ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಉಪ್ಪುಂದ ಶಾಲೆಬಾಗಿಲಿನಲ್ಲಿ ಪ್ರಗತಿ ಸೌಹಾರ್ದ ಕ್ರೆಡಿಟ್ ಕೋ ಆಪರೇಟಿವ್ ಲೋಕಾರ್ಪಣೆಗೊಂಡಿತು. ಸಂಸದ, ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಸೌಹಾರ್ದವನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದರು. ಹೆಚ್ಚಿನ ಸುದ್ದಿಗಳು ಅಪ್ ಡೇಟ್ ಆಗಲಿದೆ.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ : ಅಧಿಕಾರ, ಶಿಕ್ಷಣ, ಆರ್ಥಿಕ ಸಬಲೀಕರಣ, ರಾಜಕೀಯ ಸಮಾನತೆ ಡಾ. ಅಂಬೇಡ್ಕರ್ ಆಶಯವಾಗಿತ್ತು. ರಾಜಕೀಯ ಲಾಭಕ್ಕಾಗಿ ಜಾತಿಗಳ ಒಡೆಯಲಾಗಿದೆ. ಒಡೆದ ಜಾತಿಗಳು ಮತ್ತೆ ಒಂದಾಗಿ ಆರ್ಥಿಕ, ರಾಜಕೀಯ, ಶಿಕ್ಷಣ ಮತ್ತು ಸಮಾನತೆ ಸಾಧಿಸುವ ಮೂಲಕ ಅಂಬೇಡ್ಕರ್ ಆಶಯ ಪೂರೈಸಬೇಕಾಗಿದೆ ಎಂದು ಚಿಕ್ಕಮಗಳೂರು ಬಿಎಸ್ಪಿ ರಾಜ್ಯ ಕಾರ್ಯದರ್ಶಿ ವೆಲಾಯುಧನ್ ಹೇಳಿದರು. ಕರ್ನಾಟಕ ದಲಿತ ಸಂಘರ್ಷ ಸಮಿತಿ ಉಡುಪಿ ಜಿಲ್ಲಾ ಸಮಿತಿ ಆಶ್ರಯದಲ್ಲಿ ಕುಂದಾಪುರ ತಾಪಂ. ಕಚೇರಿ ಎದುರು ನಡೆದ ಡಾ.ಅಂಬೇಡ್ಕರ್ ಜನ್ಮ ದಿನಾಚರಣೆ ಹಾಗೂ ಭೀಮಜ್ಯೋತಿ ವಿವಿದೋದ್ಧೇಶ ಸಹಕಾರಿ ಸಂಘ ಉದ್ಘಾಟನೆ ಬಹಿರಂಗ ಸಮಾವೇಶ ಉದ್ಘಾಟಿಸಿ ಮಾತನಾಡುತ್ತಿದ್ದರು. ಉಡುಪಿ ಧರ್ಮಗುರು ರೆ.ಫಾ.ವಿಲಿಯಂ ಮಾರ್ಟೀಸ್ ಡಾ.ಅಂಬೇಡ್ಕರ್ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿದರು. ಕಾಪು ವಿದ್ಯಾನಿಕೇತನ ಉಪನ್ಯಾಸಕಿ ಜ್ಯೋತಿ ಗುರು ಪ್ರಸಾದ್ ಭೀಮಜ್ಯೋತಿ ಸಹಕಾರಿ ಸಂಘ ಉದ್ಘಾಟಿಸಿದರು. ಕರ್ನಾಟಕ ದಲಿತ ಸಂಘರ್ಷ ಸಮಿತಿ ರಾಜ್ಯ ಸಂಚಾಲಕ ತಲ್ಲೂರು ಉದಯ ಕುಮಾರ್ ಅಧ್ಯಕ್ಷತೆ ವಹಿಸಿದ್ದರು. ಬಿಎಸ್ಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರಶಾಂತ್…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಸಮಾಜದ ಪ್ರತಿಯೊಬ್ಬರನ್ನೂ ಮುಖ್ಯವಾಹಿನಿಗೆ ತಂದು ಸಾಮಾಜಿಕ ನ್ಯಾಯವನ್ನು ಒದಗಿಸಬೇಕೆಂಬ ಡಾ. ಬಿ.ಆರ್. ಅಂಬೇಡ್ಕರ್ ಎಂಬ ಮಾನವತಾವಾದಿಯ ದೂರದೃಷ್ಠಿಯ ಚಿಂತನೆ ಇಂದು ಅದೆಷ್ಟೋ ಹಿಂದುಳಿದವರಿಗೆ ಬೆಳಕು ನೀಡಿದೆ ಎಂದು ಬೈಂದೂರು ಕ್ಷೇತ್ರ ಶಾಸಕ ಕೆ. ಗೋಪಾಲ ಪೂಜಾರಿ ಹೇಳಿದರು. ಅವರು ಡಾ| ಬಿ.ಆರ್ ಅಂಬೇಡ್ಕರ್ ಸಂಘ ಹಾಗೂ ಡಾ| ಬಿ.ಆರ್ ಅಂಬೇಡ್ಕರ್ ಮಹಿಳಾ ಸಂಘದ ೨೧ನೇ ವಾರ್ಷಿಕೋತ್ಸವ ಹಾಗೂ ೧೨೫ನೇ ಜನ್ಮ ದಿನಾಚರಣೆ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು. ಅಂಬೇಡ್ಕರ್ ದೇಶದ ಧೀಮಂತ ನಾಯಕರಾಗಿ ದಲಿತರು, ಹಿಂದುಳಿದ ವರ್ಗವರಿಗೆ ಸಾಮಾಜಿಕ ನ್ಯಾಯವನ್ನು ತಂದುಕೊಡುವ ಕೆಲಸವನ್ನು ಮಾಡಿದ್ದಾರೆ. ಅವರ ಗುಣವನ್ನು ಮೈಗೂಡಿಸಿಕೊಂಡು ಅವರ ಯೋಜನೆಗಳನ್ನು ಕಾರ್ಯರೂಪಕ್ಕೆ ತಂದಾಗ ಮಾತ್ರ ಸಾಮಾಜಿಕ ನ್ಯಾಯದ ಪರಿಕಲ್ಪನೆಯನ್ನು ಸಾಕಾರಗೊಳ್ಳಲು ಸಾಧ್ಯ ಎಂದರು. ಯಡ್ತರೆ ಗ್ರಾಪಂ ಅಧ್ಯಕ್ಷ ನಾಗರಾಜ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಬೈಂದೂರು ರತ್ತೂಬಾ ಜನತಾ ಹೈಸ್ಕೂಲ್ ಅಧ್ಯಾಪಕ ಮಂಜು ಕಾಳವಾರ, ಎಸ್ಡಿಸಿಸಿ ಬ್ಯಾಂಕಿನ ಶಿವರಾಮ ಪೂಜಾರಿ ಉಪಸ್ಥಿತರಿದ್ದರು. ಗುಜ್ಜಾಡಿ ಶ್ರೀ ಸಂಗಮೇಶ್ವರ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಅಸ್ಪೃಷ್ಯತೆ ದಿನದಲ್ಲೂ ಸಮಾನತೆ ಮಂತ್ರ ಭೋದಿಸಿದ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಸಮ್ಮಿಧಾನದ ಮೂಲಕ ಸಮಾಜದ ಕಟ್ಟಕಡೆಯ ಜನರಿಗೂ ಸಮಾಜಿಕ ನ್ಯಾಯ ನೀಡಿದರು. ಸಮ್ಮಿದಾ ದೇಶಕ್ಕೆ ನೀಡಿ ಮಾರ್ಗದರ್ಶನ ನೀಡಿದರು ….ಹೀಗೆಂದವರು ಬೈಂದೂರು ಶಾಸಕ ಕೆ.ಗೋಪಾಲ ಪೂಜಾರಿ. ಕುಂದಾಪುರ ತಾಲೂಕ್ ಪಂಚಾಯತ್, ಕಂದಾಯ ಇಲಾಖೆ, ಪುರಸಭೆ ಮತ್ತು ಸಮಾಜ ಕಲ್ಯಾಣ ಇಲಾಖೆ ಆಶ್ರಯದಲ್ಲಿ ಕುಂದಾಪುರ ಡಾ. ಬಿ. ಆರ್. ಅಂಬೇಡ್ಕರ್ ಭವನದಲ್ಲಿ ನಡೆದ ಅಂಬೇಡ್ಕರ್ ಜನ್ಮ ದಿನಾಚರಣೆಯಲ್ಲಿ ವಿವಿಧ ಸೌಲತ್ತು ವಿತರಿಸಿ ಮಾತನಾಡುತ್ತಿದ್ದರು. ಪ್ರಸಕ್ತ ಕಾಲಘಟ್ಟದಲ್ಲಿ ಹಿಂದುಳಿದವರು, ದಲಿತರಿಗೆ ವೇದಿಕೆ ಹಾಕಿಕೊಟ್ಟ ಅಂಬೇಡ್ಕರ್ ಮೂಲ ಉದ್ದೇಶ ಹಿಂದುಳಿದವರೂ, ಸಮಾಜದ ಮುಖ್ಯವಾಹಿನಿ ಜೊತೆ ಬೆರೆಯುವ ಜೊತೆ ಸಾಮಾಜಿಕ, ಆರ್ಥಿಕ, ರಾಜಕೀಯ ಸಮಾನತೆ ಆಗಿದೆ. ಅವರ ಮಾರ್ಗದಲ್ಲಿ ನಾವು ನಡೆಯುವ ಜೊತೆ ಅವರ ಆದರ್ಶ ಪಾಲಿಸುವುದೇ ನಾವು ಅವರಿಗೆ ಕೊಡುವ ನಿಜವಾದ ಗೌರವ ಎಂದು ಹೇಳಿದರು. ಕುಂದಾಪುರ ಉಪವಿಭಾಗಾಧಿಕಾರಿ ಅಶ್ವಥಿ ಎಸ್. ಕಾರ್ಯಕ್ರಮ ಉದ್ಘಾಟಿಸಿದರು. ಕುಂದಾಪುರ ಪುರಸಭೆ ಅಧ್ಯಕ್ಷೆ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಮರವಂತೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಆರಂಭವಾದ ಮತ್ತು ಬಳಿಕದ ಕೆಲವು ವರ್ಷಗಳ ದಾಖಲೆಗಳು ನಶಿಸಿಹೋದ ಕಾರಣ ಶಾಲೆಯ ಕಾಲಾವಧಿಯ ನಿಖರ ಮಾಹಿತಿ ಇಲ್ಲದಿದ್ದರೂ, ಅದು ಎಂಬತ್ತನ್ನು ಸಮೀಪಿಸಿದೆ ಎನ್ನುವುದು ಊರ ಹಿರಿಯರ ಅನುಭವದ ನುಡಿ. ಎಂಬತ್ತು ವರ್ಷ ಎನ್ನುವುದು ಸುದೀರ್ಘ ಎನ್ನಬಹುದಾದ ಕಾಲಮಾನ. ಕಿರಿಯ ಪ್ರಾಥಮಿಕ ಶಾಲೆಯಾಗಿ ಆರಂಭವಾದ ಅದು ಮುಂದೆ ಹಿರಿಯ ಪ್ರಾಥಮಿಕ ಶಾಲೆಯಾಯಿತು. ಆಂಗ್ಲ ಮಾಧ್ಯಮದ ಔನ್ನತ್ಯದ ಭ್ರಮೆಗೆ ಒಳಗಾದ ಈಚಿನ ತಲೆಮಾರನ್ನು ಬಿಟ್ಟರೆ ಊರಿನ ಉಳಿದೆಲ್ಲ ಅಕ್ಷರಸ್ಥರು, ಶಿಕ್ಷಿತರು, ಸಾಧಕರು ಇಲ್ಲೇ ಆರಂಭ ಮಾಡಿದವರು. ಅವರಲ್ಲಿ ಹಲವರು ಆಡಳಿತಗಾರರು, ಬ್ಯಾಂಕರುಗಳು, ಶಿಕ್ಷಕರು, ವಿಜ್ಞಾನಿಗಳು, ಉದ್ಯಮಿಗಳು, ಕಲಾವಿದರಾಗಿ ಮೂಡಿ ಬಂದಿದ್ದಾರೆ. ಆ ಪರಂಪರೆಯನ್ನು ಅದು ಈಗಲೂ ಉಳಿಸಿಕೊಂಡಿದೆ. ಶಾಲೆಯ ಅಮೃತ ಮಹೋತ್ಸವಕ್ಕೆ ಎರಡು ವರ್ಷಗಳ ಹಿಂದೆ ಚಾಲನೆ ನೀಡಲಾಗಿತ್ತು. ಈ ಕಾಲಘಟ್ಟವನ್ನು ಸ್ಮರಣೀಯವಾಗಿಸಬೇಕು; ಉತ್ಸವದ ಸಂಭ್ರಮದ ನಡುವೆ ಶಾಲೆಗೆ ಶಾಶ್ವತ ಆಸ್ತಿ ಸೃಜಿಸಿಬೇಕು ಎನ್ನುವುದು ಉತ್ಸವಾಚರಣೆಗೆ ರೂಪಿಸಲ್ಪಟ್ಟ ಪ್ರಾತಿನಿಧಿಕ ಸಮಿತಿಯ…
ಸಕಲ ಸೌಲಭ್ಯಗಳ ನೂತನ ಸೌಹಾರ್ದದ ಉದ್ಘಾಟನೆಗೆ ವೀರಪ್ಪ ಮೊಯ್ಲಿ ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಸಮಾಜದಲ್ಲಿ ಆರ್ಥಿಕ ಸಂಕಷ್ಟ ಎದುರಿಸುವವರಿಗೆ ನೆರವಾಗುವ, ಬಡ ವಿದ್ಯಾರ್ಥಿಗಳ ಶಿಕ್ಷಣಕ್ಕಾಗಿ ಸ್ಕಾಲರ್ಶಿಪ್ ಹಾಗೂ ಇನ್ನಿತರ ಸೌಲಭ್ಯಗಳನ್ನು ಒದಗಿಸುವ ಹಾಗೂ ಸಮಾಜದ ಏಳಿಗೆಯಲ್ಲಿ ಸಹಭಾಗಿಗಳಾಗುವ ನಿಟ್ಟಿನಲ್ಲಿ ಸಹಕಾರಿ ತತ್ವದಡಿಯಲ್ಲಿ ನೂತನ ಸೌಹಾರ್ದ ಸಹಕಾರಿಯನ್ನು ಆರಂಭಿಸಲು ನಿರ್ಧರಿಸಿದ್ದು ‘ಪ್ರಗತಿ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್ ನಿ’ ಇದರ ಉದ್ಘಾಟನಾ ಸಮಾರಂಭ ಎ.15ರ ಶುಕ್ರವಾರ ಬೆಳಿಗ್ಗೆ ನಡೆಯಲಿದೆ ಎಂದು ಸೌಹಾರ್ದದ ಉಪಾಧ್ಯಕ್ಷ ಸತೀಶ್ ಎಂ. ತಿಳಿಸಿದ್ದಾರೆ. ಅವರು ಬೈಂದೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಉಪ್ಪುಂದ ಶಾಲೆಬಾಗಿಲು ನವಮಿ ಕಾಂಪ್ಲೆಕ್ಸ್ ಮೊದಲ ಮಹಡಿಯಲ್ಲಿ ನೂತನ ಕಟ್ಟಡದಲ್ಲಿ ಸಕಲ ಸೌಲಭ್ಯದೊಂದಿಗೆ ಆರಂಭಗೊಳ್ಳಲಿರುವ ಪ್ರಗತಿ ಸೌಹಾರ್ದ ಕ್ರೆಡಿಟ್ ಕೋ ಆಪರೇಟಿವ್ ನಿ. ಉದ್ಘಾಟನೆಯನ್ನು ಸಂಸದ ಹಾಗೂ ಮಾಜಿ ಮುಖ್ಯಮಂತ್ರಿ ಡಾ. ಎಂ. ವೀರಪ್ಪ ಮೊಯ್ಲಿ ನೆರವೇರಿಸಲಿದ್ದಾರೆ ಎಂದರು. ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು ಶಾಸಕ ಕೆ. ಗೋಪಾಲ ಪೂಜಾರಿ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ. ಉಡುಪಿ ಶಾಸಕ ಪ್ರಮೋದ್…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಮೀನುಗಾರಿಕೆಗೆ ತೆರಳುತ್ತಿದ್ದ ವ್ಯಕ್ತಿಯೋರ್ವ ಆಯತಪ್ಪಿ ಸಮುದ್ರಕ್ಕೆ ಬಿದ್ದು ಮೃತಪಟ್ಟ ಘಟನೆ ಇಲ್ಲಿನ ಪಡುವರಿ ಗ್ರಾ.ಪಂ ವ್ಯಾಪ್ತಿಯ ಸೋಮೇಶ್ವರ ಕಡಲ ಕಿನಾರೆಯ ಬಳಿ ವರದಿಯಾಗಿದೆ. ಶಾಂತಾರಾಮ ಪೂಜಾರಿ (37) ಮೃತ ದುರ್ದೈವಿ. ಶಿರೂರು ಕರಾವಳಿ ಬೆಲೆಮನೆ ನಿವಾಸಿ ಶಾಂತಾರಾಮ ಪೂಜಾರಿ ಸಂಜೆಯ ವೇಳೆಗೆ ಪಾತಿ ದೋಣಿಯಲ್ಲಿ ಮೀನುಗಾರಿಕೆಗೆ ತೆರಳಿ ಮರಳುತ್ತಿದ್ದಾಗ, ದೋಣಿಯಲ್ಲಿದ್ದ ಆಯತಪ್ಪಿ ನೀರಿಗೆ ಬಿದ್ದಿದ್ದರು. ಸಮುದ್ರ ಉಬ್ಬರವಿದ್ದುದರಿಂದ ನೀರಿನ ಸೆಳವಿಗೆ ಸಿಕ್ಕಿದ್ದ ಅವರು ಈಜಿ ದಡದತ್ತ ಸೇರುವ ಪ್ರಯತ್ನವೂ ವಿಫಲವಾಗಿ ಉಸಿರು ಬಿಗಿಹಿಡಿದಿತ್ತು. ಕುಂದಾಪ್ರ ಡಾಟ್ ಕಾಂ ಸುದ್ದಿ. ಇದನ್ನು ಗಮನಿಸಿದ ಸ್ಥಳೀಯರು ಕೂಡಲೇ ಬೇರೊಂದು ದೋಣಿಯ ಮೂಲಕ ದಡಕ್ಕೆ ತಂದು ಪೊಲೀಸ್ ಜೀಪ್ನಲ್ಲಿಯೇ ತುರ್ತಾಗಿ ಬೈಂದೂರು ಆಸ್ಪತ್ರೆಗೆ ಕೊಂಡೊಯ್ಯಲಾಯಿತಾದರೂ ಅಷ್ಟರಲ್ಲಿ ಶಾಂತಾರಾಮ್ ಅವರ ಪ್ರಾಣಪಕ್ಷಿ ಹಾರಿಹೋಗಿತ್ತು. ಕುಂದಾಪ್ರ ಡಾಟ್ ಕಾಂ ಸುದ್ದಿ. ಸ್ಥಳೀಯರು, ಪೊಲೀಸರು ಸಮಯ ಪ್ರಜ್ಞೆ ಮೆರೆದರೂ ಜೀವ ಉಳಿಯಲಿಲ್ಲ: ಸಮುದ್ರ ತೀರದಿಂದ ಅನತಿ ದೂರದಲ್ಲಿ ಶಾಂತಾರಾಮ್ ನೀರಿಗೆ ಬಿದ್ದಿದ್ದರು. ಅವರು ಅಪಾದಲ್ಲಿರುವುದು ಗಮನಕ್ಕೆ ಬರುತ್ತಿದ್ದಂತೆ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಇಲ್ಲಿಗೆ ಸಮೀಪದ ಪ್ರಸಿದ್ಧ ಕೂಸಳ್ಳಿ ಫಾಲ್ಸ್ಗೆ ಸಾಗುವ ಮಾರ್ಗದಲ್ಲಿ ಪ್ರವಾಸಿಗರ ಸುರಕ್ಷತೆಯ ದೃಷ್ಠಿಯಿಂದ ಎಚ್ಚರಿಕೆ ಫಲಕ ಅಳವಡಿಸಲಾಯಿತು. ಉಡುಪಿ ಜಿಲ್ಲಾ ಪೊಲೀಸ್ ಹಾಗೂ 24×7 ಆಪತ್ಬಾಂಧವ ಅಂಬ್ಯುಲೆನ್ಸ್ ಗಂಗೊಳ್ಳಿ ಜಂಟಿಯಾಗಿ ಫಲಕ ಅಳವಡಿಸಿದೆ. ಈ ಸಂದರ್ಭದಲ್ಲಿ ಬೈಂದೂರು ಪೊಲೀಸ್ ಠಾಣಾಧಿಕಾರಿ ಸಂತೋಷ್ ಕಾಯ್ಕಿಣಿ, ಪೇದೆ ಗುರುಪ್ರದಾಸ್, 24×7 ಆಪತ್ಬಾಂದವದ ನಿರ್ವಾಹಕ ಮೊಹಮ್ಮದ್ ಇಬ್ರಾಹಿಂ ಗಂಗೊಳ್ಳಿ ಮೊದಲಾದವರು ಉಪಸ್ಥಿತರಿದ್ದರು. ಕೂಸಳ್ಳಿಯಲ್ಲಿ 2 ದಿನದ ಹಿಂದಷ್ಟೇ ಕಾಲೇಜು ವಿದ್ಯಾರ್ಥಿಯೋರ್ವ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದು, ಈವರೆಗೆ ಮೂವರು ಮೃತಪಟ್ಟಿದ್ದರು. ಇದನ್ನರಿತ ಸಮಾಜ ಸೇವಕ ಇಬ್ರಾಹಿಂ ಫಲಕ ಅಳವಡಿಸಲು ಇಲಾಖೆಯೊಂದಿಗೆ ಮುಂದಾಗಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ದೇಹ ಸೌಂದರ್ಯಕ್ಕೆ ಎಲ್ಲರೂ ಹೆಚ್ಚಿನ ಆಧ್ಯತೆ ನೀಡುತ್ತಿದ್ದು, ಮನಸ್ಸಿನ ಆರೋಗ್ಯದ ಬಗ್ಗೆ ಯಾರೂ ಕಾಳಜಿ ವಹಿಸುತ್ತಿಲ್ಲ. ದೇಹಕ್ಕೆ ಎಕ್ಸ್ಸೈಜ್ ಹೇಳಿಕೊಡೋರುಂಟು ಆದರೆ ಮನಸ್ಸಿಗೆ ಹೇಳಿಕೊಡುವವರಿಲ್ಲ. ಮನಸ್ಸಿನ ನಿಯಂತ್ರಣಕ್ಕ ವ್ಯಾಯಾಮ ಹೇಳಿಕೋಡುವ ಒಂದೇ ಒಂದು ಸಂಸ್ಥೆ ಈಶ್ವರೀಯ ವಿಶ್ವವಿದ್ಯಾಲಯ ಎಂದು ಮಂಗಳೂರು ಬ್ರಹ್ಮಕುಮಾರಿ ಬಿ.ಕೆ.ಜಯಶ್ರೀ ಹೇಳಿದರು. ಕುಂದಾಪುರ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯ ಆಶ್ರಯದಲ್ಲಿ ಕುಂದಾಪುರ ಈಶ್ವರೀಯ ವಿಶ್ವವಿದ್ಯಾಲಯದಲ್ಲಿ ಯುಗಾದಿ ಪ್ರಯುಕ್ತ ನಡೆದ ಸದ್ಭಾವನಾ ಸಭೆಯಲ್ಲಿ ಮಾತನಾಡಿದರು. ಶರೀರಕ್ಕೆ ಮಾತ್ರ ಆಧ್ಯತೆ ನೀಡಿದರೆ ಸಾಲದು ಮನಸ್ಸಿನ ಆರೋಗ್ಯಕ್ಕೂ ಪ್ರಾಮುಖ್ಯತೆ ನೀಡಬೇಕು. ಮನಸ್ಸು ಸರಿಯಿದ್ದರೆ ಮನೆ ಸರಿಯಿರುತ್ತದೆ. ಮನೆ ಸರಿಯಿದ್ದರೆ ಊರು ಸಮಾಜ ಎಲ್ಲಾ ಸರಿಯಿರುತ್ತದೆ. ದೈಹಿಕ ಪರಿವರ್ತನೆಗಿಂತ ಮನಸ್ಸಿನ ಪರಿವರ್ತನೆ ಮುಖ್ಯ ಎಂದು ಹೇಳಿದರು. ರಾಜಯೋಗಿನಿ ಬ್ರಹ್ಮಕುಮಾರಿ ವಿಶ್ವೇಶ್ವರೀಜಿ ಯುಗಾದಿ ಸದ್ಭಾವನಾ ಸಂದೇಶ ನೀಡಿದರು. ಪತ್ರಕರ್ತ ಟಿ.ಪಿ.ಮಂಜುನಾಥ, ನ್ಯಾಯವಾದಿ ರಾಜ ಕುಮಾರ್ ನೆಂಪು ಇದ್ದರು. ಬ್ರಹ್ಮಕುಮಾರಿ ಪ್ರಭಾ ಸ್ವಾಗತಿ ಗೀತೆ ಹಾಡಿದರು. ಮಂಗಳೂರು ಬ್ರಹ್ಮಕುಮಾರಿ ಬಿ.ಕೆ.ರಾಧಾ ಸ್ವಾಗತಿಸಿದರು.…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ತಾಲೂಕಿನ ಗೋಪಾಡಿ ಗ್ರಾಮ ಪಂಚಾಯತ್ನಲ್ಲಿ ಗೋಪಾಡಿ ವಾರ್ಡ್-2ರಲ್ಲಿ ತೆರವಾಗಿದ್ದ ಒಂದು ಸ್ಥಾನಕ್ಕೆ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನ ಆಡಳಿತ ಮಂಡಳಿ ಮಾಜಿ ಸದಸ್ಯೆ ಕಲ್ಪನಾ ಭಾಸ್ಕರ್ ಅವಿರೋಧ ಆಯ್ಕೆ ಆಗಿದ್ದಾರೆ. ಗೋಪಾಡಿ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ವೈಲೆಟ್ ಬೆರೆಟ್ಟೂ ತಾಲೂಕು ಪಂಚಾಯತ್ ಚುನಾವಣೆಯಲ್ಲಿ ಸ್ವರ್ಧಿಸಿ ಆಯ್ಕೆಯಾದ ಹಿನ್ನೆಲೆಯಲ್ಲಿ ತೆರವಾದ ಸ್ಥಾನಕ್ಕೆ ಗೋಪಾಡಿಯ ಗ್ರಾ.ಪಂನಲ್ಲಿ ಮಧ್ಯಂತರ ಚುನಾವಣೆ ಘೋಷಣೆ ಆಗಿತ್ತು. ಸಾಮಾಜಿಕ, ಸಾಂಸ್ಕೃತಿಕ ಹಾಗೂ ಧಾರ್ಮಿಕ ಕ್ಷೇತ್ರದಲ್ಲಿ ಅವಿರತವಾಗಿ ತೊಡಗಿಸಿಕೊಂಡಿರುವ ಕಲ್ಪನಾ ಭಾಸ್ಕರ್ ಅವರು ಗ್ರಾ.ಪಂ ಸದಸ್ಯರಾಗಿರುವುದಲ್ಲಿ ಅವರ ಬೆಂಬಲಿಗರು ಹರ್ಷ ವ್ಯಕ್ತಪಡಿಸಿದ್ದಾರೆ.
