ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಇಲ್ಲಿನ ಕಳವಾಡಿ ಮಾರಿಕಾಂಬಾ ಯೂತ್ ಕ್ಲಬ್ ಆಶ್ರಯದಲ್ಲಿ ಕಳವಾಡಿ ಶ್ರೀ ಮಾರಿಕಾಂಬಾ ದೇವಸ್ಥಾನದಲ್ಲಿ ಕೆರೆಯ ಸ್ವಚ್ಚತಾ ಕಾರ್ಯಕ್ರಮ ಯಶಸ್ವಿಯಾಗಿ ಜರುಗಿತು. ಮಾರಿಕಾಂಬಾ ಯೂತ್ ಕ್ಲಬ್ ಕಳವಾಡಿಯ ಸದಸ್ಯರು ಸ್ವಚ್ಛತಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ರಾಜ್ಯ ದಲಿತ ಸಂಘರ್ಷ ಸಮಿತಿ ಕುಂದಾಪುರ ತಾಲೂಕು ಸಮಿತಿ ಆಶ್ರಯದಲ್ಲಿ ಹಳಗೇರಿಯಲ್ಲಿ ದ.ಸಂ.ಸ ಮಹಿಳಾ ಘಟಕ ಉದ್ಘಾಟನೆಗೊಂಡಿತು. ಜಿಲ್ಲಾ ಪಂಚಾಯತ್ ಸದಸ್ಯೆ ಗೌರಿ ದೇವಾಡಿಗ ಮಹಿಳಾ ಘಟಕವನ್ನು ಉದ್ಘಾಟಿಸಿ ಶುಭಹಾರೈಸಿದರು. ದ.ಸಂ.ಸ. ಉಡುಪಿ ಜಿಲ್ಲಾ ನಾಯಕ ಜಯನ್ ಮಲ್ಪೆ, ಮಂಜುನಾಥ ಗಿಳಿಯಾರು, ವಾಸುದೇವ ಮುದೂರು, ರಾಜು ಬೆಟ್ಟಿನಮನೆ, ಚಂದ್ರ ಹಳಗೇರಿ, ನರಸಿಂಹ ಹಳಗೇರಿ ಮೊದಲಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಹೊಸ ವರ್ಷಾಚರಣೆಗಾಗಿ ಕಾಲ್ತೋಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮುರೂರು ಕೊರಗರ ಕೇರಿಯ ಮರ್ಲಿ ಹೆಂಗ್ಸು ಮನೆಯಲ್ಲಿ ರಾಜ್ಯದ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಎಚ್. ಆಂಜನೇಯ ಡಿ. 31ರಂದು ವಾಸ್ತವ್ಯ ಹೂಡಲಿರುವ ಹಿನ್ನೆಲೆಯಲ್ಲಿ ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕ ಕೆ. ಗೋಪಾಲ ಪೂಜಾರಿ ಮುರೂರಿಗೆ ಭೇಟಿ ನೀಡಿ ಸಚಿವರ ವಾಸ್ತವ್ಯವಿರಲಿರುವ ಮನೆಗೆ ಭೇಟಿ ನೀಡಿ ಅಲ್ಲಿನ ಪೂರ್ವತಯಾರಿಗಳನ್ನು ಅವಲೋಕಿಸಿದರು. ಮುರೂರಿಗೆ ಆಗಮಿಸಲಿರುವ ಸಚಿವರು ಜಿಲ್ಲೆಯ ನಾನಾ ಭಾಗದಿಂದ ಆಗಮಿಸುವ ಕೊರಗ ಜನಾಂಗದವರು ಹಾಗೂ ಸ್ಥಳೀಯರ ಸಮಾವೇಶ ನಡೆಸಿ, ಬಳಿಕ ಅವರಿಂದ ಅಹವಾಲು ಸ್ವೀಕರಿಸಲಿದ್ದಾರೆ. ಸಂಜೆ ಗಂಟೆಯ ಬಳಿಕ ಕೊರಗ ಸಂಘಟನೆಯ ಮುಖಂಡರು ಹಾಗೂ ಇತರ ಜನರೊಂದಿಗೆ, ಕೊರಗ ಕೇರಿಯ ಮರ್ಲಿ ಹೆಂಗ್ಸು ಮನೆಯಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಆ ದಿನ ಮಧ್ಯರಾತ್ರಿಯವರೆಗೂ ಕೊರಗ ಸಂಘಟನೆಯಿಂದ ಜಾನಪದ ನೃತ್ಯ, ಡೊಳ್ಳು ಕುಣಿತ ಮೂಲಕ ಮನೋರಂಜನಾ ಕಾರ್ಯಕ್ರಮಗಳು ನಡೆಯಲಿದೆ. ಈ ಸಂದರ್ಭದಲ್ಲಿ ಜಿಲ್ಲಾ ಕೆಡಿಪಿ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಇಲ್ಲಿನ ಬೈಂದೂರು-ವಿರಾಜಪೇಟೆ ರಾಜ್ಯ ಹೆದ್ದಾರಿಯಲ್ಲಿ ಮಯ್ಯಾಡಿ ಸೊಸೈಟಿ ಸಮೀಪ ರಸ್ತೆಯ ಬದಿಯಲ್ಲಿ ನಿಂತಿದ್ದ ಸ್ವಿಫ್ಟ್ ಕಾರಿಗೆ ಎದುರಿನಿಂದ ಬಂದ ಸ್ವಿಫ್ಟ್ ಕಾರೊಂದು ಢಿಕ್ಕಿಯಾದ ಘಟನೆ ವರದಿಯಾಗಿದ್ದು, ಚಲಿಸುತ್ತಿದ್ದ ಕಾರಿನಲ್ಲಿದ್ದ ಮಹಿಳೆಯೋರ್ವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಕೊಲ್ಲೂರಿನಲ್ಲಿ ಬೈಂದೂರು ಕಡೆಗೆ ಸಂಚರಿಸುತ್ತಿದ್ದ ಬೆಂಗಳೂರು ನೊಂದಣಿ ಹೊಂದಿರುವ ಸ್ವಿಫ್ಟ್ ಕಾರು ಮಯ್ಯಾಡಿಯ ಸೊಸೈಟಿಯ ಬಳಿ ರಸ್ತೆಯ ಬದಿಯಲ್ಲಿ ಪಾರ್ಕ್ ಮಾಡಲಾಗಿದ್ದ ಸ್ವಿಫ್ಟ್ ಕಾರಿಗೆ ಢಿಕ್ಕಿ ಹೊಡೆದಿತ್ತು. ಢಿಕ್ಕಿಯ ರಭಸಕ್ಕೆ ಎರಡೂ ಕಾರಿನ ಎಡಭಾಗ ಸಂಪೂರ್ಣ ಜಖಂಗೊಂಡಿದೆ. ಚಲಿಸುತ್ತಿದ್ದ ಕಾರಿನಲ್ಲಿದ್ದ ಮಹಿಳೆಗೆ ಸಣ್ಣಪುಟ್ಟ ಗಾಯಗಳಾಗಿದ್ದು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಸ್ಥಳೀಯರು ಸುಗಮ ಸಂಚಾರಕ್ಕೆ ಅನುವುಮಾಡಿಕೊಟ್ಟರು. ಬೈಂದೂರು ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಕೋಟ: ಉಡುಪಿ ಜಿಲ್ಲೆಯ ರಾಷ್ಟ್ರಿಯ ಹೆದ್ದಾರಿ-೬೬ರಲ್ಲಿ ಅಳವಡಿಸಿರುವ ಕನ್ನಡ ಫಲಕಗಳಲ್ಲಿರುವ ಪದಗಳ ತಪ್ಪು ಬಳಕೆ ಸರಿಪಡಿಸುವಂತೆ ಹಾಗೂ ಸ್ಥಳೀಯರಿಗೆ ಉದ್ಯೋಗ ನೀಡುವಂತೆ ಆಗ್ರಹಿಸಿ ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ನೇತೃತ್ವದಲ್ಲಿ ಸಾಸ್ತಾನ ಸುಂಕ ಸಂಗ್ರಹಣಾ ಕೇಂದ್ರದಲ್ಲಿ ಪ್ರತಿಭಟನೆ ನಡೆಯಿತು. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ನೀಲಾವರ ಸುರೇಂದ್ರ ಅಡಿಗ, ಗೌರವ ಕಾರ್ಯದರ್ಶಿ ಸುಬ್ರಹ್ಮಣ್ಯ ಶೆಟ್ಟಿ, ನರೇಂದ್ರಕುಮಾರ್ ಕೋಟ ಸೇರಿದಂತೆ ಪರಿಷತ್ತಿನ ತಾಲೂಕು, ಹೋಬಳಿ ಪದಾಧಿಕಾರಿಗಳು, ಸಂಘಸಂಸ್ಥೆಗಳ ಪ್ರಮುಖರು ಪ್ರತಿಭಟನೆಗೆ ಸಾಥ್ ನೀಡಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಗುರುಕುಲ ಪಬ್ಲಿಕ್ ಶಾಲೆಯ ಪೂರ್ವ ಪ್ರಾಥಮಿಕ ಮಕ್ಕಳು ಕ್ರಿಸ್‌ಮಸ್ ಡೇ ಯನ್ನು ಸಂಭ್ರಮದಿಂದ ಆಚರಿಸಿದರು. ಕ್ರಿಸ್‌ಮಸ್ ಹಬ್ಬದ ಪ್ರಯುಕ್ತ ಹಬ್ಬವನ್ನು ಪ್ರತಿಬಿಂಬಿಸುವ ಎಲ್ಲಾ ವಸ್ತುಗಳನ್ನು ಇಟ್ಟು ಅಲಂಕರಿಸಲಾಗಿತ್ತು. ಹಬ್ಬಗಳು ಸಾಮರಸ್ಯದ ಬದುಕಿಗೆ ಹೇಗೆ ಪೂರಕವಾಗಿರಬೇಕು ಎನ್ನುವುದರ ಜೊತೆಗೆ ಕ್ರಿಸ್‌ಮಸ್ ಹಬ್ಬವು ಮಾನವೀಯ ಗುಣಗಳನ್ನು ಉದ್ದೀಪಗೊಳಿಸುವ ಪರಸ್ಪರ ಪ್ರೀತಿ,ಶಾಂತಿ, ಸಮಾನತೆಯನ್ನು ಸಾರುವುದರ ಜೊತೆಗೆ ಪರಿಸರ ರಕ್ಷಣೆ, ಪ್ರಾಣಿ, ಪಕ್ಷಿಗಳ ಸಂರಕ್ಷಣೆ ನಮ್ಮ ಧ್ಯೇಯವಾಗಿರಬೇಕು, ಎನ್ನುವ ಮಾಹಿತಿಯ ಜೊತೆಗೆ ಏಸುವಿನ ಜನನ ಮತ್ತು ಜೀವನ ಹಾಗೂ ಅವರು ಸಾರಿದ ಸಂದೇಶಗಳ ಮಹತ್ವವನ್ನು ಮಕ್ಕಳಿಗೆ ವಿಸ್ತಾರವಾಗಿ ಶಿಕ್ಷಕಿಯರು ವಿವರಿಸಿದರು. ನಂತರ ಪುಟಾಣಿಮಕ್ಕಳಿಗೆ ಸಿಹಿ ಹಂಚುವ ಮೂಲಕ ಈ ದಿನವನ್ನು ಅರ್ಥಪೂರ್ಣಗೊಳಿಸಲಾಯಿತು. ಈ ಸಂದರ್ಭದಲ್ಲಿ ಬಾಂಡ್ಯ ಶಿಕ್ಷಣ ಸಂಸ್ಥೆಯ ಕಾರ್ಯ ನಿರ್ವಾಹಕಿ ಅನುಪಮಾ ಎಸ್. ಶೆಟ್ಟಿ, ಪ್ರಾಂಶುಪಾಲರಾದ ಶಾಯಿಜು ಕೆ. ಆರ್. ನಾಯರ್ ಹಾಗೂ ಎಲ್ಲಾ ಶಿಕ್ಷಕಿಯರು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ/ಬೈಂದೂರು: ಹೋಲಿಕ್ರಾಸ್ ಚರ್ಚ್‌ನಲ್ಲಿ ಯೇಸುವಿನ ಜನ್ಮದಿನ ಕ್ರಿಸ್ಮಸ್ ಆಚರಣೆಯನ್ನು ಸಂಭ್ರಮ ಸಡಗರದಿಂದ ಆಚರಿಸಲಾಯಿತು. ತಾಲೂಕಿನ ಕುಂದಾಪುರ ಹೊಲಿಕ್ರಾಸ್ ಚರ್ಚ್, ಬಸ್ರೂರು ಫಿಲೀಪ್ ನೇರಿ ಚರ್ಚ್, ತ್ರಾಸಿ ಕ್ರಿಸ್ಟ್‌ಕಿಂಗ್ ಚರ್ಚ್, ಗಂಗೊಳ್ಳಿ ಅವರ್ ಲೇಡಿ ಆಫ್ ಇಮ್ಯಾಕ್ಯೂಲೇಟ್ ಚರ್ಚ್, ತಲ್ಲೂರು, ಬೆಳ್ವೆ ಜೊಸೆಫ್ ಚರ್ಚ್, ಫ್ರಾನ್ಸಿಸ್ ಆಸಿಸಿ ಚರ್ಚ್, ಬೈಂದೂರು ಹೊಲಿಕ್ರಾಸ್ ಚರ್ಚ್‌ಗಳಲ್ಲಿ ಹಾಗೂ ಕ್ರೈಸ್ತ ಸಮುದಾಯದಲ್ಲಿ ಕ್ರಿಸ್ಮಸ್ ಸಂಭ್ರಮ ಮನೆಮಾಡಿದೆ. ಚರ್ಚ್‌ಗಳಿಗೆ ಕುಟುಂಬ ಸಮೇತ ತೆರಳಿದ ಕ್ರೈಸ್ತರು, ಯೇಸು ಕ್ರಿಸ್ತನ ಶೀಲುಬೆ ಮುಂದೆ ನಿಂತು ಶ್ರದ್ದಾ ಭಕ್ತಿಯಿಂದ ಪ್ರಾರ್ಥನೆ ಸಲ್ಲಿಸಿದರು. ಚರ್ಚ್‌ನ ಆವರಣದಲ್ಲಿ ನಿರ್ಮಿಸಿರುವ ಕಣ್ಮನ ಸೆಳೆಯುವ ಗೋದಲಿಗಳು ವಿದ್ಯುತ್ ದೀಪಾಲಂಕಾರ ಗಮನ ಸೆಳೆಯುತ್ತಿದ್ದವು. ಕ್ರೈಸ್ತರ ಮನೆಗಳಲ್ಲಿ ಸಂಭ್ರಮ ಮನೆಮಾಡಿದ್ದು, ಗೋದಲಿ, ದೀಪಾಲಂಕಾರಗಳಿಂದ ಕಂಗೊಳಿಸುತ್ತಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ ಎಸ್.ಡಿ.ಎಂ ಪದವಿ ಪೂರ್ವ ಕಾಲೇಜು ಉಜಿರೆ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ರಾಜ್ಯ ಮಟ್ಟದ ಬಾಲಕರ ವಾಲಿಬಾಲ್ ಪಂದ್ಯಾಟದಲ್ಲಿ ಉಡುಪಿ ಜಿಲ್ಲೆಯನ್ನು ಪ್ರತಿನಿಧಿಸಿದ ಬ್ಯಾರೀಸ್ ಪಿಯು ಕಾಲೇಜು ಕೋಡಿ ಕುಂದಾಪುರ ದ್ವಿತೀಯ ಸ್ಥಾನ ಪಡೆದು ಮಹಮ್ಮದ್ ಹಯಾಜ್ ಹಿಮಾಚಲ ಪ್ರದೇಶದಲ್ಲಿ ನಡೆಯುವ ರಾಷ್ಟ್ರ ಮಟ್ಟದ ವಾಲಿಬಾಲ್ ಪಂದ್ಯಾಟಕ್ಕೆ ಆಯ್ಕೆಯಾಗಿರುತ್ತಾರೆ. ಇವರನ್ನು ಪದವಿ ಪೂರ್ವ ಕಾಲೇಜಿನ ದೈಹಿಕ ಶಿಕ್ಷಣ ಉಪನ್ಯಾಸಕರಾದ ಪ್ರೀತೇಶ್ ಶೆಟ್ಟಿ ಗುಲ್ವಾಡಿ, ಇಲಿಯಾಸ್ ಹಾಗೂ ಜಫ್ ಸನ್ನಿ ಡಿಸೋಜಾ ಇವರು ತರಬೇತಿ ಗೊಳಿಸಿರುತ್ತಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ರೋಟರಿ ಸದಸ್ಯನಾದ ಮೇಲೆ ಸಮಾಜ ಮುಖಿ ಸೇವೆ ಮಾಡುವಲ್ಲಿ ಯಾವುದೇ ಹಿಂಜರಿಕೆ ಬೇಡ, ರೋಟರಿಯಲ್ಲಿ ತನ್ನ ಬದ್ದತೆಯನ್ನು ತೋರ್ಪಡಿಸುವಲ್ಲಿ ಸಮಾಜ ಮುಖಿ ಕೆಲಸಗಳಲ್ಲಿ ತೊಡಗಿಸಿಕೊಳ್ಳಬೇಕಾದ್ದು ಅಗತ್ಯ ಮತ್ತು ಅನಿವಾರ್ಯ. ಈ ನಿಟ್ಟಿನಲ್ಲಿ ಮಾಡುವ ಸೇವೆಯಲ್ಲಿ ಆರ್ಥಿಕ ಮಟ್ಟದ ಬೇಧ ನೋಡದೆ, ದುಬಾರಿ ಸೇವೆಯೊಂದಿಗೆ ಮಿತ ಖರ್ಚಿನ ಸೇವೆ ಮಾಡಲು ಯಾವುದೇ ಹಿಂಜರಿಕೆ ಬೇಡ ಎಂದು ರೋಟರಿ ಸದಸ್ಯರಿಗೆ ಕರೆ ನೀಡಿದರು. ಅವರು ಇತ್ತೀಚೆಗೆ ನಡೆದ ರೋಟರಿ ಕ್ಲಬ್ ಕುಂದಾಪುರ ಸನ್‌ರೈಸ್‌ನ ಕುಟುಂಬ ಸಮ್ಮಿಲನ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ರೋಟರಿ ಸನ್‌ರೈಸ್ ಅಧ್ಯಕ್ಷರಾದ ಕೆ. ನರಸಿಂಹ ಹೊಳ್ಳರು ಈ ರೋಟರಿ ವರ್ಷದಲ್ಲಿ ಸಾಂಸ್ಕೃತಿಕ ಸ್ಪರ್ಧೆಯ ವಲಯ ಚಾಂಪಿಯನ್‌ಶಿಪ್ ಪಡೆದ ಮತ್ತು ವಲಯ ಕ್ರೀಡಾಕೂಟದಲ್ಲಿ ೧೭ಕ್ಕೂ ಮಿಕ್ಕಿ ಬಹುಮಾನ ಗಳಿಸಿದ ಕ್ಲಬ್‌ನ ಸದಸ್ಯರನ್ನು, ಅವರ ಕುಟುಂಬಿಕರಿಗೂ ಗೌರವ ಪೂರ್ವಕ ಕೃತಜ್ಞತೆ ಸಲ್ಲಿಸಿದರು. ಆನ್ಸ್ ಕ್ಲಬ್ ಅಧ್ಯಕ್ಷರಾದ ಶೀಲಾ ಚಂದ್ರಶೇಖರ್, ಆನ್ಸ್ ಕ್ಲಬ್…
ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ಸಂಸ್ಕೃತ ಭಾಷೆಯು ಜಗತ್ತಿನ ಅತ್ಯಂತ ಪುರಾತನವಾದ ಭಾಷೆಗಳಲ್ಲಿ ಒಂದಾಗಿದೆ. ಸಂಸ್ಕೃತ ಭಾಷೆಯು ಹಲವು ಭಾಷೆಗಳಿಂದ ಕಟ್ಟಲ್ಪಟ್ಟಿದ್ದು, ಈ ಭಾಷೆಯಲ್ಲಿರುವ ಜ್ಞಾನ ಜಗತ್ತಿನ ಯಾವ ವಿಜ್ಞಾನಿಗಳ ತಲೆಯಲ್ಲಿಯೂ ಇಲ್ಲ. ಯಾವುದೇ ಭಾಷೆ ವ್ಯವಹಾರದಲ್ಲಿ ಇಲ್ಲದಿರುವಾಗ ಆ ಭಾಷೆ ಜನರಿಂದ ದೂರ ಸರಿಯುತ್ತದೆ. ಪ್ರಸ್ತುತ ಸಂಸ್ಕೃತ ಭಾಷೆ ಹೆಚ್ಚು ಪ್ರಚಲಿತದಲ್ಲಿರದಿರುವುದು ಈ ಭಾಷೆಯ ಬೆಳವಣಿಗೆಗೆ ಹಿನ್ನಡೆಯಾಗಿದೆ ಎಂದು ನಿವೃತ್ತ ಉಪನ್ಯಾಸಕ ಕೋ.ಶಿವಾನಂದ ಕಾರಂತ ಹೇಳಿದರು. ಅವರು ಗಂಗೊಳ್ಳಿ ಸೇವಾ ಸಂಗಮ ನಿವೇದಿತಾ ಶಿಶು ಮಂದಿರದ ಆಶ್ರಯದಲ್ಲಿ ಶಿಶು ಮಂದಿರದ ನಗರ ಜಯವಂತ ನಾಯಕ್ ಸಭಾಭವನದಲ್ಲಿ ಆಯೋಜಿಸಲಾಗಿರುವ ೧೦ ದಿನಗಳ ಸಂಸ್ಕೃತ ಸಂಭಾಷಣಾ ಶಿಬಿರ ಉದ್ಘಾಟಿಸಿ ಮಾತನಾಡಿದರು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ದಿಪುಲ್ ರಾಯ್ ಮಾತನಾಡಿ, ಸಂಸ್ಕೃತ ಭಾರತಿಯು ದೇಶಾದ್ಯಂತ ಸಂಸ್ಕೃತ ಭಾಷೆಯನ್ನು ಪಸರಿಸುವ ಕೆಲಸ ಮಾಡುತ್ತಿದೆ. ಸಂಸ್ಕೃತ ಭಾಷೆಯನ್ನು ಅಧ್ಯಯನ ಮಾಡಿ, ಈ ಭಾಷೆಯನ್ನು ವ್ಯವಹಾರದಲ್ಲಿ ಬಳಕೆಯಾಗುವಂತೆ ಮಾಡಬೇಕಾಗಿದೆ. ಹೀಗಾಗಿ ಉಡುಪಿ ಜಿಲ್ಲೆಯಲ್ಲಿ ವಿವಿಧೆಡೆ ಸಂಸ್ಕೃತ ಸಂಭಾಷಣಾ…
