Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಮೂಡುಬಿದಿರೆ: ಸಂಗೀತದಲ್ಲಿ ಶ್ರುತಿ ತಪ್ಪಿದರೆ ಸುಮಧುರವಾದ ಗಾಯನವೂ ಅಪಸ್ವರವಾಗುತ್ತದೆ. ಅದೇ ರೀತಿ ವಿದ್ಯಾರ್ಥಿ ಜೀವನಕ್ಕೂ ಸರಿಯಾದ ಶ್ರುತಿ, ಲಯ ಮತ್ತು ದಿಕ್ಕು ಅಗತ್ಯ. ಜ್ಞಾನ, ಶಿಸ್ತು, ಮೌಲ್ಯ ಮತ್ತು ಗುರಿಯೊಂದಿಗೆ ವಿದ್ಯಾರ್ಥಿಗಳ ಬದುಕನ್ನು ಶ್ರುತಿಬದ್ಧಗೊಳಿಸುವುದೇ ನಿಜವಾದ ಶಿಕ್ಷಣ. ಈ ಮಹತ್ತರ ಕಾರ್ಯದಲ್ಲಿ ಶಿಕ್ಷಣ ಸಂಸ್ಥೆಯೊಂದಿಗೆ ಪಾಲಕರ ಪಾತ್ರವೂ ಅತ್ಯಂತ ಅಗತ್ಯ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವ ಹೇಳಿದರು. ಅವರು ಶನಿವಾರ ಆಳ್ವಾಸ್‌ನ ಕೃಷಿಸಿರಿ ವೇದಿಕೆಯಲ್ಲಿ ನಡೆದ ಆಳ್ವಾಸ್ ಪದವಿಪೂರ್ವ ಕಾಲೇಜಿನ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳ ಪಾಲಕ–ಶಿಕ್ಷಕ ಸಮಾವೇಷದಲ್ಲಿ ಮಾತನಾಡಿದರು. ಪದವಿಪೂರ್ವ ಶಿಕ್ಷಣದ ಹಂತವು ವಿದ್ಯಾರ್ಥಿ ಜೀವನದಲ್ಲಿ ಅತ್ಯಂತ ನಿರ್ಣಾಯಕ ಘಟ್ಟ. ಈ ಅವಧಿಯಲ್ಲಿ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಶಿಕ್ಷಣ ಹಾಗೂ ವೃತ್ತಿಜೀವನಕ್ಕೆ ಭದ್ರವಾದ ಅಡಿಪಾಯ ಹಾಕಿಕೊಳ್ಳಬೇಕು. ಇದಕ್ಕಾಗಿ ವಿದ್ಯಾರ್ಥಿಗಳು ಮಾತ್ರವಲ್ಲದೆ, ಪಾಲಕರು ಕೂಡ ಶಿಕ್ಷಣ ವ್ಯವಸ್ಥೆಯನ್ನು ಸರಿಯಾಗಿ ಅರ್ಥಮಾಡಿಕೊಂಡು ತಮ್ಮ ಜವಾಬ್ದಾರಿಯನ್ನು ಸಮರ್ಥವಾಗಿ ನಿರ್ವಹಿಸಬೇಕು ಎಂದರು. ವಿದ್ಯಾರ್ಥಿ–ಶಿಕ್ಷಕ–ಪಾಲಕ ಎಂಬ ಮೂರು ಶಕ್ತಿಗಳು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಕಾಲೇಜಿನಲ್ಲಿ ವಿದ್ಯಾರ್ಥಿಗಳು ಸಮಯ ಮತ್ತು ಶಿಸ್ತನ್ನು ಪಾಲನೆ ಮಾಡಬೇಕು. ಕಾಲೇಜಿನಲ್ಲಿ ನಡೆದ ದೈನಂದಿನ ಪಾಠ ಪ್ರವಚನಗಳ ಬಗ್ಗೆ ಪೋಷಕರು ಮಕ್ಕಳಿಂದ ಮಾಹಿತಿ ಪಡೆದುಕೊಳ್ಳುತ್ತಿರಬೇಕು. ಕಡಿಮೆ ಅಂಕ ಪಡೆದ ಮಕ್ಕಳನ್ನು ಕಡೆಗಣಿಸದೆ ಹೆಚ್ಚು ಅಂಕಗಳಿಸುವ ನಿಟ್ಟಿನಲ್ಲಿ ಪ್ರೋತ್ಸಾಹ ನೀಡಬೇಕು. ಕ್ರೀಡೆ ಹಾಗೂ ಪಾಠೇತರ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳು ತೊಡಗಿಸಿಕೊಳ್ಳಲು ಉತ್ತೇಜನ ನೀಡಬೇಕು. ಜಂಕ್ ಫುಡ್ ಮತ್ತು ಮೊಬೈಲ್ ಬಳಕೆಯನ್ನು ಆದಷ್ಟು ಕಡಿಮೆ ಮಾಡಬೇಕು ಎಂದು ಗಂಗೊಳ್ಳಿಯ ಎಸ್.ವಿ. ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲೆ ಕವಿತಾ ಎಂ.ಸಿ. ಹೇಳಿದರು. ಅವರು ಎಸ್.ವಿ. ಪದವಿಪೂರ್ವ ಕಾಲೇಜಿನ ಸಭಾಂಗಣದಲ್ಲಿ ಶನಿವಾರ ಜರಗಿದ ಕಾಲೇಜಿನ ಪದವಿ ಪೂರ್ವ ವಿಭಾಗದ ವಿದ್ಯಾರ್ಥಿಗಳ ಪೋಷಕರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕಾಲೇಜಿನ ಸಂಸ್ಕೃತ ಉಪನ್ಯಾಸಕ ವೆಂಕಟೇಶಮೂರ್ತಿ ಕಾಲೇಜಿನ ಶಿಸ್ತು ಮತ್ತು ನಿಯಮಗಳ ಹಾಗೂ ಪರೀಕ್ಷಾ ಪದ್ಧತಿಗಳ ಬಗ್ಗೆ ಮಾಹಿತಿ ನೀಡಿದರು. ಉಪನ್ಯಾಸಕಿ ಪ್ರಫುಲ್ಲಾ, ವಿದ್ಯಾರ್ಥಿಗಳ ಪೋಷಕರು, ಉಪನ್ಯಾಸಕರು ಉಪಸ್ಥಿತರಿದ್ದರು. ಅರ್ಥಶಾಸ್ತ್ರ ಉಪನ್ಯಾಸಕಿ ಸುಗುಣ ಆರ್.ಕೆ. ಸ್ವಾಗತಿಸಿ ಕಾರ್ಯಕ್ರಮ ನಿರ್ವಹಿಸಿದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ. ಉಡುಪಿ: ಕಲಾವಿದರ ವಿವರಗಳನ್ನು ಕ್ರೋಢಿಕರಿಸುವ ದೃಷ್ಟಿಯಿಂದ ಜಿಲ್ಲೆಯಲ್ಲಿನ ಕಲಾವಿದರ, ಕಲಾತಂಡಗಳ ಪಟ್ಟಿಯನ್ನು ತಯಾರಿಸಿ ಅವರಿಗೆ ಸೂಕ್ತ ಕಾರ್ಯಕ್ರಮಗಳನ್ನು ನೀಡಲು ಹಾಗೂ ನೈಜ ಕಲಾವಿದರ ಪಟ್ಟಿಯನ್ನು ತಯಾರಿಸಿ ಗುರುತಿನ ಚೀಟಿ ನೀಡಲು ಅರ್ಹ ಕಲಾವಿದರಿಂದ ಅರ್ಜಿ ಆಹ್ವಾನಿಸಲಾಗಿದೆ. ಕಲಾವಿದರು, ಕಲಾತಂಡದವರು ಹಾಗೂ ಸಾಹಿತಿಗಳು ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಛೇರಿಯಿಂದ ನಿಗಧಿತ ಅರ್ಜಿ ನಮೂನೆಯನ್ನು ಪಡೆದು, ಸ್ವ-ವಿವರದ ಮಾಹಿತಿಯೊಂದಿಗೆ ತಮ್ಮ ಆಧಾರ್ ಗುರುತಿನ ಚೀಟಿ, ಪಡಿತರ ಚೀಟಿ, ಚುನಾವಣಾ ಗುರುತಿನ ಚೀಟಿ, ಪ್ರತಿಷ್ಠಿತ ಸಂಘ ಸಂಸ್ಥೆಗಳಿಂದ ಪಡೆದ ಪ್ರಶಸ್ತಿ ಪುರಸ್ಕಾರಗಳ ವಿವರ, ಪ್ರಮುಖ ಪ್ರದರ್ಶನಗಳ ವಿವರ, ಶಿಲ್ಪಾ ಚಿತ್ರಕಲೆಗಳ ಕಲಾ ಪ್ರದರ್ಶನಗಳ ಛಾಯಾಚಿತ್ರಗಳನ್ನು ಲಗತ್ತಿಸಿ, ಭರ್ತಿ ಮಾಡಿದ ಅರ್ಜಿಗಳನ್ನು ಸೆಪ್ಟಂಬರ್ 30ರ ಒಳಗಾಗಿ ಸಹಾಯಕ ನಿರ್ದೇಶಕರ ಕಛೇರಿ, ಡಾ. ಶಿವರಾಮ ಕಾರಂತ ಕಲಾಗ್ರಾಮ, ಪ್ರಗತಿನಗರ, ಅಲೆವೂರು ಗ್ರಾಮ, ಮಣಿಪಾಲ ಅಂಚೆ, ಉಡುಪಿ ಜಿಲ್ಲೆ ಈ ವಿಳಾಸಕ್ಕೆ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂ.ಸಂಖ್ಯೆ: 0820-2986168 ಅನ್ನು ಸಂಪರ್ಕಿಸುವಂತೆ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಪ್ರತಿವರ್ಷ ಕೊಡಮಾಡುವ ಅತ್ಯತ್ತಮ ಹಾಲು ಉತ್ಪಾದಕರ ಸಂಘ ಪ್ರಶಸ್ತಿಗೆ ಇಲ್ಲಿನ ಸಾಸ್ತಾನದ ಪಾಂಡೇಶ್ವರ ಹಾಲು ಉತ್ಪಾದಕರ ಸಹಕಾರ ಸಂಘವನ್ನು ಆಯ್ಕೆಗೊಳಿಸಿ ಶನಿವಾರ ಪ್ರಶಸ್ತಿಯನ್ನು ಪ್ರದಾನಿಸಿದರು. ಮಂಗಳೂರಿನ ದಕ್ಷಿಣಕನ್ನಡ ಕೇಂದ್ರ ಸಹಕಾರಿ ಬ್ಯಾಂಕ್ ಸಭಾಂಗಣದಲ್ಲಿ ಸಂಘದ ಅಧ್ಯಕೆ ವೆಲೇರಿಯನ್ ಡಿಸೋಜ ಹಾಗೂ ಮುಖ್ಯಕಾರ್ಯನಿರ್ವಹಣಾಧಿಕಾರಿ ಶ್ಯಾಮಲ ಪಾಂಡೇಶ್ವರ ಅವರಿಗೆ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್ ರಾಜೇಂದ್ರ ಕುಮಾರ್ ಹಾಗೂ ಐಕಳದ ಬಾವ ಡಾ. ದೇವಿಪ್ರಸಾದ್ ಶೆಟ್ಟಿ ಪ್ರಶಸ್ತಿ ಪತ್ರ ಮತ್ತು ಫಲಕವನ್ನು ಹಸ್ತಾಂತರಿಸಿದರು. ಸಂಘದ ಸಿಬ್ಬಂದಿ ಸುಜಾತ ವೆಂಕಟೇಶ್ ಇದ್ದರು.

Read More

ಕುಂದಾಪ್ರ  ಡಾಟ್‌ ಕಾಂ ಸುದ್ದಿ.ಕುಂದಾಪುರ: ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಶಾರದಾ ಪದವಿ ಪೂರ್ವ ಕಾಲೇಜು ಕುಂಜಿಬೆಟ್ಟು ಇವರ ಆಶ್ರಯದಲ್ಲಿ ನಡೆದ ಉಡುಪಿ ಜಿಲ್ಲಾಮಟ್ಟದ ಬಾಲಕ- ಬಾಲಕಿಯರ  ಟೇಬಲ್ ಟೆನ್ನಿಸ್ ಪಂದ್ಯಾಟದಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಾದ  ಶ್ರಾವ್ಯ ಎ.ಪಿ. ಮತ್ತು ಅಶ್ಲೀನ್ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿಗಳಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ – ಬೋಧಕೇತರ ಸಿಬ್ಬಂದಿ ಅಭಿನಂದನೆ ಸಲ್ಲಿಸಿದ್ದಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಗೋಕರ್ಣ: ಪಂಚ ಭೂತಗಳ ಮೇಲೆ ನಾವೂ ನಿಯಂತ್ರಣವನ್ನು ಸಾಧಿಸಬಹುದು. ಪ್ರಕೃತಿ ನಮಗೆ ಕೊಟ್ಟದ್ದನ್ನು ಕಾಲ ಹಾಗೂ ದೇಶಕ್ಕೆ ತಕ್ಕಂತೆ ಮತ್ತು ಶಾಸ್ತ್ರ ನಿಯಮದಂತೆ ಆಹಾರವನ್ನು ಸೇವಿಸಿದರೆ ಹಾಗೂ ನಿಯಮ ಬದ್ಧವಾದ ಉಪವಾಸದಿಂದ ಸಾಮಾನ್ಯನೂ ಕೂಡ ಅಗ್ನಿಜಯವನ್ನು ಸಾಧಿಸಬಹುದು ಎಂದು ಶ್ರೀ ರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು. ಅವರು ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ ನಡೆಯುತ್ತಿರುವ ‘ಅನ್ನಬ್ರಹ್ಮ ಚಾತುರ್ಮಾಸ್ಯ’ದ ಧರ್ಮಸಭೆಯಲ್ಲಿ ಶುಕ್ರವಾರ ‘ಅನ್ನಂ ಬ್ರಹ್ಮ’ ಮಾಲಿಕೆಯಲ್ಲಿ ಮಹಾನ್ ವ್ಯಕ್ತಿಗಳ ಜೀವನದಲ್ಲಿಯೂ ಕಷ್ಟಗಳು ಬರುತ್ತವೆ ಎಂದ ಶ್ರೀಗಳು, ನಳ – ದಮಯಂತಿಯ ಚರಿತ್ರೆಯ ಮೂಲಕ ನಳನಿಗೆ ಅಗ್ನಿಯ ಮೇಲಿದ್ದ ಪ್ರಭಾವ ಹಾಗೂ ಬಲವನ್ನು ವಿವರಿಸಿ, ನಳನು ಸಂಕಷ್ಟಗಳ ಸರಮಾಲೆಯ ಮಧ್ಯದಲ್ಲಿದ್ದಾಗ ಆತನ ಮಹತ್ವ ಮತ್ತು ಸಾಮರ್ಥ್ಯ ಜಗತ್ತಿನ ಮುಂದೆ ಪ್ರಕಟವಾಯಿತು. ಪಂಚಭೂತಗಳ ಮೇಲೆ ನಳನು ಸಾಧಿಸಿಕೊಂಡಿದ್ದ ನಿಯಂತ್ರಣದಿಂದ ಇದು ಸಾಧ್ಯವಾಯಿತು ಎಂದು ಅಭಿಪ್ರಾಯಪಟ್ಟರು. ತೇಗು ಬಂದ ನಂತರ ಊಟವನ್ನು ನಿಲ್ಲಿಸಬೇಕು ಎನ್ನಲಾಗಿದೆ. ಆದರೆ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಮಹಾತ್ಮ ಗಾಂಧಿ ಸ್ಮಾರಕ ಸಂಧ್ಯಾ ಕಾಲೇಜು, ಉಡುಪಿಯ ವಾಣಿಜ್ಯ ಮತ್ತು ನಿರ್ವಹಣಾ ಕ್ಲಬ್‌ನ ಉದ್ಘಾಟನಾ ಸಮಾರಂಭ ಹಾಗೂ ಐಸಿಎಐ ಉಡುಪಿ ಶಾಖೆ ಅವರ ಸಂಯುಕ್ತ ಆಶ್ರಯದಲ್ಲಿ CAFY & Super Mega Career Counselling ಕಾರ್ಯಕ್ರಮ ಕಾಲೇಜಿನ ಟಿ. ಮೋಹನ್‌ದಾಸ್ ಪೈ ಪ್ಲಾಟಿನಂ ಜುಬಿಲಿ ಬ್ಲಾಕ್‌ನ ಸಭಾಂಗಣದಲ್ಲಿ ನಡೆಯಿತು. ವೃತ್ತಿ ಮಾರ್ಗದರ್ಶಕರಾಗಿ ಉಡುಪಿ ಶಾಖೆಯ ICAIಯ ಮಾಜಿ ಅಧ್ಯಕ್ಷರಾದ CA. ಲೋಕೇಶ್ ಶೆಟ್ಟಿ ಅವರು ವಾಣಿಜ್ಯ ಮತ್ತು ನಿರ್ವಹಣಾ ಕ್ಲಬ್‌ನ್ನು ಉದ್ಘಾಟಿಸಿ, ಚಾರ್ಟರ್ಡ್ ಅಕೌಂಟೆನ್ಸಿ (CA) ವೃತ್ತಿಯ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ಹಾಗೂ ಮಾರ್ಗದರ್ಶನ ನೀಡಿದರು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಸಕ್ರಿಯವಾಗಿ ಭಾಗವಹಿಸಿ, ವೃತ್ತಿ ಸಂಬಂಧಿತ ಮಾಹಿತಿಯನ್ನು ಪಡೆದುಕೊಂಡರು. ಎಂ.ಜಿ.ಎಂ ಸಂಧ್ಯಾ ಕಾಲೇಜಿನ ಪ್ರಾಂಶುಪಾಲರಾದ ಡಾ. ದೇವಿದಾಸ್ ಎಸ್. ನಾಯಕ್ ಅವರು ಮಾತನಾಡಿ, ವಿದ್ಯಾರ್ಥಿಗಳು ತಮ್ಮ ಭವಿಷ್ಯದ ವೃತ್ತಿಜೀವನದ ಬಗ್ಗೆ ಉತ್ತಮ ಗುರಿ ಹೊಂದಿ ಮುನ್ನಡೆಯಬೇಕು ಎಂದು ಸಲಹೆ ನೀಡಿದರು. ಕಾಲೇಜಿನ ಬಿ.ಕಾಂ ಮತ್ತು ಬಿಬಿಎ ಸಂಯೋಜಕರಾದ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಅಡಿಕೆ ಮರದ ತಲೆ ಕತ್ತರಿಸುವ ವೇಳೆ ಕೆಳಗೆ ಬಿದ್ದು ತೀವ್ರವಾಗಿ ಗಾಯಗೊಂಡಿದ್ದ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಕುಂದಾಪುರ ತಾಲೂಕಿನ ಉಳ್ತೂರು ಗ್ರಾಮದ ಹಲ್ತೂರಿನಲ್ಲಿ ಸಂಭವಿಸಿದೆ ಮೃತರನ್ನು ಉಳ್ತೂರು ಗ್ರಾಮದ ಭುಜಂಗ ಶೆಟ್ಟಿ(56) ಎಂದು ಗುರುತಿಸಲಾಗಿದೆ. ಅವರು ಆ.8ರಂದು ಮನೆಯ ಜಾಗದಲ್ಲಿಯ ಅಡಿಕೆ ಮರ ಮರದ ತಲೆಯನ್ನು ಕತ್ತರಿಸುವಾಗ ಆಕಸ್ಮಿಕವಾಗಿ ಸುಮಾರು 20 ಅಡಿ ಎತ್ತರದಿಂದ ನೆಲಕ್ಕೆ ಬಿದ್ದಿದ್ದರು. ಬಿದ್ದ ಪರಿಣಾಮ ತಲೆ ಹಾಗೂ ಬೆನ್ನಿಗೆ ತೀವ್ರ ಗಾಯಗಳಾಗಿದ್ದವು. ಅವರನ್ನು ಮಣಿಪಾಲದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಆ.20ರಂದು ಮಧ್ಯಾಹ್ನ ಆಸ್ಪತ್ರೆಯಿಂದ ಬಿಡುಗಡೆಗೊಂಡಬಳಿಕ ಹಲ್ತೂರಿನ ಮನೆಗೆ ಕರೆತರಲಾಗಿತ್ತು. ಆದರೆ ಸಂಜೆ ಮನೆಯಲ್ಲಿ ಮೃತಪಟ್ಟದ್ದಾರೆ. ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಪತ್ರಕರ್ತ ಶ್ರೀಕಾಂತ್ ಹೆಮ್ಮಾಡಿ ಅವರಿಗೆ ಇಲ್ಲಿನ ಹೋಟೆಲಿನಲ್ಲಿ ಶುಕ್ರವಾರ ಬೆಳಗ್ಗೆ ಏಕಾಏಕಿ ಹಲ್ಲೆ ನಡೆಸಿ, ಅವಾಚ್ಯ ಶಬ್ದಗಳಿಂದ‌ ನಿಂದಿಸಿ, ಕೊಲೆ‌ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂದಿಸಿದಂತೆ ಡಾ. ಮಹೇಂದ್ರ ‌ಕುಮಾರ್ ಶೆಟ್ಟಿಯನ್ನು ತಕ್ಷಣದಿಂದ ಸರಕಾರಿ ಸೇವೆಯಿಂದ‌ ಅಮಾನತುಗೊಳಿಸಿ ರಾಜ್ಯ ಆರೋಗ್ಯ ‌ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಯುಕ್ತ ಹಾಗೂ ಶಿಸ್ತು ‌ಪ್ರಾಧಿಕಾರಿ ಗುರುದತ್ ಹೆಗಡೆ ಆದೇಶಿಸಿದ್ದಾರೆ. ಅವರು ಹಿಂದೆ ಕುಂದಾಪುರದ ಸಾರ್ವಜನಿಕ ಆಸ್ಪತ್ರೆಯ ಶಸ್ತ್ರಚಿಕಿತ್ಸಕರಾಗಿದ್ದು, ಪ್ರಸ್ತುತ ಕಾರ್ಕಳ ಸಾರ್ವಜನಿಕ ಆಸ್ಪತ್ರೆಯಲ್ಲಿ ಅನ್ಯಪರ ಸೇವೆಯ ಮೇಲೆ ಕರ್ತವ್ಯ ನಿರ್ವಹಿಸುತ್ತಿದ್ದರು. ಅವರು ಆ.4 ರಿಂದ ಸೆ.30ರವರೆಗೆ ಒಟ್ಟು 58 ದಿನಗಳ ಕಾಲ ವೈದ್ಯಕೀಯ ಚಿಕಿತ್ಸೆಗಾಗಿ ರಜೆಯಲ್ಲಿದ್ದು, ಈ ಅವಧಿಯಲ್ಲಿ ಆ.21ರಂದು ಕುಂದಾಪುರದ ಪತ್ರಕರ್ತ ಶ್ರೀಕಾಂತ ಹೆಮ್ಮಾಡಿ ಅವರು ಹೊಟೇಲ್‌ನಲ್ಲಿ ಇದ್ದ ಸಂದರ್ಭ ಅವರ ಮೇಲೆ ಏಕಾಏಕಿ ಹಲ್ಲೆ ನಡೆಸಿದ್ದರು. ಈ ಬಗ್ಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ಮಾಹಿತಿ ನೀಡಿದ್ದರು. ವೈದ್ಯರು ಸರಕಾರದ ಅಧಿಕಾರಿಗೆ ತರವಲ್ಲದ ರೀತಿಯಲ್ಲಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಬ್ರಹ್ಮಶ್ರೀ ನಾರಾಯಣಗುರು ಬಿಲ್ಲವ ಸಂಘ  ಬಾಳ್ಕುದ್ರು ಹಂಗಾರಕಟ್ಟೆ ಇದರ ಆಶ್ರಯದಲ್ಲಿ ವರಮಹಾಲಕ್ಷ್ಮಿ ಪೂಜೆ  ಕಾರ್ಯಕ್ರಮವು ಶುಕ್ರವಾರದಂದು ಸಂಘದ ಆವರಣದಲ್ಲಿ ವಿಜೃಂಭಣೆಯಿಂದ ಜರಗಿತು. ವೇ.ಮೂ ಬಿರ್ತಿ ವೆಂಕಟರಮಣಸೂರ್ಯ ಇವರು ಧಾರ್ಮಿಕ ವಿಧಿವಿಧಾನಗಳನ್ನು ಹಾಗೂ ವರಮಹಾಲಕ್ಷ್ಮಿ ಪೂಜೆ ಕಾರ್ಯಕ್ರಮವನ್ನು ನೆರವೆರಿಸಿದರು. ಅಪರಾಹ್ನ ಮಹಾ ಅನ್ನಸಂತರ್ಪಣೆ ಪ್ರಸಾದ ವಿತರಣೆ ಕಾರ್ಯಕ್ರಮ ಜರಗಿತು. ಸಂಘದ ಅಧ್ಯಕ್ಷ ವಿಜಯ ಕುಮಾರ್ ಅಧ್ಯಕ್ಷತೆಯಲ್ಲಿ ಈ ಕಾರ್ಯಕ್ರಮ ಜರಗಿತು. ಈ ಸಂದರ್ಭದಲ್ಲಿ ಮಹಿಳಾ ಘಟಕದ ಅಧ್ಯಕ್ಷೆ ಶಕುಂತಲ ವಾಸುದೇವ ಕೋಟ್ಯಾನ್, ಪ್ರಮುಖರಾದ ರೇಖಾ ಪಿ. ಸುವರ್ಣ, ಕಲಾವತಿ ಆನಂದ್, ಜ್ಯೋತಿ ರವೀಂದ್ರ ಸುವರ್ಣ, ಪ್ರೇಮ ಸತೀಶ್ ಪೂಜಾರಿ, ಸಂಘದ ಪ್ರಮುಖರಾದ ನಾರಾಯಣ ಪೂಜಾರಿ, ಶಂಕರ್ ಪೂಜಾರಿ, ಉಮೇಶ್ ಪೂಜಾರಿ, ಆನಂದ್ ಪೂಜಾರಿ ಮತ್ತಿತರರು ಇದ್ದರು.

Read More