Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಬ್ರಹ್ಮಶ್ರೀ ನಾರಾಯಣಗುರು ಬಿಲ್ಲವ ಸಂಘ  ಬಾಳ್ಕುದ್ರು ಹಂಗಾರಕಟ್ಟೆ ಇದರ ಆಶ್ರಯದಲ್ಲಿ ವರಮಹಾಲಕ್ಷ್ಮಿ ಪೂಜೆ  ಕಾರ್ಯಕ್ರಮವು ಶುಕ್ರವಾರದಂದು ಸಂಘದ ಆವರಣದಲ್ಲಿ ವಿಜೃಂಭಣೆಯಿಂದ ಜರಗಿತು. ವೇ.ಮೂ ಬಿರ್ತಿ ವೆಂಕಟರಮಣಸೂರ್ಯ ಇವರು ಧಾರ್ಮಿಕ ವಿಧಿವಿಧಾನಗಳನ್ನು ಹಾಗೂ ವರಮಹಾಲಕ್ಷ್ಮಿ ಪೂಜೆ ಕಾರ್ಯಕ್ರಮವನ್ನು ನೆರವೆರಿಸಿದರು. ಅಪರಾಹ್ನ ಮಹಾ ಅನ್ನಸಂತರ್ಪಣೆ ಪ್ರಸಾದ ವಿತರಣೆ ಕಾರ್ಯಕ್ರಮ ಜರಗಿತು. ಸಂಘದ ಅಧ್ಯಕ್ಷ ವಿಜಯ ಕುಮಾರ್ ಅಧ್ಯಕ್ಷತೆಯಲ್ಲಿ ಈ ಕಾರ್ಯಕ್ರಮ ಜರಗಿತು. ಈ ಸಂದರ್ಭದಲ್ಲಿ ಮಹಿಳಾ ಘಟಕದ ಅಧ್ಯಕ್ಷೆ ಶಕುಂತಲ ವಾಸುದೇವ ಕೋಟ್ಯಾನ್, ಪ್ರಮುಖರಾದ ರೇಖಾ ಪಿ. ಸುವರ್ಣ, ಕಲಾವತಿ ಆನಂದ್, ಜ್ಯೋತಿ ರವೀಂದ್ರ ಸುವರ್ಣ, ಪ್ರೇಮ ಸತೀಶ್ ಪೂಜಾರಿ, ಸಂಘದ ಪ್ರಮುಖರಾದ ನಾರಾಯಣ ಪೂಜಾರಿ, ಶಂಕರ್ ಪೂಜಾರಿ, ಉಮೇಶ್ ಪೂಜಾರಿ, ಆನಂದ್ ಪೂಜಾರಿ ಮತ್ತಿತರರು ಇದ್ದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಇಲ್ಲಿನ ಪ್ರಸಿದ್ಧ ದೇಗುಲ ಕೋಟದ ಅಮೃತೇಶ್ವರೀ ಹಲವು ಮಕ್ಕಳ ತಾಯಿ ದೇಗುಲದಲ್ಲಿ ಶ್ರೀ ವರಮಹಾಲಕ್ಷ್ಮೀ ಪೂಜಾ ಕಾರ್ಯಕ್ರಮಗಳು ಜರಗಿದವು.ದೇಗುಲದಲ್ಲಿ ನಡೆದ ಧಾರ್ಮಿಕ ಕಾರ್ಯವನ್ನು ವೇ.ಮೂ ಮಧುಸೂದನ್ ಬಾಯರಿ ನೆರವೇರಿಸಿದರು. ಶ್ರೀದೇವಿಗೆ ವಿಶೇಷ ಅಲಂಕಾರ, ಸಹಸ್ರ ಕುಂಕುಮಾರ್ಚನೆ, ಪೂಜಾ ಕಾರ್ಯಕ್ರಮಗಳು, ಪ್ರಸಾದ ವಿತರಣೆ, ಅಪರಾಹ್ನ 3ಸಾವಿರಕ್ಕೂ ಅಧಿಕ ಮಂದಿ ಅನ್ನಪ್ರಸಾದದಲ್ಲಿ ಭಾಗಿಯಾದರು. ದೇಗುಲದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಆನಂದ್ ಸಿ ಕುಂದರ್, ಕಾರ್ಯನಿರ್ವಹಣಾಧಿಕಾರಿ ಪ್ರಶಾಂತ್ ಕುಮಾರ್ ಶೆಟ್ಟಿ, ಸದಸ್ಯರಾದ ರತನ್ ಐತಾಳ್, ಚಂದ್ರಶೇಖರ್ ಆಚಾರ್, ಎಂ.ಶಿವ ಪೂಜಾರಿ, ಸುಧಾ. ಎ.ಪೂಜಾರಿ, ಸುಭಾಷ್ ಶೆಟ್ಟಿ,ಗಣೇಶ್ ನೆಲ್ಲಿಬೆಟ್ಟು, ಜ್ಯೋತಿ ಡಿ. ಕಾಂಚನ್, ಸುಬ್ರಾಯ ಜೋಗಿ, ದೇಗುಲದ ವ್ಯವಸ್ಥಾಪಕ ಗಣೇಶ್ ಹೊಳ್ಳ, ಅರ್ಚಕ ಪ್ರತಿನಿಧಿಗಳು ಭಾಗಿಯಾದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸಕ್ರಿಯ ಸದಸ್ಯ ಹಾಗೂ ಕನ್ನಡಪ್ರಭ ಪತ್ರಿಕೆಯ ಕುಂದಾಪುರ ವರದಿಗಾರ ಶ್ರೀಕಾಂತ್ ಹೆಮ್ಮಾಡಿ ಮೇಲಿನ ಹಲ್ಲೆಯನ್ನು ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ತೀವ್ರವಾಗಿ ಖಂಡಿಸುತ್ತದೆ. ಕುಂದಾಪುರ ಸರಕಾರಿ ಆಸ್ಪತ್ರೆಯ ವರದಿಗೆ ಸಂಬಂಧಿಸಿ ಅಲ್ಲಿನ ವೈದ್ಯಾಧಿಕಾರಿಯಾಗಿದ್ದ ಡಾ. ಮಹೇಂದ್ರ ಶೆಟ್ಟಿ, ಪತ್ರಕರ್ತ ಶ್ರೀಕಾಂತ್ ಹೆಮ್ಮಾಡಿ ಮೇಲೆ ಏಕಾಏಕಿ ಹಲ್ಲೆ ನಡೆಸಿದ್ದಾರೆ. ಈ ಪ್ರಕರಣವನ್ನು ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ಗಂಭೀರವಾಗಿ ಪರಿಗಣಿಸಿ, ಆರೋಪಿ ವಿರುದ್ಧ ಕಠಿಣ ಕಾನೂನು ಕ್ರಮ ಜರಗಿಸಬೇಕು ಎಂದು ಸಂಘದ ಜಿಲ್ಲಾಧ್ಯಕ್ಷ ಸುಬ್ರಹ್ಮಣ್ಯ ಜಿ. ಕುರ್ಯ ಪ್ರಕಟಣೆಯಲ್ಲಿ ಆಗ್ರಹಿಸಿದ್ದಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ. ಬೈಂದೂರು: ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದರಾದ ಬಿ. ವೈ. ರಾಘವೇಂದ್ರ ಅವರು ಕರ್ನಾಟಕ ಸರ್ಕಾರದ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲ ಸಾರಿಗೆ ಸಚಿವರಾದ ಬಸವಂತಪ್ಪ ಅವರಿಗೆ ಎರಡು ಪ್ರಮುಖ ಮನವಿ ಪತ್ರಗಳನ್ನು ಸಲ್ಲಿಸಿ, ಬೈಂದೂರು ವಿಧಾನಸಭಾ ಕ್ಷೇತ್ರದ ಕರಾವಳಿ ಭಾಗದ ಸಮಗ್ರ ಅಭಿವೃದ್ಧಿ ಹಾಗೂ ಇತ್ತೀಚೆಗೆ ಸಮುದ್ರದಲ್ಲಿ ಮುಳುಗಿ ಮೃತಪಟ್ಟ ಮೂವರು ಯುವಕರ ಕುಟುಂಬಗಳಿಗೆ ತುರ್ತು ಪರಿಹಾರ ಒದಗಿಸುವಂತೆ ಕೋರಿದ್ದಾರೆ. 1) ಮೀನುಗಾರಿಕಾ ಸಂಕಷ್ಟ ಪರಿಹಾರ ನಿಧಿಯಡಿ ಗರಿಷ್ಠ ಪರಿಹಾರಕ್ಕೆ ಒತ್ತಾಯಬೈಂದೂರು ವಿಧಾನಸಭಾ ಕ್ಷೇತ್ರದ ಕಿರಿಮಂಜೇಶ್ವರ ಗ್ರಾಮದಲ್ಲಿ ದಿನಾಂಕ 14-10-2025 ರಂದು ಸಂಭವಿಸಿದ ದುರಂತದ ಕುರಿತು ಸಚಿವರ ಗಮನ ಸೆಳೆದ ಸಂಸದರು, ನೊಂದ ಕುಟುಂಬಗಳಿಗೆ ಸಾಂತ್ವನ ನೀಡಲು ವಿಶೇಷ ನೆರವು ಕೋರಿದ್ದಾರೆ: * ಅರಬ್ಬಿ ಸಮುದ್ರದಲ್ಲಿ ಮೀನಿಗೆ ಗಾಳ ಹಾಕುತ್ತಿದ್ದ ಸಂದರ್ಭದಲ್ಲಿ ಆಕಸ್ಮಿಕವಾಗಿ ನೀರಿಗೆ ಬಿದ್ದು ಕಿರಿಮಂಜೇಶ್ವರ ಗ್ರಾಮದ ಆಶೀಶ್ ದೇವಾಡಿಗ (15 ವರ್ಷ), ಸೂರಜ್ ಪೂಜಾರಿ (16 ವರ್ಷ) ಹಾಗೂ ಸಂಕೇತ್ ದೇವಾಡಿಗ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೆಂಗಳೂರು: ಬೆಂಗಳೂರಿನಲ್ಲಿ ನಡೆಯುತ್ತಿರುವ ರಾಜ್ಯ ವಿಧಾನ ಮಂಡಲದ ಮಳೆಗಾಲದ ಅಧಿವೇಶನದಲ್ಲಿ ರಾಜ್ಯದಲ್ಲಿ ಕಳೆದ ಮೂರು ವರ್ಷಗಳಲ್ಲಿ ದಾಖಲಾದ ಅಕ್ರಮ ಗಣಿಗಾರಿಕೆ ಪ್ರಕರಣಗಳು ಹಾಗೂ ತಪ್ಪಿತಸ್ಥರ  ಮತ್ತು ಅಕ್ರಮ ಗಣಿಗಾರಿಕೆಗೆ ಸಹಕಾರ ನೀಡಿದ ಅಧಿಕಾರಿಗಳ ವಿರುದ್ಧ ಕೈಗೊಂಡ ಕ್ರಮದ ಬಗ್ಗೆ ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರುರಾಜ್ ಗಂಟಿಹೊಳೆ ಅವರು ಪ್ರಶ್ನೆ ಕೇಳಿದ್ದಾರೆ. ಚುಕ್ಕೆ ರಹಿತ ಪ್ರಶ್ನೆಗೆ ಉತ್ತರಿಸಿದ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಸಚಿವರಾದ ಎಸ್. ಎಸ್ ಮಲ್ಲಿಕಾರ್ಜುನ್ ರವರು ರಾಜ್ಯದಲ್ಲಿ 2024-25 ನೇ ಸಾಲಿನಿಂದ 2026-27 ನೇ ಸಾಲಿನ ಜುಲೈವರೆಗೆ ಅಕ್ರಮ ಗಣಿಗಾರಿಕೆ ಚಟುವಟಿಕೆಗಳಿಗೆ ಸಂಬಂಧಿಸಿದಂತೆ ಪ್ರಕರಣಗಳನ್ನು ಪತ್ತೆ ಹಚ್ಚಿದ್ದು ತಪ್ಪಿತಸ್ಥರ ವಿರುದ್ಧ ಎಂಎಂ (ಡಿ&ಆರ್ )ಕಾಯ್ದೆ 1957 ಮತ್ತು ಕರ್ನಾಟಕ ಉಪಖನಿಜ ರಿಯಾಯಿತಿ ನಿಯಮಗಳು 1994ರ ನಿಯಮಗಳಂತೆ ಮೊಕದ್ದಮೆಗಳನ್ನು ದಾಖಲಿಸಿ ದಂಡವನ್ನು ವಿಧಿಸಿ ಸಂಗ್ರಹಿಸಲಾಗಿದೆ. ರಾಜ್ಯದ ಕೆಲವು ಜಿಲ್ಲೆಗಳಲ್ಲಿ ನದಿ ಪಾತ್ರದಲ್ಲಿನ ಮರಳು,ಕೆಂಪು ಕಲ್ಲು,ಕಟ್ಟಡ ಕಲ್ಲು ಇತ್ಯಾದಿ ಉಪಖನಿಜಗಳನ್ನು ಅನಧಿಕೃತವಾಗಿ ಗಣಿಗಾರಿಕೆ ಹಾಗೂ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಗಂಗೊಳ್ಳಿ: ಗಂಗೊಳ್ಳಿಯ ಎಸ್.ವಿ. ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ ರೋಟರಿ ಕ್ಲಬ್ ಗಂಗೊಳ್ಳಿ ಪ್ರಾಯೋಜಕತ್ವದಲ್ಲಿ ಇಂಟರ‍್ಯಾಕ್ಟ್ ಕ್ಲಬ್‌ನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಎಸ್.ವಿ. ಪದವಿಪೂರ್ವ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಇಂಟರ‍್ಯಾಕ್ಟ್ ಕ್ಲಬ್‌ನ ಝೋನಲ್ ಚೇರ್ಮನ್ ನಾಗರಾಜ್ ಶೆಟ್ಟಿ ಅವರು ನೂತನ ಪದಾಧಿಕಾರಿಗಳಿಗೆ ಪದಗ್ರಹಣ ನೆರವೇರಿಸಿ ಶುಭ ಹಾರೈಸಿದರು. ರೋಟರಿ ಕ್ಲಬ್ ಗಂಗೊಳ್ಳಿಯ ಅಧ್ಯಕ್ಷೆ ಮಾಲಾಶ್ರೀ ಖಾರ್ವಿ ಅಧ್ಯಕ್ಷತೆ ವಹಿಸಿದ್ದರು. ಎಸ್.ವಿ. ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಉಪಪ್ರಾಂಶುಪಾಲ ಗೋಪಾಲ್ ದೇವಾಡಿಗ, ಗಂಗೊಳ್ಳಿ ರೋಟರಿ ಕ್ಲಬ್‌ನ ಇಂಟರ‍್ಯಾಕ್ಟ್ ಚೇರ್ಮನ್ ರತ್ನಾ, ಇಂಟರ‍್ಯಾಕ್ಟ್ ಕೋ -ಆರ್ಡಿನೇಟರ್, ಶಿಕ್ಷಕಿ ಉಷಾ ಮತ್ತು ಇತರ ಶಿಕ್ಷಕರು ಉಪಸ್ಥಿತರಿದ್ಧರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಬಸ್ರೂರು ಶ್ರೀ ಶಾರದಾ ಕಾಲೇಜಿನ ವೀರರಾಜೇಂದ್ರ ಹೆಗ್ಡೆ ಸಭಾಭವನದಲ್ಲಿ ಶಿಕ್ಷಕ-ರಕ್ಷಕ ಸಭೆ ಇತ್ತೀಚಿಗೆ ಜರುಗಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಸಂಚಾಲಕರಾದ ಅನುಪಮ ಎಸ್. ಶೆಟ್ಟಿ ಮಾತನಾಡಿ, ಶಿಕ್ಷಕರು ಮತ್ತು ಪಾಲಕರು ಒಟ್ಟಾಗಿ ಕಾರ್ಯ ನಿರ್ವಹಿಸಿದಾಗ ವಿದ್ಯಾರ್ಥಿಗಳ ಶೈಕ್ಷಣಿಕ ಹಾಗು ವೈಯಕ್ತಿಕ ಬೆಳವಣಿಗೆ ಉತ್ತಮ ವಾತಾವರಣ ನಿರ್ಮಾಣವಾಗುತ್ತದೆ. ಆದ್ದರಿಂದ ಇಂತಹ ಸಭೆಯು ವಿದ್ಯಾರ್ಥಿ ಕೇಂದ್ರಿತ ಶಿಕ್ಷಣದ ಪ್ರಮುಖ ಅಂಗವಾಗಿದ್ದರಿಂದ ಪಾಲಕರು ತಮ್ಮ ಕುಟುಂಬದ ಜವಬ್ದಾರಿಯೊಂದಿಗೆ ಮಕ್ಕಳ ಶೈಕ್ಷಣಿಕ ಪ್ರಗತಿ, ಹಾಜರಾತಿ, ವರ್ತನೆ ಕುರಿತು ಶಿಕ್ಷಕರೊಂದಿಗೆ ಚರ್ಚಿಸಿದಾಗ ಮಾತ್ರ ಮಕ್ಕಳು ಅತ್ಯುತ್ತಮ ವಿದ್ಯಾರ್ಥಿಗಳಾಗಿ ರೂಪುಗೊಳ್ಳುತ್ತಾರೆ ಎಂದರು. ಕಾಲೇಜಿನ ಪ್ರಾಂಶುಪಾಲರಾದ ಡಾ. ದಯಾನಂದ ಎನ್. ಅವರು ಕಾಲೇಜಿನ ನಿಯಮಾವಳಿ ಮತ್ತು ಕಾಲೇಜಿನಲ್ಲಿ ಲಭ್ಯವಿರುವ ವಿವಿಧ ಸೌಲಭ್ಯಗಳ ಕುರಿತು ತಿಳಿಸಿದರು. ಕಾಲೇಜಿನ ವಾಣಿಜ್ಯ ವಿಭಾಗದ ಮುಖ್ಯಸ್ಥರಾದ ಡಾ. ರವಿಚಂದ್ರ ಅವರು ವಿಶ್ವವಿದ್ಯಾನಿಲಯದ ನಿಯಮಾವಳಿ ಮತ್ತು ಕಾಲೇಜಿನ ಪಠ್ಯ ಚಟುವಟಿಕೆಗಳ ಬಗ್ಗೆ ಮಾಹಿತಿ ನೀಡಿದರು. ಕಾಲೇಜಿನ ಆಡಳಿತಾಧಿಕಾರಿ ಡಾ. ಮೋಹನ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೆಂಗಳೂರು: ಬೆಂಗಳೂರಿನಲ್ಲಿ ನಡೆಯುತ್ತಿರುವ ರಾಜ್ಯ ವಿಧಾನ ಮಂಡಲದ ಮಳೆಗಾಲದ ಅಧಿವೇಶನದಲ್ಲಿ ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕರಾದ  ಗುರುರಾಜ್ ಗಂಟಿಹೊಳೆ ಅವರು ರಾಜ್ಯದಲ್ಲಿ ಎನ್. ಡಿ. ಪಿ ಎಸ್ ಕಾಯ್ದೆ  ರಡಿಯಲ್ಲಿ ಮತ್ತು ಗಾಂಜಾ ಸಹಿತ ಇನ್ನಿತರ ಮಾದಕ ದ್ರವ್ಯ ಗಳ ಸಾಗಾಟ ಮತ್ತು ಸೇವನೆ ಸಂಬಂಧ ಕೈಗೊಂಡ ಕ್ರಮಗಳ  ಬಗ್ಗೆ ಪ್ರಶ್ನೆ ಕೇಳಿದ್ದಾರೆ. ಚುಕ್ಕೆ ರಹಿತ ಪ್ರಶ್ನೆ ಗೆ ರಾಜ್ಯ ಗೃಹ ಸಚಿವರಾದ ಶ್ರೀ ಪ್ರಿಯಾಂಕ್ ಖರ್ಗೆ ಯವರು ಕಳೆದ ಮೂರು ವರ್ಷಗಳಲ್ಲಿ ರಾಜ್ಯದಲ್ಲಿ ಮಾದಕ ದ್ರವ್ಯ ಸೇವನೆ ಹಾಗೂ ಸಾಗಾಟಕ್ಕೆ ಸಂಬಂಧಿಸಿದಂತೆ 18,428 ಪ್ರಕರಣಗಳು ದಾಖಲಾಗಿದ್ದು 10,131 ಆರೋಪಿತರು ಸೇರಿರುತ್ತಾರೆ. ಇದರ ಪೈಕಿ 5249 ಜನರ ಮೇಲೆ ಆರೋಪ ಪಟ್ಟಿ ಸಲ್ಲಿಸಲಾಗಿದ್ದು 981 ಪ್ರಕರಣದ 2130 ಮಂದಿಯನ್ನು ದೋಷಿ ಎಂದು ಸಾಬೀತು ಪಡಿಸಲಾಗಿದೆ. ಅವರಿಂದ 2.69 ಕೋಟಿ ದಂಡ ಮೊತ್ತ ವಸೂಲಿ ಮಾಡಲಾಗಿದೆ ಹಾಗೂ ಮಾದಕ ದ್ರವ್ಯ ಸೇವನೆ ಹಾಗೂ ಸಾಗಾಟಕ್ಕೆ ಸಂಬಂಧಿಸಿದಂತೆ ಕಳೆದ 3…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೆಂಗಳೂರು: ಬೆಂಗಳೂರಿನಲ್ಲಿ ನಡೆಯುತ್ತಿರುವ ರಾಜ್ಯ ವಿಧಾನ ಮಂಡಲದ ಮಳೆಗಾಲದ ಅಧಿವೇಶನದಲ್ಲಿ  ರಾಜ್ಯದಲ್ಲಿ ಪ್ರಸ್ತುತ ಅಳವಡಿಸಲಾದ ಮಳೆ ಮಾಪಕಗಳು ಹಾಳಾಗಿರುವುದು ಹಾಗೂ ಸಮರ್ಪಕವಾದ ನಿರ್ವಹಣೆ ಕೊರತೆ ಇರುವ ವಿಚಾರ ಇದರಿಂದ ಸರಿಯಾದ ಮಳೆ ಅಂಕಿ ಅಂಶ ದಾಖಲಾಗದೇ ಬೆಳೆ ವಿಮೆ ಸಹಿತ ರೈತರಿಗೆ ಪರಿಹಾರ ಪಡೆಯುವಲ್ಲಿ ಅನಾನುಕೂಲವಾಗುವ ಸಾಧ್ಯತೆ ಇರುವುದರಿಂದ ಪ್ರತಿ ಕೇಂದ್ರದ ಕಾರ್ಯಕ್ಷಮತೆ ಹೆಚ್ಚಿಸಲು ಸರಕಾರ ಕೈಗೊಂಡ ಕ್ರಮಗಳ ಬಗ್ಗೆ ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರುರಾಜ್ ಗಂಟಿಹೊಳೆ ಅವರು ಪ್ರಶ್ನೆ ಕೇಳಿದ್ದಾರೆ. ಚುಕ್ಕೆ ರಹಿತ ಪ್ರಶ್ನೆಗೆ ಉತ್ತರಿಸಿದ ಉಪ ಮುಖ್ಯ ಮಂತ್ರಿಗಳೂ ಹಾಗೂ ಕಂದಾಯ ಸಚಿವರಾದ ಡಾ. ಜಿ ಪರಮೇಶ್ವರ್ ಅವರು ಪ್ರತಿ ಟೆಲಿ ಮೆಟ್ರಿಕ್ ಮಳೆ ಮಾಪಕಗಳ ನಿರ್ವಹಣೆಯಲ್ಲಿ ಗ್ರಾಮ ಆಡಳಿತ ಅಧಿಕಾರಿಗಳು ನಿತ್ಯ ಸಮರ್ಪಕ ಕಾರ್ಯನಿರ್ವಹಣೆ, ಮೇಲ್ವಿಚಾರಣೆ ಮತ್ತು ನಿಗಾವಹಿಸುವ ಜವಾಬ್ದಾರಿ ಹೊಂದಿರುತ್ತಾರೆ ಮತ್ತು ಯಾವುದೇ ಟೆಲಿಮೆಟ್ರಿಕ್ ಮಳೆ ಮಾಪಕಗಳು ಕಾರ್ಯನಿರ್ವಹಿಸದಿದ್ದರೆ ತಕ್ಷಣವೇ ತಹಶೀಲ್ದಾರ್ ಮೂಲಕ ಅಪರ ಜಿಲ್ಲಾಧಿಕಾರಿಗಳಿಗೆ ವರದಿ ಮಾಡಬೇಕು. ಅಪರ ಜಿಲ್ಲಾಧಿಕಾರಿಗಳು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ರಾಷ್ಟಿçÃಯ ಸೇವಾ ಯೋಜನಾ ಘಟಕ I ಮತ್ತು IIರ ಆಶ್ರಯದಲ್ಲಿ ಸದ್ಭಾವನಾ ದಿವಸ್‌ವನ್ನು ಕಾಲೇಜಿನ ಎ.ವಿ. ಹಾಲ್‌ನಲ್ಲಿ ನಡೆಸಲಾಯಿತು. ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ಡಾ. ಕೆ. ಉಮೇಶ್ ಶೆಟ್ಟಿ ಅವರು ಮಾತನಾಡಿ, ದೇಶದ ಏಕತೆ, ಸಾಮರಸ್ಯ, ಸಹೋದರತ್ವ ಮತ್ತು ಪರಸ್ಪರ ಗೌರವವನ್ನು ಬೆಳೆಸುವಲ್ಲಿ ಯುವಜನರ ಪಾತ್ರ ಮಹತ್ವದೆಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಎನ್.ಎಸ್.ಎಸ್. ಕಾರ್ಯಕ್ರಮಾಧಿಕಾರಿಗಳಾದ ರಾಜೇಶ್ ಶೆಟ್ಟಿ ಹಾಗೂ ಪೂಜಾ ಕುಂದರ್ ಉಪಸ್ಥಿತರಿದ್ದರು. ಎನ್‌ಎಸ್‌ಎಸ್ ಸ್ವಯಂಸೇವಕರು ದೇಶದ ಏಕತೆ, ಶಾಂತಿ, ಸೌಹಾರ್ದತೆ ಹಾಗೂ ಕೋಮು ಸಾಮರಸ್ಯವನ್ನು ಕಾಪಾಡುವ ಸಂಕಲ್ಪದೊAದಿಗೆ ಸದ್ಭಾವನ ದಿವಸದ ಭಾಗವಾಗಿ ಎನ್.ಎಸ್.ಎಸ್. ಸ್ವಯಂಸೇವಕರಿಗೆ ಪ್ರತಿಜ್ಞಾ ವಿಧಿ ಸ್ವೀಕರಿಸಿದರು. ಸ್ವಯಂಸೇವಕ ಪ್ರತಿನಿಧಿ ಪ್ರತೀಕ್ಷಾ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮವು ವಿದ್ಯಾರ್ಥಿಗಳಲ್ಲಿ ರಾಷ್ಟ್ರೀಯ ಏಕತೆ, ಸಹಬಾಳ್ವೆ ಮತ್ತು ಸದ್ಭಾವನೆಯ ಮಹತ್ವವನ್ನು ಮೂಡಿಸುವ ನಿಟ್ಟಿನಲ್ಲಿ ಆಯೋಜಿಸಲಾಯಿತು.

Read More