ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಬಸ್ರೂರು ಶ್ರೀ ಶಾರದಾ ಕಾಲೇಜಿನಲ್ಲಿ ಬುಧವಾರದಂದು ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆ ಪ್ರಯುಕ್ತ ಕುಂದಾಪುರ ತಾಲೂಕು ಮಟ್ಟದ ಪದವಿ ಪೂರ್ವ ಮತ್ತು ಪದವಿ ವಿದ್ಯಾರ್ಥಿಗಳ ಅಂತರ್ ಕಾಲೇಜು ಕುಂದಗನ್ನಡ ಮತ್ತು ಸಾಂಸ್ಕೃತಿಕ ಹಾಗೂ ಕ್ರೀಡಾ ಸ್ಪರ್ಧೆಯ ಉದ್ದೇಶದಿಂದ ಚೆನ್ನಿಮಣಿ 2025 – ಎಲ್ಲಾ ಒಂದ್ ಗಳ್ಗಿ ಬನಿ’ ಎಂಬ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮದ ಉದ್ಘಾಟಕರಾಗಿ ಆಗಮಿಸಿದ ಮಾಜಿ ಸಂಸದರು, ಕುಂದಗನ್ನಡ ಅಧ್ಯಯನ ಪೀಠದ ಸದಸ್ಯರಾದ ಕೆ. ಜಯಪ್ರಕಾಶ ಹೆಗ್ಡೆ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿ, ಇಂದು ಸರಕಾರ ಮಟ್ಟದಲ್ಲಿ ಕುಂದಾಪ್ರ ಕನ್ನಡ ಅಭಿವೃದ್ಧಿಗೆ ಪ್ರೋತ್ಸಾಹ ದೊರಕಿದ್ದು ಈ ನಿಟ್ಟಿನಲ್ಲಿ ಮಂಗಳೂರು ವಿಶ್ವ ವಿದ್ಯಾನಿಲಯ ಮಟ್ಟದಲ್ಲಿ ಕುಂದಗನ್ನಡ ಅಭಿವೃದ್ಧಿಗೆ ಪೂರಕ ಕ್ರಮ ಕೈಗೊಳ್ಳಲಾಗುತ್ತಿದ್ದು ಕಾಲೇಜು ಮಟ್ಟದಲ್ಲಿ ಹಮ್ಮಿಕೊಂಡ ಇಂತಹ ಕಾರ್ಯಕ್ರಮಗಳ ಬಗ್ಗೆ ಶ್ಲಾಘಿಸಿದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಮಂಗಳೂರು ವಿಶ್ವ ವಿದ್ಯಾನಿಲಯದ ಕುಲ ಸಚಿವರಾದ ರಾಜು ಮೊಗವೀರ ಕಾರ್ಯಕ್ರಮದ ಕುರಿತು ಯಾವುದೇ ಒಂದು ಭಾಷೆ ಕಲಿಯುವಾಗ ಅದರ ಹಿನ್ನೆಲೆಯನ್ನು ಅರ್ಥೈಸಿಕೊಂಡರೆ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಇತ್ತೀಚೆಗೆ ಕುಂದಾಪುರ ಮತ್ತು ಬೈಂದೂರು ತಾಲೂಕು ಮಟ್ಟದ ದಸರಾ ಕ್ರೀಡಾಕೂಟದ ಅಂಗವಾಗಿ ನಡೆದ ಮಹಿಳೆಯರ ಥ್ರೋಬಾಲ್ ನಲ್ಲಿ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ಪ್ರಾಕ್ತನ ಮತ್ತು ಪ್ರಸ್ತುತ ವಿದ್ಯಾರ್ಥಿಗಳ ತಂಡ ಪ್ರಥಮ ಸ್ಥಾನವನ್ನು ಗಳಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಕುಂದಾಪುರ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಬೈಂದೂರು ಹಾಗೂ ಕುಂದಾಪುರ ತಾಲೂಕು ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ಬಾಲಕಿಯರು ಥ್ರೋಬಾಲ್ ಪಂದ್ಯಾಟದಲ್ಲಿ ದ್ವಿತೀಯ ಸ್ಥಾನ ಪಡೆದುಕೊಂಡು ಸಾಧನೆ ಮೆರೆದಿದ್ದಾರೆ. ವಿದ್ಯಾರ್ಥಿಗಳೊಂದಿಗೆ ಕಾಲೇಜಿನ ಪ್ರಾಂಶುಪಾಲರಾದ ಸಂದೀಪ್ ಗಾಣಿಗ, ಉಪ ಪ್ರಾಂಶುಪಾಲರಾದ ಸುಜಯ್ ಕೋಟೆಗಾರ್, ದೈಹಿಕ ಶಿಕ್ಷಣ ಉಪನ್ಯಾಸಕರಾದ ರಾಘವೇಂದ್ರ ಗಾಣಿಗ ಉಪಸ್ಥಿತರಿದ್ದಾರೆ. ವಿದ್ಯಾರ್ಥಿಗಳಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ ಹಾಗೂ ಬೋದಕೇತರ ಸಿಬ್ಬಂದಿ ಅಭಿನಂದನೆ ಸಲ್ಲಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಭಾರತೀಯ ಮೆಡಿಕಲ್ ಅಸೋಸಿಯೇಷನ್‌ನ ಸಹಯೋಗದಲ್ಲಿ ತುಮಕೂರಿನ ಬ್ಯಾಡ್ಮಿಂಟನ್ ಅಕಾಡೆಮಿ ಆಯೋಜಿಸಿದ್ದ 28ನೇ ಸೋಮಣ್ಣ ಸ್ಮಾರಕ ಶಟಲ್ ಪಂದ್ಯಾವಳಿಯ ಪುರುಷರ ಡಬಲ್ಸ್ ವಿಭಾಗದಲ್ಲಿ ಮೂಡುಬಿದಿರೆಯ ಡಾ. ವಿನಯ್ ಆಳ್ವ ಹಾಗೂ ಡಾ. ಕಾರ್ತಿಕ್ ಆರ್ ಚಂದ್ರರ ಜೋಡಿ ಪಂದ್ಯಾವಳಿ ಯುದ್ದಕ್ಕೂ ಉತ್ತಮ ಪ್ರದರ್ಶನ ನೀಡಿ ರಾಜ್ಯ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ. ಈ ಜೋಡಿ ಫೈನಲ್ಸ್‌ನಲ್ಲಿ 21-18, 15-21, 21-10 ಸೆಟ್‌ಗಳ ಅಂತರದಲ್ಲಿ ಜಯಿಸಿ ಮೊದಲ ಸ್ಥಾನ ಪಡೆಯಿತು. ಕಳೆದ ಸಾಲಿನಲ್ಲಿ ಇದೇ ಜೋಡಿ ಬೆಂಗಳೂರಿನ ಆಕ್ಸ್ಫರ್ಡ್ ಮೆಡಿಕಲ್ ಕಾಲೇಜಿನಲ್ಲಿ ನಡೆದ ರಾಜ್ಯಮಟ್ಟದ ಪುರುಷರ ಡಬಲ್ಸ್ ಪಂದ್ಯಾವಳಿಯಲ್ಲಿ ವಿಜಯ ಶಾಲಿಯಾಗಿದ್ದರು. ಡಾ. ಕಾರ್ತಿಕ್ ಆರ್ ಚಂದ್ರ ಅವರು ಜಟ್ಟಿಪಳ್ಳದ ರಾಮಚಂದ್ರ ಪೆಲ್ತಡ್ಕ ಮತ್ತು ಬಿ. ಜೆ. ರಾಧಮಣಿ ದಂಪತಿಗಳ ಸುಪುತ್ರನಾಗಿದ್ದು. ಡಾ ವಿನಯ್ ಆಳ್ವ ಅವರು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಮೋಹನ್ ಆಳ್ವರ ಪುತ್ರರಾಗಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಉಡುಪಿ ಜಿಲ್ಲೆಯ ಶಾಸಕರುಗಳು ಈ ಭಾರಿಯ ಮಳೆಗಾಲದ ಅಧಿವೇಶನದಲ್ಲಿ ಒಂದಷ್ಟು ಸಮಯವನ್ನು ಕರಾವಳಿಯ ರೈತರ ಸಂಕಷ್ಟ, ಸಮಸ್ಯೆಗಳ ಚರ್ಚೆಗೆ ಮೀಸಲಾಗಿಡುವಂತೆ ತಾಲೂಕಿನ ರೈತ ಮುಖಂಡ ಕೆ. ವಿಕಾಸ್ ಹೆಗ್ಡೆ ಆಗೃಹಿಸಿದ್ದಾರೆ. ಕರಾವಳಿಯಲ್ಲಿ ಈ ಭಾರಿ ವಾಡಿಕೆಗಿಂತ ಅತೀ ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗಿದ್ದು ವಿಶೇಷವಾಗಿ ಭತ್ತ ಹಾಗೂ ಅಡಿಕೆ ಬೆಳೆಗಳು ಭೀಕರ ಮಳೆಗೆ ಸಂಪೂರ್ಣ ನಾಶಗೊಂಡು ರೈತರು ಅತೀವ ಆರ್ಥಿಕ ಸಂಕಷ್ಟಕ್ಕೆ ಒಳಗಾಗಿದ್ದಾರೆ. ಅಡಿಕೆ ಕೊಳೆ ರೋಗ ಬಾರದಂತೆ ಔಷಧಿ ಸಿಂಪಡಣೆಯನ್ನು ಹಲವು ಭಾರಿ ಮಾಡಿದರೂ ಕೂಡ ಅತೀವ ಮಳೆಯಿಂದ ಅಡಿಕೆ ಫಸಲು ಸಂಪೂರ್ಣ ನಾಶವಾಗಿದೆ. ಕರಾವಳಿಯ ರೈತರು ಜೀವನೋಪಾಯಕ್ಕೆ ಅಡಿಕೆ, ಭತ್ತ, ತೆಂಗು ಇತ್ಯಾದಿ ಬೆಳೆಗಳನ್ನೇ ಹೆಚ್ಚಾಗಿ ನಂಬಿದ್ದು ಈ ಕೃಷಿ ನಾಶದಿಂದ ಕಂಗಾಲಾಗಿದ್ದಾರೆ. ಆದುದರಿಂದ ಜಿಲ್ಲೆಯ ಶಾಸಕರುಗಳು ಅಧಿವೇಶನದಲ್ಲಿ ಪ್ರಶ್ನೆಗಳಲ್ಲದೆ ಒಂದಷ್ಟು ಅವಧಿಯನ್ನು ಕರಾವಳಿಯ ರೈತರ ಸಮಸ್ಯೆಗಳನ್ನು ಮಾತ್ರ ಚರ್ಚಿಸಲು ಮೀಸಲು ಇಡುವಂತೆ ಹಾಗೂ ಕೃಷಿ ಹಾನಿಗೆ ದೊಡ್ಡ ಪ್ರಮಾಣದ ಪರಿಹಾರ ಮೊತ್ತ ನೀಡುವಂತೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಸಹಕಾರಿ ಕ್ಷೇತ್ರದಲ್ಲಿ ರಾಮಾಂಜನೇಯ ಸೌಹಾರ್ದ ಸಹಕಾರಿ ಸಂಘ ಅಭಿವೃದ್ಧಿಗೆ ಮುನ್ನುಡಿ ಬರೆದು ಹೊಸ ಮೈಲುಗಲ್ಲು ಸ್ಥಾಪಿಸಲು ಅಣಿಯಾಗಿರುವುದು ಶ್ಲಾಘನೀಯ ಎಂದು ನಾಡೋಜ ಡಾ. ಜಿ. ಶಂಕರ್ ಅಭಿಪ್ರಾಯಪಟ್ಟರು. ಅವರು ಬುಧವಾರ ರಾಮಾಂಜನೇಯ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘ ಕೋಡಿ ಇದರ ಸಾಸ್ತಾನ ಶಾಖಾ ಕಛೇರಿ ಲೋಕಾರ್ಪಣೆಗೊಳಿಸಿ ಮಾತನಾಡಿ, ಒಂದು ಸಾಮಾನ್ಯವಾಗಿರುವ ಸಹಕಾರಿ ಸಂಘ ಈ ರೀತಿಯಲ್ಲಿ ಯಶಸ್ಸಿನ ಮೆಟ್ಟಿಲೇರಲು ಸಾಧ್ಯವಿದೆ ಎಂಬುವುದನ್ನು ರಾಮಾಂಜನೇಯ ತೊರಿಸಿಕೊಟ್ಟಿದೆ.ಇಂತಹ ಸಂಘಗಳು ಸಮಾಜದ ಒಳಿತಿಗೆ ಮುನ್ನುಡಿ ಬರೆಯಲಿ ಎಂದು ಶುಭಹಾರೈಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ರಾಮಾಂಜನೇಯ ಸಂಘದ ಅಧ್ಯಕ್ಷ ಶಂಭು ಪೂಜಾರಿ ವಹಿಸಿದ್ದರು. ವಿದ್ವಾನ್ ಡಾ. ವಿಜಯ ಮಂಜರ್ ಶುಭಾಶಂಶನೆಗೈದರು. ಭದ್ರತಾಕೋಶವನ್ನು ಉದ್ಯಮಿ ಲಕ್ಷ್ಮೀನಾರಾಯಣ , ಗಣಕೀಕೃತ ಬ್ಯಾಂಕಿಂಗ್ ಸೌಲಭ್ಯವನ್ನು ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿಯಮಿತ ಬೆಂಗಳೂರು ಇದರ ನಿರ್ದೇಶಕ ಮಂಜುನಾಥ್ ಎಸ್. ಕೆ, ಠೇವಣಿ ಪತ್ರವನ್ನು ಗೋಳಿಗರಡಿ ದೈವಸ್ಥಾನದ ಮುಖ್ಯಸ್ಥ ಜಿ.ವಿಠ್ಠಲ್ ಪೂಜಾರಿ, ಆವರ್ತನ ಠೇವಣಿಯನ್ನು ಕೋಟ ಸಹಕಾರಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಮೀನುಗಾರಿಕಾ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪ್ರಧಾನ ಮಂತ್ರಿ ಮತ್ಸ್ಯಸಂಪದ ಯೋಜನೆಯ ಫಲಾನುಭವಿ ಆಧಾರಿತ ಯೋಜನೆಗಳನ್ನು ಅನುಷ್ಟಾನಗೊಳಿಸಲು ಘಟಕವಾರು/ವರ್ಗವಾರು ಗುರಿಗಳನ್ನು ನಿಗದಿಪಡಿಸಲಾಗಿದ್ದು, ಯೋಜನೆಯನ್ನು ಪಾರದರ್ಶಕವಾಗಿ ಅನುಷ್ಟಾನಗೊಳಿಸಲು ಜಿಲ್ಲೆಯ ಅರ್ಹ ಮೀನುಗಾರರಿಂದ ಅರ್ಜಿ ಆಹ್ವಾನಿಸಲಾಗಿದೆ. ಘಟಕಗಳ ವಿವರ: ಪಚ್ಚಿಲೆ ಕೃಷಿ (ಮಸೆಲ್ಸ್, ಕಲ್ಲ, ಕ್ಲಾಮ್ಸ್, ಮುತ್ತು ಇತ್ಯಾದಿ), ಸಾಂಪ್ರದಾಯಿಕ ಮೀನುಗಾರರಿಗೆ (ಬದಲಿ) ದೋಣಿ ಮತ್ತು ಬಲೆ ಒದಗಿಸುವುದು ಹಾಗೂ ಐಸ್ ಪ್ಲಾಂಟ್ / ಕೋಲ್ಡ್ ಸ್ಟೋರೇಜ್ ಆಧುನೀಕರಣಕ್ಕೆ ಸಹಾಯಧನ ನೀಡಲಾಗುವುದು. ಆಸಕ್ತರು ಅರ್ಜಿ ಸಲ್ಲಿಸಲು ಸೆಪ್ಟಂಬರ್ 15 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಉಡುಪಿ, ಕುಂದಾಪುರ ಹಾಗೂ ಕಾರ್ಕಳ ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಚೇರಿಯನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಮೀನುಗಾರಿಕೆ ಇಲಾಖೆಯ ಉಪನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶಾಲಾ ಶಿಕ್ಷಣ ಇಲಾಖೆ ಹಾಗೂ ಸೇಂಟ್ ಫ್ರಾನ್ಸಿಸ್ ಕ್ಸೆವಿಯರ್ ಇಂಗ್ಲಿಷ್ ಮೀಡಿಯಂ ಶಾಲೆ ಉದ್ಯಾವರ ಇವರ ಸಹಭಾಗಿತ್ವದಲ್ಲಿ ನಡೆದ ಜಿಲ್ಲಾಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಅಂಪಾರು ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಶಾಲೆಯ 8ನೇ ತರಗತಿ ವಿದ್ಯಾರ್ಥಿ ಪ್ರೀತೇಶ್ 14ರ ವಯೋಮಾನದ ಬಾಲಕರ 25 ಕೆ.ಜಿ ವಿಭಾಗದಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿಗೆ ಸಾಧನೆಗೆ ಸಂಸ್ಥೆಯ ದೈಹಿಕ ಶಿಕ್ಷಣ ಶಿಕ್ಷಕಿ ಗಾಯತ್ರಿ ಮತ್ತು ಕರಾಟೆ ತರಬೇತುದಾರರಾದ ಅಫ್ಜಲ್ ಇವರು ಮಾರ್ಗದರ್ಶನ ನೀಡಿದ್ದರು. ವಿದ್ಯಾರ್ಥಿಯ ಸಾಧನೆಗೆ ಸಂಜಯಗಾಂಧಿ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ ಬಲಾಡಿ, ಕಾರ್ಯದರ್ಶಿ ನವೀನ್ ಕುಮಾರ್ ಶೆಟ್ಟಿ, ಖಜಾಂಚಿ ಕೊಡ್ಲಾಡಿ ಸುಭಾಶ್ಚಂದ್ರ ಶೆಟ್ಟಿ, ನಿರ್ದೇಶಕರು ಹಾಗೂ ಆಡಳಿತಾಧಿಕಾರಿ ಚೈತ್ರ ಯಡಿಯಾಳ ಹಾಗೂ ಸಿಬ್ಬಂದಿಗಳು ಅಭಿನಂದಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶಾಲಾ ಶಿಕ್ಷಣ ಇಲಾಖೆ ಹಾಗೂ ಸೇಂಟ್ ಫ್ರಾನ್ಸಿಸ್ ಕ್ಸೆವಿಯರ್ ಇಂಗ್ಲಿಷ್ ಮೀಡಿಯಂ ಶಾಲೆ ಉದ್ಯಾವರ ಇವರ ಸಹಭಾಗಿತ್ವದಲ್ಲಿ ನಡೆದ ಜಿಲ್ಲಾಮಟ್ಟದ ಕರಾಟೆ ಸ್ಪರ್ಧೆಯಲ್ಲಿ 14 ವರ್ಷದ ಒಳಗಿನ ವಯೋಮಿತಿಯ 50 ಕೆಜಿ ವಿಭಾಗದಲ್ಲಿ ಕಿರಿಮಂಜೇಶ್ವರದ ಜನತಾ ನ್ಯೂ ಇಂಗ್ಲಿಷ್ ಮೀಡಿಯಂ ಶಾಲೆಯ 8ನೇ ತರಗತಿ ವಿದ್ಯಾರ್ಥಿ ರಜತ್ ವಿಜಯಶಾಲಿಯಾಗಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾನೆ. ವಿದ್ಯಾರ್ಥಿಗಳ ಈ ಸಾಧನೆಗೆ ಜನತಾ ಸಮೂಹ ಸಂಸ್ಥೆಗಳ ಅಧ್ಯಕ್ಷರಾದ ಗಣೇಶ್ ಮೊಗವೀರ ಮತ್ತು ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್ ನ ಮುಖ್ಯ ಶಿಕ್ಷಕಿ ದೀಪಿಕಾ ಆಚಾರ್ಯ ಹಾಗೂ ಬೋಧಕ/ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದರು. ಇದನ್ನೂ ಓದಿ ► ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಜನತಾ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ – https://kundapraa.com/?p=88804 .
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ತಲ್ಲೂರಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ತಾಲೂಕು ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್ ಇದರ 8ನೇ ತರಗತಿ ವಿದ್ಯಾರ್ಥಿಗಳಾದ ಸನ್ವಿತ್ ಮತ್ತು ತನೀಶ್ ವಿಜಯರಾಗಿ ಜಿಲ್ಲಾ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿಗೆ ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿಗಳ ಈ ಸಾಧನೆಗೆ ಜನತಾ ಸಮೂಹ ಸಂಸ್ಥೆಗಳ ಅಧ್ಯಕ್ಷರಾದ ಗಣೇಶ್ ಮೊಗವೀರ ಮತ್ತು ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್ ನ ಮುಖ್ಯ ಶಿಕ್ಷಕಿ ದೀಪಿಕಾ ಆಚಾರ್ಯ ಹಾಗೂ ಬೋಧಕ/ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದರು. ಇದನ್ನೂ ಓದಿ ► ಕರಾಟೆ ಸ್ಪರ್ಧೆಯಲ್ಲಿ ಜನತಾ ಕಿರಿಮಂಜೇಶ್ವರದ ವಿದ್ಯಾರ್ಥಿ ರಜತ್ ರಾಜ್ಯಮಟ್ಟಕ್ಕೆ ಆಯ್ಕೆ – https://kundapraa.com/?p=88807 .
