Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಹಟ್ಟಿಅಂಗಡಿಯ ಶ್ರೀ ಸಿದ್ಧಿವಿನಾಯಕ ವಸತಿಶಾಲೆಯಲ್ಲಿ ಮಕ್ಕಳ ದಿನಾಚರಣೆಯನ್ನು ಮತ್ತು ಕನ್ನಡ ರಾಜ್ಯೋತ್ಸವವನ್ನು ಸಡಗರ ಸಂಭ್ರಮದಿಂದ ಆಚರಿಸಲಾಯಿತು. ಕನ್ನಡಾಂಬೆಗೆ ಹಟ್ಟಿಅಂಗಡಿ ಶ್ರೀ ಸಿದ್ಧಿ ಶೈಕ್ಷಣಿಕ ಪ್ರತಿಷ್ಠಾನದ ಕಾರ್ಯದರ್ಶಿಗಳು ಮತ್ತು ಶಾಲೆಯ ಪ್ರಾಂಶುಪಾಲರಾದ ಶರಣ ಕುಮಾರ ಪುಷ್ಪಾರ್ಪಣೆ ಸಲ್ಲಿಸಿ, ಮಾತನಾಡಿ, ಇಂದಿನ ಮಕ್ಕಳೇ ನಾಳೆಯ ಪ್ರಜೆಗಳು. ಭವಿಷ್ಯದ ನಾಯಕರು. ಜಪಾನ್, ರಷ್ಯಾದಂತಹ ರಾಷ್ಟ್ರಗಳಲ್ಲಿ ಮಾತೃಭಾಷೆಯನ್ನು ಬಿಟ್ಟು ಬೇರೆ ಭಾಷೆಯನ್ನು ಜನ ನುಡಿಯದೆ ತಮ್ಮ ಸ್ವಾಭಿಮಾನವನ್ನು ತೋರಿಸಿಕೊಡುತ್ತಿದ್ದಾರೆ. ಕರ್ನಾಟಕದಲ್ಲಿ ನಾವು ಕನ್ನಡ ಮಾತಾಡಲು ಹಿಂಜರಿಯುತ್ತಿದ್ದೇವೆ. ನಾವಿಂದು ಮಕ್ಕಳಿಗೆ ಈ ನೆಲ, ನುಡಿಗಳ ಬಗ್ಗೆ ತಿಳಿಸಲು ಅನುಕೂಲವಾದ ರೀತಿಯಲ್ಲಿ ಕಾರ್ಯಕ್ರಮವನ್ನು ಆಯೋಜಿಸಿರುತ್ತೇವೆ. ಮಕ್ಕಳು ಉದ್ಯೋಗಾದಿಗಳಿಗಾಗಿ ಅನಿವಾರ್ಯವಾಗಿ ಇಂಗ್ಲೀಷ್ ಭಾಷೆಯನ್ನು ಚೆನ್ನಾಗಿ ಅಭ್ಯಾಸ ಮಾಡಬೇಕಾಗಿದ್ದರಿಂದ ನಾವು ಇಂಗ್ಲೀಷ್‌ಗೆ ಒತ್ತು ನೀಡುತ್ತಿದ್ದೇವೆ. ಆದರೂ, ಹುಟ್ಟಿದ ನೆಲದ ನುಡಿಯನ್ನು ಎಂದಿಗೂ ಮರೆಯಬಾರದು. ನಮ್ಮ ನೆಲದ ಸಂಸ್ಕೃತಿಯನ್ನು ಉಳಿಸಿ ಬೆಳೆಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. ಎನ್ನುತ್ತಾ ಕನ್ನಡದ ಸಂಸ್ಕೃತಿಯ ಪರಿಚಯಗೈಯ್ದರು. ಈ ಸಮಯದಲ್ಲಿ ಶಾಲಾ ಉಪಪ್ರಾಂಶುಪಾಲರಾದ ರಾಮ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗ ಹಾಗೂ ಮಹಿಳಾ ಸಬಲೀಕರಣ ಘಟಕದ ಜಂಟಿ ಆಶ್ರಯದಲ್ಲಿ ವಿಸ್ತರಣಾ ಚಟುವಟಿಕೆಯ ಅಂಗವಾಗಿ ಮುಳ್ಳುಗುಡ್ಡೆಯ ಸೌಪರ್ಣಿಕಾ ಗೇರುಬೀಜ ಕಾರ್ಖಾನೆಯಲ್ಲಿ ಮಹಿಳಾ ಕಾರ್ಮಿಕರಿಗಾಗಿ ಮಹಿಳಾ ಆರೋಗ್ಯ ಮತ್ತು ನೈರ್ಮಲ್ಯ ಜಾಗೃತಿ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಕಾರ್ಯಕ್ರಮದಲ್ಲಿ ಕಾಲೇಜಿನ ವಿದ್ಯಾರ್ಥಿಗಳು ಆರೋಗ್ಯ ಮತ್ತು ನೈರ್ಮಲ್ಯದ ಮಹತ್ವವನ್ನು ವಿವರಿಸುವ ಪವರ್‌ಪಾಯಿಂಟ್ ಪ್ರಸ್ತುತಿಯನ್ನು ನೀಡಿದರು. ವೈಯಕ್ತಿಕ ಸ್ವಚ್ಛತೆ, ಕೈತೊಳೆಯುವ ಸರಿಯಾದ ವಿಧಾನ, ಆರೋಗ್ಯಕರ ಆಹಾರ ಪದ್ಧತಿ, ಮುಟ್ಟಿನ ಸಮಯದ ನೈರ್ಮಲ್ಯ ಹಾಗೂ ಕೆಲಸದ ಸ್ಥಳದಲ್ಲಿ ವಹಿಸಬೇಕಾದ ಸುರಕ್ಷತಾ ಕ್ರಮಗಳ ಕುರಿತು ಮಾಹಿತಿ ಹಂಚಿಕೊಂಡರು. ಜೊತೆಗೆ ವಿದ್ಯಾರ್ಥಿಗಳು ಕಿರು ಪ್ರಹಸನದ ಮೂಲಕ ನೈರ್ಮಲ್ಯ ಮತ್ತು ಆರೋಗ್ಯದ ಕುರಿತು ಅರಿವು ಮೂಡಿಸಿದರು. ಈ ಚಟುವಟಿಕೆ ಮಹಿಳಾ ಕಾರ್ಮಿಕರಿಗೆ ದೈನಂದಿನ ಜೀವನದಲ್ಲಿ ಆರೋಗ್ಯಕರ ಅಭ್ಯಾಸಗಳನ್ನು ಅಳವಡಿಸಿಕೊಳ್ಳಲು ಪ್ರೇರಣೆ ನೀಡಿತು. ಕಾಲೇಜಿನ ಪ್ರಾಂಶುಪಾಲ ಡಾ. ಕೆ ಉಮೇಶ್ ಶೆಟ್ಟಿ, ಉಪ ಪ್ರಾಂಶುಪಾಲ ಡಾ. ಚೇತನ್ ಶೆಟ್ಟಿ ಕೋವಾಡಿ,…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಕೋಟೇಶ್ವರದ ಎಂ. ವರದರಾಜ ಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ನೂತನ ಗ್ರೇಡ್‌ – 1 ಪ್ರಾಂಶುಪಾಲರಾಗಿ ಡಾ. ಸುಬ್ರಹ್ಮಣ್ಯ ಎ. ಬಳಸು ಅವರು ನೇಮಕಗೊಂಡಿದ್ದಾರೆ. ಸುಬ್ರಹ್ಮಣ್ಯ ಅವರು ಈ ಹಿಂದೆ ಕೊಟೇಶ್ವರದ ಹಾಗೂ ಕೋಟ ಪಡುಕೆರೆ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸಹಾಯಕ ಪ್ರಾದ್ಯಾಪಕ ಹಾಗೂ ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿದ್ದರು. ‘ಖಜಾನೆ ಹೊಣೆಗಾರಿಕೆ ಮತ್ತು ಆಯವ್ಯಯ ನಿರ್ವಹಣೆ ಮಸೂದೆ – 2003 ನಂತರದಲ್ಲಿ ಕೇಂದ್ರ ಸರಕಾರದ ಖಜಾನೆ ನೀತಿ ಪರಿಪಾಲನೆ: ಒಂದು ಸಮಗ್ರ ಅಧ್ಯಯನ’ ಎಂಬ ಪ್ರಬಂಧಕ್ಕೆ ಮಂಗಳೂರು ವಿಶ್ವವಿದ್ಯಾನಿಲಯ ಪಿಎಚ್‌ಡಿ ಪದವಿ ಪಡೆದಿದ್ದರು. ಸುಬ್ರಹ್ಮಣ್ಯ ಅವರು ಬೈಂದೂರು ಪಡುವರಿಯ ಅಪ್ಪಯ್ಯನ ಮನೆ ದಿ. ವೆಂಕಟರಮಣ ಹಾಗೂ ಲಕ್ಷ್ಮೀ ಅವರ ಪುತ್ರರಾಗಿದ್ದಾರೆ. ಪ್ರಸ್ತುತ ಅವರು ಕಾಳವಾರದಲ್ಲಿ ವಾಸಿಸುತ್ತಿದ್ದಾರೆ. ಇದನ್ನೂ ಓದಿ ► ಪ್ರಾಧ್ಯಾಪಕ ಸುಬ್ರಹ್ಮಣ್ಯ ಎ. ಅವರಿಗೆ ಪಿಎಚ್‌ಡಿ ಪದವಿ – https://kundapraa.com/?p=29082 .

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ. ಕೋಟ: ಬೆಂಗಳೂರಿನ ಬಿಡದಿ ಸಮೀಪ ಸಂಭವಿಸಿದ ಬೈಕ್‌ಗಳ ಮುಖಾಮುಖಿ ಡಿಕ್ಕಿಯಲ್ಲಿ ಕೋಟ ಪಡುಕರೆ ನಿವಾಸಿ, ಹೋಟೆಲ್ ಉದ್ಯಮಿ ವಿಶ್ವನಾಥ ಎಚ್.(55) ಅವರು ಮೃತಪಟ್ಟಿದ್ದಾರೆ. ಮಣೂರು- ಪಡುಕರೆಯ ಜಟ್ಟಿಗೇಶ್ವರ ದೈವಸ್ಥಾನದ ಸಮೀಪದ ನಿವಾಸಿಯಾಗಿದ್ದರು. ಬೆಂಗಳೂರಿನಲ್ಲಿ ಹೋಟೆಲ್ ಉದ್ಯಮ ನಡೆಸುತ್ತಿದ್ದ ಅವರು, ಇತ್ತೀಚೆಗೆ ಬೆಂಗಳೂರಿನ ಬಿಡದಿಯಲ್ಲಿ ಕರಾವಳಿ ಕಿಚನ್ ಹೆಸರಿನ ಹೋಟೆಲ್ ನಡೆಸುತ್ತಿದ್ದರು. ಗುರುವಾರ ರಾತ್ರಿ ಹೋಟೆಲ್‌ನ ದೈನಂದಿನ ವ್ಯವಹಾರ ಮುಗಿಸಿ ಮನೆಗೆ ತೆರಳುತ್ತಿದ್ದ ಸಂದರ್ಭ ಅಪಘಾತ ಸಂಭವಿಸಿತ್ತು. ಅವರು ಚಲಾಯಿಸುತ್ತಿದ್ದ ಬೈಕ್‌ಗೆ ಮತ್ತೊಂದು ಬೈಕ್‌ ಮುಖಾಮುಖಿಯಾಗಿ ಡಿಕ್ಕಿ ಹೊಡೆದ ಪರಿಣಾಮ ವಿಶ್ವನಾಥ್‌ ಅವರು ಗಂಭೀರವಾಗಿ ಗಾಯಗೊಂಡಿದ್ದರು. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ. ಮೃತರು ಪತ್ನಿಹಾಗೂ ಇಬ್ಬರು ಪುತ್ರರನ್ನು ಅಗಲಿದ್ದಾರೆ. ಇದ್ದಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಸಾಂಸ್ಕೃತಿಕ ವಿಶ್ವ ಮನ್ನಣೆ ಪಡೆಯಲು ರಾಜ್ಯದ ಎಲ್ಲಾ ಭಾಗವು ತನ್ನದೇ ಆದ  ಕೊಡುಗೆಯನ್ನು ನೀಡಿದೆ. ಕರಾವಳಿ ಕರ್ನಾಟಕದಲ್ಲಿ ಯಕ್ಷಗಾನವು ಶಾಸ್ರ್ತೀಯ ಶಿಸ್ತು ಮತ್ತು ಜಾನಪದ ಸ್ವಾತಂತ್ರ್ಯದಿಂದ ಜನಮನ್ನಣೆಯನ್ನು ಪಡೆದಿದೆ. ಚೌಕಟ್ಟು ಮೀರಿದರೂ ಸರಿ ತಪ್ಪು ಹೇಳುವ ಕೋರ್ಟು ಸೃಷ್ಟಿಯಾಗಿಲ್ಲ ಎಂದು ಕರ್ನಾಟಕ ಯಕ್ಷಗಾನ ಅಕಾಡೆಮಿ ಮಾಜಿ ಅಧ್ಯಕ್ಷ ಎಂ.ಎಲ್.ಸಾಮಗ ಹೇಳಿದ್ದಾರೆ. ಅವರು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮೈಸೂರು ವಿಭಾಗ ಹಾಗೂ ಉಡುಪಿ ಜಿಲ್ಲೆ ವತಿಯಿಂದ ಕುಂಜಿಬೆಟ್ಟು ಶಾರದಾ ರೆಸಿಡೆನ್ಸಿಯಲ್ ಸ್ಕೂಲಿನ ಸಭಾಂಗಣದಲ್ಲಿ ಬುಧವಾರ ನಡೆದ ಸಾಧಕರೊಂದಿಗೆ ಸಂವಾದದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದರು. ಶಾಸ್ರ್ತೀಯ ಕಲಾವಿದರಿಗೆ ಪಂಚ ತಾರಾ ಆತಿಥ್ಯ, ಯಕ್ಷಗಾನ/ಜನಪದ ಕಲಾವಿದರಿಗೆ ಕಲ್ಯಾಣ ಮಂಟಪದಲ್ಲಿ ಉಳಿದುಕೊಳ್ಳಬಹುದಾದ ವ್ಯವಸ್ಥೆಯ ತಾರತಮ್ಯ ಸಲ್ಲದು. ಯಕ್ಷಗಾನ ಗಂಡಸರಿಗೆ ಸೀಮಿತವಾದ ಕಲೆಯಲ್ಲ, ಎಲ್ಲರಿಗೂ ಸೇರಿದ ಕಲೆ. ಸಾಹಿತ್ಯ ಕಾರ್ಯಕ್ರಮದಲ್ಲಿ ತೊಡಗುವಿಕೆ ಸಂತೋಷ ನೀಡುತ್ತದೆ. ಬದುಕಿನಲ್ಲಿ  ಉತ್ತಮ ಕಲಾವಿದರಾಗಲು ಅನುಭವ ವಿಸ್ತಾರ, ವೀಕ್ಷಣೆಯ ಕುತೂಹಲ ಬಹುಮುಖ್ಯ ಎಂದರು. ತಮ್ಮ ಸುದೀರ್ಘ ಅರವತ್ತು ವರ್ಷದ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಅಂಚೆ ಕಚೇರಿಯ ಬ್ಯಾಂಕ್ ಆದ ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ (IPPB), ಉಡುಪಿ ಶಾಖೆಯು ಜಿಲ್ಲೆಯ ಜನರಿಗೆ ಅಗತ್ಯ ಬ್ಯಾಂಕಿಂಗ್ ಸೇವೆಗಳನ್ನು ಒದಗಿಸಲು ಕಮಿಷನ್ ಆಧಾರಿತ ವೈಯಕ್ತಿಕ ಬಿಸಿನೆಸ್ ಕರೆಸ್ಪಾಂಡೆಂಟ್‌ಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಉಡುಪಿ ಶಾಖೆಯಲ್ಲಿ ಒಟ್ಟು 30 ಹುದ್ದೆಗಳು ಲಭ್ಯವಿದ್ದು, ಜಿಲ್ಲೆಯ ಆಸಕ್ತರು, ನಿವೃತ್ತ ನೌಕರರು, ಸಾಮಾನ್ಯ ಸೇವಾ ಕೇಂದ್ರಗಳ ನಿರ್ವಾಹಕರು ಅಥವಾ ಇತರ ವ್ಯಾಪಾರ ಸಂಸ್ಥೆಗಳು ಮತ್ತು ಉದ್ಯಮಗಳನ್ನು ನಡೆಸುತ್ತಿರುವ 18 ರಿಂದ 70 ವರ್ಷದೊಳಗಿನ, ಎಸ್.ಎಸ್.ಎಲ್.ಸಿ ಉತ್ತೀರ್ಣರಾದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಇದು ಕಮಿಷನ್ ಆಧಾರಿತ ಕೆಲಸವಾಗಿದ್ದು, ನಿಗದಿತ ಮಾಸಿಕ ವೇತನ ಇರುವ ಉದ್ಯೋಗವಲ್ಲ. ಅಭ್ಯರ್ಥಿಗಳು ಒದಗಿಸುವ ಬ್ಯಾಂಕಿಂಗ್ ಸೇವೆಗಳು ಮತ್ತು ನಡೆಸುವ ವಹಿವಾಟುಗಳ ಆಧಾರದ ಮೇಲೆ ಕಮಿಷನ್ ಪಡೆಯಲಿದ್ದಾರೆ. ಅರ್ಜಿ ಸಲ್ಲಿಸಲು ಡಿಸೆಂಬರ್ 5 ಕೊನೆಯ ದಿನವಾಗಿದ್ದು, ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್, ಉಡುಪಿ ಶಾಖೆ ದೂ.ಸಂಖ್ಯೆ: 0820-2522005, ಮೊ.ನಂ: 7899971688…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಗಂಗೊಳ್ಳಿ: ಶ್ರೀ ವೆಂಕಟೇಶ ಕೃಪಾ ಟ್ರೇಡರ್ಸ್ ಇವರು ಹಮ್ಮಿಕೊಂಡಿದ್ದ ದೀಪಾವಳಿ ಧಮಾಕ 2026ರ ಸಮಾರೋಪ ಸಮಾರಂಭವು ಇಲ್ಲಿನ ಶಾರದ ಮಂಟಪದಲ್ಲಿ ಇತ್ತೀಚೆಗೆ ನಡೆಯಿತು. ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ನರೇಂದ್ರ ಎಸ್. ಗಂಗೊಳ್ಳಿ ಮಾತನಾಡಿ, ಇಂದಿನ ಈ ಸ್ಪರ್ಧಾತ್ಮಕ ಯುಗದಲ್ಲಿ ಗ್ರಾಹಕರ ಜೊತೆಗಿನ ಬಾಂಧವ್ಯ ವೃದ್ಧಿ ಬಹಳ ಅಗತ್ಯವಾದದು. ಅದರ ಜೊತೆಯಲ್ಲಿಯೇ ವ್ಯವಹಾರಸ್ಥರು ವೈಯಕ್ತಿಕವಾಗಿ ಉತ್ತಮ ನಡೆ-ನುಡಿಗಳನ್ನು ಅಳವಡಿಸಿಕೊಂಡಾಗ ಅದು ಸಂಸ್ಥೆಗೆ ಹೆಚ್ಚಿನ ಮೌಲ್ಯವನ್ನು ತಂದುಕೊಡುತ್ತದೆ. ಅಂತಹ ಕಾರ್ಯವನ್ನು ವೆಂಕಟೇಶ್ ಕೃಪಾ ಟ್ರೇಡರ್ಸ್ ನವರು ಮಾಡುತ್ತಿದ್ದಾರೆ ಎಂದು ಅಭಿಪ್ರಾಯಪಟ್ಟರು. ಗಂಗೊಳ್ಳಿಯ ಹಿರಿಯ ಕಲಾವಿದರಾದ ಜಿ. ಪಾಂಡುರಂಗ ಮಡಿವಾಳ ಕಾರ್ಯಕ್ರಮಕ್ಕೆ ಶುಭ ಕೋರಿದರು. ಸಾನ್ವಿ ಏಜೇನ್ಸಿಸ್ ಮಾಲಕ ಪ್ರಶಾಂತ್ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. ಭಾಸ್ಕರ ಶೆಣೈ ಮತ್ತು ಜಯಶ್ರೀ ಶೆಣೈ ದಂಪತಿ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಗಂಗೊಳ್ಳಿಯಲ್ಲಿ ತುರ್ತು ಚಿಕಿತ್ಸಾ ವಾಹನಗಳ ಚಾಲಕರುಗಳಾದ ಸಚಿನ್ ಖಾರ್ವಿ ಮತ್ತು  ಮಹಮ್ಮದ್ ಹಬೀಬಿ ತಾಶಮ್ ರನ್ನು ಸನ್ಮಾನಿಸಲಾಯಿತು. ವಿವಿಧ ಕ್ರೀಡೆಗಳಲ್ಲಿ  ಸಾಧನೆಗೈದ ವಿದ್ಯಾರ್ಥಿಗಳನ್ನು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಶ್ರೀ ವೆಂಕಟರಮಣ ಪದವಿಪೂರ್ವ ಕಾಲೇಜಿನ ವಾರ್ಷಿಕ ಕ್ರೀಡಾಕೂಟವು ಶುಕ್ರವಾರ ಕಾಲೇಜಿನ ಕ್ರೀಡಾಂಗಣದಲ್ಲಿ ಅತ್ಯಂತ ಸಂಭ್ರಮ ಹಾಗೂ ಸಡಗರದಿಂದ ನೆರವೇರಿತು. ಕ್ರೀಡಾ ಜ್ಯೋತಿ ಬೆಳಗಿಸುವುದರೊಂದಿಗೆ ಕಾರ್ಯಕ್ರಮವನ್ನು ಉದ್ಘಾಟಿಸಿದ ಆಲೂರು ಹಿರಿಯ ಪ್ರಾಥಮಿಕ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕರಾದ ವೀರೇಂದ್ರ ಜೋಗಿ ಅವರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ, ವಿದ್ಯಾರ್ಥಿಗಳು ಕ್ರೀಡಾ ಕ್ಷೇತ್ರದಲ್ಲಿ ನಿರಂತರ ಪರಿಶ್ರಮ ಮತ್ತು ಸಾಧನೆಯ ಮನೋಭಾವದೊಂದಿಗೆ ಮುನ್ನಡೆಯಬೇಕು. ಭವಿಷ್ಯದಲ್ಲಿ ಒಲಿಂಪಿಕ್ಸ್‌ನಂತಹ ಅಂತಾರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸಿ ದೇಶಕ್ಕೆ ಕೀರ್ತಿ ತರುವ ಅವಕಾಶ ವಿದ್ಯಾರ್ಥಿಗಳಿಗೆ ದೊರೆಯಲಿ ಎಂದು ಹಾರೈಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ವೆಂಕಟರಮಣ ಎಜುಕೇಶನಲ್ & ಕಲ್ಚರಲ್ ಟ್ರಸ್ಟ್‌ನ ಕಾರ್ಯದರ್ಶಿಗಳಾದ ಕೆ. ರಾಧಾಕೃಷ್ಣ ಶೆಣೈ ಅವರು ವಹಿಸಿ, ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಕ್ರೀಡೆಯು ಕೇವಲ ಗೆಲುವು-ಸೋಲಿನ ಸ್ಪರ್ಧೆಯಲ್ಲ; ಅದು ಜೀವನದಲ್ಲಿ ಎದುರಾಗುವ ಸವಾಲುಗಳನ್ನು ಧೈರ್ಯದಿಂದ ಎದುರಿಸುವ ಮನೋಬಲವನ್ನು ಬೆಳೆಸುವ ಪ್ರಮುಖ ವೇದಿಕೆಯಾಗಿದೆ ಎಂದು ಪ್ರೇರಣಾದಾಯಕ ನುಡಿಗಳನ್ನಾಡಿದರು. ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಸಂದೀಪ್ ಗಾಣಿಗ, ಉಪಪ್ರಾಂಶುಪಾಲರಾದ ಸುಜೇಯ್…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಗಂಗೊಳ್ಳಿ: ವಿದ್ಯಾರ್ಥಿಗಳಲ್ಲಿ ಅಡಗಿರುವ ಸುಪ್ತವಾಗಿ ಗುಪ್ತವಾಗಿ ಪ್ರತಿಭೆಯನ್ನು ಹೊರತರುವುದೇ ಶಿಕ್ಷಣದ ಮೂಲ ಉದ್ದೇಶ ಎಂದು ಗಂಗೊಳ್ಳಿ ಕ್ಲಸ್ಟರ್ ಸಿಆರ್‌ಪಿ ಮಹೇಶ್ ವಕ್ವಾಡಿ ಹೇಳಿದರು. ಅವರು ಗಂಗೊಳ್ಳಿಯ ಜಿ.ಎಸ್.ವಿ.ಎಸ್. ಅಸೋಸಿಯೇಶನ್ ಪ್ರಾಯೋಜಿತ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ವತಿಯಿಂದ ಕಾಲೇಜಿನ ನೆಕ್ಸೋರ ಎಸ್.ವಿ. ಸೈನ್ಸ್ ಕ್ಲಬ್ ಸಹಯೋಗದೊಂದಿಗೆ ಹೈಸ್ಕೂಲು ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾಗಿದ್ದ ಗಂಗೊಳ್ಳಿ ಕ್ಲಸ್ಟರ್ ಮಟ್ಟದ ಇಂಟರ್ ಸ್ಕೂಲ್ ಸೈನ್ಸ್ ಕಾಂಪಿಟೇಶನ್ ’ಇಗ್ನೋವೇಟ್’ ನ್ನು ಶುಕ್ರವಾರ ಉದ್ಘಾಟಿಸಿ ಮಾತನಾಡಿದರು. ತಂತ್ರಜ್ಞಾನ, ಕೃತಕ ಬುದ್ಧಿಮತ್ತೆಯ ಈ ಯುಗದಲ್ಲಿ ತಮ್ಮ ಬದುಕನ್ನು ರೂಪಿಸಿಕೊಳ್ಳುವ ಯುವ ಪೀಳಿಗೆ ಉತ್ತಮ ರೀತಿಯಲ್ಲಿ ಆವಿಷ್ಕಾರದ ರೀತಿಯಲ್ಲಿ ಹೊಸ ಹೊಸ ಯೋಜನೆ, ಚಿಂತನೆ ಮಾಡಿಕೊಂಡಾಗ, ಸಂಶೋಧನಾ ಪ್ರವೃತ್ತಿ ಬಂದಾಗ, ಅವರಲ್ಲಿರುವ ಜ್ಞಾನ ಪ್ರಕಟವಾದಾಗ ಜಗತ್ತಿಗೆ ಹೊಸ ನಾವಿನ್ಯತೆಯನ್ನು, ಕಲ್ಪನೆಯನ್ನು ಕಟ್ಟಿಕೊಳ್ಳಬಹುದು. ಹೊಸ ಹೊಸ ಕಾರ್ಯಕ್ರಮದ ಮುಖೇನ ಆವಿಷ್ಕಾರದ ತಂತ್ರಜ್ಞಾನದ ಯೋಚನೆಯನ್ನು ಬೆಳೆಸಿಕೊಳ್ಳಬೇಕು. ಸಂಸ್ಕಾರಯುತ ವಿದ್ಯಾರ್ಥಿಗಳ ಸಮಾಜವನ್ನು ನಿರ್ಮಾಣ ಮಾಡುವಲ್ಲಿ ಗಂಗೊಳ್ಳಿ ಸರಸ್ವತಿ ವಿದ್ಯಾಲಯ ಶ್ರಮಿಸುತ್ತಿದೆ ಎಂದರು.…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕದ ಸ್ವಯಂಸೇವಕ ಕಿರಣ್ ಕುಮಾರ್ ಎನ್. ಅವರು ಮಂಗಳೂರು ವಿಶ್ವವಿದ್ಯಾನಿಲಯವನ್ನು ಪ್ರತಿನಿಧಿಸಿ 2023-24ನೇ ಸಾಲಿನ ಕರ್ನಾಟಕ ರಾಜ್ಯದ ಅತ್ಯುತ್ತಮ ಎನ್.ಎಸ್.ಎಸ್. ಸ್ವಯಂಸೇವಕ ಪ್ರಶಸ್ತಿಯನ್ನು ಪಡೆದಿದ್ದಾರೆ. ಹಿಂದೆ ಗಣರಾಜ್ಯೋತ್ಸವ ಪಥಸಂಚಲನದಲ್ಲಿ ಭಾಗವಹಿಸಿ ಅತ್ಯುತ್ತಮ ಸಾಂಸ್ಕೃತಿಕ ಪ್ರತಿಭೆ ಎಂಬ ಮನ್ನಣೆ ಪಡೆದ ಇವರು ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ವಳಗೆರೆ ಗ್ರಾಮದ ಹಿನ್ಸೋಡಿಯ ನಾಗರಾಜ ಮತ್ತು ಲಕ್ಷ್ಮೀ ದಂಪತಿಯ ಪುತ್ರ. ಇವರಿಗೆ ಕಾಲೇಜಿನ ಅಧ್ಯಕ್ಷ ಬಿ.ಎಮ್ . ಸುಕುಮಾರ್ ಶೆಟ್ಟಿ, ಪ್ರಾಂಶುಪಾಲ ಡಾ. ಕೆ. ಉಮೇಶ್ ಶೆಟ್ಟಿ, ಮಾರ್ಗದರ್ಶನ ನೀಡಿದ ಎನ್.ಎಸ್.ಎಸ್ ಕಾರ್ಯಕ್ರಮಾಧಿಕಾರಿಗಳಾದ ಡಾ. ಚೇತನ್ ಶೆಟ್ಟಿ ಕೋವಾಡಿ ಹಾಗೂ ದೀಪಾ ಪೂಜಾರಿ ಅಭಿನಂದನೆ ಸಲ್ಲಿಸಿದ್ದಾರೆ.

Read More