ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದರಾದ ಬಿ. ವೈ. ರಾಘವೇಂದ್ರ ಅವರು ಕರ್ನಾಟಕ ಸರ್ಕಾರದ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲ ಸಾರಿಗೆ ಸಚಿವರಾದ ಬಸವಂತಪ್ಪ ಅವರಿಗೆ ಎರಡು ಪ್ರಮುಖ ಮನವಿ ಪತ್ರಗಳನ್ನು ಸಲ್ಲಿಸಿ, ಬೈಂದೂರು ವಿಧಾನಸಭಾ ಕ್ಷೇತ್ರದ ಕರಾವಳಿ ಭಾಗದ ಸಮಗ್ರ ಅಭಿವೃದ್ಧಿ ಹಾಗೂ ಇತ್ತೀಚೆಗೆ ಸಮುದ್ರದಲ್ಲಿ ಮುಳುಗಿ ಮೃತಪಟ್ಟ ಮೂವರು ಯುವಕರ ಕುಟುಂಬಗಳಿಗೆ ತುರ್ತು ಪರಿಹಾರ ಒದಗಿಸುವಂತೆ ಕೋರಿದ್ದಾರೆ. 1) ಮೀನುಗಾರಿಕಾ ಸಂಕಷ್ಟ ಪರಿಹಾರ ನಿಧಿಯಡಿ ಗರಿಷ್ಠ ಪರಿಹಾರಕ್ಕೆ ಒತ್ತಾಯಬೈಂದೂರು ವಿಧಾನಸಭಾ ಕ್ಷೇತ್ರದ ಕಿರಿಮಂಜೇಶ್ವರ ಗ್ರಾಮದಲ್ಲಿ ದಿನಾಂಕ 14-10-2025 ರಂದು ಸಂಭವಿಸಿದ ದುರಂತದ ಕುರಿತು ಸಚಿವರ ಗಮನ ಸೆಳೆದ ಸಂಸದರು, ನೊಂದ ಕುಟುಂಬಗಳಿಗೆ ಸಾಂತ್ವನ ನೀಡಲು ವಿಶೇಷ ನೆರವು ಕೋರಿದ್ದಾರೆ: * ಅರಬ್ಬಿ ಸಮುದ್ರದಲ್ಲಿ ಮೀನಿಗೆ ಗಾಳ ಹಾಕುತ್ತಿದ್ದ ಸಂದರ್ಭದಲ್ಲಿ ಆಕಸ್ಮಿಕವಾಗಿ ನೀರಿಗೆ ಬಿದ್ದು ಕಿರಿಮಂಜೇಶ್ವರ ಗ್ರಾಮದ ಆಶೀಶ್ ದೇವಾಡಿಗ (15 ವರ್ಷ), ಸೂರಜ್ ಪೂಜಾರಿ (16 ವರ್ಷ) ಹಾಗೂ ಸಂಕೇತ್ ದೇವಾಡಿಗ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೆಂಗಳೂರು: ಬೆಂಗಳೂರಿನಲ್ಲಿ ನಡೆಯುತ್ತಿರುವ ರಾಜ್ಯ ವಿಧಾನ ಮಂಡಲದ ಮಳೆಗಾಲದ ಅಧಿವೇಶನದಲ್ಲಿ ರಾಜ್ಯದಲ್ಲಿ ಕಳೆದ ಮೂರು ವರ್ಷಗಳಲ್ಲಿ ದಾಖಲಾದ ಅಕ್ರಮ ಗಣಿಗಾರಿಕೆ ಪ್ರಕರಣಗಳು ಹಾಗೂ ತಪ್ಪಿತಸ್ಥರ ಮತ್ತು ಅಕ್ರಮ ಗಣಿಗಾರಿಕೆಗೆ ಸಹಕಾರ ನೀಡಿದ ಅಧಿಕಾರಿಗಳ ವಿರುದ್ಧ ಕೈಗೊಂಡ ಕ್ರಮದ ಬಗ್ಗೆ ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರುರಾಜ್ ಗಂಟಿಹೊಳೆ ಅವರು ಪ್ರಶ್ನೆ ಕೇಳಿದ್ದಾರೆ. ಚುಕ್ಕೆ ರಹಿತ ಪ್ರಶ್ನೆಗೆ ಉತ್ತರಿಸಿದ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಸಚಿವರಾದ ಎಸ್. ಎಸ್ ಮಲ್ಲಿಕಾರ್ಜುನ್ ರವರು ರಾಜ್ಯದಲ್ಲಿ 2024-25 ನೇ ಸಾಲಿನಿಂದ 2026-27 ನೇ ಸಾಲಿನ ಜುಲೈವರೆಗೆ ಅಕ್ರಮ ಗಣಿಗಾರಿಕೆ ಚಟುವಟಿಕೆಗಳಿಗೆ ಸಂಬಂಧಿಸಿದಂತೆ ಪ್ರಕರಣಗಳನ್ನು ಪತ್ತೆ ಹಚ್ಚಿದ್ದು ತಪ್ಪಿತಸ್ಥರ ವಿರುದ್ಧ ಎಂಎಂ (ಡಿ&ಆರ್ )ಕಾಯ್ದೆ 1957 ಮತ್ತು ಕರ್ನಾಟಕ ಉಪಖನಿಜ ರಿಯಾಯಿತಿ ನಿಯಮಗಳು 1994ರ ನಿಯಮಗಳಂತೆ ಮೊಕದ್ದಮೆಗಳನ್ನು ದಾಖಲಿಸಿ ದಂಡವನ್ನು ವಿಧಿಸಿ ಸಂಗ್ರಹಿಸಲಾಗಿದೆ. ರಾಜ್ಯದ ಕೆಲವು ಜಿಲ್ಲೆಗಳಲ್ಲಿ ನದಿ ಪಾತ್ರದಲ್ಲಿನ ಮರಳು,ಕೆಂಪು ಕಲ್ಲು,ಕಟ್ಟಡ ಕಲ್ಲು ಇತ್ಯಾದಿ ಉಪಖನಿಜಗಳನ್ನು ಅನಧಿಕೃತವಾಗಿ ಗಣಿಗಾರಿಕೆ ಹಾಗೂ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಗಂಗೊಳ್ಳಿಯ ಎಸ್.ವಿ. ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ ರೋಟರಿ ಕ್ಲಬ್ ಗಂಗೊಳ್ಳಿ ಪ್ರಾಯೋಜಕತ್ವದಲ್ಲಿ ಇಂಟರ್ಯಾಕ್ಟ್ ಕ್ಲಬ್ನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಎಸ್.ವಿ. ಪದವಿಪೂರ್ವ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಇಂಟರ್ಯಾಕ್ಟ್ ಕ್ಲಬ್ನ ಝೋನಲ್ ಚೇರ್ಮನ್ ನಾಗರಾಜ್ ಶೆಟ್ಟಿ ಅವರು ನೂತನ ಪದಾಧಿಕಾರಿಗಳಿಗೆ ಪದಗ್ರಹಣ ನೆರವೇರಿಸಿ ಶುಭ ಹಾರೈಸಿದರು. ರೋಟರಿ ಕ್ಲಬ್ ಗಂಗೊಳ್ಳಿಯ ಅಧ್ಯಕ್ಷೆ ಮಾಲಾಶ್ರೀ ಖಾರ್ವಿ ಅಧ್ಯಕ್ಷತೆ ವಹಿಸಿದ್ದರು. ಎಸ್.ವಿ. ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಉಪಪ್ರಾಂಶುಪಾಲ ಗೋಪಾಲ್ ದೇವಾಡಿಗ, ಗಂಗೊಳ್ಳಿ ರೋಟರಿ ಕ್ಲಬ್ನ ಇಂಟರ್ಯಾಕ್ಟ್ ಚೇರ್ಮನ್ ರತ್ನಾ, ಇಂಟರ್ಯಾಕ್ಟ್ ಕೋ -ಆರ್ಡಿನೇಟರ್, ಶಿಕ್ಷಕಿ ಉಷಾ ಮತ್ತು ಇತರ ಶಿಕ್ಷಕರು ಉಪಸ್ಥಿತರಿದ್ಧರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಬಸ್ರೂರು ಶ್ರೀ ಶಾರದಾ ಕಾಲೇಜಿನ ವೀರರಾಜೇಂದ್ರ ಹೆಗ್ಡೆ ಸಭಾಭವನದಲ್ಲಿ ಶಿಕ್ಷಕ-ರಕ್ಷಕ ಸಭೆ ಇತ್ತೀಚಿಗೆ ಜರುಗಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಸಂಚಾಲಕರಾದ ಅನುಪಮ ಎಸ್. ಶೆಟ್ಟಿ ಮಾತನಾಡಿ, ಶಿಕ್ಷಕರು ಮತ್ತು ಪಾಲಕರು ಒಟ್ಟಾಗಿ ಕಾರ್ಯ ನಿರ್ವಹಿಸಿದಾಗ ವಿದ್ಯಾರ್ಥಿಗಳ ಶೈಕ್ಷಣಿಕ ಹಾಗು ವೈಯಕ್ತಿಕ ಬೆಳವಣಿಗೆ ಉತ್ತಮ ವಾತಾವರಣ ನಿರ್ಮಾಣವಾಗುತ್ತದೆ. ಆದ್ದರಿಂದ ಇಂತಹ ಸಭೆಯು ವಿದ್ಯಾರ್ಥಿ ಕೇಂದ್ರಿತ ಶಿಕ್ಷಣದ ಪ್ರಮುಖ ಅಂಗವಾಗಿದ್ದರಿಂದ ಪಾಲಕರು ತಮ್ಮ ಕುಟುಂಬದ ಜವಬ್ದಾರಿಯೊಂದಿಗೆ ಮಕ್ಕಳ ಶೈಕ್ಷಣಿಕ ಪ್ರಗತಿ, ಹಾಜರಾತಿ, ವರ್ತನೆ ಕುರಿತು ಶಿಕ್ಷಕರೊಂದಿಗೆ ಚರ್ಚಿಸಿದಾಗ ಮಾತ್ರ ಮಕ್ಕಳು ಅತ್ಯುತ್ತಮ ವಿದ್ಯಾರ್ಥಿಗಳಾಗಿ ರೂಪುಗೊಳ್ಳುತ್ತಾರೆ ಎಂದರು. ಕಾಲೇಜಿನ ಪ್ರಾಂಶುಪಾಲರಾದ ಡಾ. ದಯಾನಂದ ಎನ್. ಅವರು ಕಾಲೇಜಿನ ನಿಯಮಾವಳಿ ಮತ್ತು ಕಾಲೇಜಿನಲ್ಲಿ ಲಭ್ಯವಿರುವ ವಿವಿಧ ಸೌಲಭ್ಯಗಳ ಕುರಿತು ತಿಳಿಸಿದರು. ಕಾಲೇಜಿನ ವಾಣಿಜ್ಯ ವಿಭಾಗದ ಮುಖ್ಯಸ್ಥರಾದ ಡಾ. ರವಿಚಂದ್ರ ಅವರು ವಿಶ್ವವಿದ್ಯಾನಿಲಯದ ನಿಯಮಾವಳಿ ಮತ್ತು ಕಾಲೇಜಿನ ಪಠ್ಯ ಚಟುವಟಿಕೆಗಳ ಬಗ್ಗೆ ಮಾಹಿತಿ ನೀಡಿದರು. ಕಾಲೇಜಿನ ಆಡಳಿತಾಧಿಕಾರಿ ಡಾ. ಮೋಹನ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೆಂಗಳೂರು: ಬೆಂಗಳೂರಿನಲ್ಲಿ ನಡೆಯುತ್ತಿರುವ ರಾಜ್ಯ ವಿಧಾನ ಮಂಡಲದ ಮಳೆಗಾಲದ ಅಧಿವೇಶನದಲ್ಲಿ ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರುರಾಜ್ ಗಂಟಿಹೊಳೆ ಅವರು ರಾಜ್ಯದಲ್ಲಿ ಎನ್. ಡಿ. ಪಿ ಎಸ್ ಕಾಯ್ದೆ ರಡಿಯಲ್ಲಿ ಮತ್ತು ಗಾಂಜಾ ಸಹಿತ ಇನ್ನಿತರ ಮಾದಕ ದ್ರವ್ಯ ಗಳ ಸಾಗಾಟ ಮತ್ತು ಸೇವನೆ ಸಂಬಂಧ ಕೈಗೊಂಡ ಕ್ರಮಗಳ ಬಗ್ಗೆ ಪ್ರಶ್ನೆ ಕೇಳಿದ್ದಾರೆ. ಚುಕ್ಕೆ ರಹಿತ ಪ್ರಶ್ನೆ ಗೆ ರಾಜ್ಯ ಗೃಹ ಸಚಿವರಾದ ಶ್ರೀ ಪ್ರಿಯಾಂಕ್ ಖರ್ಗೆ ಯವರು ಕಳೆದ ಮೂರು ವರ್ಷಗಳಲ್ಲಿ ರಾಜ್ಯದಲ್ಲಿ ಮಾದಕ ದ್ರವ್ಯ ಸೇವನೆ ಹಾಗೂ ಸಾಗಾಟಕ್ಕೆ ಸಂಬಂಧಿಸಿದಂತೆ 18,428 ಪ್ರಕರಣಗಳು ದಾಖಲಾಗಿದ್ದು 10,131 ಆರೋಪಿತರು ಸೇರಿರುತ್ತಾರೆ. ಇದರ ಪೈಕಿ 5249 ಜನರ ಮೇಲೆ ಆರೋಪ ಪಟ್ಟಿ ಸಲ್ಲಿಸಲಾಗಿದ್ದು 981 ಪ್ರಕರಣದ 2130 ಮಂದಿಯನ್ನು ದೋಷಿ ಎಂದು ಸಾಬೀತು ಪಡಿಸಲಾಗಿದೆ. ಅವರಿಂದ 2.69 ಕೋಟಿ ದಂಡ ಮೊತ್ತ ವಸೂಲಿ ಮಾಡಲಾಗಿದೆ ಹಾಗೂ ಮಾದಕ ದ್ರವ್ಯ ಸೇವನೆ ಹಾಗೂ ಸಾಗಾಟಕ್ಕೆ ಸಂಬಂಧಿಸಿದಂತೆ ಕಳೆದ 3…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೆಂಗಳೂರು: ಬೆಂಗಳೂರಿನಲ್ಲಿ ನಡೆಯುತ್ತಿರುವ ರಾಜ್ಯ ವಿಧಾನ ಮಂಡಲದ ಮಳೆಗಾಲದ ಅಧಿವೇಶನದಲ್ಲಿ ರಾಜ್ಯದಲ್ಲಿ ಪ್ರಸ್ತುತ ಅಳವಡಿಸಲಾದ ಮಳೆ ಮಾಪಕಗಳು ಹಾಳಾಗಿರುವುದು ಹಾಗೂ ಸಮರ್ಪಕವಾದ ನಿರ್ವಹಣೆ ಕೊರತೆ ಇರುವ ವಿಚಾರ ಇದರಿಂದ ಸರಿಯಾದ ಮಳೆ ಅಂಕಿ ಅಂಶ ದಾಖಲಾಗದೇ ಬೆಳೆ ವಿಮೆ ಸಹಿತ ರೈತರಿಗೆ ಪರಿಹಾರ ಪಡೆಯುವಲ್ಲಿ ಅನಾನುಕೂಲವಾಗುವ ಸಾಧ್ಯತೆ ಇರುವುದರಿಂದ ಪ್ರತಿ ಕೇಂದ್ರದ ಕಾರ್ಯಕ್ಷಮತೆ ಹೆಚ್ಚಿಸಲು ಸರಕಾರ ಕೈಗೊಂಡ ಕ್ರಮಗಳ ಬಗ್ಗೆ ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರುರಾಜ್ ಗಂಟಿಹೊಳೆ ಅವರು ಪ್ರಶ್ನೆ ಕೇಳಿದ್ದಾರೆ. ಚುಕ್ಕೆ ರಹಿತ ಪ್ರಶ್ನೆಗೆ ಉತ್ತರಿಸಿದ ಉಪ ಮುಖ್ಯ ಮಂತ್ರಿಗಳೂ ಹಾಗೂ ಕಂದಾಯ ಸಚಿವರಾದ ಡಾ. ಜಿ ಪರಮೇಶ್ವರ್ ಅವರು ಪ್ರತಿ ಟೆಲಿ ಮೆಟ್ರಿಕ್ ಮಳೆ ಮಾಪಕಗಳ ನಿರ್ವಹಣೆಯಲ್ಲಿ ಗ್ರಾಮ ಆಡಳಿತ ಅಧಿಕಾರಿಗಳು ನಿತ್ಯ ಸಮರ್ಪಕ ಕಾರ್ಯನಿರ್ವಹಣೆ, ಮೇಲ್ವಿಚಾರಣೆ ಮತ್ತು ನಿಗಾವಹಿಸುವ ಜವಾಬ್ದಾರಿ ಹೊಂದಿರುತ್ತಾರೆ ಮತ್ತು ಯಾವುದೇ ಟೆಲಿಮೆಟ್ರಿಕ್ ಮಳೆ ಮಾಪಕಗಳು ಕಾರ್ಯನಿರ್ವಹಿಸದಿದ್ದರೆ ತಕ್ಷಣವೇ ತಹಶೀಲ್ದಾರ್ ಮೂಲಕ ಅಪರ ಜಿಲ್ಲಾಧಿಕಾರಿಗಳಿಗೆ ವರದಿ ಮಾಡಬೇಕು. ಅಪರ ಜಿಲ್ಲಾಧಿಕಾರಿಗಳು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ರಾಷ್ಟಿçÃಯ ಸೇವಾ ಯೋಜನಾ ಘಟಕ I ಮತ್ತು IIರ ಆಶ್ರಯದಲ್ಲಿ ಸದ್ಭಾವನಾ ದಿವಸ್ವನ್ನು ಕಾಲೇಜಿನ ಎ.ವಿ. ಹಾಲ್ನಲ್ಲಿ ನಡೆಸಲಾಯಿತು. ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ಡಾ. ಕೆ. ಉಮೇಶ್ ಶೆಟ್ಟಿ ಅವರು ಮಾತನಾಡಿ, ದೇಶದ ಏಕತೆ, ಸಾಮರಸ್ಯ, ಸಹೋದರತ್ವ ಮತ್ತು ಪರಸ್ಪರ ಗೌರವವನ್ನು ಬೆಳೆಸುವಲ್ಲಿ ಯುವಜನರ ಪಾತ್ರ ಮಹತ್ವದೆಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಎನ್.ಎಸ್.ಎಸ್. ಕಾರ್ಯಕ್ರಮಾಧಿಕಾರಿಗಳಾದ ರಾಜೇಶ್ ಶೆಟ್ಟಿ ಹಾಗೂ ಪೂಜಾ ಕುಂದರ್ ಉಪಸ್ಥಿತರಿದ್ದರು. ಎನ್ಎಸ್ಎಸ್ ಸ್ವಯಂಸೇವಕರು ದೇಶದ ಏಕತೆ, ಶಾಂತಿ, ಸೌಹಾರ್ದತೆ ಹಾಗೂ ಕೋಮು ಸಾಮರಸ್ಯವನ್ನು ಕಾಪಾಡುವ ಸಂಕಲ್ಪದೊAದಿಗೆ ಸದ್ಭಾವನ ದಿವಸದ ಭಾಗವಾಗಿ ಎನ್.ಎಸ್.ಎಸ್. ಸ್ವಯಂಸೇವಕರಿಗೆ ಪ್ರತಿಜ್ಞಾ ವಿಧಿ ಸ್ವೀಕರಿಸಿದರು. ಸ್ವಯಂಸೇವಕ ಪ್ರತಿನಿಧಿ ಪ್ರತೀಕ್ಷಾ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮವು ವಿದ್ಯಾರ್ಥಿಗಳಲ್ಲಿ ರಾಷ್ಟ್ರೀಯ ಏಕತೆ, ಸಹಬಾಳ್ವೆ ಮತ್ತು ಸದ್ಭಾವನೆಯ ಮಹತ್ವವನ್ನು ಮೂಡಿಸುವ ನಿಟ್ಟಿನಲ್ಲಿ ಆಯೋಜಿಸಲಾಯಿತು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಪ್ರಸಕ್ತ ಸಾಲಿಗೆ ಭಾರತ ಸರ್ಕಾರದ ಶಾಸನಬದ್ಧ ಅಂಗೀಕೃತ ವಿಶ್ವವಿದ್ಯಾನಿಲಯಗಳಲ್ಲಿ ಪೂರ್ಣಕಾಲಿಕವಾಗಿ ಪಿ.ಎಚ್.ಡಿ ಕೋರ್ಸ್ ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮತೀಯ ಅಲ್ಪಸಂಖ್ಯಾತ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ದ, ಸಿಖ್ ಹಾಗೂ ಪಾರ್ಸಿ ಸಮುದಾಯದ ಅರ್ಹ ವಿದ್ಯಾರ್ಥಿಗಳಿಂದ ಮೂರು ವರ್ಷ ಅವಧಿಗೆ ಫೆಲೋಶಿಪ್ ಸೌಲಭ್ಯ ಪಡೆಯಲು ಸೇವಾಸಿಂಧು ತಂತ್ರಾಂಶ https://sevasindhu.karnataka.gov.in/sevasindhu/DepartmentService ನಲ್ಲಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಅಕ್ಟೋಬರ್ 31 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಸಹಾಯವಾಣಿ ಸಂಖ್ಯೆ: 8277799990 ಅಥವಾ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಮೌಲಾನಾ ಆಜಾದ್ ಭವನ, ಅಲೆವೂರು ರಸ್ತೆ, ಮಣಿಪಾಲ ಅಥವಾ ಜಿಲ್ಲಾ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ ದೂ.ಸಂಖ್ಯೆ: 0820-2574596 ಅಥವಾ ಕಾರ್ಕಳ ದೂ.ಸಂಖ್ಯೆ: 08258-231101 ಹಾಗೂ ಕುಂದಾಪುರ ದೂ.ಸಂಖ್ಯೆ: 08254-230370 ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳ ಕಚೇರಿ ಪ್ರಕಟಣೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಸಾಮಾಜಿಕ ನ್ಯಾಯದ ಹರಿಕಾರ ದಿವಂಗತ ಡಿ. ದೇವರಾಜ ಅರಸು ರವರು ತಮ್ಮ ಆಡಳಿತದ ಅವಧಿಯಲ್ಲಿ ಸಮಸಮಾಜ ನಿರ್ಮಾಣದ ರೂವಾರಿಯಾಗಿ, ಹಿಂದುಳಿದ ವರ್ಗದವರ ಹಾಗೂ ದೀನ ದಲಿತರ ಏಳಿಗೆಗೆ ಧ್ವನಿಯಾಗಿ, ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಅಭಿವೃದ್ಧಿಯೊಂದಿಗೆ ಅವರುಗಳನ್ನು ಸಮಾಜದ ಮುಖ್ಯವಾಹಿನಿಗೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ ಎಂದು ಕರಾವಳಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಎಂ.ಎ ಗಫೂರ್ ಹೇಳಿದರು. ಅವರು ಗುರುವಾರ ನಗರದ ಮಿಷನ್ ಕಂಪೌಂಡ್ನ ಬಡಗಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಜಗನ್ನಾಥ ಸಭಾ ಭವನದಲ್ಲಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ನಗರಸಭೆ ಉಡುಪಿ, ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಹಿಂದುಳಿದ ವರ್ಗಗಳ ಧೀಮಂತ ನಾಯಕ, ಪರಿವರ್ತನೆಯ ಹರಿಕಾರ, ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿಗಳಾದ ಡಿ. ದೇವರಾಜ ಅರಸು ರವರ 111ನೇ ಜನ್ಮ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ, ದೇವರಾಜ ಅರಸು ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿದರು. 12 ನೇ ಶತಮಾನದಲ್ಲಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೆಂಗಳೂರು: ಬೆಂಗಳೂರಿನಲ್ಲಿ ನಡೆಯುತ್ತಿರುವ ರಾಜ್ಯ ವಿಧಾನ ಮಂಡಲದ ಮಳೆಗಾಲದ ಅಧಿವೇಶನದಲ್ಲಿ ರಾಜ್ಯದಲ್ಲಿ ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶದ 7ನೇ ಕರಡು ಅಧಿಸೂಚನೆ ಹೊರಡಿಸಿರುವುದು ಸರಕಾರದ ಗಮನದಲ್ಲಿರುವ ಹಾಗೂ ಕರಡು ಅಧಿಸೂಚನೆಯ ಬಗ್ಗೆ ಸ್ಥಳೀಯ ಗ್ರಾಮ ನಿವಾಸಿಗಳು ಮತ್ತೊಮ್ಮೆ ಅತಂಕಿತರಾಗಿರುವುದರಿಂದ ಜನರ ಜೀವನೋಪಾಯ ಮತ್ತು ಅಭಿವೃದ್ಧಿ ವಿಚಾರಗಳ ಸ್ಪಷ್ಟನೆ ಬಗ್ಗೆ ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸರಾದ ಗುರುರಾಜ್ ಗಂಟಿಹೊಳೆ ಅವರು ಪ್ರಶ್ನೆ ಕೇಳಿದ್ದಾರೆ. ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರ ನೀಡಿದ ರಾಜ್ಯ ಅರಣ್ಯ, ಜೀವಿಶಾಸ್ತ್ರ ಹಾಗೂ ಪರಿಸರ ಸಚಿವರಾದ ರಾಮಲಿಂಗರೆಡ್ಡಿ ಅವರು ಭಾರತ ಸರಕಾರವು ದಿನಾಂಕ 27.07.2026ರಂದು ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶಕ್ಕೆ ಸಂಬಂಧಿಸಿದಂತೆ 7ನೇ ಕರಡು ಅನುಸೂಚನೆಯನ್ನು ಹೊರಡಿಸಿರುವ ವಿಚಾರ ಸರ್ಕಾರದ ಗಮನಕ್ಕೆ ಬಂದಿರುತ್ತದೆ ಹಾಗೂ ಪ್ರಸ್ತುತ ಕಸ್ತೂರಿ ರಂಗನ್ ವರದಿ ಅಧರಿಸಿ ಕೇಂದ್ರ ಸರ್ಕಾರವು 27ನೇ ಜುಲೈ 2026ರಂದು ಹೊರಡಿಸಿರುವ 7ನೇ ಕರಡು ಅಧಿಸೂಚನೆಯನ್ನು ಸರ್ಕಾರದ ಹಂತದಲ್ಲಿರುತ್ತದೆ ಎಂದು ಉತ್ತರಿಸಿದ್ದಾರೆ.. ಹಿಂದಿನ 6…
