Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: :ಬ್ರಹ್ಮಾವರ ತಾಲೂಕು ಐದನೇ ಸಾಹಿತ್ಯ ಸಮ್ಮೇಳನವು ಅ.4 ರಂದು ಸಾಸ್ತಾನದ ಶಿವಕೃಪ ಕಲ್ಯಾಣ ಮಂಟಪದಲ್ಲಿ ನಡೆಯಲಿದ್ದು ಇದರ ಪೂರ್ವಭಾವಿ ಸಭೆಯು ಶಿವಕೃಪಾ ಕಲ್ಯಾಣಮಂಟಪದಲ್ಲಿ ಭಾನುವಾರ ನಡೆಯಿತು. ಕಸಾಪ ತಾಲ್ಲೂಕು ಅಧ್ಯಕ್ಷ ರಾಮಚಂದ್ರ ಐತಾಳ್ ಸಮ್ಮೇಳನದ ರೂಪುರೇಷೆ ಕುರಿತು ಮಾತನಾಡಿದರು. ಸಮ್ಮೇಳನದ ಸರ್ವಾಧ್ಯಕ್ಷರಾಗಿ ಸಾಹಿತಿ ನರೇಂದ್ರ ಕುಮಾರ್ ಕೋಟ ಅವರ ಹೆಸರನ್ನು ಅಧ್ಯಕ್ಷ ರಾಮಚಂದ್ರ ಐತಾಳ್ ಘೋಷಿಸಿದರು. ಸಭೆಯಲ್ಲಿ ಸರ್ವನುಮತದಿಂದ ಅಂಗಿಕರಿಸಲಾಯಿತು.  ಜಿಲ್ಲಾ ಸಂಘಟನ ಕಾರ್ಯದರ್ಶಿ ಸತೀಶ್ ವಡ್ಡರ್ಸೆ ಕಾರ್ಯಕ್ರಮದ ಯಶಸ್ಸಿಗೆ ಸರ್ವರ ಸಹಕಾರ ಅಗತ್ಯ ಎಂದರು. ಸಭೆಯಲ್ಲಿ ಸಮ್ಮೇಳನದ ವಿವಿಧ ಸಮಿತಿಗಳನ್ನು ರಚಿಸಿ ಜವಾಬ್ದಾರಿ ಹಂಚಲಾಯಿತು. ವೇದಿಯಲ್ಲಿ ಜಿಲ್ಲಾಧ್ಯಕ್ಷ ನೀಲಾವರ ಸುರೇಂದ್ರ ಅಡಿಗ , ಹಿರಿಯ ಸಾಹಿತಿ ಉಪೇಂದ್ರ ಸೋಮಯಾಜಿ, ಪ್ರತಾಪ ಶೆಟ್ಟಿ, ರಘು ಮಧ್ಯಸ್ಥ,ತಾಲ್ಲೂಕು ಮತ್ತು ಜಿಲ್ಲಾ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.  ಕೋಶಾಧಿಕಾರಿ ಅಲ್ತಾರು ನಾಗರಾಜ್ ನಿರೂಪಿಸಿ, ವಂದಿಸಿದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಅನುಷ್ಠಾನಗೊಳಿಸಲಾಗುತ್ತಿರುವ ಪಂಚವೃತ್ತಿ ಅಭಿವೃದ್ಧಿಗಾಗಿ ಆರ್ಥಿಕ ನೆರವು, ಸ್ವಯಂ ಉದ್ಯೋಗ ನೇರಸಾಲ ಯೋಜನೆ, ಹೊಸದು ಹಾಗೂ ನವೀಕರಣ ಅರಿವು – ಶೈಕ್ಷಣಿಕ ನೇರ ಸಾಲ ಯೋಜನೆ, ಗಂಗಾ ಕಲ್ಯಾಣ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ, ವಿದೇಶಿ ವ್ಯಾಸಾಂಗ ಯೋಜನೆ, ಸ್ವಾತಂತ್ರ್ಯ ಅಮೃತ ಮುನ್ನಡೆ ಯೋಜನೆ ಹಾಗೂ ಹೊಲಿಗೆ ಯಂತ್ರ / ಝೀಗ್ ಝ್ಯಾಗ್ ಯೋಜನೆಯಡಿ ಸಹಾಯಧನ ಹಾಗೂ ಸಾಲ ಸೌಲಭ್ಯ ಪಡೆಯಲು ಅರ್ಹ ಫಲಾನುಭವಿಗಳಿಂದ ಗ್ರಾಮ ಒನ್, ಬೆಂಗಳೂರು ಒನ್, ಕರ್ನಾಟಕ ಒನ್, ಅಟಲ್ ಜಿ ಜನಸ್ನೇಹಿ ಕೇಂದ್ರ ಮತ್ತು ನಾಗರೀಕ ಸೇವಾ ಕೇಂದ್ರಗಳಲ್ಲಿ ಸೇವಾಸಿಂಧು ಪೋರ್ಟಲ್ ನಡಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಸೆಪ್ಟಂಬರ್ 30 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್‌ಸೈಟ್ https://kvcdcl.karnataka.gov.in ಅಥವಾ ನಿಗಮದ ಕೇಂದ್ರ ಕಚೇರಿಯ ದೂ.ಸಂಖ್ಯೆ: 080-22374848 / 7899899039…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ತೆಂಗಿನ ಮರದಿಂದ ಕಾಯಿ ಕೀಳಲು ಮರ ಹತ್ತಿದ ಕಾರ್ಮಿಕ ಮರದಿಂದ ಬಿದ್ದು ಸಾವನ್ನಪ್ಪಿದ ಘಟನೆ ಯಡ್ತರೆ ಗ್ರಾಮದ ಯೋಜನಾ ನಗರದಲ್ಲಿ ಸಂಭವಿಸಿದೆ.ನಾಗೂರು ನಿವಾಸಿ ವಸಂತ (48) ಮೃತ ಕಾರ್ಮಿಕ. ಅವರು ಯಡ್ತರೆ ಗ್ರಾಮದ ಯೋಜನಾ ನಗರದ ಪ್ರದೇಶದಲ್ಲಿ ಮರದಿಂದ ಕಾಯಿ ಕೀಳುತ್ತಿದ್ದಾಗ ಕಾಲು ಜಾರಿ ನೆಲಕ್ಕೆ ಬಿದ್ದು ಗಂಬೀರ ಗಾಯಗೊಂಡರು. ಕೂಡಲೇ ಚಿಕಿತ್ಸೆಗಾಗಿ ಬೈಂದೂರು ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋದರು. ಅವರು ಚಿಕಿತ್ಸೆಗೆ ಸ್ವಂದಿಸದೆ ಸ್ವಲ್ಪ ಹೊತ್ತಿನಲ್ಲೇ ಮೃತಪಟ್ಟರು. ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಸ್ಕೂಟರ್ ಸವಾರರೊಬ್ಬರು ರಸ್ತೆ ವಿಭಾಜಕಕ್ಕೆ ಢಿಕ್ಕಿ ಹೊಡೆದು ರಸ್ತೆಗೆ ಬಿದ್ದು ಗಾಯಗೊಂಡ ಘಟನೆ ಹಂಗಳೂರು ಗ್ರಾಮದ ಅಂಕದಕಟ್ಟೆ ಬಳಿ ಸಂಭವಿಸಿದೆ. ಮಣೂರು ಗ್ರಾಮದ ಕಂಬಳಗದ್ದೆಬೆಟ್ಟು ನಿವಾಸಿ ರಾಜು ಎಂ.ಎಸ್. ಗಾಯಗೊಂಡವರು. ಅವರು ರಾಷ್ಟ್ರೀಯ ಹೆದ್ದಾರಿಯ ಸರ್ವಿಸ್ ರಸ್ತೆಯಲ್ಲಿ ಕುಂದಾಪುರ ಕಡೆಯಿಂದ ಕೋಟೇಶ್ವರ ಕಡೆಗೆ ಸ್ಕೂಟರ್‌ನಲ್ಲಿ ತೆರಳುತ್ತಿದ್ದಾಗ ಹಂಗಳೂರಿನ ಅಂಕದಕಟ್ಟೆ ಬಳಿ ರಸ್ತೆ ವಿಭಾಜಕಕ್ಕೆ ಢಿಕ್ಕಿ ಹೊಡೆದಿದ್ದಾರೆ. ಈ ವೇಳೆ ಸ್ಥಳೀಯರು ಗಾಯಾಳುವನ್ನು ಉಪಚರಿಸಿದ್ದರು. ವೈದ್ಯರ ಸಲಹೆಯಂತೆ ಉಡುಪಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಕುಂದಾಪುರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಮೂಡ್ಲಕಟ್ಟೆಯ ಐಎಂಜೆ ವಿಜ್ಞಾನ ಮತ್ತು ವಾಣಿಜ್ಯ ಸಂಸ್ಥೆಯ (ಐಎಂಜೆಐಎಸ್‌ಸಿ) ತೃತೀಯ ಬಿಬಿಎ ವಿದ್ಯಾರ್ಥಿ ಅಬ್ದುಲ್ ಮಲ್ಲಿಕ್ ಅವರು, ಉಡುಪಿಯ ತೆಂಕನಿಡಿಯೂರಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸೆ.5ರಂದು ನಡೆದ ಮಂಗಳೂರು ವಿಶ್ವವಿದ್ಯಾಲಯ ಅಂತರ ಕಾಲೇಜು ಕರಾಟೆ ಚಾಂಪಿಯನ್‌ಶಿಪ್‌ನಲ್ಲಿ ಪುರುಷರ ಕುಮಿಟೆ – 67 ಕೆಜಿ ವಿಭಾಗದಲ್ಲಿ ಬೆಳ್ಳಿ ಪದಕವನ್ನು ಗೆದ್ದುಕೊಂಡಿದ್ದಾರೆ. ಅತ್ಯಂತ ಪೈಪೋಟಿಯಿಂದ ಕೂಡಿದ್ದ ಈ ಚಾಂಪಿಯನ್‌ಶಿಪ್‌ನಲ್ಲಿ ಅಬ್ದುಲ್ ಮಲ್ಲಿಕ್ ಅವರು ಪ್ರಭಾವಶಾಲಿ ಪ್ರದರ್ಶನ ನೀಡಿ ರನ್ನರ್-ಅಪ್ ಆಗಿ ಹೊರಹೊಮ್ಮಿದ್ದಾರೆ. ಅವರ ಈ ಸಾಧನೆ ಸಂಸ್ಥೆಗೆ ಕೀರ್ತಿ ತಂದಿದ್ದು, ಕ್ರೀಡಾ ಕ್ಷೇತ್ರದಲ್ಲಿನ ಅವರ ಸಮರ್ಪಣಾ ಭಾವವನ್ನು ಎತ್ತಿ ತೋರಿಸಿದೆ. ಅಬ್ದುಲ್ ಮಲ್ಲಿಕ್ ಅವರ ಈ ಸಾಧನೆಗಾಗಿ ಐಎಂಜೆಐಎಸ್‌ಸಿ ಸಂಸ್ಥೆಯ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳು ಅಭಿನಂದನೆ ಸಲ್ಲಿಸಿ, ಅವರ ಕ್ರೀಡಾ ವೃತ್ತಿ ಜೀವನದಲ್ಲಿ ಮತ್ತಷ್ಟು ಯಶಸ್ಸು ಗಳಿಸಲಿ ಎಂದು ಹಾರೈಸಿದ್ದಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ನಾಯ್ಕನಕಟ್ಟೆ ಹಾಲು ಉತ್ಪಾದಕರ ಸಹಕಾರ ಸಂಘದ 2025-26ನೇ ಸಾಲಿನ ವಾರ್ಷಿಕ ಸರ್ವ ಸದಸ್ಯರ ಸಾಮಾನ್ಯ ಸಭೆಯು ಶ್ರೀ ಮಹಾಗಣಪತಿ ಸಭಾಭವನ ಮಟ್ನಕಟ್ಟೆಯಲ್ಲಿ ಜರಗಿತು. ಸಂಘದ ಅಧ್ಯಕ್ಷರಾದ ಸುಂದರ ಆರ್. ಕೊಠಾರಿ ಅವರು ಅಧ್ಯಕ್ಷತೆಯನ್ನು ವಹಿಸಿ, ಹಾಲುಗಳ ಗುಣಮಟ್ಟ ಹಾಗೂ ಸುಚಿತ್ವದ ಬಗ್ಗೆ ವಿವರವಾಗಿ ಹೇಳುವುದರೊಂದಿಗೆ ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚು ಹಾಲು ಪೂರೈಸುವಲ್ಲಿ ಸದಸ್ಯರು ಸಹಕರಿಸುವಂತೆ ತನ್ನ ಅಧ್ಯಕ್ಷೀಯ ನುಡಿ ನುಡಿದರು. ದ.ಕ ಹಾಲು ಒಕ್ಕೂಟದ ನಿರ್ದೇಶಕರಾದ ಎಸ್. ಪ್ರಕಾಶ್ಚಂದ್ರ ಶೆಟ್ಟಿ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದರು. ವಿಸ್ತರಣಾಧಿಕಾರಿಗಳಾದ ವಾಸುದೇವ ಪುರಾಣಿಕ ಇವರು ಒಕ್ಕೂಟದಿಂದ ರೈತರಿಗೆ ದೊರೆಯುವ ಸೌಲಭ್ಯಗಳ ಬಗ್ಗೆ ವಿವರಿಸಿ, ಅದರ ಪ್ರಯೋಜನವನ್ನು ಹೆಚ್ಚು ಹೈನುಗಾರರು ಪಡೆಯಬೇಕು ಎಂದರು. ಸಂಘದ ನಿರ್ದೇಶಕರುಗಳಾದ ಗೋಪಾಲ ಗಾಣಿಗ, ರಾಮ ಪೂಜಾರಿ, ವಿಜಯಾ ಪ್ರಭು, ಸವಿತಾ ದೇವಡಿಗ, ಮುತ್ತು ದೇವಾಡಿಗ, ಕೃಷ್ಣಿ ದೇವಾಡಿಗ, ಸುಶೀಲ ದೇವಾಡಿಗ, ಭಾಗೀರಥಿ ಪೂಜಾರಿ, ಗೋವಿಂದು ಕೆ. ಸಭೆಯಲ್ಲಿ ಉಪಸ್ಥಿತರಿದ್ದರು. ವರಿಧಿ ವರ್ಷದಲ್ಲಿ ಸಂಘವು ರೂ.…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಇಲ್ಲಿನ ಕೋಟ ಸಹಕಾರಿ ವ್ಯವಸಾಯಕ ಸಂಘ ಕೋಟ ಇದರ 99ನೇ ವಾರ್ಷಿಕ ಸರ್ವ ಸದಸ್ಯರ ಸಾಮಾನ್ಯ ಸಭೆಯು ಕೋಟದ ವಿವೇಕ ಪದವಿ ಪೂರ್ವ ಕಾಲೇಜಿನ  ಮಹಾತ್ಮಾ ಗಾಂಧಿ ಸಭಾ ಭವನದಲ್ಲಿ ಜರಗಿತು. ಸಂಘದ ಅಧ್ಯಕ್ಷ ಡಾ.ಕೆ.ಕೃಷ್ಣ ಕಾಂಚನ್ ಅಧ್ಯಕ್ಷತೆ ವಹಿಸಿ 2025-26ನೇ ಸಾಲಿನ ವರದಿಯನ್ನು ವಾಚಿಸಿ, ಸಂಘವು 13 ಶಾಖೆಗಳನ್ನು ಹೊಂದಿ ಉತ್ತಮ ಪ್ರಗತಿ ಸಾಧಿಸಿ, ವರದಿ ಸಾಲಿನಲ್ಲಿ ರೂ. 329.20 ಕೋಟಿ ಠೇವಣಿ, ರೂ. 263.57 ಕೋಟಿ ಸಾಲ ಹೊರಬಾಕಿಯಿದ್ದು, ರೂ. 2061.00 ಕೋಟಿ ವ್ಯವಹಾರ ಮಾಡಿ ರೂ.5.88 ಕೋಟಿ ನಿವ್ವಳ ಲಾಭ ಗಳಿಸಿದ್ದು, ಸಂಘದ ಸದಸ್ಯರಿಗೆ ಶೇ.16ರ ಡಿವಿಡೆಂಡ್ ಘೋಷಿಸಿರುವುದಾಗಿ ಸಭೆಗೆ ತಿಳಿಸಿದರು. ಸಭೆಯಲ್ಲಿ 2026ನೇ ಸಾಲಿನ ಉಡುಪಿ ಜಿಲ್ಲಾ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿ ಪುರಸ್ಕೃತ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬೀಜಾಡಿ(ಪಡು) ಇಲ್ಲಿನ ಮುಖ್ಯ ಶಿಕ್ಷಕಿಯಾದ ಪಾರ್ವತಿ ಎಮ್, ಶ್ರೀ ಗುರುಭ್ಯೋ ನಮಃ ಪುರಸ್ಕೃತ ನರೇಂದ್ರ ಕುಮಾರ್, 2026ನೇ ಸಾಲಿನ ಆದರ್ಶ ಶಿಕ್ಷಕ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಹಾಗೂ ಎಕ್ಸ್‌ಲೆಂಟ್ ಪದವಿ ಪೂರ್ವ ಕಾಲೇಜು ಕುಂದಾಪುರ ಇವರ ಆಶ್ರಯದಲ್ಲಿ ನಡೆದ ಕುಂದಾಪುರ ತಾಲೂಕು ಮಟ್ಟದ  ಬಾಲಕ – ಬಾಲಕಿಯರ ವಾಲಿಬಾಲ್ ಪಂದ್ಯಾವಳಿಯಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ಬಾಲಕಿಯರ ತಂಡವು ಅತ್ಯುತ್ತಮ ಕ್ರೀಡಾ ಪ್ರದರ್ಶನ ನೀಡಿ ರನ್ನರ್ ಅಪ್ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಸಂಜನಾ, ಸನ್ವಿತಾ ಹಾಗೂ ದಿವ್ಯ ಮೂವರು ವಿದ್ಯಾರ್ಥಿನಿಯರು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ವಾಲಿಬಾಲ್ ನಲ್ಲಿ ಸಾಧನೆಗೈದ ವಿದ್ಯಾರ್ಥಿನಿಯರೊಂದಿಗೆ ಕಾಲೇಜಿನ ಪ್ರಾಂಶುಪಾಲರಾದ  ಸಂದೀಪ್ ಗಾಣಿಗ, ಉಪ ಪ್ರಾಂಶುಪಾಲರಾದ ಸುಜೇಯ್ ಕೋಟೆಗಾರ್, ವಿದ್ಯಾರ್ಥಿಗಳನ್ನು ತರಬೇತಿಗೊಳಿಸಿದ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರಾಘವೇಂದ್ರ ಗಾಣಿಗ ಹಾಗೂ ದೈಹಿಕ ಶಿಕ್ಷಣ ನಿರ್ದೇಶಕ ಕೃಷ್ಣ  ಉಪಸ್ಥಿತರಿದ್ದಾರೆ. ಕ್ರೀಡಾ ಸಾಧನೆಗೈದ ವಿದ್ಯಾರ್ಥಿನಿಯರನ್ನು ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ  – ಬೋಧಕೇತರ ಸಿಬ್ಬಂದಿ ಪ್ರಶಂಸಿಸಿದ್ದಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕತಾರ್: ಪೀಳಿಗೆಗಳನ್ನು ಮಂತ್ರಮುಗ್ಧಗೊಳಿಸಿದ, ಪ್ರತಿಯೊಬ್ಬರ ಹೃದಯಗಳಲ್ಲಿ ಸದಾ ಜೀವಂತವಾಗಿರುವ ಭಾರತದ ಗಾನ ಕೋಗಿಲೆ, ಗಾನ ಗಂಧರ್ವೆ ಶ್ರೀಮತಿ ಎಸ್. ಜಾನಕಿ ಅವರ ಸವಿನೆನಪಿಗಾಗಿ ಭಾರತೀಯ ಸಾಂಸ್ಕೃತಿಕ ಕೇಂದ್ರ (ಐಸಿಸಿ) ಕತಾರ್, ಭಾರತೀಯ ರಾಯಭಾರ ಕಚೇರಿಯ ಸಹಯೋಗದೊಂದಿಗೆ ಅಶೋಕ ಸಭಾಂಗಣದಲ್ಲಿ ‘ಜಾನಕಿ ಸ್ಮೃತಿ’ ಎಂಬ ಅದ್ದೂರಿ ಸಂಗೀತ ಸಂಜೆಯನ್ನು ಆಯೋಜಿಸಲಾಗಿತ್ತು. ‏ಈ ವಿಶೇಷ ಕಾರ್ಯಕ್ರಮದಲ್ಲಿ ಕತಾರ್ನ ಪ್ರಮುಖ ಕನ್ನಡ ಸಂಘಟನೆಯಾದ ಕರ್ನಾಟಕ ಸಂಘ ಕತಾರ್ ಅತ್ಯಂತ ಸಕ್ರಿಯವಾಗಿ ಭಾಗವಹಿಸಿ ಗಮನ ಸೆಳೆಯಿತು. ಭಾರತದ ನಾನಾ ಭಾಷೆಗಳಲ್ಲಿ ಗಾನಸುಧೆ ಹರಿಸಿದ್ದ ಎಸ್. ಜಾನಕಿ ಅವರ ಅಮರ ಗೀತೆಗಳಿಗೆ ಶ್ರದ್ಧಾಂಜಲಿ ಸಲ್ಲಿಸುವ ನಿಟ್ಟಿನಲ್ಲಿ ಕನ್ನಡ, ಹಿಂದಿ, ತಮಿಳು, ತೆಲುಗು ಹಾಗೂ ಮಲಯಾಳಂ ಭಾಷೆಗಳ ಜನಪ್ರಿಯ ಹಾಡುಗಳನ್ನು ಗಾಯಕರು ಪ್ರಸ್ತುತಪಡಿಸಿದರು. ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಕರ್ನಾಟಕ ಸಂಘ ಕತಾರ್ನ ಸದಸ್ಯರು ಮತ್ತು ಪ್ರತಿಭಾವಂತ ಗಾಯಕರು ಎಸ್. ಜಾನಕಿ ಅವರು ಹಾಡಿದ ಸದಾಹಸಿರು ಕನ್ನಡ ಗೀತೆಗಳ ಮಧುರ ಗಾಯನದ ಮೂಲಕ ನೆರೆದಿದ್ದ ಪ್ರೇಕ್ಷಕರನ್ನು ಮಂತ್ರಮುಗ್ಧಗೊಳಿಸಿದರು. ಸಭಾಂಗಣದಲ್ಲಿದ್ದ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ವಂದೇ ಮಾತರಂ ಕೇವಲ ಘೋಷವಾಕ್ಯವಲ್ಲ; ಅದು ನಮ್ಮ ದೇಶದ ಆತ್ಮ. ತಾಯ್ತಾಡಿನ ಮೇಲಿನ 2,13, ಗೌರವ ಹಾಗೂ ದೇಶಭಕ್ತಿಯ ಪ್ರತೀಕವಾಗಿದೆ. ವಂದೇಮಾತರಂಪಾದಯಾತ್ರೆಯ ಮೂಲಕ ದೇಶಪ್ರೇಮದ ಸಂದೇಶವನ್ನು ಹೆಚ್ಚಿನ ಜನರಿಗೆ ತಲುಪಿಸುವ ಕಾರ್ಯವಾಗಲಿ ಎಂದು ಕೇರಳದ ರಾಜ್ಯಸಭಾ ಸದಸ್ಯ ಸದಾನಂದ ಮಾಸ್ಟ‌ರ್ ಹೇಳಿದರು. ಅವರು ಕುಂದಾಪುರದಿಂದ ಸಾಸ್ತಾನದವರೆಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ 18 ಕಿ.ಮೀ. ದೂರದವರೆಗೆ ಕಾಲ್ನಡಿಗೆ ಜಾಥಾಗೆ ಸೋಮವಾರ ಇಲ್ಲಿನ ಹೊಸ ಬಸ್ ನಿಲ್ದಾಣ ಬಳಿ ಚಾಲನೆ ನೀಡಿ, ಬಳಿಕ ಶಾಸ್ತ್ರಿ ಸರ್ಕಲ್ ಬಳಿ ನಡೆದ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದರು. ರಾಷ್ಟ್ರೀಯ ವಿಚಾರಧಾರೆಯನ್ನು ಪ್ರತಿಪಾದಿಸುವ ರಾಷ್ಟ್ರೀಯ ಸ್ವಯಂಸೇವಕ ಸಂಘ, ಬಿಜೆಪಿ ಸೇರಿದಂತೆ ವಿವಿಧ ಸಂಘಟನೆಗಳು ಕೇರಳದಲ್ಲಿ ಕಾರ್ಯನಿರ್ವಹಿಸುತ್ತಿವೆ. ಈ ಪೈಪೋಟಿಯಲ್ಲಿ ರಾಷ್ಟ್ರೀಯ ವಿಚಾರಧಾರೆಗೆ ಮತ್ತಷ್ಟು ಬಲ ದೊರೆಯಲು ಎಲ್ಲರ ಸಹಕಾರ ಹಾಗೂ ಬೆಂಬಲ ಅಗತ್ಯವಿದೆ ಎಂದು ಮನವಿ ಮಾಡಿದರು. ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿ, ಕುಂದಾಪುರದಲ್ಲಿ ನಡೆಯುತ್ತಿರುವವಂದೇ ಮಾತರಂ ಜನಜಾಗೃತಿ ಪಾದಯಾತ್ರೆಗೆ ಅಪಾರ…

Read More