ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶಿಕ್ಷಣ ಸಂಸ್ಥೆಗಳಲ್ಲಿ ಗುಣಮಟ್ಟದ ಮತ್ತು ಉದ್ಯೋಗ ಆಧಾರಿತ ಶಿಕ್ಷಣ ಇಂದಿನ ವಿದ್ಯಾರ್ಥಿಗಳ ಅಗತ್ಯತೆಯಾಗಿದೆ. ಅದಕ್ಕೆ ಪೂರಕವಾಗಿ ಭಂಡಾರ್ಕಾರ್ಸ್ ಕಾಲೇಜು ಕೌಶಲ್ಯಾಭಿವೃದ್ಧಿ ಶಿಕ್ಷಣ ನೀಡುವತ್ತ ಮಹತ್ವದ ಹೆಜ್ಜೆಯನ್ನಿಟ್ಟಿದೆ ಎಂದು ಮಣಿಪಾಲ ಅಕಾಡೆಮಿ ಆಫ್ ಜನರಲ್ ಎಜುಕೇಶನ್ ಇದರ ಕಾರ್ಯದರ್ಶಿಗಳಾದ ಡಾ. ನಾರಾಯಣ ಸಭಾಹಿತ್ ಹೇಳಿದರು. ಅವರು ಬುಧವಾರ ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್‌ಗಳನ್ನು ಜಾರಿಗೊಳಿಸುವ ಉದ್ದೇಶದಿಂದ ಮಣಿಪಾಲದ ಎಮ್.ಎಸ್.ಡಿ.ಸಿ. ಮತ್ತು ಭಂಡಾರ್ಕಾರ್ಸ್ ಆರ್ಟ್ಸ್ ಮತ್ತು ಸೈನ್ಸ್ ಕಾಲೇಜು ,ಕುಂದಾಪುರ ನಡುವಿನ “ತಿಳುವಳಿಕಾ ಒಪ್ಪಂದ (MOU)” ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಮುಂದಿನ ದಿನಗಳಲ್ಲಿ ಸಿಬ್ಬಂದಿ ಅಭಿವೃದ್ಧಿ ಕಾರ್ಯಕ್ರಮ, ಉದ್ಯೋಗ ಆಧಾರಿತ ಕೋರ್ಸ್ ಗಳು, ಕೌಶಲ್ಯ ಹೆಚ್ಚಿಸುವ ತರಬೇತಿ ಕಾರ್ಯಕ್ರಮಗಳನ್ನು ಮತ್ತು ಪದವಿ ಪೂರ್ವ ಕಾಲೇಜಿನಲ್ಲಿಯೂ ಉದ್ಯೋಗಾಧಾರಿತ ತರಬೇತಿ ನೀಡುವ ಯೋಜನೆ ಆರಂಭಿಸುವ ಚಿಂತನೆ ಇದೆ ಎಂದು ಹೇಳಿದರು. ಮಣಿಪಾಲದ ಎಮ್.ಎಸ್.ಡಿ.ಸಿ. ಚೇರ್ಮನ್ ಬ್ರಿಗೇಡಿಯರ್ ಡಾ.ಸುರ್ಜಿತ್ ಸಿಂಗ್ ಪಾಬ್ಲಾ ಮಾತನಾಡಿ, ಈ ಒಪ್ಪಂದದ ಮೂಲಕ ವಿದ್ಯಾರ್ಥಿಗಳಿಗೆ ಉದ್ಯೋಗಾವಕಾಶಗಳಿಗೆ ಪೂರಕವಾದ ವಿವಿಧ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಗೋಕರ್ಣ: ಗಂಗೆಯನ್ನು ಸೇವಿಸಿದರೆ ನರಕದ ವೈತರಣಿ ನದಿಯಿಂದ ತಪ್ಪಿಸಿಕೊಳ್ಳಬಹುದು ಎಂಬ ಮಾತಿದ್ದು, ನಾವಿಂದು ನಾಗರೀಕತೆಯ ಹೆಸರಿನಲ್ಲಿ ಗಂಗಾ ನದಿಯನ್ನೇ ವೈತರಣಿ ನದಿಯಾಗಿ ಪರಿವರ್ತಿಸಿದ್ದೇವೆ. ಗಂಗೆಯನ್ನು ಅಶುದ್ಧಗೊಳಿಸಿರುವುದು ಔರಂಗಜೇಬನ ಹೇಯ ಕೃತ್ಯಗಳಿಗಿಂತಲೂ ಹೀನ ಕೃತ್ಯ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು. ಅವರು ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ ನಡೆಯುತ್ತಿರುವ ‘ಅನ್ನಬ್ರಹ್ಮ ಚಾತುರ್ಮಾಸ್ಯ’ದ ಧರ್ಮಸಭೆಯಲ್ಲಿ ‘ಅನ್ನಂ ಬ್ರಹ್ಮ’ ಮಾಲಿಕೆಯಲ್ಲಿ ನದಿ ನೀರಿನ ಕುರಿತಾಗಿ ಪ್ರವಚನ ಅನುಗ್ರಹಿಸಿದ ಶ್ರೀಗಳು, ಹರಿದ್ವಾರದ ನಂತರ ಗಂಗಾ ನದಿಯ ಸ್ವರೂಪವೇ ಬದಲಾಗಿದ್ದು, ಮನುಷ್ಯನ ಮಲಮೂತ್ರಗಳ ಕಾಲುವೆಗಳನ್ನು ನದಿಗೆ ಸೇರಿಸಿ ಗಂಗೆಯನ್ನು ಅಶುದ್ಧ ಗೊಳಿಸಲಾಗಿದೆ. ಇದು ದೇಶಕ್ಕೆ, ಸೃಷ್ಟಿಗೆ ಹಾಗೂ ಮುಂದಿನ ಪೀಳಿಗೆಗೆ ಮಾಡಿದ ಅಪಚಾರ. ಚರಿತ್ರೆಯಲ್ಲಿ ಮುಂದಿನ ಪೀಳಿಗೆ ಈ ತಪ್ಪನ್ನು ಕ್ಷಮಿಸುವುದಿಲ್ಲ. ಇದು ಗಂಗೆಯ ಮೂಲಕ ಸೃಷ್ಟಿಯ ಚಕ್ರಕ್ಕಾಗುತ್ತಿರುವ ಅನ್ಯಾಯ ಎಂದು ಖೇದ ವ್ಯಕ್ತಪಡಿಸಿದರು. ಗಂಗೆಯ ನೀರು ದೇಹವನ್ನು ಒಮ್ಮೆ ಪ್ರವೇಶಿಸಿದರೆ ಅದು ಒಂದು ವರ್ಷಗಳ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ರಾಷ್ಟ್ರೀಯ ಹೆದ್ದಾರಿಯ ಇಕ್ಕೆಲಗಳಲ್ಲಿ 75 ಮೀ ವ್ಯಾಪ್ತಿಯಲ್ಲಿ ವಾಣಿಜ್ಯ ಕಟ್ಟಡಕ್ಕೆ ಪರವಾನಿಗೆ ನೀಡುವ ವಿಚಾರದಲ್ಲಿ ಆಗಿರುವ ಗೊಂದಲದ ಕುರಿತು ಉಪ್ಪುಂದ ಕೆಆರ್ ಎಸ್ ಎಸ್ ಸಭಾಂಗಣದಲ್ಲಿ ಸಂತ್ರಸ್ತರ ಸಭೆ ನಡೆಯಿತು. ಇತ್ತೀಚೆಗೆ ಸುಪ್ರೀಂ ಕೋರ್ಟ್ ನೀಡಿರುವ ಆದೇಶವನ್ನು ರಾಜ್ಯ ಸರಕಾರ ಜಾರಿಗೆ ತರಬಾರದು ಹಾಗೂ ಕರಾವಳಿ ಜಿಲ್ಲೆಗಳಿಗೆ ವಿಶೇಷ ವಿನಾಯತಿ ನೀಡಬೇಕೆಂದು ಒಕ್ಕೊರಲ ಬೇಡಿಕೆ ಮಂಡಿಸಲಾಯಿತು. ಒಂದು ವೇಳೆ ಈ ಆದೇಶ ಜಾರಿಗೆ ಬಂದಲ್ಲಿ ಕರಾವಳಿ ಜಿಲ್ಲೆಗಳ ರಾಷ್ಟ್ರೀಯ ಹೆದ್ದಾರಿಯ ಅಕ್ಕಪಕ್ಕದಲ್ಲಿ ವ್ಯಾಪಾರ ವ್ಯವಹಾರ, ಪ್ರಸೋದ್ಯಮಗಳಿಗೆ ಭಾರಿ ಹೊಡೆತ ಬೀಳಲಿದ್ದು ಈಗಾಗಲೇ ಭೂಸ್ವಾಧೀನ ಆಗಿರುವ ಜಮೀನಿಗೆ ಹೊಂದಿಕೊಂಡಿರುವ ರಾಷ್ಟ್ರೀಯ ಹೆದ್ದಾರಿಯ ಮಧ್ಯದಿಂದ 75ಮೀ ಅಂತರದೊಳಗೆ ಇರುವ ಜಮೀನುಗಳು, ವಾಣಿಜ್ಯ ಮಳಿಗೆಗಳು, ಇತರೇ ಅಂಗಡಿ ಮುಂಗಟ್ಟುಗಳು ಬೆಲೆ ಕಳೆದುಕೊಂಡು ಸಂಬಂಧಪಟ್ಟ ಮಾಲೀಕರು ಸಂತ್ರಸ್ತರಾಗಲಿದ್ದಾರೆ. ಹಾಗಾಗಿ ಈ ಕುರಿತು ರಾಜ್ಯ ಸರಕಾರಕ್ಕೆ ಮನವರಿಕೆ ಮಾಡಿಕೊಟ್ಟು, ಸುಪ್ರೀಂ ಕೋರ್ಟಗೆ ಮೇಲ್ಮನವಿ ಸಲ್ಲಿಸುವಂತೆ ಒತ್ತಾಯಿಸಬೇಕು ಎನ್ನುವ ಅಭಿಪ್ರಾಯ ವ್ಯಕ್ತವಾಯಿತು.. ಇದೇ ಸಮಯದಲ್ಲಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಜಾನಪದ ಕಲಾವಿದರು, ವಿದ್ವಾಂಸರು, ವಾದ್ಯಗಾರರು, ಬುಡಕಟ್ಟು ಜನರನ್ನೊಳಗೊಂಡAತೆ “ಜಾನಪದ ಸಂಗಮ” ಹೆಸರಿನ ಕಾರ್ಯಕ್ರಮವನ್ನು ಗಿರಿಜನ ಉಪಯೋಜನೆಯಡಿ ಹೊಸ ಯೋಜನೆಯಾಗಿ ಸರ್ಕಾರವು ಘೋಷಿಸಿದ್ದು, ಈ ಯೋಜನೆಯಡಿ ರಾಜ್ಯದ 4 ವಿಭಾಗಗಳಲ್ಲಿ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಜಾನಪದ ಕಲಾಪ್ರಕಾರದ ತರಬೇತಿ ನೀಡಲು ಅಕಾಡೆಮಿಯ ವೆಬ್‌ಸೈಟ್ https://janapada.karnataka.gov.in/ ನಲ್ಲಿ ಆಸಕ್ತಿಯುಳ್ಳ 16 ರಿಂದ 40 ವರ್ಷದೊಳಗಿನ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಭರ್ತಿ ಮಾಡಿದ ಅರ್ಜಿಯನ್ನು ಸೆಪ್ಟಂಬರ್ 16 ರ ಒಳಗಾಗಿ ರಿಜಿಸ್ಟ್ರಾರ್, ಕರ್ನಾಟಕ ಜಾನಪದ ಅಕಾಡೆಮಿ, 2ನೇ ಮಹಡಿ, ಕನ್ನಡ ಭವನ, ಜೆ ಸಿ ರಸ್ತೆ, ಬೆಂಗಳೂರು – 560002 ಇವರಿಗೆ ಸಲ್ಲಿಸಬಹುದಾಗಿದೆ. ಹೆಚ್ಚಿನ ವಿವರಗಳಿಗಾಗಿ ಅಕಾಡೆಮಿ ಇ –ಮೇಲ್ registrar.janapada@gmail.com ಹಾಗೂ ದೂರವಾಣಿ ಸಂಖ್ಯೆ 080-22215509 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಅಕಾಡೆಮಿಯ ರಿಜಿಸ್ಟಾçರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಶಿಕ್ಷಣದ ಜತೆಗೆ ಕಲೆ, ಸಂಸ್ಕೃತಿ ಮತ್ತು ಪರಂಪರೆಯ ಸಂರಕ್ಷಣೆಗೆ ಆದ್ಯತೆ ನೀಡುತ್ತಿರುವ ಆಳ್ವಾಸ್‌ನ ಸಾಂಸ್ಕೃತಿಕ ಚಟುವಟಿಕೆಗಳಿಗೆ ಮತ್ತಷ್ಟು ಉತ್ತೇಜನ ನೀಡುವ ನಿಟ್ಟಿನಲ್ಲಿ ಕೋಡ್‌ಕ್ರಾಫ್ಟ್ ಟೆಕ್ನಾಲಜೀಸ್ ಪ್ರೈವೇಟ್ ಲಿಮಿಟೆಡ್, ಮಂಗಳೂರು ಸಂಸ್ಥೆ ತನ್ನ ಕಾರ್ಪೊರೇಟ್ ಸಾಮಾಜಿಕ ಹೊಣೆಗಾರಿಕೆ (CSR) ಉಪಕ್ರಮದಡಿ ₹6.28 ಲಕ್ಷ ಆರ್ಥಿಕ ನೆರವು ನೀಡಿದೆ. ಆಳ್ವಾಸ್‌ನ ನುಡಿಸಿರಿ ವಿರಾಸತ್ ಸಾಂಸ್ಕೃತಿಕ ತಂಡಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ 628 ವಿದ್ಯಾರ್ಥಿಗಳಿಗೆ ತಲಾ ₹1,000ರಂತೆ ಒಟ್ಟು ₹6,28,000 ನೆರವನ್ನು ನೀಡಲಾಗಿದ್ದು, ಸಾಂಕೇತಿಕವಾಗಿ ಕೆಲವು ವಿದ್ಯಾರ್ಥಿಗಳಿಗೆ ನೆರವಿನ ಮೊತ್ತವನ್ನು ಕಾರ್ಯಕ್ರಮದಲ್ಲಿ ಹಸ್ತಾಂತರಿಸಲಾಯಿತು. ಆಳ್ವಾಸ್ ಕಾಲೇಜಿನ ವಿ.ಎಸ್. ಆಚಾರ್ಯ ಸಭಾಂಗಣದಲ್ಲಿ ಮಂಗಳವಾರ ನಡೆದ ಕಾರ್ಯಕ್ರಮದಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಮಾತನಾಡಿ, ಕೋಡ್‌ಕ್ರಾಫ್ಟ್ ಟೆಕ್ನಾಲಜೀಸ್‌ನ ಸಿ ಎಸ್ ಆರ್ ಉಪಕ್ರಮವನ್ನು ಶ್ಲಾಘಿಸಿ, ಕಲೆ ಮತ್ತು ಸಂಸ್ಕೃತಿಯ ಬೆಳವಣಿಗೆಗೆ ಸಂಸ್ಥೆಯು ನೀಡುತ್ತಿರುವ ಬೆಂಬಲವು ಶ್ಲಾಘನೀಯ. ಸಮಾಜದಲ್ಲಿ ಸಂಪತ್ತು ಹೊಂದಿರುವವರು ತಮ್ಮ ಸಂಪತ್ತಿನ ಒಂದು ಭಾಗವನ್ನು ಸಮಾಜದ ಒಳಿತಿಗಾಗಿ ವಿನಿಯೋಗಿಸುವ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: :ಬ್ರಹ್ಮಾವರ ತಾಲೂಕು ಐದನೇ ಸಾಹಿತ್ಯ ಸಮ್ಮೇಳನವು ಅ.4 ರಂದು ಸಾಸ್ತಾನದ ಶಿವಕೃಪ ಕಲ್ಯಾಣ ಮಂಟಪದಲ್ಲಿ ನಡೆಯಲಿದ್ದು ಇದರ ಪೂರ್ವಭಾವಿ ಸಭೆಯು ಶಿವಕೃಪಾ ಕಲ್ಯಾಣಮಂಟಪದಲ್ಲಿ ಭಾನುವಾರ ನಡೆಯಿತು. ಕಸಾಪ ತಾಲ್ಲೂಕು ಅಧ್ಯಕ್ಷ ರಾಮಚಂದ್ರ ಐತಾಳ್ ಸಮ್ಮೇಳನದ ರೂಪುರೇಷೆ ಕುರಿತು ಮಾತನಾಡಿದರು. ಸಮ್ಮೇಳನದ ಸರ್ವಾಧ್ಯಕ್ಷರಾಗಿ ಸಾಹಿತಿ ನರೇಂದ್ರ ಕುಮಾರ್ ಕೋಟ ಅವರ ಹೆಸರನ್ನು ಅಧ್ಯಕ್ಷ ರಾಮಚಂದ್ರ ಐತಾಳ್ ಘೋಷಿಸಿದರು. ಸಭೆಯಲ್ಲಿ ಸರ್ವನುಮತದಿಂದ ಅಂಗಿಕರಿಸಲಾಯಿತು. ಜಿಲ್ಲಾ ಸಂಘಟನ ಕಾರ್ಯದರ್ಶಿ ಸತೀಶ್ ವಡ್ಡರ್ಸೆ ಕಾರ್ಯಕ್ರಮದ ಯಶಸ್ಸಿಗೆ ಸರ್ವರ ಸಹಕಾರ ಅಗತ್ಯ ಎಂದರು. ಸಭೆಯಲ್ಲಿ ಸಮ್ಮೇಳನದ ವಿವಿಧ ಸಮಿತಿಗಳನ್ನು ರಚಿಸಿ ಜವಾಬ್ದಾರಿ ಹಂಚಲಾಯಿತು. ವೇದಿಯಲ್ಲಿ ಜಿಲ್ಲಾಧ್ಯಕ್ಷ ನೀಲಾವರ ಸುರೇಂದ್ರ ಅಡಿಗ , ಹಿರಿಯ ಸಾಹಿತಿ ಉಪೇಂದ್ರ ಸೋಮಯಾಜಿ, ಪ್ರತಾಪ ಶೆಟ್ಟಿ, ರಘು ಮಧ್ಯಸ್ಥ,ತಾಲ್ಲೂಕು ಮತ್ತು ಜಿಲ್ಲಾ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು. ಕೋಶಾಧಿಕಾರಿ ಅಲ್ತಾರು ನಾಗರಾಜ್ ನಿರೂಪಿಸಿ, ವಂದಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಅನುಷ್ಠಾನಗೊಳಿಸಲಾಗುತ್ತಿರುವ ಪಂಚವೃತ್ತಿ ಅಭಿವೃದ್ಧಿಗಾಗಿ ಆರ್ಥಿಕ ನೆರವು, ಸ್ವಯಂ ಉದ್ಯೋಗ ನೇರಸಾಲ ಯೋಜನೆ, ಹೊಸದು ಹಾಗೂ ನವೀಕರಣ ಅರಿವು – ಶೈಕ್ಷಣಿಕ ನೇರ ಸಾಲ ಯೋಜನೆ, ಗಂಗಾ ಕಲ್ಯಾಣ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ, ವಿದೇಶಿ ವ್ಯಾಸಾಂಗ ಯೋಜನೆ, ಸ್ವಾತಂತ್ರ್ಯ ಅಮೃತ ಮುನ್ನಡೆ ಯೋಜನೆ ಹಾಗೂ ಹೊಲಿಗೆ ಯಂತ್ರ / ಝೀಗ್ ಝ್ಯಾಗ್ ಯೋಜನೆಯಡಿ ಸಹಾಯಧನ ಹಾಗೂ ಸಾಲ ಸೌಲಭ್ಯ ಪಡೆಯಲು ಅರ್ಹ ಫಲಾನುಭವಿಗಳಿಂದ ಗ್ರಾಮ ಒನ್, ಬೆಂಗಳೂರು ಒನ್, ಕರ್ನಾಟಕ ಒನ್, ಅಟಲ್ ಜಿ ಜನಸ್ನೇಹಿ ಕೇಂದ್ರ ಮತ್ತು ನಾಗರೀಕ ಸೇವಾ ಕೇಂದ್ರಗಳಲ್ಲಿ ಸೇವಾಸಿಂಧು ಪೋರ್ಟಲ್ ನಡಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಸೆಪ್ಟಂಬರ್ 30 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್‌ಸೈಟ್ https://kvcdcl.karnataka.gov.in ಅಥವಾ ನಿಗಮದ ಕೇಂದ್ರ ಕಚೇರಿಯ ದೂ.ಸಂಖ್ಯೆ: 080-22374848 / 7899899039…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತೆಂಗಿನ ಮರದಿಂದ ಕಾಯಿ ಕೀಳಲು ಮರ ಹತ್ತಿದ ಕಾರ್ಮಿಕ ಮರದಿಂದ ಬಿದ್ದು ಸಾವನ್ನಪ್ಪಿದ ಘಟನೆ ಯಡ್ತರೆ ಗ್ರಾಮದ ಯೋಜನಾ ನಗರದಲ್ಲಿ ಸಂಭವಿಸಿದೆ.ನಾಗೂರು ನಿವಾಸಿ ವಸಂತ (48) ಮೃತ ಕಾರ್ಮಿಕ. ಅವರು ಯಡ್ತರೆ ಗ್ರಾಮದ ಯೋಜನಾ ನಗರದ ಪ್ರದೇಶದಲ್ಲಿ ಮರದಿಂದ ಕಾಯಿ ಕೀಳುತ್ತಿದ್ದಾಗ ಕಾಲು ಜಾರಿ ನೆಲಕ್ಕೆ ಬಿದ್ದು ಗಂಬೀರ ಗಾಯಗೊಂಡರು. ಕೂಡಲೇ ಚಿಕಿತ್ಸೆಗಾಗಿ ಬೈಂದೂರು ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋದರು. ಅವರು ಚಿಕಿತ್ಸೆಗೆ ಸ್ವಂದಿಸದೆ ಸ್ವಲ್ಪ ಹೊತ್ತಿನಲ್ಲೇ ಮೃತಪಟ್ಟರು. ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸ್ಕೂಟರ್ ಸವಾರರೊಬ್ಬರು ರಸ್ತೆ ವಿಭಾಜಕಕ್ಕೆ ಢಿಕ್ಕಿ ಹೊಡೆದು ರಸ್ತೆಗೆ ಬಿದ್ದು ಗಾಯಗೊಂಡ ಘಟನೆ ಹಂಗಳೂರು ಗ್ರಾಮದ ಅಂಕದಕಟ್ಟೆ ಬಳಿ ಸಂಭವಿಸಿದೆ. ಮಣೂರು ಗ್ರಾಮದ ಕಂಬಳಗದ್ದೆಬೆಟ್ಟು ನಿವಾಸಿ ರಾಜು ಎಂ.ಎಸ್. ಗಾಯಗೊಂಡವರು. ಅವರು ರಾಷ್ಟ್ರೀಯ ಹೆದ್ದಾರಿಯ ಸರ್ವಿಸ್ ರಸ್ತೆಯಲ್ಲಿ ಕುಂದಾಪುರ ಕಡೆಯಿಂದ ಕೋಟೇಶ್ವರ ಕಡೆಗೆ ಸ್ಕೂಟರ್‌ನಲ್ಲಿ ತೆರಳುತ್ತಿದ್ದಾಗ ಹಂಗಳೂರಿನ ಅಂಕದಕಟ್ಟೆ ಬಳಿ ರಸ್ತೆ ವಿಭಾಜಕಕ್ಕೆ ಢಿಕ್ಕಿ ಹೊಡೆದಿದ್ದಾರೆ. ಈ ವೇಳೆ ಸ್ಥಳೀಯರು ಗಾಯಾಳುವನ್ನು ಉಪಚರಿಸಿದ್ದರು. ವೈದ್ಯರ ಸಲಹೆಯಂತೆ ಉಡುಪಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಕುಂದಾಪುರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಮೂಡ್ಲಕಟ್ಟೆಯ ಐಎಂಜೆ ವಿಜ್ಞಾನ ಮತ್ತು ವಾಣಿಜ್ಯ ಸಂಸ್ಥೆಯ (ಐಎಂಜೆಐಎಸ್‌ಸಿ) ತೃತೀಯ ಬಿಬಿಎ ವಿದ್ಯಾರ್ಥಿ ಅಬ್ದುಲ್ ಮಲ್ಲಿಕ್ ಅವರು, ಉಡುಪಿಯ ತೆಂಕನಿಡಿಯೂರಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸೆ.5ರಂದು ನಡೆದ ಮಂಗಳೂರು ವಿಶ್ವವಿದ್ಯಾಲಯ ಅಂತರ ಕಾಲೇಜು ಕರಾಟೆ ಚಾಂಪಿಯನ್‌ಶಿಪ್‌ನಲ್ಲಿ ಪುರುಷರ ಕುಮಿಟೆ – 67 ಕೆಜಿ ವಿಭಾಗದಲ್ಲಿ ಬೆಳ್ಳಿ ಪದಕವನ್ನು ಗೆದ್ದುಕೊಂಡಿದ್ದಾರೆ. ಅತ್ಯಂತ ಪೈಪೋಟಿಯಿಂದ ಕೂಡಿದ್ದ ಈ ಚಾಂಪಿಯನ್‌ಶಿಪ್‌ನಲ್ಲಿ ಅಬ್ದುಲ್ ಮಲ್ಲಿಕ್ ಅವರು ಪ್ರಭಾವಶಾಲಿ ಪ್ರದರ್ಶನ ನೀಡಿ ರನ್ನರ್-ಅಪ್ ಆಗಿ ಹೊರಹೊಮ್ಮಿದ್ದಾರೆ. ಅವರ ಈ ಸಾಧನೆ ಸಂಸ್ಥೆಗೆ ಕೀರ್ತಿ ತಂದಿದ್ದು, ಕ್ರೀಡಾ ಕ್ಷೇತ್ರದಲ್ಲಿನ ಅವರ ಸಮರ್ಪಣಾ ಭಾವವನ್ನು ಎತ್ತಿ ತೋರಿಸಿದೆ. ಅಬ್ದುಲ್ ಮಲ್ಲಿಕ್ ಅವರ ಈ ಸಾಧನೆಗಾಗಿ ಐಎಂಜೆಐಎಸ್‌ಸಿ ಸಂಸ್ಥೆಯ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳು ಅಭಿನಂದನೆ ಸಲ್ಲಿಸಿ, ಅವರ ಕ್ರೀಡಾ ವೃತ್ತಿ ಜೀವನದಲ್ಲಿ ಮತ್ತಷ್ಟು ಯಶಸ್ಸು ಗಳಿಸಲಿ ಎಂದು ಹಾರೈಸಿದ್ದಾರೆ.
