ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಾಲೂಕಿನ ಹಳಗೇರಿಯ ಶ್ರೀ ಕೊಕ್ಕೇಶ್ವರ ಹಾಗೂ ಶ್ರೀ ವನದುರ್ಗಾದೇವಿ ದೇವಸ್ಥಾನದಲ್ಲಿ ಅ.11ರಿಂದ ಅ.21ರತನಕ ಶರನ್ನವರಾತ್ರಿ ಮಹೋತ್ಸವವು ಜರುಗಲಿದೆ. ಪ್ರತಿದಿನ ಸಂಜೆ 5.00 ಗಂಟೆಗೆ ಶ್ರೀ ದೇವರ ಸನ್ನಿಧಿಯಲ್ಲಿ ಹಳಗೇರಿ ಕೊಕ್ಕೇಶ್ವರ ಭಜನಾ ಸಂಘ ರಿ., ಶ್ರೀ ವನದುರ್ಗಿ ಮಹಿಳಾ ಮತ್ತು ಮಕ್ಕಳ ಭಜನಾ ಸಂಘ ಹಾಗೂ ವಿವಿಧ ಭಜನಾ ಸಂಘದಿಂದ ಭಜನಾ ಕಾರ್ಯಕ್ರಮ ಹಾಗೂ ಪ್ರತಿ ದಿನ 06.00ಗಂಟೆಯಿಂದ ನವರಾತ್ರಿ ಪೂಜೆ ಪ್ರಾರಂಭ ಮತ್ತು ಪ್ರತಿದಿನ ಸಂಜೆ 09.00ಕ್ಕೆ ಅನ್ನಸಂತರ್ಪಣೆ ಜರುಗಲಿರುವುದು. ಅ.21ರಂದು ವಿಜಯದಶಮಿಯ ದಿನ ಚಂಡಿಕಾ ಹೋಮ ಹಾಗೂ ಮಧ್ಯಾಹ್ನ ಅನ್ನಸಂತರ್ಪಣೆ ನಡೆಯಲಿದೆ. ಅದೇ ದಿನ ಸಂಜೆ 06.00ರಿಂದ ಟೀಮ್ ಗೆಳಯರ ಬಳಗ ಇವರ ಸಹಯೋಗದಲ್ಲಿ ಸಾಮೂಹಿಕ ಸತ್ಯನಾರಾಯಣ ಪೂಜೆ, ಪ್ರಸಾದ ವಿತರಣೆ ಹಾಗೂ ಲಘು ಉಪಹಾರ ನಡೆಯಲಿದೆ. ಅದೇ ದಿನ ರಾತ್ರಿ 08.00ರಿಂದ ಸಭಾ ಕಾರ್ಯಕ್ರಮ ನಡೆಯಲ್ಲಿದ್ದು, ಬಳಿಕ ಸ್ಥಳೀಯ ಮಕ್ಕಳಿಂದ ವೈವಿಧ್ಯಮ ನೃತ್ಯ ಪ್ರದರ್ಶನ, ಸುಮಂಗಲಾ ಶೇಖರ್ ಗಾಣಿಗ ಬೀಜಮಕ್ಕಿ ಇವರ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಭಾರತ ಸರ್ಕಾರದ ಶಾಸನಬದ್ಧ ಅಂಗಿಕೃತವಾದ ವಿಶ್ವವಿದ್ಯಾನಿಲಯಗಳಲ್ಲಿ ಪೂರ್ಣಕಾಲಿಕವಾಗಿ ಪಿ.ಯು.ಸಿ, ಡಿಪ್ಲೋಮಾ, ಪದವಿ, ಸ್ನಾತಕೋತ್ತರ ಪದವಿ ಹಾಗೂ ತಾಂತ್ರಿಕ & ವೃತ್ತಿಪರ ಕೋರ್ಸುಗಳಲ್ಲಿ ವ್ಯಾಸಾಂಗ ಮಾಡುತ್ತಿರುವ ಮತೀಯ ಅಲ್ಪಸಂಖ್ಯಾತರ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಪಾರ್ಸಿ ಹಾಗೂ ಸಿಖ್ ಸಮುದಾಯದ ವಿದ್ಯಾರ್ಥಿಗಳಿಂದ ಶುಲ್ಕ ಮರುಪಾವತಿ ಯೋಜನೆಯ ಸೌಲಭ್ಯ ಪಡೆಯಲು ರಾಜ್ಯ ವಿದ್ಯಾರ್ಥಿವೇತನ ಪೋರ್ಟಲ್ ಎಸ್.ಎಸ್.ಪಿ ತಂತ್ರಾಂಶ https://ssp.postmatric.karnataka.gov.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ನವೆಂಬರ್ 30 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಸಹಾಯವಾಣಿ ಸಂಖ್ಯೆ: 8277799990, ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಮೌಲಾನಾ ಆಜಾದ್ ಭವನ, ಅಲೆವೂರು ರಸ್ತೆ, ಮಣಿಪಾಲ ದೂ.ಸಂಖ್ಯೆ: 0820-2573596, ಜಿಲ್ಲಾ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ ದೂ.ಸಂಖ್ಯೆ: 0820-2574596 ಅಥವಾ ಕಾರ್ಕಳ ದೂ.ಸಂಖ್ಯೆ: 08258-231101 ಹಾಗೂ ಕುಂದಾಪುರ ದೂ.ಸಂಖ್ಯೆ: 08254-230370 ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳನ್ನು ಸಂಪರ್ಕಿಸಬಹುದಾಗಿದೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸಾರ್ವಜನಿಕ ಶಿಕ್ಷಣ ಇಲಾಖೆ, ಉಪ ನಿರ್ದೇಶಕರ ಕಚೇರಿ ಉಡುಪಿ ಹಾಗೂ ಬ್ರಹ್ಮಾವರ ಸ್ಪೋರ್ಟ್ಸ್ ಕ್ಲಬ್ ಇವರ ಸಹಯೋಗದಲ್ಲಿ, ಬ್ರಹ್ಮಾವರ ಸ್ಪೋರ್ಟ್ಸ್ ಕ್ಲಬ್ ಇಲ್ಲಿ ಆಯೋಜಿಸಿದ ಉಡುಪಿ ಜಿಲ್ಲಾಮಟ್ಟದ 14ರ ವಯೋಮಾನದ ಬಾಲಕರ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆ ಕುಂದಾಪುರ ಇಲ್ಲಿನ ವಿದ್ಯಾರ್ಥಿಗಳಾದ ತನೀಶ್ ಜೆ. ಪೂಜಾರಿ 7E ಹಾಗೂ ಅಭಿನವ್ ಎ ಪೈ 7 C ಇವರು ದ್ವಿತೀಯ ಸ್ಥಾನ ಗಳಿಸಿ ಮೈಸೂರು ವಿಭಾಗ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಇವರಿಗೆ, ಶಾಲಾ ಆಡಳಿತ ಮಂಡಳಿ, ಮುಖ್ಯ ಶಿಕ್ಷಕರು, ಬೋಧಕ-ಬೋಧಕೇತರ ವರ್ಗದವರು ಅಭಿನಂದನೆ ಸಲ್ಲಿಸಿರುತ್ತಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ವಿದ್ಯಾರ್ಥಿಗಳಲ್ಲಿ ಸೃಜನಶೀಲತೆ, ಕಲ್ಪನಾಶಕ್ತಿ ಮತ್ತು ಪರಿಣಾಮಕಾರಿ ಸಂವಹನ ಕೌಶಲ್ಯವನ್ನು ಬೆಳೆಸುವ ಉದ್ದೇಶದಿಂದ ಸುಜ್ಞಾನ ನ್ಯಾಷನಲ್ ಪಿಯು ಕಾಲೇಜಿನ ವಾಣಿಜ್ಯ ವಿಭಾಗದ ವತಿಯಿಂದ ಇತ್ತೀಚೆಗೆ ‘Add-Venture’ ಜಾಹೀರಾತು ಸ್ಪರ್ಧೆಯನ್ನು ಆಯೋಜಿಸಲಾಯಿತು. “Where Ideas Turn to Impact” ಎಂಬ ಆಶಯದೊಂದಿಗೆ ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದ ಮುಖ್ಯ ಅತಿಥಿಯಾದ ಸುಜ್ಞಾನ ಪಿಯು ಕಾಲೇಜಿನ ಪ್ರಾಂಶುಪಾಲರಾದ ರಂಜನ್ ಬಿ. ಶೆಟ್ಟಿ ಮಾತನಾಡಿ, “ವಿದ್ಯಾರ್ಥಿಗಳು ಕೇವಲ ಶೈಕ್ಷಣಿಕ ಜ್ಞಾನಕ್ಕೆ ಸೀಮಿತಗೊಳ್ಳದೆ, ನೂತನ ಆಲೋಚನೆಗಳನ್ನು ಮೈಗೂಡಿಸಿಕೊಂಡು ಅವುಗಳನ್ನು ಸಮಾಜದ ಮುಂದೆ ಪರಿಣಾಮಕಾರಿಯಾಗಿ ಪ್ರಸ್ತುತಪಡಿಸುವ ಕೌಶಲ್ಯವನ್ನು ರೂಢಿಸಿಕೊಳ್ಳಬೇಕು” ಎಂದು ಹೇಳಿದರು. ತೀರ್ಪುಗಾರರಾಗಿ ಆಗಮಿಸಿದ್ದ ಕುಂದಾಪುರದ ಸುಜ್ಞಾನ ಪಿಯು ಕಾಲೇಜಿನ ವಾಣಿಜ್ಯ ವಿಭಾಗದ ಮುಖ್ಯಸ್ಥರಾದ ಪ್ರಮಥ್ ಶೆಟ್ಟಿ ಮಾತನಾಡಿ, “ಜಾಹೀರಾತು ಎಂದರೆ ಕೇವಲ ಉತ್ಪನ್ನದ ಪರಿಚಯವಲ್ಲ, ಅದೊಂದು ಉತ್ತಮ ಆಲೋಚನೆಯನ್ನು ಜನರ ಮನಸ್ಸಿಗೆ ತಲುಪಿಸುವ ಕಲೆ” ಎಂದು ಅಭಿಪ್ರಾಯಪಟ್ಟರು. ಮತ್ತೋರ್ವ ತೀರ್ಪುಗಾರರಾದ ವಾಣಿಜ್ಯ ವಿಭಾಗದ ಉಪನ್ಯಾಸಕಿ ಪೂಜಾ ಶೆಟ್ಟಿ ಉಪಸ್ಥಿತರಿದ್ದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾಲೇಜಿನ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಉಡುಪಿ ಜಿಲ್ಲಾ ರಾಮಕ್ಷತ್ರಿಯ ಒಕ್ಕೂಟದ ಉದ್ಘಾಟನೆ ಮತ್ತು ನೂತನ ಪದಾಧಿಕಾರಿಗಳ ಪದ ಪ್ರದಾನ ಸ್ವೀಕಾರ ಸಮಾರಂಭವು ಅ.11ರ ಭಾನುವಾರ ಬೆಳಗ್ಗೆ 9.30ಕ್ಕೆ ಬೈಂದೂರಿನ ಯಡ್ತರೆಯ ಜೆಎನ್‌ಆರ್ ಕಲಾ ಮಂದಿರದಲ್ಲಿ ಜರುಗಲಿದೆ. ಉಡುಪಿ ಜಿಲ್ಲೆಯ ಕೋಟೆಗಾರ ಮತ್ತು ರಾಮಕ್ಷತ್ರಿಯ ಸಮಾಜದ ಸದಸ್ಯರನ್ನು ಒಂದೇ ವೇದಿಕೆಯಡಿ ಒಗ್ಗೂಡಿಸುವ ಒಂದು ಉಪಕ್ರಮವಾಗಿ ಉಡುಪಿ ಜಿಲ್ಲಾ ರಾಮಕ್ಷತ್ರಿಯ ಒಕ್ಕೂಟವನ್ನು ರಚಿಸಲಾಗುತ್ತಿದೆ. ಬಲಿಷ್ಠ, ಸಮೃದ್ಧ ಮತ್ತು ಸುಸ್ಥಿರ ಭವಿಷ್ಯದ ದೃಷ್ಟಿಕೋನದೊಂದಿಗೆ ಸ್ಥಾಪಿತವಾಗಿರುವ ಈ ಒಕ್ಕೂಟವು, ಸಮಾಜದ ಒಳಿತಿಗಾಗಿ ಸಮುದಾಯದ ಎಲ್ಲಾ ಕಾರ್ಯಕ್ರಮಗಳು ಮತ್ತು ಯೋಜನೆಗಳನ್ನು ಸಂಯೋಜಿಸುವ ಗುರಿಯನ್ನು ಹೊಂದಿದೆ. ಕಾರ್ಯಕ್ರಮವನ್ನು ಮಾಜಿ ಸಚಿವರಾದ ಜೆ. ಕೃಷ್ಣ ಪಾಲೆಮಾರ್ ಉದ್ಘಾಟಿಸಲಿದ್ದಾರೆ. ಕರ್ನಾಟಕ ಕೋಟೆಗಾರ ಸಂಘದ ಅಧ್ಯಕ್ಷ ನಾಡೋಜ ಡಾ. ಕೊಡ್ಲು ಕೃಷ್ಣಪ್ರಸಾದ್ ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ರಾಮಕ್ಷತ್ರಿಯ ಒಕ್ಕೂಟದ ಚುನಾಯಿತ ಅಧ್ಯಕ್ಷ ಕೊತ್ವಾಲ್ ಪದ್ಮನಾಭ ಶೇರುಗಾರ್ ಗಂಗೊಳ್ಳಿ ಉಪಸ್ಥಿತರಿರಲಿದ್ದಾರೆ. ಮುಖ್ಯ ಅತಿಥಿಗಳಾಗಿ ವಿಶ್ವ ರಾಮಕ್ಷತ್ರಿಯ ಮಹಾ ಸಂಘದ ಅಧ್ಯಕ್ಷ ಶಶಿಧರ್ ನಾಯ್ಕ್, ಉತ್ತರ ಕನ್ನಡ…
ಕುಂದಾಪ್ರ ಡಾಟ್ ಕಾಂ ಸುದ್ದಿಬೈಂದೂರು: ಇಲ್ಲಿನ ತಗ್ಗರ್ಸೆ ಶ್ರೀ ಬ್ರಹ್ಮದೇವರ ವಠಾರದ ಶ್ರೀ ನಾಗಬನದಲ್ಲಿ 37ನೇ ವರ್ಷದ ಸಾರ್ವಜನಿಕ ಶ್ರೀ ಶಾರದೋತ್ಸವ ಸಮಾರಂಭವು ಅ.17ರಿಂದ ಅ.19ರ ತನಕ ನಡೆಯಲಿದೆ. ಅ.17ರ ಬೆಳಿಗ್ಗೆ 11:25ಕ್ಕೆ ಶ್ರೀ ಶಾರದಾಂಬೆಯ ಮೂರ್ತಿ ಪ್ರತಿಷ್ಠಾಪನೆ, ಬೆಳಿಗ್ಗೆ 11:30 ರಿಂದ ಶ್ರೀ ಲಕ್ಷೀ ವೆಂಕಟರಮಣ ಮಹಿಳಾ ಭಜನಾ ಮಂಡಳಿ ತಗ್ಗರ್ಸೆ ಇವರಿಂದ ಭಜನಾ ಸಂಕೀರ್ತನೆ, ಮಧ್ಯಾಹ್ನ 12.30ಕ್ಕೆ ದುರ್ಗಾ ಹೋಮ, ಮಧ್ಯಾಹ್ನ 12:45ಕ್ಕೆ ಅಕ್ಷರಭ್ಯಾಸ, ರಾತ್ರಿ 07:30ಕ್ಕೆ ರಾತ್ರಿ ಪೂಜೆ ಮತ್ತು ಮಂಗಳಾರತಿ, ರಾತ್ರಿ 11:30ರಿಂದ ಶ್ರೀ ತಿರುಮಲ ವೆಂಕಟರಮಣ ಭಜನಾ ಮಂಡಳಿ ತಗ್ಗರ್ಸೆ ಇವರ ನೇತ್ರತ್ವದಲ್ಲಿ ಅಹೋರಾತ್ರಿ ಭಜನಾ ಸಂಕಿರ್ತನೆ ನಡೆಯಲಿದೆ. ಅದೇ ದಿನ ಸಂಜೆ 06:30 ಕ್ಕೆ ಕಿರಿಯರು ಮತ್ತು ಹಿರಿಯರಿಗಾಗಿ ಭಕ್ತಿ ಗೀತೆ ಮತ್ತು ಆಶು ಭಾಷಣ ಸ್ಪರ್ಧೆ, ಸಂಜೆ 07:30 ರಿಂದ ಹರ್ಷೇಂದ್ರ ಆಚಾರ್ಯ ನಿರ್ದೇಶನದಲ್ಲಿ ಡ್ಯಾನ್ಸ್ ಗ್ರೂಪ್ ಮಕ್ಕಿಗದ್ದೆ ತಗ್ಗರ್ಸೆ ಇವರಿಂದ ನೃತ್ಯ ವೈಭವ ನಡೆಯಲಿದೆ. ಹಾಗೂ 08:30ಕ್ಕೆ ಗಣ್ಯರಿಗೆ ಹಾಗೂ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಸಕ್ಷಮಾ–ಆಳ್ವಾಸ್ ಮಹಿಳಾ ಸಂಘ ಹಾಗೂ ಆಳ್ವಾಸ್ ಹೋಮಿಯೋಪಥಿ ಮೆಡಿಕಲ್ ಕಾಲೇಜಿನ ಸಹಯೋಗದಲ್ಲಿ ಆಯೋಜಿಸಲಾಗಿದ್ದ 15 ದಿನಗಳ ‘ಆರಿ ಲಹರಿ’– ಸ್ವಾವಲಂಬನೆಯತ್ತ ಮೊದಲ ಹೆಜ್ಜೆ ತರಬೇತಿ ಕಾರ್ಯಕ್ರಮದ ಸಮಾರೋಪ ಸಮಾರಂಭ ಮಂಗಳವಾರ ಮಿಜಾರ್‌ನ ಆಳ್ವಾಸ್ ಹೋಮಿಯೋಪಥಿ ಮೆಡಿಕಲ್ ಕಾಲೇಜಿನ ಸೆಮಿನಾರ್ ಹಾಲ್‌ನಲ್ಲಿ ನಡೆಯಿತು. ಉಜಿರೆಯ ರುಡ್‌ಸೆಟಿ ಅಧ್ಯಾಪಕ ಅಬ್ರಹಾಂ ಜೇಮ್ಸ್ ಪಿ.ವಿ. ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ, ನಾವು ಕಲಿಯುವ ಪ್ರತಿಯೊಂದು ಕೌಶಲ್ಯವೂ ಬದುಕಿನಲ್ಲಿ ಒಂದಲ್ಲ ಒಂದು ರೀತಿಯಲ್ಲಿ ಉಪಯೋಗಕ್ಕೆ ಬರುತ್ತದೆ. ಕಲಿತ ಕೌಶಲ್ಯವನ್ನು ಕೇವಲ ಪ್ರಮಾಣಪತ್ರಕ್ಕೆ ಸೀಮಿತಗೊಳಿಸದೆ, ಅದನ್ನು ಆದಾಯದ ಮೂಲವನ್ನಾಗಿ ಪರಿವರ್ತಿಸಿಕೊಳ್ಳಬೇಕು. ನಿರಂತರ ಅಭ್ಯಾಸ, ಆತ್ಮವಿಶ್ವಾಸ ಹಾಗೂ ಪರಿಶ್ರಮದ ಮೂಲಕ ಮಹಿಳೆಯರು ತಮ್ಮದೇ ಆದ ಉದ್ಯೋಗದ ಅವಕಾಶಗಳನ್ನು ಸೃಷ್ಟಿಸಿಕೊಳ್ಳಬಹುದು ಎಂದರು. ಭಾರತ್ ಇನ್‌ಫ್ರಾಟೆಕ್‌ನ ಆಡಳಿತ ನಿರ್ದೇಶಕ ಮೊಹಮ್ಮದ್ ಮುಸ್ತಫಾ ಮಾತನಾಡಿ, ಕೌಶಲ್ಯ ತರಬೇತಿ ಮಹಿಳೆಯರಲ್ಲಿ ಆತ್ಮವಿಶ್ವಾಸವನ್ನು ಹೆಚ್ಚಿಸುವುದರ ಜೊತೆಗೆ ಸ್ವಾವಲಂಬನೆಯ ದಾರಿಯನ್ನು ತೆರೆಯುತ್ತದೆ. ಕಸೂತಿ ಕೌಶಲ್ಯಕ್ಕೆ ಸ್ಥಳೀಯವಾಗಿ ಉತ್ತಮ ಅವಕಾಶಗಳಿದ್ದು, ಕಲಿತ ಜ್ಞಾನವನ್ನು ಸಣ್ಣ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಸರಕಾರ ಹಿರಿಯ ನಾಗರಿಕರ ಸುರಕ್ಷತೆ, ಘನತೆ ಮತ್ತು ಉತ್ಪಾದಕ ಜೀವನ ನಡೆಸಲು ಹಿರಿಯ ನಾಗರಿಕರ ಕಲ್ಯಾಣಕ್ಕಾಗಿ ಕಾಯಿದೆ ಹಾಗೂ ಕಾರ್ಯಕ್ರಮಗಳನ್ನು ಜಾರಿಗೆ ತಂದಿದೆ. ಇದನ್ನು ಸಮರ್ಪಕವಾಗಿ ಅಧಿಕಾರಿಗಳು ಅನುಷ್ಠಾನಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಹೇಳಿದರು. ಅವರು ಮಂಗಳವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಪಾಲಕರ ಪೋಷಣೆ, ಸಂರಕ್ಷಣೆ ಮತ್ತು ಹಿರಿಯ ನಾಗರಿಕರ ರಕ್ಷಣಾ ಕಾಯಿದೆ 2007 ರಡಿ ಜಿಲ್ಲಾ ಮಟ್ಟದ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಹಿರಿಯ ನಾಗರಿಕರ ನಿರ್ವಹಣೆ ಹಾಗೂ ರಕ್ಷಣೆ ಕಾಯ್ದೆಯನ್ವಯ ಹಿರಿಯ ನಾಗರಿಕರ ಮಕ್ಕಳು, ಹಿರಿಯ ನಾಗರಿಕರನ್ನು ನಿರ್ಲಕ್ಷಿಸುವುದು, ತ್ಯಜಿಸುವುದು ಕಂಡುಬಂದಲ್ಲಿ ಅಂತಹ ಮಕ್ಕಳು ಹಾಗೂ ಪೋಷಕರಿಗೆ ಮೂರು ತಿಂಗಳ ಜೈಲು ವಾಸ ಹಾಗೂ 5,000 ದಂಡ ವಿಧಿಸಲು ಅವಕಾಶವಿದೆ ಎಂದ ಅವರು, ಪಾಲನೆ ಪೋಷಣೆಗೆ ಅರ್ಜಿಗಳು ಹಾಗೂ ಆಸ್ತಿ ಸಂರಕ್ಷಣೆ ಅರ್ಜಿಗಳು ನ್ಯಾಯಾಧೀಕರಣದ ಮುಂದೆ ಬಂದಾಗ ಸಕಾಲದಲ್ಲಿ ನ್ಯಾಯ ಸಮ್ಮತವಾಗಿ ವಿಲೇವಾರಿ ಮಾಡಿ, ನ್ಯಾಯ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಕಟ್ಕೇರೆ ಸಮೀಪ ಕಾಳಾವರ ನಿವಾಸಿ ಪುರೋಹಿತ ನಾಗರಾಜ ನಾವುಡ (45) ಅವರು ಸೋಮವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಶ್ರದ್ಧೆಯಿಂದ ಪೌರೋಹಿತ್ಯ ವೃತ್ತಿಯನ್ನು ಮಾಡುತ್ತಾ, ಎಲ್ಲರ ವಿಶ್ವಾಸಕ್ಕೆ ಭಾಜನರಾಗಿದ್ದ ನಾವುಡರು ಯಕ್ಷಗಾನದ ಬಗ್ಗೆ ಅಪಾರವಾದ ಒಲವುಳ್ಳವರಾಗಿದ್ದರು. ತನ್ನ ಸಂಪಾದನೆಯ ಬಹುಭಾಗವನ್ನು ಕಲೆ ಕಲಾವಿದರಿಗಾಗಿ ವಿನಿಯೋಗಿಸುತ್ತಾ ಬಂದ ನಾವುಡರು ತಂದೆ, ತಾಯಿ, ಪತ್ನಿ, ಪುತ್ರಿಯನ್ನು ಅಗಲಿದ್ದಾರೆ. ಯಕ್ಷಗಾನ ಕಲಾರಂಗದ ಆಜೀವ ಸದಸ್ಯರಾಗಿದ್ದ ಇವರ ನಿಧನಕ್ಕೆ ಸಂಸ್ಥೆಯ ಅಧ್ಯಕ್ಷ ಎಂ. ಗಂಗಾಧರ ರಾವ್, ಕಾರ್ಯದರ್ಶಿ ಮುರಲಿ ಕಡೆಕಾರ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಮಕ್ಕಳ ಹಾಗೂ ಗರ್ಭಿಣಿಯರ ಆರೋಗ್ಯ ರಕ್ಷಣೆ, ರಕ್ತಹೀನತೆ ತಡೆಗಟ್ಟುವುದು ಮತ್ತು ಪೌಷ್ಟಿಕ ಆಹಾರದ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಹೊಸಬೇಂಗ್ರೆ ಅಂಗನವಾಡಿ ಕೇಂದ್ರದಲ್ಲಿ ಕೇಂದ್ರ ಸರಕಾರದ ಪೋಷಣ್ ಅಭಿಯಾನ ಮತ್ತು ವಿವಿಧ ಸಮಾಜಮುಖಿ ಕಾರ್ಯಕ್ರಮಗಳನ್ನು ಸೋಮವಾರ ಆಯೋಜಿಸಲಾಯಿತು. ಮುಖ್ಯ ಅಭ್ಯಾಗತರಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಡುಪಿ ಜಿಲ್ಲಾ ಉಪನಿರ್ದೇಶಕರಾದ ಪ್ರೇಮಮೂರ್ತಿ ಮಾತನಾಡಿ, ಕೇಂದ್ರ ಸರ್ಕಾರದ ಪೋಷಣ್ ಅಭಿಯಾನ ಯೋಜನೆಯು ತಾಯಿ ಮತ್ತು ಮಗುವಿನ ಆರೋಗ್ಯವನ್ನು ಉತ್ತಮಪಡಿಸುವ ಮಹತ್ವಾಕಾಂಕ್ಷಿ ಯೋಜನೆಯಾಗಿದೆ. ಗರ್ಭಿಣಿಯರು, ಬಾಣಂತಿಯರು ಹಾಗೂ ಮಕ್ಕಳ ಅಪೌಷ್ಟಿಕತೆ ಮತ್ತು ರಕ್ತಹೀನತೆ ತಡೆಗಟ್ಟಲು ಮನೆಯಲ್ಲಿಯೇ ವಹಿಸಬೇಕಾದ ಕಾಳಜಿಗಳ ಬಗ್ಗೆ ಪ್ರತಿಯೊಬ್ಬರೂ ಜಾಗೃತರಾಗಬೇಕು ಎಂದು ಕರೆ ನೀಡಿದರು. ಜಿಲ್ಲಾ ನಿರೂಪಣಾಧಿಕಾರಿ ಅನುರಾಧ ಹಾದಿಮನಿ ಅವರು ಪೋಷಣ್ ಅಭಿಯಾನದ ವಿವರ ನೀಡಿ, ಸೀಮಂತ, ಅನ್ನಪ್ರಾಶನ ಮುಂತಾದ ಸಾಂಪ್ರದಾಯಿಕ ಆಚರಣೆಗಳ ಮೂಲಕ ಜಾಗೃತಿ ತಲುಪಿಸುವ ಕಾರ್ಯವನ್ನು ಶ್ಲಾಘಿಸಿದರು. ಗ್ರಾಮ ಪಂಚಾಯತ್ ಪಿಡಿಒ ರವೀಂದ್ರರಾವ್ ಮಾತನಾಡಿ, ಗ್ರಾಮಸ್ಥರು ಪೌಷ್ಟಿಕ ಆಹಾರ, ಶುದ್ಧ ಕುಡಿಯುವ…
