Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಚರ್ಮ ಕುಶಲಕರ್ಮಿಗಳ ಸರ್ವತೋಮುಖ ಅಭಿವೃದ್ಧಿಗಾಗಿ ಡಾ. ಬಾಬು ಜಗಜೀವನ್ ರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸಕ್ತ ಸಾಲಿನ ಕ್ರಿಯಾ ಯೋಜನೆಯಡಿ ಸ್ವಾವಲಂಬಿ / ಸಂಚಾರಿ ಮಾರಾಟ ಮಳಿಗೆ, ನೇರಸಾಲ ಯೋಜನೆ, ಚರ್ಮಶಿಲ್ಪ ಯೋಜನೆ, ಮಹಿಳಾ ಕುಶಲಕರ್ಮಿಗಳಿಗೆ ಕಾಯಕಸ್ಪೂರ್ತಿ ಯೋಜನೆ, ಪಾದುಕೆ ಕುಟೀರ ಹಾಗೂ ಮಾರುಕಟ್ಟೆ ಸಹಾಯ ಯೋಜನೆಗಳನ್ನು ಜಾರಿಗೊಳಿಸಲಾಗಿದ್ದು, ಯೋಜನೆಯ ಸೌಲಭ್ಯ ಪಡೆಯಲು ಪರಿಶಿಷ್ಟ ಜಾತಿಯ ಚರ್ಮ ಕುಶಲಕರ್ಮಿಗಳು ಸೇವಾಸಿಂಧು ಪೋರ್ಟಲ್‌ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ನವೆಂಬರ್ 28 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಸಂಯೋಜಕರು ಮೊ.ನಂ: 9980431954 ಹಾಗೂ 6362891017, ಕಲ್ಯಾಣಮಿತ್ರ ಸಹಾಯವಾಣಿ ಸಂಖ್ಯೆ: 9482300400 ಅಥವಾ ನಿಗಮದ ವೆಬ್‌ಸೈಟ್ http://lidkar.com ಅನ್ನು ಸಂಪರ್ಕಿಸಬಹುದಾಗಿದೆ ಎಂದು ನಿಗಮದ ಜಿಲ್ಲಾ ಸಂಯೋಕರ ಕಚೇರಿ ಪ್ರಕಟಣೆ ತಿಳಿಸಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಮಂಗಳೂರಿನ ಮಾಂಡ್ ಸೊಭಾಣ್ ಸಂಸ್ಥೆಯ ಮುಂದಾಳತ್ವದಲ್ಲಿ ನವೆಂಬರ್ 3ರಿಂದ 15ರವರೆಗೆ ಮಂಗಳೂರಿನ ಟೌನ್ ಹಾಲ್‌ನಲ್ಲಿ ಪ್ರಥಮ ವಿಶ್ವ ಕೊಂಕಣಿ ಸಂಗೀತ ಮಹಾಮೇಳ ಆಯೋಜಿಸಲಾಗಿದೆ. ಕೊಂಕಣಿ ಭಾಷೆ ಮತ್ತು ಸಂಗೀತ ಕ್ಷೇತ್ರದಲ್ಲಿ ವಿಶ್ವಮಟ್ಟದ ಹೊಸ ಇತಿಹಾಸ ನಿರ್ಮಿಸುವ ಉದ್ದೇಶದಿಂದ 12 ದಿನ, 12 ಗಂಟೆ ಹಾಗೂ 12 ನಿಮಿಷಗಳ ಕಾಲ ನಿರಂತರ ಸಮೂಹ ಗಾಯನ ನಡೆಸುವ ಮೂಲಕ ಗಿನ್ನಿಸ್ ವಿಶ್ವ ದಾಖಲೆ ನಿರ್ಮಿಸುವ ಪ್ರಯತ್ನವನ್ನು ಹಮ್ಮಿಕೊಳ್ಳಲಾಗಿದೆ. ಈ ಮಹತ್ವಾಕಾಂಕ್ಷೆಯ ಕಾರ್ಯಕ್ರಮದಲ್ಲಿ 300 ಗಾಯನ ತಂಡಗಳು ಭಾಗವಹಿಸಲಿದ್ದು, ಪ್ರತಿಯೊಂದು ತಂಡಕ್ಕೂ ಒಂದು ಗಂಟೆಯ ಗಾಯನದ ಅವಕಾಶ ನೀಡಲಾಗಿದೆ. ಒಟ್ಟು 6,789ಕ್ಕೂ ಅಧಿಕ ಗಾಯಕರು, 250ಕ್ಕೂ ಅಧಿಕ ಸಂಗೀತ ನಿರ್ದೇಶಕರ 4,500ಕ್ಕೂ ಅಧಿಕ ಹಾಡುಗಳನ್ನು ಪ್ರಸ್ತುತಪಡಿಸಲಿದ್ದಾರೆ. ವಿಶ್ವ ಕೊಂಕಣಿ ಕಲಾರತ್ನ ಎರಿಕ್ ಬಾಬ್ ಓಜಾರಿಯೋ ಅವರಿಗೆ ಗೌರವ ಸಮರ್ಪಿಸುವ ಉದ್ದೇಶದಿಂದ ನಡೆಯುತ್ತಿರುವ ಈ ಸಂಗೀತ ಮಹಾಮೇಳವು ಕೊಂಕಣಿ ಭಾಷೆ, ಕಲೆ ಮತ್ತು ಸಂಸ್ಕೃತಿಯನ್ನು ಜಾಗತಿಕ ಮಟ್ಟದಲ್ಲಿ ಪಸರಿಸುವ ಮಹತ್ವದ ವೇದಿಕೆಯಾಗಲಿದೆ.…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಆಡಳಿತವನ್ನು ಜನರ ಮನೆಬಾಗಿಲಿಗೆ ಕರೆದೊಯ್ಯುವ ಉದ್ದೇಶದಿಂದಾಗಿ ರಾಜ್ಯ ಸರ್ಕಾರವು ಮಹತ್ವಾಕಾಂಕ್ಷಿ ಪ್ರಜಾಸೇವಾ ಆಂದೋಲನ ಸಭೆಗಳನ್ನು ಪ್ರಾರಂಭಿಸಿದೆ. ಜನಸಾಮಾನ್ಯರ ಸಮಸ್ಯೆಗಳನ್ನು ಆದ್ಯತೆಯ ಮೇಲೆ ಬಗೆಹರಿಸುವುದು ಅಧಿಕಾರಿಗಳ ಮುಖ್ಯ ಜವಾಬ್ದಾರಿಯಾಗಿದ್ದು, ಇದಕ್ಕೆ ಒತ್ತು ನೀಡಬೇಕು ಎಂದು ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಹೇಳಿದರು. ಅವರು ಮಣಿಪುರ ಗ್ರಾಮದ ಶ್ರೀ ನಾರಾಯಣ ಗುರು ಸಭಾಭವನದಲ್ಲಿ ಪ್ರಜಾಸೇವಾ ಇಲಾಖೆ ತಾಲೂಕು ಆಡಳಿತ ಉಡುಪಿ ಇವರ ವತಿಯಿಂದ ನಡೆದ ಉಡುಪಿ ತಾಲೂಕು ಪ್ರಜಾಸೇವಾ ಆಂದೋಲನ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸಾರ್ವಜನಿಕರ ಸೇವೆಯನ್ನು ಮಾಡುವುದರೊಂದಿಗೆ ಸಮಾಜದ ಋಣ ತೀರಿಸಲು ಭಗವಂತ ಅವಕಾಶ ಮಾಡಿಕೊಟ್ಟಿದ್ದಾನೆ. ಸಮಾಜದಲ್ಲಿ ನೊಂದವರು, ಬೆಂದವರು, ಅಸಹಾಯಕರು ಇರುತ್ತಾರೆ. ಅವರುಗಳ ಸಮಸ್ಯೆಗಳನ್ನು ಹಗುರವಾಗಿ ಭಾವಿಸದೇ ಪ್ರಜೆಗಳ ಸೇವೆಯೇ ಪರಮಾತ್ಮನ ಸೇವೆ ಎಂಬ ಭಾವನೆಯಿಂದ ಕೆಲಸ ಮಾಡೋಣ ಎಂದರು. ಈವರೆಗೆ ನಡೆದ ಸಭೆಗಳಲ್ಲಿ ಸಾಮಾನ್ಯವಾಗಿ ಸಾಮಾಜಿಕ ಭದ್ರತಾ ಪಿಂಚಣಿ ಯೋಜನೆಗಳು ನಿಂತು ಹೋಗಿದೆ, ಸಂಧ್ಯಾ ಸುರಕ್ಷಾ, ವೃದ್ಧಾಪ್ಯ ವೇತನ, ವಿಧವಾ ವೇತನಗಳು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಕನ್ನಡ ನಾಡು, ನುಡಿ, ಸಾಹಿತ್ಯ ಹಾಗೂ ಶ್ರೀಮಂತ ಸಾಂಸ್ಕೃತಿಕ ಪರಂಪರೆಯನ್ನು ಎತ್ತಿಹಿಡಿಯುವ ಉದ್ದೇಶದಿಂದ ಇಲ್ಲಿನ ಸುಜ್ಞಾನ ನ್ಯಾಷನಲ್ ಪದವಿ ಪೂರ್ವ ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ‘ಕನ್ನಡ ಸಿರಿನುಡಿ ಸಂಭ್ರಮ’ಕಾರ್ಯಕ್ರಮವು ಅತ್ಯಂತ ಸಂಭ್ರಮ-ಸಂಭ್ರಮದಿಂದ ಜರುಗಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸುಜ್ಞಾನ ಎಜುಕೇಷನಲ್ ಟ್ರಸ್ಟ್‌ನ ಅಧ್ಯಕ್ಷ ಡಾ. ರಮೇಶ್ ಶೆಟ್ಟಿ ಅವರು ಭುವನೇಶ್ವರಿ ದೇವಿಯ ಭಾವಚಿತ್ರಕ್ಕೆ ದೀಪ ಬೆಳಗಿಸಿ, ಪುಷ್ಪನಮನ ಸಲ್ಲಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. “ಕನ್ನಡ ಭಾಷೆಯ ಉಳಿವು ಮತ್ತು ಬೆಳವಣಿಗೆಯಲ್ಲಿ ಯುವಜನತೆಯ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ವಿದ್ಯಾರ್ಥಿಗಳು ಕನ್ನಡವನ್ನು ಕೇವಲ ಒಂದು ಭಾಷೆಯಾಗಿ ಕಲಿಯದೆ, ಪ್ರೀತಿಸಿ, ಗೌರವಿಸಿ, ದೈನಂದಿನ ಬದುಕಿನಲ್ಲಿ ಹೆಮ್ಮೆಯಿಂದ ಬಳಸಬೇಕು” ಎಂದು ಕರೆ ನೀಡಿದರು. ಮುಖ್ಯ ಅತಿಥಿಯಾಗಿದ್ದ ಟ್ರಸ್ಟ್‌ನ ಕೋಶಾಧಿಕಾರಿ ಭರತ್ ಶೆಟ್ಟಿ ಮಾತನಾಡಿ, “ಕನ್ನಡ ರಾಜ್ಯೋತ್ಸವದ ಆಚರಣೆ ಕೇವಲ ಒಂದು ದಿನಕ್ಕೆ ಸೀಮಿತವಾಗದೆ, ವರ್ಷವಿಡೀ ಭಾಷೆಯ ಬೆಳವಣಿಗೆ ಹಾಗೂ ಪ್ರಚಾರಕ್ಕೆ ಪ್ರತಿಯೊಬ್ಬರೂ ಕೊಡುಗೆ ನೀಡಬೇಕು” ಎಂದರು. ಕಾಲೇಜಿನ ಪ್ರಾಂಶುಪಾಲ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ವಿಜಯ ಮಕ್ಕಳ ಕೂಟ, ಅತ್ರಾಡಿಯಲ್ಲಿ ಆಯೋಜಿಸಲಾಗಿದ್ದ ಯೋಗಾಸನ ಸ್ಪರ್ಧೆಯಲ್ಲಿ ಕಿರಿಮಂಜೇಶ್ವರದ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್‌ನ 3 ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆಗೈದು ಶಾಲೆಗೆ ಕೀರ್ತಿ ತಂದಿದ್ದಾರೆ. 14 ವರ್ಷ ವಯೋಮಾನದ ವಿಭಾಗದಲ್ಲಿ ನಡೆದ ಆರ್ಟಿಸ್ಟಿಕ್ ಯೋಗ ವೈಯಕ್ತಿಕ ಸ್ಪರ್ಧೆಯಲ್ಲಿ ವಂಶಿತ್ ಹಾಗೂ ಅಮೂಲ್ಯ ಹಾಗೂ ಸಾಂಪ್ರದಾಯಿಕ ಯೋಗ ಸ್ಪರ್ಧೆಯ ವೈಯಕ್ತಿಕ ವಿಭಾಗದಲ್ಲಿ ಅನುಷ್ಕಾ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ. ಇದೇ ವಯೋಮಾನದ ಸಾಂಪ್ರದಾಯಿಕ ಯೋಗ ಜೋಡಿ ಸ್ಪರ್ಧೆಯಲ್ಲಿ ಅಮೂಲ್ಯ ಮತ್ತು ಅನುಷ್ಕಾ ಪ್ರಥಮ ಸ್ಥಾನ ಗಳಿಸಿದ್ದಾರೆ. 17 ವರ್ಷದೊಳಗಿನ ವಿಭಾಗದ ಆರ್ಟಿಸ್ಟಿಕ್ ಯೋಗ ವೈಯಕ್ತಿಕ ಸ್ಪರ್ಧೆಯಲ್ಲಿ ಸಾನಿಧ್ಯಾ ದ್ವಿತೀಯ ಸ್ಥಾನ ಪಡೆದರೆ, ಸಾಂಪ್ರದಾಯಿಕ ಯೋಗ ಸ್ಪರ್ಧೆಯಲ್ಲಿ ಅನಿಷ್ಕಾ ದ್ವಿತೀಯ ಸ್ಥಾನ ಗಳಿಸಿದ್ದಾರೆ. ರಿದಮಿಕ್ ಯೋಗ ಜೋಡಿ ಸ್ಪರ್ಧೆಯಲ್ಲಿ ಸಾನಿಧ್ಯಾ ಮತ್ತು ಅನಿಷ್ಕಾ ದ್ವಿತೀಯ ಸ್ಥಾನ ಪಡೆದು ಗಮನಾರ್ಹ ಸಾಧನೆ ಮಾಡಿದ್ದಾರೆ. ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿಗಳು ಜಿಲ್ಲಾಮಟ್ಟದಿಂದ ವಿಭಾಗೀಯ ಮಟ್ಟದ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಕರ್ನಾಟಕ ಸರಕಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ಆಯುಷ್ ಇಲಾಖೆ ಉಡುಪಿ, ಸರಕಾರಿ ಆಯುರ್ವೇದ ಚಿಕಿತ್ಸಾಲಯ ಕಾಲ್ತೋಡು, ಗ್ರಾಮ ಪಂಚಾಯತ್ ಗುಜ್ಜಾಡಿ, ಶ್ರೀ ಚೆನ್ನಬಸವೇಶ್ವರ ಯುವಕ ಮಂಡಲ ರಿ. ನಾಯಕವಾಡಿ – ಗುಜ್ಜಾಡಿ, ಪ್ರಾಥಮಿಕ ಆರೋಗ್ಯ ಕೇಂದ್ರ ಮರವಂತೆ ದೃಷ್ಟಿ ಪ್ರದಾನ ಯೋಜನೆ ಪಾರ್ವತಿ ಮಹಾಬಲ ಶೆಟ್ಟಿ ಚಾರಿಟೇಬಲ್ ಟ್ರಸ್ಟ್, ಶಿರೂರು ಮುದ್ದು ಮನೆ, ಬಯೋಲಿನ್ ಲ್ಯಾಬೋರೇಟರಿ ಲೈಫ್ ಕೇರ್ ಡಯಾಗ್ನೋಸ್ಟಿಕ್ ಸೆಂಟರ್ ಕುಂದಾಪುರ ಸಮೃದ್ಧಿ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ರಿ. ಗುಜ್ಜಾಡಿ, ಕಟ್ಟಡ ಮತ್ತು ಇತರ ಕಾರ್ಮಿಕರ ಸಂಘ ಗಂಗೊಳ್ಳಿ ಇವರ ಸಂಯುಕ್ತ ಆಶ್ರಯದಲ್ಲಿ ಉಚಿತ ಆಯುಷ್ ಆರೋಗ್ಯ ತಪಾಸಣೆ, ಔಷಧಿ ವಿತರಣೆ, ಉಚಿತ ನೇತ್ರ ತಪಾಸಣೆ ಮತ್ತು ಶಸ್ತ್ರಚಿಕಿತ್ಸಾ ಶಿಬಿರವು ನಾಯಕವಾಡಿ ಗುಜ್ಜಾಡಿಯ ಶ್ರೀರಾಮ ಭಗವಾನ್ ಬ್ರಹ್ಮಶ್ರೀ ನಾರಾಯಣಗುರು ಮಂದಿರದಲ್ಲಿ ಭಾನುವಾರದಂದು ಯಶಸ್ವಿಯಾಗಿ ಜರುಗಿತು. ಗುಜ್ಜಾಡಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶೋಭಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಇಂತಹ ಜನ ಮುಖಿ ಕಾರ್ಯಕ್ರಮಗಳನ್ನು ಸಂಘ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಕಠಿಣ ಪರಿಶ್ರಮ ಮತ್ತು ಉದ್ಯಮಶೀಲತೆಯ ದೃಢ ಸಂಕಲ್ಪದ ರೋಚಕ ಕಥೆಗೆ ಸಾಕ್ಷಿಯಾಗಿರುವ ವೀರೇಂದ್ರ ಎಸ್‌. ಪೂಜಾರಿ ಅವರಿಗೆ ಅಮೆರಿಕದ ಫ್ರಾಂಕ್‌ಪರ್ಡ್ ಇಂಟರ್‌ನ್ಯಾಷನಲ್ ಯೂನಿವರ್ಸಿಟಿಯು ‘ಬಿಸಿನೆಸ್ ಡೆವಲಪ್‌ಮೆಂಟ್’ (ವ್ಯಾಪಾರ ಅಭಿವೃದ್ಧಿ) ವಿಭಾಗದಲ್ಲಿ ಗೌರವ ಡಾಕ್ಟರೇಟ್ ನೀಡಿ ಗೌರವಿಸಿದೆ. ನವದೆಹಲಿಯಲ್ಲಿ ನಡೆದಿರುವ ಭವ್ಯ ಸಮಾರಂಭದಲ್ಲಿ ಈ ಪ್ರತಿಷ್ಠಿತ ಗೌರವ ಡಾಕ್ಟರೇಟ್ ನೀಡಿ ಗೌರವಿಸಲಾಗಿದೆ. ಬೈಂದೂರು ತಾಲೂಕಿನ ಕೋಣ್ಕಿಯ ಅತ್ಯಂತ ಸಾಧಾರಣ ಹಿನ್ನೆಲೆಯಿಂದ ಬಂದ ವೀರೇಂದ್ರ ಪೂಜಾರಿ ಅವರ ನಿರಂತರ ಪರಿಶ್ರಮಕ್ಕೆ ಗೌರವ ಡಾಕ್ಟರೇಟ್ ಸಿಕ್ಕಿದೆ.ವ್ಯವಹಾರ ಅಭಿವೃದ್ಧಿ, ಸುಸ್ಥಿರ ಬೆಳವಣಿಗೆ ಮತ್ತು ಆರ್ಥಿಕ ಸಬಲೀಕರಣದಲ್ಲಿ ಅವರ ನವೀನ ತಂತ್ರಗಳು ಗ್ರಾಮೀಣ ಭಾಗದಲ್ಲಿ ಉದ್ಯೋಗ ಅವಕಾಶವನ್ನು ಸೃಷ್ಟಿಸಿದ್ದಾರೆ. ಹಾಗೇ ನಾಯಕತ್ವ, ಕಾರ್ಯತಂತ್ರದ ವಿಸ್ತರಣೆ ಮತ್ತು ಸಮುದಾಯ ಆಧಾರಿತ ಉದ್ಯಮ ಅಭಿವೃದ್ಧಿಗೆ ನೀಡಿರುವ ಅಸಾಧಾರಣ ಕೊಡುಗೆಯನ್ನು ಗುರುತಿಸಿ ಫ್ರಾಂಕ್ವರ್ಪ್ ಇಂಟರ್‌ನ್ಯಾಷನಲ್ ಯೂನಿವರ್ಸಿಟಿಯು ಶ್ರೀ ಪೂಜಾರಿ ಅವರನ್ನು ಈ ಗೌರವಕ್ಕೆ ಆಯ್ಕೆ ಮಾಡಿದೆ. ಸಣ್ಣ ಹಳ್ಳಿಗಳಿಂದಲೂ ನಾಯಕತ್ವವು ಹೊರಹೊಮ್ಮಿ ಜಾಗತಿಕ ಮಟ್ಟದಲ್ಲಿ ಗಮನಾರ್ಹ ಪ್ರಭಾವ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಸಂಸ್ಥೆಯ ಹಿರಿಯ ವಿದ್ಯಾರ್ಥಿನಿ, ಪ್ರಸ್ತುತ ಆಳ್ವಾಸ್ (ಸ್ವಾಯತ್ತ) ಕಾಲೇಜಿನ ದೈಹಿಕ ಶಿಕ್ಷಣ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಮೀನಾಕ್ಷಿ ಬಿ. ಅವರು ದೈಹಿಕ ಶಿಕ್ಷಣ ವಿಷಯದಲ್ಲಿ ಮಂಗಳೂರು ವಿವಿಯಿಂದ ಪಿಎಚ್.ಡಿ. ಪದವಿ ಪಡೆದುಕೊಂಡಿದ್ದಾರೆ. ಮಂಗಳೂರು ವಿಶ್ವವಿದ್ಯಾನಿಲಯದ ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕ ಹಾಗೂ ಮುಖ್ಯಸ್ಥರಾದ ಡಾ. ಜೆರಾಲ್ಡ್ ಸಂತೋಷ ಡಿಸೋಜ ಅವರ ಮಾರ್ಗದರ್ಶನದಲ್ಲಿ ’ಭಾರತೀಯ ಸನ್ನಿವೇಶದಲ್ಲಿ ಕ್ರೀಡಾಪಟುಗಳ ಲಿಂಗ, ವಯಸ್ಸು ಹಾಗೂ ಕ್ರೀಡೆಯ ಪ್ರಕಾರಗಳ ಆಧಾರದಲ್ಲಿ ಉಂಟಾಗುವ ಒತ್ತಡ ಮತ್ತು ಅದನ್ನು ನಿಭಾಯಿಸುವ ತಂತ್ರಗಳ ನಡುವಿನ ಸಂಬಂಧ’ ಎಂಬ ವಿಷಯದ ಕುರಿತು ಸಂಶೋಧನಾ ಪ್ರಬಂಧ ಮಂಡಿಸಿ ಡಾಕ್ಟರೇಟ್ ಪದವಿ ಗಳಿಸಿದ್ದಾರೆ. 2002ರಲ್ಲಿ ಕ್ರೀಡಾ ದತ್ತು ಸ್ವೀಕಾರ ಯೋಜನೆಯಡಿ ಆಳ್ವಾಸ್ ಪಿಯು ಕಾಲೇಜಿಗೆ ಪ್ರವೇಶ ಪಡೆದಿದ್ದ ಮೀನಾಕ್ಷಿಯವರು ಪದವಿ, ಬಿ.ಪಿ.ಎಡ್. ಹಾಗೂ ಎಂ.ಪಿ.ಎಡ್. ಶಿಕ್ಷಣವನ್ನು ಆಳ್ವಾಸ್‌ನಲ್ಲಿಯೇ ಪೂರೈಸಿದ್ದಾರೆ. ರಾಷ್ಟ್ರೀಯ ಮಟ್ಟದ 4*400 ಮೀಟರ್ ರಿಲೇ ಸ್ಪರ್ಧೆಯಲ್ಲಿ ತೃತೀಯ ಸ್ಥಾನ ಗಳಿಸಿರುವ ಅವರು ಉತ್ತಮ ಕ್ರೀಡಾಪಟುವಾಗಿಯೂ ಗುರುತಿಸಿಕೊಂಡಿದ್ದಾರೆ.…

Read More

​ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಉಡುಪಿ ಕುಂಜಿಬೆಟ್ಟುವಿನಲ್ಲಿರುವ ಉಪೇಂದ್ರ ಪೈ ಮೆಮೋರಿಯಲ್ ಕಾಲೇಜು (ಯು.ಪಿ.ಎಂ.ಸಿ) ಮೈದಾನದಲ್ಲಿ ನಡೆದ ಜಿಲ್ಲಾ ಮಟ್ಟದ ಅಂತರ ಕಾಲೇಜು ಬಾಲಕಿಯರ ತ್ರೋಬಾಲ್ ಪಂದ್ಯಾಟದಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ಬಾಲಕಿಯರ ತಂಡ ದಿಗ್ವಿಜಯ ಸಾಧಿಸಿ ಚಾಂಪಿಯನ್ ಆಗಿ ಹೊರಹೊಮ್ಮಿದರು. ತಂಡದ ಈ ಅಮೋಘ ಗೆಲುವು ಕಾಲೇಜಿನ ಕ್ರೀಡಾ ಕ್ಷೇತ್ರದ ಸಾಧನೆಗೆ ಮತ್ತೊಂದು ಗೌರವದ ಗರಿಯನ್ನು ತಂದುಕೊಟ್ಟಿದೆ. ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ,  ಪ್ರಾಂಶುಪಾಲರು , ಬೋಧಕ ಹಾಗೂ ಬೋಧಕೇತರ  ಸಿಬ್ಬಂದಿ ಅಭಿನಂದನೆ ವಿಜೇತ ವಿದ್ಯಾರ್ಥಿನಿಯರನ್ನು ಅಭಿನಂದಿಸಿದ್ದಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಮೂಡ್ಲಕಟ್ಟೆ ಐಎಂಜೆ ಶಿಕ್ಷಣ ಸಂಸ್ಥೆಗಳ ಆವರಣದಲ್ಲಿ ಪಿಯುಸಿ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾದ ʼನವೋನ್ಮೇಶʼ – ರಾಜ್ಯ ಮಟ್ಟದ ವಿಜ್ಞಾನ, ವಾಣಿಜ್ಯ, ಸಾಂಸ್ಕೃತಿಕ ಹಾಗೂ ಕ್ರೀಡಾ ಉತ್ಸವದ ಉದ್ಘಾಟನಾ ಸಮಾರಂಭವು ಶುಕ್ರವಾರ ಅದ್ದೂರಿಯಾಗಿ ನೆರವೇರಿತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಕುಂದಾಪುರ ಉಪವಿಭಾಗದ ಮಾಜಿ ಸಹಾಯಕ ಆಯುಕ್ತರಾಗಿದ್ದ ರಶ್ಮಿ ಎಸ್. ಆರ್. KAS ದೀಪ ಬೆಳಗಿಸಿ ಉತ್ಸವಕ್ಕೆ ಚಾಲನೆ ನೀಡಿದರು. ಬಳಿಕ ಅವರು ಮಾತನಾಡಿ, ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ಅವರು, “ವಿದ್ಯಾರ್ಥಿ ಜೀವನದಲ್ಲಿ ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳೂ ಅತ್ಯಂತ ಅವಶ್ಯಕ. ‘ನವೋನ್ಮೇಶ’ದಂತಹ ವೇದಿಕೆಗಳು ವಿದ್ಯಾರ್ಥಿಗಳಲ್ಲಿ ಅಡಗಿರುವ ನಾಯಕತ್ವ ಗುಣ ಹಾಗೂ ಕೌಶಲ್ಯಗಳನ್ನು ಬೆಳೆಸಲು ಸಹಾಯ ಮಾಡುತ್ತವೆ. ಯುವಜನತೆ ತಮಗೆ ಸಿಕ್ಕ ಅವಕಾಶಗಳನ್ನು ಸದುಪಯೋಗಪಡಿಸಿಕೊಂಡು ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು” ಎಂದು ಕಿವಿಮಾತು ಹೇಳಿದರು. ಅತಿಥಿಯಾಗಿ ಪಾಲ್ಗೊಂಡಿದ್ದ ಖ್ಯಾತ ಚಲನಚಿತ್ರ ನಟ ಬಿಗ್ ಬಾಸ್ ಖ್ಯಾತಿಯ ರೂಪೇಶ್ ಶೆಟ್ಟಿ ಅವರು ಮಾತನಾಡಿ, “ಪ್ರತಿಯೊಬ್ಬರಲ್ಲೂ ಒಂದಲ್ಲ ಒಂದು ವಿಶೇಷ ಪ್ರತಿಭೆ ಇದ್ದೇ…

Read More