Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ನಗರದ ಮಣಿಪಾಲದ ಪ್ರಗತಿನಗರದಲ್ಲಿರುವ ಸರಕಾರಿ ಐ.ಟಿ.ಐ ಯಲ್ಲಿ ಉದ್ಯೋಗ ಖಾತರಿಯುಳ್ಳ ಆರ್.ಎ.ಸಿ ಕಂಪ್ಯೂಟರ್, ಫಿಟ್ಟರ್ ಹಾಗೂ ಆಟೋ ಮೊಬೈಲ್ ಕೋರ್ಸುಗಳಲ್ಲಿ ಕೆಲವೇ ಕೆಲವು ಸೀಟುಗಳು ಬಾಕಿ ಉಳಿದಿದ್ದು, ಆಸಕ್ತ ಎಸ್.ಎಸ್.ಎಲ್.ಸಿ /ಪಿ.ಯು.ಸಿ ಉತ್ತೀರ್ಣರಾದ ಅಭ್ಯರ್ಥಿಗಳು ಖುದ್ದಾಗಿ ಸಂಸ್ಥೆಗೆ ಹಾಜರಾಗಿ ಮೂಲ ದಾಖಲೆ ಹಾಗೂ ಪ್ರವೇಶ ಶುಲ್ಕದೊಂದಿಗೆ ಸ್ಥಳದಲ್ಲೇ ಪ್ರವೇಶ ಪಡೆದುಕೊಳ್ಳಬಹುದಾಗಿದೆ. ಮೊದಲು ಬಂದವರಿಗೆ ಆದ್ಯತೆ ನೀಡಲಾಗುವುದು. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆ, ಪ್ರಗತಿನಗರ, ಮಣಿಪಾಲ ಉಡುಪಿ ಇಲ್ಲಿಗೆ ಖುದ್ದಾಗಿ ಅಥವಾ ದೂ.ಸಂಖ್ಯೆ: 9964247101, 9902001790, 9535270498 ಹಾಗೂ 9738439619 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಸಂಸ್ಥೆಯ ಪ್ರಾಚಾರ್ಯರ ಪ್ರಕಟಣೆ ತಿಳಿಸಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಮೂಡುಬಿದಿರೆ: ಆಳ್ವಾಸ್ ಪದವಿ ಕಾಲೇಜಿನ ಹಿರಿಯ ವಿದ್ಯಾರ್ಥಿನಿ ಹಾಗೂ  ಕಾಲೇಜಿನ ವಿಕಿಪೀಡಿಯಾ ಕ್ಲಬ್‌ನ ಕ್ರಿಯಾಶೀಲ ಸದಸ್ಯೆಯಾಗಿದ್ದ ಯಕ್ಷಿತಾ ಕೀನ್ಯಾದ ನೈರೋಬಿಯಲ್ಲಿ ಆಗಸ್ಟ್ 6ರಿಂದ 9ರವರೆಗೆ ನಡೆಯಲಿರುವ ವಿಕಿಮೇನಿಯಾ 2025 ಅಂತಾರಾಷ್ಟ್ರೀಯ ಸಮ್ಮೇಳನದಲ್ಲಿ ಭಾಗವಹಿಸುವ ಅವಕಾಶ ಪಡೆದಿದ್ದಾರೆ. ವಿಕಿಮೇಡಿಯಾ ಫೌಂಡೇಶನ್‌ನ ಆಹ್ವಾನಿತರಿಂದ ಯಕ್ಷಿತಾ ಭಾರತ ದೇಶದ ಪ್ರತಿನಿಧಿಯಾಗಿ ಸಮ್ಮೇಳನದಲ್ಲಿ ಭಾಗವಹಿಸಲಿದ್ದಾರೆ. ವಿಕಿಪೀಡಿಯಾದ ಮೂಲಕ ಮುಕ್ತ ಜ್ಞಾನ ವಿಸ್ತರಣೆಗೆ ಮಹತ್ತರವಾದ ಕೊಡುಗೆ ನೀಡುತ್ತಿದ್ದು, ಈ ಆಮಂತ್ರಣವು ಅವರ ಸೇವೆಯ ಪ್ರಾಮುಖ್ಯತೆಯನ್ನು ಪ್ರತಿಬಿಂಬಿಸುತ್ತದೆ. ಆಗಸ್ಟ್ 6ರಿಂದ 9ರವರೆಗೆ ನಡೆಯುವ ಈ ಚರ್ಚಾ ವೇದಿಕೆಯಲ್ಲಿ ಯಕ್ಷಿತಾ ವಿವಿಧ ದೇಶಗಳ ವಿಕಿಪೀಡಿಯನ್‌ಗಳೊಂದಿಗೆ ಜ್ಞಾನ ವಿನಿಮಯದಲ್ಲಿ ತೊಡಗಿಕೊಂಡು ತಮ್ಮ ಅನುಭವ ಹಾಗೂ ಕಲಿಕೆಯನ್ನು ಭಾರತೀಯ ವಿಕಿಪೀಡಿಯಾ ಸಮುದಾಯದ ಪೈಕಿ ಹಂಚಿಕೊಳ್ಳುವ ಉದ್ದೇಶವನ್ನು ಅವರು ಹೊಂದಿದ್ದಾರೆ. ಯಕ್ಷಿತಾ ವಿಕಿಪೀಡಿಯಾ ಹಾಗೂ ವಿಕಿಮೀಡಿಯಾ ಪ್ರಾಜೆಕ್ಟ್‌ಗಳಲ್ಲಿ ಹಲವಾರು ತರಬೇತಿ ಮತ್ತು ಸಮ್ಮೇಳನಗಳಲ್ಲಿ ಭಾಗವಹಿಸಿದ್ದು, ಅವರ ಸಕ್ರಿಯ ಪಾಲ್ಗೊಳ್ಳುವಿಕೆಯ ಸಲುವಾಗಿ 2020ರಲ್ಲಿ ಪ್ರಾಜೆಕ್ಟ್ ಟೈಗರ್ 2.0 ಯೊಜನೆಯಡಿಯಲ್ಲಿ ಎಸರ್ ಲ್ಯಾಪ್‌ಟಾಪ್ ಹಾಗೂ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಸಾರ್ವಜನಿಕರಿಗೆ ಜನನ, ಮರಣ ದಾಖಲೆಗಳು ತಮ್ಮ ಶೈಕ್ಷಣಿಕ ಹಾಗೂ ಆರ್ಥಿಕ ವ್ಯವಹಾರಗಳು ಸೇರಿದಂತೆ ಮತ್ತಿತರ ಕೆಲಸ ಕಾರ್ಯಗಳಿಗೆ ಅತ್ಯವಶ್ಯಕ. ಇವುಗಳ ನಿರ್ವಹಣೆ ಸಮರ್ಪಕವಾಗಿ ಮಾಡಬೇಕೆಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಸೂಚನೆ ನೀಡಿದರು. ಅವರು ಬುಧವಾರ ನಗರದ ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಜನನ-ಮರಣ ಸಮನ್ವಯ ಸಮಿತಿಯ ತ್ರೈಮಾಸಿಕ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸರಕಾರ ನಾಗರಿಕ ನೋಂದಣಿ ಪದ್ಧತಿಯಲ್ಲಿ ಪ್ರತಿಯೊಬ್ಬ ನಾಗರಿಕರ ಜನನ, ಮರಣ ಹಾಗೂ ನಿರ್ಜೀವ ಜನನಗಳನ್ನು ಕಡ್ಡಾಯವಾಗಿ ನೋಂದಣಿ ಮಾಡಲು ಕಾನೂನು ಜಾರಿಗೆ ತಂದಿದ್ದು, ಅದರನ್ವಯ ಪ್ರತಿಶತಃ ನೂರರಷ್ಟು ನೋಂದಣಿ ಕಾರ್ಯಗಳು ಆಗುವಂತೆ ಜನನ, ಮರಣ ನೋಂದಣಿ ಅಧಿಕಾರಿಗಳು ಅನುಷ್ಠಾನಗೊಳಿಸಬೇಕು ಎಂದರು. ಜನನ, ಮರಣ ಹಾಗೂ ನಿರ್ಜೀವ ಜನನಗಳ ಘಟನೆ ಸಂಭವಿಸಿದ 21 ದಿವಸಗಳ ಒಳಗಾಗಿ ಯಾವುದೇ ಶುಲ್ಕವಿಲ್ಲದೇ 21 ರಿಂದ ನಂತರ 30 ದಿನಗಳೊಳಗಾಗಿ ಶುಲ್ಕ 20 ರೂ. ಗಳನ್ನು ನೀಡಿ, ನಂತರ ಒಂದು ವರ್ಷದ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಗಂಗೊಳ್ಳಿ: ರಸ್ತೆ ಬದಿಯಲ್ಲಿ ಮಲಗಿರುವ ದನವನ್ನು ಹಿಂಸಾತ್ಮ ಕವಾಗಿ ಹಿಡಿದುಕೊಂಡು ಕಾರಿನ ಹಿಂಬದಿ ಡಿಕ್ಕಿಗೆ ತುಂಬಿಸಿಕೊಂಡಿದ್ದು ಹೋಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯನ್ನು ಬಂಧಿಸುವಲ್ಲಿ ಗಂಗೊಳ್ಳಿ ಪೊಲೀಸರು ಯಶಸ್ವಿಯಾಗಿದ್ದಾರೆ. ಮೂಡುಬಿದಿರೆ ನಿವಾಸಿ ಮೊಹಮ್ಮದ್‌ ಅನ್ಸಾರ್‌ ಯಾನೆ ಅನ್ಸಾರ್‌ ತೋಡಾರ್‌ (32) ಬಂಧಿತ ಆರೋಪಿ. ಈತನ ಮೇಲೆ ಈಗಾಗಲೇ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಚಿಕ್ಕಮಗಳೂರು ಮತ್ತು  ಹಾಸನ ಜಿಲ್ಲೆಗಳಲ್ಲಿ ಒಟ್ಟೂ 13 ಪ್ರಕರಣಗಳಿವೆ. ಜುಲೈ 31ರಂದು ಗಂಗೊಳ್ಳಿ ಗ್ರಾಮದ ರಾತ್ರಿ ಗಸ್ತು ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ, ಮೇಲ್‌ ಗಂಗೊಳ್ಳಿ ಸಮೀಪ ತೆರಳುತ್ತಿದ್ದಾಗ ಬಿಳಿ ಬಣ್ಣದ ಕ್ರೆಟಾ ಕಾರನಲ್ಲಿ ರಸ್ತೆಯ ಬದಿಯಲ್ಲಿ ಮಲಗಿರುವ ದನವನ್ನು ಹಿಂಸಾತ್ಮಕವಾಗಿ ಹಿಡಿದುಕೊಂಡು ಕಾರಿನ ಹಿಂಬದಿ ಡಿಕ್ಕಿಗೆ ತುಂಬಿಸಿಕೊಂಡಿದ್ದ ಗಮನಕ್ಕೆ ಬಂಧಿದೆ. ಗಸ್ತಿನಲಿದ್ದ ಪೊಲೀಸರು ಗಮನಿಸಿದಾಗ ಕಾರನ್ನು ವೇಗವಾಗಿ ತ್ರಾಸಿ ಕಡೆಗೆ ಚಲಾಯಿಸಿದ್ದಾರೆ. ಪೊಲೀಸರು ಕಾರನ್ನು ಹಿಂಬಾಲಿಸಿಕೊಂಡು ಹೋಗಿದ್ದು ಅಲ್ಲಿಂದ ಪರಾರಿಯಾಗಿದ್ದರು. ಜಾನುವಾರು ವಧೆ ಮಾಡುವ ಸಲುವಾಗಿ ಹಿಂಸಾತ್ಮಕವಾಗಿ ಕೊಂಡೊಯ್ದ ಬಗ್ಗೆ ಗಂಗೊಳ್ಳಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಕ್ರೀಡೆಯೂ ಕೂಡ ಜೀವನಕ್ಕೆ ಅವಶ್ಯವಾದ ಒಂದು ಪಾಠ. ಭಾರತೀಯ ಕ್ರೀಡೆಗಳು ಮಕ್ಕಳ ದೈಹಿಕ ಬೆಳವಣಿಗೆಗೆ ಮಾತ್ರ ಕಾರಣವಾಗದೇ ಬೌದ್ಧಿಕ ಕ್ರಿಯಾಶೀಲತೆಗೂ ಕಾರಣವಾಗುವುವು ಎಂದು ಸುಳ್ಯದ ಸಂಪಾಜೆ ಮಾರುತಿ ಇಂಟರ್ ನ್ಯಾಷನಲ್ ಸ್ಕೂಲ್ ಪ್ರಾಂಶುಪಾಲರಾದ ಶೋಭಾ ಎಮ್. ಹೇಳಿದರು. ಅವರು ಸಿಐಎಸ್‌ಸಿಇ ಗೇಮ್ಸ್ ಮತ್ತು ಸ್ಪೋರ್ಟ್ಸ್- 2025ರ ಅಂಗವಾಗಿ ಹಟ್ಟಿಯಂಗಡಿಯ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯಲ್ಲಿ ಬುಧವಾರದಂದು ನಡೆದ ಪ್ರಾದೇಶಿಕ ಮಟ್ಟದ ಕೇರಮ್ ಟೂರ್ನಮೆಂಟ್ ಸ್ಪರ್ಧೆಯ ಸಮರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿದರು. ಕೇರಮ್ ಆಟದಲ್ಲಿ ಎದುರಾಳಿಯನ್ನು ಎದುರಿಸುವಾಗ ಅವನ ದೌರ್ಬಲ್ಯವನ್ನು ಅರಿತು ಅದರಂತೆ ಆಡಬೇಕಾಗುತ್ತದೆ. ಇದರಿಂದ ಜೀವನದಲ್ಲಿ ಎದುರಾಳಿಯನ್ನು ಮಣಿಸುವ ಬುದ್ಧಿವಂತಿಕೆಯನ್ನೂ ತಿಳಿಸಿಕೊಡುತ್ತದೆ. ಕೆಲವು ಬಾರಿ ಲೆಕ್ಕಾಚಾರದ ವಿಷಯಗಳು ಅತ್ಯವಶ್ಯವಾಗಿದ್ದು, ಗಣಿತದ ವಿಚಾರಗಳ ಅಧ್ಯಯನವಾದಂತಾಗುತ್ತದೆ. ಎನ್ನುತ್ತಾ ರಾಷ್ಟ್ರಮಟ್ಟಕ್ಕೆ ಆಯ್ಕೆಯಾದವರನ್ನು ಹುರುದುಂಬಿಸಿದರು. ಶ್ರೀ ಸಿದ್ಧಿ ಶೈಕ್ಷಣಿಕ ಪ್ರತಿಷ್ಠಾನದ ಕಾರ್ಯದರ್ಶಿ ಹಾಗೂ ಶಾಲೆಯ ಪ್ರಾಂಶುಪಾಲರಾದ ಶರಣ ಕುಮಾರ ಮಾತನಾಡಿ, ಕೇರಮ್ ಜೀವನಕ್ಕೆ ಪಾಠವಾಗಿದ್ದು, ಶಾಲೆಗೆ ಸಿಕ್ಕ ಅವಕಾಶವನ್ನು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಬದುಕಿನಲ್ಲಿ ಕಠಿಣ ಸವಾಲುಗಳು ಎದುರಾದಾಗ ಅದನ್ನು ಎದುರಿಸಲು ಆತ್ಮಸ್ಥೈರ್ಯವನ್ನು ಬೆಳೆಸಿಕೊಳ್ಳಬೇಕು, ಜೊತೆಗೆ ಪರೋಪಕಾರ ಹಾಗೂ ಸೇವಾ ಮನೋಭಾವವನ್ನು ವಿದ್ಯಾರ್ಥಿಗಳು ಮೈಗೂಡಿಸಿಕೊಳ್ಳಬೇಕು ಎಂದು ಸಮಾಜ ಸೇವಕ ಹಾಗೂ ಈಜು ತಜ್ಞರಾದ ಈಶ್ವರ್ ಮಲ್ಪೆ ಹೇಳಿದರು. ಅವರು ಕುಂದಾಪುರದ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವ್ಯವಹಾರ ಆಡಳಿತ ವಿಭಾಗ ಹಮ್ಮಿಕೊಂಡ ಸಾಮಾಜಿಕ ಜವಾಬ್ದಾರಿ ಎನ್ನುವ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು. ಕಾಲೇಜಿನ ಉಪ-ಪ್ರಾಂಶುಪಾಲರಾದ ಡಾ| ಚೇತನ್ ಶೆಟ್ಟಿ ಕೊವಾಡಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ವ್ಯವಹಾರ ಆಡಳಿತ ವಿಭಾಗದ ಮುಖ್ಯಸ್ಥರಾದ ನಂದಾ ರೈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಸಹಪ್ರಾಧ್ಯಾಪಕರಾದ ಪ್ರವೀಣ್ ಮೊಗವೀರ ಗಂಗೊಳ್ಳಿ ವಂದಿಸಿದರು. ಬಿ.ಬಿ.ಎ. ವಿದ್ಯಾರ್ಥಿಗಳಾದ ಸುಹಾಸ್ ಮಲ್ಯ ಪ್ರಾರ್ಥಿಸಿದರು, ಐಶ್ವರ್ಯ ಸ್ವಾಗತಿಸಿದರು. ರಶ್ಮಿತಾ ಸಂಪನ್ಮೂಲ ವ್ಯಕ್ತಿಯ ಪರಿಚಯಿಸಿದರು, ಶ್ರೀರಕ್ಷಾ ನಿರೂಪಿಸಿದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಗಂಗೊಳ್ಳಿ: ಗಂಗೊಳ್ಳಿಯ ಮಲ್ಯರಮಠ ಶ್ರೀ ವೆಂಕಟರಮಣ ದೇವಸ್ಥಾನದ ಶ್ರೀ ದೇವರ ಸನ್ನಿಧಿಯಲ್ಲಿ ಶ್ರೀ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠಾಧೀಶ ಶ್ರೀಮದ್ ವಿದ್ಯಾಧೀಶ ತೀರ್ಥ ಶ್ರೀಪಾದ ವಡೇರ ಸ್ವಾಮೀಜಿಯವರ ಮಾರ್ಗದರ್ಶನ, ಆಶೀರ್ವಾದದೊಂದಿಗೆ ಪ್ರಾರಂಭಗೊಂಡ ’ಅಖಂಡ ಭಜನಾ ಸಪ್ತಾಹ ಮಹೋತ್ಸವʼ ಬುಧವಾರದಂದು ದೀಪ ವಿಸರ್ಜನೆಯೊಂದಿಗೆ ಸಮಾಪನಗೊಂಡಿತು. ಬೆಳಿಗ್ಗೆ ದೀಪ ವಿಸರ್ಜನೆಯ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ದೇವಸ್ಥಾನದ ಪ್ರಧಾನ ಅರ್ಚಕ ಎಸ್. ವೆಂಕಟರಮಣ ಆಚಾರ್ಯ ಮತ್ತು ಪುರೋಹಿತರಾದ ಜಿ. ಅನಂತಕೃಷ್ಣ ಭಟ್ ನೇತೃತ್ವದಲ್ಲಿ ನಡೆಯಿತು. ದೇವರಿಗೆ ಮಧ್ಯಾಹ್ನ ಮಹಾಪೂಜೆ, ಪಂಚಭಕ್ಷ ನೈವೇದ್ಯ, ಮಹಾಸಮಾರಾಧನೆ ಮತ್ತಿತರ ಧಾರ್ಮಿಕ ಕಾರ್ಯಕ್ರಮಗಳು ಸಹಸ್ರಾರು ಭಜಕರ ಸೇವೆಯೊಂದಿಗೆ ವಿಜೃಂಭಣೆಯಿಂದ ಸಂಪನ್ನಗೊಂಡಿತು. ಅಖಂಡ ಭಜನಾ ಸಪ್ತಾಹ ಮಹೋತ್ಸವದಲ್ಲಿ ಊರ ಪರ ಊರಿನ ಸುಮಾರು 60ಕ್ಕೂ ಮಿಕ್ಕಿ ಭಜನಾ ತಂಡಗಳು ಪಾಲ್ಗೊಂಡು ಭಜನಾ ಸೇವೆ ಸಮರ್ಪಿಸಿದರು. ದೇವಸ್ಥಾನದ ಆಡಳಿತ ಮಂಡಳಿ ಸದಸ್ಯರು, ಭಜನಾ ಸಪ್ತಾಹ ಸಮಿತಿ ಸದಸ್ಯರು, ಊರಿನ ಹತ್ತು ಸಮಸ್ತರು, ಸಮಾಜಬಾಂಧವರು, ಭಜಕರು ಮತ್ತಿತರರು ಮಹೋತ್ಸವದಲ್ಲಿ ಪಾಲ್ಗೊಂಡು ಪ್ರಸಾದ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಮಳೆಯಿಂದ ಹಾನಿಗೊಳಗಾದ ಕೃಷಿ ಹಾಗೂ ತೋಟಗಾರಿಕೆ ಬೆಳೆಗಳ ಹಾನಿಯ ವಿವರಗಳನ್ನು ನಿಖರವಾಗಿ ನಿಗಧಿತ ಕಾಲಾವಧಿಯ ಒಳಗೆ ಪೂರ್ಣಗೊಳಿಸಿ, ವರದಿ ನೀಡಬೇಕೆಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯಲ್ಲಿ ವಾಡಿಕೆ ಮಳೆಗಿಂತ ಹೆಚ್ಚು ಮಳೆಯಿಂದಾಗಿ ಕೃಷಿ ಹಾಗೂ ತೋಟಗಾರಿಕೆ ಬೆಳೆಗಳ ಹಾನಿ ಉಂಟಾಗಿದೆ. ಕಂದಾಯ, ಕೃಷಿ ಹಾಗೂ ತೋಟಗಾರಿಕೆ ಇಲಾಖೆಯ ಅಧಿಕಾರಿಗಳು ಬೆಳೆ ಹಾನಿಯ ಜಂಟಿ ಸರ್ವೇ ಕಾರ್ಯಗಳನ್ನು ಯಾವುದೇ ರೀತಿಯ ವ್ಯತ್ಯಾಸ ಆಗದಂತೆ ನಿಖರ ಮಾಹಿತಿಯನ್ನು ಸಂಗ್ರಹಿಸಿ, ಪೋರ್ಟಲ್‌ನಲ್ಲಿ ಅಪ್‌ಲೋಡ್ ಮಾಡಬೇಕು ಎಂದರು. ಹೆಚ್ಚಿನ ಮಳೆಯಿಂದಾಗಿ ಅಡಿಕೆ ಬೆಳೆಗೆ ಕೊಳೆ ರೋಗಗಳು ಕಂಡುಬರುತ್ತಿದೆ. ಇವುಗಳ ನಿಯಂತ್ರಣಕ್ಕೆ ತೋಟಗಾರಿಕೆ ಇಲಾಖೆ ಅಧಿಕಾರಿಗಳು, ವಿಜ್ಞಾನಿಗಳು, ಸಂಶೋಧಕರು ಒಳಗೊಂಡ ತಂಡವು ರೈತರ ತೋಟಗಳಿಗೆ ಭೇಟಿ ನೀಡಿ, ರೋಗ ನಿಯಂತ್ರಣಕ್ಕೆ ಕಂಡುಕೊಳ್ಳಬಹುದಾದ ಪರಿಹಾರ ಕ್ರಮಗಳ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಹಿಂದುಳಿದ ವರ್ಗಗಳ ಕಾನೂನು ಪದವೀಧರರಿಗೆ ವಕೀಲಿ ವೃತ್ತಿಯಲ್ಲಿ ತರಬೇತಿ ನೀಡಿ ಶಿಷ್ಯವೇತನ ಮಂಜೂರು ಮಾಡಲು ಅರ್ಹ ಆಸಕ್ತ ಕಾನೂನು ಪದವೀಧರರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಆಗಸ್ಟ್ 30 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಧಿಕಾರಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಜಿಲ್ಲಾ ಕಚೇರಿಗಳ ಸಂಕೀರ್ಣ, ಬಿ ಬ್ಲಾಕ್, ರಜತಾದ್ರಿ, ಕೊಠಡಿ ಸಂಖ್ಯೆ: 304, ಎರಡನೇ ಮಹಡಿ, ಮಣಿಪಾಲ, ಉಡುಪಿ ದೂ.ಸಂಖ್ಯೆ: 0820-2574881 ಅಥವಾ 2573881 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿಗಳ ಕಛೇರಿ ಪ್ರಕಟಣೆ ತಿಳಿಸಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಕುಂದಾಪುರ ಲಯನ್ಸ್ ಕ್ಲಬ್ ಕೋಸ್ಟಲ್ ಮತ್ತು ಬಸ್ರೂರು ಇಂಟರಾಕ್ಟ್ ಕ್ಲಬ್ ನಿವೇದಿತಾ ಪ್ರೌಢಶಾಲೆ ಇದರ ಸಹಯೋಗದೊಂದಿಗೆ ಬುಧವಾರದಂದು ಬಸ್ರೂರಿನ ನಿವೇದಿತಾ ಪ್ರೌಢಶಾಲೆ ದಿ. ವೀರ ರಾಜೇಂದ್ರ ಹೆಗ್ಡೆ ಸಭಾಭವನದಲ್ಲಿ ವನಮಹೋತ್ಸವ ಕಾರ್ಯಕ್ರಮ ನಡೆಯಿತು. ನಿವೃತ್ತ ಮುಖ್ಯೋಪಾಧ್ಯಾಯರಾದ ಹೇರಿಕುದ್ರು ಕೊರಗಯ್ಯ ಶೆಟ್ಟಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮುಖ್ಯೋಪಾಧ್ಯಾಯರಾದ ಸುಬ್ಬ ಕೆ. ವಹಿಸಿದ್ದರು. ಲಯನ್ಸ್ ಕ್ಲಬ್‌ನ ಅಧ್ಯಕ್ಷರಾದ ಡಾ. ಅಂಪಾರು ನಿತ್ಯಾನಂದ ಶೆಟ್ಟಿ ಹಣ್ಣಿನ ಗಿಡಗಳನ್ನು ನೆಡುವ ಮೂಲಕ ವನಮಹೋತ್ಸವಕ್ಕೆ ಚಾಲನೆ ನೀಡಿದರು.  ಲಯನ್ಸ್ ಕ್ಲಬ್ ಮಾಜಿ ಅಧ್ಯಕ್ಷರಾದ ಲ.ರತ್ನಾಕರ ಶೆಟ್ಟಿ ಕಂದಾವರ, ಪ್ರಧಾನ ಕಾರ್ಯದರ್ಶಿ ಲ. ಭುಜಂಗ ಶೆಟ್ಟಿ ರಟ್ಟಾಡಿ, ನಿರ್ದೇಶಕರಾದ ಸುಕುಮಾರಶೆಟ್ಟಿ ಹೇರಿಕುದ್ರು, ಲ. ಪ್ರಭಾಕರ ಶೆಟ್ಟಿ ಕೋಟೇಶ್ವರ, ಲ. ಪ್ರಶಾಂತ್ ಶೆಟ್ಟಿ ಶಿರೂರು, ಲ. ಪ್ರತೀಶ್ ಶೆಟ್ಟಿ ಕೊಕ್ಕರ್ಣೆ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಶಾಲಾ ವಿದ್ಯಾರ್ಥಿಗಳು ಪ್ರಾರ್ಥನೆ ಮಾಡಿ ಶಾಲೆಯ ಇಂಟರ್ ಆಕ್ಟ್ ಕ್ಲಬ್ ನ ನಿರ್ದೇಶಕರಾದ ಪ್ರದೀಪ್ ಕುಮಾರ್ ಶೆಟ್ಟಿ ಸ್ವಾಗತಿಸಿ, ಶಾಲಾ ಶಿಕ್ಷಕಿ…

Read More