ಕುಂದಾಪ್ರ ಡಾಟ್ ಕಾಂ ಸುದ್ದಿಕುಂದಾಪುರ: ಸಮುದ್ರ ಮತ್ತು ನದಿಯ ನಡುವೆ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ 66 ಅಂಚಿನಲ್ಲಿರುವ ತ್ರಾಸಿ ಮತ್ತು ಮರವಂತೆ ಬೀಚ್ನ ಅಭಿವೃದ್ಧಿ ಕಾಮಗಾರಿಗಳನ್ನು ಮುಂದಿನ ಮೂರ್ನಾಲ್ಕು ತಿಂಗಳ ಒಳಗಾಗಿ ಪೂರ್ಣಗೊಳಿಸಿ ಪ್ರವಾಸಿಗರಿಗೆ ಅನುಕೂಲ ಮಾಡಿಕೊಡಲಾಗುವುದು ಎಂದು ಪ್ರವಾಸೋದ್ಯಮ ಹಾಗೂ ಇಂಧನ ಇಲಾಖೆ ಸಚಿವ ಕೆ.ಜೆ. ಜಾರ್ಜ್ ಹೇಳಿದರು. ಅವರು ಸೋಮವಾರ ತ್ರಾಸಿ ಮರವಂತೆ ಬೀಚ್ಗೆ ಭೇಟಿ ನೀಡಿ, ಅಭಿವೃದ್ಧಿ ಕಾಮಗಾರಿಗಳನ್ನು ಪರಿಶೀಲಿಸಿ ಮಾತನಾಡಿದರು. ತ್ರಾಸಿ ಬೀಚ್ನಲ್ಲಿ ಪಾರ್ಕಿಂಗ್, ಫುಡ್ಕೋರ್ಟ್, ಸೈಕಲ್ ಟ್ರಾö್ಯಕ್, ಬಯಲು ರಂಗಮಂದಿರ ಸೇರಿದಂತೆ ಮತ್ತಿತರ ಅಭಿವೃದ್ಧಿ ಕಾಮಗಾರಿಗಳು ಸುಮಾರು 9.95 ಕೋಟಿ ರೂ. ವೆಚ್ಚದಲ್ಲಿ ಕಳೆದ 2 ವರ್ಷದಿಂದ ನಡೆಯುತ್ತಿದ್ದು, ಕಾಮಗಾರಿಗೆ ವೇಗ ನೀಡುವುದರೊಂದಿಗೆ ತ್ವರಿತಗತಿಯಲ್ಲಿ ಪೂರ್ಣಗೊಳಿಸಲಾಗುವುದು ಎಂದರು. ಕರಾವಳಿ ಭಾಗದಲ್ಲಿ ಬೀಚ್ಗಳನ್ನು ಅಭಿವೃದ್ಧಿಗೊಳಿಸಿ, ಕುಡಿಯವ ನೀರು, ಬೆಳಕಿನ ವ್ಯವಸ್ಥೆ, ಸುಸಜ್ಜಿತ ಶೌಚಗೃಹ, ವಾಹನಗಳ ಪಾರ್ಕಿಂಗ್, ಆಸನದ ವ್ಯವಸ್ಥೆ ಸೇರಿದಂತೆ ಅತ್ಯಾಧುನಿಕ ಸೌಲಭ್ಯಗಳನ್ನು ಪ್ರವಾಸಿಗರಿಗೆ ಕಲ್ಪಿಸಿದ್ದಲ್ಲಿ ಪ್ರವಾಸೋದ್ಯಮ ಕ್ಷೇತ್ರಕ್ಕೆ ಇನ್ನಷ್ಟು ಬಲ ದೊರೆತು ಪ್ರವಾಸಿಗರ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಹಾಲಿನ ಅಂಗಡಿಯ ಮಾಡಿನ ತಗಡು ಒಡೆದು ಒಳನುಗ್ಗಿದ ಕಳ್ಳರು 1.10 ಲಕ್ಷ ರೂ. ನಗದು ಕಳವು ಮಾಡಿದ ಘಟನೆ ವಡೇರಹೋಬಳಿ ಗ್ರಾಮದ ಬನ್ನೂರು ಮೂಕೈಯಲ್ಲಿ ಶನಿವಾರ ಮಧ್ಯರಾತ್ರಿ ಸಂಭವಿಸಿದೆ. ದೂರುದಾರ ವಡೇರಹೋಬಳಿ ನಿವಾಸಿ ಹಾಗೂ ಅಂಗಡಿ ಮಾಲಕ ಸುರೇಂದ್ರ ಅವರು ಸೆ.6ರ ರಾತ್ರಿ 10.30ರ ಸುಮಾರಿಗೆ ಅಂಗಡಿಗೆ ಬೀಗ ಹಾಕಿ ಮನೆಗೆ ತೆರಳಿದ್ದರು. ಸೆ.7ರ ಬೆಳಗ್ಗೆ 6 ಗಂಟೆಗೆ ಅಂಗಡಿ ತೆರೆಯಲು ಬಂದಾಗ, ಅಂಗಡಿಯ ಮಾಡಿನ ತಗಡು ಒಡೆದಿರುವುದು ಹಾಗೂ ಕ್ಯಾಶ್ ಡ್ರಾವರ್ನಲ್ಲಿದ್ದ ನಗದು ಹಣ ಕಾಣೆಯಾಗಿರುವುದು ಗಮನಕ್ಕೆ ಬಂದಿದೆ. ಈ ಬಗ್ಗೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಕರ್ಕುಂಜೆ ಗ್ರಾಮದ ಗಂಗಾಧರ ಮಂಜರು ಅವರ ಮನೆಯ ಬೆಡ್ ರೂಮ್ನ ಕಪಾಟಿನೊಳಗಿದ್ದ 56 ಗ್ರಾಂ ತೂಕದ 8ಲಕ್ಷ ರೂ. ಮೌಲ್ಯದ ಚಿನ್ನಾಭರಣವನ್ನು ಕಳ್ಳರು ಆ.17ರ ಬೆಳಗ್ಗೆ 10 ರಿಂದ ಸೆ.6ರ ರಾತ್ರಿ 7.30 ರ ಮಧ್ಯದಲ್ಲಿ ಕಳ್ಳತನ ನಡೆಸಿರುವುದು ಬೆಳಕಿಗೆ ಬಂದಿದೆ. ಬೀಗ ಅಳವಡಿಸಿದ ಕಪಾಟಿನಲ್ಲಿದ್ದ 4 ಗ್ರಾಂ ತೂಕದ ಚಿನ್ನದ ಹರಳಿನ ಉಂಗುರ, 2.8 ಗ್ರಾಂ ತೂಕದ ಚಿನ್ನದ ಬ್ರೇಸ್ಲೇಟ್ 2, ಲಕ್ಷ್ಮೀ ಪೆಂಡೆಂಟ್ ಇರುವ 40 ಗ್ರಾಂ ತೂಕದ ಚಿನ್ನದ ಸರ 1 ಈ ಒಡವೆಗಳನ್ನು ಇಟ್ಟಿದ್ದು, ಮನೆಯಲ್ಲಿ ಯಾರೂ ಇಲ್ಲದ ವೇಳೆ ಕಳ್ಳತನ ನಡೆಸಿರುವುದಾಗಿದೆ. ಸೆ.6 ರ ರಾತ್ರಿ ಆಔರಣಗಳನ್ನು ತೆಗೆಯಲು ಹೋದಾಗ ಕಳವು ಪ್ರಕರಣ ಬೆಳಕಿಗೆ ಬಂದಿದೆ. ಗಂಗಾಧರ ಮಂಜರು ನೀಡಿದ ದೂರಿನಂತೆ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಗ್ರಾಮಾಂತರ ಠಾಣಾ ಎಸ್ಐ ನೂತನ್ ಎಸ್., ಸಿಬ್ಬಂದಿ, ಬೆರಳಚ್ಚು ತಜ್ಞರು, ಶ್ವಾನದಳದವರು ಭೇಟಿ ನೀಡಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ವಿದ್ಯಾರ್ಥಿ ಜೀವನದಲ್ಲಿ ಸಮಯದ ಬಳಕೆ, ನೈತಿಕ ಮೌಲ್ಯ ಹಾಗೂ ಶಿಕ್ಷಕರ ಪಾತ್ರ ಅತ್ಯಂತ ಪ್ರಮುಖವಾದದ್ದು ಎಂಬುದನ್ನು ನೆನಪಿಸುವ ನಿಟ್ಟಿನಲ್ಲಿ ಸುಜ್ಞಾನ ಎಜುಕೇಶನಲ್ ಟ್ರಸ್ಟ್ನ ಸುಜ್ಞಾನ ಪದವಿಪೂರ್ವ ಕಾಲೇಜು, ವಿದ್ಯಾರಣ್ಯ ಇಂಗ್ಲಿಷ್ ಮೀಡಿಯಂ ಸ್ಕೂಲ್ ಹಾಗೂ ಗ್ಲೋಬಲ್ ಸ್ಕೂಲ್ ಜಂಟಿ ಆಶ್ರಯದಲ್ಲಿ 2026ನೇ ಸಾಲಿನ ಶಿಕ್ಷಕರ ದಿನಾಚರಣೆ ಅಂಗವಾಗಿ ಅತ್ಯಂತ ಅರ್ಥಪೂರ್ಣವಾಗಿ “ಗುರುವಂದನಾ” ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಗೌರವ ಗುರುವಂದನೆ ಸ್ವೀಕರಿಸಿ ಮಾತನಾಡಿದ ಪ್ರಸಿದ್ಧ ನಿವೃತ್ತ ಶಿಕ್ಷಕರು ಯಕ್ಷಗಾನ ಕಲಾರಂಗ ಉಡುಪಿಯ ಕಾರ್ಯದರ್ಶಿಗಳಾದ ಮುರಲಿ ಕಡೇಕಾರ್ ಅವರು, “ಇಂದಿನ ಡಿಜಿಟಲ್ ಯುಗದಲ್ಲಿ ವಿದ್ಯಾರ್ಥಿಗಳ ಮನಸ್ಸನ್ನು ವಿಚಲಿತಗೊಳಿಸುವ, ದಾರಿ ತಪ್ಪಿಸುವ ಹತ್ತಾರು ಆಕರ್ಷಣೆಗಳಿವೆ. ಇವೆಲ್ಲವನ್ನೂ ಮೀರಿ ಬೆಳೆಯುವ ಮನೋಭಾವ ನಿಮ್ಮದಾಗಬೇಕು. ಬದುಕಿನಲ್ಲಿಕಳೆದುಹೋದ ಸಮಯವನ್ನು ಯಾವುದೇ ಕಾರಣಕ್ಕೂ ಮರಳಿ ಪಡೆಯಲು ಸಾಧ್ಯವಿಲ್ಲ. ಜೀವನದ ಪ್ರತಿ ನಿಮಿಷ ಮತ್ತು ಗಂಟೆಯೂ ಅತ್ಯಂತ ಅಮೂಲ್ಯ. ಈ ಸತ್ಯವನ್ನು ಅರಿತು ಯಾರು ಶ್ರದ್ಧೆಯಿಂದ ಅಭ್ಯಾಸ ಮಾಡುತ್ತಾರೋ ಅವರ ವಿದ್ಯಾರ್ಥಿ ಜೀವನ ಖಂಡಿತವಾಗಿಯೂ ಸಫಲವಾಗುತ್ತದೆ,” ಎಂದು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಕಿರಿಮಂಜೇಶ್ವರದ ಜನತಾ ಗ್ರೂಪ್ ಆಫ್ ಇನ್ಸ್ಟಿಟ್ಯೂಷನ್ಸ್ನ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್ನಲ್ಲಿ ‘ಜನತಾ ರಸಬುಗ್ಗೆ 3.0’ ಕಾರ್ಯಕ್ರಮ ಅತ್ಯಂತ ಅದ್ದೂರಿಯಾಗಿ ನೆರವೇರಿತು. ಈ ಕಾರ್ಯಕ್ರಮಕ್ಕೆ ಜೀ ಕನ್ನಡ ಸರಿಗಮಪ ಲಿಟಲ್ ಚಾಂಪ್ಸ್ ಖ್ಯಾತಿಯ ಮಂಗಳೂರಿನ ಲಿಟಲ್ ವೈಲಿನ ಚಾಂಪ್ ಅಸ್ಮಿತ್ ಎ. ಜೆ ವಿಶೇಷ ಅತಿಥಿಯಾಗಿ ಆಗಮಿಸಿ ” ಮಕ್ಕಳಿಗೆ ಚಿಕ್ಕ ವಯಸ್ಸಿನಲ್ಲೇ ವೇದಿಕೆ ದೊರಕಬೇಕು. ಇದು ಅವರಲ್ಲಿ ಧೈರ್ಯ ಮತ್ತು ಆತ್ಮವಿಶ್ವಾಸವನ್ನು ತುಂಬುತ್ತದೆ. ಹೊಸ ಹೊಸ ಸಾಧನೆಗಳ ಕಡೆಗೆ ಅವರು ದೃಷ್ಟಿ ಹಾಯಿಸಲು ಇದು ಅನುಕೂಲ ಮಾಡಿಕೊಡುತ್ತದೆ ಹಾಗೆ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಶಾಲೆಯಲ್ಲಿ ಮುದ್ದು ಕೃಷ್ಣ ಮತ್ತು ಮುದ್ದು ರಾಧೆಯರ ಸ್ಪರ್ಧೆಗಳ ಮೂಲಕ ಮಕ್ಕಳ ಪ್ರತಿಭಾ ಪ್ರಕಾಶನಕ್ಕೆ ಅವಕಾಶವನ್ನು ನೀಡಿರುವುದು ಸ್ತುತ್ಯಾರ್ಹ” ಎಂದರು. ಜನತಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಗಣೇಶ ಮೊಗವೀರರು ತಮ್ಮ ಅಧ್ಯಕ್ಷೀಯ ನುಡಿಗಳಲ್ಲಿ “ನಮ್ಮ ಮಕ್ಕಳು ಕೇವಲ ಶೈಕ್ಷಣಿಕ ಚಟುವಟಿಕೆಗಳಿಗೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಗೋಕರ್ಣ: ನೀರು ಎಂಬುದು ಪ್ರಾಣಿಗಳ ಪ್ರಾಣವೇ ಆಗಿದೆ. ಸಂಸ್ಕೃತದಲ್ಲಿ ನೀರಿಗೆ ಜೀವನ ಎಂಬುದೇ ಪರ್ಯಾಯ ಪದವಾಗಿದೆ. ಇದು ನೀರಿಗಿರುವ ಮಹತ್ವವನ್ನು ಸಾರಿ ಹೇಳುತ್ತದೆ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು. ಅವರು ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ ನಡೆಯುತ್ತಿರುವ ‘ಅನ್ನಬ್ರಹ್ಮ ಚಾತುರ್ಮಾಸ್ಯ’ದ ಧರ್ಮಸಭೆಯಲ್ಲಿ ಭಾನುವಾರ ‘ಅನ್ನಂ ಬ್ರಹ್ಮ’ ಮಾಲಿಕೆಯಲ್ಲಿ ಪ್ರವಚನ ಅನುಗ್ರಹಿಸಿದ ಶ್ರೀಗಳು, ಪ್ರಾಚೀನರು ಅಮೃತ ಸಮವಾದ ನೀರನ್ನು ನೆಲದೊಳಗಿನ ನೀರು ಹಾಗೂ ನೆಲ ಮುಟ್ಟದ ನೀರು ಎಂದು ಪ್ರಮುಖವಾಗಿ ವಿಭಾಗಿಸಿದ್ದು, ಇವುಗಳಲ್ಲಿಯೂ ಹಲವಾರು ವಿಧಗಳನ್ನು ಗುರುತಿಸಿದ್ದು, ಯಾವ ನೀರಿನಿಂದ ಏನು ಪರಿಣಾಮ ಎಂಬುದಾಗಿಯೂ ವಿಶ್ಲೇಷಿಸಿದ್ದಾರೆ. ದೇವರು ಕೊಟ್ಟಂತಹ ಅತ್ಯದ್ಭುತ ಜಲವನ್ನು ನಾವಿಂದು ಪ್ಲಾಸ್ಟಿಕ್ ಬಾಟಲಿಗಳಲ್ಲಿ ತುಂಬಿಸಿ ವಿಷವಾಗಿಸಿ ಕುಡಿಯುತ್ತಿದ್ದೇವೆ. ಹಾಗೆ ಕುಡಿದಾಗ ನೀರಿನ ಜೊತೆಗೆ ಪ್ಲಾಸ್ಟಿಕ್ ಕೂಡ ನಮ್ಮೊಳಗೆ ಸೇರುತ್ತದೆ. ಇದು ಕೆಡುಕು ಎಂಬುದನ್ನು ಆಧುನಿಕ ವಿಜ್ಞಾನವೂ ಹೇಳುತ್ತಿದೆ ಎಂದರು. ನೀರು ರಾಜಸ ತಾಮಸ ಗುಣಗಳನ್ನು ನಿಯಂತ್ರಿಸುವುದರ ಜೊತೆಗೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕರ್ನಾಟಕ ಸಂಘ ರತ್ನ ಹಾಗೂ ಭಾರತ ಸಂಘ ಸಿರಿ ಪ್ರಶಸ್ತಿ ಪುರಸ್ಕೃತ ಸಂಸ್ಥೆ ಇವರ ಆಶ್ರಯದಲ್ಲಿ ಶಿಕ್ಷಕರ ದಿನಾಚರಣೆಯ ಅಂಗವಾಗಿ ಶಿಕ್ಷಕರನ್ನು ಸನ್ಮಾನಿಸುವ ಕಾರ್ಯಕ್ರಮವನ್ನು ನಡೆಸಲಾಯಿತು. ಕುಂದಾಪುರದ ಹಿಂದುಸ್ತಾನಿ ಶಾಸ್ತ್ರೀಯ ಸಂಗೀತ ಶಿಕ್ಷಕರಾದ ರವಿಶಂಕರ್ ಹೆಬ್ಬಾರ್ ಅವರನ್ನು ಸ್ವಗೃಹದಲ್ಲಿ ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಸಂಘದ ಗೌರವಾಧ್ಯಕ್ಷರಾದ ಶೀನ ಖಾರ್ವಿ, ಸಂಚಾಲಕರಾದ ಸುಕುಮಾರ್ ನಾಯ್ಕ್ , ಅಧ್ಯಕ್ಷರಾದ ಗಣೇಶ್ ನಾಯ್ಕ್, ಪ್ರಧಾನ ಕಾರ್ಯದರ್ಶಿ ಚೇತನ್ ದೇವಾಡಿಗ ಕೋಶಾಧಿಕಾರಿ ಶರತ್ ಎಸ್. ಖಾರ್ವಿ, ಸಂಘಟನಾ ಕಾರ್ಯದರ್ಶಿ ಕೆ. ಮನೋಹರ್ ಪುತ್ರನ್, ಸಾಂಸ್ಕೃತಿಕ ಕಾರ್ಯದರ್ಶಿ ಶೇಖರ್ ಎಸ್. ಖಾರ್ವಿ, ಸದಸ್ಯರಾದ ಅಮೋಘ ನಾಯ್ಕ್ ಉಪಸ್ಥಿತರಿದ್ದರು. ಉಪಾಧ್ಯಕ್ಷರಾದ ಶಶಿಕಾಂತ್ ಎಸ್. ಖಾರ್ವಿ ನಿರೂಪಿಸಿ, ವಂದಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: “ಸಂಸ್ಕೃತ ಎಲ್ಲಿರುತ್ತದೆಯೋ ಅಲ್ಲಿ ಸಂಸ್ಕೃತಿ ಇರುತ್ತದೆ. ಸಂಸ್ಕೃತ ಜೀವನದ ಮೌಲ್ಯಗಳನ್ನು ಕಲಿಸಿ, ನರನನ್ನು ನಾರಾಯಣನನ್ನಾಗಿ ಹಾಗೂ ಮಾನವನನ್ನು ಮಾಧವನನ್ನಾಗಿ ಮಾರ್ಪಡಿಸುವ ದಿವ್ಯ ಭಾಷೆಯಾಗಿದೆ. ನಮ್ಮ ಬದುಕಿನ ಪರಿಷ್ಕಾರಕ್ಕೆ ಸಂಸ್ಕೃತ ಅತ್ಯಗತ್ಯ” ಎಂದು ಧರ್ಮಭಾರತಿ ಕರ್ನಾಟಕ ದಕ್ಷಿಣ ಪ್ರಾಂತದ ಕಾರ್ಯದರ್ಶಿಗಳಾದ ಆದರ್ಶ ಗೋಖಲೆ ಹೇಳಿದರು. ಅವರು ಸುಜ್ಞಾನ ಪಿಯು ಕಾಲೇಜಿನಲ್ಲಿ ಇತ್ತೀಚೆಗೆ ಆಯೋಜಿಸಲಾಗಿದ್ದ ‘ಸಂಸ್ಕೃತೋತ್ಸವ’ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿದರು. “ಸಂಸ್ಕೃತ ನಮ್ಮನ್ನೆಲ್ಲ ಒಗ್ಗೂಡಿಸುವ ಭಾಷೆ. ಇಡೀ ಮನುಕುಲದ ಏಳಿಗೆಯನ್ನು ಬಯಸುವ ಉನ್ನತ ಚಿಂತನೆಗಳು ಹಾಗೂ ಬದುಕಿಗೆ ಬೇಕಾದ ಆಚಾರ-ವಿಚಾರಗಳು ಈ ಭಾಷೆಯಲ್ಲಿ ಅಡಗಿವೆ. ವಿದ್ಯಾರ್ಥಿಗಳು ಸಂಸ್ಕೃತವನ್ನು ಕೇವಲ ಅಂಕ ಗಳಿಸುವ ಸುಲಭ ಮಾಧ್ಯಮವೆಂದು ಪರಿಗಣಿಸದೇ, ತಮ್ಮ ಜೀವನದ ಸರ್ವಾಂಗೀಣ ಏಳಿಗೆಗಾಗಿ ಕಲಿಯಬೇಕು. ಈ ಕಾಲೇಜಿನಲ್ಲಿ ಸಂಸ್ಕೃತ ಭಾಷೆಗೆ ನೀಡಲಾಗುತ್ತಿರುವ ಮನ್ನಣೆ ಮತ್ತು ಪ್ರೋತ್ಸಾಹ ಕಂಡು ನಿಜಕ್ಕೂ ಸಂತಸವಾಗಿದೆ” ಎಂದು ಹರ್ಷ ವ್ಯಕ್ತಪಡಿಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಸುಜ್ಞಾನ ಎಜುಕೇಶನಲ್ ಟ್ರಸ್ಟ್ನ ಅಧ್ಯಕ್ಷರಾದ ಡಾ.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ದೇಶದಲ್ಲಿ ಜನ್ ಜೀ ಹೆಸರಿನ ಮೂಲಕ ವಿದ್ಯಾರ್ಥಿ ಜೀವನ ಅತಂತ್ರವಾಗುತ್ತಿದೆ, ತಾವೇನು ಮಾಡುತ್ತಿದ್ದೇವೆ ಎಂಬ ಅರಿವೆ ಇಲ್ಲದ ಸ್ಥಿತಿ ನಿರ್ಮಾಣವಾಗುತ್ತಿದೆ ಇದಕ್ಕೆ ಕಾರಣ ನಮ್ಮ ಶಿಕ್ಷಣ ನೀತಿ ಇದರ ಬದಲಾವಣೆ ಅಗತ್ಯವಾಗಿದೆ ಎಂದು ಶಿಕ್ಷಣ ತಜ್ಞ, ವಿವೇಕ ವಿದ್ಯಾಸಂಸ್ಥೆಯ ಪ್ರಾಂಶುಪಾಲ ಕೆ. ಜಗದೀಶ ನಾವಡ ಹೇಳಿದರು. ಅವರು ಶನಿವಾರ ಕೋಟದ ಪಂಚವರ್ಣ ಯುವಕ ಮಂಡಲ ಮತ್ತು ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲ ನೇತೃತ್ವದಲ್ಲಿ ಶಿಕ್ಷಕರ ದಿನಾಚರಣೆ ಪ್ರಯುಕ್ತ ಕೋಟತಟ್ಟು ಪರಿಸರದ ನಿವೃತ್ತ ಪ್ರಾಂಶುಪಾಲ ಸೀತಾರಾಮ ಮಧ್ಯಸ್ಥ ಇವರಿಗೆ ಪಂಚವರ್ಣ ಗುರುವಂದನೆ ಕಾರ್ಯಕ್ರಮದಲ್ಲಿ ಅಭಿನಂದನಾ ನುಡಿಗಳನ್ನಾಡಿದರು. ಜೀವಲನದ ಮೌಲ್ಯಗಳನ್ನು ಕಲಿಸುವ ಮೌಲ್ಯಾಧಾರಿತ ಶಿಕ್ಷಣದ ಕೊರತೆ ಇಂದು ಎದ್ದು ಕಾಣುತ್ತಿದೆ ಮಕ್ಕಳಲ್ಲಿ ಕೌಶಲ್ಯ ಇಲ್ಲದಿರುವುದು ಸೇರಿದಂತೆ ಅನೇಕ ಸಮಸ್ಯೆಗಳನ್ನು ಎದುರಿಸುತ್ತಿದ್ದೇವೆ ಈ ಹಿನ್ನಲೆಯಲ್ಲಿ ಸರಕಾರ ಅಥವಾ ಇಲಾಖೆ ಗಮನ ಹರಿಸಿದರೆ ಮುಂದಿನ ದಿನಗಳಲ್ಲಿ ನೈಜ ವಿದ್ಯಾಸಂಪತ್ತನ್ನು ಸೃಷ್ಠಿಸಲು ಸಾಧ್ಯ ಎಂದರಲ್ಲದೆ ಪಂಚವರ್ಣ ಪ್ರತಿ ಸಾಮಾಜಿಕ ಹೆಜ್ಜೆ ಇಡೀ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಹೊಸಾಡು ಗ್ರಾಮದ ಮುಳ್ಳಿಕಟ್ಟೆ ಜಂಕ್ಷನ್ ಸಮೀಪ ರಾ.ಹೆ.66ರಲ್ಲಿ ಲಾರಿಯೊಂದು ರಸ್ತೆ ಬದಿಗೆ ಮಗುಚಿ ಬಿದ್ದಿದ್ದು, ಹೆದ್ದಾರಿ ಬದಿಯಲ್ಲಿ ವಾಸಿಸುತ್ತಿದ್ದ ವಲಸೆ ಕೂಲಿ ಕಾರ್ಮಿಕರು ಕೂದಲೆಳೆಯ ಅಂತರದಲ್ಲಿ ಪಾರಾದ ಘಟನೆ ಶನಿವಾರ ಸಂಭವಿಸಿದೆ. ಬೈಂದೂರಿನಿಂದ ಕುಂದಾಪುರ ಕಡೆಗೆ ಮೀನು ತುಂಬಿಸಿ ಸಾಗುತ್ತಿದ್ದ ಲಾರಿಯೊಂದು ಮುಳ್ಳಿಕಟ್ಟೆ ಜಂಕ್ಷನ್ ಸಮೀಪ ಅದೇ ಮಾರ್ಗದಲ್ಲಿ ಮುಂದೆ ಹೋಗುತ್ತಿದ್ದ ಇನ್ನೊಂದು ಲಾರಿಗೆ ಢಿಕ್ಕಿ ಹೊಡೆದು ವಲಸೆ ಕಾರ್ಮಿಕರು ವಾಸಿಸುತ್ತಿರುವ ಟೆಂಟ್ ಸಮೀಪದಲ್ಲೇ ರಸ್ತೆ ಬದಿಯ ಚರಂಡಿಗೆ ಮಗುಚಿ ಬಿದ್ದಿದೆ. ಚರಂಡಿ ಇಲ್ಲದಿದ್ದರೆ ಲಾರಿ ನೇರವಾಗಿ ರಾ.ಹೆದ್ದಾರಿ ಸಮೀಪ ಕೂಲಿ ಕಾರ್ಮಿಕರು ವಾಸಿಸುತ್ತಿದ್ದ ಟೆಂಟ್ಗಳ ಮೇಲೆ ಬಿದ್ದು, ಪ್ರಾಣ ಹಾನಿ ಸಂಭವಿಸುವ ಸಾಧ್ಯತೆ ಇತ್ತು. ಅಪಘಾತ ನಡೆಯುವ ಕೆಲವೇ ಕ್ಷಣದ ಮುಂಚೆ ರಾ.ಹೆ. ಗುತ್ತಿಗೆ ಪಡೆದುಕೊಂಡಿರುವ ಸಂಸ್ಥೆಯವರು ವಾಹನದಲ್ಲಿ ಇದೇ ಸ್ಥಳದಲ್ಲಿ ಕೂಲಿ ಕಾರ್ಮಿಕರನ್ನು ಇಳಿಸಿ ಹೋಗಿದ್ದರು.
