Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಸರಕಾರದಿಂದ ಮಾನ್ಯತೆ ಪಡೆದ ಕರ್ನಾಟಕ ರಾಜ್ಯ ಪದವೀಧರ ಪ್ರಾಥಮಿಕ ಶಿಕ್ಷಕರ (ಜಿ.ಪಿ.ಟಿ) ಸಂಘದ 2026-31ನೇ ಸಾಲಿನ ನೂತನ ಪದಾಧಿಕಾರಿಗಳ ಚುನಾವಣೆ ಇತ್ತೀಚಿಗೆ ನಡೆದಿದ್ದು, ಬೈಂದೂರು ತಾಲೂಕು ಅಧ್ಯಕ್ಷರಾಗಿ ಸಂದೀಪ್ ನಾಯ್ಕ್, ಕಾರ್ಯದರ್ಶಿಯಾಗಿ ಚಂದ್ರ ಹಾಗೂ ಖಜಾಂಚಿಯಾಗಿ ರಾಜೇಶ್ವರಿ ಹೆಗ್ಡೆ ಆಯ್ಕೆಯಾದರು. ಉಡುಪಿ ಜಿಲ್ಲಾ ಶಾಖೆಗೆ 2026-31ನೇ ಸಾಲಿನ ನೂತನ ಪದಾಧಿಕಾರಿಗಳಾಗಿ ಜಿಲ್ಲಾಧ್ಯಕ್ಷರಾಗಿ ಎಳ್ಳಂಪಳ್ಳಿ ಸಂತೋಷ್ ಶೆಟ್ಟಿ, ಗೌರವಾಧ್ಯಕ್ಷರಾಗಿ ಚೈತ್ರ ಕೆ., ಪಿ. ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಸಾರಿಕಾ ಹಾಗೂ ಖಜಾಂಚಿಯಾಗಿ ಪದ್ಮಾವತಿ ಬಿಲ್ಲವ ಆಯ್ಕೆಯಾದರು. ಇದನ್ನೂ ಓದಿ ► ರಾಜ್ಯ ಜಿ.ಪಿ.ಟಿ ಶಿಕ್ಷಕರ ಸಂಘದ ಉಡುಪಿ ಜಿಲ್ಲಾ ಶಾಖೆಗೆ ಚುನಾವಣೆ. ಅಧ್ಯಕ್ಷರಾಗಿ ಎಳ್ಳಂಪಳ್ಳಿ ಸಂತೋಷ್ ಶೆಟ್ಟಿ ಆಯ್ಕೆ – https://kundapraa.com/?p=103117 .

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಸರಕಾರದಿಂದ ಮಾನ್ಯತೆ ಪಡೆದ ಕರ್ನಾಟಕ ರಾಜ್ಯ ಪದವೀಧರ ಪ್ರಾಥಮಿಕ ಶಿಕ್ಷಕರ (ಜಿ.ಪಿ.ಟಿ) ಸಂಘದ ಉಡುಪಿ ಜಿಲ್ಲಾ ಶಾಖೆಗೆ 2026-31ನೇ ಸಾಲಿನ ನೂತನ ಪದಾಧಿಕಾರಿಗಳ ಚುನಾವಣೆ ನಡೆಯಿತು. ಜಿಲ್ಲಾಧ್ಯಕ್ಷರಾಗಿ ಎಳ್ಳಂಪಳ್ಳಿ ಸಂತೋಷ್ ಶೆಟ್ಟಿ, ಗೌರವಾಧ್ಯಕ್ಷರಾಗಿ ಚೈತ್ರ ಕೆ. ಪಿ̧. ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಸಾರಿಕಾ ಹಾಗೂ ಖಜಾಂಚಿಯಾಗಿ ಪದ್ಮಾವತಿ ಬಿಲ್ಲವ ಆಯ್ಕೆಯಾದರು. ತಾಲೂಕು ಅಧ್ಯಕ್ಷರುಗಳಾಗಿ ಸಂದೀಪ್ ನಾಯ್ಕ (ಬೈಂದೂರು), ಜಯಪ್ಪ ಟಿ (ಕುಂದಾಪುರ), ರವೀಂದ್ರ ಶೆಟ್ಟಿ (ಕಾರ್ಕಳ), ವೀಣಾ (ಬ್ರಹ್ಮಾವರ), ಶಬಾನಾ ಫರ್ವಿನ್ ಶೇಕ್ (ಉಡುಪಿ) ಅವರನ್ನು ಆಯ್ಕೆ ಮಾಡಲಾಯಿತು. ತಾಲೂಕು ಪದಾಧಿಕಾರಿಗಳು ಮತ್ತು ನಿರ್ದೇಶಕರನ್ನು ಮತದಾನದ ಮೂಲಕ ಆಯ್ಕೆ ಮಾಡಲಾಯಿತು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಭಾರತದ ಪ್ರಧಾನಿ ನರೇಂದ್ರ ಮೋದಿಜಿ ಅವರ 25 ವರ್ಷಗಳ ಸಾರ್ವಜನಿಕ ಹಾಗೂ ರಾಜಕೀಯ ಸೇವಾ ಪಯಣದ “ಸೇವಾ ಸಂಕಲ್ಪ ಅಭಿಯಾನ”ದ ಅಂಗವಾಗಿ ಬಿಜೆಪಿ ಮಹಿಳಾ ಮೋರ್ಚಾ ಕುಂದಾಪುರ ಮಂಡಲ ವತಿಯಿಂದ ನಡೂರು ಗ್ರೀನ್ ಪ್ಯಾಲೇಸ್ ಸಭಾಂಗಣದಲ್ಲಿ “ನಡೂರು ಮತ್ತು ಕಾಡೂರು ಶಕ್ತಿ ಕೇಂದ್ರ ವ್ಯಾಪ್ತಿಯ ಅಂಗನವಾಡಿ ಉತ್ಸವ” ಅರ್ಥಪೂರ್ಣವಾಗಿ ನೆರವೇರಿತು. ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಕುಂದಾಪುರ ಶಾಸಕ ಎ. ಕಿರಣ್ ಕುಮಾರ್ ಕೊಡ್ಗಿ ಅವರು, “ಸಂಘದ ಸಾಮಾನ್ಯ ಪ್ರಚಾರಕನಿಂದ ಹಿಡಿದು ಗುಜರಾತ್ ಮುಖ್ಯಮಂತ್ರಿಯಾಗಿ, ಇದೀಗ ದೇಶದ ಪ್ರಧಾನಿಯಾಗಿ ಮೋದಿಜಿ ಅವರು ಸಲ್ಲಿಸಿರುವ 25 ವರ್ಷಗಳ ನಿಷ್ಕಳಂಕ ಸೇವೆ ಇಡೀ ಜಗತ್ತಿಗೆ ಮಾದರಿ. ಅಧಿಕಾರಕ್ಕಾಗಿ ಅಲ್ಲ, ಸೇವೆಗಾಗಿ ರಾಜಕಾರಣ ಎಂಬುದನ್ನು ಅವರು ತೋರಿಸಿಕೊಟ್ಟಿದ್ದಾರೆ. ಅಂತ್ಯೋದಯದ ಮಂತ್ರದೊಂದಿಗೆ ಸಮಾಜದ ಕಟ್ಟಕಡೆಯ ವ್ಯಕ್ತಿಯನ್ನು ತಲುಪುವುದೇ ಈ ಅಭಿಯಾನದ ಮುಖ್ಯ ಉದ್ದೇಶ” ಎಂದರು. ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರು ಮಾತನಾಡಿ “ಸಮಾಜದ ಕಟ್ಟಕಡೆಯ ಮಗುವಿನ ಶಿಕ್ಷಣ, ಪೋಷಣೆಗಾಗಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಬೈಂದೂರು ಮತ್ತು ಕುಂದಾಪುರ ಎರಡೂ ಕ್ಷೇತ್ರಗಳಿಗೆ ಸಂಪರ್ಕ ಕಲ್ಪಿಸುವ ಕಂಡ್ಲೂರು ಹಳೆ ಸೇತುವೆ ವಿಚಾರದಲ್ಲಿ ಹಳೆ ಸೇತುವೆಯನ್ನು ತೆರವುಗೊಳಿಸಿದರೆ ಸಾರ್ವಜನಿಕರಿಗೆ ಆಗುವ ತೊಂದರೆಗಳ ಬಗ್ಗೆ ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ. ಕಿರಣ್ ಕುಮಾರ್ ಕೊಡ್ಗಿ ಅವರು ಉಡುಪಿ ಜಿಲ್ಲಾಧಿಕಾರಿಗಳಿಗೆ ಸಮಗ್ರ ಮಾಹಿತಿ ನೀಡಿದರು. ಅವರು ಬುಧವಾರ ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಅವರನ್ನು ಕುಂದಾಪುರ ಶಾಸಕ ಎ. ಕಿರಣ್ ಕುಮಾರ್ ಕೊಡ್ಗಿ ಹಾಗೂ ಬೈಂದೂರು ಶಾಸಕ ಗುರುರಾಜ್ ಶೆಟ್ಟಿ ಗಂಟಿಹೊಳೆ ಅವರು ಜಂಟಿಯಾಗಿ ಭೇಟಿ ಮಾಡಿ ಮನವಿ ಸಲ್ಲಿಸಿದ ಶಾಸಕರು ಮಾತನಾಡಿದರು. ಕಂಡ್ಲೂರು ಹಳೆ ಸೇತುವೆಯು ರಾಜ್ಯ ಹೆದ್ದಾರಿಯ ಪ್ರಮುಖ ಮಾರ್ಗವಾಗಿದ್ದು, ಈ ಮಾರ್ಗದ ಮೂಲಕ ಸಾವಿರಾರು ಜನರು ವಿವಿಧ ಜಿಲ್ಲೆಗಳಿಗೆ ಸಂಚರಿಸುತ್ತಾರೆ. ಮೀನುಗಾರರು, ಶಾಲಾ-ಕಾಲೇಜು ವಿದ್ಯಾರ್ಥಿಗಳು, ರೈತರು ದಿನನಿತ್ಯ ಈ ಸೇತುವೆಯನ್ನು ಅವಲಂಬಿಸಿದ್ದಾರೆ. ಒಂದು ವೇಳೆ ಹಳೆ ಸೇತುವೆಯನ್ನು ಈಗಲೇ ಕೆಡವಿದರೆ, ಹೊಸ ಸೇತುವೆ ನಿರ್ಮಾಣ ಪೂರ್ಣಗೊಳ್ಳುವವರೆಗೂ ಜನರು 15-20 ಕಿ.ಮೀ. ಸುತ್ತುವರೆದು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಇಲ್ಲಿನ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ 2014ನೇ ಬ್ಯಾಚ್‌ನ ಬಿಬಿಎ ಹಳೆ ವಿದ್ಯಾರ್ಥಿಗಳ ವತಿಯಿಂದ ಗುರುವಂದನೆ ಕಾರ್ಯಕ್ರಮ ನಡೆಯಿತು. ವಿದ್ಯಾರ್ಥಿಗಳು ತಮ್ಮ ಜೀವನದ ಪಯಣದಲ್ಲಿ ಜ್ಞಾನದ ಬೆಳಕಾಗಿ ತಮ್ಮನ್ನು ರೂಪಿಸಿದ ಗುರುಗಳನ್ನು ಗೌರವಿಸಿ ಅವರ ಪ್ರೋತ್ಸಾಹ ಮತ್ತು ಮಾರ್ಗದರ್ಶನದಿಂದ ತಮ್ಮ ಜೀವನದಲ್ಲಿ ದೊರೆತ ಸ್ಪೂರ್ತಿಯನ್ನು ಸ್ಮರಿಸುವುದರೊಂದಿಗೆ ಒಂದೆಡೆ ಸೇರಿ ತಮ್ಮ ಹಳೆಯ ನೆನಪುಗಳನ್ನು ಹಂಚಿಕೊಂಡು ಕಾಲೇಜಿನೊಂದಿಗೆ ತಮ್ಮ ಬಾಂಧವ್ಯ ಮುಂದುವರಿಸುವುದಾಗಿ ತಿಳಿಸಿದರು. ಸಂಸ್ಥೆಯಲ್ಲಿ ಈ ಹಿಂದೆ ಸೇವೆ ಸಲ್ಲಿಸಿದ ಉಪನ್ಯಾಸಕರಾದ ಪಂಜು, ಮಣಿಕಂಠ, ಸುಚಿತ್ರಾ, ಜ್ಯೋತಿ, ಮಂಜುಳ, ಭಾಸ್ಕರ ಬಿಲ್ಲವ, ಹರೀಶ್, ಉದಯ್, ದೀಪಕ, ಡಾ.ರವಿಚಂದ್ರ, ಶ್ರೀಕಾಂತರಾಜ, ಕ್ರಿಸ್ಟಿ ಶರಣ್ಯ, ನಾಗವೇಣಿ ಗೌರವವಂದನೆ ಸ್ವೀಕರಿಸಿದರು. ಕಾಲೇಜಿನ ಪ್ರಿನ್ಸಿಪಾಲ್ ಡಾ. ಉಮೇಶ ಮಯ್ಯ, ಡಾ. ರಘುನಾಯ್ಕ, ಪಾಂಡುರಂಗ, ಪ್ರಾಧ್ಯಾಪಕಿ ಚಿತ್ರ ಪಡೆಯಾರ್, ಹಳೆ ವಿದ್ಯಾರ್ಥಿ ಸಂಘದ ಸಂಚಾಲಕಿ ಮಮತಾ, ಕಚೇರಿ ಸಿಬ್ಬಂದಿ ವಿಜಯ ಶೆಟ್ಟಿ, ರಾಜೇಶ್ವರಿ, ಮಂಜುನಾಥ ಉಪಸ್ಥಿತರಿದ್ದರು. ಮಿತ್ರ ಸೇವಾಶ್ರಮ ಸಮಿತಿಯ ಸಾಧನೆ ಸ್ಮರಿಸಲಾಯಿತು. ಚೇತನ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಕರ್ನಾಟಕ ಸಹಕಾರ ಕುಕ್ಕುಟ ಮಹಾಮಂಡಳ ನಿಯಮಿತ ಬೆಂಗಳೂರು ಇವರ ವತಿಯಿಂದ ಪ್ರಸಕ್ತ ಸಾಲಿಗೆ ಪ.ಜಾತಿ/ಪ.ಪಂ/ಹಿಂದುಳಿದ ವರ್ಗ/ಸಾಮಾನ್ಯ ವರ್ಗದ ಗ್ರಾಮೀಣ ರೈತ ಮಹಿಳೆಯರಿಂದ 5 ವಾರದ 20 ದೇಶಿ/ನಾಟಿ ಕೋಳಿ ಮರಿಗಳ ವಿತರಣೆಗಾಗಿ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ರೈತ ಮಹಿಳೆಯರು ಅಕ್ಟೋಬರ್ 31ರ ಒಳಗಾಗಿ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಪಶುವೈದ್ಯ ಸಂಸ್ಥೆ, ತಾಲೂಕು ಪಶು ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿಗಳನ್ನು ಸಂಪರ್ಕಿಸಬಹುದು ಎಂದು ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಕಚೇರಿ ಪ್ರಕಟಣೆ ತಿಳಿಸಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಶ್ರೀ ವೆಂಕಟರಮಣ  ಆಂಗ್ಲ ಮಾಧ್ಯಮ ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ ಮಾದಕ ವಸ್ತುಗಳಿಂದುಟಾಗುವ ದುಷ್ಪರಿಣಾಮಗಳು ಎಂಬ ವಿಷಯದ ಕುರಿತು ಮಾಹಿತಿ ಕಾರ್ಯಗಾರವನ್ನು ಆಯೋಜಿಸಲಾಗಿತ್ತು. ಉಡುಪಿ ಕ್ರೈಂ ಡಿಪಾರ್ಟ್ಮೆಂಟ್ನ ನಿಲೇಶ್ ಅವರು ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿ ಕಾರ್ಯಕ್ರಮವನ್ನು ನಡೆಸಿಕೊಟ್ಟರು. ಪ್ರೌಢಶಾಲಾ ಮುಖ್ಯ ಶಿಕ್ಷಕ ಕೃಷ್ಣ ಅಡಿಗ ಸರ್ವರನ್ನು ಸ್ವಾಗತಿಸಿದರು. ಈ ಕಾರ್ಯಕ್ರಮದಲ್ಲಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಸಂದೀಪ್ ಗಾಣಿಗ, ಉಪಪ್ರಾಂಶುಪಾಲರಾದ ಸುಜಯ್ ಕೋಟೆಗಾರ್, ಕಿರಿಯ ಪ್ರಾಥಮಿಕ ವಿಭಾಗದ ಮುಖ್ಯೋಪಾಧ್ಯಾಯಿನಿ ರೇಷ್ಮಾ ಡಿಸೋಜ, ಪೂರ್ವ ಪ್ರಾಥಮಿಕ ವಿಭಾಗದ ಮುಖ್ಯೋಪಾಧ್ಯಾಯಿನಿ ಪ್ರಮೀಳಾ ಡಿಸೋಜ ಅವರು ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಬೆಂಗಳೂರಿನಲ್ಲಿ ಉದ್ಯೋಗದಲ್ಲಿದ್ದು ರಜೆಯಲ್ಲಿ ಊರಿಗೆ ಬಂದಿರುವ ಯುವತಿ ಮನೆ ಬಿಟ್ಟು ಹೋಗಿ ನಾಪತ್ತೆಯಾಗಿರುವ ಘಟನೆ ಬೈಂದೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವರದಿಯಾಗಿದೆ. ಕೆ. ಆಯಿಶಾ ಶವಾನಾ (23) ನಾಪತ್ತೆಯಾದ ಯುವತಿ. ಬೆಂಗಳೂರಿನಲ್ಲಿ ಮೊಬೈಲ್ ಕಂಪೆನಿಯಲ್ಲಿ ಕೆಲಸ ಮಾಡಿಕೊಂಡಿದ್ದ ಅವರು 15 ದಿನಗಳ ಹಿಂದೆ ಮನೆಗೆ ಬಂದಿದ್ದು ಮನೆಯವರು ಮದುವೆ ಬಗ್ಗೆ ಪ್ರಸ್ತಾಪಿಸಿದಾಗ ಮದುವೆಯಾಗಲು ನಿರಾಕರಿಸಿದ್ದರೆನ್ನಲಾಗಿದೆ. ಅ. 5ರಂದು ಬೆಳಗ್ಗೆ 4.30ರ ಸುಮಾರಿಗೆ ಮನೆಯಿಂದ ಕಾಣೆಯಾಗಿದ್ದು ಎಲ್ಲೂ ಪತ್ತೆಯಾಗಿಲ್ಲ ಎಂದು ಮನೆಯವರು ಬೈಂದೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಮೂಡುಬಿದಿರೆ: ಮಿಜಾರಿನ ಶೋಭಾವನ ಆವರಣದಲ್ಲಿರುವ ಆಳ್ವಾಸ್ ಆನಂದಮಯ ಆರೋಗ್ಯಧಾಮದಲ್ಲಿ ‘ತ್ರಯಾ ಓ3 ಓಝೋನ್ ಥೆರಪಿ’ ನೂತನ ಘಟಕವನ್ನು ಬುಧವಾರ ಉದ್ಘಾಟಿಸಲಾಯಿತು. ಇದರೊಂದಿಗೆ ಆರೋಗ್ಯಧಾಮದ ಸಮಗ್ರ ಆರೋಗ್ಯ ಹಾಗೂ ಪ್ರಕೃತಿ ಚಿಕಿತ್ಸಾ ಸೇವೆಗಳ ವ್ಯಾಪ್ತಿಗೆ ಮತ್ತೊಂದು ಚಿಕಿತ್ಸಾ ವಿಧಾನ ಸೇರ್ಪಡೆಯಾಗಿದೆ. ನೂತನ ಘಟಕದಲ್ಲಿ ರೋಗಿಯ ಆರೋಗ್ಯ ಸ್ಥಿತಿ ಹಾಗೂ ಚಿಕಿತ್ಸೆಯ ಅಗತ್ಯಕ್ಕೆ ಅನುಗುಣವಾಗಿ ಓಝೋನೇಟೆಡ್ ನೀರು, ಓಝೋನ್ ಬ್ಯಾಗಿಂಗ್, ಸ್ಕಾಲ್ಪ್ ಬ್ಯಾಗಿಂಗ್, ಸಂಪೂರ್ಣ ದೇಹ ಬ್ಯಾಗಿಂಗ್, ಓಝೋನ್ ಫನಲಿಂಗ್, ಓಝೋನ್ ಎನಿಮಾ, ಕಿವಿ ಮತ್ತು ರೆಕ್ಟಲ್ ಇನ್‌ಸಫ್ಲೇಷನ್, ಯೋನಿ ಇನ್‌ಸಫ್ಲೇಷನ್, ಇಂಟ್ರಾ-ಆರ್ಟಿಕ್ಯುಲರ್ ಓಝೋನ್ ಇಂಜೆಕ್ಷನ್, ಅಬ್ಡೊಮಿನಲ್ ಓಝೋನ್ ಥೆರಪಿ ಹಾಗೂ ಒಟಿಒ ಸೇರಿದಂತೆ ವಿವಿಧ ಚಿಕಿತ್ಸಾ ವಿಧಾನಗಳನ್ನು ಒದಗಿಸಲಾಗುತ್ತದೆ. ಆಳ್ವಾ ಫಾರ್ಮಾಸಿಯ ಆಡಳಿತಾಧಿಕಾರಿ ಹಾಗೂ ಆಳ್ವಾಸ್ ಅನಂದಮಯದ ತಜ್ಞವೈದ್ಯೆ ಡಾ. ಗ್ರೀಷ್ಮಾ ವಿವೇಕ್ ಆಳ್ವ ಮಾತನಾಡಿ, ಪ್ರಕೃತಿ ಚಿಕಿತ್ಸೆ, ಯೋಗ, ಪೌಷ್ಟಿಕತೆ ಮತ್ತು ಜೀವನಶೈಲಿ ಆಧಾರಿತ ಆರೋಗ್ಯ ಕ್ರಮಗಳೊಂದಿಗೆ ಓಝೋನ್ ಥೆರಪಿಯನ್ನು ಪೂರಕವಾಗಿ ಸಂಯೋಜಿಸುವ ಮೂಲಕ ರೋಗಿ ಕೇಂದ್ರಿತ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಕೋಟ ಸಹಕಾರಿ ವ್ಯವಸಾಯಕ ಸಂಘಕ್ಕೆ 2025-26ನೇ ಸಾಲಿನಲ್ಲಿ ದಕ್ಷಿಣ ಕನ್ನಡ ಕೃಷಿ ಅಭಿವೃದ್ಧಿ ಸಹಕಾರಿ ಸಂಘ ನಿ. ಮಂಗಳೂರು (ಸ್ಕ್ಯಾಡ್ಸ್) ಇದರ ಕುಂದಾಪುರ ಶಾಖೆಯಿಂದ ಸಂಘವು ಅತ್ಯಧಿಕ ಮೌಲ್ಯದ ಕೃಷಿ ಯಂತ್ರೋಪಕರಣಗಳನ್ನು ಹಾಗೂ ಬಿಡಿಭಾಗಗಳನ್ನು ಖರೀದಿಸಿ ತನ್ನ ಸದಸ್ಯರಿಗೆ ವಿತರಿಸುವ ಮೂಲಕ ಪ್ರಥಮ ಸ್ಥಾನಗಳಿಸಿರುತ್ತದೆ. ದಕ್ಷಿಣ ಕನ್ನಡ ಕೃಷಿ ಅಭಿವೃದ್ಧಿ ಸಹಕಾರಿ ಸಂಘ ಮಂಗಳೂರು (ಸ್ಕ್ಯಾಡ್ಸ್) ಇದರ ವಾರ್ಷಿಕ ಮಹಾಸಭೆಯಲ್ಲಿ ಅಧ್ಯಕ್ಷ ರವೀಂದ್ರ ಕಂಬಳಿ, ಉಪಾಧ್ಯಕ್ಷರು ಮತ್ತು ಎಲ್ಲಾ ನಿರ್ದೇಶಕರು ಕೋಟ ಸಹಕಾರಿ ವ್ಯವಸಾಯಕ ಸಂಘದ ಅಧ್ಯಕ್ಷರಾದ ಡಾ. ಕೃಷ್ಣ ಕಾಂಚನ್ ಮತ್ತು ಮುಖ್ಯಕಾರ್ಯನಿರ್ವಹಣಾಧಿಕಾರಿ ಶರತ್ ಕುಮಾರ್ ಶೆಟ್ಟಿ ಇವರಿಗೆ ಅಭಿನಂದನಾ ಪತ್ರ ಮತ್ತು ಸ್ಮರಣಿಕೆಯನ್ನು ನೀಡಿ ಸನ್ಮಾನಿಸಿದರು. ಈ ಸಂದರ್ಭ ದಕ್ಷಿಣ ಕನ್ನಡ ಜಿಲ್ಲೆಯ ಸಹಕಾರ ಸಂಘಗಳ ಉಪನಿಬಂಧಕರಾದ ರಮೇಶ ಎಚ್. ಎನ್., ಸ್ಕ್ಯಾಡ್ಸ್ ಮತ್ತು ಸಂಘದ ನಿರ್ದೇಶಕರಾದ ಜಿ. ತಿಮ್ಮ ಪೂಜಾರಿಯವರು ಉಪಸ್ಥಿತರಿದ್ದರು.

Read More