ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕರಾವಳಿ ಪದ್ಮಶಾಲಿಗರ ಮೂಲ ಕ್ಷೇತ್ರ ಬಾರ್ಕೂರು ಶ್ರೀ ಬ್ರಹ್ಮಲಿಂಗ ವೀರಭದ್ರ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಮಾಸಿಕ ಸಭೆಯಲ್ಲಿ ಯುವ ವೇದಿಕೆ ಮತ್ತು ಶ್ರೀ ದುರ್ಗಾಪರಮೇಶ್ವರಿ ಮಹಿಳಾ ವೇದಿಕೆಯ ಆಶ್ರಯದಲ್ಲಿ ದೇವಸ್ಥಾನದ ಕೂಡುಕಟ್ಟಿಗೆ ಸೇರಿದ 5ನೇ ತರಗತಿಯಿಂದ ಪದವಿಯವರೆಗೆ ಮೂರು ವಿಭಾಗದಲ್ಲಿ ಅಂದದ ಕೈಬರಹ ಹಾಗೂ ಪ್ರಬಂಧ ಸ್ಪರ್ಧೆ “ಅಕ್ಷರ ಸಿರಿ” ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಈ ಸ್ಪರ್ಧೆಯಲ್ಲಿ ಒಟ್ಟು 23 ವಿದ್ಯಾರ್ಥಿಗಳು ಭಾಗವಹಿಸಿದ್ದರು. ಬಹುಮಾನ ವಿಜೇತರಾದ ಪ್ರಥಮ ವಿಭಾಗದಲ್ಲಿ ಶ್ವೇತಾಂಶ್ ಚೇರ್ಕಾಡಿ, ನಿರೀಕ್ಷಾ ಶೆಟ್ಟಿಗಾರ್, ಕಿಶನ್ ಸಾಸ್ತಾನ. ದ್ವಿತೀಯ ವಿಭಾಗದಲ್ಲಿ ಆರಾಧ್ಯ ಶೆಟ್ಟಿಗಾರ ನೀಲಾವರ, ಹರ್ಷಿತಾ ಬ್ರಹ್ಮಾವರ, ಐಶ್ವರ್ಯ ಜಪ್ತಿ, ತೃತೀಯ ವಿಭಾಗದಲ್ಲಿ ಧನುಶ್ರೀ ಎಡಬೆಟ್ಟು, ಸ್ಮಿತಾ ಕೊಪ್ಪ, ಸಂಜನಾ ರಂಗನಕೇರಿ ಮತ್ತು ಸಮಾಧಾನಕರ ಬಹುಮಾನ ಪಡೆದ ಎಲ್ಲಾ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಇದೇ ಸಂದರ್ಭದಲ್ಲಿ ದೇಗುಲದಲ್ಲಿ 234ನೇ ಮಾಸಿಕ ಸತ್ಯನಾರಾಯಣ ಪೂಜೆ, ಶತರುದ್ರಾಭಿಷೇಕ, ಮೂಡು ಗಣಪತಿ, ಪರಿವಾರ ದೈವಗಳಿಗೆ ವಿಶೇಷ ಪೂಜೆಯನ್ನು ಸೇವಾ ಕರ್ತರಾದ ಬಾರ್ಕೂರು…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನ ಕೃಷಿ ತಂತ್ರಜ್ಞಾನ ವಿಭಾಗದ ವಿದ್ಯಾರ್ಥಿಗಳಾದ ಚಂದನ್ ಬಿ.ಎಂ, ಉಸ್ಮಾ, ಪ್ರೇಕ್ಷಾ ಹಾಗೂ ಸಾವನ್ ಶೆಟ್ಟಿ ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಪರಿಷತ್ತು ಶಿವಮೊಗ್ಗದ ಜವಾಹರಲಾಲ್ ನೆಹರು ನ್ಯಾಷನಲ್ ಕಾಲೇಜ್ ಆಫ್ ಎಂಜಿನಿಯರಿಂಗ್ನಲ್ಲಿ ಆಯೋಜಿಸಿದ್ದ 48ನೇ ಸರಣಿಯ ರಾಜ್ಯ ಮಟ್ಟದ ವಿದ್ಯಾರ್ಥಿ ಪ್ರಾಜೆಕ್ಟ್ ಪ್ರದರ್ಶನದಲ್ಲಿ ಅವರು ತಯಾರಿಸಿದ ಪ್ರಾಜೆಕ್ಟ್ಗೆ ’ವರ್ಷದ ಅತ್ಯುತ್ತಮ ಪ್ರಾಜೆಕ್ಟ್’ ಪ್ರಶಸ್ತಿ ಲಭಿಸಿತು. ಒಟ್ಟು ಈ ವಿಭಾಗದಲ್ಲಿ 496 ಪ್ರಾಜೆಕ್ಟ್ಗಳು ಸ್ಪರ್ಧೆಗೆ ಆಗಮಿಸಿದ್ದವು. ಮೆಕ್ಕುಜೋಳದ ಒಣಗಿದ ಸಿಪ್ಪೆಯಿಂದ ಕಪ್ ತಯಾರಿಕಾ ಯಂತ್ರದ ಅಭಿವೃದ್ಧಿಗಾಗಿ ಈ ಪ್ರಶಸ್ತಿ ಪಡೆದುಕೊಂಡರು. ಪರಿಸರ ಸ್ನೇಹಿ ಆವಿ?ರ ಮತ್ತು ದಕ್ಷತೆಯ ಹಿನ್ನೆಲೆಯಲ್ಲಿ ಈ ಪ್ರಾಜೆಕ್ಟ್ ಮೌಲ್ಯಮಾಪನಾ ಸಮಿತಿಯ ಸದಸ್ಯರ ಮೆಚ್ಚುಗೆಗೆ ಪಾತ್ರವಾಯಿತು. ಈ ಪ್ರಾಜೆಕ್ಟ್ಗೆ ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನ ಕೃಷಿ ತಂತ್ರಜ್ಞಾನ ವಿಭಾಗದ ಮುಖ್ಯಸ್ಥ ಪ್ರೊ. ಡಾ. ಕೆ. ವಿ. ಸುರೇಶ್ ಮಾರ್ಗದರ್ಶನ ನೀಡಿದ್ದರು. ವಿದ್ಯಾರ್ಥಿಗಳ ಸಾಧನೆಯನ್ನು ಸಂಸ್ಥೆಯ ಅಧ್ಯಕ್ಷ ಡಾ. ಎಂ. ಮೋಹನ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸಿಐಎಸ್ಸಿಇ ಗೇಮ್ಸ್ ಮತ್ತು ಸ್ಪೋರ್ಟ್ಸ್- 2025ರ ಅಂಗವಾಗಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯಲ್ಲಿ ನಡೆದ ಪ್ರಾದೇಶಿಕ ಮಟ್ಟದ ಕೇರಮ್ ಟೂರ್ನಮೆಂಟ್ ಸ್ಪರ್ಧೆಯ ಉದ್ಘಾಟನಾ ಸಮಾರಂಭವು ಮಂಗಳವಾರ ನಡೆಯಿತು. ಈ ಸ್ಪರ್ಧೆಯನ್ನು ಉಡುಪಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಲೋಕೇಶ್ ಸಿ. ವೈಜ್ಞಾನಿಕ ರೀತಿಯಲ್ಲಿ ಉದ್ಘಾಟಿಸಿ, ಮಾತನಾಡಿ, ಕ್ರೀಡೆ ವಿದ್ಯಾರ್ಥಿ ಜೀವನದ ಅವಿಭಾಜ್ಯ ಅಂಗ. ಸ್ಪರ್ಧೆಗಳು ಆರೋಗ್ಯಕರವಾಗಿರಬೇಕು. ಇಂದಿನ ಕಾರ್ಯಕ್ರಮದಲ್ಲಿ ಉಪಸ್ಥಿತರಿರುವ ದೀಕ್ಷಿತಾ ಆರ್ ಗೌಡ ಅವರು ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದ ಅಥ್ಲೆಟಿಕ್ ಚಾಂಪಿಯನ್ ಆಗಿದ್ದಾರೆ. ಅವರ ಸಾಧನೆ ನಮ್ಮ ವಿದ್ಯಾರ್ಥಿಗಳಿಗೆ ಸ್ಫೂರ್ತಿದಾಯಕವಾಗಿದೆ. ಸೋಲು ಗೆಲುವು ಎರಡನ್ನು ಸಮಾನವಾಗಿ ಸ್ವೀಕರಿಸಬೇಕು. ಸೋಲೇ ಗೆಲುವಿನ ಸೋಪಾನ. ಸಾಧಕನಿಗೆ ಮುಂದಿನ ಹಂತದಲ್ಲಿ ಅವಕಾಶಗಳು ಇದ್ದೇ ಇರುತ್ತವೆ. ಅವುಗಳನ್ನು ಸಮರ್ಥವಾಗಿ ಎದುರಿಸಲು ಸೋಲೂ ಪಾಠವಾಗಿರುತ್ತದೆ. ಸಿಕ್ಕ ಅವಕಾಶಗಳನ್ನು ಸಮರ್ಪಕವಾಗಿ ಬಳಸಿಕೊಳ್ಳುವವನೇ ಸಾಧನೆಯನ್ನು ಮಾಡಲು ಸಾಧ್ಯ ಎಂದರು. ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದ ಅಥ್ಲೆಟಿಕ್ ಚಾಂಪಿಯನ್ ದೀಕ್ಷಿತಾ ಆರ್ ಗೌಡ ಅವರು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಐ.ಎ.ಎಸ್ / ಕೆ.ಎ.ಎಸ್ ಗೆಜೆಟೆಡ್ ಪ್ರೋಬೇಷನರ್ ಮತ್ತು ಗ್ರೂಪ್ ಸಿ ಆರ್.ಆರ್.ಬಿ & ಎಸ್.ಎಸ್.ಸಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ವಸತಿ ಸಹಿತ ಪರೀಕ್ಷಾ ಪೂರ್ವ ತರಬೇತಿಯನ್ನು ನೀಡಲಾಗುತ್ತಿದ್ದು, ಸದರಿ ತರಬೇತಿಗೆ ಅರ್ಹ ಅಲ್ಪಸಂಖ್ಯಾತರ ಸಮುದಾಯದ ಅಭ್ಯರ್ಥಿಗಳಿಂದ ಸೇವಾಸಿಂಧು ತಂತ್ರಾAಶ https://sevasindhu.karnataka.gov.in ಮತ್ತು https://dom.karnataka.gov.in ನಲ್ಲಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ಆಗಸ್ಟ್ 11 ರ ವರೆಗೆ ವಿಸ್ತರಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಸಹಾಯವಾಣಿ ಸಂಖ್ಯೆ: 8277799990 ಅಥವಾ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಮೌಲಾನಾ ಆಜಾದ್ ಭವನ, ಅಲೆವೂರು ರಸ್ತೆ, ಮಣಿಪಾಲ ದೂ.ಸಂಖ್ಯೆ: 0820-2573596 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಕೋಟೇಶ್ವರ ಕರ್ನಾಟಕ ಪಬ್ಲಿಕ್ ಸ್ಕೂಲ್ ಪದವಿ ಪೂರ್ವ ವಿಭಾಗದಲ್ಲಿ ಉಡುಪಿ ಜಿಲ್ಲಾ ಮಟ್ಟದ ರಾಜ್ಯಶಾಸ್ತ್ರ ವಿಷಯದ ಪುನಶ್ಚೇತನ ಕಾರ್ಯಕ್ರಮ ನಡೆಯಿತು. ಕುಂದಾಪುರ ಭಂಡಾರ್ಕಾಕರ್ಸ್ ಕಾಲೇಜಿನ ಪ್ರಾಂಶುಪಾಲರಾದ ಡಾ. ಶುಭಾಕರಾಚಾರಿ ಕಾರ್ಯಕ್ರಮ ಉದ್ಘಾಟಿಸಿ, ಮಾತನಾಡಿ, ಪ್ರಜಾಪ್ರಭುತ್ವದ ಮೌಲ್ಯವನ್ನು ಎತ್ತಿ ಹಿಡಿಯಬೇಕಾದರೆ ಸಂವಿಧಾನದ ಒತ್ತಾಸೆಯಲ್ಲಿ ಜೀವನ ಮಾಡಬೇಕು. ಬಂದಂತಹ ಸವಾಲುಗಳನ್ನು ಮಾತುಕತೆಗಳ ಮೂಲಕ ಉಪನ್ಯಾಸಕರು ಸೇರಿ ಬಗೆಹರಿಸಿ ಭವ್ಯ ಭಾರತವನ್ನು ನಿರ್ಮಾಣ ಮಾಡಬೇಕು. ಆ ನಿಟ್ಟಿನಲ್ಲಿ ರಾಜ್ಯ ಶಾಸ್ತ್ರ ಉಪನ್ಯಾಸಕರು ಎಲ್ಲಾ ವಿದ್ಯಾರ್ಥಿಗಳೊಂದಿಗೆ ಸೇರಿ ಚಿಂತನ-ಮಂಥನ ಮಾಡಿ ಆ ಮೂಲಕ ವಿದ್ಯಾರ್ಥಿಗಳಿಗೆ ಉತ್ತಮ ಮಾರ್ಗದರ್ಶನ ನೀಡುವ ಮೂಲಕ ಪ್ರಜಾಪ್ರಭುತ್ವದಲ್ಲಿ ಜವಾಬ್ದಾರಿಯುತವಾದ ವ್ಯಕ್ತಿಯಾಗಿ ರೂಪಿಸುವ ಹೊಣೆ ಪ್ರತಿಯೊಬ್ಬ ಉಪನ್ಯಾಸಕರ ಮೇಲಿದೆ ಎಂದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೋಟೇಶ್ವರ ಕರ್ನಾಟಕ ಪಬ್ಲಿಕ್ ಸ್ಕೂಲ್ ಪ್ರಾಂಶುಪಾಲರಾದ ಪ್ರಕಾಶ್ ಶೆಟ್ಟಿ ವಹಿಸಿದ್ದರು. ವೇದಿಕೆಯಲ್ಲಿ ಚಂದ್ರನಾಥ್ ಎಂ. ಸರ್ಕಾರಿ ಪದವಿ ಪೂರ್ವ ಕಾಲೇಜು ಚೇಳಾರು, ಅವರು ದ್ವಿತೀಯ ಪಿಯುಸಿ ವಿಷಯ ವಸ್ತುವನ್ನು, ಇಂದಿನ ಶೈಕ್ಷಣಿಕ ಸನ್ನಿವೇಶಗಳನ್ನು ಪಿಪಿಟಿಯ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಪೋಲಿಸ್ ಇಲಾಖೆ ಜಿಲ್ಲೆಯಲ್ಲಿ ಸ್ಪಷ್ಠವಾಗಿ ಕಾರ್ಯನಿರ್ವಹಿಸುತ್ತಿದೆ. ಏರುತ್ತಿರುವ ಜನಸಂಖ್ಯೆ, ನಗರೀಕರಣ ಹಿನ್ನಲ್ಲೆಯಲ್ಲಿ ಠಾಣಾ ವ್ಯಾಪ್ತಿಯಲ್ಲಿ ಹೊಸ ಹೊಸ ಯೋಜನೆ ಯೋಚನೆ ಅಗತ್ಯವಾಗಿದೆ. ಈ ಹಿನ್ನಲ್ಲೆಯಲ್ಲಿ ಜಿಲ್ಲಾದ್ಯಂತ ದೃಷ್ಠಿ ಯೋಜನೆಯನ್ನು ಕರಾರುವಾಕ್ಕಾಗಿ ಅನುಷ್ಠಾನಗೊಳಿಸಲು ಚಿಂತನೆ ನಡೆಸಿದ್ದೇವೆ. ಅದಕ್ಕಾಗಿ ಸಾಲಿಗ್ರಾಮದಲ್ಲಿ ಚಾಲನೆ ನೀಡಿದ್ದೇವೆ. ಇದನ್ನು ಸಮರ್ಪಕವಾಗಿ ಬಳಸಿಕೊಳ್ಳಿ ಎಂದು ಉಡುಪಿ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಹೇಳಿದರು. ಅವರು ಸಾಲಿಗ್ರಾಮ ಶ್ರೀ ಗುರುನರಸಿಂಹ ದೇಗುಲದ ಪ್ರಾಂಗಣದಲ್ಲಿ ಉಡುಪಿ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿಗಳ ಮಾರ್ಗದರ್ಶನದಲ್ಲಿ ಜಂಬೋ ಸ್ಟಾರ್ ಸೆಕ್ಯೂರಿಟಿ ಮತ್ತು ಫೆಸಿಲಿಟಿ ಸರ್ವಿಸಸ್ ಸಾಲಿಗ್ರಾಮ ಸಂಯೋಜನೆಯೊಂದಿಗೆ ದೃಷ್ಠಿ ಯೋಜನೆಗೆ ಚಾಲನೆ ನೀಡಿ ಮಾತನಾಡಿದರು. ರಕ್ಷಣಾ ವ್ಯವಸ್ಥೆಗೆ ದೃಷ್ಟಿ ಯೋಜನೆ ಪರಿಣಾಮಕಾರಿಯಾಗಿ ಕಾರ್ಯನಿರ್ವಹಸಲಿದೆ, ಪೋಲಿಸ್ ವ್ಯವಸ್ಥೆಯೊಂದಿಗೆ ಜಂಬೋ ಸೆಕ್ಯೂರಿಟಿ ಸಂಸ್ಥೆ ನಿಖರವಾಗಿ ಕಾರ್ಯನಿರ್ವಹಿಸಿ ಅಹಿತಕರ ಘಟನೆಗಳು ಸೇರಿದಂತೆ ಘಟನಾ ಮುಕ್ತ ಜಿಲ್ಲೆಯಾಗಿಸಲು ಸಹಕಾರಿಯಾಗಲಿದೆ ಎಂದು ಗ್ರಾಮಸ್ಥರು ಸಾರ್ವಜನಿಕರು ಕೈಜೋಡಿಸುವಂತೆ ಕರೆ ನೀಡಿದರು. ಜಂಬೋ ಸ್ಟಾರ್ ಸೆಕ್ಯೂರಿಟಿ ಮತ್ತು ಫೆಸಿಲಿಟಿ ಸರ್ವಿಸಸ್…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಶ್ರೀ ಗುರುನರಸಿಂಹ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘ ಸಾಲಿಗ್ರಾಮ ಇದರ 15ನೇಯ ವಾರ್ಷಿಕ ಸಾಮಾನ್ಯ ಸಭೆಯು ಇತ್ತೀಚಿಗೆ ಸಾಲಿಗ್ರಾಮದ ಗಿರಿಜಾ ಕಲ್ಯಾಣ ಮಂಟಪ ಸಭಾಂಗಣದಲ್ಲಿ ಜರಗಿತು. ಶ್ರೀ ಗುರುನರಸಿಂಹ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘ ಅಧ್ಯಕ್ಷ ಆನಂದ ಸಿ. ಕುಂದರ್ ಅಧ್ಯಕ್ಷತೆ ವಹಿಸಿ ಮಾತನಾಡಿ, ಗತ ವರ್ಷದಲ್ಲಿ ಸಂಘವು ಸದಸ್ಯರಿಂದ ರೂ. 15.00 ಕೋಟಿಗೂ ಅಧಿಕ ಠೇವಣಿ ಸಂಗ್ರಹಿಸಿ ರೂ. 14.00 ಕೋಟಿಗೂ ಅಧಿಕ ಸಾಲ ವಿತರಿಸಿದ್ದು ಶೇ. 99.76ರ ವಸೂಲಾತಿ ಕ್ರಮಗಳನ್ನು ಕೈಗೊಂಡಿದೆ. ಸಂಘವು ಆರಂಭದಿಂದಲೂ ಪ್ರಜ್ಞಾವಂತ ಸದಸ್ಯರ ಸಕ್ರಿಯ ಪಾಲ್ಗೊಳ್ಳುವಿಕೆ, ದಕ್ಷ ಆಡಳಿತ ಮಂಡಳಿಯ ಮಾರ್ಗದರ್ಶನ ಮತ್ತು ನಿಷ್ಟಾವಂತ ಸಿಬಂಧಿಯವರ ಪ್ರಾಮಾಣಿಕ ಸೇವೆಯಿಂದ ಲಾಭದಲ್ಲಿ ಮುನ್ನಡೆಯುತ್ತಿರುವುದರ ಬಗ್ಗೆ ಮೆಚ್ಚುಗೆ ವ್ಯಕ್ತ ಪಡಿಸಿದರು. ಪ್ರಸ್ತುತ ಸಾಲಿನಲ್ಲಿ ಸಂಘಕ್ಕೆ ಸುಸ್ಸಜ್ಜಿತ ಕಟ್ಟಡ ನಿರ್ಮಿಸಿ ಮುಂದಿನ ಸಾಲಿನಿಂದ ವಾರ್ಷಿಕ ಸಾಮಾನ್ಯ ಸಭೆಯನ್ನು ಸಂಘದ ಕಟ್ಟಡದಲ್ಲಿಯೇ ಜರುಗಿಸುವ ಉದ್ದೇಶ ಹೊಂದಿರುವುದಾಗಿ ತಿಳಿಸಿ ಸಂಘದ ವಿವಿಧ ಸೇವೆಗಳ ಸದುಪಯೋಗ ಪಡೆಯುವಂತೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: 15ನೇ ಆವೃತ್ತಿಯ `ಆಳ್ವಾಸ್ ಪ್ರಗತಿ’ ಬೃಹತ್ ಉದ್ಯೋಗ ಮೇಳ ಇತ್ತೀಚಿಗೆ ವಿದ್ಯಾಗಿರಿ ಕ್ಯಾಂಪಸ್ನಲ್ಲಿ ಸಮಾಪನಗೊಂಡಿತು. ಎರಡು ದಿನಗಳ ಕಾಲ ನಡೆದ ಉದ್ಯೋಗ ಮೇಳದಲ್ಲಿ 2873 ಉದ್ಯೋಗಾಕಾಂಕ್ಷಿಗಳನ್ನು ಸ್ಥಳದಲ್ಲಿಯೇ ನೇಮಕಾತಿ ಮಾಡಿಕೊಳ್ಳಲಾಯಿತು. ಭಾಗವಹಿಸಿದ ಒಟ್ಟು 288 ಕಂಪನಿಗಳ ಪೈಕಿ 260 ಕಂಪೆನಿಗಳು, 3734 ಜನರನ್ನು ಮುಂದಿನ ಹಂತಕ್ಕೆ ಆಯ್ಕೆ ಮಾಡಿವೆ. ಒಟ್ಟು 14,245 ಅಭ್ಯರ್ಥಿಗಳು 2 ದಿನದ ಆಳ್ವಾಸ್ ಪ್ರಗತಿ ಉದ್ಯೋಗ ಮೇಳದಲ್ಲಿ ಭಾಗವಹಿಸಿದರು.ದುಬೈ ಮೂಲದ ಫಾರ್ಚುನ್ ಸಂಸ್ಥೆಯು 5 ಅಭ್ಯರ್ಥಿಗಳನ್ನು 5 ರಿಂದ 8 ಲಕ್ಷ ವಾರ್ಷಿಕ ವೇತನದ ಹುದ್ದೆಗೆ ಆಯ್ಕೆ ಮಾಡಿದ್ದು, 25 ಅಭ್ಯರ್ಥಿಗಳು ಮುಂದಿನ ಹಂತಕ್ಕೆ ಆಯ್ಕೆಗೊಂಡಿದ್ದಾರೆ.. ನಾರಾಯಣ ಹೃದಯಾಲಯವು 43 ಅಭ್ಯರ್ಥಿಗಳನ್ನು ಆಯ್ಕೆ ಮಾಡಿದೆ ಮತ್ತು ಅಂತಿಮ ಸುತ್ತಿನ ಸಂದರ್ಶನಕ್ಕೆ 28 ಅಭ್ಯರ್ಥಿಗಳನ್ನು ಶಾರ್ಟ್ಲಿಸ್ಟ್ ಮಾಡಿದೆ. ಝೀ ಎಂಟರ್ಟೈನ್ಮೆಂಟ್ ಕಂಪೆನಿಯು ಅಂತಿಮ ಸುತ್ತಿಗೆ 11 ಅಭ್ಯರ್ಥಿಗಳನ್ನು ಆಯ್ಕೆ ಮಾಡಿದೆ. ಸೌದಿ ಅರೇಬಿಯಾ ಮೂಲದ ಎಕ್ಪರ್ಟೈಸ್ ಕಂಪೆನಿಯು 37 ಜನರನ್ನು ನೇಮಿಸಿಕೊಂಡಿದೆ. ಮುಂಬೈ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಇಲ್ಲಿನ ಹೊಸಬಡಾಕೆರೆ ಸ.ಹಿ.ಪ್ರಾ. ಶಾಲೆಯಲ್ಲಿ ಸುಮಾರು 23 ವರ್ಷಗಳ ಕಾಲ ಸೇವೆ ಸಲ್ಲಿಸಿ ಜು. 30ರಂದು ನಿವೃತ್ತರಾದ ಸಹಶಿಕ್ಷಕ ಅನಂತಯ್ಯ ನಾವಡ ಇವರಿಗೆ ಶಾಲಾ ಶಿಕ್ಷಕ ವೃಂದ, ಶಾಲಾಭಿವೃದ್ಧಿ ಸಮಿತಿ, ಹಳೆ ವಿದ್ಯಾರ್ಥಿಗಳ ಸಂಘದ ವತಿಯಿಂದ ಬೀಳ್ಕೊಡುಗೆ ಸಮಾರಂಭ ಏರ್ಪಡಿಸಲಾಗಿತ್ತು. ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ನಾಗರಾಜ ಮೊಗವೀರ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಶಾಲೆಯ ನಿವೃತ್ತ ಮುಖ್ಯಶಿಕ್ಷಕ ಹರಿಕೃಷ್ಣ ಹಂದೆ, ವಿದ್ಯಾಭಿಮಾನಿಗಳಾದ ಪ್ರಕಾಶ್ ಬೆಟ್ಟಿನ್, ಶ್ರೀನಿವಾಸ ಗಾಣಿಗ, ಕೋಟೇಶ್ವರ ಪಂಚಾಯತ್ ಸದಸ್ಯರಾದ ರಾಜು ಮೊಗವೀರ, ಹಳೆ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷ ಆನಂದ್ ಕುಂದರ್ ಉಪಸ್ಥಿತರಿದ್ದರು. ಕ್ಷೇತ್ರದ ಸಂಪನ್ಮೂಲ ವ್ಯಕ್ತಿ ಪ್ರಕಾಶ್ ಪ್ರಾಸ್ತಾವಿಕ ಮಾತನಾಡಿದರು. ಸಹಶಿಕ್ಷಕರಾದ ಅಶೋಕ್ ಕುಮಾರ್ ಅವರು ಅನಂತಯ್ಯ ನಾವಡರನ್ನು ಪರಿಚಯಿಸಿದರು. ದೈ.ಶಿ.ಶಿ. ಮಂಜು ಮತ್ತು ವಿದ್ಯಾರ್ಥಿಗಳ ಪರವಾಗಿ ಪ್ರಥಮ್ ಅನಿಸಿಕೆಗಳನ್ನು ಹಂಚಿಕೊಂಡರು. ಶಾಲಾ ಮುಖ್ಯ ಶಿಕ್ಷಕಿ ಪದ್ಮಾವತಿ ಅವರು ಸ್ವಾಗತಿಸಿ, ಸಹಶಿಕ್ಷಕಿ ಶೈಲಾ ನಿರೂಪಿಸಿ, ಶಿಕ್ಷಕಿ ಮಂಗಳಾ ವಂದಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಸರ್ಕಾರ ಏಕ ನಿವೇಶನ ನಕ್ಷೆ ಅನುಮೋದನೆ ನೀಡಲು ಈಗಾಗಲೇ ಕೆಲವೊಂದು ವಿನಾಯಿತಿಗಳನ್ನು ಸಾರ್ವಜನಿಕರ ಹಿತದೃಷ್ಠಿಯಿಂದ ಸುತ್ತೋಲೆಯನ್ನು ಹೊರಡಿಸಿದೆ. ನಿಯಮಾನುಸಾರ ಇದರ ಅನುಷ್ಠಾನವನ್ನು ಮಾಡಬೇಕೆಂದು ಗ್ರಾಮಾಂತರ ಯೋಜನೆ ಇಲಾಖೆಯ ಅಭಿಯಂತರರುಗಳಿಗೆ ಜಿಲ್ಲಾಧಿಕಾರಿ ಸ್ವರೂಪಟ ಟಿ.ಕೆ ಸೂಚನೆ ನೀಡಿದರು. ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಏಕ ನಿವೇಶನ ನಕ್ಷೆ ಹಾಗೂ ನಮೂನೆ 9/11 ರಲ್ಲಿ ಎದುರಾಗುತ್ತಿರುವ ಸಮಸ್ಯೆಗಳ ಬಗ್ಗೆ ಚರ್ಚಿಸಲು ಆಯೋಜಿಸಲಾದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸರ್ಕಾರ ಕರಾವಳಿ ಪ್ರದೇಶಗಳ ಭೌಗೋಳಿಕ ಲಕ್ಷಣಗಳಿಂದಾಗಿ ಹಲವು ಸಂದರ್ಭಗಳಲ್ಲಿ ರಸ್ತೆಗಳ ಅಗಲವನ್ನು ವಿಸ್ತರಿಸಲು ಸಾಧ್ಯವಾಗುವುದಿಲ್ಲ. ಇಂತಹ ಸಂದರ್ಭದಲ್ಲಿ ಸಕ್ಷಮ ಪ್ರಾಧಿಕಾರಗಳಿಂದ ವಿನ್ಯಾಸ ಅನುಮೋದನೆ ಸಮಯದಲ್ಲಿ ವಿನಾಯಿತಿ ನೀಡಲು ಅವಕಾಶ ನೀಡಿ ಸರಕಾರ ಸುತ್ತೋಲೆಯನ್ನು ಹೊರಡಿಸಿದೆ. ಅದರನ್ವಯ ನಿಯಮಾನುಸಾರ ಅನುಮೋದನೆಯನ್ನು ನೀಡಬೇಕು ಎಂದರು. ಏಕ ವಿನ್ಯಾಸ ನಕ್ಷೆ ಹಾಗೂ ನಮೂನೆ 9/11 ಅನ್ನು ಪಡೆಯಲು ಜನಸಾಮಾನ್ಯರು ಸಂಬAಧಿಸಿದ ಇಲಾಖೆಗಳಿಗೆ ಅರ್ಜಿ ಸಲ್ಲಿಸಿದರೂ ಅವುಗಳನ್ನು ಪಡೆಯಲು…
