ಕುಂದಾಪ್ರ ಡಾಟ್ ಕಾಂ ಸುದ್ದಿ.ಶಂಕರನಾರಾಯಣ: ಮೊಗವೀರ ಯುವ ಸಂಘಟನೆ ರಿ. ಉಡುಪಿ ಜಿಲ್ಲೆ ಹಾಲಾಡಿ ಶಂಕರನಾರಾಯಣ ಘಟಕ ಮತ್ತುಜಿ. ಶಂಕರ್ ಪ್ಯಾಮಿಲಿ ಟ್ರಸ್ಟ್ ರಿ. ಅಂಬಲಪಾಡಿ, ಉಡುಪಿ ಇವರ ನೇತ್ರತ್ವದಲ್ಲಿ ಸದಾ ಮೊಗವೀರ ಸಮಾಜದ ಒಳಿತನ್ನೇ ಬಯಸುವ, ಬಡವರ ಪಾಲಿನ ಆಶಾಕಿರಣ, ಅನಾರೋಗ್ಯ ಪೀಡಿತರ ಜೀವ ರಕ್ಷಕ, ವಿದ್ಯಾ ಪೋಷಕ, ಕೊಡುಗೈ ದಾನಿ, ನಮ್ಮೆಲ್ಲರ ಮಾರ್ಗದರ್ಶಕರಾದ ನಾಡೋಜ ಡಾ. ಜಿ. ಶಂಕರ್ ಅವರ ಹುಟ್ಟುಹಬ್ಬದ ಸಂಭ್ರಮದಲ್ಲಿ ನಮ್ಮ ಘಟಕ ವ್ಯಾಪ್ತಿಯ ಯುವಕರು ಮತ್ತು ಯುವತಿಯರಿಗಾಗಿ ʼಯುವ ಪ್ರೇರಣಾ ನಾಯಕತ್ವ ತರಬೇತಿʼ ಉದ್ಯೋಗದ ಕುರಿತು ಮಾಹಿತಿ ಕಾರ್ಯಗಾರವನ್ನು ಆಯೋಜಿಸಿ ಹಲವಾರು ವಿಷಯಗಳ ಕುರಿತು ಮಾಹಿತಿ ವಿನಿಮಯವಾಯಿತು. ವೃತ್ತಿಯಲ್ಲಿ ಇಂಜಿನಿಯರ್ ಆಗಿರುವ ರಾಜು ಮೊಗವೀರ ಬಿದ್ಕಲ್‌ಕಟ್ಟೆ , ಶಿಕ್ಷಕರಾಗಿರುವ ಗಣೇಶ್ ಕಾಂಚನ್ ಮತ್ತು ಶಿಕ್ಷಕರಾಗಿರುವ ನಾಗರಾಜ್ ಎನ್. ಪುತ್ರನ್ ಸಂಪನ್ಮೂಲ ವ್ಯಕ್ತಿಗಳಾಗಿ ಉದ್ಯೋಗದ ಮಾಹಿತಿ, ನಾಯಕತ್ವ, ಸಂಘಟನೆಯಲ್ಲಿ ನಮ್ಮ ಜವಾಬ್ದಾರಿಯ ಕುರಿತು ಮಾಹಿತಿ ವಿನಿಮಯವಾಯಿತು. ಘಟಕದ ಅಧ್ಯಕ್ಷ ಶರತ್ ಸೌಡ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಜಗದೀಶ್ ಬಿದ್ಕಲಕಟ್ಟೆ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿಕೋಟ: ಹೆಣ್ಣಿನ ಬದುಕನ್ನು ನಿಯಂತ್ರಿಸುವ ಸಾಮಾಜಿಕ ಸಂಪ್ರದಾಯಗಳು ವಿಧವಾ ಪದ್ಧತಿ ಪುರುಷಧಿಪತ್ಯ, ವಿವಾಹದ ಕುರಿತಾದ ಏಕಮುಖ ನೈತಿಕತೆ ಮತ್ತು ಆರ್ಥಿಕ ಅಸಹಾಯಕತೆಯ ಪರಿಣಾಮವಾಗಿ ರೂಪುಗೊಂಡ ಸಾಮಾಜಿಕ ದುರಂತಗಳನ್ನು ವಿರೋಧಿಸಿ ಹೆಣ್ಣಿನ ಸಮಾನತೆ ಹಕ್ಕನ್ನು ಒತ್ತಿ ಹೇಳುವ ಕನ್ಯಾಬಲಿಯು ಕಾರಂತರ ಪ್ರಾತಿನಿಧಿಕ ಕಾದಂಬರಿ ಎಂದು ಹಿರಿಯಡ್ಕ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಉಪನ್ಯಾಸಕಿ ಶಾಲಿನಿ ಯು.ಬಿ. ಹೇಳಿದರು. ಅವರು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಡಾ.ಶಿವರಾಮ ಕಾರಂತ ಟ್ರಸ್ಟ್ ವತಿಯಿಂದ ಕಾಳಾವರ ವರದರಾಜ್ ಎಂ ಶೆಟ್ಟಿ ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ, ಕೋಟೇಶ್ವರ ಇಲ್ಲಿ ಕಾರಂತರ ಜನ್ಮದಿನೋತ್ಸವದ ಅಂಗವಾಗಿ ನಡೆದ ಅರಿವಿನ ಬೆಳಕು ಉಪನ್ಯಾಸ ಮಾಲೆ-18 ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿದರು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕಾಲೇಜಿನ ಪ್ರಭಾರ ಪ್ರಾಂಶುಪಾಲ ಡಾ. ಸುಬ್ಮಹ್ಮಣ್ಯ ಅವರು ಕಾರಂತರ ಕುರಿತು ಇಂದಿನ ಯುವ ಪೀಳಿಗೆಗೆ ಅರಿವು ಮೂಡಿಸುವುದು ಅತೀ ಅಗತ್ಯವಾಗಿದೆ. ಸಾಹಿತ್ಯದ ಕಡೆಗೆ ವಿದ್ಯಾರ್ಥಿಗಳಿಗೆ ಅಭಿರುಚಿಯನ್ನು ಬೆಳೆಸುವುದು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಬೆಂಗಳೂರಿನ ಪಿಸಿಪಿಎ ಸಭಾಂಗಣದಲ್ಲಿ ನಡೆದ ಸಂಜೋಗ್ ಸಂಗೀತ ಮಹೋತ್ಸವ- ಗುರುವಂದನಾ ಕಾರ್ಯಕ್ರಮದಲ್ಲಿ ಸಂಜೋಗ್ ಬಾನ್ಸುರಿ ಮಹಾವಿದ್ಯಾಲಯದ 25ನೇ ವಾರ್ಷಿಕೋತ್ಸವದ ಅಂಗವಾಗಿ ಕೊಳಲು ವಾದನದಲ್ಲಿ ಅತ್ಯುತ್ತಮ ಪ್ರತಿಭೆ ಹಾಗೂ ಶ್ರೇಷ್ಠತೆಗಾಗಿ ಗಂಗೊಳ್ಳಿಯ ಎಸ್.ವಿ. ಪದವಿಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿ ಶಾಮ್ ಅವರಿಗೆ ಈಶಾನ್ ಭಾರದ್ವಾಜ್ ಸ್ಮಾರಕ ವಿದ್ಯಾರ್ಥಿವೇತನ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು. ಕಾವೇರಿ ಭಾರದ್ವಾಜ್ ಅವರು ಶಾಮ್ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿದರು. ಕಾರ್ಯಕ್ರಮದಲ್ಲಿ ಪ್ರಸಿದ್ಧ ಕೊಳಲು ವಾದಕ ಡಾ. ಪಂಡಿತ್ ಪ್ರವೀಣ್ ಗೋಡ್ಕಿಂಡಿ, ಸಾರಿಕಾ ಪ್ರವೀಣ್ ಗೋಡ್ಕಿಂಡಿ, ಡಾ.ಪಂಡಿತ್ ಕಿರಣ್ ಗೋಡ್ಕಿಂಡಿ, ರಾಧಿಕಾ ಕಿರಣ್ ಗೋಡ್ಕಿಂಡಿ, ಪದ್ಮಜಾ ಗೋಡ್ಕಿಂಡಿ ಹಾಗೂ ಭಾರದ್ವಾಜ್ ಕುಟುಂಬದವರು ಉಪಸ್ಥಿತರಿದ್ದರು. ಶಾಮ್ ಗಂಗೊಳ್ಳಿಯ ಛಾಯಾಗ್ರಾಹಕ ಗಣೇಶ ಹಾಗೂ ಮಾಲತಿ ದಂಪತಿ ಪುತ್ರ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಉಡುಪಿ ತಾಲೂಕು ಮಣಿಪಾಲದಲ್ಲಿರುವ ಅಲ್ಪಸಂಖ್ಯಾತರ ಮುಸ್ಲಿಂ, ಕ್ರಿಶ್ಚಿಯನ್, ಸಿಖ್, ಜೈನ್ ಹಾಗೂ ಬೌದ್ಧ ವರ್ಗದ ಮೆಟ್ರಿಕ್ ನಂತರದ ಬಾಲಕರ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯ ಪ್ರವೇಶಾತಿಗೆ ನವೀಕರಣ ವಿದ್ಯಾರ್ಥಿಗಳ ಸೀಟು ಹಂಚಿಕೆಯಾಗಿ ಉಳಿಕೆ ಸೀಟುಗಳ ಪ್ರವೇಶಾತಿಗೆ ಸ್ಟೇಟ್ ಹಾಸ್ಟೆಲ್ ಪೋರ್ಟಲ್ ತಂತ್ರಾಂಶದ ಮೂಲಕ ಪಿ.ಯು.ಸಿ, ಡಿಪ್ಲೋಮಾ, ಪದವಿ, ಸ್ನಾತಕೋತ್ತರ ಪದವಿ ಹಾಗೂ ತಾಂತ್ರಿಕ ಮತ್ತು ವೃತ್ತಿಪರ ಕೋರ್ಸಿನ ವಿದ್ಯಾರ್ಥಿಗಳಿಂದ ವೆಬ್‌ಸೈಟ್ https://shp.karnataka.gov.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಅಕ್ಟೋಬರ್ 31 ಕೊನೆಯ ದಿನ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿಗಳ ಕಚೇರಿ, ಮಣಿಪಾಲ, ಉಡುಪಿ ದೂ.ಸಂಖ್ಯೆ: 0820-2574596, ಸಹಾಯವಾಣಿ ಸಂಖ್ಯೆ: 8277799990 ಅಥವಾ ಜಿಲ್ಲಾ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ ದೂ.ಸಂಖ್ಯೆ: 0820-2574596 ಅಥವಾ ಕಾರ್ಕಳ ದೂ.ಸಂಖ್ಯೆ: 08258-231101 ಹಾಗೂ ಕುಂದಾಪುರ ದೂ.ಸಂಖ್ಯೆ: 08254-230370 ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ…
ಕುಂದಾಪ್ರ ಡಾಟ್ ಕಾಂ ಸುದ್ದಿ.ನವದೆಹಲಿ: ಮೂರು ದಿನಗಳ ಭಾರತ ಭೇಟಿಗಾಗಿ ಸೋಮವಾರ ನವದೆಹಲಿಗೆ ಆಗಮಿಸಿದ ಸ್ವಿಜರ್ಲೆಂಡ್ ಅಧ್ಯಕ್ಷ ಗೈ ಪರ್ಮೆಲಿನ್ ಅವರಿಗೆ ಭವ್ಯ ಸ್ವಾಗತ ಕೋರಲಾಯಿತು. ನಂತರ ಪರ್ಮೆಲಿನ್ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿಯವರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಿದರು. ವ್ಯಾಪಾರ, ಹೂಡಿಕೆ, ಎಐ, ರಕ್ಷಣಾ ಉತ್ಪಾದನೆ, ವಿಜ್ಞಾನ ಮತ್ತು ತಂತ್ರಜ್ಞಾನ ರಂಗಗಳಲ್ಲಿ ಉಭಯ ದೇಶಗಳ ಸಹಕಾರವನ್ನು ಮತ್ತಷ್ಟು ವಿಸ್ತರಿಸುವ ನಿಟ್ಟಿನಲ್ಲಿ ಹಾಗೂ ಜಾಗತಿಕ ವಿದ್ಯಮಾನಗಳ ಬಗ್ಗೆ ಇಬ್ಬರೂ ನಾಯಕರು ಚರ್ಚಿಸಿದರು. ಭಾರತ-ಸ್ವಿಜರ್ಲೆಂಡ್ ನಡುವೆ 2024ರ ಮಾರ್ಚ್‌ನಲ್ಲಿ ಆಗಿರುವ ಸಮಗ್ರ ವ್ಯಾಪಾರ ಮತ್ತು ಆರ್ಥಿಕ ಪಾಲುದಾರಿಕೆ ಒಪ್ಪಂದ (ಟಿಎಪಿಎ)ದಿಂದಾಗಿ ಆರ್ಥಿಕ ಸಹಕಾರದಲ್ಲಿ ಆಗುತ್ತಿರುವ ಏರುಗತಿಯನ್ನು ಉಭಯ ನಾಯಕರು ಉಲ್ಲೇಖಿಸಿದರು. ಸ್ವಿಜರ್ಲೆಂಡ್ ಅಧ್ಯಕ್ಷ ಗೈ ಪರ್ಮೆಲಿನ್ ಗೌರವಾರ್ಥ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಸೋಮವಾರ ನವದೆಹಲಿಯ ಹೈದರಾಬಾದ್ ಹೌಸ್‌ನಲ್ಲಿ ಆಯ್ದ ಗಣ್ಯರಿಗೆ ಏರ್ಪಡಿಸಿದ್ದ ಔತಣಕೂಟದಲ್ಲಿ ವಿಆರ್‌ಎಲ್ ಸಮೂಹ ಸಂಸ್ಥೆಗಳ ವ್ಯವಸ್ಥಾಪಕ ನಿರ್ದೇಶಕ ಡಾ.ಆನಂದ ಸಂಕೇಶ್ವರ ಅವರು ಆಹ್ವಾನಿತರಾಗಿ ಭಾಗಿಯಾಗಿದ್ದರು. ಭಾರತದ 13 ಗಣ್ಯರು ಹಾಗೂ ಸ್ವಿಸ್…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಶಿಕ್ಷಣವೆಂಬುದು ಕೇವಲ ಪಠ್ಯಪುಸ್ತಕದ ಬೋಧನೆಗಷ್ಟೇ ಸೀಮಿತವಾಗಿರದೆ, ಮಗುವಿನ ಸರ್ವಾಂಗೀಣ ವಿಕಸನಕ್ಕೆ ದಾರಿದೀಪವಾಗಬೇಕು. ಅಂಥ ಸಾರ್ಥಕ ಕಾಯಕದಲ್ಲಿ ತಮ್ಮನ್ನು ತೊಡಗಿಸಿಕೊಂಡು, ಗ್ರಾಮೀಣ ಹಾಗೂ ಸರಕಾರಿ ಶಾಲಾ ಶಿಕ್ಷಣ ವ್ಯವಸ್ಥೆಯನ್ನು ಗಟ್ಟಿಗೊಳಿಸುವಲ್ಲಿ ನಿರಂತರ ಶ್ರಮಿಸುತ್ತಿರುವ ಉದ್ಯಾವರ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಸಹಶಿಕ್ಷಕಿ ತಾರಾಮತಿ ದೇವಾಡಿಗ ಅವರಿಗೆ ‘ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕಿ’ ಪ್ರಶಸ್ತಿ ಲಭಿಸಿದೆ. ಬ್ರಹ್ಮಾವರದ ಬಂಟರ ಭವನದಲ್ಲಿ ಕರ್ನಾಟಕ ರಾಜ್ಯ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಗಳ ಸಮನ್ವಯ ಕೇಂದ್ರ ವೇದಿಕೆ (SDMCEF), ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಶಾಲಾ ಶಿಕ್ಷಣ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಜರುಗಿದ ‘ಗುರುವಂದನಾʼ ಸಮಾರಂಭದಲ್ಲಿ ಈ ಗೌರವಾರ್ಪಣೆ ನಡೆದಿದೆ. ಕೋಟೇಶ್ವರ ಗೀತಾ ಎಚ್.ಎಸ್.ಎನ್. ಫೌಂಡೇಶನ್‌ನ ಅಧ್ಯಕ್ಷ ಶಂಕರ ಐತಾಳ್ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ನಿತಿನ್ ವೈ. ರಾವ್ ಉಪಸ್ಥಿತಿಯಲ್ಲಿ ಈ ಸನ್ಮಾನ ನೆರವೇರಿರುವುದು ಕಾರ್ಯಕ್ರಮದ ಗಾಂಭೀರ್ಯವನ್ನು ಹೆಚ್ಚಿಸಿದೆ. ಬೇರಿನ ನಂಟು ಮತ್ತು ನಿಷ್ಠೆಯ ಪಯಣ:ಕರಾವಳಿಯ ಗ್ರಾಮೀಣ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಾಲೂಕು ಕಚೇರಿಯಲ್ಲಿ ಬೈಂದೂರು ತಾಲೂಕು ವ್ಯಾಪ್ತಿಯ ಅಕ್ರಮ ಸಕ್ರಮ ಕಡತಗಳ ಹಾಗೂ 94ಸಿ ಹಾಗೂ 94ಸಿಸಿ ಅರ್ಜಿಗಳ ವಿಲೇವಾರಿಯನ್ನು ಕಳೆದ ಮೂರು ವರ್ಷಗಳಿಂದ ತಾಂತ್ರಿಕ ಸಮಸ್ಯೆಗಳ ನೆಪವೊಡ್ಡಿ ವಿನಾಕಾರಣ ವಿಳಂಬ ಮಾಡುತ್ತಿರುವ ಬಗ್ಗೆ ಸಾರ್ವಜನಿಕರಿಂದ ದೂರು ಆಧರಿಸಿ ಸಂಬಂಧ ಪಟ್ಟ ಅಧಿಕಾರಿಗಳ ಸಭೆ ನಡೆಸಿದ ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರುರಾಜ್ ಶೆಟ್ಟಿ ಗಂಟಿಹೊಳೆ. ಕಳೆದ ಒಂದು ವರ್ಷದ ಅವಧಿಯಲ್ಲಿ ಸಾವಿರಾರು ಸಂಖ್ಯೆಯಲ್ಲಿ ಅಕ್ರಮ ಸಕ್ರಮ ಅರ್ಜಿಗಳನ್ನು ಅಧಿಕಾರಿಗಳು ರದ್ದು ಪಡಿಸಿರುವ ಬಗ್ಗೆ ಸಭೆಯಲ್ಲಿ ಕೆಂಡಾ ಮಂಡಲರಾದರು. ಅಕ್ರಮ ಸಕ್ರಮ ಅರ್ಜಿಗಳ ವಿಲೇವಾರಿಯಲ್ಲಿ ಪಾರದರ್ಶಕತೆ ತರುವ ನಿಟ್ಟಿನಲ್ಲಿ ಸರಕಾರ ತಂತ್ರಾಂಶಗಳನ್ನು ಅಳವಡಿಸಿದ್ದರೂ ಸದ್ರಿ ತಂತ್ರಾಂಶಗಳನ್ನು ಅರ್ಥೈಸಿಕೊಳ್ಳುವುದರಲ್ಲಿ ಅಧಿಕಾರಿಗಳ ಅಸಡ್ಡೆ ಹಾಗೂ ಗ್ರಾಮೀಣ ಭಾಗದ ಬಡ ರೈತರುಗಳ ಅಕ್ರಮ ಸಕ್ರಮ ಅರ್ಜಿಗಳು, ಆರ್ ಆರ್ ಟಿ ಅರ್ಜಿಗಳ ಬಗ್ಗೆ ಕಾಳಜಿ ತೋರಿಸದೇ ಕಳೆದ ಮೂರು ವರ್ಷಗಳಲ್ಲಿ ನೀಡಿದ ನಿರಂತರ ಸೂಚನೆಗಳ ಹೊರತಾಗಿಯೂ ಅರ್ಜಿ ವಿಲೇವಾರಿಗೆ ವಿಳಂಬ ತೋರಿಸುತ್ತಿರುವ ತಹಶೀಲ್ದಾರ್, ಸರ್ವೇ ಇಲಾಖೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಭಾರತೀಯ ಜನತಾ ಪಾರ್ಟಿ, ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾ ಉಡುಪಿ ಜಿಲ್ಲೆ, ಇವರ ಆಶ್ರಯದಲ್ಲಿ ಸೇವಾ ಸಂಕಲ್ಪ ಅಭಿಯಾನದಡಿಯಲ್ಲಿ ನಡೆದ ಬೈಂದೂರು ವಿಧಾನ ಸಭಾ ಕ್ಷೇತ್ರದ ರಾಪಿಡ್ ಚೆಸ್ ಪಂದ್ಯಾಟದಲ್ಲಿ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆಯ 6ನೇ ತರಗತಿಯ ವಿದ್ಯಾರ್ಥಿನಿ ಸಾಗರಿ ಆರ್ ಪೂಜಾರಿ ದ್ವಿತೀಯ ಸ್ಥಾನ ಪಡೆದಿರುತ್ತಾಳೆ. ಇವರಿಗೆ, ಶಾಲಾ ಆಡಳಿತ ಮಂಡಳಿ, ಮುಖ್ಯ ಶಿಕ್ಷಕರು, ಬೋಧಕ-ಬೋಧಕೇತರ ವರ್ಗದವರು ಅಭಿನಂದನೆ ಸಲ್ಲಿಸಿರುತ್ತಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಮೂಡ್ಲಕಟ್ಟೆ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (MITK) ತನ್ನ ಪ್ರಮುಖ ‘ಉದ್ಯಮಶೀಲತೆ ಮತ್ತು ನಾವೀನ್ಯತೆ ಘಟಕ’ವಾದ “ಉದ್ಯಮ್‌ಎಕ್ಸ್” (UdyamX) ಅನ್ನು ಇತ್ತೀಚೆಗೆ ಕಾಲೇಜಿನಲ್ಲಿ ಅಧಿಕೃತವಾಗಿ ಪ್ರಾರಂಭಿಸಿದರು. ನಾವೀನ್ಯತೆಯನ್ನು ಉತ್ತೇಜಿಸುವುದು, ಬಲವಾದ ಸ್ಟಾರ್ಟಪ್ ಸಂಸ್ಕೃತಿಯನ್ನು ಬೆಳೆಸುವುದು ಮತ್ತು ಸಮಗ್ರ ‘ಇನ್‌ಕ್ಯುಬೇಷನ್’ (ವ್ಯವಹಾರ ಅಭಿವೃದ್ಧಿ) ಬೆಂಬಲವನ್ನು ಒದಗಿಸುವ ನಿಟ್ಟಿನಲ್ಲಿ ವಿದ್ಯಾರ್ಥಿ-ಕೇಂದ್ರಿತ ವೇದಿಕೆಯನ್ನು ಸೃಷ್ಟಿಸುವುದು ಉದ್ಯಮ್‌ಎಕ್ಸ್‌ನ ಮುಖ್ಯ ಉದ್ದೇಶವಾಗಿದೆ. ಸೃಜನಶೀಲ ಕಲ್ಪನೆಗಳನ್ನು ವ್ಯಾಪಾರ ಉದ್ಯಮಗಳಾಗಿ ಪರಿವರ್ತಿಸಲು ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ಅನುಭವ, ಮಾರ್ಗದರ್ಶನ ಮತ್ತು ಬೆಂಬಲವನ್ನು ನೀಡುವ ಮೂಲಕ ಶೈಕ್ಷಣಿಕ ಕಲಿಕೆ ಮತ್ತು ಕೈಗಾರಿಕೆಯ ಅಂತರವನ್ನು ಕಡಿಮೆ ಮಾಡುವ ಗುರಿಯನ್ನು ಈ ಘಟಕ ಹೊಂದಿದೆ. ಮುಖ್ಯ ಅತಿಥಿಗಳಾದ ಮಾಹೆ ಮಣಿಪಾಲದ ಎಂಸಿಐಎಸ್ ಮಾಜಿ ನಿರ್ದೇಶಕ ಡಾ. ಹರೀಶ್ಚಂದ್ರ ಹೆಬ್ಬಾರ್ ಅವರು ಸ್ಫೂರ್ತಿದಾಯಕ ಭಾಷಣ ಮಾಡಿ, ವಿದ್ಯಾರ್ಥಿಗಳು ಆಲೋಚನೆಗಳು, ನಾವೀನ್ಯತೆ ಮತ್ತು ಉದ್ಯಮಶೀಲತೆಯನ್ನು ವಿಶಾಲ ದೃಷ್ಟಿಕೋನದಿಂದ ನೋಡುವಂತೆ ಕರೆ ನೀಡಿದರು. ನೈಜ ನಾವೀನ್ಯತೆಯು ಕೇವಲ ದಿನನಿತ್ಯದ ಸಮಸ್ಯೆಗಳನ್ನು ಪರಿಹರಿಸುವುದನ್ನು ಮೀರಿ, ಪ್ರಭಾವಶಾಲಿ ಮತ್ತು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಡಾ. ಶಿವರಾಮ ಕಾರಂತ ಟ್ರಸ್ಟ್ ಉಡುಪಿ ಜಿಲ್ಲೆ ವತಿಯಿಂದ ಡಾ. ಶಿವರಾಮ ಕಾರಂತರ ಜನ್ಮದಿನೋತ್ಸವದ ಪ್ರಯುಕ್ತ ಪದವಿ ವಿದ್ಯಾರ್ಥಿಗಳಿಗಾಗಿ ಕಾರಂತರ ಬದುಕು-ಬರಹಗಳ ಕುರಿತಾದ ರಸಪ್ರಶ್ನೆ ಸ್ಪರ್ಧೆಯು ಅ. 09 ರಂದು ಬೆಳಿಗ್ಗೆ 10 ಗಂಟೆಗೆ ಬ್ರಹ್ಮಗಿರಿಯ ರೆಡ್ ಕ್ರಾಸ್ ಭವನದಲ್ಲಿ ಆಯೋಜಿಸಲಾಗಿದೆ. ಸ್ಪರ್ಧೆಯಲ್ಲಿ ಉಡುಪಿ ಜಿಲ್ಲೆಯ ಪದವಿ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಬಹುದಾಗಿದೆ. ಪ್ರತಿ ಕಾಲೇಜಿನಿಂದ ಎರಡು ವಿದ್ಯಾರ್ಥಿಗಳ ಒಂದು ತಂಡವು ಭಾಗವಹಿಸಬಹುದಾಗಿದೆ. ಪ್ರಶ್ನೆಗಳು ಕಾರಂತರ ಬದುಕು-ಬರಹದ ಕುರಿತಾಗಿರುತ್ತದೆ. ವಿಜೇತರಿಗೆ ನಗದು ರೂಪದ ಬಹುಮಾನ ಮತ್ತು ಪ್ರಶಸ್ತಿ ಪತ್ರಗಳನ್ನು ನೀಡಲಾಗುವುದು ಭಾಗವಹಿಸಲು ಆಸಕ್ತಿ ಹೊಂದಿರುವ ತಂಡಗಳು ಲಿಖಿತವಾಗಿ ಅಥವಾ ಮೊಬೈಲ್ ಸಂಖ್ಯೆ: 6362517472 ಅಥವಾ ಇ-ಮೈಲ್ dr.karanthatrustudupi@smail.qom ಇದಕ್ಕೆ ದಿನಾಂಕ ಅ.08ರ ಒಳಗೆ ಹೆಸರನ್ನು ನೋಂದಾಯಿಸುವಂತೆ ಡಾ.ಶಿವರಾಮ ಕಾರಂತ ಟ್ರಸ್ಟಿನ ಸದಸ್ಯ ಕಾರ್ಯದರ್ಶಿಗಳ ಪ್ರಕಟಣೆ ತಿಳಿಸಿದೆ.
