ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಇಲ್ಲಿನ ಕೋಟ ಸಹಕಾರಿ ವ್ಯವಸಾಯಕ ಸಂಘ ಕೋಟ ಇದರ 99ನೇ ವಾರ್ಷಿಕ ಸರ್ವ ಸದಸ್ಯರ ಸಾಮಾನ್ಯ ಸಭೆಯು ಕೋಟದ ವಿವೇಕ ಪದವಿ ಪೂರ್ವ ಕಾಲೇಜಿನ ಮಹಾತ್ಮಾ ಗಾಂಧಿ ಸಭಾ ಭವನದಲ್ಲಿ ಜರಗಿತು. ಸಂಘದ ಅಧ್ಯಕ್ಷ ಡಾ.ಕೆ.ಕೃಷ್ಣ ಕಾಂಚನ್ ಅಧ್ಯಕ್ಷತೆ ವಹಿಸಿ 2025-26ನೇ ಸಾಲಿನ ವರದಿಯನ್ನು ವಾಚಿಸಿ, ಸಂಘವು 13 ಶಾಖೆಗಳನ್ನು ಹೊಂದಿ ಉತ್ತಮ ಪ್ರಗತಿ ಸಾಧಿಸಿ, ವರದಿ ಸಾಲಿನಲ್ಲಿ ರೂ. 329.20 ಕೋಟಿ ಠೇವಣಿ, ರೂ. 263.57 ಕೋಟಿ ಸಾಲ ಹೊರಬಾಕಿಯಿದ್ದು, ರೂ. 2061.00 ಕೋಟಿ ವ್ಯವಹಾರ ಮಾಡಿ ರೂ.5.88 ಕೋಟಿ ನಿವ್ವಳ ಲಾಭ ಗಳಿಸಿದ್ದು, ಸಂಘದ ಸದಸ್ಯರಿಗೆ ಶೇ.16ರ ಡಿವಿಡೆಂಡ್ ಘೋಷಿಸಿರುವುದಾಗಿ ಸಭೆಗೆ ತಿಳಿಸಿದರು. ಸಭೆಯಲ್ಲಿ 2026ನೇ ಸಾಲಿನ ಉಡುಪಿ ಜಿಲ್ಲಾ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿ ಪುರಸ್ಕೃತ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬೀಜಾಡಿ(ಪಡು) ಇಲ್ಲಿನ ಮುಖ್ಯ ಶಿಕ್ಷಕಿಯಾದ ಪಾರ್ವತಿ ಎಮ್, ಶ್ರೀ ಗುರುಭ್ಯೋ ನಮಃ ಪುರಸ್ಕೃತ ನರೇಂದ್ರ ಕುಮಾರ್, 2026ನೇ ಸಾಲಿನ ಆದರ್ಶ ಶಿಕ್ಷಕ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಹಾಗೂ ಎಕ್ಸ್‌ಲೆಂಟ್ ಪದವಿ ಪೂರ್ವ ಕಾಲೇಜು ಕುಂದಾಪುರ ಇವರ ಆಶ್ರಯದಲ್ಲಿ ನಡೆದ ಕುಂದಾಪುರ ತಾಲೂಕು ಮಟ್ಟದ ಬಾಲಕ – ಬಾಲಕಿಯರ ವಾಲಿಬಾಲ್ ಪಂದ್ಯಾವಳಿಯಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ಬಾಲಕಿಯರ ತಂಡವು ಅತ್ಯುತ್ತಮ ಕ್ರೀಡಾ ಪ್ರದರ್ಶನ ನೀಡಿ ರನ್ನರ್ ಅಪ್ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಸಂಜನಾ, ಸನ್ವಿತಾ ಹಾಗೂ ದಿವ್ಯ ಮೂವರು ವಿದ್ಯಾರ್ಥಿನಿಯರು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ವಾಲಿಬಾಲ್ ನಲ್ಲಿ ಸಾಧನೆಗೈದ ವಿದ್ಯಾರ್ಥಿನಿಯರೊಂದಿಗೆ ಕಾಲೇಜಿನ ಪ್ರಾಂಶುಪಾಲರಾದ ಸಂದೀಪ್ ಗಾಣಿಗ, ಉಪ ಪ್ರಾಂಶುಪಾಲರಾದ ಸುಜೇಯ್ ಕೋಟೆಗಾರ್, ವಿದ್ಯಾರ್ಥಿಗಳನ್ನು ತರಬೇತಿಗೊಳಿಸಿದ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರಾಘವೇಂದ್ರ ಗಾಣಿಗ ಹಾಗೂ ದೈಹಿಕ ಶಿಕ್ಷಣ ನಿರ್ದೇಶಕ ಕೃಷ್ಣ ಉಪಸ್ಥಿತರಿದ್ದಾರೆ. ಕ್ರೀಡಾ ಸಾಧನೆಗೈದ ವಿದ್ಯಾರ್ಥಿನಿಯರನ್ನು ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ – ಬೋಧಕೇತರ ಸಿಬ್ಬಂದಿ ಪ್ರಶಂಸಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕತಾರ್: ಪೀಳಿಗೆಗಳನ್ನು ಮಂತ್ರಮುಗ್ಧಗೊಳಿಸಿದ, ಪ್ರತಿಯೊಬ್ಬರ ಹೃದಯಗಳಲ್ಲಿ ಸದಾ ಜೀವಂತವಾಗಿರುವ ಭಾರತದ ಗಾನ ಕೋಗಿಲೆ, ಗಾನ ಗಂಧರ್ವೆ ಶ್ರೀಮತಿ ಎಸ್. ಜಾನಕಿ ಅವರ ಸವಿನೆನಪಿಗಾಗಿ ಭಾರತೀಯ ಸಾಂಸ್ಕೃತಿಕ ಕೇಂದ್ರ (ಐಸಿಸಿ) ಕತಾರ್, ಭಾರತೀಯ ರಾಯಭಾರ ಕಚೇರಿಯ ಸಹಯೋಗದೊಂದಿಗೆ ಅಶೋಕ ಸಭಾಂಗಣದಲ್ಲಿ ‘ಜಾನಕಿ ಸ್ಮೃತಿ’ ಎಂಬ ಅದ್ದೂರಿ ಸಂಗೀತ ಸಂಜೆಯನ್ನು ಆಯೋಜಿಸಲಾಗಿತ್ತು. ಈ ವಿಶೇಷ ಕಾರ್ಯಕ್ರಮದಲ್ಲಿ ಕತಾರ್ನ ಪ್ರಮುಖ ಕನ್ನಡ ಸಂಘಟನೆಯಾದ ಕರ್ನಾಟಕ ಸಂಘ ಕತಾರ್ ಅತ್ಯಂತ ಸಕ್ರಿಯವಾಗಿ ಭಾಗವಹಿಸಿ ಗಮನ ಸೆಳೆಯಿತು. ಭಾರತದ ನಾನಾ ಭಾಷೆಗಳಲ್ಲಿ ಗಾನಸುಧೆ ಹರಿಸಿದ್ದ ಎಸ್. ಜಾನಕಿ ಅವರ ಅಮರ ಗೀತೆಗಳಿಗೆ ಶ್ರದ್ಧಾಂಜಲಿ ಸಲ್ಲಿಸುವ ನಿಟ್ಟಿನಲ್ಲಿ ಕನ್ನಡ, ಹಿಂದಿ, ತಮಿಳು, ತೆಲುಗು ಹಾಗೂ ಮಲಯಾಳಂ ಭಾಷೆಗಳ ಜನಪ್ರಿಯ ಹಾಡುಗಳನ್ನು ಗಾಯಕರು ಪ್ರಸ್ತುತಪಡಿಸಿದರು. ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಕರ್ನಾಟಕ ಸಂಘ ಕತಾರ್ನ ಸದಸ್ಯರು ಮತ್ತು ಪ್ರತಿಭಾವಂತ ಗಾಯಕರು ಎಸ್. ಜಾನಕಿ ಅವರು ಹಾಡಿದ ಸದಾಹಸಿರು ಕನ್ನಡ ಗೀತೆಗಳ ಮಧುರ ಗಾಯನದ ಮೂಲಕ ನೆರೆದಿದ್ದ ಪ್ರೇಕ್ಷಕರನ್ನು ಮಂತ್ರಮುಗ್ಧಗೊಳಿಸಿದರು. ಸಭಾಂಗಣದಲ್ಲಿದ್ದ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ವಂದೇ ಮಾತರಂ ಕೇವಲ ಘೋಷವಾಕ್ಯವಲ್ಲ; ಅದು ನಮ್ಮ ದೇಶದ ಆತ್ಮ. ತಾಯ್ತಾಡಿನ ಮೇಲಿನ 2,13, ಗೌರವ ಹಾಗೂ ದೇಶಭಕ್ತಿಯ ಪ್ರತೀಕವಾಗಿದೆ. ವಂದೇಮಾತರಂಪಾದಯಾತ್ರೆಯ ಮೂಲಕ ದೇಶಪ್ರೇಮದ ಸಂದೇಶವನ್ನು ಹೆಚ್ಚಿನ ಜನರಿಗೆ ತಲುಪಿಸುವ ಕಾರ್ಯವಾಗಲಿ ಎಂದು ಕೇರಳದ ರಾಜ್ಯಸಭಾ ಸದಸ್ಯ ಸದಾನಂದ ಮಾಸ್ಟರ್ ಹೇಳಿದರು. ಅವರು ಕುಂದಾಪುರದಿಂದ ಸಾಸ್ತಾನದವರೆಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ 18 ಕಿ.ಮೀ. ದೂರದವರೆಗೆ ಕಾಲ್ನಡಿಗೆ ಜಾಥಾಗೆ ಸೋಮವಾರ ಇಲ್ಲಿನ ಹೊಸ ಬಸ್ ನಿಲ್ದಾಣ ಬಳಿ ಚಾಲನೆ ನೀಡಿ, ಬಳಿಕ ಶಾಸ್ತ್ರಿ ಸರ್ಕಲ್ ಬಳಿ ನಡೆದ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದರು. ರಾಷ್ಟ್ರೀಯ ವಿಚಾರಧಾರೆಯನ್ನು ಪ್ರತಿಪಾದಿಸುವ ರಾಷ್ಟ್ರೀಯ ಸ್ವಯಂಸೇವಕ ಸಂಘ, ಬಿಜೆಪಿ ಸೇರಿದಂತೆ ವಿವಿಧ ಸಂಘಟನೆಗಳು ಕೇರಳದಲ್ಲಿ ಕಾರ್ಯನಿರ್ವಹಿಸುತ್ತಿವೆ. ಈ ಪೈಪೋಟಿಯಲ್ಲಿ ರಾಷ್ಟ್ರೀಯ ವಿಚಾರಧಾರೆಗೆ ಮತ್ತಷ್ಟು ಬಲ ದೊರೆಯಲು ಎಲ್ಲರ ಸಹಕಾರ ಹಾಗೂ ಬೆಂಬಲ ಅಗತ್ಯವಿದೆ ಎಂದು ಮನವಿ ಮಾಡಿದರು. ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿ, ಕುಂದಾಪುರದಲ್ಲಿ ನಡೆಯುತ್ತಿರುವವಂದೇ ಮಾತರಂ ಜನಜಾಗೃತಿ ಪಾದಯಾತ್ರೆಗೆ ಅಪಾರ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ವಂಡ್ಸೆ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ ವಂಡ್ಸೆ ವಲಯ ಮಟ್ಟದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ವಂಡ್ಸೆ ವಲಯದ 24 ಅಂಗನವಾಡಿ ಕೇಂದ್ರದ ಕಾರ್ಯಕರ್ತೆಯರು ಮತ್ತು ಸಹಾಯಕಿಯರನ್ನು ಗೌರವಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಂಡ್ಸೆ ನಿರಾಮಯ ಸೊಸೈಟಿ ಅಧ್ಯಕ್ಷರಾದ ಉದಯಕುಮಾರ್ ಶೆಟ್ಟಿ ವಹಿಸಿದ್ದರು. ಸೀತಾರಾಮ ಶೆಟ್ಟಿ ನೆಂಪು ಕರ್ಕುಂಜೆ ಕಾರ್ಯಕ್ರಮ ಉದ್ಘಾಟಿಸಿದರು. ಸಂತೋಷ್ ಕುಮಾರ ಶೆಟ್ಟಿ ನೆಂಪು-ಕರ್ಕುಂಜೆ, ವಂಡ್ಸೆ ಸ.ಮಾ.ಹಿ.ಪ್ರಾ.ಶಾಲೆ ಶಿಕ್ಷಕರಾದ ಸದಾಶಿವ, ಆರೋಗ್ಯ ಸಂರಕ್ಷಣಾಧಿಕಾರಿ ಶ್ರುತಿ, ವಲಯ ಮೇಲ್ವಿಚಾರಕಿ ಭಾಗ್ಯವತಿ, ಬಾಲವಿಕಾಸ ಸಮಿತಿ ಸದಸ್ಯೆ ಜುಲೇಕಾಬಿ, ಶಶಿಧರ, ವಿಜಯ, ಮೊನಿಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು, ಆಶಾ ಕಾರ್ಯಕರ್ತೆಯರು, ಮಕ್ಕಳ ಪೋಷಕರು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಗೋಕರ್ಣ: ಹಿಂದೆ ರಾಜರು ಮಳೆಯ ನೀರನ್ನೇ ಸುಯೋಗ್ಯವಾಗಿ ಸಂಗ್ರಹಿಸಿ ಕುಡಿಯುತ್ತಿದ್ದರು. ಸಮರ್ಪಕವಾಗಿ ಮಳೆ ನೀರನ್ನು ಸಂಗ್ರಹಿಸಿದಾಗ ಅದು ವರ್ಷಗಳ ಕಾಲ ಹಾಳಾಗದೇ ಸೇವನೆಗೆ ಯೋಗ್ಯವಾಗಿರುತ್ತದೆ. ನಮಗಿಂದು ಮಳೆ ನೀರೆಂಬ ಅಮೃತ ಜಲದ ಬಗ್ಗೆ ಯಾವುದೇ ಜ್ಞಾನ ಇಲ್ಲದಂತಾಗಿದೆ. ಮಳೆನೀರನ್ನು ಸುಯೋಗ್ಯವಾಗಿ ಸಂಗ್ರಹಿಸುವುದರ ಬದಲು, ಅದನ್ನು ಚರಂಡಿಯಲ್ಲಿ ಹರಿದು ಹೋಗಲು ಬಿಡುತ್ತಿದ್ದೇವೆ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು. ಅವರು ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ ನಡೆಯುತ್ತಿರುವ ‘ಅನ್ನಬ್ರಹ್ಮ ಚಾತುರ್ಮಾಸ್ಯ’ದ ಧರ್ಮಸಭೆಯಲ್ಲಿ ರಂದು ‘ಅನ್ನಂ ಬ್ರಹ್ಮ’ ಮಾಲಿಕೆಯಲ್ಲಿ ಪ್ರವಚನ ಅನುಗ್ರಹಿಸಿದ ಶ್ರೀಗಳು, ಸಮಾಧಾನವನ್ನು ನೀಡುವಲ್ಲಿ ನೀರಿನಂತೆ ಇರುವ ಇನ್ನೊಂದು ಪದಾರ್ಥವಿಲ್ಲ. ಮನುಷ್ಯನಿಗೆ ದಣಿವು, ಆಯಾಸ, ಗಾಬರಿಗಳಾದಾಗ ಸಮಾಧಾನವನ್ನು ತಂದುಕೊಡುವ ಗುಣ ನೀರಿಗಿದೆ. ಬೇರೆ ಬೇರೆ ಕಾಲದ ಬೇರೆ ಬೇರೆ ಪ್ರದೇಶದ ಆಯುರ್ವೇದ ಆಚಾರ್ಯರೆಲ್ಲರೂ ಮಳೆ ನೀರನ್ನು ಸೇವನೆಗೆ ಸುಯೋಗ್ಯ ಎಂದು ಸಾರಿ ಹೇಳಿದ್ದಾರೆ.ಮಳೆಯ ನೀರಿಗೆ ಅಪರಿಮಿತವಾದ ಚೈತನ್ಯವಿದ್ದು, ಲೆಕ್ಕಕ್ಕೆ ಸಿಗದಷ್ಟು ಗುಣಗಳಿವೆ.…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಇಲ್ಲಿನ ಹೋಲಿಕ್ರಾಸ್ ಚರ್ಚ್‌ನಲ್ಲಿ ಕ್ರೈಸ್ತರ ಭಾಂಧವರ ಪವಿತ್ರ ಹಬ್ಬವಾದ ಮೊಂತಿ ಫೆಸ್ತ್ ತೆನೆ ಹಬ್ಬವನ್ನು ಸಡಗರದಿಂದ ಆಚರಿಸಿದರು. ಉಡುಪಿ ಸಂಪದ ಸಂಸ್ಥೆಯ ನಿರ್ದೇಶಕ ರೆ. ಫಾ. ರೆಜಿನಾಲ್ಡ್ ಪಿಂಟೊ, ಚರ್ಚಿನ ಧರ್ಮಗುರು ರೆ.ಫಾ. ಡೆನ್ನಿಸ್ ಡಿಸೋಜಾ ಅವರ ನೇತ್ರತ್ವದಲ್ಲಿ ಸಂಭ್ರಮ, ಸಡಗರದಿಂದ ಆಚರಿಸಲಾಯಿತು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ರೋಟರಿ ಸಮುದಾಯದಳ ಆರ್ ಸಿಸಿ ಕೊರವಡಿ ವತಿಯಿಂದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮವು ಶ್ರೀನಿಧಿ ಕಾಂಪ್ಲೆಕ್ಸ್‌ನ ರೋಟರಿ ಸಭಾಭವನದಲ್ಲಿ ನಡೆಯಿತು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಮಣಿಪಾಲ ಟೆಕ್ನಾಲಜೀಸ್, ಮಣಿಪಾಲದ ಹೆಡ್ – ಕ್ವಾಲಿಟಿ ಲಿಮಿಟೆಡ್ ಶ್ರೀನಿವಾಸ್ ರಾವ್, ಕುಂಭಾಶಿ ಭಾಗವಹಿಸಿ ಮಾತನಾಡಿದರು. ಶಿಕ್ಷಕರ ಸೇವೆ, ವಿದ್ಯಾರ್ಥಿಗಳ ಬದುಕಿನಲ್ಲಿ ಶಿಕ್ಷಕರ ಪಾತ್ರ ಹಾಗೂ ಸಮಾಜ ನಿರ್ಮಾಣದಲ್ಲಿ ಶಿಕ್ಷಕರ ಕೊಡುಗೆಯನ್ನು ಅವರು ಸ್ಮರಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಆರ್ ಸಿಸಿ ಕೊರವಡಿಯ ಅಧ್ಯಕ್ಷ ಶ್ರೀನಿವಾಸ ಪೂಜಾರಿ ವಹಿಸಿದ್ದರು. ಈ ಸಂದರ್ಭದಲ್ಲಿ ಶಿಕ್ಷಕಿಯಾಗಿ ಸಲ್ಲಿಸಿದ ಸೇವೆಯನ್ನು ಗುರುತಿಸಿ ಮಾಲತಿ ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು. ಪೂರ್ವಿ ಸನ್ಮಾನ ಪತ್ರವನ್ನು ವಾಚಿಸಿದರು.ಆರ್ ಸಿಸಿ ಕೊರವಡಿಯ ಸ್ಥಾಪಕ ಅಧ್ಯಕ್ಷ ರಾಮಚಂದ್ರ ಉಪಾಧ್ಯ ಪ್ರಾಸ್ತಾವಿಕವಾಗಿ ಮಾತನಾಡಿದರು. ರಮೇಶ್ ಕಾಂಚನ್ ಸ್ವಾಗತಿಸಿದರು. ಕುಮಾರಿ ಸಿರಿ ಉಪಾಧ್ಯ ಪ್ರಾರ್ಥನೆ ನೆರವೇರಿಸಿದರು. ಕಾರ್ಯಕ್ರಮದ ನಿರೂಪಣೆಯನ್ನು ಶ್ವೇತಾ ಶ್ರೀನಿಧಿ ನಿರ್ವಹಿಸಿದರು. ಆರ್ ಸಿಸಿ ಕೊರವಡಿಯ ಕಾರ್ಯದರ್ಶಿ ಸುಪ್ರಿತಾ ಪ್ರಕಾಶ್ ವಂದನಾರ್ಪಣೆ ನೆರವೇರಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿಉಡುಪಿ: ಪ್ರಸಕ್ತ ಸಾಲಿನಲ್ಲಿ ಉಡುಪಿ, ಕಾಪು ಹಾಗೂ ಬ್ರಹ್ಮಾವರ ತಾಲೂಕುಗಳಿಗೆ ಸಂಬಂಧಿಸಿದಂತೆ ಅಡಿಕೆ ಬೆಳೆಯಲ್ಲಿ ಕಂಡು ಬರುತ್ತಿರುವ ಎಲೆ ಚುಕ್ಕೆ ರೋಗದ ನಿಯಂತ್ರಣಕ್ಕಾಗಿ ತೋಟಗಾರಿಕೆ ಇಲಾಖೆ ವತಿಯಿಂದ ಸಸ್ಯ ಸಂರಕ್ಷಣಾ ಕ್ರಮ ಕೈಗೊಳ್ಳುವ ಸಲುವಾಗಿ ಮೈಲು ತುತ್ತು ಮತ್ತು ಎಲೆಚುಕ್ಕೆ ರೋಗಕ್ಕೆ ಶಿಫಾರಸ್ಸು ಮಾಡಿರುವ ಸಸ್ಯಸಂರಕ್ಷಣಾ ಔಷಧಿ ಖರೀದಿಗೆ ಪ್ರತಿ ಹೆಕ್ಟೇರ್ ಗೆ ರೂ. 300 ಸಹಾಯಧನ (ಕೇಂದ್ರದ ಪಾಲು ರೂ. 1500/- ಹಾಗೂ ರಾಜ್ಯದ ಪಾಲು ರೂ. 1500/-) ಗರಿಷ್ಠ 2 ಹೆಕ್ಟೇರ್ ಗಳಿಗೆ ರೂ. 6000/-ಗಳ ಸಹಾಯಧನ ಸವಲತ್ತು ವಿತರಿಸಲು ಅವಕಾಶವಿದ್ದು. ಆಸಕ್ತ ರೈತರು ತಾವು ಖರೀದಿಸಿರುವ ಅಧಿಕೃತ ಬಿಲ್ಲಿನೊಂದಿಗೆ ಆರ್.ಟಿ.ಸಿ., ಆಧಾರ ಕಾರ್ಡ್ ಹಾಗೂ ಬ್ಯಾಂಕ್ ಪಾಸ್ ಬುಕ್ ನಕಲು ಪ್ರತಿಗಳೊಂದಿಗೆ ಉಡುಪಿ ತಾಲೂಕಿನ ತೊಟಗಾರಿಕೆ ಇಲಾಖೆಯನ್ನು ಸಂಪರ್ಕಿಸಿ ಅರ್ಜಿ ಸಲ್ಲಿಸಬಹುದಾಗಿದೆ. ಇಲಾಖಾ ಮಾರ್ಗಸೂಚಿಯ ಅನುಸಾರ ಅರ್ಜಿಗಳನ್ನು ಜೇಷ್ಠತೆಯ ಆಧಾರದಲ್ಲಿ ಇಲಾಖೆ ನಿಗದಿಪಡಿಸಿದ ಗುರಿಗೆ ಅನುಗುಣವಾಗಿ ಸಹಾಯಧನಕ್ಕೆ ಪರಿಗಣಿಸಲಾಗುವುದು. ಹೆಚ್ಚಿನ ಮಾಹಿತಿಗಾಗಿ ತೋಟಗಾರಿಕೆ…
ಕುಂದಾಪ್ರ ಡಾಟ್ ಕಾಂ ಸುದ್ದಿಕುಂದಾಪುರ: ಸಮುದ್ರ ಮತ್ತು ನದಿಯ ನಡುವೆ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ 66 ಅಂಚಿನಲ್ಲಿರುವ ತ್ರಾಸಿ ಮತ್ತು ಮರವಂತೆ ಬೀಚ್‌ನ ಅಭಿವೃದ್ಧಿ ಕಾಮಗಾರಿಗಳನ್ನು ಮುಂದಿನ ಮೂರ್ನಾಲ್ಕು ತಿಂಗಳ ಒಳಗಾಗಿ ಪೂರ್ಣಗೊಳಿಸಿ ಪ್ರವಾಸಿಗರಿಗೆ ಅನುಕೂಲ ಮಾಡಿಕೊಡಲಾಗುವುದು ಎಂದು ಪ್ರವಾಸೋದ್ಯಮ ಹಾಗೂ ಇಂಧನ ಇಲಾಖೆ ಸಚಿವ ಕೆ.ಜೆ. ಜಾರ್ಜ್ ಹೇಳಿದರು. ಅವರು ಸೋಮವಾರ ತ್ರಾಸಿ ಮರವಂತೆ ಬೀಚ್‌ಗೆ ಭೇಟಿ ನೀಡಿ, ಅಭಿವೃದ್ಧಿ ಕಾಮಗಾರಿಗಳನ್ನು ಪರಿಶೀಲಿಸಿ ಮಾತನಾಡಿದರು. ತ್ರಾಸಿ ಬೀಚ್‌ನಲ್ಲಿ ಪಾರ್ಕಿಂಗ್, ಫುಡ್‌ಕೋರ್ಟ್, ಸೈಕಲ್ ಟ್ರಾö್ಯಕ್, ಬಯಲು ರಂಗಮಂದಿರ ಸೇರಿದಂತೆ ಮತ್ತಿತರ ಅಭಿವೃದ್ಧಿ ಕಾಮಗಾರಿಗಳು ಸುಮಾರು 9.95 ಕೋಟಿ ರೂ. ವೆಚ್ಚದಲ್ಲಿ ಕಳೆದ 2 ವರ್ಷದಿಂದ ನಡೆಯುತ್ತಿದ್ದು, ಕಾಮಗಾರಿಗೆ ವೇಗ ನೀಡುವುದರೊಂದಿಗೆ ತ್ವರಿತಗತಿಯಲ್ಲಿ ಪೂರ್ಣಗೊಳಿಸಲಾಗುವುದು ಎಂದರು. ಕರಾವಳಿ ಭಾಗದಲ್ಲಿ ಬೀಚ್‌ಗಳನ್ನು ಅಭಿವೃದ್ಧಿಗೊಳಿಸಿ, ಕುಡಿಯವ ನೀರು, ಬೆಳಕಿನ ವ್ಯವಸ್ಥೆ, ಸುಸಜ್ಜಿತ ಶೌಚಗೃಹ, ವಾಹನಗಳ ಪಾರ್ಕಿಂಗ್, ಆಸನದ ವ್ಯವಸ್ಥೆ ಸೇರಿದಂತೆ ಅತ್ಯಾಧುನಿಕ ಸೌಲಭ್ಯಗಳನ್ನು ಪ್ರವಾಸಿಗರಿಗೆ ಕಲ್ಪಿಸಿದ್ದಲ್ಲಿ ಪ್ರವಾಸೋದ್ಯಮ ಕ್ಷೇತ್ರಕ್ಕೆ ಇನ್ನಷ್ಟು ಬಲ ದೊರೆತು ಪ್ರವಾಸಿಗರ…
