Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಯುವ ರೆಡ್ ಕ್ರಾಸ್ ಘಟಕದ ಆಶ್ರಯದಲ್ಲಿ ಅನ್ನಪೂರ್ಣೇಶ್ವರಿ ಸೇವಾ ಬಂಧು ಟ್ರಸ್ಟ್ ಕುಂದಾಪುರ, ನೇತ್ರಜ್ಯೋತಿ ಚಾರಿಟೇಬಲ್ ಟ್ರಸ್ಟ್ ಉಡುಪಿ, ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ ಉಡುಪಿ ಇವರ ಸಹಯೋಗದೊಂದಿಗೆ ಉಚಿತ ನೇತ್ರ ತಪಾಸಣಾ ಶಿಬಿರ ಕಾರ್ಯಕ್ರಮವು ಕಾಲೇಜಿನಲ್ಲಿ ಜರುಗಿತು. ಅನ್ನಪೂರ್ಣೇಶ್ವರಿ ಸೇವಾ ಬಂಧು ಟ್ರಸ್ಟ್, ಕುಂದಾಪುರ ಇದರ ಗೌರವಾಧ್ಯಕ್ಷರಾದ ಪ್ರಥಮ ದರ್ಜೆ ವಿದ್ಯುತ್‌ ಗುತ್ತಿಗೆದಾರರಾದ ಕೆ. ಆರ್. ನಾಯಕ್ ಕಾರ್ಯಕ್ರಮವನ್ನು ಉದ್ಘಾಟಿಸಿ, ಇಂದಿನ ಯುವ ಪೀಳಿಗೆಗೆ ಕಣ್ಣಿನ ಆರೋಗ್ಯ ಹಾಗೂ ಅದರ ಅರಿವು ಕಾಲೇಜು ದಿನಗಳಲ್ಲಿ ಅರ್ಥೈಸಿಕೊಳ್ಳಬೇಕು ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಪ್ರಸಾದ್ ನೇತ್ರಾಲಯ ಉಡುಪಿ ಇದರ ಸಾರ್ವಜನಿಕ ಸಂಪರ್ಕಾಧಿಕಾರಿಯಾದ ಗಣೇಶ್ ಕಣ್ಣಿನ ಜಾಗೃತಿಯ ಬಗ್ಗೆ ವಿದ್ಯಾರ್ಥಿಗಳಿಗೆ ಅರಿವು ಮೂಡಿಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ಡಾ. ಕೆ. ಉಮೇಶ್ ಶೆಟ್ಟಿ ಅವರು ಮಾತನಾಡಿ, ಕಾಲೇಜು ವಿದ್ಯಾರ್ಥಿಗಳಲ್ಲಿ ಮೊಬೈಲ್ ದುರ್ಬಳಕೆ, ವಿದ್ಯಾರ್ಥಿಗಳ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಬ್ರಹ್ಮಾವರ ಗ್ರಾಮಾಭಿವೃದ್ಧಿ ಮತ್ತು ಸ್ವ ಉದ್ಯೋಗ ತರಬೇತಿ (ರುಡ್‌ಸೆಟ್) ಸಂಸ್ಥೆ ಬ್ರಹ್ಮಾವರ ವತಿಯಿಂದ ಆಯೋಜಿಸಲಾಗಿದ್ದ  ಮಹಿಳಾ ಟೈಲರಿಂಗ್ ತರಬೇತಿಯ ಸಮಾರೋಪ ಸಮಾರಂಭವು ಸಂಸ್ಥೆಯ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಚಾಂತರು ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ ಜಯಂತಿ ವಾಸುದೇವ, ಬಾರ್ಕೂರು ಅನ್ನಪೂರ್ಣೇಶ್ವರಿ ದೇವಸ್ಥಾನದ ಮಹಿಳಾ ಸಂಘದ ಅಧ್ಯಕ್ಷರಾದ ಜಯಂತಿ ವಾಸುದೇವ ಅವರು ಶಿಬಿರಾರ್ಥಿಗಳಿಗೆ ಪ್ರಮಾಣಪತ್ರಗಳನ್ನು ವಿತರಿಸಿ ಮಾತನಾಡಿ, ಮಹಿಳೆಯರು ಹೆಚ್ಚಿನ ಪ್ರಮಾಣದಲ್ಲಿ ಬಂದು ಈ ರೀತಿ ತರಬೇತಿ ಪಡೆದುಕೊಂಡು ಮುಂದೆ ಬಂದಿರುವುದು ಹೆಮ್ಮೆಯ ವಿಚಾರ. ಕಲಿಕೆ ಅನ್ನುವುದು ನಿರಂತರವಾಗಿರುವುದು ಹಾಗಾಗಿ ಯಶಸ್ಸಿನ ಕೀಲಿ ಕೈ ನಿರಂತರವಾಗಿರುವ ಪ್ರಯತ್ನ. ಸಂಸ್ಥೆಯು ನಿರಂತರವಾಗಿ ಇಂತಹ ತರಬೇತಿಗಳನ್ನು ನೀಡುತ್ತಾ ಬಂದಿದ್ದು ಸಾವಿರಾರು ಅಭ್ಯರ್ಥಿಗಳು ತರಬೇತಿಯನ್ನು ಪಡೆದು ಸ್ವಂತ ಉದ್ಯಮವನ್ನು ನಡೆಸುತ್ತಿದ್ದಾರೆ. ಯಶಸ್ಸಿನ ಮೆಟ್ಟಿಲನ್ನು ಹತ್ತಬೇಕಾದರೆ ಮುಖ್ಯವಾಗಿ ಶ್ರದ್ಧೆ ಹಾಗೂ ಪ್ರಯತ್ನ ಬೇಕಾಗುತ್ತದೆ. ತರಬೇತಿಯ ಯಶಸ್ಸು ನೀವು ಸ್ವಂತ ಉದ್ಯಮವನ್ನು ಕೈಗೊಂಡಾಗ ಲಭಿಸುತ್ತದೆ. ಹಾಗಾಗಿ ಪ್ರಯತ್ನ ನಿರಂತರವಾಗಿರಲಿ ಎಂದು ಶುಭ ಹಾರೈಸಿದರು.…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಐಟಿ ಕ್ಷೇತ್ರದಲ್ಲಿ ಗುರುತಿಸಲ್ಪಟ್ಟ ಕ್ಲೋಕೇಟ್ ಟೆಕ್ನಾಲಜೀಸ್ ಕುಂದಾಪುರ ಇವರ ನೂತನ ಕಚೇರಿಯ ಉದ್ಘಾಟನಾ ಸಮಾರಂಭವು  ಕುಂದಾಪುರದ ಶ್ರೀ ವೆಂಕಟರಮಣ ಆರ್ಕೆರ್ಡ್‌ನ  2ನೇ ಮಾಳಿಗೆಯ ಮಹಡಿಯಲ್ಲಿ ನೆರವೇರಿತು. ಸಮಾರಂಭಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿದ ಕುಂದಾಪುರ ಭಂಡಾರಕಾರ್ಸ್‌ ಕಾಲೇಜಿನ ವಿಜ್ಞಾನ ವಿಭಾಗದ ಮುಖ್ಯಸ್ಥರಾದ ಗಣೇಶ್.ಕೆ ಅವರು ಮಾತನಾಡಿ ” ಕುಂದಾಪುರದಂತ ಚಿಕ್ಕ ನಗರದಲ್ಲಿರುವ ಈ ಕಂಪನಿಯು ಲಂಡನ್ ನಂತಹ ದೊಡ್ಡ ನಗರದಲ್ಲಿ ಗ್ರಾಹಕರಿಗೆ ಸಾಫ್ಟ್ ವೇ‌ರ್ ಸರ್ವಿಸ್ ನೀಡುತ್ತಿರುವುದು ಅತ್ಯಂತ ಶ್ಲಾಘನೀಯ ವಿಷಯ ಎಂದು ತಮ್ಮ ಮಾತುಗಳಿಂದ ನೆರೆದವರ ಮುಂದೆ ಶುಭ ನುಡಿದರು. ಇದೇ ಸಂದರ್ಭದಲ್ಲಿ ಕ್ಲೋಕೇಟ್ ಸಂಸ್ಥೆಯ ಸಿ.ಎಸ್‌. ಆರ್ ನಿಧಿಯಿಂದ ಕೊಡ ಮಾಡಿದ ರೂ. 55,000/- ಚೆಕ್ಕನ್ನು ಕೆ.ಪಿ.ಎಸ್‌ ಶಾಲೆ ಕೋಟೇಶ್ವರ ಇವರ ಗೌರವ ಶಿಕ್ಷಕಿಯರ ವೇತನದ ಸಲುವಾಗಿ ಹಸ್ತಾಂತರಿಸಲಾಯಿತು. ಸಭೆಯನ್ನು ಉದ್ದೇಶಿಸಿ ಮಾತನಾಡಿದ ಸಂಸ್ಥೆಯ ಪ್ರಾಜೆಕ್ಟ್ ಹೆಡ್  ಶಶಿಧರ ಶೆಟ್ಟಿ ಮೂಡುಗೋಪಾಡಿ ಕಳೆದ 17 ವರ್ಷಗಳಿಂದ ಕುಂದಾಪುರದಲ್ಲಿ ಕಾರ್ಯನಿರ್ವಹಿಸುತ್ತಿರುವ ಸಂಸ್ಥೆ ಕೌಶಲ್ಯ ಮತ್ತು ಗುಣಮಟ್ಟಕ್ಕೆ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಸಾಹಿತ್ಯ ಸಮ್ಮೇಳನದ ಮೂಲಕ ಐಕ್ಯತೆಯನ್ನು ಸಾರೋಣ. ಕನ್ನಡ ನಾಡು ನುಡಿಗಾಗಿ ಸದಾ ಶ್ರಮಿಸೋಣ ಎಂದು ಸಾಹಿತಿ, ಬ್ರಹ್ಮಾವರ 5ನೇ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ ನರೇಂದ್ರ ಕುಮಾರ್ ಕೋಟ ಹೇಳಿದರು. ಅವರು ಭಾನುವಾರ ಸಾಸ್ತಾನದ ಶಿವಕೃಪಾ ಕಲ್ಯಾಣಮಂಟಪದಲ್ಲಿ ಕನ್ನಡ ಸಾಹಿತ್ಯ ಪರಿಷತ್ ಉಡುಪಿ ಜಿಲ್ಲೆ ಬ್ರಹ್ಮಾವರ ತಾಲೂಕು ಘಟಕದ ನೇತೃತ್ವದಲ್ಲಿ ಐದನೇ ಕನ್ನಡ ಸಾಹಿತ್ಯ ಸಮ್ಮೇಳನ ಬತ್ತದ ಹೆಜ್ಜೆ ನಾವೀನ್ಯದ ನಂದಾದೀಪ ಎಂಬ ಶೀರ್ಷಿಕೆಯಡಿ ನಡೆದ ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು. ಕನ್ನಡ ಭಾಷಾಭಿಮಾನ ವೃದ್ಧಿಯಾಗಬೇಕು. ಚುಟುಕು ಸಾಹಿತ್ಯದ ಮೂಲಕ ಎಳೆ ವಯಸ್ಸಿನಲ್ಲೇ ಮಕ್ಕಳಲ್ಲಿ ಪುಸ್ತಕ ಓದುವ ಹಾಗೂ ಸಾಹಿತ್ಯಾಸಕ್ತಿ ಮೂಡಿಸುವ ಕಾರ್ಯ ನಡೆಯಬೇಕು, ಈ ಬಗ್ಗೆ ಈಗಾಗಲೇ ಬ್ರಹ್ಮಾವರ ತಾಲೂಕಿನಲ್ಲಿ 70 ಸರಣಿ ಕಾರ್ಯಕ್ರಮ ಆಯೋಜಿಸಲಾಗಿದೆ, ಕುಂದಗನ್ನಡ ಅಧ್ಯಯನಪೀಠ ಸ್ಥಾಪನೆಯಾಗಬೇಕು ಎಂಬ ಆಶಯವನ್ನು ವ್ಯಕ್ತಪಡಿಸಿದರು. ಸಮ್ಮೇಳನಾಧ್ಯಕ್ಷ ನರೇಂದ್ರ ಕುಮಾರ್ ಕೋಟ ತಮ್ಮ ಅಧ್ಯಕ್ಷೀಯ ನುಡಿಗಳಲ್ಲಿ 1895 ರಲ್ಲಿ ಮೂಡಿಬಂದ ಬಹುಪರಂಪರೆಯ ಯಕ್ಷಗಾನ ಮೇಳಗಳಾದ ಗೋಳಿಗರಡಿ, ಮಂದಾರ್ತಿ, ಅಮೃತೇಶ್ವರೀ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಆಲೂರು ಸಮೀಪದ ಕಳಿಯಲ್ಲಿರುವ ಚಿತ್ರಕೂಟ ಆಯುರ್ವೇದ ಸಂಸ್ಥೆಯ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಅದ್ಧೂರಿ “ಚಿತ್ರಕೂಟ ಆಯುರ್ವೇದ ಹಬ್ಬ”ವು ಅತ್ಯಂತ ಸಂಭ್ರಮ ಹಾಗೂ ಜನಮೆಚ್ಚುಗೆಯೊಂದಿಗೆ ಮುಕ್ತಾಯಗೊಂಡಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿದ ಹಿರಿಯ ವೈದ್ಯ ಡಾ. ರಘುರಾಮ್, “ಇದು ಕೇವಲ ಒಂದು ಹಬ್ಬದ ಸಮಾರೋಪ ಸಮಾರಂಭವಲ್ಲ; ಆಯುರ್ವೇದ ಚಿಕಿತ್ಸಾ ಪದ್ಧತಿಯನ್ನು ಅಂತಾರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ಯುವ ಆಯುರ್ವೇದ ಹಬ್ಬದ ನೈಜ ಉದ್ಘಾಟನೆ. ಯುವ ವೈದ್ಯ ಡಾ. ರಾಜೇಶ್ ಬಾಯರಿ ಅವರು ಕಂಡ ಕನಸು, ತಂದೆ-ತಾಯಿ ಹಾಗೂ ಗುರು-ಹಿರಿಯರ ಆಶೀರ್ವಾದದ ಬಲದಿಂದ ಇಂದು ಹೆಮ್ಮರವಾಗಿ ಬೆಳೆದು ನಿಂತಿದೆ. ಸಾರ್ವಜನಿಕರ ಅಪಾರ ಸಹಭಾಗಿತ್ವ ಮತ್ತು ಪ್ರೀತಿಯೇ ಈ ಸಂಸ್ಥೆಯ ಮಹಾನ್ ಶಕ್ತಿ” ಎಂದು ಬಣ್ಣಿಸಿದರು. ಕಾರ್ಯಕ್ರಮದ ಇನ್ನೋರ್ವ ಅತಿಥಿ, ಸಮಾಜ ಸೇವಕ ಹಾಗೂ ಖ್ಯಾತ ದಾನಿ ಮಾರ್ಣಕಟ್ಟೆ ಕೃಷ್ಣಮೂರ್ತಿ ಮಂಜ ಅವರು ಮಾತನಾಡಿ, “ಗ್ರಾಮೀಣ ಭಾಗವಾದ ಕಳಿಯಲ್ಲಿ ಇಂತಹ ಅತ್ಯಾಧುನಿಕ ಹಾಗೂ ಗುಣಮಟ್ಟದ ಆಯುರ್ವೇದ ಸಂಸ್ಥೆಯನ್ನು ಕಟ್ಟಿ ಜಾಗತಿಕ ಮಟ್ಟದಲ್ಲಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಶ್ರೀ ವೆಂಕಟರಮಣ ಪದವಿಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ಸಂಯೋಜಕರು ಹಾಗೂ ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಲತಾ ಪೈ ಅವರಿಗೆ ಕರ್ನಾಟಕ ಅನುದಾನ ರಹಿತ ಪದವಿಪೂರ್ವ ಕಾಲೇಜುಗಳ ಆಡಳಿತ ಮಂಡಳಿಗಳ ಸಂಘಟನೆ (ಕುಪ್ಮಾ) ವತಿಯಿಂದ “ಉಡುಪಿ ಜಿಲ್ಲಾ ಅತ್ಯುತ್ತಮ ಉಪನ್ಯಾಸಕ”ರ ಪ್ರಶಸ್ತಿ ಲಭಿಸಿದೆ. ಶಿಕ್ಷಣ ಕ್ಷೇತ್ರದಲ್ಲಿ ಕಳೆದ 27 ವರ್ಷಗಳ ಸುದೀರ್ಘ ಹಾಗೂ ಸಮರ್ಪಿತ ಸೇವೆ, ಅದರಲ್ಲಿಯೂ ಶ್ರೀ ವೆಂಕಟರಮಣ ಪದವಿಪೂರ್ವ ಕಾಲೇಜಿನಲ್ಲಿ ಸತತ 16 ವರ್ಷಗಳಿಂದ ಸಲ್ಲಿಸುತ್ತಿರುವ ಅನುಪಮ ಸೇವೆ ನಿಜಕ್ಕೂ ಶ್ಲಾಘನೀಯ. “ಕರ್ತವ್ಯದಲ್ಲಿ ನಿಷ್ಠೆ, ನಡೆಯಲ್ಲಿ ಶಿಸ್ತು, ಸೇವೆಯಲ್ಲಿ ಸಮರ್ಪಣೆ” ಎನ್ನುವ ಉದಾತ್ತ ಧ್ಯೇಯ ವಾಕ್ಯವನ್ನು ಮೈಗೂಡಿಸಿಕೊಂಡು, ತಮ್ಮ ವಿಶಿಷ್ಟ ಬೋಧನಾ ಶೈಲಿಯ ಮೂಲಕ ಸಾವಿರಾರು ವಿದ್ಯಾರ್ಥಿಗಳ ಬಾಳಿಗೆ ಜ್ಞಾನದ ದೀಪವಾಗಿ, ಬದುಕಿನ ನೈಜ ಪಾಠವನ್ನು ಕಲಿಸಿಕೊಟ್ಟ ಅಪರೂಪದ ಗುರುಗಳು ನೀವು. ವಿದ್ಯಾರ್ಥಿಗಳ ಹೃದಯದಲ್ಲಿ ಶಾಶ್ವತ ಸ್ಥಾನ ಪಡೆದಿರುವ ನಿಮ್ಮ ಈ ಸಾಧನೆಗೆ ಸಂದ ಈ ಗೌರವವು ಅರ್ಹವಾದುದಾಗಿದೆ. ಅವರಿಗೆ ಸಂಸ್ಥೆಯ ಆಡಳಿತ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಮೂಡುಬಿದರೆ: ಮಂಗಳೂರಿನ ಎಸ್‌ಡಿಎಂ ಕಾಲೇಜು ಆಫ್ ಬ್ಯುಸಿನೆಸ್ ಮ್ಯಾನೇಜ್‌ಮೆಂಟ್‌ನಲ್ಲಿ ನಡೆದ ಮಂಗಳೂರು ವಿ.ವಿ ಅಂತರ್ ಕಾಲೇಜು ಯೋಗಾಸನ ಸ್ಪರ್ಧೆಯಲ್ಲಿ ಆಳ್ವಾಸ್ ಪದವಿ ಕಾಲೇಜಿನ ಪುರುಷರ ತಂಡ ಪ್ರಥಮ ಪ್ರಶಸ್ತಿ ಪಡೆದರೆ ಮಹಿಳೆಯರ ವಿಭಾಗದಲ್ಲಿ ದ್ವಿತೀಯ ತಂಡ ಪ್ರಶಸ್ತಿಯನ್ನು ಆಳ್ವಾಸ್ ಸಂಸ್ಥೆಯ ವಿದ್ಯಾರ್ಥಿಗಳು ಮುಡಿಗೇರಿಸಿಕೊಂಡರು. ಆಳ್ವಾಸ್ ಪದವಿ ಕಾಲೇಜಿನ ಆರು ವಿದ್ಯಾರ್ಥಿಗಳು ರಾಷ್ಟ್ರೀಯ ಮಟ್ಟದ ಅಂತರ್ ವಿವಿ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ವಿಜೇತ ಕ್ರೀಡಾಪಟುಗಳನ್ನು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಅಭಿನಂದಿಸಿದ್ದಾರೆ

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಪ್ರಜಾಸೇವಾ ಆಂದೋಲನ ಸಭೆಯು ಜನಪರ ಕಾಳಜಿ ಹೊಂದಿರುವ ಕಾರ್ಯಕ್ರಮವಾಗಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು. ಸರಕಾರದ ಸೇವೆ, ಸವಲತ್ತುಗಳನ್ನು ಜನಸಾಮಾನ್ಯರಿಗೆ ಸಕಾಲದಲ್ಲಿ ತಲುಪಿಸಲು ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಬೇಕು ಎಂದು ಬೈಂದೂರು ಶಾಸಕ ಗುರುರಾಜ್ ಶೆಟ್ಟಿ ಗಂಟಿಹೊಳೆ ಹೇಳಿದರು. ಅವರು ಬೈಂದೂರು ತಾಲೂಕು ಬಿಜೂರು ಗ್ರಾಮದ ಮುರ್ಗೋಳಿಹಕ್ಲು ನಂದಿಕೇಶ್ವರ ಸಭಾಭವನದಲ್ಲಿ, ಪ್ರಜಾಸೇವಾ ಇಲಾಖೆ ತಾಲೂಕು ಆಡಳಿತ ಬೈಂದೂರು ಇವರ ವತಿಯಿಂದ ಬೈಂದೂರು ಹೋಬಳಿಯ ಬಿಜೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಪ್ರಜಾಸೇವಾ ಆಂದೋಲನ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪ್ರಜಾಸೇವಾ ಆಂದೋಲನ ಸಭೆಯು ಸರಕಾರದ ಒಂದು ಉತ್ತಮ ಕಲ್ಪನೆಯಾಗಿದ್ದು, ಸಭೆಯ ಬಗ್ಗೆ ಹೆಚ್ಚಿನ ಪ್ರಚಾರ ಮೂಡಿಸುವುದರೊಂದಿಗೆ ಜನರು ಈ ಕಾರ್ಯಕ್ರಮದ ಬಗ್ಗೆ ವಿಶ್ವಾಸ ಹೊಂದುವಂತೆ ಮಾಡಿ, ಕಾರ್ಯಕ್ರಮದ ಲಾಭ ಪಡೆದುಕೊಳ್ಳುವಂತೆ ನೋಡಿಕೊಳ್ಳಬೇಕು. ಸಭೆಗಳಲ್ಲಿ ಸ್ವೀಕೃತವಾಗುವ ಸಾರ್ವಜನಿಕರ ಸಮಸ್ಯೆಗಳನ್ನು ಅತ್ಯಂತ ಗಂಭೀರವಾಗಿ ಆಲಿಸಿ, ಅವುಗಳಿಗೆ ಪರಿಣಾಮಕಾರಿ ಹಾಗೂ ಶಾಶ್ವತ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಕಾರ್ಯಪ್ರವೃತ್ತರಾಗಬೇಕು ಎಂದರು.…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಆಯುರ್ವೇದ ಎಂದರೆ ಕೇವಲ ರೋಗ ಬಂದಾಗ ಕುಡಿಯುವ ಕಹಿ ಕಷಾಯ ಅಥವಾ ಕಟ್ಟುನಿಟ್ಟಿನ ಪಥ್ಯವಲ್ಲ; ಅದು ಪ್ರತಿಯೊಬ್ಬರೂ ತಮ್ಮ ದೈನಂದಿನ ಜೀವನದಲ್ಲಿ ಅಳವಡಿಸಿಕೊಳ್ಳಬೇಕಾದ ಸಮಗ್ರ ಜೀವನಶೈಲಿ ಎಂದು ತಜ್ಞರು ಪ್ರತಿಪಾದಿಸಿದ್ದಾರೆ. ಚಿತ್ರಕೂಟ ಆಯುರ್ವೇದ ಸಂಸ್ಥೆಯ ವತಿಯಿಂದ ಆಯೋಜಿಸಲಾಗಿದ್ದ ಆಯುರ್ವೇದ ಹಬ್ಬದ ಅಂಗವಾಗಿ ನಡೆದ ‘ಚಿತ್ರಕೂಟ ಜೆನ್ ಜೀ ಆಯುರ್ವೇದ ಸಂವಾದ’ ಕಾರ್ಯಕ್ರಮದಲ್ಲಿ ವೈದ್ಯರು ಹಾಗೂ ಪ್ರಮುಖ ಕಂಟೆಂಟ್ ಕ್ರಿಯೇಟರ್‌ಗಳು ಭಾಗವಹಿಸಿ ಯುವಪೀಳಿಗೆ ಮತ್ತು ಆರೋಗ್ಯದ ಕುರಿತು ಮಹತ್ವದ ವಿಚಾರಗಳನ್ನು ಹಂಚಿಕೊಂಡರು. ​ಕಾರ್ಯಕ್ರಮದಲ್ಲಿ ಮಾತನಾಡಿದ ಚಿತ್ರಕೂಟ ಆಯುರ್ವೇದದ ಸಂಸ್ಥಾಪಕ ಡಾ. ರಾಜೇಶ್ ಬಾಯರಿ ಅವರು, “ಆಯುರ್ವೇದ ಶಾಸ್ತ್ರವು ಮೊದಲು ‘ಸ್ವಸ್ಥಸ್ಯ ಸ್ವಾಸ್ಥ್ಯ ರಕ್ಷಣಂ’ ಎಂದು ಹೇಳುತ್ತದೆ. ಅಂದರೆ ಒಬ್ಬ ಆರೋಗ್ಯವಂತ ವ್ಯಕ್ತಿಯು ತನ್ನ ಆರೋಗ್ಯವನ್ನು ಹೇಗೆ ಕಾಪಾಡಿಕೊಳ್ಳಬೇಕು ಎಂದು ತಿಳಿಸುವುದೇ ಇದರ ಮೂಲ ಉದ್ದೇಶವಾಗಿದ್ದು, ಕಾಯಿಲೆ ಬಂದ ಮೇಲೆ ಗುಣಪಡಿಸುವ ‘ಆತುರಸ್ಯ ವಿಕಾರ ಪ್ರಶಮನಂ’ ನಂತರದ ಹಂತವಾಗಿದೆ. ಮುಂಜಾನೆ ಬ್ರಾಹ್ಮೀ ಮುಹೂರ್ತದಲ್ಲಿ ಏಳುವುದು, ನಾಲಿಗೆ ಸ್ವಚ್ಛಗೊಳಿಸುವುದು, ಋತುಮಾನಕ್ಕೆ…

Read More

​ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಆಲೂರಿನ ಚಿತ್ರಕೂಟ ಆಯುರ್ವೇದ ಸಂಸ್ಥೆಯ ಆವರಣದಲ್ಲಿ ಹಮ್ಮಿಕೊಳ್ಳಲಾದ “ಚಿತ್ರಕೂಟ ಆಯುರ್ವೇದ ಹಬ್ಬ”ದ ಉದ್ಘಾಟನಾ ಸಮಾರಂಭವು ಗಣ್ಯರ ಉಪಸ್ಥಿತಿಯಲ್ಲಿ ಅತ್ಯಂತ ಸಂಭ್ರಮ ಹಾಗೂ ಅರ್ಥಪೂರ್ಣವಾಗಿ ನೆರವೇರಿತು. ಗ್ರಾಮೀಣ ಭಾಗದಲ್ಲಿ ಪ್ರಾಚೀನ ಆಯುರ್ವೇದ ಪರಂಪರೆಯನ್ನು ಜನಸ್ನೇಹಿಯಾಗಿ ಉಳಿಸಿ ಬೆಳೆಸುತ್ತಿರುವ ಸಂಸ್ಥಾಪಕ ಡಾ. ರಾಜೇಶ್ ಬಾಯರಿ ಮತ್ತು ವೈದ್ಯರ ತಂಡದ ಕಾರ್ಯವೈಖರಿಯನ್ನು ಸಮಾರಂಭದಲ್ಲಿ ಭಾಗವಹಿಸಿದ ಗಣ್ಯರು ಮುಕ್ತಕಂಠದಿಂದ ಶ್ಲಾಘಿಸಿದರು. ರೋಗಿಗಳನ್ನು ಕುಟುಂಬದ ಸದಸ್ಯರಂತೆ ಕಾಣುವ ಸಂಸ್ಥೆ:ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದ ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಪ್ರಾಧ್ಯಾಪಕ ಡಾ. ಪ್ರದೀಪ್ ಕೆಂಚನೂರು ಮಾತನಾಡಿ, “ಚಿತ್ರಕೂಟದಲ್ಲಿ ರೋಗಿಗಳನ್ನು ಗ್ರಾಹಕರಂತಾಗಲಿ, ರೋಗಿಗಳಂತಾಗಲಿ ಕಾಣದೆ ಮನೆಯ ಸದಸ್ಯರಂತೆ ಅಕ್ಕರೆಯಿಂದ ಉಪಚರಿಸುವ ಅಪರೂಪದ ವಾತಾವರಣವಿದೆ. ‘ಹತ್ತು ಸಮಸ್ತರು’ ಎಂಬಂತೆ ಸಮಾಜದ ಎಲ್ಲ ವರ್ಗ, ಜಾತಿ-ಧರ್ಮದ ಜನರನ್ನು ಪ್ರೀತಿಯಿಂದ ಒಳಗೊಂಡು ಮುನ್ನಡೆಯುತ್ತಿರುವುದು ಇಲ್ಲಿನ ವೈಶಿಷ್ಟ್ಯ. ದೇಶ-ವಿದೇಶಗಳ (ಸುಮಾರು 40-50 ರಾಷ್ಟ್ರಗಳ) ಅತಿಥಿಗಳು ಇಲ್ಲಿಗೆ ಬಂದು ಸ್ವಾಸ್ಥ್ಯ ಕಂಡುಕೊಳ್ಳುತ್ತಿರುವುದು ಸಂಸ್ಥೆಯ ಪ್ರಾಮಾಣಿಕ ಸೇವೆಗೆ ಸಾಕ್ಷಿ” ಎಂದರು.  ಜನರ ಒಡನಾಟದಿಂದ…

Read More