಿಯೂ ಗುರುತಿಸಿಕೊಂಡಿದ್ದಾರೆ.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಉಡುಪಿ ಕುಂಜಿಬೆಟ್ಟುವಿನಲ್ಲಿರುವ ಉಪೇಂದ್ರ ಪೈ ಮೆಮೋರಿಯಲ್ ಕಾಲೇಜು (ಯು.ಪಿ.ಎಂ.ಸಿ) ಮೈದಾನದಲ್ಲಿ ನಡೆದ ಜಿಲ್ಲಾ ಮಟ್ಟದ ಅಂತರ ಕಾಲೇಜು ಬಾಲಕಿಯರ ತ್ರೋಬಾಲ್ ಪಂದ್ಯಾಟದಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ಬಾಲಕಿಯರ ತಂಡ ದಿಗ್ವಿಜಯ ಸಾಧಿಸಿ ಚಾಂಪಿಯನ್ ಆಗಿ ಹೊರಹೊಮ್ಮಿದರು. ತಂಡದ ಈ ಅಮೋಘ ಗೆಲುವು ಕಾಲೇಜಿನ ಕ್ರೀಡಾ ಕ್ಷೇತ್ರದ ಸಾಧನೆಗೆ ಮತ್ತೊಂದು ಗೌರವದ ಗರಿಯನ್ನು ತಂದುಕೊಟ್ಟಿದೆ. ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು , ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಅಭಿನಂದನೆ ವಿಜೇತ ವಿದ್ಯಾರ್ಥಿನಿಯರನ್ನು ಅಭಿನಂದಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಮೂಡ್ಲಕಟ್ಟೆ ಐಎಂಜೆ ಶಿಕ್ಷಣ ಸಂಸ್ಥೆಗಳ ಆವರಣದಲ್ಲಿ ಪಿಯುಸಿ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾದ ʼನವೋನ್ಮೇಶʼ – ರಾಜ್ಯ ಮಟ್ಟದ ವಿಜ್ಞಾನ, ವಾಣಿಜ್ಯ, ಸಾಂಸ್ಕೃತಿಕ ಹಾಗೂ ಕ್ರೀಡಾ ಉತ್ಸವದ ಉದ್ಘಾಟನಾ ಸಮಾರಂಭವು ಶುಕ್ರವಾರ ಅದ್ದೂರಿಯಾಗಿ ನೆರವೇರಿತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಕುಂದಾಪುರ ಉಪವಿಭಾಗದ ಮಾಜಿ ಸಹಾಯಕ ಆಯುಕ್ತರಾಗಿದ್ದ ರಶ್ಮಿ ಎಸ್. ಆರ್. KAS ದೀಪ ಬೆಳಗಿಸಿ ಉತ್ಸವಕ್ಕೆ ಚಾಲನೆ ನೀಡಿದರು. ಬಳಿಕ ಅವರು ಮಾತನಾಡಿ, ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ಅವರು, “ವಿದ್ಯಾರ್ಥಿ ಜೀವನದಲ್ಲಿ ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳೂ ಅತ್ಯಂತ ಅವಶ್ಯಕ. ‘ನವೋನ್ಮೇಶ’ದಂತಹ ವೇದಿಕೆಗಳು ವಿದ್ಯಾರ್ಥಿಗಳಲ್ಲಿ ಅಡಗಿರುವ ನಾಯಕತ್ವ ಗುಣ ಹಾಗೂ ಕೌಶಲ್ಯಗಳನ್ನು ಬೆಳೆಸಲು ಸಹಾಯ ಮಾಡುತ್ತವೆ. ಯುವಜನತೆ ತಮಗೆ ಸಿಕ್ಕ ಅವಕಾಶಗಳನ್ನು ಸದುಪಯೋಗಪಡಿಸಿಕೊಂಡು ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು” ಎಂದು ಕಿವಿಮಾತು ಹೇಳಿದರು. ಅತಿಥಿಯಾಗಿ ಪಾಲ್ಗೊಂಡಿದ್ದ ಖ್ಯಾತ ಚಲನಚಿತ್ರ ನಟ ಬಿಗ್ ಬಾಸ್ ಖ್ಯಾತಿಯ ರೂಪೇಶ್ ಶೆಟ್ಟಿ ಅವರು ಮಾತನಾಡಿ, “ಪ್ರತಿಯೊಬ್ಬರಲ್ಲೂ ಒಂದಲ್ಲ ಒಂದು ವಿಶೇಷ ಪ್ರತಿಭೆ ಇದ್ದೇ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಹೆಮ್ಮಾಡಿಯ ಜನತಾ ಪದವಿ ಪೂರ್ವ ಕಾಲೇಜು, ಜನತಾ ನ್ಯೂ ಇಂಗ್ಲೀಷ್ ಸ್ಕೂಲ್ ಕಿರೀಮಂಜೇಶ್ವರ ಇವರ ಸಂಯುಕ್ತ ಆಸರೆಯಲ್ಲಿ ‘ಖೇಲೋ ಜನತಾ – ವಾರ್ಷಿಕ ಕ್ರೀಡಾಕೂಟ 2026’ ಶುಕ್ರವಾರ ಕಾಲೇಜಿನ ಕ್ರೀಡಾಂಗಣದಲ್ಲಿ ನಡೆಯಿತು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜನತಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಗಣೇಶ್ ಮೊಗವೀರ ಮಾತನಾಡಿ ನಮ್ಮ ಸಂಸ್ಥೆಯಲ್ಲಿ ಕ್ರೀಡಾ ಸಾಧನೆಗೈದ ಅನೇಕ ಪ್ರತಿಭಾನ್ವಿತ ವಿದ್ಯಾರ್ಥಿಗಳಿದ್ದಾರೆ. ವಿದ್ಯಾರ್ಥಿಗಳ ಕ್ರೀಡಾ ಪ್ರಗತಿಗೆ ಅನುಕೂಲವಾಗುವ ನಿಟ್ಟಿನಲ್ಲಿ ವಾರ್ಷಿಕ ಕ್ರೀಡಾಕೂಟ ಹಮ್ಮಿಕೊಂಡಿದ್ದೇವೆ. ವಿದ್ಯಾರ್ಥಿಗಳು ಕ್ರೀಡಾ ಸ್ಫೂರ್ತಿಯಿಂದ ತೊಡಗಿಸಿಕೊಳ್ಳಿ ಎಂದು ಶುಭ ಹಾರೈಸಿದರು. ಪಥ ಸಂಚಲನದ ಗೌರವ ವಂದನೆ ಸ್ವೀಕರಿಸಿದ ಬೈಂದೂರು ತಾಲ್ಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಫದ ಅಧ್ಯಕ್ಷ ಅರುಣ್ ಕುಮಾರ್ ಶೆಟ್ಟಿ ಮಾತನಾಡಿ, ದೈಹಿಕ ಮತ್ತು ಮಾನಸಿಕ ಆರೋಗ್ಯ ಚೈತನ್ಯವಾಗಿ ಇರಬೇಕಾದರೆ ಕ್ರೀಡೆಯಲ್ಲಿ ಭಾಗವಹಿಸುವಿಕೆ ಮುಖ್ಯ . ಕ್ರೀಡಾಪಟು ಜೀವನದಲ್ಲಿ ಎಂದಿಗೂ ಸೋಲುವುದಿಲ್ಲ. ಎಲ್ಲ ವಿದ್ಯಾರ್ಥಿಗಳು ಕ್ರೀಡಾ ಸ್ಫೂರ್ತಿಯಿಂದ ಭಾಗವಹಿಸಿ ಎಂದು ಶುಭ ಹಾರೈಸಿದರು. ಪತ್ರಕರ್ತ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಬಡಗುತಿಟ್ಟಿನ ಪ್ರಸಿದ್ಧ ಯಕ್ಷಗಾನ ಭಾಗವತ ಹೆರಂಜಾಲು ಗೋಪಾಲ ಗಾಣಿಗ ಅವರಿಗೆ 2026ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಸಂದಿದೆ. 1984ರಲ್ಲಿ ಯಕ್ಷಗಾನ ವೃತ್ತಿಪರ ಮೇಳದಲ್ಲಿ ಕಲಾವಿದರಾಗಿ ಯಕ್ಷಗಾನ ಕಲೆಯಲ್ಲಿ ತೊಡಗಿಸಿಕೊಂಡ ಹೆರಂಜಾಲು ಗೋಪಾಲ ಗಾಣಿಗ ಅವರು ಖ್ಯಾತ ಯಕ್ಷಗಾನ ಕಲಾವಿದ ದಿ. ಹೆರಂಜಾಲು ವೆಂಕಟರಮಣ ಗಾಣಿಗ ಪುತ್ರ. ತಂದೆಯ ಹಾದಿಯನ್ನೇ ತುಳಿದ ಪುತ್ರ ಗೋಪಾಲ ಗಾಣಿಗರು ನಾಲ್ಕನೇ ತರಗತಿಯೇ ವಿದ್ಯಾಭ್ಯಾಸ ಮೊಟಕುಗೊಳಿಸಿ ಕಲಾ ಸೇವೆಯಲ್ಲಿ ತೊಡಗಿಸಿಕೊಂಡವರು. ಬಡಗುತಿಟ್ಟಿನ ಪ್ರಮುಖ ಯಕ್ಷಗಾನ ಮೇಳಗಳಲ್ಲಿ ತಿರುಗಾಟ ನಡೆಸಿ, ತಮ್ಮ ವಿಶಿಷ್ಟ ಕಂಠಸಿರಿ ಹಾಗೂ ಸಾಂಪ್ರದಾಯಿಕ ಶೈಲಿಯ ಹಾಡುಗಾರಿಕೆಯಿಂದ ಪ್ರಸಿದ್ಧರಾದವರು. ಶ್ರೀ ಮಾರಣಕಟ್ಟೆ, ಕಮಲಶಿಲೆ, ಮಂದಾರ್ತಿ, ಸೌಕೂರು, ಸಾಲಿಗ್ರಾಮ ಹಾಗೂ ಶಿರಸಿ ಮೇಳಗಳಲ್ಲಿ ಪ್ರಧಾನ ಭಾಗವತರಾಗಿ ಸೇವೆ ಸಲ್ಲಿಸಿದ್ದಾರೆ. ಯುವಕರಾಗಿರುವಾಗಲೇ ಅವರು ಡಾ. ಶಿವರಾಮ ಕಾರಂತರ ಯಕ್ಷಬ್ಯಾಲೆ ತಂಡದ ಮೂಲಕ ವಿದೇಶಗಳಲ್ಲಿಯೂ ಯಕ್ಷಗಾನ ಪ್ರದರ್ಶನದಲ್ಲಿ ಭಾಗವಹಿಸಿದ್ದರು. ಪಾರ್ತಿಸುಬ್ಬನವರ ದಶಮ ಕೃತಿಯಲ್ಲಿ ಆಯ್ದ ಪ್ರಸಂಗದ ಆಯ್ದ ಭಾಗಗಳನ್ನು ಅರ್ಥಸಹಿತ ಮರುಪ್ರಕಟಿಸಿದ್ದಾರೆ. ಅವರು…
