ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಹಟ್ಟಿಅಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯಲ್ಲಿ ಎಐಸಿಎಸ್ ಅಂತರ್ ಶಾಲಾ ಮಟ್ಟದ ಹ್ಯಾಂಡ್ ಬಾಲ್ ಟೂರ್ನಮೆಂಟ್ ’ವಿಂಗ್ಸ್ ಟು ವಿನ್’ ಹೆಸರಲ್ಲಿ ನಡೆಯಿತು. ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ ಡಾನ್ ಬಾಸ್ಕೋ ಆಂಗ್ಲ ಮಾಧ್ಯಮ ಶಾಲೆಯ ಪ್ರಾಂಶುಪಾಲರು ಹಾಗೂ ಎಐಸಿಎಸ್‌ನ ಉಡುಪಿ ಜಿಲ್ಲೆಯ ಕ್ರೀಡಾ ಕಾರ್ಯದರ್ಶಿಗಳಾದ ರೋಲ್ವಿನ್ ಜೊಯ್ ಅರಾನ್ ಅವರು ಮಾತನಾಡಿ, ಆಟವು ಮಕ್ಕಳನ್ನು ಲವಲವಿಕೆಯಿಂದಿರುವಂತೆ ಮಾಡುತ್ತದೆ. ಆಟದಲ್ಲಿ ಗೆಲ್ಲಲು ಎಲ್ಲರೂ ಶ್ರಮಿಸಬೇಕು. ಬೇರೆಯವರು ಗೆದ್ದರೆ ನೋವು ಪಡಬಾರದು. ಬೇರೆ ಬೇರೆ ಶಾಲೆಗಳಾದರೂ ನಾವೆಲ್ಲ ಎಐಸಿಎಸ್‌ನ ವಿದ್ಯಾರ್ಥಿಗಳು. ನಮ್ಮವರ ಸಾಧನೆ ನೋಡಿ ಹೆಮ್ಮೆ ಪಡಬೇಕು ಎಂದರು. ಶ್ರೀ ಸಿದ್ಧಿ ಶೈಕ್ಷಣಿಕ ಪ್ರತಿಷ್ಠಾನದ ಕಾರ್ಯದರ್ಶಿಗಳು ಮತ್ತು ಶಾಲಾ ಪ್ರಾಂಶುಪಾಲರೂ ಆದ ಶರಣ ಕುಮಾರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಸತತ ಪರಿಶ್ರಮದಿಂದಷ್ಟೇ ಸ್ಪರ್ಧೆಯಲ್ಲಿ ಗೆಲುವು ಸಾಧ್ಯ. ಸ್ವಾಭಿಮಾನದ ಬೆಳವಣಿಗೆಗೆ ಇದು ಪೂರಕ. ಸೋಲು ಕೂಡ ಜೀವನದ ಪಾಠವನ್ನು ನೀಡುತ್ತದೆ. ವಿದ್ಯಾರ್ಥಿಗಳು ಆ ದಿಸೆಯಲ್ಲಿ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಪ್ರಜಾಸೇವಾ ಆಂದೋಲನ ಸಭೆಗಳು ಸರಕಾರದ ವಿನೂತನ ಕಾರ್ಯಕ್ರಮವಾಗಿದೆ. ಜನಪ್ರತಿನಿಧಿಗಳು, ಅಧಿಕಾರಿಗಳು, ಜನಸಾಮಾನ್ಯರ ಸಮಸ್ಯೆಗಳನ್ನು ಅವರುಗಳ ಮನೆ ಬಾಗಿಲಿನಲ್ಲಿಯೇ ಹೋಗಿ ಆಲಿಸಿ, ನಿಗದಿತ ಸಮಯದಲ್ಲಿ ತ್ವರಿತಗತಿಯಲ್ಲಿ ಜನರ ಸಮಸ್ಯೆಗಳಿಗೆ ಪರಿಹಾರ ಒದಗಿಸುವುದು ಪ್ರಜಾಸೇವಾ ಆಂದೋಲನದ ಆಶಯವಾಗಿದೆ ಎಂದು ಕರ್ನಾಟಕ ಸರಕಾರದ ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ರಿಜ್ವಾನ್ ಅರ್ಷದ್ ಹೇಳಿದರು. ಅವರು ಮಂಗಳವಾರ ಕಾರ್ಕಳದ ಮಂಜುನಾಥ್ ಪೈ ಸಭಾಭವನದಲ್ಲಿ ನಡೆದ ತಾಲೂಕು ಮಟ್ಟದ ಪ್ರಜಾಸೇವಾ ಆಂದೋಲನ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜನಸಾಮಾನ್ಯರ ಸಣ್ಣ-ಪುಟ್ಟ ಸಮಸ್ಯೆಗಳಿಗೆ ಸ್ಥಳದಲ್ಲಿಯೇ ಪರಿಹಾರ ಕಲ್ಪಿಸಿ, ಅವರುಗಳು ಸರಕಾರಿ ಕಚೇರಿಗಳಿಗೆ ಅಲೆದಾಡುವುದನ್ನು ತಪ್ಪಿಸಲು ಪ್ರಜಾಸೇವಾ ಆಂದೋಲನ ಸಭೆಗಳನ್ನು ಆಯೋಜಿಸಿ, ಆ ಮೂಲಕ ಅವರುಗಳ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವ ವ್ಯವಸ್ಥೆಯನ್ನು ಪ್ರಜಾಸೇವಾ ಆಂದೋಲನ ಸಭೆಗಳ ಮೂಲಕ ಸರಕಾರ ಮಾಡುತ್ತಿದೆ ಎಂದರು. ಪ್ರಜಾಸೇವಾ ಆಂದೋಲನ ಸಭೆಗಳಲ್ಲಿ ಸ್ವೀಕೃತವಾಗುವ ಎಲ್ಲಾ ಅಹವಾಲುಗಳನ್ನು ಐ.ಪಿ.ಜಿ.ಆರ್.ಎಸ್ ಪೋರ್ಟಲ್‌ನಲ್ಲಿ ಅಪ್‌ಲೋಡ್ ಮಾಡಲಾಗುವುದು.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶೈಕ್ಷಣಿಕ ರಂಗದಲ್ಲಿ ಮುಂಚೂಣಿಯಲ್ಲಿರುವ ಕಾರ್ಕಳದ ಪ್ರತಿಷ್ಠಿತ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನಲ್ಲಿ ಪವಿತ್ರ ಹಬ್ಬಗಳಲ್ಲಿ ಒಂದಾದ ದೀಪಾವಳಿ ಹಾಗೂ ತುಳಸಿ ಪೂಜೆಯನ್ನು ಧಾರ್ಮಿಕ ವಿಧಿ ವಿಧಾನಗಳ ಮೂಲಕ ಸಂಭ್ರಮದಿಂದ ಆಚರಿಸಲಾಯಿತು. ಜಗಮಗಿಸುವ ವಿದ್ಯುತ್ ದೀಪಲಂಕಾರದಿಂದ ಕಾಲೇಜು ಕಂಗೊಳಿಸಿದ್ದು ಮಾತ್ರವಲ್ಲದೆ ವಿಶಿಷ್ಟ ಸುಡುಮದ್ದು ಪ್ರದರ್ಶನವು ಬಾನಂಗಳದಲ್ಲಿ ಬಣ್ಣದ ಚಿತ್ತಾರವನ್ನೇ ಸೃಷ್ಟಿಸಿತು. ಕ್ರಿಯೇಟಿವ್ ಗ್ಲೋಬಲ್ ಸ್ಕೂಲ್ ವಿದ್ಯಾರ್ಥಿಗಳಿಂದ ನೃತ್ಯ ಪ್ರದರ್ಶನ ನಡೆಯಿತು. ಈ ಸಂದರ್ಭದಲ್ಲಿ ಅಂತರ್ ರಾಷ್ಟ್ರೀಯ ಖ್ಯಾತಿಯ ಜಾದೂಗಾರ ಸತೀಶ್ ಹೆಮ್ಮಾಡಿ ಮತ್ತು ಬಳಗದವರಿಂದ *ಮಿರಾಕಲ್ ಮ್ಯಾಜಿಕ್* ಜಾದೂ ಪ್ರದರ್ಶನ ನಡೆಯಿತು. ಈ ಎಲ್ಲಾ ಕಾರ್ಯಕ್ರಮಕ್ಕೆ ಸಂಸ್ಥೆಯ ಸಂಸ್ಥಾಪಕರುಗಳಾದ ವಿದ್ವಾನ್ ಗಣಪತಿ ಭಟ್, ಅಶ್ವತ್ ಎಸ್.ಎಲ್, ಗಣನಾಥ ಶೆಟ್ಟಿ ಬಿ, ಆದರ್ಶ ಎಂ.ಕೆ, ವಿಮಲ್ ರಾಜ್ ಗಣಪತಿ ಭಟ್ ಕೆ.ಎಸ್ , ಅಮೃತ್ ಯು ರೈ ಸಾಕ್ಷಿಭೂತರಾದರು. ದೀಪಾವಳಿ ಹಬ್ಬದ ಆಚರಣೆಯ ವಿಶೇಷತೆ ಹಾಗೂ ಮಹತ್ವದ ಬಗ್ಗೆ ಲೋಹಿತ್ ಎಸ್.ಕೆ. ವಿದ್ಯಾರ್ಥಿಗಳಿಗೆ ತಿಳಿಸಿದರು. ಕಾರ್ಯಕ್ರಮವನ್ನು ಹಿರಿಯ ಉಪನ್ಯಾಸಕ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕರ್ನಾಟಕ ಕರಾವಳಿಯ ಸಪ್ತ ಪುಣ್ಯ ಕ್ಷೇತ್ರಗಳಲ್ಲಿ ಒಂದಾದ ಕೋಟೇಶ್ವರದಲ್ಲಿ ಶ್ರೀ ಕೋಟಿಲಿಂಗೇಶ್ವರ ದೇವಸ್ಥಾನದ ಮನ್ಮಹಾರಥೋತ್ಸವ ಮಂಗಳವಾರ ಸಡಗರ ಸಂಭ್ರಮದಿಂದ ಜರುಗಿತು. ಬೆಳಗ್ಗೆ ತಂತ್ರಿಗಳು ಶ್ರೀದೇವರ ರಥಾರೋಹಣ ಪೂರ್ವ ವಿಧಿಗಳನ್ನು ನೆರವೇರಿಸಿದ ಬಳಿಕ ರಥೋತ್ಸವಕ್ಕೆ ಚಾಲನೆ ನೀಡಿದರು. ಶ್ರೀದೇವರಿಗೆ ಶತರುದ್ರಾಭಿಷೇಕ ಇನ್ನಿತರ ಧಾರ್ಮಿಕ ವಿಧಿ ನಡೆದ ಬಳಿಕ ಸಹಸ್ರಾರು ಭಕ್ತರ ಜಯಘೋಷದೊಂದಿಗೆ ಭವ್ಯ ರಥೋತ್ಸವ ನಡೆಯಿತು. ಅಪಾರ ಸಂಖ್ಯೆಯ ಜನಸ್ತೋಮ ರಥೋತ್ಸವದಲ್ಲಿ ಪಾಲ್ಗೊಂಡು ಶ್ರೀಕೋಟಿಲಿಂಗೇಶ್ವರ ದೇವರ ದರ್ಶನ ಪಡೆದು ಪುನೀತರಾದರು. ಸಂಜೆ ಬಸವನಗುಡಿ ಸನ್ನಿಧಿಯಿಂದ ಶ್ರೀದೇವರಿಗೆ ಅಭಿಮುಖವಾಗಿ ರಥ ಏಳೆದ ಬಳಿಕ ರಥಾಅವರೋಹಣದ ವಿಧಿ ಸಮಾಪನಗೊಂಡವು. ದೇವಳದ ರಥೋತ್ಸವದ ಸಂದರ್ಭ ಗರುಡ ದರ್ಶನ ಆಗುವುದು ವಾಡಿಕೆ. ಈ ಭಾರಿ ಡ್ರೋನ್ ಹಾರಾಟ ಹೆಚ್ಚಿದ್ದು ಗರುಡ ಸಂಚಾರಕ್ಕೆ ಅಡಚಣೆಯಾಯಿತು ಎನ್ನಲಾಗಿದೆ. ನವ ವಧುವರರು ವಾಡಿಕೆಯಂತೆ ಹಬ್ಬಕ್ಕೆ ಬಂದು ಕೊಡಿ (ಕಬ್ಬು) ಕೊಂಡು ದೇವರಿಗೆ ಪೂಜೆ ಸಲ್ಲಿಸಿದರು. ನವದಂಪತಿ ಕೊಡಿ ಹಬ್ಬದ ದಿನದಂದು ದೇವರ ದರ್ಶನ ಮಾಡಿ ಕಬ್ಬಿನ ಕೊಡಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಓದು ಬಳಗ, ಉಡುಪಿ ವತಿಯಿಂದ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ್ದ ‘ವಿದ್ಯಾರ್ಥಿ ಕವಿಗೋಷ್ಠಿ’ ಕಾರ್ಯಕ್ರಮಕ್ಕೆ ಮೂಡ್ಲಕಟ್ಟೆಯ ಐ.ಎಂ.ಜೆ. ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನ ತೃತೀಯ ಬಿ.ಸಿ.ಎ. ವಿದ್ಯಾರ್ಥಿ ವಿಕಾಸ್ ಎಸ್. ಆರ್. ಅವರ ಕವನ ಆಯ್ಕೆಯಾಗಿದೆ. ವಿವಿಧ ಕಾಲೇಜುಗಳ ವಿದ್ಯಾರ್ಥಿಗಳಿಂದ ಆಹ್ವಾನಿಸಲಾಗಿದ್ದ ಕವನಗಳಲ್ಲಿ ವಿಕಾಸ್ ಅವರ ಕವನ ಆಯ್ಕೆಯಾಗಿರುವುದು ಕಾಲೇಜಿಗೆ ಹೆಮ್ಮೆಯ ವಿಷಯವಾಗಿದೆ. ವಿಕಾಸ್ ಎಸ್. ಆರ್. ಅವರ ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕರು, ವಿದ್ಯಾರ್ಥಿಗಳು ಹಾಗೂ ಸಾಹಿತ್ಯ ಸಂಘದ ವತಿಯಿಂದ ಅಭಿನಂದನೆ ಸಲ್ಲಿಸಲಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಾಲೂಕಿನ ಶಿರೂರು ಪೇಟೆ ಶ್ರೀ ವೆಂಕಟರಮಣ ದೇವಸ್ಥಾನ ಜಿ.ಎಸ್.ಬಿ ಸಮುದಾಯ ಇವರ ಆಶ್ರಯದಲ್ಲಿ ನಡೆಯುವ ವಾರ್ಷಿಕ ವನಭೋಜನ ಕಾರ್ಯಕ್ರಮ ಮಂಗಳವಾರ ಸಂಭ್ರಮ ಸಡಗರದಿಂದ ನಡೆಯಿತು. ಪೇಟೆ ವೆಂಕಟರಮಣ ದೇವಸ್ಥಾನದಿಂದ ಮೆರವಣಿಗೆ ಹೊರಟು ಆಲಂದೂರು ಸಮೀಪದ ಕುಂಬ್ರಿಕೊಡ್ಲುವಿನಲ್ಲಿ ವಿವಿಧ ಪೂಜಾ ಕಾರ್ಯಕ್ರಮಗಳು ನಡೆಯಿತು. ಮೆರವಣಿಗೆಯಲ್ಲಿ ದೇವಸ್ಥಾನದ ಆಡಳಿತ ಮಂಡಳಿ ಸಮಿತಿ ಸದಸ್ಯರು ಮತ್ತು ಜಿ.ಎಸ್.ಬಿ ಸಮಾಜದ ಪ್ರಮುಖರು ಹಾಗೂ ಭಕ್ತಾಧಿಗಳು ಧಾರ್ಮಿಕ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಬೆಳಗಾವಿಯ ಬಂಟರ ಸಂಘದ 42ನೇ ವಾರ್ಷಿಕ ಮಹಾಸಭೆಯು ಬೆಳಗಾವಿ ಬಂಟರ ಭವನದಲ್ಲಿ ಭಾನುವಾರ ನಡೆಯಿತು. ಪ್ರತಿಷ್ಠಿತ ಬೆಳಗಾವಿ ಜಿಲ್ಲಾ ಬಂಟರ ಸಂಘದ ನೂತನ ಅಧ್ಯಕ್ಷರು ಹಾಗೂ ಪದಾಧಿಕಾರಿಗಳ ಆಯ್ಕೆ ಅವಿರೋಧವಾಗಿ ನಡೆಯಿತು. ನೂತನ ಅಧ್ಯಕ್ಷರಾಗಿ ಸಮಾಜ ಸೇವಕರು ಹಾಗೂ ಉದ್ಯಮಿಗಳಾದ ಜಯಶೀಲ್ ಎನ್. ಶೆಟ್ಟಿ ಘಟಪ್ರಭಾ ಮತ್ತು ಪ್ರಧಾನ ಕಾರ್ಯದರ್ಶಿಯಾಗಿ ಉಳ್ತೂರು ಸಂತೋಷ್ ಶೆಟ್ಟಿ ಅವರನ್ನು ಸರ್ವಾನುಮತದಿಂದ ಮುಂದಿನ ಎರಡು ವರ್ಷಗಳ ಅವಧಿಗೆ ಆಯ್ಕೆ ಮಾಡಲಾಯಿತು. ಈ ಸಂದರ್ಭದಲ್ಲಿ ಸಂಘದ ಸ್ಥಾಪಕಾಧ್ಯಕ್ಷರು ಹಿರಿಯರು, ಗೌರವಾಧ್ಯಕ್ಷರಾದ ವಿಠಲ್ ಎಸ್. ಹೆಗ್ಡೆ ಅವರು ಮತ್ತು ಸಂಘದ ನಿಕಟಪೂರ್ವ ಅಧ್ಯಕ್ಷರು ವಿಜಯ್ ಎಂ ಶೆಟ್ಟಿ ಮತ್ತು ಮಾಜಿ ಉಪಾಧ್ಯಕ್ಷರಾದ ಪ್ರಸನ್ನ ಕುಮಾರ್ ಶೆಟ್ಟಿ, ಕರುಣಾಕರ ಶೆಟ್ಟಿ ಹಿಡ್ಕಲ್, ಮಾಜಿ ಅಧ್ಯಕ್ಷರು ಚಂದ್ರಶೇಖರ್ ಶೆಟ್ಟಿ ಮಾಜಿ ಪ್ರಧಾನ ಕಾರ್ಯದರ್ಶಿಯವರಾದ ಚೇತನ್ ಶೆಟ್ಟಿ, ಮಾಜಿ ಖಜಾಂಚಿವರಾದ ಪ್ರಣಯ ಆರ್ ಶೆಟ್ಟಿ, ಮಾಜಿ ಸಂಘಟನಾ ಕಾರ್ಯದರ್ಶಿ ಪ್ರಭಾಕರ್ ಶೆಟ್ಟಿ, ಹಿರಿಯ ಸದಸ್ಯರಾದ ಬಾರ್ಕೂರ್ ನಡುಮನೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕರ್ನಾಟಕ ರಾಜ್ಯ ಅರ್ಹತಾ ಪರೀಕ್ಷೆ (KSET) – 2026ರಲ್ಲಿ ಇಲ್ಲಿನ ಶ್ರೀ ಕಾಳಾವರ ವರದರಾಜ ಎಂ. ಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ವಿದ್ಯಾರ್ಥಿನಿ ರಶ್ಮಿ ಅವರು ವಾಣಿಜ್ಯ (Commerce) ವಿಷಯದಲ್ಲಿ ಕರ್ನಾಟಕ ರಾಜ್ಯಕ್ಕೆ ಐದನೇ ಅತ್ಯಧಿಕ ಅಂಕಗಳನ್ನು ಗಳಿಸಿ ಗಮನಾರ್ಹ ಸಾಧನೆ ಮಾಡಿದ್ದಾರೆ. ಅಷ್ಟೇ ಅಲ್ಲದೇ, ಇವರು ಜೂನ್ 2026ರಲ್ಲಿ ನಡೆದ UGC NTA NET ಪರೀಕ್ಷೆಯಲ್ಲಿ ಕೂಡ ತೇರ್ಗಡೆ ಹೊಂದಿರುತ್ತಾರೆ. ಜೊತೆಗೆ ಕಾಲೇಜಿನ ಒಟ್ಟು 6 ವಿದ್ಯಾರ್ಥಿಗಳು KSET ಪರೀಕ್ಷೆಯಲ್ಲಿ ತೇರ್ಗಡೆಯಾಗಿರುತ್ತಾರೆ. ವಿದ್ಯಾ, ಪ್ರತಿಮಾ, ವಿದ್ಯಾವತಿ, ಪ್ರತಿಮಾ ಹಾಗೂ ರಕ್ಷಿತಾ ಕ್ರಮವಾಗಿ ರಾಜ್ಯಕ್ಕೆ 14, 21, 23, 25 ಹಾಗೂ 27ನೇ ಅತ್ಯಧಿಕ ಅಂಕಗಳನ್ನು ಗಳಿಸಿ ಕಾಲೇಜಿನ ಇತರ ವಿದ್ಯಾರ್ಥಿಗಳಿಗೂ ಸ್ಫೂರ್ತಿಯಾಗಿದ್ದು, ಕಾಲೇಜಿನ ಕೀರ್ತಿಯನ್ನು ಹೆಚ್ಚಿಸಿದೆ. ಇದು ಕಾಲೇಜಿನ ಶೈಕ್ಷಣಿಕ ಗುಣಮಟ್ಟ ಹಾಗೂ ವಿದ್ಯಾರ್ಥಿಗಳ ಪರಿಶ್ರಮಕ್ಕೆ ಹಿಡಿದ ಕೈಗನ್ನಡಿಯಾಗಿದೆ. ಇವರ ಈ ಯಶಸ್ಸಿಗೆ ಕಾಲೇಜಿನ ಪ್ರಾಂಶುಪಾಲರು, ಬೋಧಕ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಬೈಕ್ ಅಪಘಾತದಲ್ಲಿ ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟ ಘಟನೆ ಶಿರೂರು ಇಂಡಿಯನ್ ಪೆಟ್ರೋಲ್ ಬಂಕ್ ಬಳಿ ಸೋಮವಾರ ರಾತ್ರಿ ನಡೆದಿದೆ. ಉಪ್ಪುಂದ ಜನತಾ ಕಾಲೋನಿಯ ಅಭಿಷೇಕ ಖಾರ್ವಿ (23) ಹಾಗೂ ಪ್ರವೀಣ ಖಾರ್ವಿ (23) ಮೃತಪಟ್ಟ ಯುವಕರು. ಪ್ರವೀಣ ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದು ಹಾಗೂ ಅಭಿಷೇಕ ಮೀನುಗಾರಿಕೆ ಕೆಲಸ ಮಾಡುತ್ತಿದ್ದರು. ಉಪ್ಪುಂದದ ಕೊಡಿ ಹಬ್ಬಕ್ಕೆ ಆಗಮಿಸಿದ್ದ ಯುವಕರು ಸೋಮವಾರ ರಾತ್ರಿ ಉಪ್ಪುಂದದಿಂದ ಶಿರೂರು ಟೋಲ್‌ಗೇಟ್‌ಗೆ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ತಲೆಯ ಭಾಗಕ್ಕೆ ಬಲವಾದ ಪೆಟ್ಟು ಬಿದ್ದು ರಕ್ತಸ್ರಾವದಿಂದ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಈ ಬಗ್ಗೆ ಬೈಂದೂರು ಆರಕ್ಷಕ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಬಡ ರೋಗಿಗಳ ಪಾಲಿಗೆ ಆಯುಷ್ಮಾನ್ ಯೋಜನೆ ಒಂದು ಅದ್ಭುತ ವರದಾನವಾಗಿದೆ. ಅದನ್ನು ಬಳಸಿಕೊಳ್ಳುವುದು ಹೇಗೆ ಎನ್ನುವ ಅರಿವು ನಮ್ಮೆಲ್ಲರಲ್ಲೂ ಸರಿಯಾಗಿ ಇದ್ದಾಗ ಮಾತ್ರ ಆ ಯೋಜನೆಯ ಫಲವನ್ನು ಪಡೆಯಲು ಸಾಧ್ಯವಿದೆ. ಈ ನಿಟ್ಟಿನಲ್ಲಿ ಆಯುಷ್ಮಾನ್ ಯೋಜನೆಯ ಬಗ್ಗೆ ತಿಳಿದು ಅದನ್ನು ಇತರರಿಗೂ ತಿಳಿಸುವಲ್ಲಿ ನಾವು ಮುಂದಾಗಬೇಕು ಎಂದು ಕೆ.ಎಂ.ಸಿಯ ಆರೋಗ್ಯ ಮಿತ್ರ ವಿಭಾಗದ ಸುಜನ್ಮಾಲಾ ಅಭಿಪ್ರಾಯಪಟ್ಟರು. ಅವರು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನಲ್ಲಿ ಇಲ್ಲಿನ ಎಸ್ ವಿ ಕಾಮರ್ಸ್ ಕ್ಲಬ್ ಆಶ್ರಯದಲ್ಲಿ ನಡೆದ ಆಯುಷ್ಮಾನ್ ಅರಿವು ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು. ಪ್ರಾಂಶುಪಾಲೆ ಕವಿತಾ ಎಂಸಿ ಅಧ್ಯಕ್ಷತೆ ವಹಿಸಿದ್ದರು. ಬಿಲ್ಲವರ ಸಮಾಜ ಸೇವಾ ಸಂಘದ ಅಧ್ಯಕ್ಷ ಗೋಪಾಲ ಬಿಲ್ಲವ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಉಪನ್ಯಾಸಕಿ ಅಕ್ಷಯ ಆರ್. ಖಾರ್ವಿ ಪ್ರಸ್ತಾವಿಕ ಮಾತುಗಳಾಡಿದರು. ಎಸ್. ವಿ ಕಾಮರ್ಸ್ ಕ್ಲಬ್ ಸಂಯೋಜಕ ನರೇಂದ್ರ ಎಸ್. ಗಂಗೊಳ್ಳಿ ಅತಿಥಿಗಳನ್ನು ಪರಿಚಯಿಸಿದರು. ಉಪನ್ಯಾಸಕಿ ಸುಗುಣ ಆರ್.ಕೆ. ಅಭಿಪ್ರಾಯಗಳನ್ನು ಹಂಚಿಕೊಂಡರು. ವಿದ್ಯಾರ್ಥಿ ಪ್ರತಿನಿಧಿಗಳಾದ…
