Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಗಂಗೊಳ್ಳಿ: ರೋಟರಿ ಕ್ಲಬ್ ಗಂಗೊಳ್ಳಿ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರ ಗಂಗೊಳ್ಳಿ ಇದರ ಜಂಟಿ ಆಶ್ರಯದಲ್ಲಿ ಕ್ಯಾನ್ಸರ್ ಜಾಗೃತಿ ಕಾರ್ಯಕ್ರಮ ಗಂಗೊಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸೋಮವಾರ ನಡೆಯಿತು. ರೋಟರಿ ಕ್ಲಬ್ ಗಂಗೊಳ್ಳಿ ಅಧ್ಯಕ್ಷ ಕೃಷ್ಣ ಪೂಜಾರಿ ಕಾರ್ಯಕ್ರಮ ಉದ್ಘಾಟಿಸಿದರು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ಕ್ಷೇತ್ರ ಆರೋಗ್ಯ ಶಿಕ್ಷಣ ಅಧಿಕಾರಿ ಭಾಗ್ಯಲಕ್ಷ್ಮೀ ಮಾಹಿತಿ ನೀಡಿದರು. ಆಸ್ಪತ್ರೆಯ ಶುಶ್ರೂಶಾಧಿಕಾರಿ ಶೋಭಾ, ರೋಟರಿ ಸದಸ್ಯರಾದ ಉದಯಶಂಕರ ರಾವ್, ವಾಸುದೇವ ಶೇರುಗಾರ್, ಗೋಪಾಲ ಬಿಲ್ಲವ, ಜಗದೀಶ ಪೂಜಾರಿ, ಜನಾರ್ದನ ಪೂಜಾರಿ ಪೆರಾಜೆ, ಆಸ್ಪತ್ರೆಯ ಸಿಬ್ಬಂದಿಗಳು ಮತ್ತಿತರರು ಉಪಸ್ಥಿತರಿದ್ದರು. ಚಂದ್ರಕಲಾ ತಾಂಡೇಲ ಕಾರ್ಯಕ್ರಮ ನಿರ್ವಹಿಸಿದರು. ಕೃಷ್ಣ ಪೂಜಾರಿ ಸ್ವಾಗತಿಸಿ, ಶೋಭಾ ವಂದಿಸಿದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಹಟ್ಟಿಅಂಗಡಿಯ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆ ಈ ವರ್ಷವೂ ಸಹ ಶಿಕ್ಷಣ ಕ್ಷೇತ್ರದಲ್ಲಿ ತನ್ನ ಸಾಧನೆಗಾಗಿ ರಾಷ್ಟ್ರೀಯ ಪ್ರಶಸ್ತಿಯನ್ನು ಪಡೆದುಕೊಂಡಿದೆ. ಇಟಿ ಟೆಕ್ ಎಕ್ಸ್ ಸ್ಕೂಲ್ ಎಕ್ಸಿಲೆನ್ಸ್ – 2025 ಅವಾರ್ಡನ್ನು ಪಡೆದುಕೊಂಡಿದೆ. ಅತ್ಯುತ್ತಮ ಸಹಪಠ್ಯ ಚಟುವಟಿಕೆಗಳು, ಅತ್ಯುತ್ತಮ ಬೋರ್ಡಿಂಗ್ ಶಾಲೆ, ಶಿಕ್ಷಣದಲ್ಲಿ ಜೀವನ ಕೌಶಲ್ಯಗಳ ಸಹಭಾಗಿತ್ವ ಈ ಮೂರು ಪ್ರತಿಷ್ಠಿತ ಶ್ರೇಣಿಗಳಲ್ಲಿ ಶಾಲೆಯ ಶಿಸ್ತುಬದ್ಧತೆ, ಕಾರ್ಯಗಳ ಅನುಷ್ಠಾನ, ಸುರಕ್ಷತಾ ವ್ಯವಸ್ಥೆ, ಹಸಿರು ವಾತಾವರಣ, ಶಾಲೆಯ ಕಟ್ಟಡ ಮೊದಲಾದ ವಿಭಾಗಗಳಲ್ಲಿ ಇರುವ ಸುವ್ಯವಸ್ಥಿತಿಗಳನ್ನು ಪರಿಶೀಲಿಸಿ ಈ ಗೌರವ ನೀಡಲ್ಪಟ್ಟಿದೆ. ಹೈದರಾಬಾದ್‌ನಲ್ಲಿ ನಡೆದ ಭವ್ಯ ಸಮಾರಂಭದಲ್ಲಿ ಶಾಲೆಯ ಸಹ ಸಂಯೋಜಕಿಯಾದ ಶ್ರುತಿ ಪೂಜಾರಿ, ಪ್ರಶಸ್ತಿಯನ್ನು ಸ್ವೀಕರಿಸಿದರು. ಶ್ರೀ ಸಿದ್ಧಿ ಶೈಕ್ಷಣಿಕ ಪ್ರತಿಷ್ಠಾನದ ಕಾರ್ಯದರ್ಶಿ ಮತ್ತು ಶಾಲೆಯ ಪ್ರಾಂಶುಪಾಲರಾದ ಶರಣ ಕುಮಾರ ಅವರು ಈ ಕುರಿತು ಸಂತೋಷ ವ್ಯಕ್ತಪಡಿಸಿ ಮಾತನಾಡಿ, ಸಮಾಜವು ನಮ್ಮನ್ನು ಗುರುತಿಸುತ್ತಿರುವುದು ನಮ್ಮ ಜವಾಬ್ದಾರಿಯನ್ನು ಇನ್ನಷ್ಟು ಹೆಚ್ಚು ಮಾಡುತ್ತಿದೆ. ಶಾಲೆಯ ವ್ಯವಸ್ಥೆಯನ್ನು ಇನ್ನಷ್ಟು ಆಧುನೀಕರಣಗೊಳಿಸಿಕೊಳ್ಳಲು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಗಂಗೊಳ್ಳಿ: ವಿದ್ಯಾರ್ಥಿಗಳು ಪಾಠದ ಜೊತೆಗೆ ಪಾಠೇತರ ಚಟುವಟಿಕೆಗಳಲ್ಲಿ ಕೂಡ ಹೆಚ್ಚು ತೊಡಗಿಸಿಕೊಳ್ಳಬೇಕು. ಮನೆಯಲ್ಲಿ ಪುಸ್ತಕಗಳನ್ನು ಓದುವ ಹವ್ಯಾಸವನ್ನು ರೂಢಿಸಿಕೊಳ್ಳಬೇಕು. ಇದರಿಂದ ವಿದ್ಯಾರ್ಥಿಗಳ ಮಾನಸಿಕ ಬೆಳವಣಿಗೆ ಆಗಿ ವಿದ್ಯಾರ್ಥಿ ಜೀವನ ಉಜ್ವಲವಾಗಲು ಸಹಾಯಕವಾಗುತ್ತದೆ. ಸರಸ್ವತಿ ವಿದ್ಯಾಲಯ ವಿದ್ಯಾಸಂಸ್ಥೆಗಳಲ್ಲಿ ಅತ್ಯುತ್ತಮ ವಿದ್ಯಾಭ್ಯಾಸ ದೊರೆಯುತ್ತಿದ್ದು, ಇಲ್ಲಿ ವಿದ್ಯಾಭ್ಯಾಸ ಮಾಡಿದ ವಿದ್ಯಾರ್ಥಿಗಳು ಸಮಾಜದಲ್ಲಿ ಉನ್ನತ ಸ್ಥಾನಮಾನ ಪಡೆಯುವಲ್ಲಿ ಸಫಲರಾಗಿದ್ದಾರೆ ಎಂದು ಉದ್ಯಮಿ ಶಿವಾನಂದ ಗಾಣಿಗ ಹೇಳಿದರು. ಅವರು ಗಂಗೊಳ್ಳಿಯ ಸ.ವಿ. ಪದವಿಪೂರ್ವ ಕಾಲೇಜಿನ ವಠಾರದಲ್ಲಿ ಜರಗಿದ ಗಂಗೊಳ್ಳಿಯ ಎಸ್.ವಿ. ಆಂಗ್ಲ ಮಾಧ್ಯಮ ಶಾಲೆಯ ವಾರ್ಷಿಕೋತ್ಸವ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮುಖ್ಯ ಅತಿಥಿಯಾಗಿದ್ದ ಗಂಗೊಳ್ಳಿ ಗ್ರಾಮ ಪಂಚಾಯತ್ ಸದಸ್ಯೆ ಮಮತಾ ಗಾಣಿಗ ಬಹುಮಾನ ವಿತರಿಸಿದರು. ಶಾಲೆಯ ಹಳೆ ವಿದ್ಯಾರ್ಥಿ ಶ್ರೀದೇವಿ ಮಧ್ಯಸ್ಥ ಸ್ವಸ್ತಿ ವಾಚನಗೈದರು. ಶಾಲೆಯ ಶಿಕ್ಷಕ-ರಕ್ಷಕ ಸಮಿತಿ ಉಪಾಧ್ಯಕ್ಷ ಜಿ. ವಿಠಲ ಶೆಣೈ, ಕಾಲೇಜಿನ ಪ್ರಾಂಶುಪಾಲೆ ಕವಿತಾ ಎಂ.ಸಿ. ಶುಭ ಹಾರೈಸಿದರು. ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಶಾಂತಿ ಡಿಕೋಸ್ಟ, ಕನ್ನಡ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ರಾಮಕೃಷ್ಣ ವಿವೇಕಾನಂದ ಭಾವ ಪ್ರಚಾರ ಪರಿಷತ್ ಕರ್ನಾಟಕ ವಿವೇಕ ವಿದ್ಯಾರ್ಥಿ-2025, ಅವರು ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ ರಾಜ್ಯಮಟ್ಟದ ಸ್ಪರ್ಧಾತ್ಮಕ ಲಿಖಿತ ಪರೀಕ್ಷೆಯಲ್ಲಿ ತೆಕ್ಕಟ್ಟೆಯ ವಿಶ್ವ ವಿನಾಯಕ ಸಿ.ಬಿ.ಎಸ್.ಇ. ಸ್ಕೂಲ್ 8ನೇ ತರಗತಿಯ ವಿದ್ಯಾರ್ಥಿನಿಯಾದ ನೇಹ ಸತ್ಯನಾರಾಯಣ ಅವರು ರಾಜ್ಯ ಮಟ್ಟದಲ್ಲಿ ಐದನೇ ರ‍್ಯಾಂಕ್‌ ಪಡೆದಿರುತ್ತಾರೆ. ಅವರ ರಾಜ್ಯಮಟ್ಟದ ಸಾಧನೆಗೆ ಶಾಲಾ ಮ್ಯಾನೇಜಿಂಗ್ ಡೈರೆಕ್ಟರ್ ಎಂ. ಪ್ರಭಾಕರ್ ಶೆಟ್ಟಿ, ಪ್ರಾಂಶುಪಾಲ ನಿತಿನ್ ಡಿ ಆಲ್ಮೇಡ ಹಾಗೂ ಶಿಕ್ಷಕ ವೃಂದದವರು ಅಭಿನಂದನೆಯನ್ನು ತಿಳಿಸಿರುತ್ತಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಕಾಯ್ದೆ ಅಧಿನಿಮಯ 1997 ರ ಕಲಂ 25 ರನ್ವಯ ಹಾಗೂ ಜಿಲ್ಲಾ ಧಾರ್ಮಿಕ ಪರಿಷತ್ ಸಭೆಯ ನಿರ್ಣಯದಂತೆ ಜಿಲ್ಲೆಯಲ್ಲಿರುವ ಪ್ರವರ್ಗ ಸಿ ಗೆ ಸೇರಿದ ಒಟ್ಟು 2 ದೇವಸ್ಥಾನಗಳಿಗೆ ಮತ್ತು ಈಗಾಗಲೇ ರಚನೆಗೊಂಡಿರುವ 2 ದೇವಸ್ಥಾನಗಳ ವ್ಯವಸ್ಥಾಪನಾ ಸಮಿತಿಯ ಒಂದು ಸ್ಥಾನಕ್ಕೆ ವ್ಯವಸ್ಥಾಪನಾ ಸಮಿತಿಯನ್ನು ಮೂರು ವರ್ಷಗಳ ಅವಧಿಗೆ ರಚಿಸಲು ಆಸಕ್ತ ಭಕ್ತಾದಿಗಳು ಹಾಗೂ ಸಾರ್ವಜನಿಕರಿಂದ ಅರ್ಜಿ ಆಹ್ವಾನಿಸಲಾಗಿದೆ. ಪ್ರವರ್ಗ ಸಿ ದೇವಸ್ಥಾನಗಳ ವಿವರ:ಕುಂದಾಪುರ ತಾಲೂಕು ಶ್ರೀ ಸಿದ್ಧಿವಿನಾಯಕ ದೇವಸ್ಥಾನ ಉಪ್ಪಿನಕುದ್ರು, ಶ್ರೀ ಶಾಂತೇಶ್ವರ ದೇವಸ್ಥಾನ ಹೊಸಂಗಡಿ. ಮರುಪ್ರಕಟಣೆ ಹೊರಡಿಸಲಾದ ದೇವಸ್ಥಾನಗಳ ವಿವರ:ಉಡುಪಿ ತಾಲೂಕು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಪೆರಂಪಳ್ಳಿ, ಶಿವಳ್ಳಿ(ಸಾಮಾನ್ಯ ವರ್ಗದ ಒಂದು ಸ್ಥಾನಕ್ಕೆ ಮಾತ್ರ ಮರು ಪ್ರಕಟಣೆ) ಕುಂದಾಪುರ ತಾಲೂಕು ಶ್ರೀ ಬೆಳವಿನಮಕ್ಕಿ ಶ್ರೀ ಮಹಾಗಣಪತಿ ದೇವಸ್ಥಾನ ಸೇನಾಪುರ(ಸಾಮಾನ್ಯ ವರ್ಗದ ಒಂದು ಸ್ಥಾನಕ್ಕೆ ಮಾತ್ರ ಮರು ಪ್ರಕಟಣೆ) ಕಾಪು ತಾಲೂಕು ಶ್ರೀ ಮಹಾಲಿಂಗೇಶ್ವರ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷ, ಸಿಂಡಿಕೇಟ್ ಬ್ಯಾಂಕ್‌ನ ನಿವೃತ್ತ ಉದ್ಯೋಗಿ ಕೆ. ನಾರಾಯಣ ಖಾರ್ವಿ (79) ಮಣೂರಿನ ತಮ್ಮ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಹಿಂದುಳಿದ ಖಾರ್ವಿ ಸಮುದಾಯದಿಂದ ಕೊಂಕಣಿ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾಗಿ ಆಯ್ಕೆಯಾದ ಮೊದಲಿಗರು ನಾರಾಯಣ ಖಾರ್ವಿ. ಅವರು ಕುಂದಾಪುರ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಿದ್ದರು. ಕೊಂಕಣಿ ಜಾನಪದ ಹಾಗೂ ಸಂಸ್ಕೃತಿಗಾಗಿ ವಿಶೇಷವಾಗಿ ಮುತುವರ್ಜಿಯಿಂದ ದುಡಿದಿದ್ದ ಅವರು ಮಾಂಡ್‌ ಸೋಭಾಣ್‌ನ ಪ್ರಮುಖ ಆಧಾರ ಸ್ತಂಭವಾಗಿದ್ದರು. 2005ರಲ್ಲಿ ಅವರಿಗೆ ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ ಗೌರವ ಪ್ರಶಸ್ತಿಯು ದೊರಕಿತ್ತು. ಕೊಂಕಣಿ ಖಾರ್ವಿ ಕಲಾ ಗುಂಪಿನ ಮುಖ್ಯಸ್ಥರಾಗಿದ್ದರು. ಕಾರ್ಮಿಕ ನಾಯಕನಾಗಿ ಭಾರತೀಯ ಮಜೂ‌ರ್ ಸಂಘದಲ್ಲಿ ಸಕ್ರಿಯವಾಗಿ ದುಡಿದ ಅವರು ಸಾಹಿತ್ಯ ಧಾರ್ಮಿಕ, ಸಾಂಸ್ಕೃತಿಕ ಹಾಗೂ ಸಂಘಟನೆಯ ಕ್ಷೇತ್ರದಲ್ಲೂ ತಮ್ಮನ್ನು ಗುರುತಿಸಿಕೊಂಡಿದ್ದರು. ಕುಂದಾಪುರ ಖಾರ್ವಿಕೇರಿ ಶ್ರೀ ಮಹಾಕಾಳಿ ದೇವಸ್ಥಾನದ ಅಧ್ಯಕ್ಷರಾಗಿ, ವಿದ್ಯಾರಂಗ ಮಿತ್ರ ಮಂಡಳಿಯ ಅಧ್ಯಕ್ಷರಾಗಿಯೂ ಕರ್ತವ್ಯ ನಿರ್ವಹಿಸಿದ್ದು, ಕಾರ್ಮಿಕರ ಸಮಸ್ಯೆಗೆ ಸಂಬಂಧಪಟ್ಟಂತೆ ಹಲವಾರು ಹೋರಾಟದ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಕೇಂದ್ರ ಹಾಗೂ ರಾಜ್ಯ ಸರ್ಕಾರದ ಪ್ರಾಯೋಜಿತ ಯೋಜನೆಗಳಡಿ ಆಯ್ಕೆಯಾಗಿ ಆರ್ಥಿಕ ನೆರವು ನೀಡಲು ಶಿಫಾರಸಾದ ಅರ್ಜಿಗಳನ್ನು ಆದ್ಯತೆಯ ಮೇಲೆ ಜನರಿಗೆ ಅನುಕೂಲವಾಗುವಂತೆ ಸರಳ ರೀತಿಯಲ್ಲಿ ನಿಯಮಾನುಸಾರ ವಿಲೇವಾರಿ ಮಾಡಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್ ಹೇಳಿದರು. ಅವರು ಮಂಗಳವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯತ್ ಡಾ.ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ನಡೆದ ಜಿಲ್ಲಾ ಲೀಡ್ ಬ್ಯಾಂಕ್ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪಿ.ಎಂ.ವಿಶ್ವಕರ್ಮ ಯೋಜನೆಯಡಿ ಈವರೆಗೆ 5661 ಅರ್ಜಿಗಳು ಸ್ವೀಕೃತವಾಗಿದ್ದು, 1337 ಅರ್ಜಿಗಳು ತಿರಸ್ಕೃತಗೊಂಡು, 3937 ಫಲಾನುಭವಿಗಳಿಗೆ 35.29 ಕೋಟಿ ರೂ. ಸಾಲ ವಿತರಿಸಲಾಗಿದೆ. ತಿರಸ್ಕೃತ ಅರ್ಜಿಗಳ ಸಂಖ್ಯೆ ಕಡಿಮೆಯಾಗಬೇಕು ಎಂದ ಅವರು, ಬಾಕಿ ಇರುವ ಅರ್ಜಿಗಳ ವಿಲೇವಾರಿಗೆ ಶೀಘ್ರ ಕ್ರಮ ವಹಿಸಬೇಕು ಎಂದರು. ಜಿಲ್ಲೆಯ ಉದ್ಯಮಿಗಳಿಗೆ ಜೀವನೋಪಾಯದ ಚಟುವಟಿಕೆಗಳನ್ನು ನಿರ್ಮಿಸಲು ಹಾಗೂ ಜಿಲ್ಲೆಯ ಉದ್ಯಮಿಗಳನ್ನು ಬೆಂಬಲಿಸುವುದರೊಂದಿಗೆ ಉದ್ಯೋಗಾವಕಾಶ ಸೃಷ್ಠಿಸಲು ಪ್ರಧಾನಮಂತ್ರಿ ಉದ್ಯೋಗ ಸೃಜನಾ ಯೋಜನೆಯಡಿ 129 ನಿಗಧಿತ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಪಲ್ಸ್ ಪೊಲಿಯೋ ಕಾರ್ಯಕ್ರಮವು ಡಿಸೆಂಬರ್ 21 ರಂದು ಜಿಲ್ಲೆಯಾದ್ಯಂತ ನಡೆಯಲಿದ್ದು, ಲಸಿಕಾ ಕೇಂದ್ರಗಳಲ್ಲಿ ಬೆಳಗ್ಗೆ 8 ರಿಂದ ಸಂಜೆ 5 ರ ವರೆಗೆ 5 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಲಸಿಕೆ ನೀಡುತ್ತಿದ್ದು, ಪೋಷಕರು ತಮ್ಮ ಮಕ್ಕಳನ್ನು ತಪ್ಪದೇ ಲಸಿಕಾ ಕೇಂದ್ರಗಳಿಗೆ ಕರೆದೊಯ್ದು ತಪ್ಪದೇ ಲಸಿಕೆ ಹಾಕಿಸಬೇಕೆಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಕರೆ ನೀಡಿದರು. ಅವರು ಮಂಗಳವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮದ ಜಿಲ್ಲಾ ಲಸಿಕಾ ಕಾರ್ಯಪಡೆ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ರಾಷ್ಟೀಯ ಪಲ್ಸ್ ಪೊಲೀಯೋ ಕಾರ್ಯಕ್ರಮದಡಿಯಲ್ಲಿ ಡಿಸೆಂಬರ್ 21ರ ಭಾನುವಾರದಂದು 0-5 ವರ್ಷದೊಳಗಿನ ಮಕ್ಕಳಿಗೆ ಜಿಲ್ಲೆಯ ಸುಮಾರು 657 ಲಸಿಕಾ ಕೇಂದ್ರಗಳಲ್ಲಿ ಪೊಲೀಯೋ ಹನಿಗಳನ್ನು ಹಾಕಲಾಗುವುದು ಎಂದ ಅವರು, ಎಲ್ಲ ಮಕ್ಕಳಿಗೂ ಪಲ್ಸ್ ಪೊಲೀಯೋ ಲಸಿಕೆ ದೊರೆಯುವಂತೆ ನೋಡಿಕೊಳ್ಳಬೇಕು ಎಂದರು. ಜಿಲ್ಲೆಯಲ್ಲಿ ಒಟ್ಟು 75,395 ಐದು ವರ್ಷದೊಳಗಿನ ಮಕ್ಕಳನ್ನು ಈಗಾಗಲೇ ಗುರುತಿಸಲಾಗಿದೆ.…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಕೃಷಿ ಇಲಾಖೆಯ ವತಿಯಿಂದ ಸಿರಿಧಾನ್ಯ ಮತ್ತು ಸಾವಯವ ಅಂತರ ರಾಷ್ಟ್ರೀಯ ವಾಣಿಜ್ಯ ಮೇಳ – 2026ರ ಅಂಗವಾಗಿ ರಾಜ್ಯ ಮಟ್ಟದ ಸಿರಿಧಾನ್ಯ ಮತ್ತು ಮರೆತು ಹೋದ ಖಾದ್ಯಗಳ ಪಾಕ ಸ್ಪರ್ಧೆಯ ಪೂರ್ವಭಾವಿಯಾಗಿ ಜಿಲ್ಲಾ ಮಟ್ಟದಲ್ಲಿ “ಸಿರಿಧಾನ್ಯ ಮತ್ತು ಮರೆತು ಹೋದ ಖಾದ್ಯಗಳ ಪಾಕಸ್ಪರ್ಧೆ” ಯು ಡಿಸೆಂಬರ್ 23 ರಂದು ಬೆಳಗ್ಗೆ 11 ಗಂಟೆಗೆ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿಗಳ ಕಛೇರಿ ಸಂಕೀರ್ಣದಲ್ಲಿ ಆಯೋಜಿಸಲಾಗಿದೆ. ಸದರಿ ಸ್ಪರ್ಧೆಯಲ್ಲಿ ಕೃಷಿ ಇಲಾಖೆಯ ಅಧಿಕಾರಿಗಳು/ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳನ್ನು ಹೊರತುಪಡಿಸಿ, ಜಿಲ್ಲೆಯ ಎಲ್ಲಾ ಸಾರ್ವಜನಿಕರಿಗೆ ಭಾಗವಹಿಸಲು ಅವಕಾಶವಿರುತ್ತದೆ. ಅಭ್ಯರ್ಥಿಗಳು ತಮ್ಮ ಭಾವಚಿತ್ರದೊಂದಿಗೆ ಹೆಸರು, ವಿಳಾಸ ಮತ್ತು ತಯಾರಿಸುವ ಖಾದ್ಯ, ಬೇಕಾಗುವ ಸಾಮಗ್ರಿಗಳು, ತಯಾರಿಸಲು ಬೇಕಾಗುವ ಸಮಯ ಹಾಗೂ ತಯಾರಿಸುವ ವಿಧಾನದ ಸಂಕ್ಷಿಪ್ತ ಮಾಹಿತಿಯೊಂದಿಗೆ ಅರ್ಜಿಯನ್ನು ಡಿ. 22 ರ ಒಳಗಾಗಿ ಇ-ಮೇಲ್ agrijdaudupi@gmail.com ಅಥವಾ ಖುದ್ದಾಗಿ/ಪೋಸ್ಟ್ ಮುಖಾಂತರ ಜಂಟಿ ಕೃಷಿ ನಿರ್ದೇಶಕರ ಕಛೇರಿ, ರಜತಾದ್ರಿ, ಮಣಿಪಾಲ, ಉಡುಪಿ ಜಿಲ್ಲೆ ವಿಳಾಸಕ್ಕೆ ಕಳುಹಿಸಬಹುದಾಗಿದೆ.…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಇಲ್ಲಿನ ಕೋಡಿಕನ್ಯಾಣ ಶ್ರೀ ಶನೀಶ್ವರ ದೇವಸ್ಥಾನದ ವಠಾರದಲ್ಲಿ ಇದೇ ಬರುವ ಡಿ.21ರಂದು ನಡೆಯಲಿರುವ ತಿರುಮಲ ತಿರುಪತಿ ದಾಸ ಸಾಹಿತ್ಯ ಪ್ರಾಜೆಕ್ಟಿನ ನೇತೃತ್ವದಲ್ಲಿ ಶ್ರೀ ದೇವಿ ಭೂದೇವಿ ಸಹಿತ ಶ್ರೀನಿವಾಸ ದೇವರಿಗೆ ಉಂಜಲೋತ್ಸವ ಸಹಿತ ಪುಷ್ಪಯಾಗ ಮಹೋತ್ಸವದ ಪ್ರಚಾರ ಪುಷ್ಭರಥಕ್ಕೆ ಭಜನಾ ಗುರುಗಳಾದ ವೀಣಾ ಪ್ರಸನ್ನ ಶಾನುಭೋಗ್ ಹಾಗೂ ತಿರುಪತಿಗೆ ಪಾದಯಾತ್ರೆಯ ತಂಡದ ಗುರುಗಳಾದ ಲಕ್ಷ್ಮೀ ನಾರಾಯಣರಾವ್ ಚಾಲನೆಯನ್ನು ನೀಡಿದರು.  ಈ ಸಂದರ್ಭದಲ್ಲಿ ಸಮಿತಿಯ ಪ್ರಮುಖರಾದ ಡಾ. ಕೃಷ್ಣ ಕಾಂಚನ್, ಶಂಕರ ಕುಲಾಲ್ಗೋಪಾಲ ಪೂಜಾರಿ ಮತ್ತು ಶ್ರೀನಿವಾಸ ಭಕ್ತರು ಉಪಸ್ಥಿತರಿದ್ದರು.

Read More