ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ರೋಟರಿ ಜಿಲ್ಲೆ 3182ರ ವತಿಯಿಂದ ಹಾಸನದಲ್ಲಿ ನಡೆದ ಸದಸ್ಯತ್ವ ಅಭಿವೃದ್ಧಿ, ಸಾರ್ವಜನಿಕ ಚಿತ್ರಣ ಮತ್ತು ಜಿಲ್ಲಾ ಪ್ರಶಸ್ತಿ ಸಮ್ಮೇಳನ 2025-26 ವಿಚಾರ ಸಂಕಿರಣದಲ್ಲಿ ವಲಯ 2ರ ರೋಟರಿ ಕೋಟ ಸಿಟಿಯು 16 ಜಿಲ್ಲಾ ಪ್ರಶಸ್ತಿಗಳನ್ನು ವಿವಿಧ ವಿಭಾಗದಲ್ಲಿ ಮಾಡಿದ ಸಮಾಜ ಮುಖಿ ಕಾರ್ಯಕ್ರಮ ಕ್ಕೆ ಗುರುತಿಸಿ ನೀಡಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ರೋಟರಿ ಜಿಲ್ಲೆ 3182ರ ಜಿಲ್ಲಾ ಗವರ್ನರ್ ಬಿ. ಎಮ್. ಭಟ್ ವಹಿಸಿದ್ದರು. ಪಿ ಡಿ ಜಿ. ಅಭಿನಂದನ್ ಶೆಟ್ಟಿ, ಪಿಡಿಜಿ ಸಿಎ ದೇವಾನಂದ್ ಮತ್ತಿತರರು ಉಪಸ್ಥಿತರಿದ್ದರು. ಜಿಲ್ಲಾ ಪ್ರಶಸ್ತಿಯನ್ನು ರೋಟರಿ ಕೋಟ ಸಿಟಿಯ ಅಧ್ಯಕ್ಷ ರಾಧಾಕೃಷ್ಣ ಬ್ರಹ್ಮಾವರ್ ಸ್ವೀಕರಿಸಿದರು. ರೋಟರಿ ಕೋಟ ಸಿಟಿಯ ಮಾಜಿ ಅಸಿಸ್ಟೆಂಟ್ ಗವರ್ನರ್ ಸತೀಶ್ ಶೆಟ್ಟಿ, ಶ್ಯಾಮ್ ಸುಂದರ್ ನಾಯರಿ, ಕಾರ್ಯದರ್ಶಿ ಉಮೇಶ್ ನಾಯರಿ, ಸದಸ್ಯರಾದ ನಿತ್ಯಾನಂದ ನಾಯರಿ, ಶಿವಾನಂದ ನಾಯರಿ, ವಿಜಯ್ ದೇವಾಡಿಗ, ರವಿ ಬೇಳೂರು, ರಾಘವೇಂದ್ರ ನಾಯರಿ, ರವಿ ಕುಮಾರ್ ಶೆಟ್ಟಿ ನಡೂರ್ ಉಪಸ್ಥಿತರಿದ್ದರು.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿಕುಂದಾಪುರ: ವಿದ್ಯಾರ್ಥಿಗಳ ಉದ್ಯೋಗಾರ್ಹತೆ ಹೆಚ್ಚಿಸುವ ನಿಟ್ಟಿನಲ್ಲಿ ಐಎಂಜೆ ವಿಜ್ಞಾನ ಮತ್ತು ವಾಣಿಜ್ಯ ಕಾಲೇಜು (IMJISC), ಮೂಡ್ಲಕಟ್ಟೆ ಇದರ ತರಬೇತಿ ಮತ್ತು ಉದ್ಯೋಗ ಘಟಕವು ಪ್ರತಿಷ್ಠಿತ ಸ್ಕಿಲ್ ಆರ್ಬಿಟ್ ಸಂಸ್ಥೆಯೊಂದಿಗೆ ಒಡಂಬಡಿಕೆ (MoU) ಮಾಡಿಕೊಂಡಿದೆ. ಒಡಂಬಡಿಕೆಯ ಅಂಗವಾಗಿ ಕಾಲೇಜಿನಲ್ಲಿ ಉದ್ಯಮಾಧಾರಿತ ಆಡ್-ಆನ್ ಕೋರ್ಸ್ಗಳ ಕುರಿತು ವಿಶೇಷ ಕಾರ್ಯಾಗಾರ ಆಯೋಜಿಸಲಾಗಿತ್ತು. ಕಾರ್ಯಾಗಾರದಲ್ಲಿ ಕೃತಕ ಬುದ್ಧಿಮತ್ತೆ ಮತ್ತು ಯಂತ್ರ ಕಲಿಕೆ (AIML), ಸೈಬರ್ ಸೆಕ್ಯುರಿಟಿ, ಹಣಕಾಸು ಮತ್ತು ಷೇರುಪೇಟೆ, ಡಿಜಿಟಲ್ ಹಾಗೂ ಸಾಮಾಜಿಕ ಮಾಧ್ಯಮ ಮಾರ್ಕೆಟಿಂಗ್ ಮತ್ತು ಮಾನವ ಸಂಪನ್ಮೂಲ ನಿರ್ವಹಣೆ (HRM) ಕ್ಷೇತ್ರಗಳ ಕೋರ್ಸ್ಗಳ ಕುರಿತು ವಿಸ್ತೃತ ಮಾಹಿತಿ ನೀಡಲಾಯಿತು. ಆಕ್ಸೆಂಚರ್ ಸಂಸ್ಥೆಯ ಬ್ಯಾಕೆಂಡ್ ಎಐ ಇಂಜಿನಿಯರ್ ಹಾಗೂ ಸ್ಕಿಲ್ ಆರ್ಬಿಟ್ನ ಎಐಎಂಎಲ್ ಮಾರ್ಗದರ್ಶಕಿ ಗಂಟಾ ಶ್ರುತಿ, ಎಚ್ಆರ್ ಮ್ಯಾನೇಜರ್ ಪವನ್ ಕೊಡುರಿ ಹಾಗೂ ಪ್ರಾಡಕ್ಟ್ ಮ್ಯಾನೇಜರ್ ಮನೋಜ್ ಚಿಂತಡ ಅವರು ಸಂಪನ್ಮೂಲ ವ್ಯಕ್ತಿಗಳಾಗಿ ಪಾಲ್ಗೊಂಡು ವಿದ್ಯಾರ್ಥಿಗಳಿಗೆ ಉದ್ಯಮದ ಪ್ರಸ್ತುತ ಬೇಡಿಕೆಗಳು ಮತ್ತು ಕೌಶಲ್ಯಗಳ ಕುರಿತು ಮಾರ್ಗದರ್ಶನ ನೀಡಿದರು. ಬಿಸಿಎ, ಬಿ.ಕಾಂ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಡಾ. ಬಿ.ಆರ್. ಅಂಬೇಡ್ಕರ್ ಮಹಿಳಾ ಸಂಘ ರಿ. ಬೈಂದೂರು ವತಿಯಿಂದ ಇಲ್ಲಿನ ರತ್ತು ಬಾಯಿ ಜನತಾ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳನ್ನು ಶೈಕ್ಷಣಿಕವಾಗಿ ದತ್ತು ಪಡೆಯುವ ‘ಅಕ್ಷರ ಬೆಳಕು’ ಕಾರ್ಯಕ್ರಮವು ಅರ್ಥಪೂರ್ಣವಾಗಿ ಜರುಗಿತು. ಕಾರ್ಯಕ್ರಮವನ್ನು ಉಡುಪಿ ಜಿಲ್ಲಾ ದ.ಸಂ.ಸಮಿತಿ ಸಂಘಟನಾ ಸಂಚಾಲಕರಾದ ಮಂಜುನಾಥ ನಾಗೂರು ಉದ್ಘಾಟಿಸಿ, ಮಾತನಾಡಿ, ಸಂಘವು ಸತತ ನಾಲ್ಕು ವರ್ಷಗಳಿಂದ ಪ್ರತಿವರ್ಷ ನಾಲ್ವರು ಅರ್ಹ ವಿದ್ಯಾರ್ಥಿಗಳನ್ನು ಶೈಕ್ಷಣಿಕವಾಗಿ ದತ್ತು ಪಡೆದು, ಅವರ ಶಿಕ್ಷಣ ಮುಂದುವರಿಸಲು ಅಗತ್ಯವಿರುವ ಸಂಪೂರ್ಣ ಆರ್ಥಿಕ ನೆರವು ಹಾಗೂ ಪ್ರೋತ್ಸಾಹವನ್ನು ನೀಡುತ್ತಾ ಬರುತ್ತಿರುವುದು ಶ್ಲಾಘನೀಯ ಎಂದರು . ಕಾರ್ಯಕ್ರಮದ ಅಧ್ಯಕ್ಷತೆಯನ್ನು ತಾಲೂಕು ದಲಿತ ಸಂಘರ್ಷ ಸಮಿತಿ (ದ.ಸಂ.ಸ) ಮಹಿಳಾ ಒಕ್ಕೂಟದ ಅಧ್ಯಕ್ಷರಾದ ವಿನಯ ವಹಿಸಿದ್ದರು. ಮುಖ್ಯ ಅತಿಥಿಯಾಗಿ ಶಾಲೆಯ ಮುಖ್ಯೋಪಾಧ್ಯಾಯರಾದ ಪ್ರಕಾಶ್ ಎಂ. ಭಾಗವಹಿಸಿದ್ದರು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ಪ್ರದೀಪ್ ಕುಮಾರ್ ಜಿ.ಎಂ. ಅವರು ವಿದ್ಯಾರ್ಥಿಗಳಿಗೆ ಇಂಗ್ಲಿಷ್ ಭಾಷಾ ಕಲಿಕೆ, ಕೌಶಲ್ಯ ಹಾಗೂ ವ್ಯಾಕರಣದ ಮಹತ್ವದ ಕುರಿತು ಉಪಯುಕ್ತ ಮಾಹಿತಿ ಮತ್ತು ಮಾರ್ಗದರ್ಶನ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಡಾ. ಕೆ. ಕಸ್ತೂರಿ ರಂಗನ್ ನೇತೃತ್ವದ ಉನ್ನತ ಮಟ್ಟದ ಕಾರ್ಯತಂಡದ ಆಧಾರದ ಮೇಲೆ ಪಶ್ಚಿಮ ಘಟ್ಟಗಳನ್ನು ಪರಿಸರ ಸೂಕ್ಷ್ಮ ಪ್ರದೇಶವೆಂದು ಘೋಷಿಸಿರುವ ಕರಡು ಅಧಿಸೂಚನೆ ವರದಿಯ ಅನ್ವಯ ಸಾಧಕ ಬಾಧಕಗಳನ್ನು ಪರಿಶೀಲಿಸಿ, ಜನರಿಗೆ ತೊಂದರೆಯಾಗದಂತೆ ಕ್ರಮ ಕೈಗೊಳ್ಳಲು ಸರಕಾರಕ್ಕೆ ಪತ್ರ ಬರೆಯಲಾಗುವುದಾಗಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ತಿಳಿಸಿದರು. ಅವರು ಸೋಮವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಪರಸರ ಸೂಕ್ಷ್ಮ ಪ್ರದೇಶ (ಕಸ್ತೂರಿ ರಂಗನ್ ವರದಿ ಆಧಾರಿತ)ಕ್ಕೆ ಸಂಬಂಧಿಸಿದಂತೆ ನಡೆದ ಜಿಲ್ಲಾ ಮಟ್ಟದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಸರ್ಕಾರದ ಅರಣ್ಯ ಕಾಯಿದೆಗಳು ಅರಣ್ಯ ಇಲಾಖೆಯ ನೀತಿ ನಿಯಮಗಳಿಂದ ನಿರಂತರ ತೊಂದರೆಗೊಳಗಾಗುತ್ತಿರುವ ಕಾಡಂಚಿನ ಭಾಗದ ಜನರಿಗೆ ಇನ್ನೂ ಕಸ್ತೂರಿ ರಂಗನ್ ವರದಿ ಜಾರಿಗೆ ಮುಂದಾಗಿರುವುದು ಈ ಭಾಗದ ಜನರ ಜೀವನ ಹಾಗೂ ಜೀವನೋಪಾಯಕ್ಕೆ ತೊಂದರೆ ಉಂಟಾಗುತ್ತಿದೆ ಎಂಬ ಆತಂಕ ಹಾಗೂ ಮತ್ತಿತರ ಮೂಲ ಸೌಕರ್ಯಗಳ ಅಭಿವೃದ್ಧಿಗೆ ಕುತ್ತು ಉಂಟಾಗುವ ಸಾಧ್ಯತೆ ಇದೆ ಎಂದು ಗೊಂದಲಗಳಿವೆ.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ರೋಟರಿ ಕ್ಲಬ್ ತೆಕ್ಕಟ್ಟೆ 2025–2026ರ ರೋಟರಿ ವರ್ಷದಲ್ಲಿ ಅತ್ಯುತ್ತಮ ಸಾಧನೆಗಾಗಿ ಪ್ರತಿಷ್ಠಿತ ಎಕ್ಸಲೆನ್ಸ್ ಕ್ಲಬ್ ಪ್ರಶಸ್ತಿಯನ್ನು ಪ್ರಥಮ ಬಾರಿಗೆ ಪಡೆದು ಹೆಮ್ಮೆಯ ಸಾಧನೆ ಮಾಡಿದೆ. ಇದರೊಂದಿಗೆ ಕ್ಲಬ್ಗೆ ವಿವಿಧ ವಿಭಾಗಗಳಲ್ಲಿ ಇನ್ನೂ 12 ಪ್ರಶಸ್ತಿಗಳು ಲಭಿಸಿವೆ. ವರ್ಷಪೂರ್ತಿ ಕೈಗೊಂಡ ಸಮಾಜಸೇವಾ ಕಾರ್ಯಕ್ರಮಗಳು ಹಾಗೂ ವಿವಿಧ ಕ್ಷೇತ್ರಗಳಲ್ಲಿ ತೋರಿದ ಅತ್ಯುತ್ತಮ ಸಾಧನೆಗೆ ಈ ಪ್ರಶಸ್ತಿಗಳು ದೊರೆತಿವೆ. ಈ ಸಾಧನೆಯು ಕ್ಲಬ್ನ ಸದಸ್ಯರ ಸಾಮೂಹಿಕ ಪ್ರಯತ್ನ, ಬದ್ಧತೆ, ಸಕ್ರಿಯ ಭಾಗವಹಿಸುವಿಕೆ ಮತ್ತು ನಿಸ್ವಾರ್ಥ ಸೇವೆಗೆ ದೊರೆತ ಮಾನ್ಯತೆಯಾಗಿದೆ. 2025–2026ರ ರೋಟರಿ ವರ್ಷದ ಅಧ್ಯಕ್ಷ ರೋಟೇರಿಯನ್ ಸುಧೀರ್ ಮಲ್ಯಾಡಿ ಅವರ ಸಮರ್ಥ ನಾಯಕತ್ವದಲ್ಲಿ ಈ ಸಾಧನೆ ಸಾಧ್ಯವಾಗಿದೆ. ಈ ಸಂದರ್ಭದಲ್ಲಿ ಅಧ್ಯಕ್ಷ ರೋಟೇರಿಯನ್ ಸುಧೀರ್ ಮಲ್ಯಾಡಿ ಹಾಗೂ ಕಾರ್ಯದರ್ಶಿ ರೋಟೇರಿಯನ್ ಟಿ. ರಾಜೀವ್ ಶೆಟ್ಟಿ ಅವರು ಕ್ಲಬ್ನ ಎಲ್ಲಾ ಸದಸ್ಯರ ಸಹಕಾರ ಮತ್ತು ಸಮರ್ಪಣೆಯನ್ನು ಅಭಿನಂದಿಸಿ ಕೃತಜ್ಞತೆ ಸಲ್ಲಿಸಿದ್ದಾರೆ. ಈ ಪ್ರಶಸ್ತಿಯು ಮುಂದಿನ ದಿನಗಳಲ್ಲಿ ಇನ್ನಷ್ಟು ಉತ್ಸಾಹ ಮತ್ತು ಬದ್ಧತೆಯೊಂದಿಗೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ವಿಜಯನಗರದ BGS ಮೈದಾನದಲ್ಲಿ ‘ಟೀಮ್ ಕುಂದಾಪುರಿಯನ್ಸ್’ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಕುಂದಾಪ್ರ ಕನ್ನಡ ಉತ್ಸವ 2026 ಅತ್ಯಂತ ವಿಜೃಂಭಣೆ ಮತ್ತು ಸಂಭ್ರಮದಿಂದ ನೆರವೇರಿತು. ಬೆಳಿಗ್ಗೆ 11 ಗಂಟೆಯಿಂದ ರಾತ್ರಿ 9 ಗಂಟೆಯವರೆಗೆ ಮೈದಾನದಾದ್ಯಂತ ಕೇವಲ ಕುಂದಾಪ್ರ ಕನ್ನಡದ ಸೊಗಡು, ಕರಾವಳಿಯ ಆಚಾರ-ವಿಚಾರ ಮತ್ತು ಸಂಸ್ಕೃತಿಯ ಹಬ್ಬವೇ ಮನೆಮಾಡಿತ್ತು. ಕಾರ್ಯಕ್ರಮದ ಆರಂಭದಲ್ಲಿ ಜಾನಪದ ಕಲಾತಂಡಗಳೊಂದಿಗೆ ಕುಂದಾಪ್ರದ ಪಾರಂಪರಿಕ ವಸ್ತುಗಳ ಮೆರವಣಿಗೆ ಎಲ್ಲರ ಗಮನ ಸೆಳೆಯಿತು. ರಂಗೇರಿದ ನೃತ್ಯ ವೈಭವ, ಯುವ ಸಂಗಮ, ಡಿಜೆ ಕುಂದಾಪುರ ಮತ್ತು ಕರಾವಳಿಯ ಗಂಡುಕಲೆ ಯಕ್ಷಗಾನ ಪ್ರದರ್ಶನ ನೋಡುಗರನ್ನು ಮಂತ್ರಮುಗ್ಧಗೊಳಿಸಿತು. ಇನ್ನು ಹಳೆಯ ಕಾಲದಲ್ಲಿ ಬಳಸುತ್ತಿದ್ದ ವಸ್ತುಗಳ ಪ್ರದರ್ಶನದ ಮೂಲಕ ಇವುಗಳನ್ನು ಯುವ ಜನರಿಗೆ ಪರಿಚಯಿಸಲಾಯಿತು ಬೈಗಿ, ಬಂಗುಡೆ ಸೇರಿ ಕರಾವಳಿಯ ವಿವಿಧ ಬಗೆಯ ಮೀನುಗಳ ಪ್ರದರ್ಶನ ನೋಡಲು ವಿಭಿನ್ನವಾಗಿತ್ತು. ಕುಂದಾಪುರ ಆಟೋಟ ಸ್ಪರ್ಧೆಗಳು ಹಳೆಯ ನೆನಪುಗಳನ್ನು ಮರುಕಳಿಸುವಂತೆ ಮಾಡಿದೆ. ‘ಕುಂದಾಪುರ ಸಂವಾದ’ ಕಾರ್ಯಕ್ರಮದಲ್ಲಿ ಭಾಷೆ ಮತ್ತು ಸಂಸ್ಕೃತಿಯ ಬೆಳವಣಿಗೆಯ ಕುರಿತು ಅರ್ಥಪೂರ್ಣ ಚರ್ಚೆಗಳು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಸಮೃದ್ಧ ಬೈಂದೂರು ಪರಿಕಲ್ಪನೆಯ ಕ್ಲೀನ್ ಕಿನಾರ ಯೋಜನೆಯಲ್ಲಿ ಭೂಮಿ ಟ್ರಸ್ಟ್ ಸಹಕಾರದೊಂದಿಗೆ 170 ವಾರ ಸ್ವಚ್ಛತಾ ಕಾರ್ಯದಲ್ಲಿ ತೊಡಗಿಸಿಕೊಂಡ ಕ್ಲೀನ್ ಕಿನಾರ ತಂಡಕ್ಕೆ ಸ್ವಚ್ಛತಾ ಪರಿಕರಗಳ ಹಸ್ತಾಂತರ ಕಾರ್ಯಕ್ರಮವನ್ನು ಶಾಸಕರಾದ ಗುರುರಾಜ್ ಗಂಟಿಹೊಳೆ ಅವರು ನೆರವೇರಿಸಿದರು. ಗಿಡ ನೆಡುವ ಹಾಗೂ ಸ್ವಚ್ಛತಾ ಕಾರ್ಯಗಳಿಗೆ ಅಗತ್ಯವಿರುವ ಉಪಕರಣಗಳನ್ನು ಹಸ್ತಾಂತರಿಸಿ ಮಾತನಾಡಿದ ಶಾಸಕರು ಸತತ 170 ವಾರಗಳ ಕಾಲ ಸಮುದ್ರ ಕಿನಾರ ಮತ್ತು ಊರಿನ ಸ್ವಚ್ಛತೆ ಮಾಡಿಕೊಂಡು ಬರುತ್ತಿರುವುದು ನಿಜವಾಗಲೂ ಒಂದು ತಪ್ಪಸ್ಸು, ದೃಢ ಇಚ್ಚಾ ಶಕ್ತಿ ಇದ್ದಲ್ಲಿ ಮಾತ್ರ ಇದು ಸಾಧ್ಯ ಎಂದು ಅಭಿಪ್ರಾಯಪಟ್ಟರು. ಕಾರ್ಯಕ್ರಮದ ನಂತರ ಕ್ಲೀನ್ ಕಿನಾರ ತಂಡ ಹಿಂದೂ ರುದ್ರ ಭೂಮಿ ಆವರಣದ ಸುತ್ತ ಗಿಡ ನೆಟ್ಟು ಸ್ವಚ್ಛತಾ ಕಾರ್ಯ ನೆರವೇರಿಸಿದರು. ಕಾರ್ಯಕ್ರಮದಲ್ಲಿ ಸ್ವಚ್ಛತಾ ಪರಿಕರಗಳನ್ನು ಕೊಡಿಸುವಲ್ಲಿ ಸಹಕರಿಸಿದ ಚರಣ್ ಬೈಂದೂರು, ಭೂಮಿ ಟ್ರಸ್ಟ್ ಪದಾಧಿಕಾರಿಗಳು, ಮುಕ್ತಿಧಾಮ ಟ್ರಸ್ಟ್ನ ಸರ್ವಸದಸ್ಯರು, NECF ಹಾಗೂ ಕ್ಲೀನ್ ಕಿನಾರಾ ಸದಸ್ಯರು, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಸುರೇಶ್ ಬಟ್ವಾಡಿ,…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಪ್ರತಿಭೆ ಎನ್ನುವುದು ಎಲ್ಲ ವಿದ್ಯಾರ್ಥಿಗಳಲ್ಲೂ ಇರುತ್ತದೆ ಆದರೆ ಪ್ರತಿಭೆಗೆ ಸರಿಯಾದ ವೇದಿಕೆ ಸಿಕ್ಕಾಗ ಮಾತ್ರ ವಿದ್ಯಾರ್ಥಿಗಳ ಪ್ರತಿಭಾ ಶಕ್ತಿಗೆ ದೊಡ್ಡ ಶಕ್ತಿ ಸಿಗುತ್ತದೆ. ಈ ಶಕ್ತಿ ಜನತಾ ಪಿಯು ಕಾಲೇಜಿನಲ್ಲಿ ಸಿಗುತ್ತದೆ ಅದನ್ನು ಸರಿಯಾಗಿ ಬಳಸಿಕೊಂಡು ಉತ್ತಮ ವ್ಯಕ್ತಿಗಳಾಗಿ ಎಂದು ವಿವಿವಿ ಮಂಡಳಿ ರಿ. ಹೆಮ್ಮಾಡಿ ಇದರ ಅಧ್ಯಕ್ಷರು ಹಾಗೂ ಮಾಜಿ ಶಾಸಕರಾದ ಗೋಪಾಲ ಪೂಜಾರಿ ಹೇಳಿದರು. ಹೆಮ್ಮಾಡಿ ಜನತಾ ಪಿಯು ಕಾಲೇಜಿನಲ್ಲಿ ನಡೆದ ವಿದ್ಯಾರ್ಥಿಗಳ ಪ್ರತಿಭಾ ಪ್ರದರ್ಶನ ಜನತಾ ದಿಬ್ಬಣ ಕಾರ್ಯಕ್ರಮ ಉದ್ಘಾಟಿಸಿ ಶುಭ ಹಾರೈಸಿದ ಅವರು ವಿದ್ಯಾರ್ಥಿಗಳ ಶ್ರಮ, ಉಪನ್ಯಾಸಕರು ಪ್ರಾಂಶುಪಾಲರ ಪ್ರೋತ್ಸಾಹದಿಂದ ಇಂದು ಜನತಾ ಪಿಯು ಕಾಲೇಜ್ ರಾಜ್ಯ ಮಟ್ಟದಲ್ಲಿ ಶೈಕ್ಷಣಿಕವಾಗಿ ಗುರುತಿಸಿಕೊಂಡಿದೆ ಎಂದು ಹೇಳಿದರು. ಚಿತ್ರ ನಟ ಪ್ರಕಾಶ್ ತುಮಿನಾಡು ಮಾತನಾಡಿ, ಪ್ರತಿಭೆಗೆ ಇರುವ ಸೌಂದರ್ಯ ಎಲ್ಲೂ ಇರುವುದಿಲ್ಲ. ಪ್ರತಿಭೆಗೆ ಅಂತ ಶಕ್ತಿ ಇದೆ. ವಿದ್ಯೆಯ ಜೊತೆಗೆ ವಿನಯವನ್ನು ರೂಪಿಸಿಕೊಂಡು ಹೆತ್ತವರನ್ನು ಗೌರವಿಸಿ. ಇಂದು ಕಲೆಯಿಂದ ಹಲವು ಕಡೆ ಜೀವನ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಐಎಂಜೆ ವಿಜ್ಞಾನ ಮತ್ತು ವಾಣಿಜ್ಯ ಕಾಲೇಜು (IMJISC) ಮೂಡ್ಲಕಟ್ಟೆಯಲ್ಲಿ ಲಲಿತಕಲಾ ಸಂಘದ ವತಿಯಿಂದ “ಆಘೋಷಂ” ಎಂಬ ಹೆಸರಿನಲ್ಲಿ ಓಣಂ ಹಬ್ಬವನ್ನು ಅತ್ಯಂತ ಸಂಭ್ರಮದಿಂದ ಆಚರಿಸಲಾಯಿತು. ಕಾಲೇಜಿನ ಪ್ರಾಂಶುಪಾಲರಾದ ಡಾ. ಪ್ರತಿಭಾ ಎಂ. ಪಟೇಲ್ ಅವರು ವಿಭಾಗ ಮುಖ್ಯಸ್ಥರು ಹಾಗೂ ಲಲಿತಕಲಾ ಸಂಯೋಜಕರೊಂದಿಗೆ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ವಿದ್ಯಾರ್ಥಿಗಳು ಓಣಂ ಹಬ್ಬದ ಕಥೆ ಮತ್ತು ಅದರ ಸಾಂಸ್ಕೃತಿಕ ಮಹತ್ವವನ್ನು ಸಾರುವ ಕಿರು ನಾಟಕವನ್ನು ಪ್ರಸ್ತುತಪಡಿಸಿದರು. ಇದರೊಂದಿಗೆ ಹಬ್ಬದ ಶ್ರೀಮಂತ ಸಾಂಸ್ಕೃತಿಕ ಪರಂಪರೆಯ ಬಗ್ಗೆ ಅರಿವು ಮೂಡಿಸಿದರು.ಸಂಭ್ರಮದ ಅಂಗವಾಗಿ ವಿದ್ಯಾರ್ಥಿನಿಯರು ದೀಪದ ಸುತ್ತ ನೃತ್ಯ ಮಾಡುವ ಮೂಲಕ ಸಾಂಪ್ರದಾಯಿಕ ತಿರುವಾತಿರ ನೃತ್ಯವನ್ನು ಪ್ರದರ್ಶಿಸಿ ಹಬ್ಬಕ್ಕೆ ಮೆರಗು ನೀಡಿದರು. ಐಕ್ಯಮ್ ತಂಡಗಳ ನಡುವೆ ಆಯೋಜಿಸಲಾದ ಹೂವಿನ ರಂಗೋಲಿ (ಪೂಕಳಂ) ಸ್ಪರ್ಧೆಯಲ್ಲಿ ವಿದ್ಯಾರ್ಥಿಗಳು ಉತ್ಸಾಹದಿಂದ ಭಾಗವಹಿಸಿದರು. ಜೊತೆಗೆ ವಿವಿಧ ಸಾಂಪ್ರದಾಯಿಕ ಕಲಾ ಪ್ರಕಾರಗಳು ಮತ್ತು ಸಾಂಸ್ಕೃತಿಕ ಆಚರಣೆಗಳನ್ನು ಬಿಂಬಿಸುವ ಸಾಂಸ್ಕೃತಿಕ ಪ್ರದರ್ಶನವನ್ನೂ ಆಯೋಜಿಸಲಾಗಿತ್ತು.ಈ ಆಚರಣೆಯು ಏಕತೆ, ತಂಡದ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಒರ್ವ ವ್ಯಕ್ತಿ ಈ ಸಮಾಜವನ್ನು ಅಗಲಿದ ನಂತರ ಆತನ ಹೆಸರು ಕೆಲವೇ ಸಂದರ್ಭದಲ್ಲಿ ಅಳಿದು ಹೋಗುತ್ತದೆ ಆದರೆ ಸಮಾಜಸೇವೆಯೇ ಉಸಿರಾಗಿರಿಸಿಕೊಂಡ ಸಂತೋಷ್ ಮೇಷ್ಟ್ರು ಹೆಸರು ವರ್ಷವಿಡೀ ಪ್ರಚಲಿತಗೊಂಡಿರುವುದು ಆತ ಮಾಡಿದ ನೈಜ ಕಾರ್ಯವೇ ಸಾಕ್ಷಿ ಎಂದು ಕೋಟದ ಮಣೂರು ಗೀತಾನಂದ ಫೌಂಡೇಶನ್ ಪ್ರವರ್ತಕ ಆನಂದ್ ಸಿ ಕುಂದರ್ ಅಭಿಪ್ರಾಯಪಟ್ಟರು. ಅವರು ಭಾನುವಾರ ಕೋಟ ಪಡುಕರೆ ಕೆ.ಸಿ ಕುಂದರ್ ಸಭಾಂಗಣದಲ್ಲಿ ಜೈಹಿಂದ್ ಕ್ರಿಕೆಟಸ್೯ ಪಡುಕರೆ ನೇತೃತ್ವದಲ್ಲಿ ಇಂಡಿಕಾ ಕಲಾ ಬಳಗ ಪಡುಕರೆ,ಪಂಚವರ್ಣ ಸಂಘಟನೆ ಕೋಟ,ಗೀತಾನಂದ ಫೌಂಡೇಶನ್ ಮಣೂರು, ಕೆಎಂಸಿ ಮಣಿಪಾಲ ಇವರ ಸಹಯೋಗದೊಂದಿಗೆ ಸಂತೋಷ್ ಮೇಷ್ಟ್ರು ಸಂಸ್ಮರಣೆಯ ಅಂಗವಾಗಿ ಬೃಹತ್ ರಕ್ತದಾನ ಹಾಗೂ ಆರೋಗ್ಯ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು. ಜೀವನ ಪರ್ಯಂತ ಈ ಸಮಾಜಕ್ಕಾಗಿ ತನ್ನನ್ನು ತಾನು ಸಮರ್ಪಿಸಿಕೊಂಡ ಸಂತೋಷ್ ಶೈಕ್ಷಣಿಕ,ಸಾಹಿತ್ಯಿಕ, ಸಾಮಾಜಿಕ ಕ್ಷೇತ್ರಕ್ಕೆ ಬಹುದೊಡ್ಡ ಕೊಡುಗೆಯನ್ನು ನೀಡಿದ್ದಾರೆ ಇಂತಹ ವ್ಯಕ್ತಿಗಳ ಹೆಸರಿನಲ್ಲಿ ಈ ಮಹತ್ಕಾರ್ಯ ನಿಜಕ್ಕೂ ಪ್ರಶಂಸನೀಯ ಎಂದರು. ಕಾರ್ಯಕ್ರಮದಲ್ಲಿ ಕುಂದಾಪುರ ಯಡಾಡಿ ಮತ್ಯಾಡಿಯ ಸುಜ್ಞಾನ…
