ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಾಲೂಕು ವ್ಯಾಪ್ತಿಯ ಗ್ರಾಮೀಣ ಭಾಗಗಳಿಗೆ ಕೆಎಸ್ಆರ್ಟಿಸಿ ಸಮರ್ಪಕ ಸಂಚಾರಕ್ಕಾಗಿ ಇಲ್ಲಿ ಕೆಎಸ್ಆರ್ಟಿಸಿ ಡಿಪೋ ನಿರ್ಮಾಣದ ಬೇಡಿಕೆಯಿದ್ದು, ಇಲ್ಲಿನ ನಿರ್ಮಾಣ ಹಂತದಲ್ಲಿರುವ ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಬಳಿ ಡಿಪೋ ಮಂಜೂರಾತಿಗಾಗಿ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ವತಿಯಿಂದ ಸಾರಿಗೆ ಸಚಿವರಿಗೆ ಮನವಿ ಮಾಡಲಾಗುವುದು ಎಂದು ಬೈಂದೂರು ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ಮೋಹನ್ ಪೂಜಾರಿ ಹೇಳಿದರು. ಅವರು ಇಲ್ಲಿನ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆದ ಗ್ಯಾರಂಟಿ ಅನುಷ್ಠಾನ ಯೋಜನೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಬೈಂದೂರಿನಲ್ಲಿ ನಿರ್ಮಾಣ ಹಂತದಲ್ಲಿರುವ ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಕಾಮಗಾರಿ ಪೂರ್ಣಗೊಂಡಿದೆ, ಆದರೆ ನಿಲ್ದಾಣದಲ್ಲಿ ನೀರಿನ ಸಮಸ್ಯೆಯಿಂದಾಗಿ ಉದ್ಘಾಟನಾ ಕಾರ್ಯ ವಿಳಂಬಗೊಳ್ಳುತ್ತಿದೆ, ಈ ಬಗ್ಗೆ ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಭೆಯಲ್ಲಿಯೂ ಸಂಬಂದ ಅಧಿಕಾರಿಗಳ ಗಮನಕ್ಕೆ ತರಲಾಗಿದೆ, ಇಲ್ಲಿಗೆ ಪೈಪ್ಲೈನ್ ಮೂಲಕ ನೀರು ಸರಬರಾಜು ಮಾಡಲು ರಾಷ್ರೀಯ ಹೆದ್ದಾರಿ ಪ್ರಾದಿಕಾರದ ಅನುಮತಿ ಅಗತ್ಯವಿದೆ, ಈ ಬಗ್ಗೆ ಶೀಘ್ರ ಪ್ರಾದಿಕಾರದ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಸೈನಿಕರು ನಮ್ಮ ಜೀವನದ ಉಸಿರಿನಂತೆ. ನಮ್ಮ ಸುಂದರ ಬದುಕಿಗಾಗಿ ತಮ್ಮ ಜೀವನವನ್ನು ಮುಡಿಪಾಗಿಡುವ ವೀರ ಯೋಧರನ್ನು ನಮ್ಮ ನಿತ್ಯ ಜೀವನದಲ್ಲಿ ಸದಾ ಸ್ಮರಿಸುತ್ತಿರಬೇಕು ಎಂದು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ನರೇಂದ್ರ ಎಸ್. ಗಂಗೊಳ್ಳಿ ಅಭಿಪ್ರಾಯಪಟ್ಟರು. ಅವರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಮೇಲ್ ಗಂಗೊಳ್ಳಿ, ಕಲಾಶ್ರೀ ಶಿಕ್ಷಣ ಪ್ರೇಮಿಗಳ ಬಳಗ ಗಂಗೊಳ್ಳಿ ಮತ್ತು ಸಂಜೀವ ಪಾರ್ವತಿ ಪ್ರಕಾಶನ ಗಂಗೊಳ್ಳಿ ಇವರ ಸಂಯುಕ್ತ ಆಶ್ರಯದಲ್ಲಿ ಇಲ್ಲಿನ ಅಂಬೇಡ್ಕರ್ ಭವನದಲ್ಲಿ ನಡೆದ ಸೈನಿಕ ನಮನ ಮತ್ತು ಪಠ್ಯಪುಸ್ತಕ ವಿತರಣಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಗಂಗೊಳ್ಳಿ ಗ್ರಾಮ ಪಂಚಾಯತ್ ಸದಸ್ಯ ರಾಜೇಂದ್ರ ಶೇರುಗಾರ್ ಅಧ್ಯಕ್ಷತೆ ವಹಿಸಿದ್ದರು. ಗಂಗೊಳ್ಳಿ ಗ್ರಾಮ ಪಂಚಾಯತ್ ಸದಸ್ಯ ಚಂದ್ರ ಖಾರ್ವಿ, ಎಸ್ ಡಿಎಂಸಿ ಅಧ್ಯಕ್ಷೆ ಸವಿತಾ, ಅರ್ಚನಾ ಮಹಿಳಾ ಮಂಡಲದ ಅಧ್ಯಕ್ಷೆ ಜ್ಯೋತಿ ಆನಂದ, ಶ್ರೀ ಬಸವೇಶ್ವರ ದೇವಸ್ಥಾನದ ಅರ್ಚಕ ಜಗದೀಶ್, ಕಲಾಶ್ರೀ ಶಿಕ್ಷಣ ಪ್ರೇಮಿ ಬಳಗದ ಮುಖ್ಯಸ್ಥ ಈಶ್ವರ ಗಂಗೊಳ್ಳಿ, ಅಂಗನವಾಡಿ ಕಾರ್ಯಕರ್ತೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಬವಳಾಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ನಿವೃತ್ತಿ ಹೊಂದಿದ ಶಿಕ್ಷಕಿ ಕಮಲ ಅವರಿಗೆ ಇತ್ತೀಚಿಗೆ ಬೀಳ್ಕೊಡುಗೆ ಸಮಾರಂಭ ನಡೆಯಿತು. ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ಎಸ್ಡಿಎಂಸಿಯ ಅಧ್ಯಕ್ಷರಾದ ರಾಘವೇಂದ್ರ ಗಾಣಿಗ ವಹಿಸಿದ್ದರು. ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಗೋಕುಲ ಶೆಟ್ಟಿ ಜಿ., ಗೌರವಾಧ್ಯಕ್ಷರಾದ ರಘುರಾಮ ಶೆಟ್ಟಿ ಗೋಳಿಕಟ್ಟೆ ಹಾಗೂ ಶಾಲಾ ಮುಖ್ಯೋಪಾಧ್ಯಾಯ ಎನ್.ಕೆ. ಬಿಲ್ಲವ ವೇದಿಕೆಯಲ್ಲಿ ಉಪಸ್ಥಿತರಿದ್ದರು. ನಿವೃತ್ತ ಶಿಕ್ಷಕಿಯವರನ್ನು ಹಳೆ ವಿದ್ಯಾರ್ಥಿ ಸಂಘ, ಎಸ್ಡಿಎಂಸಿ ಹಾಗೂ ಅಧ್ಯಾಪಕರಿಂದ ಗೌರವಿಸಲಾಯಿತು. ಸಾಕಷ್ಟು ಸಂಖ್ಯೆಯಲ್ಲಿ ಪಾಲಕ ಪೋಷಕರು ಮತ್ತು ಮುದ್ದು ಮಕ್ಕಳು ಹಾಜರಿದ್ದರು. ಎಲ್ಲರೂ ಶಿಕ್ಷಕಿಯ ಗುಣಗಾನ ಮಾಡಿದರು. ಶಿಕ್ಷಕರಾದ ರಾಘವೇಂದ್ರ ಕೆ. ಕಾರ್ಯಕ್ರಮ ನಿರೂಪಿಸಿ, ಸುನಿಲ್ ಕುಮಾರ್ ವಂದನಾರ್ಪಣೆಗೈದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಹಟ್ಟಿಯಂಗಡಿಯ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯು ಜೂ. 2 ರಂದು ಶಾಲಾ ಪ್ರಾರಂಭೋತ್ಸವವನ್ನು ಆಹ್ಲಾದಕರವಾಗಿ ಆಚರಿಸಲಾಯಿತು. ತರಗತಿಗಳನ್ನು ತೋರಣ, ದೀಪ, ವಿವಿಧ ಭಿತ್ತಿಚಿತ್ರಗಳಿಂದ ಅಲಂಕರಿಸಿ, ವಿದ್ಯಾರ್ಥಿಗಳನ್ನು ಆರತಿ ಬೆಳಗಿ, ಪುಷ್ಪಾರ್ಚನೆ ನಡೆಸಿ, ತಿಲಕವನ್ನಿಟ್ಟು ತರಗತಿ ಶಿಕ್ಷಕರು ಸ್ವಾಗತಿಸಿದರು. ಮೊದಲ ದಿನವೇ ಮಕ್ಕಳನ್ನು ಶಾಲೆಯತ್ತ ಆಕರ್ಷಿಸುವ ಸಲುವಾಗಿ ವಿವಿಧ ಪಠ್ಯೇತರ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗಿತ್ತು. ಶ್ರೀ ಸಿದ್ಧಿ ಶೈಕ್ಷಣಿಕ ಪ್ರತಿಷ್ಠಾನದ ಕಾರ್ಯದರ್ಶಿಗಳು ಹಾಗೂ ಶಾಲಾ ಪ್ರಾಂಶುಪಾಲರಾದ ಶರಣ ಕುಮಾರ ಅವರು ಮಕ್ಕಳನ್ನು ಸ್ವಾಗತಿಸುತ್ತಾ, ಮಕ್ಕಳೇ! ದೀರ್ಘಕಾಲದ ರಜೆಯನ್ನು ಆನಂದಿಸಿ, ಈಗ ನಿಮ್ಮ ಶೈಕ್ಷಣಿಕ ಜೀವನದ ಮುಂದಿನ ಹಂತಕ್ಕೆ ಕಾಲಿಡಲು ಬಂದಿದ್ದೀರಿ. ನಿಮ್ಮ ಪ್ರತಿಭೆಯನ್ನು ಸಮಾಜಮುಖಿಯನ್ನಾಗಿಸಿಕೊಳ್ಳಲು, ನಿಮ್ಮೊಳಗಿನ ಜ್ಞಾನವನ್ನು ಅರಿಯಲು, ಅಂತಃಸತ್ತ್ವವನ್ನು ಬೆಳೆಸಿಕೊಳ್ಳಲು ನೀವಿಲ್ಲಿಗೆ ಆಗಮಿಸಿದ್ದೀರಿ. ಆಂಜನೇಯನಂತೆ ಭಕ್ತಿ, ಶಕ್ತಿ, ಯುಕ್ತಿಗಳನ್ನು ನಾವು ಬಳಸಬೇಕು. ಪಾಲಕರಲ್ಲಿ, ಶಿಕ್ಷಕರಲ್ಲಿ, ದೇಶದಲ್ಲಿ ಭಕ್ತಿಯನ್ನೂ, ಸಹಪಾಠಿಗಳಿಗೆ ಸಹಾಯ ಮಾಡಲು ಶಕ್ತಿಯನ್ನೂ, ಯಶಸ್ಸಿಗಾಗಿ ಯುಕ್ತಿಯನ್ನೂ ಸದಾ ಬಳಸಬೇಕು. ಜ್ಞಾನದ ಸದುಪಯೋಗದಿಂದ ಕೀರ್ತಿಯನ್ನು ಸಂಪಾದಿಸಬೇಕೇ ವಿನಃ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿಗೆ ಉಡುಪಿ ತಾಲೂಕು ಮಣಿಪಾಲದಲ್ಲಿನ ಅಲ್ಪಸಂಖ್ಯಾತರ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್ ಹಾಗೂ ಬೌದ್ಧ ವರ್ಗದ ಮೆಟ್ರಿಕ್ ನಂತರದ ಬಾಲಕರ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯ ಪ್ರವೇಶಾತಿಗೆ, ನವೀಕರಣ ವಿದ್ಯಾರ್ಥಿಗಳ ಸೀಟು ಹಂಚಿಕೆಯಾಗಿ ಉಳಿಕೆ ಸೀಟುಗಳಿಗೆ ಸ್ಟೇಟ್ ಹಾಸ್ಟೆಲ್ ಪೋರ್ಟಲ್ ತಂತ್ರಾಂಶದ ಮೂಲಕ ಪಿ.ಯು.ಸಿ, ಐ.ಟಿ.ಐ, ಡಿಪ್ಲೋಮಾ ಹಾಗೂ ಪ್ರಥಮ ವರ್ಷದ ಪದವಿ ಮಟ್ಟದ ವಿದ್ಯಾರ್ಥಿಗಳಿಂದ ವೆಬ್ಸೈಟ್ https://shp.karnataka.gov.in ನಲ್ಲಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜೂನ್ 28 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿಯವರ ಕಚೇರಿ, ಮಣಿಪಾಲ, ಉಡುಪಿ ದೂ.ಸಂಖ್ಯೆ: 0820-2573596, ಸಹಾಯವಾಣಿ ಸಂಖ್ಯೆ: 8277799990 ಅಥವಾ ಜಿಲ್ಲಾ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ, ಮಣಿಪಾಲ ದೂ.ಸಂಖ್ಯೆ: 0820-2574596 ಅಥವಾ ಕಾರ್ಕಳ ದೂ.ಸಂಖ್ಯೆ: 08258-231101 ಹಾಗೂ ಕುಂದಾಪುರ ದೂ.ಸಂಖ್ಯೆ: 08254-230370 ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧಿಕಾರಿಗಳ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಮನಸ್ಸಿನ ಸಮಸ್ಯೆ ಸರಿ ಮಾಡಲು ಡಾಕ್ಟರ್ ಇದ್ದಾರೆ. ಮನಸ್ಥಿತಿಯ ಸಮಸ್ಯೆ ಸರಿ ಮಾಡಲು ಯಾರು ಬರುವುದಿಲ್ಲ ನಾವೇ ಸರಿ ಮಾಡಿಕೊಳ್ಳಬೇಕು ಹಾಗೂ ಅವಕಾಶ ಬಳಸಿಕೊಂಡು ಮನ್ನೆಡೆಯಬೇಕು. ನಮ್ಮ ಜೀವನದ ಯಶಸ್ಸು ಪಡೆಯಬೇಕಾದರೆ ಹಾರ್ಡ್ ವರ್ಕ್ ಮಾಡಲೇಬೇಕು. ಸಾಧನೆಗೆ ಶ್ರಮವೇ ಗುರು. ಶ್ರಮ ನಮ್ಮದು ಅದಕ್ಕೆ ಪ್ರತಿಫಲ ಸಿಕ್ಕೆ ಸಿಗುತ್ತದೆ. ಆ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಪ್ರತಿ ದಿನ ಪ್ರತಿ ಕ್ಷಣ ಶೈಕ್ಷಣಿಕ ಅಭ್ಯಾಸದಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕು ಎಂದು ತ್ರಿಷಾ ಸಮೂಹ ಸಂಸ್ಥೆಗಳ ಸಂಸ್ಥಾಪಕರಾದ ಸಿಎ ಗೋಪಾಲಕೃಷ್ಣ ಭಟ್ ಹೇಳಿದರು. ಅವರು ಇಲ್ಲಿನ ಹೆಮ್ಮಾಡಿಯ ಜನತಾ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯು ವಾಣಿಜ್ಯ ವಿಭಾಗದ ಸಿಎ, ಸಿಎಸ್ ವಿದ್ಯಾರ್ಥಿಗಳಿಗೆ ಆಯೋಜಿಸಿದ ಓರಿಂಟೇಷನ್ ಕಾರ್ಯಕ್ರಮವನ್ನು ಉದ್ಘಾಟಿಸಿ, ಸಂಪನ್ಮೂಲ ವ್ಯಕ್ತಿಯಾಗಿ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜನತಾ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಗಣೇಶ್ ಮೊಗವೀರ ಅವರುಮಾತನಾಡಿ, ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ಸ್ಪರ್ಧಾ ಮನೋಭಾವ ರೂಡಿಸಿಕೊಂಡು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಆರೋಗ್ಯವನ್ನು ಚೆನ್ನಾಗಿ ಕಾಪಾಡಿಕೊಳ್ಳುವುದು ನಮ್ಮ ಕೈಯಲ್ಲಿ ಇದೆ. ಇಂತಹ ಉಚಿತ ತಪಾಸಣಾ ಶಿಬಿರಗಳಲ್ಲಿ ಭಾಗವಹಿಸಿ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳುವುದರಿಂದ ಆರೋಗ್ಯದ ದೃಷ್ಟಿಯಿಂದ ಸರಿಯಾದ ಚಿಕಿತ್ಸೆ ಪಡೆಯಲು ಸಹಾಯವಾಗುತ್ತದೆ ಇದರ ಸದುಪಯೋಗವನ್ನು ಪಡೆದುಕೊಳ್ಳಿ ಎಂದು ಭಂಡಾರ್ಕಾರ್ಸ್ ಕಾಲೇಜು ಟ್ರಸ್ಟ್ ಉಪಾಧ್ಯಕ್ಷ ಕೆ. ಶಾಂತಾರಾಮ ಪ್ರಭು ಹೇಳಿದರು. ಅವರು ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ನಡೆದ ದುರ್ಗಾಂಬಾ ಮೋಟಾರ್ಸ್ ಮತ್ತು ಕಸ್ತೂರಬಾ ಆಸ್ಪತ್ರೆ ಮಣಿಪಾಲ, ಕಾಲೇಜಿನ ಎನ್.ಸಿ.ಸಿ(ಆರ್ಮಿ ಮತ್ತು ನೇವಿ) ಮತ್ತು ರಾಷ್ಟ್ರೀಯ ಸೇವಾ ಯೋಜನೆ ಘಟಕ ಯುಥ್ ರೆಡ್ ಕ್ರಾಸ್ ಘಟಗಗಳ ಸಹಯೋಗದಲ್ಲಿ ʼಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ಉಚಿತ ದಂತ ಚಿಕಿತ್ಸಾ ಶಿಬಿರʼ ವನ್ನು ಉದ್ಘಾಟಿಸಿ ಮಾತನಾಡಿದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಮಣಿಪಾಲ ಪ್ರೊಫೆಸರ್, ಪಬ್ಲಿಕ್ಹೆಲ್ತ್ ಡೆಂಟಿಸ್ಟ್ರಿ ಡಾ. ರಾಮ ಪ್ರಸಾದ್ ಅವರು ಮಾತನಾಡಿ, ಸದಾ ಉತ್ತಮ ಆರೋಗ್ಯ ನಮ್ಮದಾಗಬೇಕಾದರೆ ಒಳ್ಳೆಯ ಹವ್ಯಾಸಗಳನ್ನು ಬೆಳೆಸಿಕೊಳ್ಳಬೇಕು. ವಿಶ್ವ ತಂಬಾಕು ರಹಿತ ದಿನಾಚರಣೆಯ ಈ ಸಂದರ್ಭದಲ್ಲಿ ತಂಬಾಕು ಸೇವನೆಯ ಕೆಟ್ಟ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಪೋಷಕರ ಸಭೆಯನ್ನು ಆಯೋಜಿಸಲಾಗಿತ್ತು. ಈ ಸಂದರ್ಭದಲ್ಲಿ ಮುಖ್ಯ ಅತಿಥಿಯಾಗಿದ್ದ ಶಿಕ್ಷಕರು ಹಾಗೂ ರಾಷ್ಟ್ರ ಮಟ್ಟದ ವ್ಯಕ್ತಿತ್ವ ವಿಕಸನದ ತರಬೇತುದಾರರಾದ ರಾಜೇಂದ್ರ ಭಟ್. ಕೆ. ಪೋಷಕರನ್ನು ಉದ್ದೇಶಿಸಿ, ಪೋಷಕರು ತಮ್ಮ ಮಕ್ಕಳನ್ನು ಅತ್ಯುತ್ತಮ ರೀತಿಯಲ್ಲಿ ಬೆಳೆಸುವ ನಿಟ್ಟಿನಲ್ಲಿ ಪ್ರಯತ್ನಿಸಬೇಕು. ಮಕ್ಕಳು ಹೃದಯ ಶ್ರೀಮಂತಿಗೆ ಬೆಳೆಸಿಕೊಳ್ಳು ವಂತೆ ಮಾಡಿ, ಮಗುವಿನಲ್ಲಿ ಅಂಕ ಪಡೆಯುವುದಕ್ಕಿಂತ ಮುಖ್ಯವಾಗಿರುವುದು ಮಾನವೀಯ ಮೌಲ್ಯ. ಒತ್ತಡ ರಹಿತವಾಗಿ ಬದುಕುವ ವಾತಾವರಣ ವನ್ನು ಸೃಷ್ಟಿಸಿ ಎಂದು ಪೋಷಕರಿಗೆ ತಿಳಿಸಿದರು. ಶ್ರೀ ವೆಂಕಟರಮಣ ದೇವ್ ಎಜುಕೇಶನಲ್ ಎಂಡ್ ಕಲ್ಚರಲ್ ಟ್ರಸ್ಟ್ ನ ಅಧ್ಯಕ್ಷರಾದ ಕೆ. ರಾಮಕೃಷ್ಣ ಕಾಮತ್ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ರಾಜ್ಯ ಮಟ್ಟದಲ್ಲಿ ಟಾಪ್ 10 ಸ್ಥಾನದಲ್ಲಿ ರ್ಯಾಂಕ್ ಪಡೆದ ಹಾಗೂ ಕೆ- ಸಿಇಟಿ ಯಲ್ಲಿ 5000 ಒಳಗಡೆ ರ್ಯಾಂಕ್ ಪಡೆದ ಒಟ್ಟು 22 ವಿದ್ಯಾರ್ಥಿಗಳನ್ನು ಪೋಷಕರ ಸಮ್ಮುಖದಲ್ಲಿ ಬೆಳ್ಳಿಲೋಟ, ಬೆಳ್ಳಿ ನಾಣ್ಯ, ಫಲ, ಪುಷ್ಪ, ಶಾಲು ಹೊದಿಸಿ ಸನ್ಮಾನಿಸಲಾಯಿತು.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಗಂಗೊಳ್ಳಿಯ ಜಿ.ಎಸ್.ವಿ.ಎಸ್.ಅಸೋಸಿಯೇಶನ್ ವತಿಯಿಂದ ನಡೆಸಲ್ಪಡುವ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸುದೀರ್ಫ 36 ವರ್ಷ ಶಿಕ್ಷಕರಾಗಿ ಸೇವೆ ಸಲ್ಲಿಸಿ ಮುಖ್ಯೋಪಾಧ್ಯಾಯರಾಗಿ ವಯೋನಿವೃತ್ತಿ ಹೊಂದಿದ ಶಾಲೆಯ ಮುಖ್ಯ ಶಿಕ್ಷಕ ಜಿ. ವಿಶ್ವನಾಥ ಭಟ್ ಅವರನ್ನು ಶಾಲೆಯ ಆಡಳಿತ ಮಂಡಳಿ ಹಾಗೂ ಶಿಕ್ಷಕ ವೃಂದದಿಂದ ಬೀಳ್ಕೊಡಲಾಯಿತು. ಶಾಲೆಯ ಸಭಾಂಗಣದಲ್ಲಿ ಶನಿವಾರ ಜರಗಿದ ಕಾರ್ಯಕ್ರಮದಲ್ಲಿ ಜಿ.ಎಸ್.ವಿ.ಎಸ್.ಅಸೋಸಿಯೇಶನ್ ಅಧ್ಯಕ್ಷ ಡಾ. ಕಾಶೀನಾಥ ಪೈ, ಕಾರ್ಯದರ್ಶಿ ಎಚ್. ಗಣೇಶ ಕಾಮತ್ ಮತ್ತು ಎಸ್.ವಿ. ವಿದ್ಯಾಸಂಸ್ಥೆಗಳ ಸಂಚಾಲಕ ಎನ್. ಸದಾಶಿವ ನಾಯಕ್ ಅವರು ವಯೋನಿವೃತ್ತಿ ಹೊಂದಿದ ಮುಖ್ಯ ಶಿಕ್ಷಕ ಜಿ.ವಿಶ್ವನಾಥ ಭಟ್ ಅವರ ಸೇವೆಯನ್ನು ಪ್ರಶಂಶಿಸಿ ಅವರನ್ನು ಗೌರವಿಸಿದರು. ಆಡಳಿತ ಮಂಡಳಿ ಸದಸ್ಯರಾದ ಎಂ. ವಿನೋದ ಪೈ, ಜಿ. ವೆಂಕಟೇಶ ನಾಯಕ್, ಎನ್. ಅಶ್ವಿನ್ ನಾಯಕ್, ಎಂ. ನಾಗೇಂದ್ರ ಪೈ, ಶಿಕ್ಷಕ-ರಕ್ಷಕ ಸಮಿತಿ ಕಾರ್ಯದರ್ಶಿ ಅಜಿತ್ ಭಟ್, ನಿಯೋಜಿತ ಶಿಕ್ಷಕಿ ಫಾತಿಮಾ ಮರಿಯಾ ಬೆರೆಟ್ಟೊ, ಪ್ರಭಾರ ಮುಖ್ಯ ಶಿಕ್ಷಕ ದೀಕ್ಷಿತ್ ಮೇಸ್ತ,…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಾಲೂಕು ಸವಿತಾ ಸಮಾಜದ ವಾರ್ಷಿಕ ಮಹಾ ಸಭೆಯು ಕಂಬದಕೋಣೆ ರೈತರ ಸೇವಾ ಸಹಕಾರಿ ಸಂಘದ ರೈತ ಸಿರಿ ಸಭಾಭವನ ಉಪ್ಪುಂದದಲ್ಲಿ ಇತ್ತೀಚಿಗೆ ಜರುಗಿತು. ಇದರ ಅಧ್ಯಕ್ಷತೆಯನ್ನು ತಾಲೂಕು ಸವಿತಾ ಸಮಾಜದ ಅಧ್ಯಕ್ಷರಾದ ಪ್ರಶಾಂತ್ ಭಂಡಾರಿ ಬೈಂದೂರು ವಹಿಸಿದ್ದರು. ಜಿಲ್ಲಾ ಸವಿತಾ ಸಮಾಜದ ಗೌರವಾಧ್ಯಕ್ಷರು, ಸವಿತಾ ಸಮಾಜ ವಿವಿದೋದ್ದೇಶ ಸೌಹಾರ್ದ ಸಹಕಾರಿ ಅಂಬಲಪಾಡಿ ಉಡುಪಿ ಇದರ ಉಪಾಧ್ಯಕ್ಷರಾದ ಬನ್ನಂಜೆ ಗೋವಿಂದ ಭಂಡಾರಿ ಅವರು ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ 70ಕ್ಕೂ ಹೆಚ್ಚು ಮಕ್ಕಳಿಗೆ ಉಚಿತ ಕೊಡೆ, ನೋಟ್ಸ್ ಪುಸ್ತಕವನ್ನು ವಿತರಿಸಲಾಯಿತು. ಶೇಕಡ 80ಕ್ಕಿಂತ ಅಧಿಕ ಅಂಕ ಪಡೆದ ಎಸ್ಎಸ್ಎಲ್ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳನ್ನು ಗುರುತಿಸಿ ಗೌರವಿಸಲಾಯಿತು. ಎಸ್ಎಸ್ಎಲ್ಸಿ ಯಲ್ಲಿ 613 ಅಂಕ ಪಡೆದ ಗೌತಮಿ ಗೋಪಾಲ ಭಂಡಾರಿ ಕಂಚಿ ಕಾನ್ ಬಿಜೂರು ಮತ್ತು 591 ಅಂಕಗಳಿಸಿದ ಪೃಥ್ವಿರಾಜ್ ನಾಗರಾಜ್ ಭಂಡಾರಿ ಸಾಲಿಮಕ್ಕಿ ಬಿಜೂರು ಅವರನ್ನು ಸನ್ಮಾನಿಸಲಾಯಿತು. ಪಿಯುಸಿಯಲ್ಲಿ 88 ಶೇಕಡ ಅಂಕಗಳಿಸಿದ ಪ್ರಜ್ಞಾ ರಾಜು ಸುವರ್ಣ ಬೈಂದೂರು ಅವರನ್ನು ಕೂಡ ಗೌರವಿಸಲಾಯಿತು.…
