ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ನಶಾ ಮುಕ್ತ ಭಾರತ ಅಭಿಯಾನವು ದೇಶದ ಆರೋಗ್ಯಕರ ಮತ್ತು ಪ್ರಗತಿಪರ ಸಮಾಜ ನಿರ್ಮಾಣದ ಮಹತ್ವದ ಪ್ರಯತ್ನವಾಗಿದೆ. ಇಂದಿನ ಕಾಲದಲ್ಲಿ ಯುವಜನರು ಮಾದಕ ವಸ್ತುಗಳ ಬಲೆಗೆ ಬೀಳುತ್ತಿರುವುದು ವಿಷಾದನೀಯ. ವ್ಯಸನವು ವ್ಯಕ್ತಿಯ ಆರೋಗ್ಯವನ್ನು ಮಾತ್ರವಲ್ಲ, ಕುಟುಂಬದ ಶಾಂತಿ ಮತ್ತು ಸಮಾಜದ ಪ್ರಗತಿಯನ್ನು ಸಹ ಹಾಳುಮಾಡುತ್ತದೆ ಎಂದು ಕುಂದಾಪುರ ಪೊಲೀಸ್ ಠಾಣೆಯ ಉಪ ನಿರೀಕ್ಷಕರಾದ ನಂಜ ನಾಯ್ಕ್ ಹೇಳಿದರು. ಅವರು ಇಲ್ಲಿನ ಡಾ| ಬಿ. ಬಿ ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕ ಮತ್ತು ಮಾಧಕ ವ್ಯಸನ ವಿರೋಧಿ ಘಟಕದ ಆಶ್ರಯದಲ್ಲಿ ನಡೆದ ‘ನಶಾ ಮುಕ್ತ ಭಾರತ’ ಅಭಿಯಾನದ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಕೆ. ಉಮೇಶ್ ಶೆಟ್ಟಿ ವಹಿಸಿದ್ದರು. ವಿಲ್ಮಾ ಶೆರಲ್ ಅತಿಥಿಗಳನ್ನು ಪರಿಚಯಿಸಿದರು. ಎನ್.ಎಸ್.ಎಸ್. ಘಟಕ 1ರ ಕಾರ್ಯಕ್ರಮಾಧಿಕಾರಿ ರಾಜೇಶ್ ಶೆಟ್ಟಿ ವಕ್ವಾಡಿ ಸ್ವಾಗತಿಸಿ, ಎನ್.ಎಸ್.ಎಸ್. ಘಟಕ 2ರ ಕಾರ್ಯಕ್ರಮಾಧಿಕಾರಿ ಪೂಜಾ ಕುಂದರ್ ನಿರೂಪಿಸಿ, ಮಾಧಕ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಕರಾವಳಿ ಜಿಲ್ಲೆಗಳಲ್ಲಿ ವಿಶೇಷವಾಗಿ ಬೈಂದೂರು ವಿಧಾನ ಸಭಾಕ್ಷೇತ್ರ ವ್ಯಾಪ್ತಿಯಲ್ಲಿ 94 ಸಿ ಅಡಿ ಅರ್ಜಿ ಹಾಕಿಯೂ ಈವರೆಗೂ ಹಕ್ಕು ಪತ್ರ ಸಿಗದೇ ನೂರಾರು ಕುಟುಂಬಗಳು ವಿವಿಧ ಸರಕಾರಿ ಸೌಲಭ್ಯ ವಂಚಿತರಾಗಿದ್ದಾರೆ. ಕೂಡಲೇ ಸರಕಾರ ಹಕ್ಕುಪತ್ರ ವಿತರಿಸಬೇಕು ಎಂದು ಶಾಸಕ ಗುರುರಾಜ್ ಶೆಟ್ಟಿ ಗಂಟಿಹೊಳೆ ಅವರು ಒತ್ತಾಯಿಸಿದ್ದಾರೆ. ವಿಧಾನಸಭೆಯಲ್ಲಿ ಶಾಸಕರು ಪ್ರಸ್ತಾಪಿಸಿದ ಚುಕ್ಕೆ ರಹಿತ ಪ್ರಶ್ನೆಗೆ ರಾಜ್ಯ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಉತ್ತರಿಸಿ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಿ.ಆರ್.ಜೆಡ್ ಹಾಗೂ ಪೋರಂಬೊಕು ಸ್ಥಳವನ್ನು ಅಕ್ರಮಿಸಿ ಒಟ್ಟು 1428 ಅರ್ಜಿ ಗಳಿವೆ. ಬೈಂದೂರು ಹಾಗೂ ಕುಂದಾಪುರ ತಾಲೂಕಿನಲ್ಲಿ 261 ಅರ್ಜಿಗಳು ಹಾಗೂ ಬೈಂದೂರು ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕುಮ್ಕಿ ಮಿತಿಯಲ್ಲಿ 94 ಸಿ ಅಡಿ ಒಟ್ಟು 849 ಅರ್ಜಿಗಳು ವಿಲೇವಾರಿಗೆ ಬಾಕಿಯಿದೆ ಎಂದರು. ಬೈಂದೂರು ವಿಧಾನ ಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಕುಮ್ಕಿ ಮಿತಿ, ಪೋರಂಬೊಕು ಹಾಗೂ ಸಿ.ಆರ್.ಜೆಡ್ ವ್ಯಾಪ್ತಿಯಲ್ಲಿ ಹಲವು ವರ್ಷಗಳಿಂದ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಉಡುಪಿ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಕುಂದಾಪುರ ಹಾಗೂ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹಟ್ಟಿಕುದ್ರು ಇವರ ಸಂಯುಕ್ತಾಶ್ರಯದಲ್ಲಿ ನಡೆದ , ಕುಂದಾಪುರ ವೃತ್ತ ಮಟ್ಟದ 14ರ ವಯೋಮಾನದ ಬಾಲಕಿಯರ ಕಬಡ್ಡಿ ಪಂದ್ಯಾಟದಲ್ಲಿ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿಯರ ತಂಡವು ಪ್ರಥಮ ಸ್ಥಾನ ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಅವರಿಗೆ, ಶಾಲಾ ಆಡಳಿತ ಮಂಡಳಿ, ಮುಖ್ಯ ಶಿಕ್ಷಕರು, ಬೋಧಕ-ಬೋಧಕೇತರ ವರ್ಗದವರು ಅಭಿನಂದನೆ ಸಲ್ಲಿಸಿರುತ್ತಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಮೂಡುಬಿದಿರೆ: ಮಂಗಳೂರು ವಿಶ್ವವಿದ್ಯಾಲಯದ ಅಧೀನದಲ್ಲಿರುವ 210 ಕಾಲೇಜುಗಳ ಪೈಕಿ, ವೈಯಕ್ತಿಕ ಕ್ರೀಡೆ ಮತ್ತು ಗುಂಪು ಆಟಗಳ 42 ವಿಭಾಗಗಳಲ್ಲಿ ನಡೆದ ವಿವಿಧ ಸ್ಪರ್ಧೆಗಳಲ್ಲಿ ಅತ್ಯುತ್ತಮ ಸಾಧನೆ ತೋರಿದ ಮೂಡುಬಿದಿರೆಯ ಆಳ್ವಾಸ್ ಕಾಲೇಜು, ಈ ಶೈಕ್ಷಣಿಕ ವರ್ಷದಲ್ಲಿಯೂ ಪುರುಷರ ಹಾಗೂ ಮಹಿಳೆಯರ ಎರಡು ವಿಭಾಗಗಳಲ್ಲಿ ಸಮಗ್ರ ಚಾಂಪಿಯನ್‌ಶಿಪ್ ಪಟ್ಟವನ್ನು ತನ್ನದಾಗಿಸಿಕೊಂಡಿದೆ. ಆಳ್ವಾಸ್ ಕಾಲೇಜು ಸತತ 23 ವರ್ಷಗಳಿಂದ ಈ ಸಾಧನೆಯನ್ನು ಮೆರೆಯುತ್ತಾ ಬಂದಿದೆ. ಈ ಬಾರಿ ಪುರುಷರ ವಿಭಾಗದಲ್ಲಿ 308 ಅಂಕಗಳು ಹಾಗೂ ಮಹಿಳೆಯರ ವಿಭಾಗದಲ್ಲಿಯೂ 308 ಅಂಕಗಳನ್ನು ಗಳಿಸಿ ಒಟ್ಟು 616 ಅಂಕಗಳೊಂದಿಗೆ ಅಗ್ರಸ್ಥಾನವನ್ನು ಪಡೆದಿದೆ. ಅಥ್ಲೆಟಿಕ್ಸ್, ಕ್ರಾಸ್‌ಕಂಟ್ರಿ, ಬಾಲ್ ಬ್ಯಾಡ್ಮಿಂಟನ್, ಕಬಡ್ಡಿ, ಖೋ-ಖೋ, ವಾಲಿಬಾಲ್, ಬ್ಯಾಡ್ಮಿಂಟನ್, ಹ್ಯಾಂಡ್‌ಬಾಲ್, ಸಾಫ್ಟ್ಬಾಲ್, ವೇಟ್ ಲಿಫ್ಟಿಂಗ್, ಪವರ್ ಲಿಫ್ಟಿಂಗ್, ಬೆಸ್ಟ್ ಫಿಸಿಕ್, ಕ್ರಿಕೆಟ್, ಚೆಸ್, ಕರಾಟೆ, ಟೇಬಲ್ ಟೆನ್ನಿಸ್, ನೆಟ್‌ಬಾಲ್, ಹಾಕಿ, ಫುಟ್‌ಬಾಲ್, ಕುಸ್ತಿ, ಟಗ್ ಆಫ್ ವಾರ್ ಸೇರಿದಂತೆ ಅನೇಕ ಕ್ರೀಡಾ ವಿಭಾಗಗಳಲ್ಲಿ ತೋರಿದ ಅತ್ಯುತ್ತಮ ಪ್ರದರ್ಶನದ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಇಲ್ಲಿನ ಕೋಟದ ಜೀವನ್ ಮಿತ್ರ ಸೇವಾ ಟ್ರಸ್ಟ್ ಅಶಕ್ತರಿಗೆ ಅನಾರೋಗ್ಯ ಪೀಡಿತರಿಗೆ, ಅಪಘಾತಕ್ಕಿಡಾದವರಿಗೆ ಸದಾ ನೆರವು ನೀಡುತ್ತಿರುವ ಸಂಸ್ಥೆ ಈ ಸಂಸ್ಥೆ ಇದೀಗ ತನ್ನೂರಿನ ಅನಾರೋಗ್ಯ ಪೀಡಿತರಾದ ಕೋಟತಟ್ಟು ಪಡುಕರೆಯ ವಿಜಯ ಪೂಜಾರಿಯವರ ನೆರವಿಗಾಗಿ ಕೋಟ, ಸಾಲಿಗ್ರಮ, ಸಾಸ್ತಾನ ಟೋಲ್ ಸೇರಿದಂತೆ ವಿವಿಧ ಭಾಗಗಳಿಗೆ ತೆರಳಿ ನೆರವು ಕ್ರೂಡಿಕರಿಸಿದೆ. ಇತ್ತೀಚಿಗೆ ಮಣಿಪಾಲದ ಕೆ.ಎಂ.ಸಿಯಲ್ಲಿ ಗಂಭೀರ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿರುವ ವಿಜಯ್ ಪೂಜಾರಿ ಅವರ ಚಿಕಿತ್ಸಾ ವೆಚ್ಚಕ್ಕಾಗಿ ಸಂಸ್ಥೆಯ ಕಾರ್ಯಕರ್ತರು ಮತ್ತು ಸ್ನೇಹಿತರು ಸೇರಿಕೊಂಡು ಸುಮಾರು 69,000 ಹಣ ಸಂಗ್ರಹಿಸಿ ಮಾನವೀಯತೆಯ ಮೆರೆದಿದ್ದಾರೆ. ಇದನ್ನು ಗುರುವಾರ ಕೋಟದ ಅಮೃತೇಶ್ವರಿ ದೇಗುಲದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿ ಕೊಲ್ಲೂರು ಮುಕಾಂಬಿಕೆ ಹಾಗೂ ಕೋಟದ ಅಮೃತೇಶ್ವರಿ ದೇಗುಲದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಶಾಂತ್ ಕುಮಾರ್ ಶೆಟ್ಟಿ ಸಮ್ಮುಖದಲ್ಲಿ ಆ ಕುಟುಂಬದವರಿಗೆ ಹಸ್ತಾಂತರಿಸಿದರು. ಬುಧವಾರ ಸಾಸ್ತಾನ ಟೋಲ್ ಗೇಟ್ ಬಳಿ ಜೀವನ್ ಮಿತ್ರ ಸೇವಾ ಟ್ರಸ್ಟ್ ಮತ್ತು ವಿಜಯ್ ಪೂಜಾರಿ ಅವರ ಸ್ನೇಹಿತರು ಸೇರಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಜಿಲ್ಲಾ ಪೊಲೀಸ್ ದೂರುಗಳ ಪ್ರಾಧಿಕಾರಕ್ಕೆ ನಾಗರೀಕ ಸೇವಾ ಸಮಾಜದಿಂದ ಒಬ್ಬ ಸದಸ್ಯರನ್ನು ನೇಮಕ ಮಾಡಬೇಕಾಗಿರುವ ಹಿನ್ನೆಲೆ, ಜಿಲ್ಲಾ ಪೊಲೀಸ್ ದೂರುಗಳ ಪ್ರಾಧಿಕಾರದ ಸದಸ್ಯರ ಹುದ್ದೆಯಲ್ಲಿ ಕರ್ತವ್ಯ ನಿರ್ವಹಿಸಲು ಆಸಕ್ತ ಅಭ್ಯರ್ಥಿಗಳಿಂದ ಬಯೋ ಡಾಟಾ (ವೈಯಕ್ತಿಕ ಮಾಹಿತಿ) ಹಾಗೂ ಸಹಮತಿ ಪತ್ರ ಸಹಿತ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಸೆಪ್ಟಂಬರ್ 4 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾಧಿಕಾರಿಗಳ ಕಚೇರಿಯ ಆಡಳಿತ ಶಾಖೆ, ರಜತಾದ್ರಿ, ಮಣಿಪಾಲ, ಉಡುಪಿ ದೂ.ಸಂಖ್ಯೆ:0820-2574925 ಅನ್ನು ಸಂಪಕಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಮಂಗಳೂರಿನ ಕಿಂಗ್ಸ್ ಚೆಸ್ ಅಕಾಡೆಮಿಯವರು ನಡೆಸಿದ 11ನೇ ರಾಷ್ಟ್ರ ಮಟ್ಟದ ರ್‍ಯಾಪಿಡ್ ಚೆಸ್ ಸ್ಪರ್ಧೆಯಲ್ಲಿ 7ರ ವಯೋಮಾನದ ವಿಭಾಗದಲ್ಲಿ ಕಿರಿಮಂಜೇಶ್ವರದ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್‌ನ 2ನೇ ತರಗತಿ ವಿದ್ಯಾರ್ಥಿ ಪ್ರಮುಖ ಬಿ. ಪೂಜಾರಿ 6ರಲ್ಲಿ6 ಪಂದ್ಯವನ್ನು ಗೆದ್ದು ಪ್ರಥಮ ಸ್ಥಾನವನ್ನು ಪಡೆದಿರುತ್ತಾನೆ . ವಿದ್ಯಾರ್ಥಿಯ ಈ ಸಾಧನೆಗೆ ಆಡಳಿತ ಮಂಡಳಿ, ಮುಖ್ಯ ಶಿಕ್ಷಕಿ, ಬೋಧಕ/ ಬೋಧಕೇತರ ವೃಂದದವರು, ವಿದ್ಯಾರ್ಥಿಗಳು ಅಭಿನಂದನೆಯನ್ನು ಸಲ್ಲಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಹಟ್ಟಿಯಂಗಡಿಯ ಶ್ರೀ ಸಿದ್ಧಿವಿನಾಯಕ ದೇವಸ್ಥಾನ ಮತ್ತು ಶ್ರೀ ಸಿದ್ಧಿಶೈಕ್ಷಣಿಕ ಪ್ರತಿಷ್ಠಾನ, ಹಟ್ಟಿಯಂಗಡಿ ಇವರ ಸಂಯುಕ್ತ ಆಶ್ರಯದಲ್ಲಿ ಗಣೇಶ ಚತುರ್ಥಿಯ ಪ್ರಯುಕ್ತ ವರ್ಷಂಪ್ರತಿ ನಡೆಯುವಂತೆ ಈ ವರ್ಷವೂ ಸಹ ತಾಲೂಕು ಮಟ್ಟದ ವಿವಿಧ ಸಾಂಸ್ಕೃತಿಕ ಮತ್ತು ಕ್ರೀಡಾಸ್ಪರ್ಧೆಗಳು ಗುರುವಾರ ಜರುಗಿದವು. ಕುಂದಾಪುರ ಮತ್ತು ಬೈಂದೂರು ತಾಲೂಕಿಗೊಳಪಟ್ಟ ಸುಮಾರು 20ಕ್ಕೂ ಹೆಚ್ಚು ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ 1000ಕ್ಕೂ ಹೆಚ್ಚು ಸ್ಪರ್ಧಿಗಳು 22 ಸಾಂಸ್ಕೃತಿಕ, 12 ಕ್ರೀಡಾ ಸ್ಪರ್ಧೆಗಳಲ್ಲಿ ತಮ್ಮ ಕರಾಮತ್ತನ್ನು ಪ್ರದರ್ಶಿಸಿದರು. ವೇದಮೂರ್ತಿ ರಾಮಚಂದ್ರ ಭಟ್ಟರ ಧರ್ಮಪತ್ನಿಯವರಾದ ರಮಾದೇವಿ ಆರ್ ಭಟ್ ಅವರು ದೀಪ ಬೆಳಗುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು. ಮುಂಜಾನೆ ನಡೆದ ಉದ್ಘಾಟನಾ ಸಮಾರಂಭದಲ್ಲಿ ಶ್ರೀ ಸಿದ್ಧಿ ಶೈಕ್ಷಣಿಕ ಪ್ರತಿಷ್ಠಾನ ಹಟ್ಟಿಅಂಗಡಿಯ ಕಾರ್ಯದರ್ಶಿಗಳು, ಶಾಲಾ ಪ್ರಾಂಶುಪಾಲರೂ ಆದ ಶರಣ ಕುಮಾರ ಪ್ರಾಸ್ತಾವಿಕವಾಗಿ ಮಾತನಾಡಿ, 28 ವರ್ಷಗಳಿಂದ ನಡೆದು ಬರುತ್ತಿರುವ ಈ ಕಾರ್ಯಕ್ರಮವನ್ನು ದಿವಂಗತ ವೇದಮೂರ್ತಿ ರಾಮಚಂದ್ರ ಭಟ್ಟರು ಆರಂಭಿಸಿದ್ದರು. ಶ್ರೀ ಸಿದ್ಧಿವಿನಾಯಕ ದೇವಸ್ಥಾನವು ಧಾರ್ಮಿಕ ಕಾರ್ಯಕ್ರಮಗಳ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಇಲ್ಲಿನ ಕೋಟತಟ್ಟು ಬಾರಿಕೆರೆ ನಿವಾಸಿ ರಾಘವೇಂದ್ರ ಪೂಜಾರಿ ಅಪಘಾತದಲ್ಲಿ ಭೀಕರವಾಗಿ ಗಾಯಗೊಂಡಿದ್ದು ಈತನ ನೆರವಿಗೆ ಕೂಲಿ ಕಾರ್ಮಿಕ ಮಂಜುನಾಥ್ ಪೂಜಾರಿ ನೆರವಿನ ಹಸ್ತ ಚಾಚಿದ್ದಾರೆ. ಸ್ವಾತಂತ್ರ್ಯೋತ್ಸವ ಅಂಗವಾಗಿ ಈ ಮಹಾಕಾರ್ಯವನ್ನು ಮಂಜುನಾಥ್ ಪೂಜಾರಿ ಮಾಡಿದ್ದಾರೆ. ಅವರು ದಿನಂಪ್ರತಿ ಕೂಲಿನಾಲಿ ಮಾಡಿ ಸಂಪಾದಿಸಿದ ಹಣವನ್ನು ಶೇಖರಿಸಿ ಅನಾರೋಗ್ಯಕ್ಕಿಡಾದವರಿಗೆ, ಸ್ಥಳೀಯ ಸರಕಾರಿ, ಅನುದಾನಿತ ಶಾಲೆಗಳಿಗೆ ನೆರವು ನೀಡುತ್ತಿದ್ದಾರೆ. ಈಗಾಗಲೇ ಸಾಕಷ್ಟು ಸೇವಾಕಾರ್ಯ ಮಾಡಿರುವುದು ಗಮನಾರ್ಹವಾಗಿದೆ. ಈ ಸಂದರ್ಭದಲ್ಲಿ ಕೋಟ ಸಹಕಾರಿ ವ್ಯವಸಾಯಕ ಸಂಘದ ನಿರ್ದೇಶಕ ರಂಜಿತ್ ಬಾರಿಕೆರೆ, ಬಾರಿಕೆರೆ ಯುವಕ ಮಂಡಲದ ಅಭಿಜಿತ್ ಕಾಂಚನ್, ವಿಜಯ್ ಪೂಜಾರಿ, ರತ್ನಾಕರ ಪೂಜಾರಿ ಇದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಎಂಐಟಿ ಕುಂದಾಪುರ ಮತ್ತು ಎಂಎಸ್‌ಡಿಸಿ ಮಣಿಪಾಲ ಸಂಸ್ಥೆಗಳು ಪ್ರಸ್ತುತ ಉದ್ಯಮದ ಅವಶ್ಯಕತೆಗಳಿಗೆ ಅನುಗುಣವಾಗಿ ವಿವಿಧ ಅತ್ಯಾಧುನಿಕ ತಂತ್ರಜ್ಞಾನಗಳಲ್ಲಿ ವಿದ್ಯಾರ್ಥಿಗಳ ಕೌಶಲ್ಯ ಅಭಿವೃದ್ಧಿಗಾಗಿ, ಉದ್ಯಮದ ಅವಶ್ಯಕತೆಗಳಿಗೆ ತಕ್ಕಂತೆ ವಿವಿಧ ಅತ್ಯಾಧುನಿಕ ತಂತ್ರಜ್ಞಾನಗಳಲ್ಲಿ ಸಹಯೋಗದೊಂದಿಗೆ ಕೆಲಸ ಮಾಡಲು ಒಪ್ಪಂದಕ್ಕೆ ಸಹಿ ಹಾಕಿದವು. ಎಂಎಸ್‌ಡಿಸಿ ಮಣಿಪಾಲ ಅಧ್ಯಕ್ಷ ಬ್ರಿಗೇಡಿಯರ್ ಡಾ. ಸುರ್ಜಿತ್ ಸಿಂಗ್ ಪಬ್ಲಾ ಮತ್ತು ಐಎಂಜೆ ವಿದ್ಯಾ ಸಂಸ್ಥೆಗಳ ಬ್ರಾಂಡ್ ಬಿಲ್ಡಿಂಗ್ ನಿರ್ದೇಶಕ ಡಾ. ರಾಮಕೃಷ್ಣ ಹೆಗ್ಡೆ, ಡಾ. ಇಂದ್ರವಿಜಯ ಸಿಂಗ್ ಡೀನ್ ಮತ್ತು ವಿಭಾಗ ಮುಖ್ಯಸ್ಥರು ಎಐಎಂಎಲ್ ವಿಭಾಗ ಎಂಐಟಿ ಕುಂದಾಪುರ ಮತ್ತು ಎಂಎಸ್‌ಡಿಸಿ ಮಣಿಪಾಲದ ಅಧಿಕಾರಿಗಳಾದ ಡಾ. ಅಂಜಯ್ಯ ದೇವಿನೇನಿ, ಡಾ. ಎ ಗಣೇಶ್, ಪ್ರೊ. ನಾಗರಾಜ್, ಡಾ. ರಾಮಸ್ವಾಮಿ, ಪ್ರೊ. ಮಂಗಳಾ ಕೆ. ಉಪಸ್ಥಿತರಿದ್ದರು.
