ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಬ್ರಹ್ಮಶ್ರೀ ನಾರಾಯಣ ಗುರುಗಳ 172ನೇ ವರ್ಷದ ಗುರು ಜಯಂತಿ ಉತ್ಸವವು ಗುರುವಾರ ಬಸ್ರೂರು ಕೋಟಿ ಚೆನ್ನಯ್ಯ ಪಂಜೂರ್ಲಿ ಗರಡಿಯಲ್ಲಿ ನಡೆಯಿತು. ಬಿಲ್ಲವ ಸಮಾಜ ಸೇವಾ ಸಂಘ ಬಸ್ರೂರು ವಲಯ ಇವರ ವತಿಯಿಂದ ನಡೆದ ಗುರು ಜಯಂತಿ ಉತ್ಸವ ಸಂಜೆ 06.30ರಿಂದ ಬ್ರಹ್ಮಶ್ರೀ ನಾರಾಯಣ ಗುರುಗಳ ಪೂಜಾ ಕಾರ್ಯಕ್ರಮ, ಭಜನಾ ಕಾರ್ಯಕ್ರಮ ನಡೆಯಿತು. ಶ್ರೀ ಕಾಳಿಗರಡಿ ಭಜನಾ ತಂಡ ಕೋಳ್ಕೇರಿ ಬಸ್ರೂರು ಇವರ ಕುಣಿತ ಹಾಗೂ ಕುಳಿತು ಭಜನಾ ಕಾರ್ಯಕ್ರಮ ನಡೆಯಿತು. ತದ ನಂತರ ಪ್ರಸಾದ ವಿತರಣೆ ಮಾಡಲಾಯಿತು. ಕಾರ್ಯಕ್ರಮದಲ್ಲಿ ಬಸ್ರೂರು ಬಿಲ್ಲವ ಸಂಘದ ಅಧ್ಯಕ್ಷರಾದ ಜಯಸೂರ್ಯ ಪೂಜಾರಿ, ಪ್ರಧಾನ ಕಾರ್ಯದರ್ಶಿ ಶ್ರೀನಾಥ್ ಜಿ. ಪೂಜಾರಿ, ದೈವಸ್ಥಾನದ ಅಧ್ಯಕ್ಷರು ಬಿ.ಟಿ. ಮಂಜುನಾಥ ಪೂಜಾರಿ, ಕೇಶವ ಪೂಜಾರಿ, ಶಿವರಾಮ ಪೂಜಾರಿ, ನರಸಿಂಹ ಪೂಜಾರಿ, ಅಶೋಕ್ ಕೆರೆಕಟ್ಟೆ ಮಹಿಳಾ ಘಟಕದ ಅಧ್ಯಕ್ಷರಾದ ಬೇಬಿ ಶ್ರೀಕಾಂತ್ ಇವರೊಂದಿಗೆ ಬಿಲ್ಲವ ಸಮಾಜದ ಅನೇಕ ಮುಖಂಡರು ಭಾಗವಹಿಸಿದರು.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ನಿರ್ಮಾಣ ಹಂತದ ಕಟ್ಟಡದಿಂದ ಬಿದ್ದು ಕಾರ್ಮಿಕರೊಬ್ಬರು ಮೃತಪಟ್ಟ ಘಟನೆ ಇಲ್ಲಿನ ಹಂಗಳೂರು ಎಂಬಲ್ಲಿ ನಡೆದಿದೆ. ಮೃತರನ್ನು ಉತ್ತರ ಪ್ರದೇಶ ಮೂಲದ ರಾಜು ಕಶ್ಯಪ (42) ಎಂದು ಗುರುತಿಸಲಾಗಿದೆ. ಅವರು ಕೆಲಸ ಮಾಡಿ ಕಟ್ಟಡದ 1ನೇ ಮಹಡಿಯಲ್ಲಿ ಉಳಿದುಕೊಂಡಿದ್ದು, ಸೆ.1ರಂದು ರಾತ್ರಿ ಆಕಸ್ಮಿಕವಾಗಿ ಅಂತಸ್ತಿನಿಂದ ಕೆಳಗೆ ಬಿದ್ದಿದ್ದರು. ಇದರಿಂದ ಗಂಭೀರವಾಗಿ ಗಾಯಗೊಂಡಿದ್ದ ಅವರು ಮಂಗಳೂರಿನ ವೆನ್‌ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಸೆ.3ರಂದು ರಾತ್ರಿ ಮೃತಪಟ್ಟರು ಎಂದು ತಿಳಿದುಬಂದಿದೆ. ಈ ಬಗ್ಗೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಇ ತ್ಯಾಜ್ಯಗಳನ್ನು ಸರಿಯಾದ ರೀತಿಯಲ್ಲಿ ವಿಲೇವಾರಿ ಮಾಡುವುದು ಹೇಗೆ ಎನ್ನುವುದರ ಬಗ್ಗೆ ನಮ್ಮಲ್ಲಿ ಮೂಲಭೂತ ಮಾಹಿತಿಗಳು ಇರಬೇಕು ಮತ್ತು ಆ ಮೂಲಕ ಪರಿಸರವನ್ನು ರಕ್ಷಿಸುವಲ್ಲಿ ನಾವುಗಳು ಒಂದಾಗಿ ಕೈಜೋಡಿಸಬೇಕು ಎಂದು ನಮತಿ ರಿಸೋರ್ಸ್ ಮ್ಯಾನೇಜ್ಮೆಂಟ್ ಉಡುಪಿಯ ಸೂಪರ್ವೈಸರ್ ಸರೋಜಾ ಎಸ್. ಅಭಿಪ್ರಾಯಪಟ್ಟರು. ಅವರು ಗಂಗೊಳ್ಳಿ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನಲ್ಲಿ ಇಲ್ಲಿನ ಎಸ್.ವಿ. ಕಾಮರ್ಸ್ ಕ್ಲಬ್ ಮತ್ತು ರಾಷ್ಟ್ರೀಯ ಸೇವಾ ಯೋಜನೆಯ ಆಶ್ರಯದಲ್ಲಿ ನಡೆದ ಇ – ವೇಸ್ಟ್ ಮ್ಯಾನೇಜ್ಮೆಂಟ್ ಕಾರ್ಯಕ್ರಮದಲ್ಲಿ ಮಾತನಾಡಿದರು. ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಕವಿತಾ ಎಂ.ಸಿ. ಅಧ್ಯಕ್ಷತೆ ವಹಿಸಿದ್ದರು. ನಮತಿ ರಿಸೋರ್ಸ್ ಮ್ಯಾನೇಜ್ಮೆಂಟ್‌ನ ಸೂರಜ್ ಕೆ. ಮತ್ತು ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ಸುಗುಣ ಆರ್.ಕೆ. ಉಪಸ್ಥಿತರಿದ್ದರು. ಎಸ್.ವಿ ಕಾಮರ್ಸ್ ಕ್ಲಬ್ ಸಂಯೋಜಕರಾದ ನರೇಂದ್ರ ಎಸ್. ಗಂಗೊಳ್ಳಿ ಕಾರ್ಯಕ್ರಮವನ್ನು ನಿರೂಪಿಸಿ, ವಿದ್ಯಾರ್ಥಿನಿ ಸ್ನೇಹಾ ಖಾರ್ವಿ ಸ್ವಾಗತಿಸಿ, ತನ್ವಿ ವಂದಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕುಂದಾಪುರ ಶಿಶು ಅಭಿವೃದ್ಧಿ ವ್ಯಾಪ್ತಿಯಲ್ಲಿ ಖಾಲಿ ಇರುವ 8 ಅಂಗನವಾಡಿ ಕಂ ಕ್ರಷ್ ಕೇಂದ್ರದ ಕಾರ್ಯಕರ್ತೆ ಮತ್ತು ಸಹಾಯಕಿಯರ ಗೌರವ ಹುದ್ದೆಗಳನ್ನು ಭರ್ತಿ ಮಾಡಲು ಸಂಬಂದಪಟ್ಟ ಗ್ರಾಮ / ವಾರ್ಡ್/ ಸ್ಥಳೀಯ ಅಂಗನವಾಡಿ ಕಂ ಕ್ರಷ್ ಕೇಂದ್ರದ ಸರ್ವೇ ವ್ಯಾಪ್ತಿಯಲ್ಲಿ ವಾಸಿವಿರುವ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಆಫ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಸೆಪ್ಟಂಬರ್ 29 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ, ಶಾಸ್ತ್ರೀ ಸರ್ಕಲ್, ಕುಂದಾಪುರ ದೂ.ಸಂಖ್ಯೆ: 08254-230807 ಅನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಕುಂದಾಪುರ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಸಮಾಜದಲ್ಲಿದ್ದ ಅಧರ್ಮ, ಅನೀತಿ ಹಾಗೂ ಅತ್ಯಂತ ಕೆಟ್ಟ ವ್ಯವಸ್ಥೆ ಉಂಟಾದಾಗ ಮಹಾನ್ ಚೇತನರು ಜನಿಸುತ್ತಾರೆ ಎನ್ನುವುದಕ್ಕೆ ಶ್ರೇಷ್ಠ ನಿದರ್ಶನ ಶ್ರೀ ಕೃಷ್ಣ. ಇವರು ವಿಷ್ಣುವಿನ ಎಂಟನೇ ಅವತಾರವಾಗಿ ಜನಿಸುವುದರೊಂದಿಗೆ ಸಾವಿರಾರು ವರ್ಷಗಳ ಹಿಂದೆ ಸಮಾಜದಲ್ಲಿದ್ದ ಅಧರ್ಮ, ಅನೀತಿ ವಿನಾಶ ಮಾಡಿದ ಮಹಾನ್ ಚೇತನ ಎಂದು ಕರಾವಳಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಎಂ.ಎ ಗಫೂರ್ ಹೇಳಿದರು. ಅವರು ಶುಕ್ರವಾರ ನಗರದ ವಳಕಾಡು ಸರಕಾರಿ ಸಂಯುಕ್ತ ಪ್ರೌಢಶಾಲೆಯಲ್ಲಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಶ್ರೀ ಕೃಷ್ಣ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ, ಶ್ರೀ ಕೃಷ್ಣ ದೇವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿದರು. ಉಡುಪಿ ಶ್ರೀಕೃಷ್ಣನ ನಾಡು. ಇಲ್ಲಿನ ಜನತೆಯ ಬಹುದೊಡ್ಡ ಹಬ್ಬ ಶ್ರೀ ಕೃಷ್ಣ ಜನ್ಮಾಷ್ಠಮಿ. ಇಂತಹ ಕೃಷ್ಣನಗರಿ ಉಡುಪಿಯಲ್ಲಿ ಇಂದು ಅತ್ಯಂತ ಸಂಭ್ರಮದಿಂದ ಕೃಷ್ಣ ಜನ್ಮಾಷ್ಠಮಿಯನ್ನು ಆಚರಿಸಲಾಗುತ್ತಿದ್ದು, ವೇಷಧಾರಿಗಳು ವಿವಿಧ ಬಗೆಯ ವೇಷ ತೊಟ್ಟು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಅನಿವಾಸಿ ಕನ್ನಡಗರಿಗೆ ಪ್ರತ್ಯೇಕ ಸಚಿವಾಲಯದ ಭರವಸೆ ರಾಜ್ಯ ಸರಕಾರ ವಿಧಾನಸಭೆಯಲ್ಲಿ ಮಂಡಿಸಿದೆ ಅದರಂತೆ ಮುಂದಿನ ಕಾರ್ಯತಂತ್ರದ ಕುರಿತು ಮುಂದಿನದಿನಗಳಲ್ಲಿ ರಾಜ್ಯ ಸರಕಾರದೊಂದಿಗೆ ಚರ್ಚಿಸುತ್ತೇನೆ ಎಂದು ಅನಿವಾಸಿ ಭಾರತೀಯ ಸಮಿತಿ ಕರ್ನಾಟ ಹಾಗೂ ವಿಧಾನಪರಿಷತ್ ಸದಸ್ಯೆ ಡಾ.ಆರತಿ ಕೃಷ್ಣ ಹೇಳಿದರು. ಅವರು ಶುಕ್ರವಾರ ಇಲ್ಲಿನ ಕೋಟದ ಅಮೃತೇಶ್ವರೀ ಹಲವು ಮಕ್ಕಳ ತಾಯಿ ದೇಗುಲಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ, ರಾಜ್ಯ ಸರಕಾರ ಸುಭದ್ರವಾಗಿ ಜನಸ್ನೇಹಿ ಆಡಳಿತವನ್ನು ನೀಡುತ್ತಿದೆ ಎಂದರಲ್ಲದೆ ಉಡುಪಿ ಜಿಲ್ಲೆ ಕೊಲ್ಲೂರು ಸೇರಿದಂತೆ ವಿವಿಧ ದೇಗುಲವನ್ನು ಸಂದರ್ಶಿಸಿದ್ದೇನೆ ಅದೇ ಇಲ್ಲಿನ ಕಾಂಗ್ರೆಸ್ ಮುಖಂಡರೊಡನೆ ಅಮೃತೇಶ್ವರಿ ದೇಗುಲಕ್ಕೆ ಭೇಟಿ ನೀಡಿದ್ದೇನೆ ದೇಗುಲದಲ್ಲಿ ಮುಂದಿನ ದಿನಗಳಲ್ಲಿ ವಿಶೇಷ ಸೇವೆಯನ್ನು ನೀಡಲಿದ್ದೇನೆ ಎಂದರು. ದೇಗುಲ ಅಭಿವೃದ್ಧಿ ಸರಕಾರದೊಂದಿಗೆ ಚರ್ಚೆ:ಇಲ್ಲಿನ ಅಮೃತೇಶ್ವರೀ ದೇಗುಲದ ಅಭಿವೃದ್ಧಿಯ ಕುರಿತಂತೆ ಧಾರ್ಮಿಕ ದತ್ತಿ ಇಲಾಖಾ ಸಚಿವರಾದ ರಾಮಲಿಂಗ ರೆಡ್ಡಿಯವರೊಂದಿಗೆ ಚರ್ಚಿಸಿ ಇಲ್ಲಿನ ಸಭಾಭವನ ನಿರ್ಮಾಣ ಸೇರಿದಂತೆ ಅನೇಕ ಅಭಿವೃದ್ಧಿ ಕಾಮಗಾರಿಗೆ ಸರಕಾರ ಕೈಜೋಡಿಸಲಿದೆ ಎಂದು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘವು ಸಹಕಾರ ವ್ಯವಸ್ಥೆಯಲ್ಲಿ ಮಾದರಿ ಸಂಸ್ಥೆಯಾಗಿ ರೂಪುಗೊಂಡು ಸುವರ್ಣ ಮಹೋತ್ಸವದ ಹೊಸ್ತಿಲಲ್ಲಿರುವುದು ಸಂತಸದ ಸಂಗತಿಯಾಗಿದೆ ಎಂದು ಬೈಂದೂರು ಕ್ಷೇತ್ರದ ಶಾಸಕ ಗುರುರಾಜ ಗಂಟಿಹೊಳೆ ಅವರು ಹೇಳಿದರು. ಅವರು ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘ ನಿ. ಉಪ್ಪುಂದ ಇದರ ಸುವರ್ಣ ಸಂಭ್ರಮಕ್ಕೆ ಚಾಲನೆ ಹಾಗೂ ಸಂಸ್ಥಾಪಕರ ದಿನಾಚರಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಸಹಕಾರಿ ರಂಗದಲ್ಲಿ ಪ್ರಕಾಶ್ಚಂದ್ರ ಶೆಟ್ಟಿ ಅವರು ಸೈದ್ಧಾಂತಿಕ ಭಿನ್ನಾಭಿಪ್ರಾಯವನ್ನು ಮರೆತು ಗುರುತಿಸುವ ವ್ಯಕ್ತಿತ್ವದವರಾಗಿದ್ದಾರೆ. ಖಂಬದಕೋಣೆ ಸಹಕಾರಿಯ ಬಲವರ್ಧನೆಯಲ್ಲಿ ಅವರ ಕೊಡುಗೆ ದೊಡ್ಡದಿದೆ ಎಂದರು. ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘ ಅಧ್ಯಕ್ಷ ಎಸ್. ಪ್ರಕಾಶ್ಚಂದ್ರ ಶೆಟ್ಟಿ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ, ನಷ್ಟದಲ್ಲಿದ್ದ ಸಂಸ್ಥೆಯನ್ನು ಸದಸ್ಯರು, ಸಿಬ್ಬಂದಿಗಳ ನಿರಂತರ ಸಹಕಾರ ಮೂಲಕ ಲಾಭದಾಯಕ ಸಂಸ್ಥೆಯನ್ನಾಗಿ ಮಾಡಲಾಗಿದೆ. ಸಹಕಾರ ವ್ಯವಸ್ಥೆಯಲ್ಲಿ ಸಂಸ್ಥೆಯನ್ನು ಗಟ್ಟಿಗೊಳಿಸುವಲ್ಲಿ ನಿರಂತರವಾಗಿ ಶ್ರಮಿಸಲಾಗಿದೆ. ಸಂಸ್ಥೆಯ ಮಹತ್ವಾಕಾಂಕ್ಷಿ ಯೋಜನೆ ರೈತ ಸಿರಿ ಅಗ್ರಿ ಮಾಲ್ ಯೋಜನೆಯನ್ನು ಇನ್ನು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ತೆಕ್ಕಟ್ಟೆಯ ವಿಶ್ವವಿನಾಯಕ ನ್ಯಾಶನಲ್ ಆಂಗ್ಲ ಮಾಧ್ಯಮ ಶಾಲೆ ಹಾಗೂ ಪಿ.ಯು ಕಾಲೇಜಿನಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿವಿಧ ಸ್ಪರ್ಧೆಗಳು ನಡೆಯಿತು. ಶಾಲಾ ಪ್ರಾಂಶುಪಾಲರಾದ ಸಂದೀಪ್ ಪುತ್ರನ್, ಶಾಲಾ ಆಡಳಿತ ನಿರ್ದೇಶಕರಾದ ಹರೀಶ್ ಮರವಂತೆ ಪೂರ್ವ ಪ್ರಾಥಮಿಕ ವಿಭಾಗದ ವಿದ್ಯಾರ್ಥಿಗಳು ದೀಪ ಬೆಳಗಿ ಕಾರ್ಯಕ್ರಮ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಪೂರ್ವ ಪ್ರಾಥಮಿಕ ವಿಭಾಗದ ವಿದ್ಯಾರ್ಥಿಗಳು ಶ್ರೀ ಕೃಷ್ಣ, ರಾಧೆಯ ವೇಷಭೂಷಣ ಧರಿಸಿ ನೃತ್ಯ ಮಾಡುವುದರ ಮೂಲಕ ಎಲ್ಲರ ಗಮನ ಸೆಳೆದರು. ಪುಟ್ಟ ಮಕ್ಕಳು ಕೃಷ್ಣನ ಬಾಲಲೀಲೆಗಳನ್ನು ಪ್ರದರ್ಶಿಸಿ ಕಾರ್ಯಕ್ರಮಕ್ಕೆ ಮೆರಗು ತಂದರು. ಹಾಗೆಯೇ ಪ್ರಾಥಮಿಕ, ಪ್ರೌಢ, ಪಿ.ಯು ಕಾಲೇಜಿನ ವಿದ್ಯಾರ್ಥಿಗಳಿಗೆ ಮೊಸರು ಕುಡಿಕೆ ಒಡೆಯುವ ಸ್ಪರ್ಧೆ ಹಾಗೂ ಹಗ್ಗ ಜಗ್ಗಾಟ ಸರ್ಧೆಯನ್ನು ಆಯೋಜಿಸಲಾಗಿತ್ತು. ಎಲ್ಲಾ ವಿದ್ಯಾರ್ಥಿಗಳು ಉತ್ಸಾಹದಿಂದ ಭಾಗವಹಿಸಿದರು. ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ಹಾಗೂ ಪ್ರಮಾಣಪತ್ರಗಳನ್ನು ನೀಡಿ ಅಭಿನಂದಿಸಲಾಯಿತು. ಕಾರ್ಯಕ್ರಮವು ವಿದ್ಯಾರ್ಥಿಗಳ ಹಾಗೂ ಶಿಕ್ಟಕರ ಉತ್ಸಾಹಭರಿತ ಭಾಗವಹಿಸುವಿಕೆಯಿಂದ ಯಶಸ್ವಿಯಾಗಿ ನೆರವೇರಿತು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಾಲೂಕು ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಮೋಹನ ಪೂಜಾರಿ ಅಧ್ಯಕ್ಷತೆಯಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಯಿತು. ಸಭೆಯಲ್ಲಿ ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿ ನಾಗಶಯನ ಪಿ.ಸಿ. ಇಲಾಖಾವಾರು ಯೋಜನಾ ಪ್ರಗತಿ ಪರಿಶೀಲಿಸಿದರು. ಗೃಹಲಕ್ಷ್ಮಿ ಯೋಜನೆಯಡಿ ಬೈಂದೂರು ಹಾಗೂ ಕುಂದಾಪುರ ತಾಲ್ಲೂಕುಗಳಲ್ಲಿ ಮರಣ ಹೊಂದಿದ ಒಟ್ಟು 25,079 ಫಲಾನುಭವಿಗಳ ಖಾತೆಗೆ ₹77.44 ಲಕ್ಷ ಅನುದಾನ ಜಮೆಯಾಗಿತ್ತು. ಇದರಲ್ಲಿ ಈಗಾಗಲೇ ₹29 ಲಕ್ಷದಷ್ಟು ಮೊತ್ತ ಮೃತರ ಬ್ಯಾಂಕ್ ಖಾತೆಗಳಿಂದ ಸರ್ಕಾರಕ್ಕೆ ಮರು ಜಮೆಯಾಗಿದೆ ಎಂದು ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು. ಇನ್ನುಳಿದಂತೆ ಅನ್ನಭಾಗ್ಯ ಯೋಜನೆಯಡಿ ಶಿರೂರಿನ ಹಡವಿನಕೋಣೆಯಲ್ಲಿ ಹೊಸ ರೇಷನ್ ಅಂಗಡಿ ತೆರೆಯಲು ಅನುಮೋದನೆ ಸಿಕ್ಕಿದ್ದು, ಆದೇಶ ಪತ್ರ ಬಂದ ತಕ್ಷಣ ಉದ್ಘಾಟನೆಗೆ ಕ್ರಮವಹಿಸಲು ಸೂಚಿಸಲಾಯಿತು. ಕೊಲ್ಲೂರು, ಜಡ್ಕಲ್, ಮುದೂರು, ಹಳ್ಳಿಹೊಳೆ ಭಾಗದ ಜನರಿಗೆ ಶಕ್ತಿ ಯೋಜನೆಯ ಪ್ರಯೋಜನ ಸಿಗಲು ಕನಿಷ್ಠ ಒಂದು ಸರ್ಕಾರಿ ಬಸ್ ಒದಗಿಸುವಂತೆ ಕೆಎಸ್‌ಆರ್‌ಟಿಸಿ ಅಧಿಕಾರಿಗಳಿಗೆ ನಿರ್ದೇಶಿಸಲಾಯಿತು. ಇದರೊಂದಿಗೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಶ್ರೀ ವೀರೇಶ್ವರ ಮತ್ತು ಉಮಾಮಹೇಶ್ವರ ದೇವಸ್ಥಾನ ಗಂಗೊಳ್ಳಿ ಇದರ ನೂತನ ಶಿಲಾಮಯ ದೇವಾಲಯ ನಿರ್ಮಾಣದ ಶಿಲಾನ್ಯಾಸ ಕಾರ್ಯಕ್ರಮ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಶುಕ್ರವಾರ ಸಂಪನ್ನಗೊಂಡಿತು. ನೂತನ ಶಿಲಾಮಯ ದೇಗುಲ ನಿರ್ಮಾಣದ ಅಂಗವಾಗಿ ಮನೆ ಮನೆಯಲ್ಲಿ ಭಕ್ತಿಪೂರ್ವಕವಾಗಿ ಪೂಜಿಸಿದ ಅಡಿಗಲ್ಲಿನ ಶಿಲೆಯನ್ನು ಗಂಗೊಳ್ಳಿಯ ಶ್ರೀ ವೀರ ವಿಠಲ ದೇವಸ್ಥಾನದ ಬಳಿಯಿಂದ ಶ್ರೀ ವೀರೇಶ್ವರ ದೇವಾಲಯದ ತನಕ ಮರವಣಿಗೆಯಲ್ಲಿ ತಂದು ಶಿಲಾನ್ಯಾಸ ಮಾಡಲಾಯಿತು. ತಂತ್ರಿಗಳಾದ ಪ್ರೀತಮ್ ಪುತ್ತೂರಾಯ ನೇತೃತ್ವದಲ್ಲಿ ಪುರೋಹಿತರಿಂದ ಧಾರ್ಮಿಕ ವಿಧಿವಿಧಾನಗಳು ನಡೆಯಿತು. ಶ್ರೀ ಕ್ಷೇತ್ರ ಶೃಂಗೇರಿ ಶಾರದಾ ಪೀಠದ ಪ್ರಾಂತೀಯ ಧರ್ಮಾಧಿಕಾರಿ ಲೋಕೇಶ ಅಡಿಗ, ಬೈಂದೂರು ಶಾಸಕ ಗುರುರಾಜ್ ಶೆಟ್ಟಿ ಗಂಟಿಹೊಳೆ, ಕುಂದಾಪುರ ಶಾಸಕ ಎ.ಕಿರಣ್ ಕುಮಾರ್ ಕೊಡ್ಗಿ, ಗಂಗೊಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಜಯಂತಿ ಖಾರ್ವಿ, ದೇವಸ್ಥಾನದ ಪ್ರಧಾನ ಅರ್ಚಕ ಜಿ.ಲಕ್ಷ್ಮೀನಾರಾಯಣ ಭಟ್, ಜಿ.ರವೀಶ್ ಭಟ್, ದೀಪಕ ಕುಮಾರ್ ಶೆಟ್ಟಿ, ಪ್ರಣಯ್ ಕುಮಾರ್ ಶೆಟ್ಟಿ, ಉದ್ಯಮಿ ಜಿ. ಕೇಶವ ಶೇರುಗಾರ್, ದುರ್ಗರಾಜ್ ಪೂಜಾರಿ, ಶಿಲ್ಪಿ…
