ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಇಲ್ಲಿನ ಜಿ. ಎಸ್. ವಿ. ಅಸೋಸಿಯೇಶನ್ ವತಿಯಿಂದ ನಡೆಸಲ್ಪಡುತ್ತಿರುವ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಆಂಗ್ಲ ಮಾಧ್ಯಮ ಶಾಲೆ, ಸರಸ್ವತಿ ವಿದ್ಯಾಲಯ ಕನ್ನಡ ಮಾಧ್ಯಮ ಶಾಲೆ ಮತ್ತು ಸರಸ್ವತಿ ವಿದ್ಯಾಲಯ ಹಿರಿಯ ಪ್ರಾಥಮಿಕ ಶಾಲೆಗಳ ಶಿಕ್ಷಕರಿಗೆ ವ್ಯಕ್ತಿತ್ವ ವಿಕಸನ, ಉತ್ತಮ ಆರೋಗ್ಯ ಮತ್ತು ಸ್ಪೋಕನ್ ಇಂಗ್ಲೀಷ್ ಬಗ್ಗೆ ಮೂರು ದಿನಗಳ ತರಬೇತಿ ಕಾರ್ಯಕ್ರಮ ಎಸ್.ವಿ. ಆಂಗ್ಲ ಮಾಧ್ಯಮ ಶಾಲೆಯ ಸಭಾಂಗಣದಲ್ಲಿ ಬುಧವಾರ ನಡೆಯಿತು. ಜಿ. ಎಸ್. ವಿ. ಅಸೋಸಿಯೇಶನ್ ಅಧ್ಯಕ್ಷ ಡಾ. ಕಾಶೀನಾಥ ಪಿ. ಪೈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ಮಾಂಟೆಸರಿ ಮತ್ತು ಯೋಗ ತರಬೇತಿದಾರೆ ಬೆಂಗಳೂರಿನ ಜಯಶ್ರೀ ಮೃತ್ಯುಂಜಯ್ ಅವರು ಶಿಕ್ಷಕರಿಗೆ ವ್ಯಕ್ತಿತ್ವ ವಿಕಸನ, ಉತ್ತಮ ಆರೋಗ್ಯ ಮತ್ತು ಸ್ಪೋಕನ್ ಇಂಗ್ಲೀಮ್ ಬಗ್ಗೆ ಮಾಹಿತಿ ಮತ್ತು ತರಬೇತಿ ನೀಡಿದರು. ಸರಸ್ವತಿ ವಿದ್ಯಾ ಸಂಸ್ಥೆಗಳ ಸಂಚಾಲಕ ಎನ್. ಸದಾಶಿವ ನಾಯಕ್, ಜಿ. ಎಸ್. ವಿ. ಅಸೋಸಿಯೇಶನ್ ಕಾರ್ಯದರ್ಶಿ ಎಚ್. ಗಣೇಶ ಕಾಮತ್, ಸದಸ್ಯ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ ಬುಧವಾರದಂದು ಅಂತಿಮ ವರ್ಷದ ವಿದ್ಯಾರ್ಥಿಗಳಿಗಾಗಿ ಉದ್ಯೋಗ ಮಾರ್ಗದರ್ಶನ ಕಾರ್ಯಕ್ರಮವನ್ನು ಕಾಲೇಜಿನ ಮೂಕಾಂಬಿಕಾ ಸಭಾಂಗಣದಲ್ಲಿ ಆಯೋಜಿಸಲಾಗಿತ್ತು. ಪದವಿಯ ನಂತರ ಉದ್ಯೋಗದಲ್ಲಿ ಪ್ರವೇಶಿಸಬೇಕೆ ಅಥವಾ ಹೆಚ್ಚಿನ ಅಧ್ಯಯನ ಮಾಡಬೇಕೆಂಬ ಮಹತ್ವದ ನಿರ್ಧಾರ ತೆಗೆದುಕೊಳ್ಳುವಲ್ಲಿ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡುವ ಉದ್ದೇಶದಿಂದ ಈ ಕಾರ್ಯಕ್ರಮ ಆಯೋಜಿಸಲಾಯಿತು. ಕಾರ್ಯಕ್ರಮದಲ್ಲಿ ಪ್ರಮುಖ ಸಂಪನ್ಮೂಲ ವ್ಯಕ್ತಿಗಳಾಗಿ ಎಮ್ಐಟಿಇ. ಮೂಡಬಿದ್ರಿಯ ಉದ್ಯೋಗ, ತರಬೇತಿ ಮತ್ತು ಕೈಗಾರಿಕಾ ಸಂಬAಧಗಳ ನಿರ್ದೇಶಕ ನರೇಂದ್ರ ಯು. ಪಿ. ಹಾಗೂ ಎಮ್ಐಟಿ, ಮೂಡ್ಲಕಟ್ಟೆ, ಕುಂದಾಪುರದ ಮ್ಯಾನೇಜ್ಮೆಂಟ್ ಸ್ಟಡೀಸ್ ವಿಭಾಗದ ಮುಖ್ಯಸ್ಥೆಯಾದ ಹಾಗೂ ಸಹ ಪ್ರಾಧ್ಯಾಪಕೆಯಾಗಿರುವ ಡಾ. ಸುಚಿತ್ರಾ ದಿನೇಶ್ ಪೂಜಾರಿ ಅವರು ಭಾಗವಹಿಸಿದ್ದರು. ಅವರು ಉನ್ನತ ಅಧ್ಯಯನದ ಲಾಭಗಳನ್ನು, ಅದರ ಸದುಪಯೋಗಗಳು ಮತ್ತು ವೈಪರಿತ್ಯಗಳನ್ನು ವಿವರಿಸಿ, ವಿದ್ಯಾರ್ಥಿಗಳಿಗೆ ಸೂಕ್ತವಾದ ನಿರ್ಧಾರ ಕೈಗೊಳ್ಳುವಂತೆ ಪ್ರೇರೇಪಿಸಿದರು. ಪ್ರಾಂಶುಪಾಲರಾದ ಕೆ. ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿ ಮಾತನಾಡಿ, ವಿದ್ಯಾರ್ಥಿಗಳು ಜೀವನದ ಈ ಘಟ್ಟದಲ್ಲಿ ಸಮಚಿತ್ತದಿಂದ ಮಹತ್ವದ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಕರ್ನಾಟಕ ರಾಜ್ಯ ಪೌರ ನೌಕರರ ಸಂಘದ ಆದೇಶದನ್ವಯ ರಾಜ್ಯಾದ್ಯಂತ ಎಲ್ಲಾ ಮಹಾನಗರ ಪಾಲಿಕೆ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪೌರ ನೌಕರರ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಪೌರ ನೌಕರರಸಂಘ ಕೇಂದ್ರ ಕಛೇರಿ ಚಿತ್ರದುರ್ಗ, ಬೆಂಗಳೂರು ವತಿಯಿಂದ ಮೇ. 27ರಿಂದ ಆರಂಭಗೊಂಡಿರುವ ಅನಿರ್ದಿಷ್ಟಾವಧಿ ಮುಷ್ಕರದಲ್ಲಿ ಬೈಂದೂರು ಪಟ್ಟಣ ಪಂಚಾಯತ್ ಪೌರ ಸೇವಾ ನೌಕರರು ಭಾಗಿಯಾಗಿದ್ದು ಸೇವೆ ಸ್ಥಗಿತಗೊಳಿಸಿ ಪ.ಪಂ ಎದುರು ಎಲ್ಲಾ ನೌಕರರು ಬುಧವಾರ ಪ್ರತಿಭಟನೆ ನಡೆಸಿದರು. ಇದರಿಂದ ಕಚೇರಿಯ ಯಾವುದೇ ಕೆಲಸಗಳು ನಡೆಯಲಿಲ್ಲ. ಪ್ರಮುಖ ವಾಗಿ ನಗರ ಸ್ವಚ್ಚತೆ ಕಾರ್ಯಕ್ಕೂ ಅಡಚಣೆಯಾಗಿದೆ. ಪ್ರತಿಭಟನೆ ಮುಂದುವರಿದಲ್ಲಿ ನೀರಿನ ಸಮಸ್ಯೆಯೂ ತಲೆದೋರುವ ಸಾಧ್ಯತೆಗಳಿದೆ ಎಂದು ನಾಗರಿಕರು ಆತಂಕ ವ್ಯಕ್ತಪಡಿಸಿದ್ದಾರೆ. ಪೌರ ನೌಕರರ ಬೇಡಿಕೆಗಳನ್ನು ಸರಕಾರ ಈಡೇರಿಸಲು ಒತ್ತಾಯಿಸಲಾಗಿದೆ. ಈ ಬಗ್ಗೆ ಜಿಲ್ಲಾಧಿಕಾರಿಗಳ ಮುಖಾಂತರ ಸರಕಾರದ ಗಮನ ಸೆಳೆದು, ಪೌರ ನೌಕರರ ಬೇಡಿಕೆಗಳನ್ನು ಈಡೇರಿಸುವಂತೆ, ಶಿಫಾರಸ್ಸು ಮಾಡಲು ಪ್ರತಿಭಟನೆ ಕಾರರು ಸಂಬಂಧಪಟ್ಟ ಮೇಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಆಳ್ವಾಸ್ ಆಯುರ್ವೇದ ಕಾಲೇಜು ಆಸ್ಪತ್ರೆ, ಮಂಗಳೂರಿನ ಎ.ಜೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ ಕೇಂದ್ರ ಮತ್ತು ವಿವಿಧ ಸಮುದಾಯಗಳ ಸಹಯೋಗದಲ್ಲಿ ಆಳ್ವಾಸ್ ಆಯುರ್ವೇದ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ 2ನೇ ಹಂತದ ಉಚಿತ ನೇತ್ರ ತಪಾಸಣಾ ಶಿಬಿರ ಆಯೋಜಿಸಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಹೋದ ವರ್ಷ 9 ಬಾರಿ ಉಚಿತ ನೇತ್ರ ತಪಾಸಣಾ ಶಿಬಿರಗಳು ಬೇರೆ ಬೇರೆ ಸಮುದಾಯದ ಜೊತೆಯಲ್ಲಿ ಸೇರಿಕೊಂಡು ಆಳ್ವಾಸ್ ನಡೆಸಿದೆ. ಈ ಉಚಿತ ನೇತ್ರ ತಪಾಸಣಾ ಶಿಬಿರ ನಿರಂತರ ನಡೆದು ಬಹಳಷ್ಟು ಜನರಿಗೆ ಪ್ರಯೋಜನಕಾರಿಯಾಗಲಿ ಎಂದು ಆಶಿಸಿದರು. ಕಾರ್ಯಕ್ರಮಕ್ಕೆ ಸಹಕರಿಸಿದ ಎ.ಜೆ. ವೈದ್ಯಕೀಯ ಮಹಾವಿದ್ಯಾಲಯ, ಸಂಶೋಧನಾ ಕೇಂದ್ರದ ವೈದ್ಯರಿಗೆ ಹಾಗೂ ಸಹಕಾರ ನೀಡಿದ ವಿವಿಧ ಸಮುದಾಯಗಳ ಮುಖಂಡರಿಗೆ ಕೃತಜ್ಞತೆ ಸಲ್ಲಿಸಿದರು. ಎರಡು ಹಂತದ ಶಿಬಿರದಲ್ಲಿ ಒಟ್ಟು 237 ಮಂದಿ ಪಾಲ್ಗೊಂಡು, 116 ಮಂದಿ ಉಚಿತ ಕನ್ನಡಕ ಪಡೆಯಲು, 26 ಮಂದಿ ಶಸ್ತ್ರಚಿಕಿತ್ಸೆಗೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ರಾಜ್ಯ ಸರ್ಕಾರಿ ನೌಕರರ ಸಂಘ, ಜಿಲ್ಲಾ ಶಾಖೆ ಉಡುಪಿ ವತಿಯಿಂದ 2024-25 ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ ಮತ್ತು ದ್ವಿತಿಯ ಪಿಯುಸಿ ಪರೀಕ್ಷೆಗಳಲ್ಲಿ ಶೇ.90 ಮತ್ತು ಅದಕ್ಕಿಂತ ಮೇಲ್ಪಟ್ಟು ಅಂಕ ಗಳಿಸಿರುವ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲು ರಾಜ್ಯ ಸರ್ಕಾರಿ ನೌಕರರ ಮಕ್ಕಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸುವ ವಿದ್ಯಾರ್ಥಿಯ ತಂದೆ, ತಾಯಿ ರಾಜ್ಯ ಸರ್ಕಾರದ ಖಾಯಂ ನೌಕರರಾಗಿರಬೇಕು. ಸಂಘವು ನಿಗದಿಪಡಿಸಿರುವ ನಮೂನೆಯಲ್ಲಿ ಸಂಘದ ಜಿಲ್ಲೆ ಅಥವಾ ತಾಲೂಕು ಅಧ್ಯಕ್ಷರಿಂದ ದೃಢೀಕರಿಸಿ ಆನ್ಲೈನ್ ನಲ್ಲಿ ಅಪ್ಲೋಡ್ ಮಾಡಬೇಕು. ಅರ್ಜಿ ಸಲ್ಲಿಸಲು ಮೇ 31 ಕೊನೆಯ ದಿನವಾಗಿದೆ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಉಡುಪಿ ಜಿಲ್ಲಾಧ್ಯಕ್ಷ ಕೆ. ದಿನಕರ ಶೆಟ್ಟಿ ಅಂಪಾರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಹಂಗಾರಕಟ್ಟೆಯಲ್ಲಿ ಕರ್ನಾಟಕ ಜಲಸಾರಿಗೆ ಮಂಡಳಿ, ಬಂದರು ಮತ್ತು ಮೀನುಗಾರಿಕೆ ವಿಭಾಗ, ಉಡುಪಿ ಇವರು ಸಾಗರಮಾಲ ಯೋಜನೆಯಡಿಯಲ್ಲಿ ಕರ್ನಾಟಕ ಕರಾವಳಿಯಲ್ಲಿ ಸಂಚರಿಸುವ ವಾಣಿಜ್ಯ ಹಡಗುಗಳಿಗೆ ಸುರಕ್ಷಿತವಾಗಿ ತಂಗಲು ಆಶ್ರಯ ಕಲ್ಪಿಸಲು ಸಿಮೆಂಟ್, ಖಾದ್ಯತೈಲ ಮತ್ತು ಕೃಷಿ ಉತ್ಪನ್ನಗಳು ಮತ್ತು ಇತರ ವಾಣಿಜ್ಯ ಸರಕುಗಳನ್ನು ನಿರ್ವಹಿಸಲು, ಸುರಕ್ಷಿತ ಆಶ್ರಯ ಮತ್ತು ಸಂಗ್ರಹಣೆಗಾಗಿ ಬೇಡಿಕೆಗಳಿರುವುದರಿಂದ, ಸರಕು ಸಾಗಣೆಯ ಅನುಕೂಲಕ್ಕಾಗಿ 1.62 ಹೆಕ್ಟೇರ್ ಪ್ರದೇಶದಲ್ಲಿ ಕೋಸ್ಟಲ್ ಬರ್ತ್ ಅನ್ನು ಅಭಿವೃದ್ಧಿಪಡಿಸುವ ಕುರಿತು ಪರಿಸರ ಸಾರ್ವಜನಿಕ ಆಲಿಕೆ ಸಭೆಯು ಅಂದು ಹಂಗಾರಕಟ್ಟೆ ಫಿಶ್ರೀಸ್ನ ಜೆಟ್ಟಿ ಸಮೀಪದ ಹರಾಜು ಸಭಾಂಗಣದಲ್ಲಿ, ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಅಧ್ಯಕ್ಷತೆಯಲ್ಲಿ ನಡೆಯಿತು. ಜಿಲ್ಲಾಧಿಕಾರಿಗಳು ಪ್ರಸ್ತಾವಿತ ಯೋಜನೆಯ ಉದ್ದೇಶದ ಕುರಿತು ಸಾರ್ವಜನಿಕರಿಗೆ ತಿಳಿಸಿದರು. ನಂತರ ಯೋಜನಾದಾರರು ಯೋಜನೆಯ ಬಗ್ಗೆ ಶಕ್ತಿ ಬಿಂದು ಪ್ರದರ್ಶನ ನೀಡಿದರು. ಸಭೆಯಲ್ಲಿ ಭಾಗವಹಿಸಿದ್ದ ಸಾರ್ವಜನಿಕರ ಅಭಿಪ್ರಾಯ, ಅನಿಸಿಕೆ ಹಾಗೂ ಅಹವಾಲುಗಳನ್ನು ಸ್ವೀಕರಿಸಲಾಯಿತು. ಸಭೆಯಲ್ಲಿ ಮೀನುಗಾರರ ಸಂಘದವರು ಹಾಗೂ ಬಂದರು ಅಭಿವೃದ್ಧಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಶಂಕರನಾರಾಯಣ: ಇಲ್ಲಿನ ಸಿದ್ದಾಪುರದ ಐರಬೈಲು ಎಂಬಲ್ಲಿ ಗೋವು ಅಕ್ರಮ ಸಾಗಾಟ ಪತ್ತೆ ಹಚ್ಚಿ ವಾಹನ ಸಹಿತ ಗೋವುಗಳನ್ನು ಶಂಕರನಾರಾಯಣ ಪೊಲೀಸರು ಬುಧವಾರ ಸ್ವಾಧೀನ ಪಡಿಸಿಕೊಂಡಿದ್ದಾರೆ. ಪಿಎಸ್ಐ ನಾಸೀರ್ ಹುಸೇನ್ ಮತ್ತು ಸಿಬ್ಬಂದಿ ಕಾರ್ಯಾಚರಣೆ ನಡೆಸಿದರು. ಮಹಾರಾಷ್ಟ್ರದಲ್ಲಿ ಗೋವು ಕಳವು ಮಾಡಿ ವಾಹನದಲ್ಲಿ ಯಾವುದೇ ಪರವಾನಗಿ ಇಲ್ಲದೆ 3 ಜಾನುವಾರುಗಳನ್ನು ಸಾಗಿಸಲಾಗುತ್ತಿತ್ತು. ಆರೋಪಿಗಳಾದ ಮುಸ್ತಾಕ್ ಹುಸೇನ್ ಸಾಬ್ ನದಾಫ್, ಇರ್ಫಾನ್ ಇಬ್ರಾಹಿಂ ಸಾಬ್ ಜಮಾದಾರ್, ಮಹಮ್ಮದ್ ಆದಿಲ್ ಭಟ್ಕಳ ಎಂಬವರನ್ನು ದಸ್ತಗಿರಿ ಮಾಡಲಾಗಿದೆ. 3 ಲಕ್ಷ ರೂ. ಮೌಲ್ಯದ ವಾಹನ, 45 ಸಾವಿರ ಮೌಲ್ಯದ ಗೋವುಗಳು, 2 ಮೊಬೈಲ್ ಸ್ವಾಧೀನಪಡಿಸಿಕೊಳ್ಳಲಾಗಿದೆ. ಈ ಬಗ್ಗೆ ಶಂಕರನಾರಾಯಣ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕಳೆದ ಐದಾರು ವರ್ಷಗಳಿಂದ ಟೀಮ್ ಊರ್ಮನಿ ಮಕ್ಕಳ್ ತಂಡವು ಸಮಾಜಕ್ಕೆ ಮಾದರಿಯಾಗುತ್ತಿದೆ. ಕಲಾವಿದರ ಪ್ರೊತ್ಸಾಹ ಜೊತೆಗೆ ಸಮಾಜ ಸೇವೆಯಲ್ಲಿ ತನ್ನದೆ ಆದಂತ ವಿಶಿಷ್ಟ ಕಾರ್ಯಗಳನ್ನು ಈ ಸಮಾಜಕ್ಕೆ ಕೊಡುಗೆಯನ್ನು ನೀಡುತ್ತಾ ಬಂದಿದೆ. ನಾಲೈದು ತಿಂಗಳ ಹಿಂದೆಯಷ್ಟೆ ವಯೋವೃದ್ದ ಸುಮಾರು ಹದಿಮೂರು ಜನಕ್ಕೆ ವಾಕರ್ ಸ್ಟಿಕ್ ಹಂಚಿಕೆ ಮಾಡಿದ್ದಾರೆ. ಈ ಬಾರಿ ಸುಮಾರು ಹದಿನೈದಕ್ಕೂ ಹೆಚ್ಚು ಆಯ್ದ ಬಡ ಕೂಲಿಕಾರ್ಮಿಕರ 1 ರಿಂದ 10ನೇ ತರಗತಿಯ ಮಕ್ಕಳಿಗೆ ಸಂಪೂರ್ಣ ನೊಟ್ಸ್ ಪುಸ್ತಕ, ಪೆನ್ನು ಡ್ರಾಯಿಂಗ್ ಬುಕ್, ಪೆನ್ಸಿಲ್, ಕಾಪಿಬುಕ್, ಮಗ್ಗಿಪುಸ್ತಕ, ಸ್ಕೆಚ್ ಪೆನ್ನು ಮತ್ತು ಇತರ ಕಲಿಕಾ ಸಾಮಾಗ್ರಿಗಳನ್ನು ವಿದ್ಯಾರ್ಥಿಗಳ ಮನೆಗಳಿಗೆ ಹೋಗಿ ವಿತರಿಸಿ, ಒಂದಿಷ್ಟು ವಿದ್ಯಾರ್ಥಿಗಳ ಭವಿಷ್ಯಕ್ಕೆ ಬೆಳಕಾಗುವಲ್ಲಿ ಕಾರಣಿಕರ್ತರಾದರು. ಟೀಮ್ ಊರ್ಮನಿ ಮಕ್ಕಳ್ ತಂಡದ ನಿರ್ವಾಹಕರೂ ಹಾಗೂ ಆಟೊ ಚಾಲಕರು ಆದಂತಹ ನಾಗೇಶ್ ಗಾವಳಿ ಅವರು ತಮ್ಮ ಸ್ವಂತ ಸಂಪಾದನೆಯಲ್ಲಿ ಒಂದಿಷ್ಟು ಹಣವನ್ನು ಕೂಡಿಟ್ಟು ಇಂದು ವಿದ್ಯಾರ್ಥಿಗಳಿಗೆ ನೋಟ್ಸ್ ಹಂಚಿಕೆಗೆ ಸಂಪೂರ್ಣ ಸಹಕಾರ ನೀಡಿದ್ದು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಮಕ್ಕಳ ಹಕ್ಕುಗಳ ರಕ್ಷಣೆ ಮಾಡುವುದರೊಂದಿಗೆ ಮಕ್ಕಳು ಸಮಾಜದಲ್ಲಿ ಆರೋಗ್ಯಯುತ ಜೀವನ ನಡೆಸಿ, ಉತ್ತಮ ಭವಿಷ್ಯ ಕಟ್ಟಿಕೊಳ್ಳಲು ಅಗತ್ಯವಿರುವ ಪೂರಕ ವಾತಾವರಣ ಅಧಿಕಾರಿಗಳು ಕಲ್ಪಿಸಿಕೊಡಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾ ಕುಮಾರಿ ಹೇಳಿದರು. ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ವಿವಿಧ ಸಮಿತಿ ಸಭೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯಲ್ಲಿ ಭಿಕ್ಷಾಟಣೆ ಮಾಡುತ್ತಿರುವ ಮಕ್ಕಳು, ಬಾಲಕಾರ್ಮಿಕ ಮಕ್ಕಳು, ಕಾಣೆಯಾದ ಮಕ್ಕಳು, ಮಾದಕವ್ಯಸನಿಯ ಮಕ್ಕಳು, ಪರಿತ್ಯಕ್ತ ಮಕ್ಕಳು, ಬಾಲ್ಯವಿವಾಹವಾದ ಮಕ್ಕಳು, ಹಿಂಸೆ ಹಾಗೂ ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಮಕ್ಕಳು, ಶಿಕ್ಷಣದಿಂದ ವಂಚಿತರಾದ ಮಕ್ಕಳು ಕಂಡುಬಂದಲ್ಲಿ ಅಂತಹ ಮಕ್ಕಳ ರಕ್ಷಣೆಗಾಗಿ ಮಕ್ಕಳ ರಕ್ಷಣಾ ಘಟಕದ ಸಹಾಯವಾಣಿ ಸಂಖ್ಯೆ 1098/ 112 ಕರೆ ಮಾಡಿ ಮಾಹಿತಿ ನೀಡುವಂತೆ ತಿಳಿಸಿದರು. ಮಕ್ಕಳನ್ನು ದತ್ತು ಪಡೆಯಲು ಇಚ್ಛಿಸುವವರು ವೆಬ್ಸೈಟ್ cara.wcd.gov.in ಮುಖಾಂತರ ಅರ್ಜಿಯನ್ನು ಸಲ್ಲಿಸಿ ಕಾನೂನು ಬದ್ಧವಾಗಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: STAIRS ನ್ಯಾಶನಲ್ ಗೇಮ್ಸ್ – 2025 ಅವರು ಮೇ. 19 ರಿಂದ ಮೇ.22ರ ತನಕ ಟಾಲ್ಕಟೋರಾ ಒಳಾಂಗಣ ಕ್ರೀಡಾಂಗಣ ನವದೆಹಲಿಯಲ್ಲಿ ಆಯೋಜಿಸಿದ ಪುಟ್ಬಾಲ್ ಪಂದ್ಯಾಟದಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಹಿಮೇಶ್ ಕರ್ನಾಟಕ ತಂಡದಿಂದ ಪ್ರತಿನಿಧಿಸಿ ಪ್ರಥಮ ಸ್ಥಾನ ಪಡೆದು ರಾಷ್ಟ್ರ ಮಟ್ಟದಲ್ಲಿ ಸಾಧನೆ ಮೆರೆದಿದ್ದಾನೆ. ಸಾಧಕ ವಿದ್ಯಾರ್ಥಿಯನ್ನು ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು , ಬೋಧಕ – ಬೋಧಕೇತರ ಸಿಬ್ಬಂದಿ ವರ್ಗ ಅಭಿನಂದಿಸಿದ್ದಾರೆ.
