Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ‘ಟೀಮ್ ಕುಂದಾಪುರಿಯನ್ಸ್’ ವತಿಯಿಂದ ಬೆಂಗಳೂರು ವಿಜಯನಗರದ ಬಿ.ಜಿ.ಎಸ್ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದ್ದ ಕುಂದಾಪ್ರ ಕನ್ನಡ ಉತ್ಸವದಲ್ಲಿ ಕಂಬಳ ಕ್ಷೇತ್ರದಲ್ಲಿ ಸೆನ್ಸಾರ್ ವಿಥ್ ಲೇಸರ್ ಫಿನಿಷ್ ತಂತ್ರಜ್ಞಾನವನ್ನು ಯಶಸ್ವಿಯಾಗಿ ನಿರ್ವಹಿಸುತ್ತಿರುವ ವೆಂಕಟೇಶ್ ಪೂಜಾರಿ ಬಡಾಮನೆ ಅವರಿಗೆ ಕುಂದಾಪ್ರ ಸನ್ಮಾನ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಬೈಂದೂರು ತಾಲೂಕು ನಂದನವನ ಗ್ರಾಮದಲ್ಲಿ ಅನಂತ ಪೂಜಾರಿ ಹಾಗೂ ಸೀತು ಪೂಜಾರಿ ದಂಪತಿ ಪುತ್ರನಾಗಿ 1982 ಅಕ್ಟೋಬರ್ 1ರಂದು ಜನಿಸಿದ ಅವರು ತನ್ನ ಶಿಕ್ಷಣವನ್ನು ಉಪ್ಪುಂದ ಪದವಿ ಪೂರ್ವ ಕಾಲೇಜ್‌ನಲ್ಲಿ ಪೂರೈಸಿದರು. ನಂತರ ತನ್ನ ಮುಂದಿನ ಶಿಕ್ಷಣಕ್ಕಾಗಿ ಮಂಗಳೂರಿಗೆ ತೆರೆಳಿದ ಅವರು ಐಟಿಐ ಪೂರೈಸಿದ್ದಾರೆ ಹಾಗೂ ಸುಮಾರು 20 ವರ್ಷದಿಂದ ಇಲೆಕ್ಟ್ರಿಷಿಯನ್ ಆಗಿ ತನ್ನದೇ ಊರಲ್ಲಿ ಕೆಲಸದಲ್ಲಿ ತೊಡಗಿದ್ದಾರೆ. ಇವರಿಗೆ ಹಲವಾರು ವರ್ಷಗಳಿಂದ ಕಂಬಳದ ಬಗ್ಗೆ ತೀವ್ರ ಕುತೂಹಲ ಹಾಗೂ ಹಲವಾರು ಕಂಬಗಳಲ್ಲಿ ಕೋಣಗಳದ ಪೋಷಕರರಾಗಿ ಕಂಬಳ ಮಾಡಿದ್ದರು. ತನ್ನ ಹಿರಿಯ ಸಹೋದರ ರಾಜು ಪೂಜಾರಿ ಬಡಾಮನೆ ಇವರ ಮಾಲಿಕತ್ವದಲ್ಲಿ ತೆಂಕು ಹಾಗು ಬಡಗು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರುರಾಜ್ ಗಂಟಿಹೊಳೆ ಅವರು, ಸಮೃದ್ಧ ಬೈಂದೂರು ಪರಿಕಲ್ಪನೆಯ 300 ಟ್ರೀಸ್ ಯೋಜನೆಯಡಿ, ಭೂಮಿ ಟ್ರಸ್ಟ್ ಸಹಕಾರದೊಂದಿಗೆ ಹಾಗೂ ಭೀಮ ಗೋಲ್ಡ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ಸಿಎಸ್ಆರ್ ನಿಧಿಯಿಂದ ಬೈಂದೂರಿನ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ₹6 ಲಕ್ಷ ವೆಚ್ಚದಲ್ಲಿ ಕಾಲೇಜಿನ ಬಯಲು ರಂಗಮಂದಿರಕ್ಕೆ ಇಂಟರ್‌ಲಾಕ್ ಅಳವಡಿಸುವ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿದರು. ಕಾಲೇಜಿನ ಮೂಲಸೌಕರ್ಯ ಅಭಿವೃದ್ಧಿ ಹಾಗೂ ವಿದ್ಯಾರ್ಥಿಗಳಿಗೆ ಉತ್ತಮ ಶೈಕ್ಷಣಿಕ ವಾತಾವರಣ ಕಲ್ಪಿಸುವ ಉದ್ದೇಶದಿಂದ ಈ ಅಭಿವೃದ್ಧಿ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಗಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಪ್ರಸಕ್ತ ಸಾಲಿಗೆ ಉಡುಪಿ ತಾಲೂಕಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕ-ಬಾಲಕಿಯರ ವಿದ್ಯಾರ್ಥಿನಿಲಯ ಪ್ರವೇಶಾತಿಗೆ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ -1, 2ಎ, 2ಬಿ, 3ಎ, 3ಬಿ, ಪ.ಜಾತಿ ಮತ್ತು ಪ.ವರ್ಗದ ವೃತ್ತಿಪರ ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಂದ ವೆಬ್‌ಸೈಟ್ https://shp.karnataka.gov.in/bcwd ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಸೆಪ್ಟೆಂಬರ್ 30. ಅರ್ಜಿ ಸಲ್ಲಿಸಲು ತೊಂದರೆಗಳಾದಲ್ಲಿ bcwdhelpline@gmail.com ಹಾಗೂ ಹೆಚ್ಚಿನ ವಿವರಗಳಿಗಾಗಿ https://bcwd.karnataka.gov.in ಅನ್ನು ಅಥವಾ ಜಿಲ್ಲಾ/ತಾಲೂಕು ಅಧಿಕಾರಿಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಉಡುಪಿ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರುರಾಜ್ ಗಂಟಿಹೊಳೆ ಅವರು, ಸಮೃದ್ಧ ಬೈಂದೂರು ಪರಿಕಲ್ಪನೆಯ 300 ಟ್ರೀಸ್ ಯೋಜನೆಯಡಿ, ಭೂಮಿ ಟ್ರಸ್ಟ್ ಸಹಕಾರದೊಂದಿಗೆ ಹಾಗೂ ಭೀಮ ಗೋಲ್ಡ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ಸಿಎಸ್ಆರ್ ನಿಧಿಯಿಂದ ಮದ್ದೋಡಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಲವು ಅಭಿವೃದ್ಧಿ ಕಾರ್ಯಕ್ರಮಗಳಿಗೆ ಚಾಲನೆ ನೀಡಿದರು. ಶಾಲೆಯಲ್ಲಿ ಸುಮಾರು ₹6 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾಗುವ ಬಾಲಕಿಯರ ಶೌಚಾಲಯದ ಕಾಮಗಾರಿಗೆ ಶಾಸಕರಾದ ಗುರುರಾಜ್ ಗಂಟಿಹೊಳೆ ಅವರು ಭೂಮಿಪೂಜೆ ನೆರವೇರಿಸಿದರು. ಇದೇ ಸಂದರ್ಭದಲ್ಲಿ ವಿದ್ಯಾರ್ಥಿಗಳ ಆರೋಗ್ಯ ಮತ್ತು ಶೈಕ್ಷಣಿಕ ಅಭಿವೃದ್ಧಿಯನ್ನು ಗಮನದಲ್ಲಿಟ್ಟುಕೊಂಡು ಸ್ಥಾಪಿಸಲಾದ ಶುದ್ಧ ಕುಡಿಯುವ ನೀರಿನ ಘಟಕ ಹಾಗೂ ಕಂಪ್ಯೂಟರ್ ಲ್ಯಾಬ್‌ ಅನ್ನು ಉದ್ಘಾಟಿಸಿದರು. ಶಾಲಾ ಮಕ್ಕಳಿಗೆ ಉತ್ತಮ ಮೂಲಸೌಕರ್ಯ ಕಲ್ಪಿಸುವ ಉದ್ದೇಶದಿಂದ ಕೈಗೊಳ್ಳಲಾಗುತ್ತಿರುವ ಈ ಯೋಜನೆಗಳು ವಿದ್ಯಾರ್ಥಿಗಳ ಭವಿಷ್ಯದ ಶಿಕ್ಷಣ ಮತ್ತು ಆರೋಗ್ಯಕರ ವಾತಾವರಣ ನಿರ್ಮಾಣಕ್ಕೆ ಸಹಕಾರಿಯಾಗಲಿವೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ತಾಲೂಕು ಶಿರೂರು ಗ್ರಾಮದ ಬುಕಾರಿ ಕಾಲೋನಿ ಬಳಿ ಬಾಡಿಗೆ ಮನೆಯಲ್ಲಿ ವಾಸವಿದ್ದ ಬೀಬಿ ರಿಹಾನ (33) ಎಂಬ ಮಹಿಳೆಯು ಸೆಪ್ಟೆಂಬರ್ 9ರಂದು ಕೆಲಸದ ನಿಮಿತ್ತ 2 ದಿನಗಳವರೆಗೆ ಹೊರಗೆ ಹೋಗುತ್ತೇನೆಂದು ಹೇಳಿ ಹೋದವರು ಇದುವರೆಗೂ ಮನೆಗೆ ವಾಪಸು ಬಾರದೆ ನಾಪತ್ತೆಯಾಗಿರುತ್ತಾರೆ. 5 ಅಡಿ 4 ಇಂಚು ಎತ್ತರ, ಎಣ್ಣೆ ಕಪ್ಪು ಮೈಬಣ್ಣ, ದಪ್ಪನೆಯ ಶರೀರ ಹೊಂದಿದ್ದು, ಕನ್ನಡ, ಹಿಂದಿ ಹಾಗೂ ಉರ್ದು ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಬೈಂದೂರು ಪೊಲೀಸ್ ಠಾಣೆ ದೂ.ಸಂಖ್ಯೆ: 08254-251033, 9480805459, ಬೈಂದೂರು ವೃತ್ತ ನಿರೀಕ್ಷಕರ ಕಛೇರಿ ದೂ.ಸಂಖ್ಯೆ: 08254-251031, 9480805434 ಹಾಗೂ ಕಂಟ್ರೋಲ್ ರೂಂ ದೂ.ಸಂಖ್ಯೆ: 100 (0820) 2526444 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಬೈಂದೂರು ಪೊಲೀಸ್ ಠಾಣಾಧಿಕಾರಿಗಳ ಕಛೇರಿ ಪ್ರಕಟಣೆ ತಿಳಿಸಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಬ್ರಹ್ಮಶ್ರೀ ನಾರಾಯಣ ಗುರುಗಳು ಕೊಟ್ಟಿರುವ ಸಂದೇಶ ಜನಸಾಮಾನ್ಯರ ಬದುಕಿನಲ್ಲಿ ಹೊಸಶಕ್ತಿಯನ್ನು ನೀಡಿದ್ದು ಈ ನಿಟ್ಟಿನಲ್ಲಿ ನಾರಾಯಣ ಗುರುಗಳ 172ನೇ ಜನ್ಮ ದಿನದ ಆಂಗವಾಗಿ ಸಾಸ್ತಾನದಿಂದ ಅರಂಭವಾದ ಈ ಪರಿವರ್ತನಾ ಜಾಥಾ ಎಲ್ಲಾ ಪ್ರದೇಶದಲ್ಲೂ ಮೇಳೈಸಲಿ ಅಲ್ಲದೆ ನಾರಾಯಣ ಗುರುಗಳ ಸಂದೇಶವನ್ನು ಸಮಾಜಕ್ಕೆ ಬಿತ್ತರಿಸಲು ಶಕ್ತಿಯನ್ನು ಪಡೆಯಲಿ ಇದರಿಂದ ಒಂದು ಸುಂದರ ಸಮಾಜ ನಿರ್ಮಾಣವಾಗಲಿದೆ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಅವರು ಭಾನುವಾರ ಸಾಸ್ತಾನ ಪೇಟೆಯಲ್ಲಿ ಶ್ರೀ ಬ್ರಹ್ಮಬೈದರ್ಕಳ ಬಿಲ್ಲವ ಸೇವಾ ಸಂಘ ಸಾಸ್ತಾನ, ಶ್ರೀ ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಂಘ ಕೋಟ ಇವರ ಸಹಭಾಗಿತ್ವದಲ್ಲಿ ಶ್ರೀ ನಾರಾಯಣಗುರುಗಳ 172ನೇ ಜನ್ಮ ದಿನಾಚರಣೆಯ ಅಂಗವಾಗಿ ಶ್ರೀ ನಾರಾಯಣಗುರು ಪರಿವರ್ತನಾ ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿದರು. ಈ ಸಂದರ್ಭದಲ್ಲಿ ಸಾಹಿತಿ ನರೇಂದ್ರ ಕುಮಾರ್ ಕೋಟ, ಸಮುದಾಯದ ಪ್ರಮುಖರಾದ ವಿಠ್ಠಲ ಪೂಜಾರಿ ಪಾಂಡೇಶ್ವರ, ಐರೋಡಿ ವಿಠ್ಠಲ ಪೂಜಾರಿ, ಎಂಸಿ.ಚಂದ್ರಶೇಖರ್, ಸದಾನಂದ ಪೂಜಾರಿ, ಪ್ರಸಾದ್ ಬಿಲ್ಲವ, ರತ್ನಾ ಜೆ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಹಾಗೂ ಸುಜ್ಞಾನ ಪದವಿ ಪೂರ್ವ ಕಾಲೇಜು  ಕುಂದಾಪುರ ಇವರ ಆಶ್ರಯದಲ್ಲಿ ನಡೆದ ಕುಂದಾಪುರ ತಾಲೂಕು ಮಟ್ಟದ  ಬಾಲಕ – ಬಾಲಕಿಯರ ಥ್ರೋಬಾಲ್ ಪಂದ್ಯಾಟದಲ್ಲಿ ಶ್ರೀ ವೆಂಕಟರಮಣ ಪಿಯು ಕಾಲೇಜಿನ  ಬಾಲಕ  – ಬಾಲಕಿಯರ ಉಭಯ ತಂಡಗಳು ದಿಗ್ವಿಜಯ ಸಾಧಿಸಿ ಚಾಂಪಿಯನ್ ಪಟ್ಟವನ್ನು ಮೂಡಿಗೇರಿಕೊಂಡು ಜಿಲ್ಲಾ ಮಟ್ಟದ ಪಂದ್ಯಾಟಕ್ಕೆ ಅರ್ಹತೆ ಪಡೆದಿದ್ದಾರೆ. ವಿದ್ಯಾರ್ಥಿಗಳೊಂದಿಗೆ ಕಾಲೇಜಿನ ಪ್ರಾಂಶುಪಾಲರಾದ ಸಂದೀಪ್ ಗಾಣಿಗ, ಉಪ ಪ್ರಾಂಶುಪಾಲರಾದ ಸುಜೇಯ್ ಕೋಟೆಗಾರ್, ವಿದ್ಯಾರ್ಥಿಗಳನ್ನು ತರಬೇತಿಗೊಳಿಸಿದ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರಾಘವೇಂದ್ರ ಗಾಣಿಗ ಹಾಗೂ ದೈಹಿಕ ಶಿಕ್ಷಣ ನಿರ್ದೇಶಕ ಕೃಷ್ಣ ಉಪಸ್ಥಿತರಿದ್ದಾರೆ. ಕ್ರೀಡಾಪಟುಗಳನ್ನು ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ – ಬೋಧಕೇತರ ಸಿಬ್ಬಂದಿ ಶ್ಲಾಘಿಸಿ, ಮುಂದಿನ ಪಂದ್ಯಗಳಿಗೆ ಶುಭ ಹಾರೈಸಿದ್ದಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಗೋಕರ್ಣ: ಅನ್ನ ಹಾಗೂ ಅಮ್ಮ ಎರಡಕ್ಕೂ ಹೆಚ್ಚು ವ್ಯತ್ಯಾಸವಿಲ್ಲ. ತಂದೆ ತಾಯಿಗಳಿಗಿಂತ ಹೆಚ್ಚಿನದನ್ನು ಅನ್ನ ನಮಗೆ ಮಾಡುತ್ತದೆ. ತಂದೆ ತಾಯಿ ಹೊರಗಿನಿಂದ ಪೋಷಿಸಬಹುದು. ಆದರೆ ದೇಹದ ಒಳಗೂ ಹೋಗಿ ನಮ್ಮನ್ನು ಪೋಷಿಸುವ ಶಕ್ತಿ ಆಹಾರಕ್ಕೆ ಮಾತ್ರವಿದೆ ಎಂದು ಶ್ರೀ ರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು. ಅವರು ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ ನಡೆಯುತ್ತಿರುವ ‘ಅನ್ನಬ್ರಹ್ಮ ಚಾತುರ್ಮಾಸ್ಯ’ದ ಧರ್ಮಸಭೆಯಲ್ಲಿ ‘ಅನ್ನಂ ಬ್ರಹ್ಮ’ ಮಾಲಿಕೆಯಲ್ಲಿ ಪ್ರವಚನ ಅನುಗ್ರಹಿಸಿದ ಶ್ರೀಗಳು, ಗಂಗೆಯನ್ನು ವೈಜ್ಞಾನಿಕ ದೃಷ್ಟಿಯಿಂದ ನೋಡಿದಾಗ ಅದು ಕೇವಲ ಹೆಚ್.ಟು.ಓ (H2O) ಅನಿಸುತ್ತದೆ. ಅದಕ್ಕೂ ಬೇರೆ ನೀರಿಗೂ ವ್ಯತ್ಯಾಸವಿಲ್ಲ ಎನಿಸಬಹುದು. ಆದರೆ ಗಂಗೆ ಕೇವಲ ಅಷ್ಟೇ ಅಲ್ಲಾ. ಸೂಕ್ಷ್ಮ ದೃಷ್ಟಿಗೆ ಗಂಗಾ ನದಿಯು ಗಂಗಾ ಮಾತೆಯಾಗಿ ಕಾಣುತ್ತಾಳೆ. ರಾಮನು ಮನುಷ್ಯನಾಗಿದ್ದ. ಆದರೆ ರಾಮ ಮನುಷ್ಯ ಮಾತ್ರವೇ ಆಗಿರಲಿಲ್ಲ ಎಂಬುದನ್ನು ನಾವು ಗಮನಿಸಬಹುದು. ಹಾಗೆಯೇ ಸ್ಥೂಲ ದೃಷ್ಟಿಯಲ್ಲಿ ಆಹಾರವು ಕೇವಲ ಹೊಟ್ಟೆ ತುಂಬಿಸುವ ಊಟವಾದರೆ, ಸೂಕ್ಷ್ಮ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ನೂತನ ಶೈಕ್ಷಣಿಕ ಅಧ್ಯಾಯಕ್ಕೆ ಸಾಕ್ಷಿಯಾಗಿರುವ ಆಳ್ವಾಸ್ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ ಆ್ಯಂಡ್ ರಿಸರ್ಚ್ ಸೆಂಟರ್‌ನ (ಎಐಎಂಎಸ್‌ಆರ್‌ಸಿ) ಮೊದಲ ಎಂಬಿಬಿಎಸ್ ಪ್ರವೇಶದ ಹೆಗ್ಗಳಿಕೆಗೆ ಆಳ್ವಾಸ್ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಸ್ನೇಹಾ ಪಾತ್ರರಾಗಿದ್ದಾರೆ. ಸರ್ಕಾರಿ ಕೋಟದಡಿ ಎಂಬಿಬಿಎಸ್ ಪ್ರವೇಶ ಪಡೆದಿರುವ ಸ್ನೇಹಾ, ಸೀಮಿತ ಆರ್ಥಿಕ ಹಿನ್ನೆಲೆಯ ಕುಟುಂಬದಿಂದ ಬಂದು ಶೈಕ್ಷಣಿಕ ಪರಿಶ್ರಮ, ಅವಕಾಶ ಹಾಗೂ ಸೂಕ್ತ ಮಾರ್ಗದರ್ಶನದ ಮೂಲಕ ವೈದ್ಯಕೀಯ ಶಿಕ್ಷಣದ ಕನಸನ್ನು ನನಸಾಗಿಸಿಕೊಂಡಿದ್ದಾರೆ. ಕಾರ್ಕಳದ ಕುಂಟಲ್ಪಾಡಿಯ ನಿವಾಸಿಯಾಗಿರುವ ಸ್ನೇಹಾ, ತನ್ನ ಎಸ್‌ಎಸ್‌ಎಲ್‌ಸಿಯನ್ನು ಜೆಸೀಸ್ ಹೈಸ್ಕೂಲ್‌ನಲ್ಲಿ 590 ಅಂಕಗಳೊಂದಿಗೆ ಪೂರ್ಣಗೊಳಿಸಿದ್ದರು. ಬಳಿಕ ಆಳ್ವಾಸ್ ಪದವಿಪೂರ್ವ ಕಾಲೇಜಿಗೆ ಸೇರಿ, ಆಳ್ವಾಸ್‌ನ ಮೆರಿಟ್ ಅಡಾಪ್ಷನ್ ಸ್ಕೀಮ್ (ದತ್ತು ಯೋಜನೆ) ಅಡಿಯಲ್ಲಿ ಶಿಕ್ಷಣ ಮುಂದುವರಿಸಿದ್ದರು. ಆಳ್ವಾಸ್‌ನಲ್ಲಿ ಪಡೆದ ಶೈಕ್ಷಣಿಕ ತರಬೇತಿ, ನಿರಂತರ ಪರಿಶ್ರಮ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಯ ಸಿದ್ಧತೆಯ ಫಲವಾಗಿ ಸ್ನೇಹಾ ನೀಟ್‌ನಲ್ಲಿ 720ಕ್ಕೆ 506 ಅಂಕಗಳನ್ನು ಗಳಿಸಿ, ಆಳ್ವಾಸ್ ವೈದ್ಯಕೀಯ ಕಾಲೇಜಿನಲ್ಲಿ ಸರ್ಕಾರಿ ಕೋಟಾದಡಿ ಎಂಬಿಬಿಎಸ್…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಕಸ್ತೂರಿ ರಂಗನ್ ವರದಿಗೆ ರಾಜ್ಯ ಸರ್ಕಾರದ ಆಕ್ಷೇಪಣೆಯನ್ನು ಸಾರ್ವಜನಿಕವಾಗಿ ಬಹಿರಂಗಪಡಿಸಬೇಕು ಎಂದು ಕುಂದಾಪುರ ತಾಲ್ಲೂಕು ರೈತ ಸಂಘದ ಅಧ್ಯಕ್ಷ ಕೆ. ವಿಕಾಸ್ ಹೆಗ್ಡೆ ಹೇಳಿದರು. ಕೇಂದ್ರ ಸರ್ಕಾರದ ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಹಾಗೂ ಹವಾಮಾನ ಬದಲಾವಣೆ ಸಚಿವಾಲಯ ಕಸ್ತೂರಿ ರಂಗನ್ ವರದಿ ಕುರಿತ ಏಳನೇ ಕರಡು ಪ್ರತಿ ಬಿಡುಗಡೆಗೊಳಿಸಿದೆ. ಹಾಗೂ ರಾಜ್ಯ ಸರ್ಕಾರಕ್ಕೆ ಆಕ್ಷೇಪಣೆ ಸಲ್ಲಿಸಲು ಕಾಲಮಿತಿ ನಿಗದಿ ಪಡಿಸಿದೆ ಹಾಗೂ ಇದು ಪ್ರಥಮ ಭಾರಿಯಲ್ಲ ಈಗಾಗಲೇ ಆರು ಭಾರಿ ಕರಡು ಜಾರಿಯಾದರೂ ಸಹ ಇಲ್ಲಿಯ ತನಕ ರೈತರ ಹಾಗೂ ಪಶ್ಚಿಮ ಘಟ್ಟವಾಸಿಗಳ ಬೇಡಿಕೆಯಾದ ಭೌತಿಕ ಸರ್ವೇ ಕಾರ್ಯ ಇಲ್ಲಿಯ ತನಕ ನಡೆಯಲೇ ಇಲ್ಲಾ. ಸಂಸದರು ಹಾಗೂ ಶಾಸಕರುಗಳು ಕೇವಲ ಕಾಟಾಚಾರಕ್ಕೆ ಅಧಿಕಾರಿಗಳನ್ನು ಕೂರಿಸಿಕೊಂಡು ಸಭೆ ಮಾಡುವುದನ್ನು ನಿಲ್ಲಿಸಬೇಕು ಹಾಗೂ ಅಧಿಕಾರಿಗಳು ಸಭೆಯಲ್ಲಿ ನೀಡಿದ ಹಾರಿಕೆಯ ಉತ್ತರಗಳಿಗೆ ಸಮ್ಮತಿ ನೀಡದೆ ಕೂಡಲೇ ರಾಜ್ಯ ಸರ್ಕಾರದ ಆಕ್ಷೇಪಣೆಯ ಪ್ರತಿಯನ್ನು ಸಾರ್ವಜನಿಕವಾಗಿ ಬಹಿರಂಗ ಪಡಿಸಬೇಕು. ಇಲ್ಲದೇ ಇದ್ದರೆ…

Read More