ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಇಂದಿನ ದಿನಗಳಲ್ಲಿ ಹಿಂದೂ ಎಂದು ಹೇಳಿಕೊಂಡರೂ ಕೋಮುವಾದಿ ಎಂದು ಬಿಂಬಿಸುವ ವಾತಾವರಣ ಸೃಷ್ಠಿಯಾಗಿದೆ. ಹಿಂದೂ ಧರ್ಮವೆಂಬುದು ಒಂದು ಮತ, ಜಾತಿ ಹಾಗೂ ಪ್ರದೇಶಕ್ಕೆ ಸೀಮಿತವಾಗಿಲ್ಲ. ಜಗತ್ತಿನ ಶ್ರೇಯಸ್ಸನ್ನು ಬಯಸುವ ಹಿಂದೂಗಳು ಎಂದಿಗೂ ಸಂಕುಚಿತ ಮನೋಭಾವದವರಾಗಲು ಸಾಧ್ಯವೂ ಇಲ್ಲ ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘ ದಕ್ಷಿಣ ಮಧ್ಯಕ್ಷೇತ್ರಿಯ ಕಾರ್ಯಕಾರಣಿ ಸದಸ್ಯ ಡಾ. ಕಲ್ಲಡ್ಕ ಪ್ರಭಾಕರ ಭಟ್ ಹೇಳಿದರು. ಅವರು ಬೈಂದೂರು ಶ್ರೀ ಸೀತಾರಾಮಚಂದ್ರ ಸಭಾಭವನದಲ್ಲಿ ಜರುಗಿದ ವಿಶ್ವ ಹಿಂದೂ ಪರಿಷತ್ – ಬಜರಂಗದಳ ಬೈಂದೂರು ಪ್ರಖಂಡದ ಕಾರ್ಯಕರ್ತರ ಸಮಾವೇಶದಲ್ಲಿ ದಿಕ್ಸೂಚಿ ಭಾಷಣ ಮಾಡಿದರು. ಭಾರತದ ಚಿಂತನೆ ಹಾಗೂ ದೃಷ್ಠಿಕೋನವೇ ಭಿನ್ನವಾಗಿದ್ದು ಇಂತಹ ವೈಶಿಷ್ಟ್ಯವನ್ನು ಪ್ರಪಂಚದ ಯಾವುದೇ ದೇಶದಲ್ಲಿಯೂ ಕಾಣಲು ಸಾಧ್ಯವಿಲ್ಲ. ಗೋವನ್ನು ತಾಯಿ ಎಂದು ಪೂಜೆಸುವ, ನದಿನೀರಿನ ಮೂಲವನ್ನು ತೀರ್ಥ ಎಂದು ಸೇವಿಸುವ, ಭೂಮಿಯೆಂಬುದು ಕಲ್ಲು ಮಣ್ಣಿಗೂ ಮಿಗಿಲಾದದ್ದು ಎಂದು ಗೌರವದಿಂದ ಕಾಣುವುದು ನಮ್ಮ ದೇಶದ ಸಂಸ್ಕೃತಿ. ಇಲ್ಲಿನ ಸಂಪ್ರದಾಯಗಳಲ್ಲಿ ವೈರುಧ್ಯವಿದೆ ಆದರೆ ಸಂಸ್ಕೃತಿ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ. ಕೋಟ: ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕೋಟ ಶಿವರಾಮ ಕಾರಂತದ ಹುಟ್ಟೂರಲ್ಲಿ ಶಿವರಾಮ ಕಾರಂತರ ನೆನಪಿಗಾಗಿ ಸುಮಾರು ಎರಡು ಕೋಟಿ ವೆಚ್ಚದಲ್ಲಿ ನಿರ್ಮಾಣವಾದ ಸ್ಮಾರಕ ಭವನ ಸಾರ್ಥಕ್ಯವನ್ನು ಕಂಡಿದೆ ತಪ್ಪಾಗಲಾರದು. ವಾರಕ್ಕೊಂದರಂತೆ ಇಲ್ಲಿ ಕಲೆ, ಸಾಹಿತ್ಯ ಮತ್ತು ಸಂಸ್ಸೃತಿಗೆ ಸಂಬಂಧಿಸಿದ ಕಾರ್ಯಕ್ರಮಗಳು ನಡೆಯುತ್ತಿದೆ. ಈ ಮೂಲಕ ಈ ಪ್ರದೇಶದ ಉಡುಪಿ ಜಿಲ್ಲೆಯಲ್ಲಯೇ ವಿಭಿನ್ನವಾಗಿ ಗುರುತಿಸಿಕೊಂಡಿರುವ ಕಾರಂತ ಭವನದಲ್ಲಿ ಇಂದಿನಿಂದ ಅಕ್ಟೋಬರ್ ೧೦ರ ವರೆಗೆ ನಿತ್ಯವು ಸಾಂಸ್ಕೃತಿಕ ಸಾಹಿತ್ಯಿಕ ಕಲೆ ಇವೇ ವಿಚಾರಗಳಿಂದ ಕೂಡಿದ ತಂಬೆಲರು ೨೦೧೭ ಸಾಹಿತ್ಯಿಕ ಸಾಂಸ್ಕೃತಿಕ ಸುಗ್ಗಿ ಉತ್ಸವ ನಡೆಯಲಿದೆ. ಕೋಟತಟ್ಟು ಗ್ರಾಮ ಪಂಚಾಯಿತಿಯಲ್ಲಿ ೨೦೧೧ರಲ್ಲಿ ಲೋಕಾರ್ಪಣೆಗೊಂಡ ಕೋಟ ಕಾರಂತ ಕಲಾಭವನ (ಕಾರಂತ ಥೀಂ ಪಾರ್ಕ್) ಕಾರಂತರು ನಲಿದಾಡಿದ ಹುಟ್ಟೂರ ಕೊಳ್ಕೆರೆಯಲ್ಲಿ ನಿರ್ಮಾಣಗೊಂಡಿದೆ. ಖ್ಯಾತ ಸಾಹಿತಿ ಕಾರಂತರಿಗೆ ಹುಟ್ಟೂರಲ್ಲಿಯೆ ಅವಿಸ್ಮರಣೀಯ ಸ್ಮಾರಕ ನಿರ್ಮಾಣವಾಗಬೇಕೆಂಬ ಅಭಿಮಾನಿಗಳ ಹಾರೈಕೆ ಮತ್ತು ಡಾ.ಶಿವರಾಮ ಕಾರಂತರ ಅಪ್ಪಟ ಅಭಿಮಾನಿ ಮಾಜಿ ಸಚಿವ ಹಾಲಿ ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ…
ಮೂಡುಬಿದಿರೆ: ಮಿಜಾರಿನ ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗದ ವತಿಯಿಂದ ಆಯೋಜಿಸಿದ ನಾನೋ ಫ್ಲೂಯಿಡ್ ಕುರಿತ ಒಂದು ದಿನದ ರಾಷ್ಟ್ರಮಟ್ಟದ ಕಾರ್ಯಾಗಾರವನ್ನು ಜಪಾನ್ ನ ಕುಮಾಮೊಟೊ ವಿವಿಯ ಸಹಾಯಕ ನಿರ್ದೇಶಕ ಮತ್ತು ಪ್ರಾಧ್ಯಾಪಕ ಡಾ. ಶುಯಿಚಿ ತೋರಿ ಉದ್ಘಾಟಿಸಿದರು. ಬಳಿಕ ಮಾತನಾಡಿದ ಡಾ. ಶುಯಿಚಿ ತೋರಿ, ಇಂದಿನ ವಿದ್ಯಾರ್ಥಿಗಳು ಸಂಶೋಧನಾ ಮನೋಭಾವವನ್ನು ಬೆಳೆಸಿಕೊಳ್ಳಬೇಕು. ನಾನೋ ಫ್ಲೂಯಿಡ್ ಕ್ಷೇತ್ರದಲ್ಲಿ ಆಗುತ್ತಿರುವ ಅನೇಕ ಆವಿಷ್ಕಾರಗಳನ್ನು ವಿದ್ಯಾರ್ಥಿಗಳು ಅರಿತು ಅಧ್ಯಯನ ನಡೆಸಬೇಕು. ಆಳ್ವಾಸ್ ಮತ್ತು ಕುಮಾಮೊಟೊ ವಿವಿ ನಡುವಣ ಶೈಕ್ಷಣಿಕ ಒಪ್ಪಂದದಿಂದ ವಿದ್ಯಾರ್ಥಿ ವಿನಿಮಯ ಮತ್ತು ಉನ್ನತ ಸಂಶೋಧನೆ ಸಾಧ್ಯ ಎಂದು ಡಾ . ಶುಯಿಚಿ ತಿಳಿಸಿದರು . ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಟ್ರಸ್ಟಿ ವಿವೇಕ್ ಆಳ್ವ ಮಾತನಾಡಿ ಈ ಸಂಶೋಧನಾ ಕಾರ್ಯಾಗಾರವು ವಿದ್ಯಾರ್ಥಿಗಳಿಗೆ , ಉದ್ಯಮಿಗಳಿಗೆ ಮತ್ತು ಬೋಧಕರಿಗೆ ಉಪಯುಕ್ತವಾಗಿದೆ. ಆಳ್ವಾಸ್ ಇಂಜಿನಿಯರಿಂಗ್ ಕಾಲೇಜು ಮತ್ತು ಕುಮಾಮೊಟೊ ವಿಶ್ವವಿದ್ಯಾಲಯ ನವೀನ ಒಪ್ಪಂದವು ಪ್ರಮುಖ ಮೈಲಿಗಲ್ಲಾಗಿದ್ದು ಜಪಾನಿನ ಉನ್ನತ ತಂತ್ರಜ್ಞಾನ ನಮಗೆ ಮಾರ್ಗದರ್ಶನವಾಗಬಲ್ಲುದು. ಸಮಾಜೋಪಯೋಗಿ…
ಮೂಡುಬಿದಿರೆ : ಉಡುಪಿಯ ಪೂರ್ಣಪ್ರಜ್ಞ ಕಾಲೇಜಿನಲ್ಲಿ ಆಯೋಜಿಸಿದ ಮಂಗಳೂರು ವಿ.ವಿ. ಅಂತರ್ ಕಾಲೇಜು ಕುಸ್ತಿ ಪಂದ್ಯಾಟದಲ್ಲಿ ಆಳ್ವಾಸ್ ಕಾಲೇಜಿನ ಪುರುಷರ ಹಾಗೂ ಮಹಿಳೆಯರ ತಂಡ ಸತತ 13ನೇ ಬಾರಿ ಸಮಗ್ರ ಪ್ರಶಸ್ತಿ ಪಡೆದುಕೊಂಡಿದೆ. ಆಳ್ವಾಸ್‍ನ ದೈಹಿಕ ಶಿಕ್ಷಣ ಕಾಲೇಜು ಎರಡು ವಿಭಾಗಗಳಲ್ಲೂ ದ್ವಿತೀಯ ಸ್ಥಾನಿಯಾಗಿದೆ. ಒಟ್ಟು 16 ವಿಭಾಗಗಳಲ್ಲಿ ನಡೆದಿರುವ ಸ್ಪರ್ಧೆಯಲ್ಲಿ ಪುರುಷರ 7 ಹಾಗೂ ಮಹಿಳೆಯರ 8 ವಿಭಾಗಗಳಲ್ಲಿ ಒಟ್ಟು 15 ವಿಭಾಗಗಳಲ್ಲಿ ಪ್ರಥಮ ಸ್ಥಾನ ಪಡೆಯಿತು. ಆಳ್ವಾಸ್ ಕಾಲೇಜಿನ ಬಸವರಾಜ್ ಹಾಗೂ ಲಕ್ಷ್ಮೀ ರೇಡೇಕರ್ ಅತ್ಯುತ್ತಮ ಕುಸ್ತಿಪಟು ಪ್ರಶಸ್ತಿಗೆ ಭಾಜನರಾಗಿದ್ದಾರೆ. ವಿಜೇತ ಕ್ರೀಡಾಪಟುಗಳಿಗೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷರಾದ ಡಾ. ಎಂ. ಮೋಹನ ಆಳ್ವ ಅಭಿನಂದಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಕೊಲ್ಲೂರು: ನವರಾತ್ರಿಯ ಅಂಗವಾಗಿ ಪ್ರಸಿದ್ಥ ಯಾತ್ರಾಸ್ಥಳ ಕೊಲ್ಲೂರಿಗೆ ಆಗಮಿಸಿದ್ದ ಸಹಸ್ರಾರು ಭಕ್ತರು ವಿಜಯದಶಮಿಯಂದು ತಮ್ಮ ಮಕ್ಕಳಿಗೆ ವಿದ್ಯಾರಂಭ ಮಾಡಿಸಿದರು. ಶ್ರೀ ಮೂಕಾಂಬಿಕಾ ದೇವಸ್ಥಾನದ ಪ್ರಾಂಗಣದ ಸರಸ್ವತಿ ಮಂಟಪದ ಮುಂಭಾಗದಲ್ಲಿ ಮಕ್ಕಳಿಗೆ ಪ್ರಾಥಃಕಾಲದಿಂದಲೇ ಅಕ್ಷರಾಭಾಸ ಮಾಡಿಸಲಾಯಿತು. ಹೆತ್ತವರು ಕಾಲಿನ ಮೇಲೆ ಮಕ್ಕಳನ್ನು ಕುರಿಸಿಕೊಂಡು ವಿದ್ಯಾರಂಭ ಮಾಡಿಸಲಾಗುತ್ತದೆ. ಅರ್ಚಕರು ಚಿನ್ನದಿಂದ ಮಗುವಿನ ನಾಲಗೆಯ ಮೇಲೆ ಓಂ ಎಂದು ಬರೆಯುತ್ತಾರೆ, ಬಳಿಕ ಹೆತ್ತವರು ಮಗುವಿನ ಬೆರಳಿಂದ ಅಕ್ಕಿ ತುಂಬಿದ ಹರಿವಾಣದಲ್ಲಿ ಓಂ ಎಂದು ಬರೆಯಿಸಿ ಬಳಿಕ ಮಾತೃಭಾಷೆಯಲ್ಲಿ ಅ,ಆ,ಇ ಬರೆಸುವ ಮೂಲಕ ಅಕ್ಷರಾಭ್ಯಾಸ ಮಾಡಿಸಲಾಗುತ್ತದೆ. ಇದರಿಂದ ಮಕ್ಕಳ ನಾಲಿಗೆಯ ಮೇಲೆ ಸರಸ್ವತಿ ದೇವಿ ನೆಲೆಸಿ ಅವರ ಶೈಕ್ಷಣಿಕ ಭವಿಷ್ಯ ಸಮೃದ್ಧಿಯಾಗುತ್ತದೆ ಎಂಬ ನಂಬಿಕೆ ಭಕ್ತರದ್ದು. ನವಾನ್ನಪ್ರಾಶನ: ಎಳೆಯ ಕಂದಮ್ಮಗಳಿಗೆ ನವಾನ್ನಪ್ರಾಶನದ ಮೂಲಕ ಮೊದಲ ಭಾರಿಗೆ ಅನ್ನವನ್ನು ತಿನ್ನಿಸಲಾಗುತ್ತದೆ. ಶ್ರೀ ಮೂಕಾಂಬಿಕೆಯ ಸನ್ನಿಧಿಯಲ್ಲಿ ಅನ್ನಾಹಾರ ಆರಂಭಿಸಿದ ಮಗು ಮುಂದೆ ಯಾವುದೇ ರೀತಿಯ ಅನಾರೋಗ್ಯದಿಂದ ಬಳಲುವುದಿಲ್ಲ ಎಂಬುದು ನಂಬಿಕೆ. ಈ ಬಾರಿ ಕೊಲ್ಲೂರಿನ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘ ಕುಂದಾಪುರ ತಾಲೂಕು ಸಮಿತಿ ಮತ್ತು ಯಡ್ತರೆ ಗ್ರಾಮ ಪಂಚಾಯತ್ ವ್ಯಾಪ್ತಿಯ ನಿವೇಶನ ರಹಿತರ ಹೋರಾಟ ಸಮಿತಿಗಳ ನೇತೃತ್ವದಲ್ಲಿ ಯಡ್ತರೆ ಗ್ರಾಮದ ಬಡನಿವೇಶನ ರಹಿತರಿಂದ ನಿವೇಶನ ಹಕ್ಕು ಪತ್ರ ಕೋರಿಕೆಗೆ ಒತ್ತಾಯಿಸಿ ಸ್ವೀಕರಿಸಿದ ೨೬೪ ಅರ್ಜಿಗಳನ್ನು ಸ್ಥಳೀಯ ಗ್ರಾಮ ಪಂಚಾಯತ್ ಕಛೇರಿಗೆ ಸಾಮೂಹಿಕವಾಗಿ ಹಸ್ತಾಂತರಿಸುವ ಹೋರಾಟ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಈ ಸಂದರ್ಭದಲ್ಲಿ ಜರಗಿದ ನಿವೇಶನ ರಹಿತ ಅರ್ಜಿದಾರರ ಸಮಾವೇಶವನ್ನು ಉದ್ಘಾಟಿಸಿದ ನಿವೇಶನ ರಹಿತರ ಹೋರಾಟ ಸಮಿತಿಯ ಮುಖಂಡ ಗಣೇಶ ತೊಂಡೆಮಕ್ಕಿ ಮಾತನಾಡುತ್ತಾ ಯಡ್ತರೆ ಗ್ರಾಮದ ಬಡ ನಿವೇಶನ ರಹಿತರ ಅರ್ಜಿಗಳನ್ನು ಪರಿಶೀಲಿಸಿ ಅರ್ಹ ಫಲಾನುಭವಿ ನಿವೇಶನ ರಹಿತರ ಪಟ್ಟಿಯನ್ನು ಸಿದ್ಧಪಡಿಸಬೇಕು ಹಾಗೂ ನಿವೇಶನ ರಹಿತರಿಗಾಗಿ ಒಟ್ಟು ಎಷ್ಟು ಸರಕಾರಿ ಜಮೀನು ಅಗತ್ಯವಿದೆ ಎಂಬುದಕ್ಕೆ ಕಂದಾಯ ಇಲಾಖೆಗೆ ಪ್ರಸ್ಥಾವನೆ ಕಳುಹಿಸಬೇಕು ಎಂದು ಗ್ರಾಮ ಪಂಚಾಯತ್ ಅಭಿವೃದ್ಧಿಯವರಲ್ಲಿ ಒತ್ತಾಯಿಸಿದರು. ಸಿಐಟಿಯು ಕುಂದಾಪುರ ತಾಲೂಕು ಅಧ್ಯಕ್ಷ ಎಚ್. ನರಸಿಂಹ ಮುಖಂಡರಾದ ಸುರೇಶ್ ಕಲ್ಲಾಗರ…
ಸುನಿಲ್ ಹೆಚ್. ಜಿ. ಬೈಂದೂರು ಕುಂದಾಪುರ: ಕಾಲ ಉರುಳಿದ ಹಾಗೇ ನಮ್ಮ ಆಸಕ್ತಿಯೂ ಬದಲಾಗುತ್ತದೆ. ಹೊಸತನಕ್ಕೆ ತುಡಿಯುವ ಈ ಬದಲಾವಣೆಯೊಂದಿಗೆ ನಮ್ಮ ಕಲೆ, ಸಂಸ್ಕೃತಿ ಸಂಪ್ರದಾಯಗಳ ಪೈಕಿ ಕೆಲವು ಹೊಸ ಆಯಾಮ ಪಡೆದು ಮತ್ತೆ ನಮ್ಮ ಮುಂದೆ ಬಂದರೆ, ಇನ್ನು ಕೆಲವು ಮರೆಯಾಗಿಬಿಡುತ್ತವೆ. ಆದರೆ ಅಪರೂಪಕ್ಕೊಂದು ಸಂಸ್ಥೆಗಳು ಈ ಮರೆಯಾಗುವ ಕಲೆಗಳಿಗೆ ಮರುಜೀವ ತುಂಬುವ ಪ್ರಯತ್ನವನ್ನು ಮಾಡುತ್ತಲೇ ಬರುತ್ತವೆ. ಹೌದು. ಕಲಾಕ್ಷೇತ್ರ ಕುಂದಾಪುರ ಅಂಥಹದ್ದೊಂದು ಭಿನ್ನ ಕಾರ್ಯಕ್ರಮವನ್ನು ಕುಂದಾಪುರದಲ್ಲಿ ಕಳೆದ ಕೆಲವು ವರ್ಷಗಳಿಂದ ಆಯೋಜಿಸುತ್ತಿದೆ. ಹಿಂದೆಲ್ಲ ನವರಾತ್ರಿಯ ಸಮಯದಲ್ಲಿ ರಾತ್ರಿಯ ವೇಳೆಗೆ ಹೆಚ್ಚಾಗಿ ಕಂಡುಬರುತ್ತಿದ್ದ ಹುಲಿವೇಷ ಇಂದು ಕುಂದಾಪುರ ಭಾಗದಲ್ಲಿ ಅಪರೂಪವೆನಿಸಿಕೊಳ್ಳುತ್ತಿರುವುದಲ್ಲದೇ, ವ್ಯಾವಹಾರಿಕ ತಿರುವನ್ನು ಪಡೆದಿದೆ. ಹೊಸಬರು ಬರುತ್ತಿಲ್ಲ. ಕಲಿಯುವವರ್ಯಾರು, ಕುಣಿಯುವವರ್ಯಾರು ಪ್ರಶ್ನೆ. ಕುಣಿದರೂ ಅದು ಪಟ್ಟಣ, ದನಿಗಳ ಮನೆಗಳಿಗಷ್ಟೇ ಸೀಮಿತವಾಗಿದೆ. ಹೀಗಿರುವಾಗ ಹಳೆಯ ದಿನಗಳನ್ನೊಮ್ಮೆ ಮೆಲಕು ಹಾಕಿದರೆ ಎಷ್ಟು ಚಂದವಿರುತ್ತೆಂಬ ಆಲೋಚನೆಯೊಂದಿಗೆ ಆಯೋಜಿಸಿದ ಹುಲಿವೇಷ ಕುಂದಾಪುರ ಮಟ್ಟಿಗೆ ವಿಶೇಷವಾಗಿಯೇ ಮೂಡಿಬಂದಿತ್ತು. (ಕುಂದಾಪ್ರ ಡಾಟ್ ಕಾಂ ವರದಿ) ನವರಾತ್ರಿಯ ಎಲ್ಲಾ ವೇಷಗಳ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕಾಲೇಜಿನ ವಾರ್ಷಿಕ ಸಂಚಿಕೆ ‘ದರ್ಶನ’ಕ್ಕೆ ತನ್ನದೇ ಆದ ಶೈಲಿ ಮತ್ತು ಇತಿಹಾಸವಿದೆ. ಇಂದಿನವರೆಗೆ ಅದು ತನ್ನತನವನ್ನು ಉಳಿಸಿಕೊಂಡ ರೀತಿ ಅದೇ ದೊಡ್ಡ ಇತಿಹಾಸವಾಗುತ್ತದೆ ಎಂದು ಮಣಿಪಾಲದ ಅಕಾಡೆಮಿ ಆಫ್ ಜನರಲ್ ಎಜುಕೇಶನ್ ಇದರ ಆಡಳಿತಾಧಿಕಾರಿಗಳಾದ ಡಾ. ಹೆಚ್. ಶಾಂತಾರಾಮ್ ಹೇಳಿದರು. ಅವರು ಇಲ್ಲಿನ ಭಂಡರ್ಕಾರ್ಸ್ ಕಾಲೇಜಿನಲ್ಲಿ ಸಾಕಷ್ಟು ಬೆಳವಣಿಗೆಯನ್ನು ಜೊತೆಗೆ ಶಿರ್ಷಿಕೆಗೆ ತಕ್ಕ ಹಾಗೆ ಅದರ ಗುಣಮಟ್ಟವನ್ನು ಉಳಿಸಿಕೊಂಡಿದ್ದೇವೆ. : ಕಾಲೇಜಿನ ೨೦೧೬-೧೭ನೇ ಸಾಲಿನ ವಾರ್ಷಿಕ ಸಂಚಿಕೆ “ದರ್ಶನ” ವನ್ನು ಅನಾವರಣಗೊಳಿಸಿ ಮಾತನಾಡಿದರು. ಕಾಲೇಜಿನ ವಾರ್ಷಿಕ ಸಂಚಿಕೆ ಸಂಸ್ಥೆಯ ಚಟುವಟಿಕೆಗಳಿಗೆ ಹಿಡಿದ ಕನ್ನಡಿ. ಸಂಸ್ಥೆಯ ಸರ್ವೋತುಮುಖ ಬೆಳವಣಿಗೆಯನ್ನು ಹಿಡಿದಿಡುವಲ್ಲಿ ವಾರ್ಷಿಕ ಸಂಚಿಕೆ ಅತಿಮುಖ್ಯವೆನಿಸುತ್ತದೆ. ಈ ದಿಸೆಯಲ್ಲಿ ಅದರ ಗುಣಮಟ್ಟವನ್ನು ಉಳಿಸಿಕೊಂಡು ಮುಂದುವರಿಯಬೇಕು. ಹಾಗಾಗಿ ಬಹುಮಾನಕ್ಕಿಂತ ಅದರಲ್ಲಿನ ವಸ್ತುವಿಷ್ಯಗಳಲ್ಲಿನ ಗುಣಮಟ್ಟಕ್ಕೆ ಪ್ರಾಮುಖ್ಯತೆಯನ್ನು ಕೊಡಬೇಕು ಎಂದು ಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ.ಎನ್.ಪಿ.ನಾರಾಯಣ ಶೆಟ್ಟಿ ವಹಿಸಿದ್ದರು. ವಾರ್ಷಿಕ ಸಂಚಿಕೆ “ದರ್ಶನ” ದ ಕಾರ್ಯನಿರ್ವಾಹಕ ಸಂಪಾದಕರಾದ ಡಾ.ಹಯವದನ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕೋಟ: ಕೋಟ ಡಾ.ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿಯ ಅಂಗವಾಗಿ ಅಕ್ಟೋಬರ್ ೧೦ರಂದು ನಟ, ನಿರ್ಮಾಪಕ, ನಿರ್ದೇಶಕ ಪ್ರಕಾಶ್ ರೈ ಅವರಿಗೆ ಕಾರಂತ ಹುಟ್ಟೂರ ಪ್ರಶಸ್ತಿ ವಿತರಣೆ ಮಾಡಲಿದ್ದೇವೆ. ೧೩ ವರ್ಷದ ಕಾರ್ಯಕ್ರಮದ ಅಂಗವಾಗಿ ಅಕ್ಟೋಬರ್ 1ರಿಂದ 10ರ ವರೆಗೆ ವಿವಿಧ ಕಾರ್ಯಕ್ರಮಗಳು ನಡೆಯಲಿದೆ. ಈ ಬಾರಿ ವಿಶೇಷವಾಗಿ ಕಾರಂತರಿಗೆ ಪಂಚನಮನ ಸಲ್ಲಿಸು ವಿಭಿನ್ನ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಕೋಟ ಡಾ.ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ ಪ್ರತಿಷ್ಠಾನದ ಅಧ್ಯಕ್ಷ ಆನಂದ ಸಿ.ಕುಂದರ್ ಹೇಳಿದರು. ಅವರು ಕೋಟ ಡಾ.ಶಿವರಾಮ ಕಾರಂತ ಥೀಂ ಪಾರ್ಕ್‌ನಲ್ಲಿ ಅಕ್ಟೋಬರ್ ೧ ರಿಂದ ೧೦ರ ವರೆಗೆ ನಡೆಯಲಿರುವ ಕಾರಂತೋತ್ಸವ ತಂಬೆಲರು 2017ರ ಆಮಂತ್ರಣ ಪತ್ರಿಕೆ ಬಿಡುಗಡೆ ಮತ್ತು ಕಾರ್ಯಕ್ರಮ ಕಾರ್ಯ ಸ್ವರೂಪಗಳ ಬಗ್ಗೆ ನಡೆದ ಸಭೆಯಲ್ಲಿ ಆಮಂತ್ರಣ ಪತ್ರ ಬಿಡುಗಡೆಗೊಳಿಸಿ ಮಾತನಾಡಿದರು. ಅಕ್ಟೋಬರ್ ೧ರಂದು ಮಕ್ಕಳ ಹಬ್ಬದ ಮೂಲಕ ತಂಬೆಲರು ಕಾರ್ಯಕ್ರಮ ಉದ್ಘಾಟನೆಗೊಳ್ಳಿದ್ದು, ಪ್ರತಿದಿನ ಸಂಜೆ ೫.೩೦ರಿಂದ ಪ್ರಾದೇಶಿಕ ಮತ್ತು ಪ್ರಶಸ್ತಿ ವಿಜೇತ ಚಲನಚಿತ್ರಗಳು…
ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ಪ್ರತಿಯೊಂದು ಸಂಬಂಧಗಳು ಉಳಿದುಕೊಳ್ಳುವುದು ಪರಸ್ಪರ ನಂಬಿಕೆಯ ಆಧಾರದ ಮೇಲೆ. ವಿಮರ್ಶೆಗೆ ಅವಕಾಶ ನೀಡುವಂತಹ ನಂಬಿಕೆಗಳನ್ನು ಪ್ರತಿಯೊಬ್ಬರೂ ಹೊಂದಿರಬೇಕು ಎಂದು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ವಾಣಿಜ್ಯಶಾಸ್ತ್ರ ಉಪನ್ಯಾಸಕ ನರೇಂದ್ರ ಎಸ್ ಗಂಗೊಳ್ಳಿ ಅಭಿಪ್ರಾಯಪಟ್ಟರು. ಅವರು ಇತ್ತೀಚೆಗೆ ಕೋಟೇಶ್ವರದ ರೋಟರಿ ಭವನದಲ್ಲಿ ರೋಟರಿ ಕ್ಲಬ್ ಕೋಟೇಶ್ವರ ಮತ್ತು ಆನ್ಸ್ ಕ್ಲಬ್ ಕೋಟೇಶ್ವರ ವತಿಯಿಂದ ನಡೆದ ಕುಟುಂಬ ಸಮ್ಮಿಲನ ಕಾರ‍್ಯಕ್ರಮದಲ್ಲಿ ಮುಖ್ಯ ಅತಿಥಿ ಸ್ಥಾನದಿಂದ ಮಾತನಾಡಿದರು. ಮನಸ್ಸಿನಲ್ಲಿ ಸಂಬಂಧಗಳ ಬಗೆಗೆ ಅಸಹ್ಯವನ್ನು ತುಂಬುವ ಟಿವಿ ಧಾರಾವಾಹಿಗಳನ್ನು ಬದಿಗಿಟ್ಟು ಮನೆಗಳಲ್ಲಿ ನಮ್ಮ ನಡುವೆಯೇ ಪ್ರೀತಿಯ ಮಾತುಕತೆ ಕುಶಲೋಪರಿಗಳಿಗೆ ಹೆಚ್ಚಿನ ಪ್ರಾಧಾನ್ಯತೆಯನ್ನು ನೀಡಬೇಕು. ದಂಪತಿಗಳು ಪರಸ್ಪರರ ವೈಯಕ್ತಿಕ ಬದುಕುಗಳನ್ನು ಗೌರವಿಸುವ ವಿಶಾಲ ಮನೋಭಾವನೆಯನ್ನು ಹೊಂದಬೇಕು.ಪ್ರೀತಿಯ ಮಾತು ಸಂಬಂಧಗಳ ಬೆಳವಣಿಗೆಗೆ ಸಹಕಾರಿ ಎಂದು ಅವರು ಹೇಳಿದರು. ರೋಟರಿ ಅಧ್ಯಕ್ಷ ಎನ್ ಪ್ರಕಾಶ್ ಆಚಾರ್ ಪ್ರಾಸ್ತಾವಿಕ ಮಾತುಗಳನ್ನಾಡಿ ಸ್ವಾಗತಿಸಿದರು. ಆನ್ಸ್ ಅಧ್ಯಕ್ಷೆ ಶ್ರೀಮತಿ ಪ್ರಕಾಶ್ ಆಚಾರ್, ಆನ್ಸ್ ಕಾರ‍್ಯದರ್ಶಿ ಅಕ್ಷತಾ…
