Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ| ಕುಂದಾಪುರ ತಾಲೂಕಿನ ಬಂಟ್ವಾಡಿಯಲ್ಲಿ ನದಿಗೆ ಕಟ್ಟಲಾಗಿರುವ ವೆಂಟೆಡ್ ಡ್ಯಾಂ ಮೋಡ ಮುಸುಕಿದ ವಾತಾವರಣದಲ್ಲಿ ಕಂಡದ್ದು ಹೀಗೆ. ಚಿತ್ರ: ಚಂದ್ರ ಕೆ. ಹೆಮ್ಮಾಡಿ

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಗೌಡ ಸಾರಸ್ವತ ಬ್ರಾಹ್ಮಣ ಸಮಾಜದ ಉಪ್ಪುಂದ ಶ್ರೀ ಲಕ್ಷ್ಮೀವೆಂಕಟರಮಣ ದೇವರ ದಿವ್ಯ ಸನ್ನಿಧಿಯಲ್ಲಿ ಸರ್ವ ಭಜಕವೃಂದ ಹಾಗೂ ಲೋಕಕಲ್ಯಾಣಾರ್ಥವಾಗಿ ಪ್ರಪ್ರಥಮ ಬಾರಿಗೆ ಮೇ.21ರ ಸಂಜೆ 6:46ರ ಗೊಧೋಳಿ ಲಗ್ನ ಶುಭ ಮುಹೂರ್ತದಲ್ಲಿ ಶ್ರೀ ಶ್ರೀನಿವಾಸ ಕಲ್ಯಾಣೋತ್ಸವ ನಡೆಯಲಿದೆ. ಶ್ರೀನಿವಾಸ ಕಲ್ಯಾಣೋತ್ಸವದ ಧಾರ್ಮಿಕ ಕ್ರಿಯಾಚರಣೆ ಅಂಗವಾಗಿ ಬೆಳಿಗ್ಗೆ ೭ಕ್ಕೆ ಉಭಯ ದೇವರಿಗೆ ಪೂಜೆಯ ನಂತರ ನಗರೋತ್ಸವ ಶ್ರೀನಿವಾಸ ಪದ್ಮಾವತಿ ದೇವರ ಆಗಮನ, ಸೀಮಂತ ಪೂಜೆ, ಸಾಮೂಹಿಕ ಕುಂಕುಮಾರ್ಚನೆ ಹಾಗೂ ಶ್ರೀವೆಂಕಟರಮಣ ಭಜನಾ ಮಂಡಳಿ ಮೂಡಬಿದಿರೆ ಇವರಿಂದ ಭಕ್ತಿಸಂಗೀತ ನಡೆಯಲಿದೆ. ಸಾಯಂಕಾಲ ವೇದಿಕೆಗೆ ಶ್ರೀ ವೆಂಕಟರಮಣನ ಆಗಮನ, ವಧೂ ನಿರೀಕ್ಷಣೆ, ಶ್ರೀ ಪದ್ಮಾವತಿಯ ಆಗಮನ, ಸ್ವಯಂವರ ಕಾರ್ಯ, ಅರಶಿನ-ಕುಂಕುಮ ಸಮರ್ಪಣೆ, ಧಾರೆಮಣಿ ಕಟ್ಟುವಿಕೆ, ಶ್ರೀನಿವಾಸ ದೇವರಿಗೆ ಮಧುಪರ್ಕ ಸಮರ್ಪಣೆ, ಮಹೂರ್ತ ನಿರೀಕ್ಷೆ, ಮಾಲಾಧಾರಣೆ, ಕನ್ಯಾದಾನ, ಕಂಕಣ, ಮಂಗಲಸೂತ್ರ ಧಾರಣೆ, ಚಿನ್ನಾಭರಣಾಧಿ ಕಪ್ಪ-ಕಾಣಿಕೆಗಳ ಸಮರ್ಪಣೆ, ಅಗ್ನಿ ಪ್ರತಿಷ್ಟಾಪೂರ್ವಕ ಪ್ರಧಾನ ಹೋಮ, ಪ್ರಸನ್ನ ಪೂಜೆ, ಅಷ್ಟಾವಧಾನ ಸೇವೆಗಳ ಬಳಿಕ ಕಲ್ಯಾಣೋತ್ಸವದ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ,ಮೇ12: ಕುಂದಾಪುರದ ಏಕೈಕ ಸಿತಾರ್ ವಿದ್ವಾನ್, ಅವಿನಾಶ್ ಮೆಡಿಕಲ್ಸ್ ನ ಪಾಲುದಾರ ಅವಿನಾಶ್ ಹೆಬ್ಬಾರ್(44) ಇಂದು ಸಂಜೆ ಹೃದಯಾಘಾತದಿಂದ ನಿಧನರಾಗಿದ್ದಾರೆ. ಆರೋಗ್ಯದಲ್ಲಿ ಅಸಮತೋಲನ  ಕಾಣಿಸಿಕೊಂಡು ಆದರ್ಶ ಆಸ್ಪತ್ರೆಗೆ ದಾಖಲಾಗಿದ್ದ ಅವರು ಅಲ್ಲಿಯೇ ಕೊನೆಯುಸಿರೆಳೆದಿದ್ದಾರೆ. ಸರಳ, ಸಜ್ಜನಿಕೆಯ ವ್ಯಕ್ತಿತ್ವದ ಮೂಲಕ ಜನಾನುರಾಗಿಯಾಗಿದ್ದ ಅವಿನಾಶ್ ಹೆಬ್ಬಾರ್ ಅವರು ಶಾಸ್ತ್ರೀಯ ಸಂಗೀತದಲ್ಲಿ ಅಪಾರ ಒಲವುಳ್ಳವರಾಗಿದ್ದರು.  ಅಪರೂಪದ ಸಿತಾರ್ ವಾದಕರಾಗಿ ಹಲವೆಡೆ ಸಂಗೀತ ಕಛೇರಿಗಳನ್ನು ನೀಡಿ ಅಪಾರ ಜನಮನ್ನಣೆ ಗಳಿಸಿದ್ದರು. ಕುಂದಾಪುರ ಸಂಗೀತ ಭಾರತಿ ಟ್ರಸ್ಟ್‌ನ ವಿಶ್ವಸ್ಥರಾಗಿ, ರೋಟರ್ಯಾಕ್ಟ್ ಅಧ್ಯಕ್ಷರಾಗಿ, ರೋಟರಿ ಕುಂದಾಪುರದ ಮಾಜಿ ಕಾರ್ಯದರ್ಶಿಯಾಗಿ, ಕಲಾಕ್ಷೇತ್ರ ಕುಂದಾಪುರ ಸಂಸ್ಥೆಯಲ್ಲಿ ಸಕ್ರೀಯರಾಗಿ ಹತ್ತು ಹಲವು ಸಂಘ ಸಂಸ್ಥೆಗಳಲ್ಲಿ ಸಕ್ರೀಯವಾಗಿ ತೊಡಗಿಸಿಕೊಂಡಿದ್ದರು. ತಂದೆಯೊಂದಿಗೆ ಸಂಗೀತ ಭಾರತಿ ಟ್ರಸ್ಟ್ ಮೂಲಕ ಕಾರ್ಯಕ್ರಮಗಳನ್ನು ಸಂಘಟಿಸಿ ಕುಂದಾಪುರಕ್ಕೆ ಹಲವು ಸಂಗೀತ ವಿದ್ವಾಂಸರನ್ನು ಕರೆಯಿಸುವಲ್ಲಿ ಶ್ರಮಿಸಿದ್ದರು. ಅವಿನಾಶ್ ಮೆಡಿಕಲ್ಸ್, ಹುಣ್ಸಮಕ್ಕಿಯಲ್ಲಿ ರಬ್ಬರ್ ಕೃಷಿ ಹಾಗೂ ಇನ್ನಿತರ ಉದ್ಯಮಗಳನ್ನು ತೊಡಗಿಕೊಂಡಿದ್ದರೂ ಸಮಾಜ ಸೇವೆಯಲ್ಲಿ ಮುಂಚೂಣಿಯಲ್ಲಿದ್ದರು. ಮೇ.15ರಂದು ಉಪ್ಪಿನಕುದ್ರು ಗೊಂಬೆಮನೆಯಲ್ಲಿ ಸ್ವತಃ ಸಂಗೀತ…

Read More

ಕುಂದಾಪ್ರ ಡಾಟ್ ಕಾಂ ವರದಿ ಕುಂದಾಪುರ: ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಅತ್ಯುನ್ನತ ಸೇವೆ ಸಲ್ಲಿಸುತ್ತಿರುವವರನ್ನು ಗುರುತಿಸಿ ನೀಡಲಾಗುತ್ತಿರುವ ಪ್ರತಿಷ್ಠಿತ ಆರ್ಯಭಟ ಅಂತಾರಾಷ್ಟ್ರೀಯ ಪ್ರಶಸ್ತಿಯು ಕುಂದಾಪುರ ತಾಲೂಕಿನ ಗೊಳಿಹೊಳೆ ಗ್ರಾಮ ಚುಚ್ಚಿಯ ದೀಪಕ್ ಶೆಟ್ಟಿ ಅವರಿಗೆ ಲಭಿಸಿದೆ. ಪ್ರಸ್ತತ ಕತಾರ್‌ನಲ್ಲಿ ವಾಸಿಸುತ್ತಿರುವ ದೀಪಕ್ ಶೆಟ್ಟಿ ಅವರ ಸಾಮಾಜಿಕ ರಂಗದ ಸೇವೆಯನ್ನು ಗುರುತಿಸಿ ಪ್ರಶಸ್ತಿಗೆ ಆಯ್ಕೆಮಾಡಲಾಗಿದೆ. ಕರ್ನಾಟಕ ಸಂಘ ಕತಾರ್‌ನ ಸಲಹಾ ಸಮಿತಿ ಅಧ್ಯಕ್ಷರಾಗಿರುವ ದೀಪಕ್ ಶೆಟ್ಟಿ, 2013-15ರ ಸಾಲಿನಲ್ಲಿ ಕತಾರ್ ಕರ್ನಾಟಕ ಸಂಘದ ಅಧ್ಯಕ್ಷರಾಗಿ, ಅದಕ್ಕೂ ಹಿಂದಿನ ಅವಧಿಯಲ್ಲಿ ಸಂಘದ ಕಾರ್ಯದರ್ಶಿಯಾಗಿ, ಕ್ರೀಡಾ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದರು. ಕಳೆದ ಒಂದು ದಶಕಗಳಿಂದ ಕತಾರಿನಲ್ಲಿ ನೆಲೆಸಿರುವ ಇವರು ಉದ್ಯೋಗದೊಂದಿಗೆ ತುಳುಕೂಟ, ಬಂಟರ ಸಂಘ, ಭಾರತೀಯ ಸಾಂಸ್ಕ್ರತಿಕ ಕೇಂದ್ರ, ಇಂಡಿಯನ್ ಕಮ್ಯುನಿಟಿ ಬೆನವೊಲಂಟ್ ಪೋರಮ್ ಮುಂತಾದ ಸಂಘ-ಸಂಸ್ಥೆಗಳಲ್ಲಿ ಸಕ್ರೀಯವಾಗಿ ಗುರುತಿಸಿಕೊಂಡವರು. ಕುಂದಾಪ್ರ ಡಾಟ್ ಕಾಂ. ಬಡ ಮಕ್ಕಳ ಹೃದಯ ಚಿಕಿತ್ಸೆಗೆ ಸಹಕಾರ, ಶಾಲೆ, ಬಡ ವಿದ್ಯಾರ್ಥಿಗಳ ವಿಧ್ಯಾಭ್ಯಾಸಕ್ಕೆ ಸಹಾಯ ಧನ ಹೀಗೆ ಹಲವು ತೆರನಾಗಿ ಸಾಮಾಜಿಕ,…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ನಿಟ್ಟೆ ಇಂಜಿನಿಯರಿಂಗ್ ಕಾಲೇಜಿನ ಕಂಪ್ಯೂಟರ್ ಸೈನ್ಸ್ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದ ಕುಂದಾಪುರ ತಾಲೂಕಿನ ಜಪ್ತಿಯ ಅನುರಾಧ (೨೩) ಎಂಬ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾದ ಘಟನೆ ವರದಿಯಾಗಿದೆ. ಕಾಲೇಜಿನ ಹಾಸ್ಟೆಲ್‌ನಲ್ಲಿ ಯಾರೂ ಇಲ್ಲದ ಸಂದರ್ಭ ತಾನಿದ್ದ ಕೊಠಡಿಗೆ ಬಾಗಿಲು ಹಾಗಿಕೊಂಡು ಫ್ಯಾನಿಗೆ ನೇಣು ಬಿಗಿದುಕೊಂಡಿದ್ದಾಳೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಜಪ್ತಿಯ ಜನತಾ ಕಾಲೋನಿಯ ನಿವಾಸಿ ಎಂದು ತಿಳಿದು ಬಂದಿದೆ. ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ದೇವಾಲಗಳು ಮನುಷ್ಯ ಹಾಗೂ ದೇವರ ಸಂಪರ್ಕ ಮಾರ್ಗವಿದ್ದಂತೆ. ಅದು ಸ್ವರ್ಗದ ದಾರಿಯನ್ನು ತೆರೆದಿಡುತ್ತದೆ. ಆದರೆ ಆ ದಾರಿಯಲ್ಲಿ ನಡೆಯಲು ಶುದ್ಧ ಮನಸ್ಸು ಹಾಗೂ ಶ್ರದ್ಧೆ ಇರಬೇಕು ಎಂದು ಉಡುಪಿ ಧರ್ಮ ಪ್ರಾಂತ್ಯದ ಬಿಶಪ್ ಅತಿ ವ| ಡಾ. ಜೆರಾಲ್ಡ್ ಐಸಾಕ್ ಲೋಬೊ ಹೇಳಿದರು. ತಲ್ಲೂರಿನಲ್ಲಿ ನೂತನವಾಗಿ ನಿರ್ಮಿಸಲಾಗಿರುವ ನಕ್ಷತ್ರಾಕಾರದ ಸಂತ ಫ್ರಾನ್ಸಿಸ್ ಅಸ್ಸಿಸ್ ಚರ್ಚ್ ಲೊಕಾರ್ಪಣೆಗೊಳಿಸಿ ಪವಿತ್ರ ಬಲಿಪೂಜೆಯನ್ನು ನೆರವೇರಿಸಿದ ಬಳಿಕ ಅವರು ಸಂದೇಶವಿತ್ತರು. ೪೦ ಕ್ಕೂ ಅಧಿಕ ಧರ್ಮಗುರುಗಳು ಮತ್ತು ಸಹಸ್ರಾರು ಭಕ್ತಾಧಿಗಳೊಂದಿಗೆ ಪವಿತ್ರ ಬಲಿದಾನದಲ್ಲಿ ಪಾಲ್ಗೊಂಡಿದ್ದರು. ಸಭಾ ಕಾರ್ಯಕ್ರಮದಲ್ಲಿ ಉಡುಪಿ ಜಿಲ್ಲೆಯ ಉಸ್ತುವಾರಿ ಸಚಿವರಾದ ಸಚಿವ ವಿನಯ ಕುಮಾರ್ ಸೊರಕೆಯವರೊಡನೆ ಬಿಷಪರು ಗಿಡನೆಟ್ಟು ಮಾತನಾಡಿ ಸಂತ ಫ್ರಾನ್ಸಿಸ್ ಅಸಿಸಿ ಅವರ ಪರಿಸರ ಕಾಳಜಿ ಇಂದಿಗೂ ಸ್ಮರಣೀಯ. ಕ್ಯಾಥೋಲಿಕ್ ಧರ್ಮಗುರುಗಳು ಚರ್ಚ್‌ನೊಂದಿಗೆ ಶಾಲೆಗಳನ್ನು ನಿರ್ಮಿಸಿ ನಿಸ್ವಾರ್ಥ ಸೇವೆಗೈಯುವುದು ಶ್ಲಾಘನೀಯ ಎಂದರು. ಬೈಂದೂರು ಶಾಸಕ ಗೋಪಾಲ ಪೂಜಾರಿ ಇಗರ್ಜಿಯ ಸ್ಮಾರಕ ಪುರವಣಿಗೆಯನ್ನು ಉದ್ಘಾಟಿಸಿದರು. ವಲಯ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಸಾಂಪ್ರದಾಯಿಕ ಶಿಕ್ಷಣದಲ್ಲಿ ಶಿಕ್ಷಕರ ಬೋಧನಾ ನಿರ್ವಹಣೆ ಸರಳ ಸ್ವರೂಪದ್ದಾಗಿರುತ್ತದೆ. ಅವರಿಗೆ ಸಿದ್ಧ ಪಠ್ಯ ಮತ್ತು ಸ್ವೀಕೃತ ಕಲಿಕಾ-ಬೋಧನಾ ವಿಧಾನದ ನೆರವು ಇರುತ್ತದೆ. ಆದರೆ ಬುಡಕಟ್ಟು ಮಕ್ಕಳಿಗೆ ಅವರ ಬದುಕಿನ ವಿಧಾನಗಳನ್ನೇ ಆಕರವಾಗಿ ಬಳಸಬೇಕಾಗಿರುವುದರಿಂದ ಅವರ ಶಿಕ್ಷಕರಿಗೆ ಅದು ದೊಡ್ಡ ಸವಾಲಾಗಿ ಪರಿಣಮಿಸುತ್ತದೆ. ಅದಕ್ಕೆ ವಿಶೇಷ ಸಾಮರ್ಥ್ಯ ಅಗತ್ಯ. ಆ ಸಾಮರ್ಥ್ಯ ಪ್ರಸಕ್ತ ತರಬೇತಿಯಲ್ಲಿ ಅವರು ಸಂಪಾದಿಸಲಿ ಎಂದು ನಿವೃತ್ತ ಉಪನ್ಯಾಸಕ ಎಸ್. ಜನಾರ್ದನ ಮರವಂತೆ ಆಶಿಸಿದರು. ಇಂಡಿಯ ಫೌಂಡೇಶನ್ ಫಾರ್ ಆರ್ಟ್ಸ್ ಟೈಟನ್ ಕಂಪನಿಯ ಪ್ರಾಯೋಜಕತ್ವದಲ್ಲಿ ಕನ್ಯಾನದ ನಮ್ಮಭೂಮಿಯಲ್ಲಿ ನಡೆಸುತ್ತಿರುವ ನಾಲ್ಕು ದಿನಗಳ ’ಪಠ್ಯಕ್ರಮದಲ್ಲಿ ಸ್ಥಳೀಯ ಸಂವೇದನೆಗಳ ಸಮನ್ವಯ’ ಕುರಿತಾದ ’ಕಲಿ-ಕಲಿಸು’ ತರಬೇತಿ ಶಿಬಿರವನ್ನು ಅವರು ಉದ್ಘಾಟಿಸಿದ ಬಳಿಕ ಮಾತನಾಡಿದರು. ಆರಂಭಿಕ ನುಡಿಗಳನ್ನಾಡಿದ ಶಿಬಿರದ ನಿರ್ದೇಶಕ, ಫೌಂಡೇಶನ್‌ನ ಕಲಾ ಶಿಕ್ಷಣ ವಿಭಾಗದ ಕಾರ್ಯಕ್ರಮ ನಿರ್ವಾಹಕ ಟಿ. ಎನ್. ಕೃಷ್ಣಮೂರ್ತಿ ’ಕಲಿ-ಕಲಿಸು’ ತರಬೇತಿಯ ವಿನ್ಯಾಸವನ್ನು ವಿವರಿಸಿದರು. ಮೈಸೂರು ಜಿಲ್ಲೆಯ ಬುಡಕಟ್ಟು ವಿದ್ಯಾರ್ಥಿಗಳು ಕಲಿಯುತ್ತಿರುವ ಶಾಲೆಗಳಲ್ಲಿ ದುಡಿಯುತ್ತಿರುವ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ತೀರ್ವ ಪೈಪೋಟಿಯಿರುವ ಇಂದಿನ ಆಧುನಿಕ ಯುಗದಲ್ಲಿ ಉದ್ಯೋಗವನ್ನು ಗಿಟ್ಟಿಸಿಕೊಳ್ಳುವುದು ದೊಡ್ಡ ಸವಾಲಾಗಿದೆ. ಇಂತಹ ಪೈಪೋಟಿಯ ಕಾಲದಲ್ಲಿಯೂ ಸಹ ನಾವು ಯಶಸ್ವಿಯಾಗಿ ಉದ್ಯೋಗ ಪಡೆದುಕೊಳ್ಳಲು ಅವಶ್ಯವಾಗಿ ರೂಪಿಸಿಕೊಳ್ಳಬೇಕಾದ ವ್ಯಕ್ತಿತ್ವ, ಸಂದರ್ಶನಕ್ಕೆ ಹಾಜರಾಗುವ ಕ್ರಮ, ವಿಷಯ ಮಂಡನೆಯ ರೀತಿ, ಸಮಯವನ್ನು ಸದುಪಯೋಗ ಪಡಿಸಿಕೊಳ್ಳುವ ಬಗೆಯ ಕುರಿತು ಮಂಗಳೂರಿನ ಶ್ರೀನಿವಾಸ ಇನ್ಸ್‌ಟ್ಯೂಟ್‌ನ ಪ್ರಾಧ್ಯಾಪಕ ಪ್ರೊ. ಸುಬ್ರಹ್ಮಣ್ಯ ಸಂದರ್ಶನದ ಪ್ರಾತ್ಯಕ್ಷಿಕೆಯನ್ನು ವಿದ್ಯಾರ್ಥಿಗಳಿಗೆ ತಿಳಿಸಿದರು. ಬೈಂದೂರಿನ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ಈ ಕಾರ‍್ಯಕ್ರಮವನ್ನು ಡಾ. ಉಮೇಶ್ ಮಯ್ಯ ಸಂಯೋಜಿಸಿದರು. ಕಾಲೇಜಿನ ಪ್ರಾಂಶುಪಾಲ ಪ್ರೊ.ಬಿ.ಎ ಮೇಳಿ ಉಪಸ್ಥಿತರಿದ್ದರು. ಅಂತಿಮ ಬಿ.ಕಾಂ ವಿದ್ಯಾರ್ಥಿನಿ ಕೆ.ಅಂಕಿತಾ ವಂದಿಸಿದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ : ಗ್ರಾಮ ಪಂಚಾಯತುಗಳು ಜನರ ಸಮಸ್ಯೆಗಳಿಗೆ ಸ್ಪಂದಿಸುವ ಕೇಂದ್ರಿಕೃತ ಸ್ಥಾನವಾಗಬೇಕು. ಜನರ ಸಮಸ್ಯೆಗಳಿಗೆ ಸ್ಪಂದಿಸುವುದರ ಜೊತೆಗೆ ಜನರ ಕೆಲಸಗಳನ್ನು ಸೂಕ್ತ ಸಮಯದಲ್ಲಿ ಮಾಡಿಕೊಟ್ಟಾಗ ಜನರಿಗೆ ಪಂಚಾಯತ್ ಮೇಲೆ ನಂಬಿಕೆ, ವಿಶ್ವಾಸ ಮೂಡಲು ಸಾಧ್ಯವಾಗುತ್ತದೆ. ಗ್ರಾಮ ಪಂಚಾಯತ್ ಸದಸ್ಯರು ಪಕ್ಷಬೇಧ ಮರೆತು ಗ್ರಾಮದ ಸರ್ವಾಂಗೀಣ ಅಭಿವೃದ್ಧಿ ಬಗ್ಗೆ ಚಿಂತನೆ ನಡೆಸಬೇಕು ಎಂದು ಬೈಂದೂರು ಶಾಸಕ ಕೆ.ಗೋಪಾಲ ಪೂಜಾರಿ ಹೇಳಿದರು. ಅವರು ಗಂಗೊಳ್ಳಿ ಗ್ರಾಮ ಪಂಚಾಯತ್‌ನ ನೂತನ ಕಾರ್ಯಾಲಯ ಕಟ್ಟಡ ಉದ್ಘಾಟಿಸಿ ಮಾತನಾಡಿದರು. ಪಂಚಾಯತ್‌ನಲ್ಲಿ ಮುಂದಿನ ಐದು ವರ್ಷದ ಯೋಜನೆ ರೂಪಿಸಬೇಕು. ಅಭಿವೃದ್ಧಿ ನೀಲಿನಕ್ಷೆಯನ್ನು ತಯಾರಿಸಿ ಜನಪ್ರತಿನಿಧಿಗಳ ಮೂಲಕ ಯೋಜನೆ ಕಾರ್ಯರೂಪಕ್ಕೆ ಬರಲು ಶ್ರಮಿಸಬೇಕು. ಅನುದಾನ ಹಂಚಿಕೊಳ್ಳುವ ಪದ್ಧತಿಯನ್ನು ತೆಗೆದುಹಾಕಿ, ಗ್ರಾಮದ ಅಭಿವೃದ್ಧಿಗೆ ಅನುದಾನವನ್ನು ಸಮರ್ಪಕವಾಗಿ ಬಳಸಿಕೊಳ್ಳಲು ಪ್ರಯತ್ನಿಸಬೇಕು ಎಂದರು. ಜನಸಂಖ್ಯೆ ಕಡಿಮೆ ಇರುವ ಕಾರಣಕ್ಕೆ ಗಂಗೊಳ್ಳಿ ಗ್ರಾಮ ಪಂಚಾಯತ್ ಪಟ್ಟಣ ಪಂಚಾಯತ್ ಆಗಿ ಮೇಲ್ದರ್ಜೆಗೇರಿಸಲು ಸರಕಾರ ಸಮ್ಮತಿ ಸೂಚಿಸಿಲ್ಲ. ಗಂಗೊಳ್ಳಿಯ ಮ್ಯಾಂಗನೀಸ್ ರಸ್ತೆಯನ್ನು ೫೪ ಲಕ್ಷ,…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ ಬೈಂದೂರು: ಭರತ ಖಂಡದ ಉದ್ದಗಲಕ್ಕೂ ಸಂಚರಿಸಿ ಧಾರ್ಮಿಕ ಮತ್ತು ಸಾಂಸ್ಕ್ರತಿಕ ತಳಹದಿಯಲ್ಲಿ ಸಮನ್ವಯತೆ, ಏಕತೆಯನ್ನು ಸಾಧಿಸುವಲ್ಲಿ ಶ್ರೀಶಂಕರ ಭಗವತ್ಪಾದರ ಕೊಡುಗೆ ಅಪಾರ. ಶಂಕರಾಚಾರ್ಯರ ಜನ್ಮ ದಿನವನ್ನು ಶ್ರದ್ಧೆ, ಭಕ್ತಿಯಿಂದ ಆಚರಿಸುವುದು ಅವರನ್ನು ಅವತಾರಿ ಪುರುಷರೆಂದು ದಿನನಿತ್ಯ ಅವರ ಸಾಧನೆಗಳನ್ನು ನೆನಪಿಸುವುದು ನಮ್ಮೆಲ್ಲರ ಕೃತಜ್ಞತೆಯ ದ್ಯೋತಕವಾಗಿದೆ ಎಂದು ಕರ್ನಾಟಕ ರಾಜ್ಯ ಶಂಕರ ತತ್ತ್ವ ಪ್ರಸಾರ ಅಭಿಯಾನಂನ ಸಂಚಾಲಕ ಡಾ. ಶಿಕಾರಿಪುರ ಕೃಷ್ಣಮೂರ್ತಿಯವರು ನುಡಿದರು. ಉಪ್ಪುಂದ ಶಂಕರ ಕಲಾ ಮಂದಿರದಲ್ಲಿ ನಡೆದ ಶ್ರೀಶಂಕರ ಅಷ್ಟೋತ್ತರ ಶತನಾಮಾವಳಿ ಜಪಯಜ್ಞ ಸಮರ್ಪಣಾ ಸಮಾರಂಭ ಉದ್ಘಾಟಿಸಿ ಮಾತನಾಡಿದರು. ನಮ್ಮ ಪೂರ್ವ ಪರಂಪರೆ ಮತ್ತು ಸಂಸ್ಕಾರ ವಿಶೇಷತೆಗಳ ಪರಿಚಯ ಮತ್ತು ಅನುಷ್ಠಾನಗಳಿಗಾಗಿ ತಳಮಟ್ಟದಲ್ಲಿ ಧರ್ಮಾಭಿಮಾನಿಗಳು ಸಂಘಟಿತರಾಗಿ ಕ್ರಿಯಾಶೀಲರಾಗುವುದು ಅವಶ್ಯ. ವೇದ ಸಾಹಿತ್ಯ, ದರ್ಶನ ಸಾಹಿತ್ಯ ಮತ್ತು ಆಚಾರ ಸಂಹಿತೆಗಳ ಪ್ರಸ್ತುತತೆ ಕುರಿತು ಚಿಂತನ-ಮಂಥನದಿಂದ ಪ್ರಜ್ಞಾವಂತ ಸಮಾಜದ ನಿರ್ಮಾಣ ಸಾಧ್ಯ ಎಂದರು. ಉಪ್ಪುಂದ ಚಂದ್ರಶೇಖರ ಹೊಳ್ಳ ಅಧ್ಯಕ್ಷತೆ ವಹಿಸಿದ್ದರು. ಉಪ್ಪುಂದದ ಸ್ವಗೃಹದಲ್ಲಿ ಹದಿಮೂರು ಶಾಖಂ ಋಕ್ ಸಂಹಿತಾ…

Read More