ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇನ್ಸ್ಟಿಟ್ಯೂಟ್ ಆಫ್ ಕಂಪನಿ ಸೆಕ್ರೆಟರಿ ಆಫ್ ಇಂಡಿಯಾ ಸಿಎಸ್ಇಇಟಿ ರವರು ಮೇ. 3 ರಲ್ಲಿ ನಡೆಸಿದ ಎಸ್ಇಇಟಿ ಅರ್ಹತಾ ಪರೀಕ್ಷೆಯಲ್ಲಿ ಕಾರ್ಕಳದ ಕ್ರಿಯೇಟಿವ್ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ತೇರ್ಗಡೆಯಾಗುವ ಮೂಲಕ ಮುಂದಿನ ಹಂತದ ಪರೀಕ್ಷೆಗೆ ಅರ್ಹತೆ ಪಡೆದಿದ್ದಾರೆ. ವಿದ್ಯಾರ್ಥಿಗಳಾದ ಮಿಥುನಶ್ರೀ (164), ಸುವರ್ಣ ಹರ್ಷಲ್ ವೈ (162), ಹಾರಿಕ ಗೌಡ ಆರ್. ಬಿ. (153), ಇಯಾನ್ ಪೌಲ್(147), ಬಸವ ಪ್ರಸಾದ್ ಕಾಜಿ(142), ಪೂರ್ಣ ಭಟ್ ಕೆ. ಎಲ್(141), ಸೃಜನ್ ಎಸ್. ಭಟ್(140), ಲಿಖಿತ್ ರೆಡ್ಡಿ ಎಚ್. ಎಂ. (140), ರಕ್ಷಿತಾ ಆರ್.ಕಾಮತ್(135), ರೇಷ್ಮಾ ಜಿ.ಕೆ.(135) ಅಭಿಷೇಕ್ ಉಮಾದಿ(131), ಕೀರ್ತಿ ಪೈ(129), ಶ್ರದ್ಧಾ ಪಿ.ಅಂಗಡಿ(125), ಎಚ್.ಎ ಅದನ್ ಬೆಳ್ಳಿಯಪ್ಪ(125), ಪ್ರಭವ್ ಜಿ. ಶೆಟ್ಟಿ(121), ಆರ್ಯ ಬಿ.ವಿ(120), ಅಪ್ಸರ್ ಪಾಹಿಮ್(120), ಧನ್ಯಶ್ರೀ ಶೆಟ್ಟಿ(119), ಸೌರವ್ ರವಿ ಶೇಟ್(116), ಪೃಥ್ವಿ ಜಾಜಿ(115), ಸಾತ್ವಿಕ್ ಯು.ಆರ್(114), ಕನಿಷ್ಕ ಸೇನ್ ಎಸ್(113), ಸಪಲಿಗ ಸ್ವಾತಿ ತಿಮ್ಮಪ್ಪ(111), ಶ್ರೀಕಾರ್ ದುಬೀರ(111), ವಜ್ರ ಗೌಡ(110),…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಜಿಲ್ಲೆಯ ಶಾಲಾ ಕಾಲೇಜುಗಳ ನೂರು ಮೀಟರ್ ವ್ಯಾಪ್ತಿಯಲ್ಲಿ ತಂಬಾಕು ಉತ್ಪನ್ನಗಳ ಮಾರಾಟ ನಿಷೇಧವಿದೆ. ಈ ವ್ಯಾಪ್ತಿಯಲ್ಲಿ ತಂಬಾಕು ಉತ್ಪನ್ನ ಮಾರಾಟ ಮಾಡುವ ಅಂಗಡಿ, ಮುಂಗಟ್ಟುಗಳ ಪರವಾನಿಗೆ ರದ್ದುಪಡಿಸಲು ಸ್ಥಳೀಯ ಸಂಸ್ಥೆಗಳು ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಕೆ ವಿದ್ಯಾ ಕುಮಾರಿ ಸೂಚನೆ ನೀಡಿದರು. ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ತಂಬಾಕು ನಿಯಂತ್ರಣ ಕಾರ್ಯಕ್ರಮದಡಿಯಲ್ಲಿ ಕೋಟ್ಪಾ-2003 ಕಾಯಿದೆಯ ಕುರಿತ ತ್ರೆöÊಮಾಸಿಕ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕೋಟ್ಪಾ ಕಾಯಿದೆ ಅನ್ವಯ ಶಾಲಾ-ಕಾಲೇಜುಗಳ ನೂರು ಮೀಟರ್ ವ್ಯಾಪ್ತಿಯಲ್ಲಿ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡಬಾರದು ಎಂಬ ನಿಯಮವಿದ್ದರೂ ಸಹ ಜಿಲ್ಲೆಯ 38 ಶಾಲಾ-ಕಾಲೇಜುಗಳ ನಿಷೇಧಿತ ವ್ಯಾಪ್ತಿಯಲ್ಲಿಯೇ ಇವುಗಳ ಮಾರಾಟ ಮಾಡುತ್ತಿರುವ ಬಗ್ಗೆ ದೂರುಗಳೂ ಕೇಳಿ ಬಂದಿವೆ. ಈ ಬಗ್ಗೆ ಕೂಡಲೇ ಕ್ರಮವಹಿಸಬೇಕು. ಈಗಾಗಲೇ ಮಣಿಪಾಲದ 11, ಬೈಂದೂರಿನ ತಾಲೂಕಿನ 1 ಕಡೆ ತಂಬಾಕು ಉತ್ಪನ್ನ ಮಾರಾಟ ಮಾಡುತ್ತಿರುವ ಅಂಗಡಿಗಳ ಲೈಸೆನ್ಸ್ಗಳನ್ನು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಉಡುಪಿ ಪಂಚಮಿ ಟ್ರಸ್ಟ್ ಹಾಗೂ ಗಾಂಧಿ ಆಸ್ಪತ್ರೆಯ ಪ್ರಾಯೋಜಕತ್ವದಲ್ಲಿ ಬ್ರಹ್ಮಗಿರಿ ನಾಯರ್ಕೆರೆಯಲ್ಲಿ ಸ್ಥಾಪಿಸಲಾದ ಸೂಚನಾ ಫಲಕದ ಅನಾವರಣ ಕಾರ್ಯಕ್ರಮ ಗುರುವಾರ ನಡೆಯಿತು. ಉಡುಪಿ ಗಾಂಧಿ ಆಸ್ಪತ್ರೆಯ ಆಡಳಿತ ನಿರ್ದೇಶಕ ಎಂ. ಹರಿಶ್ಚಂದ್ರ ನಾಮಫಲಕವನ್ನು ಅನಾವರಣಗೊಳಿಸಿದರು. ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿ, ಪತ್ರಕರ್ತರು ಪ್ರತಿಯೊಂದು ಸಂದರ್ಭದಲ್ಲೂ ಮುಂಚೂಣಿಯಲ್ಲಿದ್ದು ಕಾರ್ಯನಿರ್ವಹಿಸುತ್ತಿರುತ್ತಾರೆ. ಅವರು ಕಾಲಕಾಲಕ್ಕೆ ತಮ್ಮ ಆರೋಗ್ಯವನ್ನು ತಪಾಸಣೆ ಮಾಡುವುದು ಅತೀ ಅಗತ್ಯವಾಗಿದೆ. ಅದೇ ರೀತಿ ಪ್ರಥಮ ಚಿಕಿತ್ಸೆಯ ಕುರಿತು ಕೂಡ ಪತ್ರಕರ್ತರಿಗೆ ತರಬೇತಿ ನೀಡುವುದು ಮುಖ್ಯ. ಇದಕ್ಕೆಲ್ಲ ನಮ್ಮ ಸಂಸ್ಥೆಯಿಂದ ಸಹಕಾರ ನೀಡ ಲಾಗುವುದು ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಗಾಂಧಿ ಆಸ್ಪತ್ರೆಯ ವತಿಯಿಂದ ಭಾರತೀಯ ಸೇನೆಗೆ ನೀಡಲಾದ 55,555ರೂ. ಮೊತ್ತದ ದೇಣಿಗೆಯ ಚೆಕ್ನ್ನು ಉಡುಪಿ ಜಿಲ್ಲಾ ವಾರ್ತಾಧಿಕಾರಿ ಮಂಜುನಾಥ್ ಅವರ ಮೂಲಕ ಉಡುಪಿ ಜಿಲ್ಲಾಡಳಿತಕ್ಕೆ ಹಸ್ತಾಂತರಿಸಲಾಯಿತು. ಮುಖ್ಯ ಅತಿಥಿಗಳಾಗಿ ಗಾಂಧಿ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ. ವ್ಯಾಸರಾಜ ತಂತ್ರಿ,…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಾಲೂಕಿನ ಶಿರೂರಿನ ಗ್ರೀನ್ ವ್ಯಾಲಿ ಇಂಟರ್ನ್ಯಾಷನಲ್ ಶಾಲೆಯಲ್ಲಿ ವಿದ್ಯಾರ್ಥಿಯೋರ್ವನ ಮೇಲೆ ನಡೆದಿದೆ ಎನ್ನಲಾದ ಹಲ್ಲೆಯಾದ ವೀಡಿಯೋ ವೈರಲ್ ಆಗಿರುವ ಕುರಿತಂತೆ ಉಡುಪಿ ಜಿಲ್ಲಾ ಎನ್.ಎಸ್.ಯು.ಐ ಪದಾಧಿಕಾರಿಗಳು ಕಾಲೇಜಿಗೆ ಭೇಟಿ ನೀಡಿ ಘಟನೆಯ ಬಗ್ಗೆ ಮಾಹಿತಿಯನ್ನು ಪಡೆದುಕೊಂಡರು. ಎಸ್ ಯು ಐ ಪದಾಧಿಕಾರಿಗಳು ಪ್ರಾಂಶುಪಾಲರನ್ನು ಭೇಟಿ ಮಾಡಿ ಘಟನೆಯ ಕುರಿತಂತೆ ಮಾಹಿತಿಯನ್ನು ಪಡೆದುಕೊಂಡರು. ಅಲ್ಲದೆ ಮುಂದೆ ಅವನ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ನಿಯೋಗ ಕಾಲೇಜು ಆಡಳಿತ ಮಂಡಳಿಗೆ ಆಗ್ರಹಿಸಿತು. ಮುಂದೆ ಇಂತಹ ಘಟನೆಗಳು ಮರುಕಳಿಸಿದ್ದಲ್ಲಿ ಕಾಲೇಜಿನ ವಿರುದ್ಧ ಉಗ್ರವಾದ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು. ಶಾಲೆಯ ಪ್ರಾಂಶುಪಾಲರು ಇದಕ್ಕೆ ಪ್ರತಿಕ್ರಿಯಿಸಿ, ಘಟನೆ ಆರು ತಿಂಗಳ ಹಿಂದೆ ನಡೆದಿದ್ದು ಇತ್ತಿಚೇಗೆ ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಘಟನೆ ನಡೆದ ಕೂಡಲೇ ವಿದ್ಯಾರ್ಥಿಯ ಮೇಲೆ ಹಲ್ಲೆ ನಡೆಸಿದ್ದ ಉಪನ್ಯಾಸಕ ವಿನಾಯಕ್ ಖಾರ್ವಿ ಎಂಬಾತನನ್ನು ಸಂಸ್ಥೆಯಿಂದ ವಜಾಗೊಳಿಸಿದ್ದು ವಿದ್ಯಾರ್ಥಿಯ ಕುಟುಂಬಕ್ಕೆ ಈ ಕುರಿತು ಮಾಹಿತಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಶಂಕರನಾರಾಯಣ: ಇಲ್ಲಿನ ಪ್ರತಿಷ್ಟಿತ ವಿದ್ಯಾಸಂಸ್ಥೆಯಾದ ಮದರ್ ತೆರೆಸಾಸ್ ಪಿಯು ಕಾಲೇಜಿನ 2024-25ನೇ ಸಾಲಿನ 7 ವಿದ್ಯಾರ್ಥಿಗಳು 2025ರ ಮೇ ತಿಂಗಳಿನಲ್ಲಿ ನಡೆದ ಸಿಎಸ್ಇಇಟಿ ಪರೀಕ್ಷೆಯಲ್ಲಿ ಪ್ರಥಮ ಪ್ರಯತ್ನದಲೇ ಉತ್ತೀರ್ಣರಾಗಿ ಅದ್ವಿತೀಯ ಸಾಧನೆಗೈದಿದಾರೆ. ವಿದ್ಯಾರ್ಥಿಗಳಾದ ಅಶ್ವಿನಿ-118/200, ಶ್ರೀದೇವಿ-118/200, ನಿತೇಶ್ ನಾಯ್ಕ್-108/200 ಸರ್ವದಾ ಚಾತ್ರ 108/200 ಶುಶಾನ್ ಶೆಟ್ಟಿ -107/200 ಪ್ರಥ್ವಿರಾಜ್-105/200 ಆದಿತ್ಯ -101/200 ಅಂಕಗಳಿಸಿದ್ದಾರೆ ಅದ್ವಿತೀಯ ಸಾಧನೆ ಮಾಡಿದ ಎಲ್ಲಾ ವಿದ್ಯಾರ್ಥಿಗಳಿಗೆ ಶಾಲೆಯ ಆಡಳಿತ ವರ್ಗ, ಪ್ರಾಂಶುಪಾಲರು ಹಾಗೂ ಸಿಬ್ಬಂದಿ ವರ್ಗ ಶುಭ ಹಾರೈಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಕಾಳಾವರ ವರದರಾಜ್ ಎಂ. ಶೆಟ್ಟಿ ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಕೋಟೇಶ್ವರ ಇಲ್ಲಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ ಉಡುಪಿ ಮತ್ತು ಕುಂದಾಪುರ ತಾಲೂಕು ಗ್ಯಾರಂಟಿ ಅನುಷ್ಟಾನ ಸಮಿತಿ ವತಿಯಿಂದ ಅಂತಿಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಯುವನಿಧಿ ಯ ಕುರಿತು ಪ್ರಚಾರ ಮತ್ತು ನೋಂದಣಿ ಅಭಿಯಾನವನ್ನು ಕೈಗೊಳ್ಳಲಾಯಿತು. ಕುಂದಾಪುರ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಟಾನ ಸಮಿತಿ ಅಧ್ಯಕ್ಷರಾದ ಹರಿಪ್ರಸಾದ್ ಶೆಟ್ಟಿ ಅವರು ಮಾತನಾಡಿ, ಸರ್ಕಾರದ ಈ ಯೋಜನೆ ನಿರುದ್ಯೋಗಿ ಯುವಪೀಳಿಗೆಗೆ ತುಂಬಾ ಅನುಕೂಲಕರವಾಗಿದೆ ಪದವಿ ಮುಗಿದು ಉದ್ಯೋಗ ಸಿಗದ ಅರ್ಹ ಫಲಾನುಭವಿಗಳು ಇದರ ಸದುಪಯೋಗ ಪಡೆದುಕೊಳ್ಳುವಂತೆ ಕರೆ ನೀಡಿದರು. ಉದ್ಯೋಗ ವಿನಿಮಯ ಕಛೇರಿಯ ಸಿಬ್ಬಂದಿ ದೀಕ್ಷಿತ್ ಅವರು ವಿದ್ಯಾರ್ಥಿಗಳಿಗೆ ಯುವನಿಧಿ ಯೋಜನೆ ಪಡೆದುಕೊಳ್ಳುವ ಬಗೆ ಮತ್ತು ಮಾನದಂಡಗಳ ಕುರಿತು ಪೂರ್ಣ ಮಾಹಿತಿ ನೀಡಿದರು. ಪ್ರಾಶುಪಾಲರಾದ ರಾಮರಾಯ ಆಚಾರ್ಯ ಅವರು ಅಧ್ಯಕ್ಷತೆ ವಹಿಸಿದ್ದರು. ಈ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ತೆಕ್ಕಟ್ಟೆ ಗ್ರಾಮದಲ್ಲಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾದ ದಾರುಣ ಘಟನೆ ಗುರುವಾರ ಬೆಳಿಗ್ಗೆ ನಡೆದಿದೆ. ಈ ಪೈಕಿ ತಂದೆ ಮತ್ತು ಮಗ ಮೃತಪಟ್ಟಿದ್ದು, ತಾಯಿಯ ಪರಿಸ್ಥಿತಿ ಗಂಭೀರವಾಗಿದೆ. ಸಾಲಬಾಧೆಯಿಂದ ನೊಂದಿದ್ದ ಕುಟುಂಬ ಬಾವಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದೆ. ಮೃತರನ್ನು ಕಂಚುಗಾರುಬೆಟ್ಟು ನಿವಾಸಿ ಮಾಧವ ದೇವಾಡಿಗ (56), ಹಾಗೂ ಅವರ ಮಗ ಪ್ರಸಾದ್ ದೇವಾಡಿಗ (22) ಗುರುತಿಸಲಾಗಿದೆ. ಗಂಭೀರ ಸ್ಥಿತಿಯಲ್ಲಿದ್ದ ತಾರಾ ದೇವಾಡಿಗ ಅವರನ್ನುಕೋಟೇಶ್ವರದ ಆಸ್ಪತ್ರೆಗೆ ದಾಖಲಿಸಲಾಗಿದೆ. ತಂದೆ ಮತ್ತು ಮಗ ಆತ್ಮಹತ್ಯೆಗೆ ಶರಣಾಗಿರುವುದನ್ನು ತಿಳಿದ ತಾಯಿ, ತಾರಾ ದೇವಾಡಿಗ ಅವರು ಬಾವಿಗೆ ಹಾರಿದ್ದು, ಅವರ ಆಕ್ರಂದನದ ಧ್ವನಿ ಕೇಳಿದ ಸ್ಥಳೀಯ ನಿವಾಸಿಗಳಾದ ಸಂತೋಷ್ ಶೆಟ್ಟಿ, ಶ್ರೀನಾಥ್ ಶೆಟ್ಟಿ ಹಾಗೂ ಸ್ಥಳೀಯರು ರಕ್ಷಣೆಗೆ ಧಾವಿಸಿದರು. ಮನೆಯಲ್ಲಿ ಡೆತ್ ನೋಟ್ ದೊರಕಿದ್ದು ಬಡ ಕುಟುಂಬಕ್ಕೆ ಸಾಲಬಾಧೆ ಕಾಡುತ್ತಿರುವುದರಿಂದ ಮರ್ಯಾದೆಗಾಗಿ ಅಂಜಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದು ಬಂದಿದೆ. ಮಾಧವ ದೇವಾಡಿಗ ಅವರು ಅಂಕದಕಟ್ಟೆ ಪೆಟ್ರೋಲ್ ಬಂಕ್…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಜಿಲ್ಲಾ ವ್ಯಾಪ್ತಿಯಲ್ಲಿ ರಸ್ತೆ ಅಪಘಾತ ಪ್ರಕರಣಗಳಾಗಿ ಸಾವು-ನೋವುಗಳು ಸಂಭವಿಸದಂತೆ ರಸ್ತೆಗಳಲ್ಲಿ ವಾಹನಗಳು ಸುಗಮ ಹಾಗೂ ಸುರಕ್ಷಿತವಾಗಿ ಸಂಚರಿಸಲು ಅಗತ್ಯವಿರುವ ಎಲ್ಲಾ ಮುನ್ನೆಚ್ಚರಿಕ ಕಾಮಗಾರಿಗಳು ಹಾಗೂ ರಸ್ತೆ ಸೂಚನಾ ಫಲಕ ಅಳವಡಿಸಿ, ರಸ್ತೆ ಅಪಘಾತ ಪ್ರಕರಣಗಳು ಕಡಿಮೆ ಮಾಡಲು ಅಗತ್ಯ ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾ ಕುಮಾರಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸಾರ್ವಜನಿಕರು ರಸ್ತೆಗಳಲ್ಲಿ ಸಂಚರಿಸುವಾಗ ರಸ್ತೆ ಸುರಕ್ಷತಾ ನಿಯಮಗಳನ್ನು ಚಾಚೂ ತಪ್ಪದೆ ಪಾಲಿಸಬೇಕು. ಪ್ರಾಧಿಕಾರ ನಿಗಧಿಪಡಿಸಿರುವ ವೇಗ ಮಿತಿಯೊಳಗೆ ಸಂಚರಿಸಿದಲ್ಲಿ ವಾಹನಗಳು ಸುಗಮವಾಗಿ ಹಾಗೂ ಸುರಕ್ಷಿತವಾಗಿ ಸಂಚರಿಸಲು ಸಾಧ್ಯವಾಗುತ್ತದೆ.ಇದಕ್ಕೆ ಒತ್ತು ನೀಡಬೇಕು ಎಂದರು. ಜಿಲ್ಲೆಯಲ್ಲಿ ಗುರುತಿಸಲಾಗಿರುವ ಬ್ಲಾಕ್ಸ್ಪಾಟ್ ಪ್ರದೇಶಗಳಲ್ಲಿ ವಾಹನಗಳ ಸುರಕ್ಷಿತ ಚಾಲನೆಗೆ ಅಗತ್ಯವಿರುವ ವೈಜ್ಞಾನಿಕವಾಗಿ ಕಾಮಗಾರಿಗಳನ್ನು ಆದ್ಯತೆಯ ಮೇಲೆ ಕೈಗೊಳ್ಳಬೇಕು ಎಂದ ಅವರು, ಅವಶ್ಯವಿರುವ ಕಡೆಯಲ್ಲಿ ಹಂಪ್ಸ್ಗಳ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಉತ್ತರಾಖಂಡದಲ್ಲಿ ಇತ್ತೀಚಿಗೆ ನಡೆದ ಏಷ್ಯನ್ ಪವರ್ ಲಿಪ್ಪಿಂಗ್ ಚಾಂಪಿಯನ್ಶಿಪ್ನಲ್ಲಿ ಭಾರತವನ್ನು ಪ್ರತಿನಿಧಿಸಿದ್ದ ತಾಲೂಕಿನ ಉಪ್ಪಿನಕುದ್ರು ನಾಗಶ್ರೀ ಗಣೇಶ್ ಶೇರುಗಾರ್ ಅವರು ಮೂರು ಚಿನ್ನ ಒಂದು ಬೆಳ್ಳಿ ಪದಕ ಪಡೆಯುವುದರೊಂದಿಗೆ ಹೊಸ ದಾಖಲೆಯನ್ನು ನಿರ್ಮಿಸಿ ನ್ಯೂ ಏಷ್ಯನ್ ಚಾಂಪಿಯನ್ ಪಡೆದಿದ್ದಾರೆ. ಈಕೆ ಉಪ್ಪಿನಕುದ್ರು ದಿ. ಗಣೇಶ್ ಶೇರುಗಾರ್ ಹಾಗೂ ಪ್ರೇಮಲತಾ ಗಣೇಶ್ ಶೇರುಗಾರ್ ದಂಪತಿಯ ಪುತ್ರಿ. ಗ್ರಾಮೀಣ ಪ್ರದೇಶದ ಅವರು ಕಠಿಣ ಪರಿಶ್ರಮದಿಂದ ವೇಯ್ಟ್ ಲಿಫ್ಟಿಂಗ್ ಹಾಗೂ ಪವರ್ ಲಿಫ್ಟಿಂಗ್ ಸಾಧನೆ ಮಾಡಿ 50ಕ್ಕೂ ಹೆಚ್ಚು ಪದಕಗಳನ್ನು ಗೆದ್ದುಕೊಂಡಿದ್ದಾರೆ. ಇದನ್ನೂ ಓದಿ: ► ಪವರ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಉಪ್ಪಿನಕುದ್ರು ನಾಗಶ್ರೀಗೆ ಕಂಚಿನ ಪದಕ – https://kundapraa.com/?p=84466&
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಅಂಪಾರು ಸಮೀಪದ ನೆಲ್ಲಿಕಟ್ಟೆ ಎಂಬಲ್ಲಿ ಬೈಕ್ ಡಿಕ್ಕಿ ಹೊಡೆದು ಸೈಕಲ್ ಸವಾರ ಮೃತಪಟ್ಟ ಘಟನೆ ಇತ್ತೀಚಿಗೆ ಸಂಭವಿಸಿದೆ. ಮೃತ ಪಟ್ಟ ವ್ಯಕ್ತಿ ಕಾವಾಡಿ ನಿವಾಸಿ ಕೊರಗ (77) ಎಂದು ಗುರುತಿಸಲಾಗಿದೆ. ಅವರ ಮಗನ ಮನೆಯಾದ ನೆಲ್ಲಿಕಟ್ಟೆಗೆ ಸೈಕಲ್ ನಲ್ಲಿ ಹೋಗಿ ವಾಪಸ್ ಬರುತ್ತಿರುವಾಗ ಅಂಪಾರಿನಿಂದ ಕುಂದಾಪುರದ ಕಡೆಗೆ ಬರುತ್ತಿದ್ದ ಬೈಕ್, ಅತೀ ವೇಗ ಹಾಗೂ ಅಜಾಗರೂಕತೆಯಿಂದ ಸೈಕಲ್ಗೆ ಡಿಕ್ಕಿ ಹೊಡೆದಿದ್ದು, ಸೈಕಲ್ ಸವಾರ ಗಂಭೀರ ಗಾಯಗೊಂಡಿದ್ದರು. ಅವರನ್ನು ಚಿಕಿತ್ಸೆಗ್ಗೆ ಮಣಿಪಾಲ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆಗೆ ಸ್ಪಂದಿಸದೆ ಮೃತ ಪಟ್ಟಿದ್ದಾರೆ. ಈ ಬಗ್ಗೆ ಶಂಕರನಾರಾಯಣ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
