ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಮೂಡ್ಲಕಟ್ಟೆ ಕಾಲೇಜ್ ಆಫ್ ನರ್ಸಿಂಗ್ ನಲ್ಲಿ ಫ್ಲೋರೆನ್ಸ್ ನೈಟಿಂಗೇಲ್ ಅವರ ಜನ್ಮ ದಿನದ ಅಂಗವಾಗಿ ವಿಶ್ವ ದಾದಿಯರ ದಿನಾಚರಣೆಯನ್ನು ಕಾಲೇಜಿನ ಸಭಾಂಗಣದಲ್ಲಿ ವಿಜೃಂಭಣೆಯಿಂದ ಆಚರಿಸಲಾಯಿತು. ದಾದಿಯರ ದಿನದ ಪ್ರಯುಕ್ತ ಬಿಎಸ್‌ಸಿ ನರ್ಸಿಂಗ್ ವಿದ್ಯಾರ್ಥಿಗಳಿಗೆ ಬೇಸಿಕ್ ಲೈಫ್ ಸಪ್ಪೋರ್ಟ್ ಮತ್ತು ಪ್ರಥಮ ಚಿಕಿತ್ಸಾ ತರಬೇತಿಯನ್ನು ಆಯೋಜಿಸಲಾಗಿತ್ತು. ಮುಖ್ಯ ಅತಿಥಿ ಮೆಡಿಷುರ್ ಹೆಲ್ತ್ ಕೇರ್ ಅಕಾಡೆಮಿಯ ಡೈರೆಕ್ಟರ್ ಹಾಗೂ ಪ್ರಮಾಣಿತ ತರಬೇತುದಾರರಾದ ಡಾ. ಆಸಿಫ್ ಅಶ್ರಫ್ ಕಾರ್ಯಕ್ರಮವನ್ನು ಉದ್ಘಾಟಿಸಿ ದಾದಿಯರ ದಿನಾಚರಣೆಯಂದು ದಾದಿಯರಿಗೆ ಪ್ರಾಮಾಣಿಕತೆ ಮತ್ತು ವಿನಮ್ರತೆಯು ಮುಖ್ಯ ಎಂದರು. ಉಪನ್ಯಾಸಕ ವೃಂದದವರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಕಾರ್ಯಕ್ರಮ ಸಲಹೆಗಾರರಾದ ಚಂದ್ರಶೇಖರ್ ಅವರು ದಾದಿಯರ ದಿನದ ಮಹತ್ವವನ್ನು ಸಾರಿದರು. ವಿದ್ಯಾರ್ಥಿನಿಯಾದ ಆಯೇಷಾ ರಫೀದ ಕಾರ್ಯಕ್ರಮ ನಿರೂಪಿಸಿ, ಪ್ರಾಂಶುಪಾಲರಾದ ಜೆನಿಫರ್ ಫ್ರೀಡಾ ಮನೆಜಸ್ ಸ್ವಾಗತಿಸಿ, ಉಪ ಪ್ರಾಂಶುಪಾಲರಾದ ರೂಪಶ್ರೀ ಕೆ.ಎಸ್. ವಂದಿಸಿದರು.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಜಿಲ್ಲೆಯಲ್ಲಿ ಮುಂಬರುವ ಮಳೆಗಾಲದಲ್ಲಿ ಹೆಚ್ಚು ಮಳೆಯಿಂದಾಗಿ ಉಂಟಾಗುವ ಪ್ರಕೃತಿ ವಿಕೋಪ ವಿಪತ್ತುಗಳ ಪರಿಹಾರ ಕಾರ್ಯಗಳನ್ನು ತುರ್ತಾಗಿ ಕೈಗೊಳ್ಳಲು ಅಗತ್ಯವಿರುವ ಎಲ್ಲಾ ರೀತಿಯ ತಯಾರಿಯೊಂದಿಗೆ ಮುಂಚಿತವಾಗಿಯೇ ಯೋಜನೆಗಳನ್ನು ರೂಪಿಸಿಕೊಂಡು, ಕೂಡಲೇ ಸ್ಪಂದಿಸಲು ಸನ್ನದ್ಧರಾಗಿರಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾ ಕುಮಾರಿ ಸೂಚನೆ ನೀಡಿದರು. ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮುಂಗಾರು ಮಳೆಗಾಲದಲ್ಲಿ ಮಳೆಯ ನೀರು ಹೆಚ್ಚಾಗಿ ಕೃತಕ ನೆರೆಗಳು ಉಂಟಾಗಿ ಮನೆಗಳಿಗೆ ಹಾಗೂ ಕೃಷಿ ಜಮೀನುಗಳಿಗೆ ನೀರು ನುಗ್ಗಿ ಹಾನಿ ಉಂಟಾಗುತ್ತದೆ. ಕಳೆದ ಮಳೆಗಾಲದಲ್ಲಿ ಇಂತಹ ಪ್ರಕರಣಗಳು ಉಂಟಾಗಿ ಸಾರ್ವಜನಿಕರು ತೊಂದರೆಯನ್ನು ಅನುಭವಿಸಿದ್ದಾರೆ. ಈ ಬಾರಿ ಹೀಗಾಗದಂತೆ ಅಗತ್ಯವಿರುವ ಎಲ್ಲಾ ರೀತಿಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು. ರಾಜ ಕಾಲುವೆ, ತೋಡುಗಳಲ್ಲಿ ನೀರು ಸರಾಗವಾಗಿ ಹರಿದು ಹೋಗುವಂತೆ ಕ್ರಮವಹಿಸಲು ಈಗಾಗಲೇ ಕಳೆದ ಎರಡು ಮೂರು ತಿಂಗಳಿನ ಹಿಂದೆ ಸೂಚಿಸಲಾಗಿದೆ.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಛಾಯಾ ತರಂಗಿಣಿ ಸಂಗೀತ ಶಾಲೆ ಕೋಟ ಹರ್ತಟ್ಟು ಇದರ ದಶಮಾನೋತ್ಸವ ಸಂಭ್ರಮವು ಮೇ.15 ರಂದು ಕೋಟದ ಕಾರಂತ ಥೀಂ ಪಾರ್ಕ್‌ನಲ್ಲಿ ನಡೆಯಲಿದೆ. ಕಾರ್ಯಕ್ರಮವನ್ನು ಸಂಸದ ಕೋಟ ಶ್ರೀನಿವಾಸ ಪೂಜಾರಿ ಉದ್ಘಾಟಿಸಲಿದ್ದು, ಗುರುವಂದನಾ ಕಾರ್ಯಕ್ರಮದ ಅಂಗವಾಗಿ ವಿದ್ವಾನ್ ಮಧೂರು ಪಿ. ಬಾಲ ಸುಬ್ರಹ್ಮಣ್ಯಂ, ವಿದುಷಿ ಶರ್ಮಿಳ ರಾವ್ ಅವರುಗಳು ಗುರವಂದನಾ ಗೌರವ ಸ್ವೀಕರಿಸಲಿದ್ದಾರೆ. ಅಧ್ಯಕ್ಷತೆಯನ್ನು ಗೀತಾನಂದ ಫೌಂಡೇಶನ್ ಪ್ರವರ್ತಕ ಆನಂದ್ ಸಿ. ಕುಂದರ್ ವಹಿಸಲಿದ್ದಾರೆ. ಸಾಂಸ್ಕೃತಿಕ ಕಾರ್ಯಕ್ರಮದ ಭಾಗವಾಗಿ ಛಾಯಾ ತರಂಗಣಿ ವಿವಿಧ ಶಾಖೆಯ ವಿದ್ಯಾರ್ಥಿಗಳಿಂದ ಗಾನ ನಮನ, ಅನಘಾ ಆರ್ ವಿ., ತನ್ಮಯ್ ಬಿಜೂರು, ವಿದ್ವಾನ್ ಮಧೂರು ಪಿ ಬಾಲಸುಬ್ರಹ್ಮಣ್ಯಂ ,ವಿದುಷಿ ಶರ್ಮಿಳ ರಾವ್ ಅವರಿಂದ ಕರ್ನಾಟ ಶಾಸ್ತ್ರೀಯ ಸಂಗೀತ ಕಾರ್ಯಕ್ರಮ ಜರಗಲಿದೆ ಎಂದು ಸಂಸ್ಥೆಯ ಮುಖ್ಯಸ್ಥೆ ಭಾಗೇಶ್ವರಿ ಜಿ. ಮಯ್ಯ ತಿಳಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ರೈತರು ಹೊಸ ಹೊಸ ತಂತ್ರಜ್ಞಾನಗಳನ್ನು ಅಳವಡಿಸಿಕೊಂಡು ಕೃಷಿಯಲ್ಲಿ ಹೆಚ್ಚು ಆದಾಯ ಗಳಿಸುವಂತಾಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಉಡುಪಿ ಜಿಲ್ಲಾ ಪಂಚಾಯತ್, ಕೃಷಿ ಇಲಾಖೆ ವತಿಯಿಂದ ನೂತನವಾಗಿ ಕೋಟೇಶ್ವರದಲ್ಲಿ ನಿರ್ಮಿಸಲಾಗಿರುವ ಕುಂದಾಪುರ ರೈತ ಸಂಪರ್ಕ ಕೇಂದ್ರವನ್ನು ಉದ್ಘಾಟಿಸಿ ಮಾತನಾಡಿದ ಸಚಿವರು, ರೈತರು ಕೃಷಿಯಲ್ಲಿ ಆಧುನಿಕರಣ ಕಂಡುಕೊಳ್ಳಬೇಕು, ರೈತರು ಸುಖಿಯಾಗಿದ್ದಾಗ ಮಾತ್ರ ದೇಶ ಅಭಿವೃದ್ಧಿಯಾದಂತೆ ಎಂದು ಹೇಳಿದರು. ರೈತ ಸಂಪರ್ಕ ಕೇಂದ್ರಗಳು ರೈತರಿಗೆ ಅನುಕೂಲವಾಗಿದೆ. ಕೃಷಿಯ ಬಗ್ಗೆ ಅಧಿಕಾರಿಗಳು ರೈತರಿಗೆ ಸೂಕ್ತ ಮಾರ್ಗದರ್ಶನ ಹಾಗೂ ಸಲಹೆ ನೀಡಬೇಕು. ಸರ್ಕಾರದ ಯೋಜನೆಗಳನ್ನು ರೈತರ ಮನೆ ಬಾಗಿಲಿಗೆ ತಲುಪಿಸಬೇಕು, ಅಧಿಕಾರಿಗಳು ರೈತರು ಹಾಗೂ ಸರ್ಕಾರದ ಮಧ್ಯೆ ಕೊಂಡಿಯಾಗಿ ಕೆಲಸ ಮಾಡಬೇಕು, ರೈತರ ಮಿತ್ರರಾಗಿ ಕೆಲಸ ಮಾಡಬೇಕು ಎಂದು ಸಚಿವರು ಕರೆ ನೀಡಿದರು. ಸಿದ್ದರಾಮಯ್ಯನವರ ನೇತೃತ್ವದ ರಾಜ್ಯ ಸರ್ಕಾರ ರೈತರ ಪರ ಸರ್ಕಾರ, ರೈತರ ಪರ ಕಾಳಜಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಕಾಲೇಜಿನ ಆಂತರಿಕ ಗುಣಮಟ್ಟ ಭರವಸೆ ಕೋಶ, ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಕುಂದಾಪುರ, ಕಸ್ತೂರಬಾ ಆಸ್ಪತ್ರೆ ಮಣಿಪಾಲ ಲಯನ್ಸ್ ಕ್ರೌನ್ ಕುಂದಾಪುರ, ರಾಷ್ಟ್ರೀಯ ಸೇವಾ ಯೋಜನೆ, ರೋವರ್ಸ್ ಮತ್ತು ರೇಂಜರ್ಸ್, ರೆಡ್ ರಿಬ್ಬನ್ ಕ್ಲಬ್ , ಎನ್.ಸಿ.ಸಿ ಇವರು ಸಹಯೋಗದೊಂದಿಗೆ “ಸ್ವಯಂಪ್ರೇರಿತ ಬ್ರಹತ್ ರಕ್ತದಾನ ಶಿಬಿರ” ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಮಾತನಾಡಿದ ಮಣಿಪಾಲ ಕಸ್ತೂರಬಾ ಆಸ್ಪತ್ರೆ ಇದರ ಸಂಯೋಜಿತ ಆರೋಗ್ಯ ಮತ್ತು ಜೈವಿಕ ವೈದ್ಯಕೀಯ ಕಾರ್ಯಕ್ರಮ ಇಲ್ಲಿನ ದೀಪ್ ಮಡ್ಕಂಕರ್ ಅವರು ರಕ್ತದಾನದ ಮಹತ್ವವನ್ನು ವಿವರಿಸಿದರು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಕುಂದಾಪುರ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಇದರ ಸಭಾಪತಿ ಜಯಕರ್ ಶೆಟ್ಟಿ ಮಾತನಾಡಿ, ತಂತ್ರಜ್ಞಾನ ಮುಂದುವರೂ ರಕ್ತ ತಯಾರಿಸಲು ಅಥವಾ ದೇಹದ ಅಂಗಾಂಗಗಳು ತಯಾರಿ ತಂತ್ರಜ್ಞಾನ ಬಂದಿಲ್ಲ. ಒಂದೊಮ್ಮೆ ತೀವ್ರ ರಕ್ತಸ್ರಾವವಾದರೆ ರಕ್ತ ನೀಡುವುದರಿಂದ ಮಾತ್ರ ರಕ್ತಸ್ರಾವ ನಿಲ್ಲಿಸಬಹುದು. ರಕ್ತನಿಧಿಗಳಲ್ಲಿ ರಕ್ತದ ಕೊರತೆ ಇದೆ. ಹಾಗಾಗಿ ರಕ್ತದಾನ ಮಾಡಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಾಲೂಕಿನ ಬಿಜೂರು ಸುಮನಾವತಿ ನದಿತೀರದಲ್ಲಿ ಸುಮಾರು ಐದು ಕೋಟಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಕೋಟಿ-ಚೆನ್ನಯ್ಯ ಪಂಜುರ್ಲಿ ನವೀಕೃತ ಗರಡಿ ನಿರ್ಮಾಣಕ್ಕಾಗಿ ಶುಕ್ರವಾರ ಶಿಲಾನ್ಯಾಸ ನೆರವೇರಿಸಲಾಯಿತು. ನಿಪ್ಪಾಣಿ ಮಹಾಕಾಳಿ ಮಹಾಸಂಸ್ಥಾನ ಸದ್ಧರ್ಮ ಓಂಶಕ್ತಿ ಪೀಠಾಧೀಪತಿ ಶ್ರೀ ಅರುಣಾನಂದ ತೀರ್ಥ ಸ್ವಾಮೀಜಿ ಶಿಲನ್ಯಾಸಗೈದ ಬಳಿಕ ಆಶೀರ್ವಚನ ನೀಡಿ, ನಮ್ಮ ಪವಿತ್ರವಾದ ಸಂಸ್ಕಾರಯುಕ್ತ ಜೀವನ ಮೌಲ್ಯಗಳು ಉಳಿಯಬೇಕಾದರೆ ಮನೆ ಮನಗಳು ಧರ್ಮಕ್ಷೇತ್ರವಾಗಬೇಕು. ಸಮಾಜದಲ್ಲಿ ಉತ್ತಮ ಸಂಸ್ಕೃತಿ ಸಂಸ್ಕಾರಗಳನ್ನು ನಿರ್ಮಾಣ ಮಾಡಬೇಕು ಎಂದರು. ದೇವರು, ದೈವಸ್ಥಾನಗಳು ಜೀರ್ಣೋದ್ಧಾರವಾದ ನಂತರ ಅಲ್ಲಿನ ನಡಾವಳಿಗಳನ್ನು ಕ್ರಮಬದ್ಧವಾಗಿ ಪಾಲಿಸಿಕೊಂಡು ಬರಬೇಕು. ಅಲ್ಲದೇ ಸ್ಥಳ ನಂಬಿದ ಭಕ್ತಾದಿಗಳು, ಕುಟುಂಬಸ್ಥರು ಸಮರ್ಪಣಾ ಭಾವದಿಂದ ಸಂಪೂರ್ಣವಾಗಿ ಸಹಕಾರ ನೀಡಿದ್ಧಲ್ಲಿ ಮಾತ್ರ ಆ ಸ್ಥಳ ಅಭಿವೃದ್ಧಿ ಕಾಣಬಹುದು ಎಂದರು. ಗೌರಿಗದ್ದೆ ಅವಧೂತ ವಿನಯ ಗುರೂಜಿ ಮಾತನಾಡಿ, ಕೋಟಿ-ಚೆನ್ನಯ್ಯರು ಸೂರ್ಯ ಹಾಗೂ ನಾಗದೇವರ ಅಂಶವಾಗಿದ್ದು, ವಿಶ್ವದಲ್ಲಿ ಪ್ರಥಮವಾಗಿ ಸಮಾನತೆಯ ಯುದ್ಧ ಸಾರಿ ಯಶಸ್ವಿಯಾದವರು. ಸುಮಾರು 900 ವರ್ಷ ಇತಿಹಾಸವಿರುವ ಹಾಗೂ ಅವಿಭಜಿತ ದ.ಕ. ಜಿಲ್ಲೆಯ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಇಲ್ಲಿನ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕರಾವಳಿ ಕರ್ನಾಟಕದ ಸಂಸ್ಕೃತಿಯನ್ನು ಬಿಂಬಿಸುವ ಅದ್ದೂರಿ ಜಾನಪದ ಉತ್ಸವ ನಡೆಯಿತು. ಶಾಸಕ ಗುರುರಾಜ ಗಂಟಿಹೊಳೆ ಅವರು ಕರಾವಳಿಯಲ್ಲಿ ಸುಗ್ಗಿ ಕೊಯ್ಲಿನ ಬಳಿಕ, ಆಚರಿಸುವ ಹೊಲಿ ಪೂಜೆ, ತಿರಿ ಪೂಜೆ ನೆರವೇರಿಸಿ, ತೆಂಗಿನ ಸಿರಿ ಅರಳಿಸುವ ಮೂಲಕ ಜಾನಪದ ಉತ್ಸವ ಉದ್ಘಾಟಿಸಿದರು. ಅವರುಬಳಿಕ ಮಾತನಾಡಿ, ಸರಕಾರಿ ಕಾಲೇಜಿನಲ್ಲಿ ಸಂಭ್ರಮದಿಂದ ಆಯೋಜಿಸಿರುವ ಜಾನಪದ ಉತ್ಸವ ನಿಜಕ್ಕೂ ಶ್ಲಾಘನೀಯ, ಕಾಲೇಜಿನ ಇತಿಹಾಸದಲ್ಲೇ ಇದೊಂದು ಅಭೂತಪೂರ್ವ ಕಾರ್ಯ ಕ್ರಮ. ಇಲ್ಲಿನ ಪ್ರಾಧ್ಯಾಪಕರು ಮತ್ತು ವಿದ್ಯಾರ್ಥಿಗಳ ಶ್ರಮದಿಂದ ಇಡೀ ಕಾಲೇಜಿಗೆ ಹಬ್ಬದ ಕಳೆ ಬಂದಿದೆ ಎಂದರು. ಕಾಲೇಜಿನ ಗೋಡೆಯು ಜಾನಪದ ಶೈಲಿಯ ವರ್ಲಿ ಕಲೆಯನ್ನು ವೀಕ್ಷಿಸಿ ಚಿತ್ರ ಬಿಡಿಸಿದ ವಿದ್ಯಾರ್ಥಿ ಆದಿತ್ಯ, ತಂಡ, ಪ್ರಾಧ್ಯಾಪಕ ವೃಂದಕ್ಕೆ ಅಭಿನಂದಿಸಲಾಯಿತು. ಪ್ರಾಂಶುಪಾಲ ನಾಗರಾಜ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಎಸ್. ರಾಜು ಪೂಜಾರಿ, ಸಿಡಿಸಿ ಸದಸ್ಯ ಗಿರೀಶ್ ಬೈಂದೂರು, ಸುರಭಿ ಬೈಂದೂರು ಅಧ್ಯಕ್ಷ ಆನಂದ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕೋಪಮಾಡಿಕೊಂಡ ಯುವಕನೋರ್ವ ಬಳ್ಳೂರು ಕಳುವಿನಬಾಗಿಲು ವಾರಾಹಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ತಾಲೂಕಿನ ಬಳ್ಳೂರು ಗ್ರಾಮದ ಸ್ವಸ್ತಿಕ್ (21) ಆತ್ಮಹತ್ಯೆಗೆ ಶರಣಾದ ಯುವಕ. ಸ್ವಸ್ತಿಕ್ 10 ನೇ ತರಗತಿಯವರೆಗೆ ವಿದ್ಯಾಭ್ಯಾಸ ಮಾಡಿ ಮನೆಯಲ್ಲಿಯೇ ಇದ್ದು ಸಣ್ಣ ಪುಟ್ಟ ವಿಚಾರಕ್ಕೆ ಕೋಪ ಮಾಡಿಕೊಳ್ಳುವ ಸ್ವಭಾವದವರಾಗಿದ್ದರು, ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದು ಆತನ ಅಜ್ಜಿ ತಾಯಿಗೆ ಬೊಂಡ ಕೊಟ್ಟು ಬರುವಂತೆ ಹೇಳಿದ್ದಕ್ಕೆ ಕೋಪಗೊಂಡು ಸೈಕಲ್ ತೆಗೆದುಕೊಂಡು ಹೋಗಿದ್ದು ವಾಪಾಸ್ಸು ಮನೆಗೆ ಬಂದಿರುವುದಿಲ್ಲ. ಸ್ವಸ್ತಿಕ್ ಎಲ್ಲಿಯಾದರೂ ಹೋಗಿರಬಹುದು ವಾಪಾಸ್ಸು ಬರಬಹುದು ಎಂದು ಮನೆಯವರು ಸುಮ್ಮನಿದ್ದರು. ಸ್ವಸ್ತಿಕ್ ನ ಮೃತದೇಹ ಬಳ್ಳೂರು ಕಳುವಿನಬಾಗಿಲು ವಾರಾಹಿ ಹೊಳೆಯಲ್ಲಿ ತೇಲುತ್ತಿರುವ ಬಗ್ಗೆ ಸ್ಥಳೀಯರು ಮಾಹಿತಿ ನೀಡಿದಂತೆ ಮನೆಯವರು ಹಾಗೂ ಇತರರು ಬಂದು ನೋಡಿ ಗುರುತಿಸಿದ್ದಾರೆ. ಈ ಬಗ್ಗೆ ಕುಂದಾಪುರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಉಡುಪಿ ನಗರಸಭೆಯ 2023-24 ನೇ ಸಾಲಿನ ಎಸ್.ಎಫ್.ಸಿ ಮುಕ್ತನಿಧಿಯ ಶೇ. 7.25 ರ ಇತರೆ ಹಿಂದುಳಿದ ವರ್ಗಗಳ ಕಲ್ಯಾಣ ಕಾರ್ಯಕ್ರಮದಡಿ ವಿದ್ಯಾರ್ಥಿವೇತನ ಸೌಲಭ್ಯ ಪಡೆಯಲು ಅರ್ಹ ಆಸಕ್ತ ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಪೂರಕ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಲು ಮೇ 20 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಪೌರಾಯುಕ್ತರು, ನಗರಸಭೆ, ಉಡುಪಿ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಮಂಗಳೂರು ವಿಶ್ವವಿದ್ಯಾಲಯ ಮತ್ತು ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಸುಳ್ಯ ಇವುಗಳ ಸಂಯುಕ್ತ ಆಶ್ರಯದಲ್ಲಿ ನಡೆದ ಮಂಗಳೂರು ವಿಶ್ವವಿದ್ಯಾಲಯ ಮಟ್ಟದ ಅಂತರ್ ಕಾಲೇಜು ಪುರುಷರ ಮತ್ತು ಮಹಿಳೆಯರ ಹಗ್ಗ ಜಗ್ಗಾಟ ಸ್ಫರ್ಧೆಯಲ್ಲಿ ಆಳ್ವಾಸ್ ಕಾಲೇಜಿನ ತಂಡವು ಚಾಂಪಿಯನ್ಸ್ ಪಟ್ಟವನ್ನು ಅಲಂಕರಿಸಿತು. ಪುರುಷರ ವಿಭಾಗದಲ್ಲಿ ಆಳ್ವಾಸ್ ತಂಡವು ಸೆಮಿಫೈನಲ್‌ನಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸುಳ್ಯ ತಂಡವನ್ನು ಸೋಲಿಸಿ ಫೈನಲ್‌ಗೆ ಅರ್ಹತೆ ಪಡೆದುಕೊಂಡಿತು. ಫೈನಲ್‌ನಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ತೆಂಕನಿಡಿಯೂರು ತಂಡವನ್ನು ಸೋಲಿಸಿ ಚಾಂಪಿಯನ್ಸ್ ಪಟ್ಟವನ್ನು ಅಲಂಕರಿಸಿತು. ಮಹಿಳಾ ತಂಡವು ಸೆಮಿಫೈನಲ್‌ನಲ್ಲಿ ಡಾ. ಜಿ. ಶಂಕರ್ ಸರ್ಕಾರಿ ಮಹಿಳಾ ಕಾಲೇಜು, ಅಜ್ಜರಕಾಡು ತಂಡವನ್ನು ಪರಾಭವಗೊಳಿಸಿ, ಫೈನಲ್ ನಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ತಂಡವನ್ನು ಸೋಲಿಸಿ ಚಾಂಪಿಯನ್ಸ್ ಪಟ್ಟವನ್ನು ಅಲಂಕರಿಸಿತು. ವಿಜೇತ ತಂಡವನ್ನು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಅಭಿನಂದಿಸಿದ್ದಾರೆ.
