Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಕೆಲಸ ಮುಗಿಸಿಕೊಂಡು ಮನೆಗೆ ತೆರಳುತ್ತಿದ್ದ ಸೈಕಲ್ ಸವಾರನಿಗೆ ಕುಂಭಾಶಿ ರಾಷ್ಟ್ರೀಯ ಹೆದ್ದಾರಿಯಲ್ಲಿ ವೇಗವಾಗಿ ಬಂದ ಸರಕಾರಿ ಬಸ್ಸೊಂದು ಢಿಕ್ಕಿಹೊಡೆದ ಪರಿಣಾಮ ಸೈಕಲ್ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಸಂಜೆಯ ವೇಳೆಗೆ ವರದಿಯಾಗಿದೆ. ವಕ್ವಾಡಿ ನಿವಾಸಿ ಕೃಷ್ಣ ಶೆಟ್ಟಿಗಾರ್ (55) ಮೃತ ದುರ್ದೈವಿ. (ಕುಂದಾಪ್ರ ಡಾಟ್ ಕಾಂ ಸುದ್ದಿ) ಎಂದಿನಂತೆ ಕೃಷ್ಣ ಶೆಟ್ಟಿಗಾರಿ ದಿನಗೂಲಿ ಕೆಲಸ ಮುಗಿಸಿಕೊಂಡು ಕುಂಭಾಶಿಯಿಂದ ಕನ್ನುಕೆರೆಯತ್ತ ತೆರಳುತ್ತಿದ್ದ ವೇಳೆಗೆ ಮಂಗಳೂರಿನಿಂದ ಸಿಂಧಗಿ ಕಡೆಗೆ ತೆರಳುತ್ತಿದ್ದ ಬಸ್ಸು ಎದುರಿನಿಂದ ಡಿಕ್ಕಿ ಹೊಡೆದಿದ್ದಲ್ಲದೇ, ಸ್ವಲ್ಪ ದೂರದ ವರೆಗೆ ಎಳೆದೊಯ್ದಿತ್ತು. ಅಪಘಾತದ ತೀವ್ರತೆಗೆ ಗಾಯಾಳು ಸ್ಥಳದಲ್ಲಿಯೇ ಮೃತಪಟ್ಟಿದ್ದರು. ಬಸ್ ಚಾಲಕನನ್ನು ಪೊಲೀಸರು ಬಂಧಿಸಿದ್ದು, ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕುಟುಂಬದ ಆಧಾರಸ್ಥಂಭವಾಗಿದ್ದ ಕೃಷ್ಣ ಶೆಟ್ಟಿಗಾರ್ ಅವರ ಸಾವು ಪತ್ನಿ ಲೀಲಾವತಿ ಹಾಗೂ ಪುತ್ರಿ ಪವಿತ್ರಾಳನ್ನು ಕಣ್ಣೀರಿನಲ್ಲಿ ಕೈತೊಳೆಯುವಂತೆ ಮಾಡಿದೆ. (ಕುಂದಾಪ್ರ ಡಾಟ್ ಕಾಂ ಸುದ್ದಿ)

Read More

ಕುಂದಾಪುರ: ನಗರದ ಪಾರಿಜಾತ ಹಳೆ ಬಸ್ ನಿಲ್ದಾಣದ ಸಮೀಪ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೃದ್ಧರೋರ್ವರಿಗೆ ಬೈಕೊಂದು ಡಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡು ಮೃತಪಟ್ಟ ಘಟನೆ ಸಂಜೆಯ ವೇಳೆಗೆ ನಡೆದಿದೆ. ಕುಂದಾಪುರದ ಬರೆಕಟ್ಟು ನಿವಾಸಿ ವೆಂಕಪ್ಪ ಕಿಣಿ (70) ದುರ್ದೈವಿ ಸಂಜೆ ವೆಂಕಪ್ಪ ಕಿಣಿ ರಸ್ತೆಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಸಂದರ್ಭ ಪಾರಿಜಾತ ವೃತ್ತದ ಕಡೆಯಿಂದ ಹೊಸ ಬಸ್ ನಿಲ್ದಾಣದ ಕಡೆಗೆ ನಾಗರತ್ನ ಎಂಬುವರು ಬೈಕಿನಲ್ಲಿ ಬಂದು ಪಾದಾಚಾರಿಗೆ ಡಿಕ್ಕಿ ಹೊಡೆದಿದ್ದಾರೆ. ಡಿಕ್ಕಿ ಹೊಡೆದ ತೀವ್ರತೆಗೆ ವೆಂಕಪ್ಪ ಕಿಣಿ ರಸ್ತೆಗೆ ಬಿದ್ದು ಗಂಭೀರ ಗಾಯಗೊಂಡಿದ್ದರು. ಕೂಡಲೇ ಅವರನ್ನು ಕುಂದಾಪುರದ ಖಾಸಗೀ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಉಡುಪಿಯ ಆಸ್ಪತ್ರೆಗೆ ಸಾಗಿಸುತ್ತಿರುವ ವೇಳೆಗೆ ಮಾರ್ಗ ಮಧ್ಯದಲ್ಲೇ ಅವರು ಸಾವನ್ನಪ್ಪಿದ್ದಾರೆ. ಈ ಬಗ್ಗೆ ಕುಂದಾಪುರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ವೈಯಕ್ತಿಕ ಕಾರಣಗಳಿಂದ ಹತಾಶನಾದ ಯುವಕನೊರ್ವ ಮನೆಯಲ್ಲಿಯೇ ನೇಣಿಗೆ ಶರಣಾದ ಘಟನೆ ಕುಂದಾಪುರದ ಹಂಗಳೂರಿನಲ್ಲಿ ನಡೆದಿದೆ. ಹಂಗಳೂರು ಹುಚ್ಕೇರಿ ನಿವಾಸಿ ಸರೋಜಿನ ಸರ್ಸಿಂಗ್ ಹೋಂ ರಸ್ತೆಯ ಪ್ರದೀಪ (22) ಮೃತ ಯುವಕ. (ಕುಂದಾಪ್ರ ಡಾಟ್ ಕಾಂ ಸುದ್ದಿ) ಡಿಪ್ಲೊಮಾ ಇಂಜಿನಿಯರ್ ಪದವಿಧರನಾದ ಪ್ರದೀಪ್ ಮಣಿಪಾಲದ ಖಾಸಗಿ ಸಂಸ್ಥೆಯೊಂದರಲ್ಲಿ ಉದ್ಯೋಗಿಯಾಗಿದ್ದ. ರಾತ್ರಿಪಾಳಿ ಕೆಲಸವಾದುದರಿಂದ ಹಗಲಿಗೆ ಮನೆಯಲ್ಲಿ ಮಲಗುತ್ತಿದ್ದ. ಮಧ್ಯಾಹ್ನ 2ಗಂಟೆಯ ವೇಳೆಗೆ ಆತನ ತಂದೆ ಉಟ ಮಾಡುವಂತೆ ಆತನನ್ನು ಎಬ್ಬಿಸಿದ್ದರೂ, ಊಟ ಮಾಡದೇ ಹಾಗೆಯೇ ಮಲಗಿದ್ದವ 3ಗಂಟೆಯ ಸುಮಾರಿಗೆ ಬಾಗಿಲು ಚಿಲಕ ಹಾಕಿಕೊಂಡಿದ್ದ ಎನ್ನಲಾಗಿದೆ. ಸಂಜೆ ಕೆಲಸಕ್ಕೆ ತೆರಳುವ ಸಮಯವಾದರೂ ಹೊರಕ್ಕೆ ಬಾರದಿದ್ದುದನ್ನು ಗಮನಿಸಿದ ತಂದೆ ಬಾಗಿ ತಟ್ಟಿದಾಗ ತೆರೆದ್ದಿದ್ದುದರಿಂದ ಅನುಮಾನಗೊಂ ಅವರು ಕಿಟಕಿಯಲ್ಲಿ ಇಣಕಿ ನೋಡಿದಾಗ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿತ್ತು. ಪ್ರೇಮ ವೈಪಲ್ಯವೇ ಆತ್ಮಹತ್ಯೆಗೆ ಕಾರಣವೆಂದು ಶಂಕಿಸಲಾಗಿದ್ದು ಈ ಬಗ್ಗೆ ತನಿಕೆ ನಡೆಯುತ್ತಿದೆ. ಕುಂದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೈಂದೂರು: ಉಡುಪಿಯಿಂದ ಹೊನ್ನಾವರ ಕಡೆ ತೆರಳುತ್ತಿದ್ದ ಮೀನು ತುಂಬಿದ ಪಿಕ್ ಅಪ್ ವಾಹನ ಮತ್ತು ಮಂಗಳೂರಿನಿಂದ ಗೋವಾ ಕಡೆಗೆ ತೆರಳುತ್ತಿದ್ದ ಸರಕು ತುಂಬಿದ ಲಾರಿ ನಡುವೆ ಗುರುವಾರ ಮುಂಜಾನೆ ನಾಗೂರು ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಪಿಕ್ ಅಪ್ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು. ಎರಡೂ ವಾಹನಗಳ ಮುಂಭಾಗ ನಜ್ಜುಗುಜ್ಜಾಗಿದೆ. ಗಾಯಾಳು ಚಾಲಕನನ್ನು ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿದೆ. ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಕುಂದಾಪುರ: ಕೆಲವು ಸಮಯದ ಹಿಂದೆ ಬಸ್ಸೊಂದು ಡಿಕ್ಕಿಹೊಡೆದು ಜಖಂ ಗೊಂಡಿದ್ದ ಆವರಣ ಗೋಡೆಯು ನಿನ್ನೆ ರಾತ್ರಿ ಹಠಾತ್ ಕುಸಿದು ಬಿದ್ದಿದೆ. ರಾತ್ರಿವೇಳೆ ಕುಸಿದ್ದಿದರಿಂದ ಪ್ರಮಾದಶವಾತ್ ಯಾವುದೇ ಅವಘಡ ಸಂಭವಿಸದಿರುವುದಕ್ಕೆ ಪ್ರಯಾಣಿಕರು ನಿಟ್ಟುಸಿರು ಬಿಟ್ಟಿದ್ದಾರೆ. ಹಗಲಿನಲ್ಲಿ ಇಲ್ಲಿ ಕಿಕ್ಕಿರಿದು ಪ್ರಯಾಣಿಕರು ಬಸ್ಸಿಗಾಗಿ ಕಾಯುತಲಿರುವ ದೃಶ್ಯ ಸರ್ವೇ ಸಾಮಾನ್ಯವಾಗಿದ್ದರೂ ಸ್ಥಳೀಯಾಡಳಿತ ಮಾತ್ರ ಬಸ್ಸು ಡಿಕ್ಕಿ ಹೊಡೆದು ಜಖಂ ಗೊಂಡಿದ್ದ ಆವರಣ ಗೋಡೆಯ ಬಗ್ಗೆ ನಿರ್ಲಕ್ಷ್ಯ ವಹಿಸಿದ್ದು ಸಾರ್ವಜನಿಕರಿಂದ ಆಕ್ರೋಶಕ್ಕೆ ಕಾರಣವಾಗಿತ್ತು. ಇದೀಗ ದಢಾ ದಿಢೀರನೆ ಗೋಡೆಯು ಕುಸಿದು ಬಿದ್ದಿದ್ದೆ.

Read More

ಕುಂದಾಪುರ: ಜಮ್ಯಿಯತುಲ್ ಫಲಾಹ ಕುಂದಾಪುರ ತಾಲೂಕು ಘಟ್ಟದ ವತಿಯಿಂದ ಪಾರಿಜಾತ ಹೋಟೇಲ್‌ನ ಪದ್ಮಾವತಿ ಕಲ್ಯಾಣ ಮಂಟಪದಲ್ಲಿ ಅರ್ಹ ಬಡ ವಿದ್ಯಾರ್ಥಿಗಳಿಗೆ ಝಕಾತ್ ಫಂಡಿನಿಂದ ವಿದ್ಯಾರ್ಥಿ ವೇತನ ನೀಡಲಾಯಿತು. ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳನ್ನ ಪುರಸ್ಕರಿಸಲಾಯಿತು. ಕಾರ್ಯಕ್ರಮದಲ್ಲಿ ಜಮ್ಯಿಯ ತುಲ್‌ಫಲಾಹ್ ದ.ಕ.ಉಡುಪಿ ಜಿಲ್ಲಾಧ್ಯಕ್ಷ ಜನಾಬ್ ಅಬ್ದುಲ್ ಲತೀಫ್, ಅಖಿಲ ಭಾರತ ಕೊಂಕಣಿ ಖಾರ್ವಿ ಮಹಾ ಸಭಾದ ಅಧ್ಯಕ್ಷ ಬಸವ ಖಾರ್ವಿ, ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಯ ನಿರ್ದೇಶಕ ಚಂದ್ರಶೇಖರ್ ದೋಮ, ದ.ಕ.-ಉಡುಪಿ ಜಿಲ್ಲಾ ಮಾಜಿ ಅಧ್ಯಕ್ಷರಾದ ಖಲೀಲ್ ಆಹ್ಮದ ಉಡುಪಿಶುಭಹಾರೈಸಿದರು. ಸಭೆಯ ಅಧ್ಯಕ್ಷತೆಯನ್ನು ಜಮೀಯ್ಯ ತುಲ್ ಫಲಾಹ್ ಕುಂದಾಪುರದ ತಾಲೂಕು ಘಟಕದ ಜನಾಬ್ ಖತೀಜ್ ಅಬು ಮೊಹ್ಮದ್ ವಹಿಸಿದರು. ಕಾರ್ಯದರ್ಶಿ ಅಸ್ಗರ್ ಅಲಿ ಸ್ವಾಗತಿಸಿ ವಂದಿಸಿದರು. ಖಜಾಂಚಿ ಬಿ.ಅಪ್ಪಣ್ಣ ಪ್ರತಿಭಾವಂತ ವಿದ್ಯಾರ್ಥಿಗಳ ಹೆಸರು ಓದಿದರು. ಅಸ್ಗರ ಹೈಕಾಡಿ ಕಾರ್ಯಕ್ರಮವನ್ನು ನಿರೂಪಿಸಿದರು. ಖಜಾಂಜಿ ಬಿ.ಅಬ್ದುಲ್ಲಾ ಜೊತೆ ಕಾರ್ಯದರ್ಶಿ ಕೆ.ಎಸ್.ರಿಯಾಜ್ ಹಾಗೂ ಅಲ್ತಾಫ ಕುರೈಷಿ ಕಾರ್ಯಕ್ರಮಕ್ಕೆ ಸಹಕರಿಸಿದ್ದರು.

Read More

ಬೈಂದೂರು: ಉಪ್ಪುಂದದಲ್ಲಿ ನಲವತ್ತು ಲಕ್ಷ ರೂಪಾಯಿ ಅನುದಾನದ ಅಂಬಾಗಿಲು ಹಳೇ ಎಂಬೆಸ್ಸಿ ರಸ್ತೆ ಹಾಗೂ ಮೀನುಗಾರಿಕಾ ನಬಾರ್ಡನ ಹದಿನೈದು ಲಕ್ಷ ಅನುದಾನದ ಮಡಿಕಲ್ ಉಪ್ಪುಂದ ಕಿರುಸೇತುವೆ ಸಹಿತ ರಸ್ತೆ ಕಾಮಗಾರಿಗೆ ಶಾಸಕ ಗೋಪಾಲ ಪೂಜಾರಿ ಗುದ್ದಲಿ ಪೂಜೆ ನೆರವೇರಿಸಿದರು. ಜಿಲ್ಲಾ ಶಿಕ್ಷಣ ಮತ್ತು ಸ್ಥಾಯಿ ಸಮಿತಿ ಅಧ್ಯಕ್ಷೆ ಗೌರಿ ದೇವಾಡಿಗ, ಜಿಪಂ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ, ಮಾಜಿ ಸದಸ್ಯ ಮದನ್‌ಕುಮಾರ್, ಗ್ರಾಪಂ ಅಧ್ಯಕ್ಷೆ ದುರ್ಗಮ್ಮ, ಗ್ರಾಪಂ ಸದಸ್ಯರಾದ ಐ.ನಾರಾಯಣ, ಸತೀಶ ಶೆಟ್ಟಿ, ಸುಮಿತ್ರಾ, ರಾಮಚಂದ್ರ ಖಾರ್ವಿ, ನಾರಾಯಣ ಖಾರ್ವಿ, ವೆಂಕಟರಮಣ ಖಾರ್ವಿ, ವಸುದೇವ ಪೂಜಾರಿ, ಲಯನ್ಸ್ ಕ್ಲಬ್ ಅಧ್ಯಕ್ಷ ಗೋಕುಲ ಶೆಟ್ಟಿ, ಮುಂತಾದವರು ಹಾಜರಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಅಮಾಸೆಬೈಲು ಚಟ್ಟರಿಕಲ್ ನಿಂದ ಕಲ್ಲು ಸಾಗಿಸುತ್ತಿದ್ದ ಲಾರಿ ಚರಂಡಿಗೆ ಇಳಿದ ಪರಿಣಾಮ ಅದನ್ನು ಮೇಲೆತ್ತಲು ಬಂದಿದ್ದ ಕ್ರೇನಿನ ಬದಿಯಲ್ಲಿ ನಿಂತಿದ್ದ ಇನ್ನೊಂದು ಲಾರಿ ಚಾಲಕನ ಮೇಲೆ ಕ್ರೇನ್ ಮಗುಚಿ ಬಿದ್ದದ್ದರಿಂದ ಚಾಲಕ ಕೃಷ್ಣ (33) ಸ್ಥಳದಲ್ಲಿಯೇ ಮೃತಪಟ್ಟ ಘಟನೆ ವರದಿಯಾಗಿದೆ. ಚರಂಡಿಗೆ ಲಾರಿ ಇಳಿದ್ದರಿಂದ ಲಾರಿಯನ್ನು ಕ್ರೇನ್ನಿಂದ ಮೇಲೆತ್ತಿರುವುದನ್ನು ನೋಡಲು ತನ್ನ ಲಾರಿಯನ್ನು ನಿಲ್ಲಿಸಿ ಬಂದಿದ್ದ  ಕೃಷ್ಣ ದೂರದಲ್ಲಿಯೇ ನಿಂತು ನೋಡುತ್ತಿದ್ದಾಗ ಏಕಾಏಕಿ ಕ್ರೇನ್ ಈತನ ತಲೆಯ ಮೇಲೆಯೇ ಮಗುಚಿ ಬಿದ್ದದ್ದರಿಂದ ತಲೆಗೆ ಗಂಭೀರ ಗಾಯಗಳಿತ್ತು. ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸುವ ವ್ಯವಸ್ಥೆ ಮಾಡಲಾಯಿತಾದರೂ ಅಷ್ಟರಲ್ಲಿ ಅವರು ಮೃತಪಟ್ಟಿದ್ದರು. ಘಟನಾ ಸ್ಥಳಕ್ಕೆ ಅಮಾಸೆಬೈಲು ಠಾಣಾಧಿಕಾರಿ ಸುನಿಲ್ ಕುಮಾರ್ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಠಾಣೆಯಲ್ಲಿ ದೂರು ದಾಖಲಾಗಿದೆ.

Read More

ಕುಂದಾಪುರ: ಇಲ್ಲಿನ ಕುಂದಪ್ರಭ ಪತ್ರಿಕೆ,  ಪುಟ್ಟಣ್ಣ ಕುಲಾಲ್ ಪ್ರತಿಷ್ಠಾನ (ರಿ) ಮಂಗಳೂರು, ಆಕಾಶವಾಣಿ ಮಂಗಳೂರು, ಕುಂದಾಪುರ ಸರಕಾರಿ ಪ.ಪೂ.ಕಾಲೇಜಿನ ಸಹಯೋಗದೊಂದಿಗೆ ಲಕ್ಷ್ಮಿ ನರಸಿಂಹ ಕಲಾಮಂದಿರದಲ್ಲಿ ಉಡುಪಿ ಜಿಲ್ಲಾ ಯುವ ಕವಿ ಸಮ್ಮೆಳನ ಹಾಗೂ ಪುಟ್ಟಣ್ಣ ಕುಲಾಲ್ ಯುವ ಕವಿ ಪ್ರಶಸ್ತಿ ಪ್ರದಾನ ಸಮಾರಂಭ ಜರುಗಿತು. ಸಮಾರಂಭವನ್ನು ಉದ್ಘಾಟಿಸಿದ ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಅಂಬಾತನಯ ಮುದ್ರಾಡಿ ಮಾತನಾಡಿ, ಸತತ ಅಧ್ಯಯನಶೀಲತೆಯಿಂದ ಉತ್ತಮ ಕವಿತೆ ಮೂಡಿ ಬರಲು ಸಾಧ್ಯ. ಒಳ್ಳೆಯ ಭಾಷೆಯನ್ನು ಬಳಸುವ ಮೂಲಕ ಉತ್ತಮ ಕೃತಿಗಳನ್ನು ಮೂಡಿಸಲು ಸಾಧ್ಯವಿದೆ ಎಂದರು. ಅಧ್ಯಕ್ಷತೆ ವಹಿಸಿದ್ದ ಮಂಗಳೂರಿನ ಪುಟ್ಟಣ್ಣ ಕುಲಾಲ್ ಪ್ರತಿಷ್ಠಾನ ರಿ. ಇದರ ಅಧ್ಯಕ್ಷ ಡಾ| ಅಣ್ಣಯ್ಯ ಕುಲಾಲ್ ಮಾತನಾಡಿ, ಮಾನಸಿಕ ಸ್ಥಿಮಿತವನ್ನು ಕಾಯ್ದುಕೊಳ್ಳಲು ಸಾಹಿತ್ಯ ಮಹತ್ತರ ಪಾತ್ರ ವಹಿಸುತ್ತದೆ. ಬೇರೆ ಭಾಷೆಯ ತಿರುಳನ್ನು ಕನ್ನಡಕ್ಕೆ ತರುವ ಪ್ರಯತ್ನ ಮಾಡಬೇಕು ಒಟ್ಟಾರೆ ಕನ್ನಡವನ್ನು ಕಟ್ಟುವ ಕಾರ್ಯ ನಡೆಯಬೇಕು ಎಂಬ ಆಶಯ ವ್ಯಕ್ತಪಡಿಸಿದರು. ಮುಖ್ಯ ಅತಿಥಿಯಾಗಿ ಕುಂದಾಪುರ ಸರಕಾರಿ ಪ.ಪೂ.ಕಾಲೇಜಿನ ಪ್ರಾಂಶುಪಾಲ…

Read More

ಬೈಂದೂರು: ಈ ಸಾಲಿನ ಬೈಂದೂರು ವಲಯ ಮಟ್ಟದ ಪ್ರತಿಭಾ ಕಾರಂಜಿಯು ಮಂಗಳವಾರ ತಾರಪತಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ನಡೆಯಿತು. ಜಿಲ್ಲಾ ಪಂಚಾಯತ್ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿಯ ಅಧ್ಯಕ್ಷೆ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಪ್ರತಿಭೆ ಅನಾವರಣಕ್ಕೆ ಸೂಕ್ತ ವೇದಿಕೆ ಕಲ್ಪಿಸಿಕೊಡುವ ನಿಟ್ಟಿನಲ್ಲಿ ಇಲಾಖೆ ಪ್ರತಿಭಾ ಕಾರಂಜಿಯಂತಹ ವಿನೂತನ ಕಾರ್ಯಕ್ರಮವನ್ನು ಸಂಘಟಿಸಿದೆ. ವಿದ್ಯಾರ್ಥಿಗಳು ಇದರ ಸದುಪಯೋಗಪಡಿಸಿಕೊಳ್ಳಬೇಕು ಎಂದು ಕರೆ ನೀಡಿದರು. ಈ ಹಿಂದೆ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ತಮ್ಮ ಪ್ರತಿಭೆ ಅನಾವರಣಗೊಳಿಸಲು ಸೂಕ್ತ ವೇದಿಕೆ ಸಿಗದೇ ಅವರ ಪ್ರತಿಭೆ ಕಮರಿ ಹೋಗುತ್ತಿತ್ತು, ಆದರೆ ಈಗ ವಿದ್ಯಾರ್ಥಿಗಳಿಗೆ ಸಾಕಷ್ಟು ಅವಕಾಶಗಳು ದೊರಕುತ್ತಿದೆ ಎಂದರು. ಪಡುವರಿ ಗ್ರಾ.ಪಂ. ಅಧ್ಯಕ್ಷೆ ದೀಪಾ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಗ್ರಾ.ಪಂ. ಉಪಾಧ್ಯಕ್ಷ ಸದಾಶಿವ ಡಿ. ಪಡುವರಿ, ಮಾಜಿ ಜಿ.ಪಂ. ಸದಸ್ಯ ಮದನ ಕುಮಾರ, ತಾ.ಪಂ. ಸದಸ್ಯರಾದ ಪ್ರಸನ್ನ ಕುಮಾರ, ಗೌರಿ ದೇವಾಡಿಗ ಬಿಜೂರು, ಗ್ರಾ.ಪಂ. ಸದಸ್ಯರಾದ ಸುರೇಶ ಬಟ್ವಾಡಿ,…

Read More