ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಬೈಂದೂರು ಮಂಡಲ ಬಿಜೆಪಿ ವತಿಯಿಂದ ಕ್ಷೇತ್ರದ ಎಲ್ಲಾ ಗ್ರಾಮ ಪಂಚಾಯತ್ಗಳ ಮುಂಭಾಗದಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಯಿತು. ಕ್ಷೇತ್ರದ ಹಲವಾರು ಗ್ರಾಮ ಪಂಚಾಯತ್ಗಳ ಮುಂಭಾಗದಲ್ಲಿ ನಡೆದ ಈ ಧರಣಿ ಪ್ರತಿಭಟನೆಯಲ್ಲಿ ಬೈಂದೂರು ವಿಧಾನ ಸಭಾ ಕ್ಷೇತ್ರದ ಶಾಸಕ ಗುರುರಾಜ್ ಗಂಟಿಹೊಳೆ ಅವರು ಭಾಗಿಯಾದರು. ಶಾಸಕರು ಪ್ರತಿಭಟನೆಯಲ್ಲಿ ಮಾತನಾಡಿ, ಕಾಂಗ್ರೆಸ್ ಸರ್ಕಾರಕ್ಕೆ ಕಣ್ಣು, ಕಿವಿ ಇಲ್ಲದಾಗಿದೆ. ಜನಸಾಮಾನ್ಯರ ಸಂಕಷ್ಟಗಳು ಈ ಭ್ರಷ್ಟ ಸರ್ಕಾರಕ್ಕೆ ಕಾಣುತ್ತಿಲ್ಲ. ದ್ವೇಷದ ರಾಜಕಾರಣಕ್ಕೆ ಜನರು ಬಲಿಯಾಗುತ್ತಿದ್ದಾರೆ. ಕ್ಷೇತ್ರದಲ್ಲಿ ಬಿಜೆಪಿ ಶಾಸಕರು ಆಯ್ಕೆಯಾಗಿದ್ದರೂ, ಕಾಂಗ್ರೆಸ್ ಅಭ್ಯರ್ಥಿಗೂ ಒಂದಷ್ಟು ಮತಗಳು ಬಿದ್ದಿವೆ. ಬಿಜೆಪಿ ಮೇಲಿನ ದ್ವೇಷದಿಂದ ಕ್ಷೇತ್ರದ ಮತದಾರರಿಗೆ ಈ ಸರ್ಕಾರ ಅನ್ಯಾಯ ಎಸಗುತ್ತಿದೆ ಎಂದು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಸಕಾರಣವಿಲ್ಲದೆ ಅಕ್ರಮ ಸಕ್ರಮ ಅರ್ಜಿಗಳನ್ನು ತಿರಸ್ಕರಿಸುತ್ತಿರುವುದು, ಭೂ ಪರಿವರ್ತಿತ ಜಮೀನುಗಳಲ್ಲಿ ಏಕ ವಿನ್ಯಾಸ ನೀಡುವ ಸಮಸ್ಯೆ, ಸಾಮಾಜಿಕ ಪಿಂಚಣಿಗಳನ್ನು ರದ್ದುಗೊಳಿಸಿರುವುದು, ಬೆಲೆ ಏರಿಕೆ, ವಸತಿ ಯೋಜನೆಗಳಲ್ಲಿ ಅಕ್ರಮ ಸೇರಿದಂತೆ ಸರ್ಕಾರದ ಜನವಿರೋಧಿ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಬೈಂದೂರಿನ ಇತಿಹಾಸದಲ್ಲಿ ಪ್ರಥಮ ಭಾರಿಗೆ ಮೂರು ದಿನಗಳ ಹಲಸು ಮತ್ತು ಕೃಷಿ ಮೇಳ ಜೂನ್ 27ರ ಶುಕ್ರವಾರದಿಂದ 29ರ ಭಾನುವಾರದ ತನಕ ಇಲ್ಲಿನ ಯಡ್ತರೆ ಬಂಟರ ಭವನದಲ್ಲಿ ಜರುಗಲಿದೆ. ಬೈಂದೂರು ಉತ್ಸವ ಸಮಿತಿ ಹಾಗೂ ರೈತೋತ್ಥಾನ ಬಳಗ ನೇತೃತ್ವದಲ್ಲಿ, ಸಮಷ್ಟಿ ಪ್ರತಿಷ್ಠಾನ ರಿ. ಹಾಗೂ ರೋಟರಿ ಕ್ಲಬ್ ಬೈಂದೂರು ಸಹಯೋಗದೊಂದಿಗೆ ನಡೆಯುವ ಕಾರ್ಯಕ್ರಮದಲ್ಲಿ ವಿವಿಧ ತಳಿಯ ಹಲಸು ಮತ್ತು ಮಾವಿನ ಹಣ್ಣಿನ ಪ್ರದರ್ಶನ ಹಾಗೂ ಮಾರಾಟ, ರುಚಿಕರ ಹಲಸಿನ ಉಪ ಉತ್ಪನ್ನಗಳು ಸವಿ ಉಣಬಡಿಸುವ ಜೊತೆಗೆ ಸಾಧಕ ಕೃಷಿಕರಿಗೆ ಸನ್ಮಾನ ಮೊದಲಾದ ಕಾರ್ಯಕ್ರಮಗಳು ಜರುಗಲಿದೆ. ಕಾರ್ಯಕ್ರಮಕ್ಕೆ ಬೈಂದೂರು ಶಾಸಕ ಗುರುರಾಜ ಗಂಟಿಹೊಳೆ ಚಾಲನೆ ನೀಡಲಿದ್ದು, ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ ಸೇರಿದಂತೆ ವಿವಿಧ ಅತಿಥಿ ಗಣ್ಯರು ಉಪಸ್ಥಿತರಿರಲಿದ್ದಾರೆ. ಈ ವೇಳೆ ಸ್ಥಳೀಯ ಸಾಧಕ ಕೃಷಿಕರಿಗೆ ಸನ್ಮಾನ ನಡೆಯಲಿದೆ. ಆಧುನಿಕ ಕೃಷಿ ಮಾಹಿತಿ ಕಾರ್ಯಾಗಾರಗಳು ನಡೆಯಲಿದೆ. ಮೂರು ದಿನಗಳು ಕೂಡ ವಿವಿಧ ತಳಿಯ ಹಲಸು ಮತ್ತು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ವಸತಿ ಇಲಾಖೆಯಲ್ಲಿ ಮನೆ ಪಡೆಯಬೇಕಾದರೆ ಹಣ ನೀಡಬೇಕು ಎನ್ನುವ ಆರೋಪವನ್ನು ಆಡಳಿತ ಪಕ್ಷವಾದ ಕಾಂಗ್ರೆಸ್ನ ಶಾಸಕರೇ ಮಾಡಿದ್ದಾರೆ. ಹೀಗಾಗಿ ಈ ಇಲಾಖೆಯಲ್ಲಿ ಕಾರ್ಯ ನಿರ್ವಹಿಸುವ ಸಚಿವರು, ಅಧಿಕಾರಿಗಳ ವಿರುದ್ಧ ಮುಖ್ಯ ಮಂತ್ರಿ ಸಿದ್ಧರಾಮಯ್ಯ ಅವರು ಕ್ರಮಕೈಗೊಳ್ಳಬೇಕು. ಸಚಿವರಿಂದ ರಾಜೀನಾಮೆ ಪಡೆಯಬೇಕು. ಹಗರಣದಲ್ಲಿ ಭಾಗಿಯಾದವರಿಗೆ ಶಿಕ್ಷೆಯಾಗುವ ತನಕ ನಾವು ನಿರಂತರವಾಗಿ ಹೋರಾಟ ನಡೆಸಲಿದ್ದೇವೆ ಎಂದು ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಎಚ್ಚರಿಕೆ ನೀಡಿದರು. ಅವರು ಕೋಟ ಗ್ರಾ.ಪಂ. ಆವರಣದಲ್ಲಿ, ಬಿಜೆಪಿ ವತಿಯಿಂದ ಕಾಂಗ್ರೆಸ್ ಸರಕಾರದ ವೈಪಲ್ಯಗಳ ವಿರುದ್ಧ ಹಮ್ಮಿಕೊಳ್ಳಲಾದ ಪ್ರತಿಭಟನಾ ಸಭೆಯಲ್ಲಿ ಮಾತನಾಡಿದರು. ಸರಕಾರ ಎಕವಿನ್ಯಾಸ ನಕ್ಷೆ, 11-ಇ ನೀಡುವ ಅಧಿಕಾರವನ್ನು ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ನೀಡಿದೆ. ಉಡುಪಿ ಪ್ರಾಧಿಕಾರದಲ್ಲಿ ಯಾವುದೇ ಕೆಲಸವಾಗುತ್ತಿಲ್ಲ. ಇನ್ನಾದರೂ ಸರಕಾರ ನಗರಾಭಿವೃದ್ಧಿ ಪ್ರಾಧಿಕಾರದ ಹಕ್ಕನ್ನು ಮರಳಿ ಗ್ರಾಮ ಪಂಚಾಯತ್ಗೆ ನೀಡಬೇಕು ಎಂದರು. ಉಡುಪಿ ಜಿಲ್ಲಾ ಯುವಮೋರ್ಚಾ ಅಧ್ಯಕ್ಷ ಪ್ರಥ್ವಿರಾಜ್ ಶೆಟ್ಟಿ ಬಿಲ್ಲಾಡಿ ಮಾತನಾಡಿದರು. ಬಿಜೆಪಿ ಪ್ರಮುಖರಾದ ಶಂಕರ್ ಅಂಕದಕಟ್ಟೆ, ಕೋಟ ಗ್ರಾ.ಪಂ.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಪ್ರಸಕ್ತ ಸಾಲಿನಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳ ಪ್ರವೇಶಾತಿಗಾಗಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗಕ್ಕೆ ಸೇರಿದ ಪಿ.ಯು.ಸಿ, ಐ.ಟಿ.ಐ ಹಾಗೂ ಡಿಪ್ಲೋಮಾ ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ ವೆಬ್ಸೈಟ್ https://shp.karnataka.gov.in/bcwd ನಲ್ಲಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜೂನ್ 30 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಇಲಾಖಾ ವೆಬ್ಸೈಟ್ https://bcwd.karnataka.gov.in/ ಅಥವಾ ಸಹಾಯವಾಣಿ ಸಂಖ್ಯೆ: 805077004 ಹಾಗೂ 8050770005 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕೊಲ್ಲಿ ರಾಷ್ಟ್ರಗಳಲ್ಲೊಂದು ಪುಟ್ಟ ದೇಶ, ಅದರ ರಾಜಧಾನಿಯಲ್ಲೊಂದು ಚಿಕ್ಕ ಜಾಗದಲ್ಲಿ ಒಳಾಂಗಣ ಮಳಿಗೆ. ಮಳಿಗೆಯ ಹೊರಗಿನ ಮಾರುಕಟ್ಟೆ ಪ್ರದೇಶದಲ್ಲಿ 36°C ತಾಪಮಾನ, ಮಳಿಗೆಯ ಒಳಗೆ ಹವಾನಿಯಂತ್ರಿತ ವಾತಾವರಣ, ವಿಶೇಷವಾಗಿ ಹಣ್ಣಿನ ರಾಜನಿಗೆ ಈ ಸಿದ್ಧತೆ. ಎರಡನೇ ಬಾರಿ ಆಯೋಜಿಸುತ್ತಿರುವ ಮಾವಿನ ಹಾಂಬಾ ಪ್ರದರ್ಶನ ಇದಾಗಿದೆ. 50ಕ್ಕೂ ಹೆಚ್ಚು ಅಂಗಡಿಗಳು, ಸುಮಾರು 25 ಮಾರಾಟಗಾರರು, ಎರಡು ವಾರದ ಸಂತೆ ಎಂದೇ ಹೇಳಬಹುದು. ಪ್ರತಿದಿನಕ್ಕೆ ಸಾವಿರಾರು ಜನರು ಬಂದು ಆನಂದಿಸಿ, ಸ್ವಾದಿಸಿ, ಹೋಗುತ್ತಿರುವರು. ಇದೇ ಕತಾರಿನ ದೋಹದಲ್ಲಿರುವ ಸೂಕ್ ವಾಕಿಫ್ ನಲ್ಲಿ ನಡೆದ ಮಾವಿನ ಮೇಳ. ರಾಜಪುರಿ, ತೂತಪುರಿ, ಬಾದಾಮಿ, ನಾಟಿ, ಸಿಂಧೂರ ಇನ್ನೂ ಅನೇಕ ತಳಿಗಳ ಮಾವಿನ ಹಣ್ಣುಗಳ ಸುವಾಸನೆ ತುಂಬಿದ ಈ ಒಳಾಂಗಣ ಪ್ರದೇಶದಲ್ಲಿ, ಮಾವಿನ ಹಣ್ಣಿನ ರಸ, ಮಾವಿನಕಾಯಿ ಜೊತೆಗೆ ಉಪ್ಪು ಖಾರ, ಮಾವಿನ ಉಪ್ಪಿನಕಾಯಿ, ಮಾವಿನ ಐಸ್ ಕ್ರೀಮ್, ಮಾವಿನ ಫಲೂದ, ಮಾವಿನ ಲಸ್ಸಿ ಹೀಗೆ ವೈವಿಧ್ಯಮಯ ರುಚಿಕರ ರಸಭರಿತ ಮಾವಿನ ತಿಂಡಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಬೈಂದೂರು ಇನ್ನರ್ವೀಲ್ ಕ್ಲಬ್ ಇದರ 2025- 26ನೇ ಸಾಲಿನ ನೂತನ ಅಧ್ಯಕ್ಷರಾಗಿ ಕೆ. ಶಾರದಾ ನಾರಾಯಣ್ ಹಾಗೂ ಕಾರ್ಯದರ್ಶಿಯಾಗಿ ಚೈತ್ರ ಸತೀಶ್ ಯಡ್ತರೆ ಆಯ್ಕೆಯಾಗಿದ್ದಾರೆ. ಶಾರದಾ ಅವರು ನಿವೃತ್ತ ಶಿಕ್ಷಕಿಯಾಗಿದ್ದು, ವಿವಿಧ ಸಂಸ್ಥೆಗಳಲ್ಲಿಯೂ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ. ನೂತನ ಪದಾಧಿಕಾರಿಗಳ ಪದಪ್ರಧಾನ ಸಮಾರಂಭ ಜುಲೈ 9ರಂದು ಬೈಂದೂರು ರೋಟರಿ ಸಮುದಾಯ ಭವನದಲ್ಲಿ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಹೆಮ್ಮಾಡಿಯ ಜನತಾ ಪದವಿ ಪೂರ್ವ ಕಾಲೇಜು ಹಾಗೂ ಕಿರಿಮಂಜೇಶ್ವರದ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್ನಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್ ಆಚರಿಸಲಾಯಿತು. ಮುಖ್ಯ ಶಿಕ್ಷಕಿ ದೀಪಿಕಾ ಆಚಾರ್ಯ ಅವರು ಮಾತನಾಡಿ, ಯೋಗದ ಮಹತ್ವವನ್ನು ಸಾರುತ್ತ ಪ್ರತಿಯೊಬ್ಬರು ಯೋಗವನ್ನು ಕಲಿತು ಆರೋಗ್ಯಕರ ಜೀವನದ ಕಡೆಗೆ ಹೆಚ್ಚು ಹಾಕಬೇಕು ಎಂದರು. ಜನತಾ ಸಮೂಹ ಸಂಸ್ಥೆಯ ವಿದ್ಯಾರ್ಥಿಗಳು ಸಾಮೂಹಿಕ ಯೋಗ ಪ್ರಾತ್ಯಕ್ಷಿಕೆ ನಡೆಸಿದರು. ಕಾಲೇಜಿನ ರಾಷ್ಟ್ರಮಟ್ಟದ ಯೋಗಪಟು ನಿರೀಕ್ಷಾ ಹಾಗೂ ಸಾನಿಧ್ಯಾ ಎಸ್. ಮೊಗವೀರ ಮತ್ತು ವಂಶಿತ್ (7ನೇ ತರಗತಿ) ಯೋಗ ನೃತ್ಯವನ್ನು ಪ್ರದರ್ಶಿಸಿದರು. ಡ್ರಾಮಾ ಜೂನಿಯರ್ ಖ್ಯಾತಿಯ ಸಿಂಚನ ಕೋಟೇಶ್ವರ (ಪ್ರಥಮ ಪಿಯುಸಿ) ಅವರಿಂದ ಡ್ರಾಮಾ ಪ್ರದರ್ಶನ ನಡೆಯಿತು. ಕಾರ್ಯಕ್ರಮದಲ್ಲಿ ಜನತಾ ಸಮೂಹ ಸಂಸ್ಥೆಗಳ ವಿದ್ಯಾರ್ಥಿಗಳು, ಬೋಧಕ/ಬೋಧಕೇತರ ವೃಂದದವರು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಯೋಗ ಶಿಕ್ಷಕಿಯಾದ ಅನ್ವಿತಾ ನಿರೂಪಿಸಿ, ಸ್ವಾಗತಿಸಿ, ಸಮಾಜ ವಿಜ್ಞಾನ ಶಿಕ್ಷಕರಾದ ಸುಬ್ರಹ್ಮಣ್ಯ ಮರಾಟಿ ವಂದಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ತಾಲೂಕಿನ ಪಡುಕೋಣೆಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ದಾನಿಗಳಿಂದ ಉಚಿತ ನೋಟ್ ಪುಸ್ತಕ ವಿತರಣಾ ಕಾರ್ಯಕ್ರಮವು ಶನಿವಾರ ನಡೆಯಿತು. ಶಾಲಾ ಪ್ರಾಕ್ತನ ವಿದ್ಯಾರ್ಥಿನಿ ಪದ್ಮಾ ಐತಾಳ್ ಪಡುಕೋಣೆ ಅವರು ನೋಟ್ ಪುಸ್ತಕದ ಪ್ರಾಯೋಜಕತ್ವವನ್ನು ವಹಿಸಿದ್ದರು. ಶಾಲೆಯ ಎಲ್ಕೆಜಿ ಯಿಂದ 8ನೇ ತರಗತಿಯವರೆಗಿನ ಎಲ್ಲಾ ಮಕ್ಕಳಿಗೂ ಶಾಲಾ ಎಸ್ಡಿಎಂಸಿ ಅಧ್ಯಕ್ಷರು ಹಾಗೂ ಸದಸ್ಯರು ನೋಟ್ ಪುಸ್ತಕ ವಿತರಿಸಿ ದಾನಿಗಳಿಗೆ ಕೃತಜ್ಞತೆ ಸಲ್ಲಿಸಿದರು. ಶಾಲಾ ಎಸ್ಡಿಎಂಸಿ ಅಧ್ಯಕ್ಷ ದಿನೇಶ್ ಪೂಜಾರಿ, ಉಪಾಧ್ಯಕ್ಷೆ ಪೂರ್ಣಿಮಾ ಎಸ್. ಡಿಎಂಸಿ ಸದಸ್ಯರುಗಳು, ಪೋಷಕರು, ಸಹಶಿಕ್ಷಕರು ಹಾಗೂ ಗೌರವ ಶಿಕ್ಷಕರು ಉಪಸ್ಥಿತರಿದ್ದರು. ಶಾಲಾ ಮುಖ್ಯೋಪಾಧ್ಯಾಯ ಆನಂದ ಜಿ. ಪ್ರಾಸ್ತಾವಿಕ ಮಾತುಗಳನ್ನಾಡಿದರು. ಅಮಿತಾ ಕಾರ್ಯಕ್ರಮ ನಿರೂಪಿಸಿ, ಸಹಶಿಕ್ಷಕಿ ಶ್ಯಾಮಲಾ ಸ್ವಾಗತಿಸಿ, ಸುಜಾತಾ ವಂದಿಸಿದರು. ಪೋಟೋ ಪೈಲ್ ನೇಮ್ : ೨೨ಜಿಎಎನ್೬ (ಪಡುಕೋಣೆಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ದಾನಿಗಳಿಂದ ಉಚಿತ ನೋಟ್ ಪುಸ್ತಕ ವಿತರಣಾ ಕಾರ್ಯಕ್ರಮ ನಡೆಯಿತು)
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತ್ರಾಸಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಭ್ರಾಮರಿ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟದ ವಾರ್ಷಿಕ ಮಹಾಸಭೆ ಕಾರ್ಯಕ್ರಮದಲ್ಲಿ ಯೋಗ ದಿನಾಚರಣೆಯ ಅಂಗವಾಗಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಜಿಲ್ಲಾ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದ ಸಂದೀಪ್ ಪೂಜಾರಿ ತ್ರಾಸಿ. ಅವರನ್ನು ಭ್ರಾಮರಿ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟದ ಪರವಾಗಿ ತ್ರಾಸಿಯ ಡಾ. ಅಂಬೇಡ್ಕರ್ ಸಭಾಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಗೌರವಿಸಲಾಯಿತು. ಗ್ರಾಮ ಪಂಚಾಯತ್ ಅಧ್ಯಕ್ಷ ಮಿಥುನ್ ಎಂ.ಡಿ. ಬಿಜೂರು, ಪಿಡಿಒ ಶೋಭಾ ಎಸ್., ಗ್ರಾಮ ಪಂಚಾಯತ್ ಸದಸ್ಯರು, ಗುಜ್ಜಾಡಿ ಪಶು ವೈಧ್ಯಾಧಿಕಾರಿ ಅರುಣ್ ಕೆ.ಪಿ., ಭ್ರಾಮರಿ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟದ ಅಧ್ಯಕ್ಷರು, ಪದಾಧಿಕಾರಿಗಳು ಮತ್ತಿತರರು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ 2024 ನೇ ಸಾಲಿನ Tenzing Norjy National Adventure (T.N.N.A.A) ಪ್ರಶಸ್ತಿಗಾಗಿ 2022 ರಿಂದ 2024 ನೇ ಸಾಲಿನ ವರೆಗೆ ಜಲಸಾಹಸ, ವಾಯುಸಾಹಸ ಮತ್ತು ಭೂ ಸಾಹಸ ಕ್ರೀಡೆಗಳಲ್ಲಿ ಸಾಧನೆ ಮಾಡಿರುವ ಅರ್ಹ ಕ್ರೀಡಾಪಟುಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜೂನ್ 30 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ವೆಬ್ಸೈಟ್ http://awards.gov.in/ ಅಥವಾ ಉಚಿತ ಸಹಾಯವಾಣಿ ಸಂಖ್ಯೆ: 01123386898 ಅಥವಾ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಉಡುಪಿ ದೂ.ಸಂಖ್ಯೆ: 0820-2521324, ಮೊ.ನಂ: 9845432303 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಇಲಾಖೆಯ ಕಚೇರಿ ಪ್ರಕಟಣೆ ತಿಳಿಸಿದೆ.
