ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಬಸ್ರೂರು ಶ್ರೀ ಶಾರದಾ ಕಾಲೇಜಿನಲ್ಲಿ ಮಂಗಳೂರು ವಿಶ್ವ ವಿದ್ಯಾನಿಲಯ ಮಟ್ಟದ ಅಂತರ್ ಕಾಲೇಜು ಉಡುಪಿ ವಲಯ ಮಟ್ಟದ ಪುರುಷರ ವಾಲಿಬಾಲ್ ಪಂದ್ಯಾಟದ ಸಮಾರೋಪ ಸಮಾರಂಭ ಕಾಲೇಜಿನಲ್ಲಿ ಜರುಗಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಬಸ್ರೂರು ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ದೇವಾನಂದ ಶೆಟ್ಟಿ, ಕುಂದಾಪುರ ಕಲಾ ಕ್ಷೇತ್ರ ಟ್ರಸ್ಟ್ ಇದರ ಅಧ್ಯಕ್ಷರಾದ ಕಿಶೋರ ಕುಮಾರ ಮತ್ತು ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಕಿರಣ್ ಕುಮಾರ್ ಕೊಡ್ಗಿ ಹಾಗೂ ಕಾಲೇಜಿನ ವಿಶ್ವಸ್ಥ ಮಂಡಳಿಯ ಖಜಾಂಚಿ ಬಾಂಡ್ಯ ಸುಭಾಶ್ಚಂದ್ರ ಶೆಟ್ಟಿ ಹೆಬ್ರಿ ಸರ್ಕಾರಿ ಪದವಿ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಡಾ. ಮನೋಜ್ ಎಂ. ಉಪಸ್ಥಿತರಿದ್ದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿಶ್ವಸ್ಥ ಮಂಡಳಿಯ ಸದಸ್ಯರಾದ ಗಣೇಶ ಶೆಟ್ಟಿ ಮೊಳಹಳ್ಳಿ ವಹಿಸಿದರು. ಮಂಗಳೂರು ವಿಶ್ವ ವಿದ್ಯಾನಿಲಯ ಮಟ್ಟದ ಅಂತರ್ ಕಾಲೇಜು ಉಡುಪಿ ವಲಯ ಮಟ್ಟದ ವಾಲಿಬಾಲ್ ಪಂದ್ಯಾವಳಿಯಲ್ಲಿ ಪ್ರಥಮ ಸ್ಥಾನವನ್ನು ಆಳ್ವಾಸ ಕಾಲೇಜು ಮೂಡುಬಿದ್ರೆ ದ್ವಿತೀಯ ಸ್ಥಾನವನ್ನು ಶ್ರೀ ಶಾರದಾ ಕಾಲೇಜು…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕುಂದಾಪುರ ಉಪವಿಭಾಗದ ಸಹಾಯಕ ಆಯುಕ್ತರಾಗಿದ್ದ ರಶ್ಮಿ ಎಸ್.ಆರ್. ಅವರನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ರಶ್ಮಿ ಅವರನ್ನು ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತದ (ಬೆಸ್ಕಾಂ) ಪ್ರಧಾನ ವ್ಯವಸ್ಥಾಪಕರಾಗಿ ನೇಮಕ ಮಾಡಲಾಗಿದೆ. 2014ನೇ ಬ್ಯಾಚ್ನ ಕೆಎಎಸ್ ಅಧಿಕಾರಿಯಾಗಿರುವ ರಶ್ಮಿ ಎಸ್.ಆರ್. ಅವರು 2017ರಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರೊಬೇಷನರಿ ಅವಧಿ ಪೂರ್ಣಗೊಳಿಸಿದ್ದರು. ಬಳಿಕ 2019ರಲ್ಲಿ ಬಂಟ್ವಾಳ ತಹಶೀಲ್ದಾರ್ ಆಗಿ ಸೇವೆ ಸಲ್ಲಿಸಿದ್ದರು. 2022ರಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಯಾಗಿ ಪದೋನ್ನತಿ ಹೊಂದಿದ್ದರು. 2023ರಲ್ಲಿ ಕುಂದಾಪುರ ಉಪವಿಭಾಗಾಧಿಕಾರಿಯಾಗಿ ನೇಮಕಗೊಂಡಿದ್ದ ಅವರು 2024ರ ಜುಲೈನಲ್ಲಿ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರತ್ನ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ವರ್ಗಾವಣೆಗೊಂಡಿದ್ದರು. ನಂತರ ಚಿಕ್ಕಮಗಳೂರು ಉಪವಿಭಾಗದ ಉಪವಿಭಾಗಾಧಿಕಾರಿಯಾಗಿ ಕಾರ್ಯನಿರ್ವಹಿಸಿದ ಅವರು, 2025ರಲ್ಲಿ ಮತ್ತೆ ಕುಂದಾಪುರಕ್ಕೆ ವರ್ಗಾವಣೆಗೊಂಡಿದ್ದರು. ಇದೀಗ ರಾಜ್ಯ ಸರ್ಕಾರದ ಆದೇಶದಂತೆ ಬೆಸ್ಕಾಂನ ಪ್ರಧಾನ ವ್ಯವಸ್ಥಾಪಕರಾಗಿ ಹೊಸ ಜವಾಬ್ದಾರಿ ವಹಿಸಿಕೊಳ್ಳಲಿದ್ದಾರೆ. ಕುಂದಾಪುರದ ನೂತನ ಉಪವಿಭಾಗಾಧಿಕಾರಿಯಾಗಿ ಮೈಸೂರು ನಗರಾಭಿವೃದ್ಧಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸೈಬರ್ ಕ್ರೈಮ್ಗೆ ಒಳಗಾಗುವವರು ಸಮಾಜದ ಸುಶಿಕ್ಷಿತ ವ್ಯಕ್ತಿಗಳೇ ಆಗಿದ್ದು, ಯಾವುದೇ ಎಪಿಕೆ ಫೈಲ್ಸ್ಗಳನ್ನು ತೆರೆಯುವ ಮುಂಚೆ, ಸುಳ್ಳು ಆಪಾದನೆ ಹೊರಿಸಿ ಸಿಕ್ಕಿಸಿ ಹಾಕುವಂಥ ಡಿಜಿಟಲ್ ಎರೆಸ್ಟ್ ನಂಥ ನಯವಂಚನೆಯ ಬಗ್ಗೆ ಎಚ್ಚರವಿರಬೇಕು. ಭೀತಿ ಹುಟ್ಟಿಸಿ ನಡೆಸುವ ಮೋಸದ ಜಾಲದಲ್ಲಿ, ಆ್ಯಪ್ಗಳ ಸಾಲದ ಸುಳಿಯಲ್ಲಿ ಸಿಲುಕದ ಹಾಗೆ ಜಾಗೃತರಾಗುವ ಮಾಹಿತಿಯನ್ನು ಯುವಜನರು ಪಡೆಯುತ್ತಿರಬೇಕು” ಎಂದು ಕುಂದಾಪುರ ಪೊಲೀಸ್ ಠಾಣಾಧಿಕಾರಿ ನಂಜ ನಾಯ್ಕ ಹೇಳಿದರು. ಅವರು ಕುಂದಾಪುರದ ಆರ್.ಎನ್.ಶೆಟ್ಟಿ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ಉಡುಪಿ ಜಿಲ್ಲಾ ಪೊಲೀಸ್ ಆಶ್ರಯದಲ್ಲಿ ಕುಂದಾಪುರ ಪೊಲೀಸ್ ಠಾಣೆ ಅವರು ಆಯೋಜಿಸಿದ ‘ಸೈಬರ್ ಕ್ರೈಮ್ ಜಾಗೃತಿ ಅಭಿಯಾನ’ ಕಾರ್ಯಕ್ರಮದಲ್ಲಿ ಕರೆ ನೀಡಿದರು. ಕುಂದಾಪುರ ಠಾಣೆಯ ಪ್ರೊಬೆಷನರಿ ಸಬ್ ಇನ್ಸ್ ಪೆಕ್ಟರ್ ಮಂಜುಳಾ ಹಮ್ಮರ್ ಅವರು ವಿದ್ಯಾರ್ಥಿನಿಯರು ಸಾಮಾಜಿಕ ಜಾಲತಾಣದ ಪೋರ್ಟಲ್ಸ್ ಬಳಸುವ ಮೊದಲು ಸೆಕ್ಯೂರಿಟಿ ವ್ಯವಸ್ಥೆಯನ್ನು ಸರಿಯಾಗಿ ಅಳವಡಿಸಿ, ಡೀಪ್ ಫೇಕ್ ತಂತ್ರಜ್ಞಾನದ ಬಗ್ಗೆ ಅತ್ಯಂತ ಜಾಗರೂಕರಾಗಿರಬೇಕು’ ಎಂದು ತಿಳಿಸಿದರು. ಕಾಲೇಜಿನ ಪ್ರಾಂಶುಪಾಲರಾದ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಎಕ್ಸೆಲ್ ಟೆಕ್ನೋ ಸ್ಕೂಲ್ ಗುರುವಾಯನಕೆರೆ ಇವರು ಏರ್ಪಡಿಸಿದ್ದ ಅಂತರ್ ಶಾಲಾ ರಾಪಿಡ್ ಚೆಸ್ ಟೂರ್ನಮೆಂಟ್ ನಲ್ಲಿ ಇತಿಹಾಸಿನಿ ಪಡುಕೋಣೆ ತೃತೀಯ ಸ್ಥಾನ ಗಳಿಸಿದ್ದಾಳೆ. ಇವಳು ಪಡುಕೋಣೆಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಾಲ್ಕನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾಳೆ. ಇವಳಿಗೆ ಮುಖ್ಯ ಶಿಕ್ಷಕರು, ಅಧ್ಯಾಪಕರು ಮತ್ತು ಶಾಲಾ ಅಭಿವೃದ್ಧಿ ಸಮಿತಿ ಅಭಿನಂದಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಇಲ್ಲಿನ ಕೋಟದ ಪಂಚವರ್ಣ ಯುವಕ ಮಂಡಲ ಹಾಗೂ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲದ ನೇತೃತ್ವದಲ್ಲಿ ಇದೇ ಬರುವ ನವೆಂಬರ್ 6ರಂದು ಕೋಟದಲ್ಲಿ ನಡೆಯಲಿರುವ ಪಂಚವರ್ಣ ರಾಜ್ಯೋತ್ಸವ ಸದ್ಭಾವನಾ ಕಾರ್ಯಕ್ರಮದ ಆಶಯಗೀತೆಯನ್ನು ಇತ್ತೀಚಿಗೆ ಕೋಟದ ಪಂಚವರ್ಣ ಕಚೇರಿಯಲ್ಲಿ ಇತ್ತೀಚಿಗೆ ಅನಾವರಣಗೊಳಿಸಲಾಯಿತು. ಸಾಹಿತಿ ಶಿಕ್ಷಕ ನರೇಂದ್ರ ಕುಮಾರ್ ಕೋಟ ರಚನೆ ಸಂಯೋಜನೆಯ ಸದ್ಭಾವನಾ ಎಂಬ ಗೀತೆಯನ್ನು ಶ್ರೀ ಕೃಷ್ಣಪ್ರಸಾದ್ ಫೌಂಡೇಶನ್ ಪ್ರವರ್ತಕ ಸಂಪತ್ ಕುಮಾರ್ ಶೆಟ್ಟಿ ಅನಾವರಣಗೊಳಿಸಿದರು. ಈ ಸಂದರ್ಭದಲ್ಲಿ ಸಮಾಜಕ್ಕಾಗಿ ಸದಾ ತುಡಿತ ಹೊಂದಿದ ಪಂಚವರ್ಣದಂತಹ ಸಂಘಟನೆ ರಾಜ್ಯಕ್ಕೆ ಮಾದರಿಯಾಗಿದೆ ಇಂತಹ ಸಂಸ್ಥೆಯ ಆಶಯಗೀತೆ ರಚಿಸಿದ ಸಾಹಿತಿ ನರೇಂದ್ರ ಕುಮಾರ್ ಕೋಟ ಕಾರ್ಯ ಶ್ಲಾಘಿಸಿ ಕಾರ್ಯಕ್ರಮಕ್ಕೆ ಶುಭಹಾರೈಸಿದರು. ಸಾಹಿತಿ ನರೇಂದ್ರ ಕುಮಾರ್ ಕೋಟ ಸದ್ಭವಾನ ಗೀತೆಯ ಪರಿಕಲ್ಪನೆಯನ್ನು ಸಭೆಯಲ್ಲಿ ತೆರೆದಿಟ್ಟರು. ಸಮಾಜಸೇವಕ ಅವಿನಾಶ್ ಕಾಮತ್,ಪಂಚವರ್ಣ ಸಂಘಟನೆಯ ಸ್ಥಾಪಕಾಧ್ಯಕ್ಷ ಶೇವಧಿ ಸುರೇಶ್ ಗಾಣಿಗ, ರೋಟರಿ ಸಮುದಾಯದಳ ಕೋಟೇಶ್ವರ ಅಧ್ಯಕ್ಷೆ ಸುಪ್ರಿತಾ ಪುರಾಣಿಕ್ ಉಪಸ್ಥಿತರಿದ್ದರು. ಮಹಿಳಾ ಮಂಡಲದ ಕಾರ್ಯಾಧ್ಯಕ್ಷೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಮೈಸೂರು ವಿಭಾಗ ಮಟ್ಟದ ದೇಶಭಕ್ತಿ ಗೀತಗಾಯನ ಸ್ಪರ್ಧೆಯಲ್ಲಿ ಆಳ್ವಾಸ್ ಶಾಲೆಯ ವಿದ್ಯಾರ್ಥಿಗಳು ಮೂರು ವಿಭಾಗಗಳಲ್ಲೂ ಪ್ರಥಮ ಸ್ಥಾನ ಗಳಿಸುವ ಮೂಲಕ ಗಮನಾರ್ಹ ಸಾಧನೆ ಮಾಡಿದ್ದಾರೆ. ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕದ ದಕ್ಷಿಣ ಕನ್ನಡ ಜಿಲ್ಲಾ ಸಂಸ್ಥೆ, ಪಂಜ ಸ್ಥಳೀಯ ಸಂಸ್ಥೆ ಹಾಗೂ ಸುಬ್ರಮಣ್ಯದ ಕುಮಾರಸ್ವಾಮಿ ವಿದ್ಯಾಲಯದ ಸಹಯೋಗದಲ್ಲಿ ಕುಮಾರಸ್ವಾಮಿ ವಿದ್ಯಾಲಯದಲ್ಲಿ ನಡೆದ ಸ್ಪರ್ಧೆಯಲ್ಲಿ ಆಳ್ವಾಸ್ ವಿದ್ಯಾರ್ಥಿಗಳು ಈ ಸಾಧನೆ ಮಾಡಿದ್ದಾರೆ. ಕ್ಲಬ್ ವಿಭಾಗದಲ್ಲಿ ಆಳ್ವಾಸ್ ಆಂಗ್ಲ ಮಾಧ್ಯಮ ಕಿರಿಯ ಪ್ರಾಥಮಿಕ ಶಾಲೆ, ಬುಲ್ಬುಲ್ ವಿಭಾಗದಲ್ಲಿ ಆಳ್ವಾಸ್ ಆಂಗ್ಲ ಮಾಧ್ಯಮ ಕಿರಿಯ ಪ್ರಾಥಮಿಕ ಶಾಲೆ ಹಾಗೂ ಸ್ಕೌಟ್ ವಿಭಾಗದಲ್ಲಿ ಆಳ್ವಾಸ್ ಕನ್ನಡ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆಯ ತಂಡಗಳು ಪ್ರಥಮ ಸ್ಥಾನ ಪಡೆದುಕೊಂಡಿವೆ. ಮೂರು ವಿಭಾಗಗಳಲ್ಲೂ ಪ್ರಥಮ ಸ್ಥಾನ ಗಳಿಸಿದ ಆಳ್ವಾಸ್ನ ಮೂರು ತಂಡಗಳು ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿವೆ. ವಿದ್ಯಾರ್ಥಿಗಳ ಈ ಸಾಧನೆಗೆ ಸಂಸ್ಥೆಯ ಅಧ್ಯಕ್ಷ ಡಾ ಎಂ ಮೋಹನ ಆಳ್ವ ಅಭಿನಂದನೆ ಸಲ್ಲಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಶಿಕ್ಷಣ ಸಮಾಜದಲ್ಲಿ ಬದಲಾವಣೆ ತರುತ್ತದೆ. ಗುಣಮಟ್ಟದ ಶಿಕ್ಷಣವು ಜವಾಬ್ದಾರಿಯುತ ನಾಗರೀಕನಾಗಿಸುತ್ತದೆ. ಪ್ರತಿಯೊಬ್ಬರಿಗೂ ಶಿಕ್ಷಣವಂತರಾಗುವಂತೆ ನೋಡಿಕೊಳ್ಳಬೇಕೆಂದು ಎಂದು ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷರಾದ ಯು. ನಿಸಾರ್ ಅಹ್ಮದ್ ಅಧಿಕಾರಿಗಳಿಗೆ ಸೂಚನೆ ನೀಡಿದರು ಅವರು ಬುಧವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಪ್ರಧಾನಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮದ ಅನುಷ್ಠಾನದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಶಿಕ್ಷಣ ಇಲ್ಲದಿದ್ದಲ್ಲಿ ರಾಜ್ಯ ಅಭಿವೃದ್ಧಿ ಹೊಂದಲು ಸಾಧ್ಯವಿಲ್ಲ. ಅಲ್ಪಸಂಖ್ಯಾತ ಸಮುದಾಯದಲ್ಲಿ ಮುಸ್ಲಿಂ, ಕ್ರಿಶ್ಚಿಯನ್, ಸಿಖ್, ಜೈನ, ಬುದ್ಧ ಹಾಗೂ ಪಾರ್ಸಿ ಸಮುದಾಯಗಳು ಸೇರಿದಂತೆ ಯಾರೊಬ್ಬ ಮಕ್ಕಳು ಶಿಕ್ಷಣದಿಂದ ಹೊರಗುಳಿಯದಂತೆ ನೋಡಿಕೊಳ್ಳಬೇಕು ಎಂದರು. ಸರಕಾರಿ ಶಾಲೆಗಳಿಗೆ ನಿನ್ನೆ ಭೇಟಿ ನೀಡಿದ ಸಂದರ್ಭದಲ್ಲಿ ಮಕ್ಕಳ ಸಂಖ್ಯೆ 25 ರಿಂದ 30 ಕಂಡುಬಂದಿದೆ. ಸರಕಾರಿ ಶಾಲೆಗಳಲ್ಲಿ ಮಕ್ಕಳ ಸಂಖ್ಯೆ ಹೆಚ್ಚಿಸಲು ಗುಣಮಟ್ಟದ ಶಿಕ್ಷಣವನ್ನು ನೀಡಿದಲ್ಲಿ ಮಕ್ಕಳ ಸಂಖ್ಯೆ ಹೆಚ್ಚುತ್ತದೆ. ಇದಕ್ಕೆ ಒತ್ತು ನೀಡಬೇಕು. ಇದರ ಜೊತೆಯಲ್ಲಿ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಕೊಂಕಣ ರೈಲ್ವೆಯನ್ನು ಭಾರತೀಯ ರೈಲ್ವೆಯಲ್ಲಿ ವಿಲೀನಗೊಳಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಉಡುಪಿ – ಚಿಕ್ಕಮಂಗಳೂರು ಕ್ಷೇತ್ರದ ಲೋಕಸಭಾ ಸದಸ್ಯರಾದ ಕೋಟ ಶ್ರೀನಿವಾಸ ಪೂಜಾರಿ ಅವರು ಮಹಾರಾಷ್ಟ್ರದ ಮುಖ್ಯಮಂತ್ರಿ ದೇವೇಂದ್ರ ಪಡ್ನವಿಸ್ ಅವರನ್ನು ಮುಂಬೈಯ ಮಂತ್ರಾಲಯದಲ್ಲಿ ಭೇಟಿ ಮಾಡಿ ಚರ್ಚಿಸಿದರು. ಮಾಜಿ ರಕ್ಷಣಾ ಸಚಿವರಾದ ದಿ. ಜಾರ್ಜ್ ಫೆರ್ನಾಂಡಿಸ್ ಅವರ ಮೂಲಕ ಕರಾವಳಿ ಪ್ರಯಾಣಿಕರ ಜೀವನಾಡಿಯಾಗಿ ರೂಪುಗೊಂಡ ಕೊಂಕಣ ರೈಲ್ವೆ ಆರ್ಥಿಕ ಮುಗ್ಗಟ್ಟಿನ ಸಂಕಷ್ಟದಲ್ಲಿದೆ. ಸುಮಾರು 750 ಕಿ.ಮೀ ಉದ್ದದ ಕೊಂಕಣ ರೈಲ್ವೆಯ ಮಾರ್ಗವನ್ನು ಅಭಿವೃದ್ಧಿಪಡಿಸಲು ಹಾಗೂ ಭವಿಷ್ಯದ ಸಂಚಾರ ಬೆಳವಣಿಗೆಯ ಸಾಮರ್ಥ್ಯ ಹೆಚ್ಚಿಸಲು ಇಡೀ ಮಾರ್ಗವನ್ನು ದ್ವಿಗುಣಗೊಳಿಸುವ ಅನಿವಾರ್ಯವಾಗಿದೆ. ಒಂದು ಅಂದಾಜಿನ ಪ್ರಕಾರ ಮಾರ್ಗದ ಹಳಿಗಳನ್ನು ದ್ವಿಗುಣಗೊಳಿಸುವುದು ಮತ್ತು ತುಂಬಾ ಅವ್ಯವಸ್ಥೆಯಲ್ಲಿರುವ ರೈಲ್ವೆ ನಿಲ್ದಾಣಗಳನ್ನು ಉತ್ತಮವಾಗಿ ನಿರ್ಮಾಣ ಮಾಡಲು 40,000 ಕೋಟಿ ರೂಪಾಯಿಗಳ ಅಗತ್ಯವಿದೆ, ಇಷ್ಟು ಹಣವನ್ನು ಬರಿಸಲು ಕೊಂಕಣ ರೈಲ್ವೆಯ ಆರ್ಥಿಕ ಸ್ಥಿತಿ ಸಹಕಾರಿಯಾಗಿಲ್ಲ. ಕೊಂಕಣ ರೈಲ್ವೆ ಹಾದುಹೋಗುವ ರಾಜ್ಯ ಸರಕಾರಗಳು ತಮ್ಮ ಪಾಲಿನ ಶೇರ್ಗಳನ್ನು ಬಿಟ್ಟುಕೊಟ್ಟರೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಅಂಪಾರು ರೋಟರಿ ಕ್ಲಬ್ನ ಆಶ್ರಯದಲ್ಲಿ ನಡೆದ ವಲಯ ಮಟ್ಟದ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ರೋಟರಿ ಕ್ಲಬ್ ಕೋಟ ಬ್ರಿಗೇಡ್ಗೆ ರನ್ನರ್ಸ್ ಪ್ರಶಸ್ತಿ ಪಡೆದುಕೊಂಡಿತು. ಯುಗಳ ಗೀತೆ ಪ್ರಥಮ, ಏಕ ವ್ಯಕ್ತಿಗಾಯನ ದ್ವಿತೀಯ, ಸಮೂಹ ನೃತ್ಯ ದ್ವಿತೀಯ, ಏಕ ಪಾತ್ರಾಭಿನಯ ದ್ವಿತೀಯ, ರಂಗೋಲಿ ದ್ವಿತೀಯ ಹಾಗೂ ಚಿತ್ರಕಲೆಗೆ ಪ್ರಥಮ ಪ್ರಶಸ್ತಿ ಲಭಿಸಿದೆ. ಈ ಸ್ಪರ್ಧೆಯಲ್ಲಿ ವಲಯದ ಏಳು ಕ್ಲಬ್ಗಳು ಭಾಗವಹಿಸಿದ್ದು, ಅ.25ರಂದು ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ರೋಟರಿ ಅಸಿಸ್ಟೆಂಟ್ ಗವರ್ನರ್ ಸುಧಾಕರ್ ಶೆಟ್ಟಿ ಹಾಗೂ ಗಣ್ಯರು ಕ್ಲಬ್ನ ಅಧ್ಯಕ್ಷ ಪ್ರಕಾಶ್ ಪೂಜಾರಿ ಬನ್ನಾಡಿ ಮತ್ತು ಸದಸ್ಯರು ಇದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಗೆ ಒಳಪಡುವ ಗಂಗೊಳ್ಳಿ ಪೊಲೀಸ್ ಠಾಣೆಯು ಇಡೀ ರಾಜ್ಯದಲ್ಲಿ 7ನೇ ಅತ್ಯುತ್ತಮ ಠಾಣೆಯಾಗಿ ಹೊರಹೊಮ್ಮಿರುವ ಬಗ್ಗೆ ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರುರಾಜ್ ಶೆಟ್ಟಿ ಅವರು ಪೊಲೀಸ್ ಠಾಣೆಯ ಠಾಣಾಧಿಕಾರಿ ಹಾಗೂ ಸಿಬ್ಬಂದಿಗಳಿಗೆ ಗೌರವನ್ನು ಸಮರ್ಪಿಸಿದರು. ಬಳಿಕ ಮಾತನಾಡಿದ ಶಾಸಕರು ಕಳೆದ 10 ವರ್ಷಗಳ ಅವಧಿಯಲ್ಲಿ ರಾಜ್ಯದಲ್ಲಿ ಅತ್ಯುತ್ತಮವಾಗಿ ಕಾರ್ಯನಿರ್ವಹಿಸಿದ ರಾಜ್ಯದ 10 ಠಾಣೆಗಳ ಪೈಕಿ ಬೈಂದೂರು ವಿಧಾನಸಭಾ ಕ್ಷೇತ್ರದ ಗಂಗೊಳ್ಳಿ ಪೊಲೀಸ್ ಠಾಣೆಯು ಅಪರಾಧಗಳ ಪತ್ತೆ ಹಚ್ಚುವಿಕೆ, ಸಾರ್ವಜನಿಕರೊಂದಿಗೆ ಸಂಪರ್ಕ, ಜನಸ್ನೇಹಿ ಪೊಲೀಸಿಂಗ್, ಮಾದಕ ದ್ರವ್ಯ ತಡೆ ಕಾಯ್ದೆಯ ಪರಿಣಾಮಕಾರಿ ಅನುಷ್ಠಾನ ಸಂಬಂಧ ಇಡೀ ರಾಜ್ಯದಲ್ಲಿಯೇ 7ನೇ ಸ್ಥಾನ ಪಡೆದಿರುವುದು ಸಂತೋಷದ ವಿಚಾರ. ಈ ನಿಟ್ಟಿನಲ್ಲಿ ಈ ಸಾಧನೆಗಾಗಿ ದುಡಿದ ಈ ಹಿಂದಿನ ಠಾಣಾಧಿಕಾರಿಗಳು ಸೇರಿದಂತೆ ಎಲ್ಲಾ ಸಿಬ್ಬಂದಿ ವರ್ಗದವರಿಗೆ ಅಭಿನಂದನೆಗಳು. ಗಂಗೊಳ್ಳಿ ಠಾಣೆಯ ಕಾರ್ಯ ವೈಖರಿಯು ಕ್ಷೇತ್ರದ ಹಾಗೂ ಜಿಲ್ಲೆಯ ಇತರ ಠಾಣೆಗಳಿಗೂ ಮಾದರಿಯಾಗಲಿ, ಎಂದು ಶಾಸಕರು ಇದೇ ಸಂದರ್ಭದಲ್ಲಿ…
