ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಕೋಟೇಶ್ವರ ಕಟ್ಕೆರೆಯಲ್ಲಿ ಕಾರು ಹಾಗೂ ಬೈಕಿನ ನಡುವೆ ನಡೆದ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟ ಘಟನೆ ಸೋಮವಾರ ಸಂಜೆ ನಡೆದಿದೆ. ಹೊಸನಗರ ತಾಲೂಕಿನ ಹುಂಚದ ಯುವಕ ಹರ್ಷ (35) ಮೃತ ದುರ್ದೈವಿ. ಹರ್ಷ ಹಾಗೂ ಸ್ನೇಹಿತರು ತನ್ನ ಕುಟುಂಬಿಕರ ಮದುವೆ ಕಾರ್ಯಕ್ರಮದಲ್ಲಿ ಭಾಗವಹಿಸಲು ಕಮಲಶಿಲೆಗೆ ಬಂದಿದ್ದರು. ಮದುವೆ ಮುಗಿಸಿ ಕೋಟೇಶ್ವರಕ್ಕೆ ತೆರಳಿ ಹಿಂದಿರುಗುವಾಗ ಈ ಘಟನೆ ನಡೆದಿದೆ.ಕೋಟೇಶ್ವರ ಹಾಲಾಡಿ ರಸ್ತೆಯ ಕಟ್ಕರೆ ಸಮೀಪ ತೆರಳುತ್ತಿದ್ದಾಗ ಓವರ್ಟೇಕ್ ಮಾಡುವ ಬರದಲ್ಲಿ ಮೊದಲು ಮುಂಭಾಗದಲ್ಲಿದ್ದ ಕಾರಿಗೆ ಬೈಕ್ ಡಿಕ್ಕಿಯಾಗಿದೆ. ಬಳಿಕ ಓವರ್ಟೇಕ್ ಮಾಡಿ ಅಭಿಮುಖವಾಗಿ ಬರುತ್ತಿದ್ದ ಕಾರಿಗೆ ಬೈಕ್ ಡಿಕ್ಕಿಹೊಡೆದಿದೆ ಎನ್ನಲಾಗಿದೆ. ಕಾರಿಗೆ ಬೈಕ್ ಡಿಕ್ಕಿಯಾಗಿ ಬೈಕ್ ಸವಾರ ಕೆಳಕ್ಕೆ ಬಿದ್ದಿದ್ದು, ಅಪಘಾತದ ತೀವ್ರತೆಗೆ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ಸ್ಥಳಕ್ಕೆ ಕುಂದಾಪುರ ಶಾಸಕ ಕಿರಣ್ ಕೊಡ್ಗಿ ಭೇಟಿ ನೀಡಿ ಘಟನೆಯ ಬಗ್ಗೆ ಮಾಹಿತಿ ಪಡೆದುಕೊಂಡರು. ಕುಂದಾಪುರ ನಗರ ಠಾಣೆಯ ಪೊಲೀಸ್ ನಿರೀಕ್ಷಕ ಜಯರಾಮ ಡಿ. ಗೌಡ, ಸಂಚಾರ ಠಾಣೆಯ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸಮಾಜಕ್ಕಾಗಿ ನಾವು ಒಗ್ಗಟ್ಟಾಗಿ ಮುನ್ನೆಡೆದಾಗ ಯಶಸ್ಸು ಸಾಧ್ಯವಾಗುತ್ತದೆ. ಸಮಾಜದ ಏಳ್ಗೆಯ ಬಗ್ಗೆ ಆಲೋಚನೆ ಮಾಡಬೇಕು. ಸಮಾಜದ ಪ್ರತಿಯೊಂದು ಮಗುವೂ ಕೂಡಾ ಉತ್ತಮ ಶಿಕ್ಷಣ ಪಡೆದು ಶಕ್ತಿಯಾಗಿ ಬೆಳೆಯಬೇಕು, ಸಹಕಾರ ಸಂಘದ ಮೂಲಕ ವೈದ್ಯಕೀಯ, ಇಂಜಿನಿಯರ್, ವ್ಯಾಸಂಗ ಮಾಡುವ ವಿದ್ಯಾರ್ಥಿಗಳಿಗೆ 25ಸಾವಿರ ಪ್ರೋತ್ಸಾಹಧನ ನೀಡುವ ಕಾರ್ಯಕ್ರಮ ರೂಪಿಸಬೇಕು, ನೀವು ಮುಂದೆ ಹೆಜ್ಜೆ ಇಡಿ, ಹಿಂದೆ ನಾನು ಇರುತ್ತೇನೆ ಎಂದು ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ ಪ್ರವರ್ತಕರಾದ ನಾಡೋಜ ಡಾ. ಜಿ. ಶಂಕರ್ ಹೇಳಿದರು. ಅವರು ಹೆಮ್ಮಾಡಿಯ ಮತ್ಸ್ಯಸೌಧದಲ್ಲಿ ನಡೆದ ಹೆಮ್ಮಾಡಿ ಮೀನುಗಾರರ ಪ್ರಾಥಮಿಕ ಸಹಕಾರಿ ಸಂಘ ನಿ., ಹೆಮ್ಮಾಡಿ ವತಿಯಿಂದ 2025-26ನೇ ಶೈಕ್ಷಣಿಕ ಸಾಲಿನಲ್ಲಿ ಅತ್ಯಧಿಕ ಅಂಕ ಗಳಿಸಿದ ಸದಸ್ಯರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಹಾಗೂ ವಿದ್ಯಾರ್ಥಿ ವೇತನ ವಿತರಣಾ ಕಾರ್ಯಕ್ರಮ ಉದ್ಘಾಟಿಸಿ, ಪ್ರತಿಭಾ ಪುರಸ್ಕಾರ ನೆರವೇರಿಸಿ ಮಾತನಾಡಿದರು. ನಾನು ಕೂಡಾ ಬಡತನದಿಂದ ಬೆಳೆದು ಬಂದವರ. ಬಡತನದ ಅರಿವು ನನಗೆ ಸ್ಪಷ್ಟವಾಗಿ ಗೊತ್ತಿದೆ. ಶಿಕ್ಷಣಕ್ಕೆ ಬಡತನ ಅಡ್ಡಿಯಾಗಬಾರದು.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಮಕ್ಕಳ ಪ್ರತಿಭೆ, ಆತ್ಮವಿಶ್ವಾಸ ಹಾಗೂ ಸೃಜನಶೀಲತೆಯನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಲಿಟಲ್ ರಾಕೆಟ್ಸ್ ವತಿಯಿಂದ ‘ರಾಕೆಟ್ಸ್ ಆನ್ ದಿ ರನ್ವೇʼ ಎಂಬ ವಿಶಿಷ್ಟ ಮಕ್ಕಳ ಫ್ಯಾಷನ್ ಶೋ ಕಾರ್ಯಕ್ರಮ ಇತ್ತೀಚಿಗೆ ಉಡುಪಿಯ ಒಸಿಯನ್ ಪಲ್೯ ನಲ್ಲಿ ಆಯೋಜಿಸಲಾಯಿತು. ಮೂರು ತಾಯಂದಿರಾದ ಬಬಿತಾ ಮಸ್ಕರೇನ್ಹಸ್, ವೈಷ್ಣವಿ ರಕ್ಷಿತ್ ಕುಂದರ್ ಹಾಗೂ ಡಾ. ಮೇಘಾ ಅಶ್ವತ್ ಶೆಟ್ಟಿ ಅವರ ಕನಸಿನ ಕೂಸಾಗಿ ರೂಪುಗೊಂಡಿರುವ ‘ಲಿಟಲ್ ರಾಕೆಟ್ಸ್’ ಮಕ್ಕಳ ಉಡುಪು ಬ್ರ್ಯಾಂಡ್, ಪ್ರತಿಯೊಂದು ಮಗುವಿಗೂ ಆರಾಮದಾಯಕ, ಆಕರ್ಷಕ ಹಾಗೂ ಆತ್ಮವಿಶ್ವಾಸವನ್ನು ಹೆಚ್ಚಿಸುವ ಉಡುಪುಗಳ ಹೊಂದಿರುವ ಮಳಿಗೆ ಲೋಕಾರ್ಪಣೆಗೊಂಡಿತು. ಕಾರ್ಯಕ್ರಮದಲ್ಲಿ ಪುಟಾಣಿಗಳು ವಿವಿಧ ಆಕರ್ಷಕ ಉಡುಪುಗಳನ್ನು ಧರಿಸಿ ರ್ಯಾಂಪ್ ಮೇಲೆ ಹೆಜ್ಜೆ ಹಾಕುವ ಮೂಲಕ ತಮ್ಮ ಪ್ರತಿಭೆ, ವ್ಯಕ್ತಿತ್ವ ಹಾಗೂ ಆತ್ಮವಿಶ್ವಾಸವನ್ನು ಅನಾವರಣಗೊಳಿಸಿದರು. ಮಳಿಗೆಯನ್ನು ಉದ್ಘಾಟಿಸಿದ ಗೀತಾನಂದ ಫೌಂಡೇಶನ್ ಟ್ರಸ್ಟಿ ಗೀತಾ ಎ ಕುಂದರ್ ಮಾತನಾಡಿ, ಕೇವಲ ಗೆಲುವು ಅಥವಾ ಸ್ಪರ್ಧೆಗೆ ಸೀಮಿತವಾಗದೆ, ಮಕ್ಕಳು ಧೈರ್ಯದಿಂದ ವೇದಿಕೆ ಏರುವುದು, ಸಂತೋಷದಿಂದ ತಮ್ಮನ್ನು ತಾವು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶಿರಿಯಾರ ಗ್ರಾಮ ಪಂಚಾಯತ್ನಲ್ಲಿ ನಡೆದ ಪ್ರಜಾ ಸೇವಾ ಆಂದೋಲನದ ಸಭೆ ಹಾಗೂ ಸಾರ್ವಜನಿಕ ಅಹವಾಲು ಸ್ವೀಕಾರ ಕಾರ್ಯಕ್ರಮವನ್ನು ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ. ಕಿರಣ್ ಕುಮಾರ್ ಕೊಡ್ಗಿ ಅವರು ಉದ್ಘಾಟಿಸಿದರು. ನಂತರ ಮಾತನಾಡಿ, ಪ್ರಜಾ ಸೇವಾ ಕಾರ್ಯಕ್ರಮ ಆರಂಭಗೊಂಡು ಎರಡು ತಿಂಗಳು ಕಳೆದರೂ, ಆಯಾ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಜನರ ಯಾವುದೇ ಸಮಸ್ಯೆಗಳು ಬಗೆಹರಿದಿಲ್ಲ ಎಂದು ಶಾಸಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಕಾರ್ಯಕ್ರಮ ಕೇವಲ ಘೋಷಣೆಗೆ ಸೀಮಿತವಾಗಬಾರದು. ಗ್ರಾಮ ಪಂಚಾಯತ್ ಮಟ್ಟದಲ್ಲಿ ಜನರು ಎದುರಿಸುತ್ತಿರುವ ಕುಡಿಯುವ ನೀರು, ರಸ್ತೆ, ವಿದ್ಯುತ್, ಪಡಿತರ, ಪಿಂಚಣಿ, ಆಸ್ತಿ ದಾಖಲೆ ಸೇರಿದಂತೆ ಮೂಲಭೂತ ಸಮಸ್ಯೆಗಳಿಗೆ ತಕ್ಷಣ ಪರಿಹಾರ ಸಿಗಬೇಕು. ಆದರೆ ಇದುವರೆಗೆ ಯಾವುದೇ ಗ್ರಾಮ ಪಂಚಾಯತ್ನಲ್ಲಿಯೂ ಗಮನಾರ್ಹ ಪ್ರಗತಿ ಕಂಡುಬಂದಿಲ್ಲ ಎಂದು ಹೇಳಿದರು. ಜನರಿಗೆ ಸ್ಪಂದಿಸದಿದ್ದರೆ ಇಂತಹ ಕಾರ್ಯಕ್ರಮಗಳಿಗೆ ಅರ್ಥವಿಲ್ಲ. ಪ್ರತಿ ಗ್ರಾಮ ಪಂಚಾಯತ್ನಲ್ಲಿ ಬಗೆಹರಿದ ಸಮಸ್ಯೆಗಳ ಕುರಿತು ಸ್ಪಷ್ಟ ವರದಿ ನೀಡಬೇಕು ಎಂದು ಅಧಿಕಾರಿಗಳಿಗೆ ಶಾಸಕರು ಸೂಚಿಸಿದರು.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಧಾರವಾಡದ ಜೆಎಸ್ಎಸ್ ವಿದ್ಯಾಸಂಸ್ಥೆ ವಿದ್ಯಾಗಿರಿಯಲ್ಲಿ ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ವತಿಯಿಂದ ನಡೆದ ರಾಜ್ಯಮಟ್ಟದ ಕುಸ್ತಿ ಸ್ಪರ್ಧೆಯಲ್ಲಿ ಉಡುಪಿ ಜಿಲ್ಲೆಯ ಕೋಟದ ವಿವೇಕ ಪ.ಪೂ. ಕಾಲೇಜಿನ ವಿದ್ಯಾರ್ಥಿ ದೃಶ್ಯ ಆರ್., 97 ಕೆ.ಜಿ ವಿಭಾಗದ ಕುಸ್ತಿ ಸ್ಪರ್ಧೆಯಲ್ಲಿ ರಾಜ್ಯಮಟ್ಟದಲ್ಲಿ ದ್ವಿತೀಯ ಸ್ಥಾನವನ್ನು ಗಳಿಸಿದರು. ವಿದ್ಯಾರ್ಥಿಯ ಸಾಧನೆಗೆ ವಿದ್ಯಾಸಂಸ್ಥೆಯ ಆಡಳಿತ ಮಂಡಳಿ ಹಾಗೂ ಕಾಲೇಜಿನ ಪ್ರಾಂಶುಪಾಲ ಉಪನ್ಯಾಸಕ ವೃಂದ ಅಭಿನಂದಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಶಾಲಾ ಶಿಕ್ಷಣ ಇಲಾಖೆ,(ಪದವಿಪೂರ್ವ)ದ.ಕ. ಹಾಗೂ ಆಳ್ವಾಸ್ ಪದವಿ ಪೂರ್ವ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ಸ್ವರಾಜ್ಯ ಮೈದಾನದಲ್ಲಿ ನಡೆದ ಪದವಿ ಪೂರ್ವ ಕಾಲೇಜುಗಳ ಜಿಲ್ಲಾ ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಆಳ್ವಾಸ್ ಪದವಿ ಪೂರ್ವ ಕಾಲೇಜು ಒಟ್ಟು 25 ಚಿನ್ನ, 16 ಬೆಳ್ಳಿ ಮತ್ತು 18 ಕಂಚಿನ ಪದಕಗಳೊಂದಿಗೆ 59 ಪದಕಗಳನ್ನು ಪಡೆದು ಬಾಲಕರ ವಿಭಾಗದಲ್ಲಿ 104 ಅಂಕ ಮತ್ತು ಬಾಲಕಿಯರ ವಿಭಾಗದಲ್ಲಿ 85 ಅಂಕ ಒಟ್ಟು 189 ಅಂಕದೊಂದಿಗೆ ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡಿತು. ಸಮಾರೋಪ ಸಮಾರಂಭದಲ್ಲಿ ಆಳ್ವಾಸ್ ಕಾಲೇಜಿನ ಪ್ರಾಂಶುಪಾಲ ಮೊಹಮ್ಮದ್ ಸದಾಕತ್, ಆಳ್ವಾಸ್ ದೈಹಿಕ ಶಿಕ್ಷಣ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ.ಮಧು ಜಿ ಆರ್, ಬೆಳ್ತಂಗಡಿ ಸರಕಾರಿ ಪದವಿ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಡಾ. ರಾಧಾಕೃಷ್ಣ, ಉಪನ್ಯಾಸಕರಾದ ಕುಮಾರ್, ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ನವೀನ್ ರೈ ಹಾಗೂ ಹರ್ಷಿತಾ ಶೆಟ್ಟಿ ಉಪಸ್ಥಿತರಿದ್ದರು. ಶಾಂತರಾಮ ರೈ ಕಾರ್ಯಕ್ರಮವನ್ನು ನಿರೂಪಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಪಂಚವರ್ಣ ಸಂಘಟನೆ ಪ್ರತಿ ಭಾನುವಾರ ಪರಿಸರಕ್ಕಾಗಿ ಸಮರ್ಪಿಸಿಕೊಂಡ ರೀತಿ ಅತ್ಯಂತ ಪ್ರಶಂಸನೀಯ ಎಂದು ಶ್ರೀ ಕೃಷ್ಣಪ್ರಸಾದ್ ಗ್ರೂಪ್ಸ್ ಮುಖ್ಯಸ್ಥ ಸಂಪತ್ ಕುಮಾರ್ ಶೆಟ್ಟಿ ಹೇಳಿದರು. ಅವರು ಭಾನುವಾರ ಪಂಚವರ್ಣ ಯುವಕ ಮಂಡಲ ಮತ್ತು ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲದ ನೇತೃತ್ವದಲ್ಲಿ ಗೀತಾನಂದ ಫೌಂಡೇಶನ್ ಮಣೂರು, ಕೋಟತಟ್ಟು ಗ್ರಾಮಪಂಚಾಯತ್, ಸಿಂಧೂರ ಸಂಜೀವಿನಿ ಒಕ್ಕೂಟ ಇವರುಗಳ ಸಹಯೋಗದೊಂದಿಗೆ ಕೋಟತಟ್ಟು ಪಡುಕರೆ ಬೀಚ್ ನಲ್ಲಿ 325ನೇ ವಾರದ ಪರಿಸರಸ್ನೇಹಿ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ ನೀಡಿ ಭಾನುವಾರ ಬಂತ್ತೆಂದರೆ ನಾವುಗಳು ಬಿಡುವು ಮಾಡಿಕೊಳ್ಳವ ವಾರವಾಗಿ ಪರಿಣಮಿಸಿದರೆ ಪಂಚವರ್ಣ ಸಂಘಟನೆ ನಿತ್ಯನಿರಂತರವಾಗಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಸಮಾಜಕ್ಕೆ ಮಾದರಿ ಸಂಘಟನೆಯಾಗಿ ರೂಪುಗೊಂಡಿದೆ ಎಂದರು. ಕೆ.ಎಂ.ಎಫ್ ನಿರ್ದೇಶಕ ಶಿವಮೂರ್ತಿ ಉಪಾಧ್ಯಾ ಮಾತನಾಡಿ, ಮುಂದಿನ ತಲೆಮಾರಿಗಾಗಿ ಪ್ರಕೃತಿಯನ್ನು ಉಳಿಸಿ ಬೆಳೆಸುವ ಕಾಯಕ ನಮ್ಮಿಂದಾಗಲಿ ಪ್ರಕೃತಿ ಮಲಿನಗೊಳಿಸುವ ಕಾರ್ಯ ಇನ್ನಾದರೂ ನಿಲ್ಲಲ್ಲಿ ಎಂದರು. ಈ ಸಂದರ್ಭದಲ್ಲಿ ಸಮುದ್ರತಟದಿಂದ ಸುಮಾರು ಪ್ಲಾಸ್ಟಿಕ್ ತ್ಯಾಜ್ಯ,ಮದ್ಯದ ಬಾಟಲಿ ಸೇರಿದಂತೆ ಅನೇಕ ರೀತಿಯ ತ್ಯಾಜ್ಯಗಳನ್ನು ತೆರವುಗೊಳಿಸಲಾಯಿತು.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ನಗರದ ಶ್ರೀ ಸಾಯಿ ಸೆಂಟರ್ನ ಮೊದಲ ಮಹಡಿಯಲ್ಲಿ ‘ರೋಷನ್ ಹೋಮಿಯೋಪತಿ’ ನೂತನ ಕ್ಲಿನಿಕ್ ಉದ್ಘಾಟನೆ ಹಾಗೂ ಆಶೀರ್ವಚನ ಸಮಾರಂಭ ಭಾನುವಾರ ಜರುಗಿತು. ಡಾ. ರೋಷನ್ ಪಾಯಸ್ ಅವರ ತಾಯಿ ಐ.ವಿ ಪಾಯಸ್ ಅವರು ನೂತನ ಕ್ಲಿನಿಕ್ನ್ನು ಉದ್ಘಾಟಿಸಿದರು. ಕುಂದಾಪುರದ ಸಮೂಹ ಚರ್ಚುಗಳ ಧರ್ಮಗುರು ಫಾ. ಪೌಲ್ ರೇಗೊ ಅವರು ಆಶೀರ್ವಚನ ನೀಡಿ, “ಮನುಷ್ಯನ ಆರೋಗ್ಯದ ದೃಷ್ಟಿಯಿಂದ ಹೋಮಿಯೋಪತಿ ವೈದ್ಯಕೀಯ ಪದ್ಧತಿ ಅತೀ ಶ್ರೇಷ್ಠವಾದುದು. ಹೋಮಿಯೋಪತಿ ನಿಧಾನವಾದರೂ ಅತೀ ಪರಿಣಾಮಕಾರಿ ವೈದ್ಯಕೀಯ ಪದ್ಧತಿಯಾಗಿದ್ದು, ಡಾ. ನೇಹಾ ಪಾಯಸ್ ಮೂಲಕ ಕುಂದಾಪುರದ ಜನತೆಗೆ ಉತ್ತಮ ಸೇವೆ ದೊರೆಯಲಿದೆ. ಡಾ. ರೋಷನ್ ಕುಟುಂಬ ಹೋಮಿಯೋಪತಿ ಮೂಲಕ ಜನರ ಆರೋಗ್ಯ ಸುಧಾರಿಸುವಲ್ಲಿ ಯಶಸ್ವಿಯಾಗಲಿ” ಎಂದು ಶುಭ ಹಾರೈಸಿದರು. ಈ ವೇಳೆ ಕುಂದಾಪುರ ಖ್ಯಾತ ವೈದ್ಯ ಡಾ. ಉತ್ತಮ್ ಕುಮಾರ್ ಶೆಟ್ಟಿ ಮಾತನಾಡಿ, ಹೋಮಿಯೋಪತಿ ವೈದ್ಯಕೀಯ ಪದ್ಧತಿ ಬೆಳೆದು ಬಂದ ದಾರಿ, ಕುಂದಾಪುರದಲ್ಲಿ ಆರಂಭದ ದಿನಗಳ ಅನುಭವಗಳು ಹಾಗೂ ವೈದ್ಯ ಮತ್ತು ರೋಗಿಗಳ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಕ್ರೀಡೆಗಳು ಕೇವಲ ಮನರಂಜನೆಗೆ ಸೀಮಿತವಾಗದೆ, ಶಿಸ್ತು, ಆತ್ಮವಿಶ್ವಾಸ, ಪರಸ್ಪರ ಸಹಕಾರ ಹಾಗೂ ನಾಯಕತ್ವ ಗುಣಗಳನ್ನು ಬೆಳೆಸುವಲ್ಲಿ ಮಹತ್ವದ ಪಾತ್ರ ವಹಿಸುತ್ತವೆ. ಗ್ರಾಮೀಣ ಜನರಲ್ಲಿ ಇಂತಹ ಗುಣಗಳನ್ನು ಬೆಳೆಸುವ ನಿಟ್ಟಿನಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕ್ರೀಡೋತ್ಸವ ಮಹತ್ವದ ವೇದಿಕೆಯಾಗಿದೆ. ಇಂತಹ ಕ್ರೀಡಾಕೂಟಗಳು ಗ್ರಾಮೀಣ ಜನರ ನಡುವೆ ಸೌಹಾರ್ದತೆ ಮತ್ತು ಒಗ್ಗಟ್ಟನ್ನು ಬಲಪಡಿಸುವುದರ ಜೊತೆಗೆ ಆರೋಗ್ಯಕರ ಸಮಾಜ ನಿರ್ಮಾಣಕ್ಕೆ ಪೂರಕವಾಗಿದೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬೈಂದೂರು ತಾಲೂಕು ಯೋಜನಾಧಿಕಾರಿ ಸಂಜಯ ನಾಯ್ಕ್ ಹೇಳಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಬೈಂದೂರು ತ್ರಾಸಿ ವಲಯ ಇದರ ವತಿಯಿಂದ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ಕ್ರೀಡಾಂಗಣದಲ್ಲಿ ಭಾನುವಾರ ಜರಗಿದ ತ್ರಾಸಿ ವಲಯದ ಸ್ವಸಹಾಯ ಸಂಘಗಳ ಒಕ್ಕೂಟಗಳ ಕ್ರೀಡೋತ್ಸವವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಜಿಲ್ಲಾ ಜನಜಾಗೃತಿ ವೇದಿಕೆ ಸದಸ್ಯ ಸುಧಾಕರ ಆಚಾರ್ಯ ತ್ರಾಸಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಸಾಮೂಹಿಕ ಶ್ರೀ ಸತ್ಯನಾರಾಯಣ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಗೆಳೆಯರ ಬಳಗ ಕಾರ್ಕಡ – ಸಾಲಿಗ್ರಾಮ ಇವರ ನೇತೃತ್ವದಲ್ಲಿ ಹಾಗೂ ಕಾರ್ಕಡ ಗ್ರಾಮಸ್ಥರಿಂದ ಸಂಗ್ರಹಿಸಿದ ಎರಡು ಲೋಡು ಒಣಮೇವುನ್ನು ಆರೂರು ಬೆಳ್ಮಾರಿನಲ್ಲಿರುವ ಪುಣ್ಯಕೋಟಿ ಗೋ ಸೇವಾ ಕೇಂದ್ರಕ್ಕೆ ತೆರಳಿ ಗೋ ಪೂಜೆ ನೆರವೇರಿಸಿ ಗೋಗ್ರಾಸ ನೀಡಿ, ಹಸ್ತಾಂತರಿಸಲಾಯಿತು. ಇದೇ ವೇಳೆ ಸಾಲಿಗ್ರಾಮ ಶ್ರೀ ಗುರುನರಸಿಂಹ ದೇಗುಲದ ಗೋಶಾಲೆಗೆ ಒಣ ಮೇವು ನೀಡಲಾಯಿತು. ಕೊಡುಗೆಯನ್ನು ಸ್ವೀಕರಿಸಿ, ಕೃತಜ್ಞತೆ ಸಲ್ಲಿಸಿದ ಗೋಶಾಲೆಯ ನಿರ್ದೇಶಕರಾದ ಶ್ರೀನಿವಾಸ ಇವರು ಬಳಗದ ಅಧ್ಯಕ್ಷ ಕೆ. ತಾರಾನಾಥ ಹೊಳ್ಳರ ಸಮಾಜ ಸೇವೆ ಹಾಗೂ ಗೆಳೆಯರ ಬಳಗದ ಸದಸ್ಯರಿಗೆ ಗೋವಿನ ಮೇಲಿರುವ ಪ್ರೀತಿ – ಭಕ್ತಿ ಅವರ ಈ ಸೇವೆಗೆ ಸಾಕ್ಷಿ. ಹುಲ್ಲು ನೀಡಿದ ಹಾಗೂ ಈ ಬಗ್ಗೆ ಕಾರ್ಯಾಚರಿಸಿದ ಗೆಳೆಯರ ಬಳಗದ ಎಲ್ಲ ಸದಸ್ಯರಿಗೂ ಗೋಮಾತೆ ಅನುಗ್ರಹಿಸಲಿ ಎಂದು ಹರಸಿದರು. ಈ ಸಂದರ್ಭದಲ್ಲಿ ಗೆಳೆಯರ ಬಳಗದ ಉಪಾಧ್ಯಕ್ಷ ಕೆ. ಶಶಿಧರ ಮಯ್ಯ, ಜತೆ ಕಾರ್ಯದರ್ಶಿ ಕೆ. ಜಗದೀಶ ಆಚಾರ್ಯ, ಕೆ. ಶ್ರೀಪತಿ ಆಚಾರ್ಯ, ಕೆ.ಶೇಖರ, ಕೆ. ಉದಯ…
