ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶಾಲಾ ಶಿಕ್ಷಣ ಇಲಾಖೆ ( ಪದವಿ ಪೂರ್ವ ) ವಿದ್ಯೋದಯ ಪದವಿ ಪೂರ್ವ ಕಾಲೇಜು ಉಡುಪಿ ಇವರ ಆಶ್ರಯದಲ್ಲಿ ನಡೆದ ಉಡುಪಿ ಜಿಲ್ಲಾಮಟ್ಟದ ಬಾಲಕ- ಬಾಲಕಿಯರ ಚೆಸ್ ಪಂದ್ಯಾಟದಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಶ್ರಾವ್ಯ ಎ.ಪಿ. ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿನಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ – ಬೋಧಕೇತರ ಸಿಬ್ಬಂದಿ ಅಭಿನಂದನೆ ಸಲ್ಲಿಸಿದ್ದಾರೆ.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ರಾಜ್ಯದ ಪ್ರತಿಷ್ಠಿತ ಕೋಟ ಸಹಕಾರಿ ವ್ಯವಸಾಯಕ ಸಂಘಕ್ಕೆ ಅದರ ಉತ್ಕ್ರಷ್ಟ ಸಾಧನೆಗಾಗಿ ಮತ್ತೊಮ್ಮೆ ರಾಜ್ಯ ಅಪೆಕ್ಸ್ ಬ್ಯಾಂಕ್ ಪ್ರಶಸ್ತಿ ಒಲಿದು ಬಂದಿದ್ದು ಕಳೆದ ಆರ್ಥಿಕ ವರ್ಷದ ಪ್ರಗತಿ, ಸಾಲ ನೀಡಿಕೆ, ವಸೂಲಾತಿ ಮತ್ತು ಇತರ ಆರ್ಥಿಕ ಚಟುವಟಿಕೆಗಳನ್ನು ಗಮನಿಸಿ ಈ ಪ್ರಶಸ್ತಿ ನೀಡಲಾಗಿದೆ. ಶನಿವಾರ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ಮಹಾಸಭೆಯಲ್ಲಿ ಸಂಘದ ಅಧ್ಯಕ್ಷ ಡಾ. ಕೃಷ್ಣ ಕಾಂಚನ್ ಮತ್ತು ಮುಖ್ಯ ಕಾರ್ಯ ನಿರ್ವಹಣಾ ಅಧಿಕಾರಿ ಶರತ್ ಕುಮಾರ್ ಶೆಟ್ಟಿ ಪ್ರಶಸ್ತಿ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷ ರವೀಂದ್ರ ಕಾಮತ್ ಮತ್ತು ಸಂಘದ ಮಾಜಿ ಅಧ್ಯಕ್ಷ ತಿಮ್ಮ ಪೂಜಾರಿ ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರು ಗ್ರಾಮೀಣ ಭಾಗದ ಮಕ್ಕಳ ಶಿಕ್ಷಣಕ್ಕೆ ವಿಶೇಷ ಆದ್ಯತೆ ನೀಡುತ್ತಾ, ಹಳ್ಳಿಯ ಶಾಲೆಗಳಲ್ಲಿ ಶಿಕ್ಷಕರ ಕೊರತೆಯನ್ನು ನೀಗಿಸುವ ಮಹತ್ವದ ಉದ್ದೇಶದಿಂದ ಜ್ಞಾನ ದೀಪ ಶಿಕ್ಷಕರ ನೇಮಕ ಮಾಡಿಕೊಳ್ಳುತ್ತಿದ್ದಾರೆ. ಶಿಕ್ಷಕರ ಕೊರತೆ ಇರುವ ಶಾಲೆಗಳಿಗೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಪ್ರತಿವರ್ಷ ಶಿಕ್ಷಕರನ್ನ ನೀಡುತ್ತಿರುವುದು ಅನೇಕ ಶಾಲೆಗಳಿಗೆ ತುಂಬಾ ಸಹಾಯಕವಾಗಿದೆ ಎಂದು ಬೈಂದೂರು ಶಾಸಕ ಗುರುರಾಜ್ ಶೆಟ್ಟಿ ಗಂಟಿಹೊಳೆ ಹೇಳಿದರು. ಅವರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಬೈಂದೂರು ವತಿಯಿಂದ ಬೈಂದೂರು ತಾಲೂಕಿಗೆ ಆಯ್ಕೆಗೊಂಡ ಶಾಲೆಗಳ ಜ್ಞಾನ ದೀಪ ಶಿಕ್ಷಕರ ಮಂಜೂರಾತಿ ಪತ್ರ ವಿತರಣಾ ಕಾರ್ಯಕ್ರಮವನ್ನು ಶನಿವಾರ ಉದ್ಘಾಟಿಸಿ ಮಾತನಾಡಿದರು. ಬೈಂದೂರು ಕ್ಷೇತ್ರ ಯೋಜನಾಧಿಕಾರಿ ನಾಗೇಶ್ ನಾಯ್ಕ್ ಮಾತನಾಡಿದರು. ಕರಾವಳಿ ಪ್ರಾದೇಶಿಕ ವಿಭಾಗದ ಪ್ರಾದೇಶಿಕ ನಿರ್ದೇಶಕ ಆನಂದ್ ಸುವರ್ಣ, ಜಿಲ್ಲಾ ಜನಜಾಗೃತಿ ವೇದಿಕೆ ಸದಸ್ಯ ಸುಧಾಕರ್ ಆಚಾರ್ಯ, ಪ್ರಗತಿ ಬಂದು ಸ್ವಸಾಯ ಸಂಘಗಳ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ವಿದ್ಯಾರ್ಥಿನಿಯರು ಉತ್ತಮ ಶಿಕ್ಷಣದ ಜೊತೆಗೆ ತಮ್ಮ ದೈಹಿಕ ಮತ್ತು ಮಾನಸಿಕ ಆರೋಗ್ಯದ ಕಡೆಗೆ ವಿಶೇಷ ಕಾಳಜಿ ವಹಿಸುವುದು ಅತ್ಯಗತ್ಯ. ಮುಖ್ಯವಾಗಿ ಹಾಸ್ಟೆಲ್‌ನಲ್ಲಿ ವಾಸಿಸುವ ವಿದ್ಯಾರ್ಥಿನಿಯರು ವೈಯಕ್ತಿಕ ಸ್ವಚ್ಛತೆಗೆ ಮೊದಲ ಆದ್ಯತೆ ನೀಡಬೇಕು ಎಂದು ಕರ್ನಾಟಕ ಸರ್ಕಾರದ ಎನ್.ಆರ್.ಸಿ ವೈದ್ಯಕೀಯ ಅಧಿಕಾರಿ ಡಾ. ಧನ್ಯಾ ಎನ್. ಹೆಗ್ಡೆ ತಿಳಿಸಿದರು. ಅವರು ಇಲ್ಲಿನ ಸುಜ್ಞಾನ ಪಿಯು ಕಾಲೇಜಿನಲ್ಲಿ ವಿದ್ಯಾರ್ಥಿನಿಯರಿಗಾಗಿ ಆಯೋಜಿಸಲಾಗಿದ್ದ ಆರೋಗ್ಯ, ವೈಯಕ್ತಿಕ ಸ್ವಚ್ಛತೆ ಹಾಗೂ ಋತುಚಕ್ರದ ವೈಜ್ಞಾನಿಕ ನಿರ್ವಹಣಾ ಜಾಗೃತಿ ಕಾರ್ಯಕ್ರಮದಲ್ಲಿ ಅವರು ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು. “ದೇಹವನ್ನು ದೇಗುಲದಂತೆ ಪವಿತ್ರವಾಗಿಟ್ಟುಕೊಳ್ಳಬೇಕು. ಉತ್ತಮ ದೈಹಿಕ ಮತ್ತು ಮಾನಸಿಕ ಆರೋಗ್ಯವೇ ನಿಜವಾದ ಆಸ್ತಿ. ಸಮಯಕ್ಕೆ ಸರಿಯಾದ ನಿದ್ರೆ, ಪೌಷ್ಟಿಕ ಆಹಾರ ಹಾಗೂ ನಿಯಮಿತ ನೀರು ಸೇವನೆ ನಿಮ್ಮ ಮಾನಸಿಕ ಮತ್ತು ದೈಹಿಕ ಸಾಮರ್ಥ್ಯವನ್ನು ಹೆಚ್ಚಿಸುತ್ತದೆ. ಮುಖ್ಯವಾಗಿ ಹಾಸ್ಟೆಲ್‌ನಲ್ಲಿ ನೆಲೆಸಿರುವ ವಿದ್ಯಾರ್ಥಿನಿಯರು ವೈಯಕ್ತಿಕ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಬೇಕು. ಋತುಚಕ್ರದ ಸಮಯದಲ್ಲಿ ನಿಯಮಿತವಾಗಿ ಸ್ಯಾನಿಟರಿ ಪ್ಯಾಡ್‌ಗಳನ್ನು ಬದಲಾಯಿಸುವುದು ಮತ್ತು ಒಳ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಹಾಗೂ ಶಾರದಾ ಪದವಿಪೂರ್ವ ಕಾಲೇಜು ಉಡುಪಿ ಇವರ ಜಂಟಿ ಆಶ್ರಯದಲ್ಲಿ ಆಯೋಜಿಸಲಾಗಿದ್ದ 2026-2027ನೇ ಸಾಲಿನ ಉಡುಪಿ ಜಿಲ್ಲಾ ಮಟ್ಟದ ಹುಡುಗಿಯರ ಟೇಬಲ್ ಟೆನ್ನಿಸ್ ಸ್ಪರ್ಧೆಯಲ್ಲಿ ಸುಜ್ಞಾನ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿಯರು ಅತ್ಯುತ್ತಮ ಸಾಧನೆಗೈದಿದ್ದಾರೆ. ಕಾಲೇಜಿನ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಮಯೋಲಾ ಕಾರ್ವಲ್ಲೋ ಶ್ರೇಷ್ಠ ಸಾಧನೆಯ ಮೂಲಕ ದ್ವಿತೀಯ ಸ್ಥಾನ ಪಡೆದು ರಾಜ್ಯ ಮಟ್ಟದ ಟೇಬಲ್ ಟೆನ್ನಿಸ್ ಪಂದ್ಯಾಟಕ್ಕೆ ಆಯ್ಕೆಯಾಗಿದ್ದಾರೆ. ಅವರು ಮೌರಿಸ್ ಕಾರ್ವಲ್ಲೋ ಹಾಗೂ ಮಾಯಾ ಎಂ. ಕಾರ್ವಲ್ಲೋ ದಂಪತಿಯ ಪುತ್ರಿ. ಹಾಗೇ, ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿನಿಯರಾದ ಶ್ರಾವ್ಯ ಶೆಟ್ಟಿ ಮತ್ತು ಅನುಷ್ಕಾ ಎನ್. ಕಾಲೇಜಿನ ಟೇಬಲ್ ಟೆನ್ನಿಸ್ ತಂಡದಲ್ಲಿ ಪ್ರತಿನಿಧಿಸಿ ದ್ವಿತೀಯ ಪ್ರಶಸ್ತಿ ಪಡೆದು ಸಂಸ್ಥೆಗೆ ಹೆಮ್ಮೆ ತಂದಿರುತ್ತಾರೆ. ಟೇಬಲ್ ಟೆನ್ನಿಸ್ ಪಂದ್ಯಾಟದಲ್ಲಿ ಜಿಲ್ಲಾ ಮಟ್ಟದಲ್ಲಿ ಸಾಧನೆಗೈದು ಕಾಲೇಜಿಗೆ ಕೀರ್ತಿ ತಂದ ವಿದ್ಯಾರ್ಥಿನಿಯರನ್ನು ಸುಜ್ಞಾನ ಎಜುಕೇಶನಲ್ ಟ್ರಸ್ಟ್‌ನ ಅಧ್ಯಕ್ಷರಾದ ಡಾ. ರಮೇಶ್ ಶೆಟ್ಟಿ, ಕಾರ್ಯದರ್ಶಿ ಪ್ರತಾಪ್ ಚಂದ್ರ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಸಂಗೀತದಲ್ಲಿ ಶ್ರುತಿ ತಪ್ಪಿದರೆ ಸುಮಧುರವಾದ ಗಾಯನವೂ ಅಪಸ್ವರವಾಗುತ್ತದೆ. ಅದೇ ರೀತಿ ವಿದ್ಯಾರ್ಥಿ ಜೀವನಕ್ಕೂ ಸರಿಯಾದ ಶ್ರುತಿ, ಲಯ ಮತ್ತು ದಿಕ್ಕು ಅಗತ್ಯ. ಜ್ಞಾನ, ಶಿಸ್ತು, ಮೌಲ್ಯ ಮತ್ತು ಗುರಿಯೊಂದಿಗೆ ವಿದ್ಯಾರ್ಥಿಗಳ ಬದುಕನ್ನು ಶ್ರುತಿಬದ್ಧಗೊಳಿಸುವುದೇ ನಿಜವಾದ ಶಿಕ್ಷಣ. ಈ ಮಹತ್ತರ ಕಾರ್ಯದಲ್ಲಿ ಶಿಕ್ಷಣ ಸಂಸ್ಥೆಯೊಂದಿಗೆ ಪಾಲಕರ ಪಾತ್ರವೂ ಅತ್ಯಂತ ಅಗತ್ಯ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವ ಹೇಳಿದರು. ಅವರು ಶನಿವಾರ ಆಳ್ವಾಸ್‌ನ ಕೃಷಿಸಿರಿ ವೇದಿಕೆಯಲ್ಲಿ ನಡೆದ ಆಳ್ವಾಸ್ ಪದವಿಪೂರ್ವ ಕಾಲೇಜಿನ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳ ಪಾಲಕ–ಶಿಕ್ಷಕ ಸಮಾವೇಷದಲ್ಲಿ ಮಾತನಾಡಿದರು. ಪದವಿಪೂರ್ವ ಶಿಕ್ಷಣದ ಹಂತವು ವಿದ್ಯಾರ್ಥಿ ಜೀವನದಲ್ಲಿ ಅತ್ಯಂತ ನಿರ್ಣಾಯಕ ಘಟ್ಟ. ಈ ಅವಧಿಯಲ್ಲಿ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಶಿಕ್ಷಣ ಹಾಗೂ ವೃತ್ತಿಜೀವನಕ್ಕೆ ಭದ್ರವಾದ ಅಡಿಪಾಯ ಹಾಕಿಕೊಳ್ಳಬೇಕು. ಇದಕ್ಕಾಗಿ ವಿದ್ಯಾರ್ಥಿಗಳು ಮಾತ್ರವಲ್ಲದೆ, ಪಾಲಕರು ಕೂಡ ಶಿಕ್ಷಣ ವ್ಯವಸ್ಥೆಯನ್ನು ಸರಿಯಾಗಿ ಅರ್ಥಮಾಡಿಕೊಂಡು ತಮ್ಮ ಜವಾಬ್ದಾರಿಯನ್ನು ಸಮರ್ಥವಾಗಿ ನಿರ್ವಹಿಸಬೇಕು ಎಂದರು. ವಿದ್ಯಾರ್ಥಿ–ಶಿಕ್ಷಕ–ಪಾಲಕ ಎಂಬ ಮೂರು ಶಕ್ತಿಗಳು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕಾಲೇಜಿನಲ್ಲಿ ವಿದ್ಯಾರ್ಥಿಗಳು ಸಮಯ ಮತ್ತು ಶಿಸ್ತನ್ನು ಪಾಲನೆ ಮಾಡಬೇಕು. ಕಾಲೇಜಿನಲ್ಲಿ ನಡೆದ ದೈನಂದಿನ ಪಾಠ ಪ್ರವಚನಗಳ ಬಗ್ಗೆ ಪೋಷಕರು ಮಕ್ಕಳಿಂದ ಮಾಹಿತಿ ಪಡೆದುಕೊಳ್ಳುತ್ತಿರಬೇಕು. ಕಡಿಮೆ ಅಂಕ ಪಡೆದ ಮಕ್ಕಳನ್ನು ಕಡೆಗಣಿಸದೆ ಹೆಚ್ಚು ಅಂಕಗಳಿಸುವ ನಿಟ್ಟಿನಲ್ಲಿ ಪ್ರೋತ್ಸಾಹ ನೀಡಬೇಕು. ಕ್ರೀಡೆ ಹಾಗೂ ಪಾಠೇತರ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳು ತೊಡಗಿಸಿಕೊಳ್ಳಲು ಉತ್ತೇಜನ ನೀಡಬೇಕು. ಜಂಕ್ ಫುಡ್ ಮತ್ತು ಮೊಬೈಲ್ ಬಳಕೆಯನ್ನು ಆದಷ್ಟು ಕಡಿಮೆ ಮಾಡಬೇಕು ಎಂದು ಗಂಗೊಳ್ಳಿಯ ಎಸ್.ವಿ. ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲೆ ಕವಿತಾ ಎಂ.ಸಿ. ಹೇಳಿದರು. ಅವರು ಎಸ್.ವಿ. ಪದವಿಪೂರ್ವ ಕಾಲೇಜಿನ ಸಭಾಂಗಣದಲ್ಲಿ ಶನಿವಾರ ಜರಗಿದ ಕಾಲೇಜಿನ ಪದವಿ ಪೂರ್ವ ವಿಭಾಗದ ವಿದ್ಯಾರ್ಥಿಗಳ ಪೋಷಕರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕಾಲೇಜಿನ ಸಂಸ್ಕೃತ ಉಪನ್ಯಾಸಕ ವೆಂಕಟೇಶಮೂರ್ತಿ ಕಾಲೇಜಿನ ಶಿಸ್ತು ಮತ್ತು ನಿಯಮಗಳ ಹಾಗೂ ಪರೀಕ್ಷಾ ಪದ್ಧತಿಗಳ ಬಗ್ಗೆ ಮಾಹಿತಿ ನೀಡಿದರು. ಉಪನ್ಯಾಸಕಿ ಪ್ರಫುಲ್ಲಾ, ವಿದ್ಯಾರ್ಥಿಗಳ ಪೋಷಕರು, ಉಪನ್ಯಾಸಕರು ಉಪಸ್ಥಿತರಿದ್ದರು. ಅರ್ಥಶಾಸ್ತ್ರ ಉಪನ್ಯಾಸಕಿ ಸುಗುಣ ಆರ್.ಕೆ. ಸ್ವಾಗತಿಸಿ ಕಾರ್ಯಕ್ರಮ ನಿರ್ವಹಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಕಲಾವಿದರ ವಿವರಗಳನ್ನು ಕ್ರೋಢಿಕರಿಸುವ ದೃಷ್ಟಿಯಿಂದ ಜಿಲ್ಲೆಯಲ್ಲಿನ ಕಲಾವಿದರ, ಕಲಾತಂಡಗಳ ಪಟ್ಟಿಯನ್ನು ತಯಾರಿಸಿ ಅವರಿಗೆ ಸೂಕ್ತ ಕಾರ್ಯಕ್ರಮಗಳನ್ನು ನೀಡಲು ಹಾಗೂ ನೈಜ ಕಲಾವಿದರ ಪಟ್ಟಿಯನ್ನು ತಯಾರಿಸಿ ಗುರುತಿನ ಚೀಟಿ ನೀಡಲು ಅರ್ಹ ಕಲಾವಿದರಿಂದ ಅರ್ಜಿ ಆಹ್ವಾನಿಸಲಾಗಿದೆ. ಕಲಾವಿದರು, ಕಲಾತಂಡದವರು ಹಾಗೂ ಸಾಹಿತಿಗಳು ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಛೇರಿಯಿಂದ ನಿಗಧಿತ ಅರ್ಜಿ ನಮೂನೆಯನ್ನು ಪಡೆದು, ಸ್ವ-ವಿವರದ ಮಾಹಿತಿಯೊಂದಿಗೆ ತಮ್ಮ ಆಧಾರ್ ಗುರುತಿನ ಚೀಟಿ, ಪಡಿತರ ಚೀಟಿ, ಚುನಾವಣಾ ಗುರುತಿನ ಚೀಟಿ, ಪ್ರತಿಷ್ಠಿತ ಸಂಘ ಸಂಸ್ಥೆಗಳಿಂದ ಪಡೆದ ಪ್ರಶಸ್ತಿ ಪುರಸ್ಕಾರಗಳ ವಿವರ, ಪ್ರಮುಖ ಪ್ರದರ್ಶನಗಳ ವಿವರ, ಶಿಲ್ಪಾ ಚಿತ್ರಕಲೆಗಳ ಕಲಾ ಪ್ರದರ್ಶನಗಳ ಛಾಯಾಚಿತ್ರಗಳನ್ನು ಲಗತ್ತಿಸಿ, ಭರ್ತಿ ಮಾಡಿದ ಅರ್ಜಿಗಳನ್ನು ಸೆಪ್ಟಂಬರ್ 30ರ ಒಳಗಾಗಿ ಸಹಾಯಕ ನಿರ್ದೇಶಕರ ಕಛೇರಿ, ಡಾ. ಶಿವರಾಮ ಕಾರಂತ ಕಲಾಗ್ರಾಮ, ಪ್ರಗತಿನಗರ, ಅಲೆವೂರು ಗ್ರಾಮ, ಮಣಿಪಾಲ ಅಂಚೆ, ಉಡುಪಿ ಜಿಲ್ಲೆ ಈ ವಿಳಾಸಕ್ಕೆ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂ.ಸಂಖ್ಯೆ: 0820-2986168 ಅನ್ನು ಸಂಪರ್ಕಿಸುವಂತೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಪ್ರತಿವರ್ಷ ಕೊಡಮಾಡುವ ಅತ್ಯತ್ತಮ ಹಾಲು ಉತ್ಪಾದಕರ ಸಂಘ ಪ್ರಶಸ್ತಿಗೆ ಇಲ್ಲಿನ ಸಾಸ್ತಾನದ ಪಾಂಡೇಶ್ವರ ಹಾಲು ಉತ್ಪಾದಕರ ಸಹಕಾರ ಸಂಘವನ್ನು ಆಯ್ಕೆಗೊಳಿಸಿ ಶನಿವಾರ ಪ್ರಶಸ್ತಿಯನ್ನು ಪ್ರದಾನಿಸಿದರು. ಮಂಗಳೂರಿನ ದಕ್ಷಿಣಕನ್ನಡ ಕೇಂದ್ರ ಸಹಕಾರಿ ಬ್ಯಾಂಕ್ ಸಭಾಂಗಣದಲ್ಲಿ ಸಂಘದ ಅಧ್ಯಕೆ ವೆಲೇರಿಯನ್ ಡಿಸೋಜ ಹಾಗೂ ಮುಖ್ಯಕಾರ್ಯನಿರ್ವಹಣಾಧಿಕಾರಿ ಶ್ಯಾಮಲ ಪಾಂಡೇಶ್ವರ ಅವರಿಗೆ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್ ರಾಜೇಂದ್ರ ಕುಮಾರ್ ಹಾಗೂ ಐಕಳದ ಬಾವ ಡಾ. ದೇವಿಪ್ರಸಾದ್ ಶೆಟ್ಟಿ ಪ್ರಶಸ್ತಿ ಪತ್ರ ಮತ್ತು ಫಲಕವನ್ನು ಹಸ್ತಾಂತರಿಸಿದರು. ಸಂಘದ ಸಿಬ್ಬಂದಿ ಸುಜಾತ ವೆಂಕಟೇಶ್ ಇದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಶಾರದಾ ಪದವಿ ಪೂರ್ವ ಕಾಲೇಜು ಕುಂಜಿಬೆಟ್ಟು ಇವರ ಆಶ್ರಯದಲ್ಲಿ ನಡೆದ ಉಡುಪಿ ಜಿಲ್ಲಾಮಟ್ಟದ ಬಾಲಕ- ಬಾಲಕಿಯರ ಟೇಬಲ್ ಟೆನ್ನಿಸ್ ಪಂದ್ಯಾಟದಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಾದ ಶ್ರಾವ್ಯ ಎ.ಪಿ. ಮತ್ತು ಅಶ್ಲೀನ್ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿಗಳಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ – ಬೋಧಕೇತರ ಸಿಬ್ಬಂದಿ ಅಭಿನಂದನೆ ಸಲ್ಲಿಸಿದ್ದಾರೆ.
