Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಾಲೂಕಿನ ಹಳಗೇರಿಯ ಶ್ರೀ ಕ್ಷೇತ್ರ ತೆಂಕಬೆಟ್ಟು ಶ್ರೀ ಕಾಲಭೈರವ ದೇವಸ್ಥಾನದಲ್ಲಿ ತೃತೀಯ ವರ್ಷದ ವರ್ಧಂತ್ಯುತ್ಸವ, ಚಿತ್ರಕೂಟ ಸಹಿತ ಶ್ರೀ ನಾಗದೇವರ ಹಾಗೂ ಶಿರಸಿ ಶ್ರೀ ಮಾರಿಕಾಂಬ ದೇವಿಯ ಪುನರ್ ಪ್ರತಿಷ್ಠಾ- ವರ್ಧಂತ್ಯುತ್ಸವ -ಕಲಶೋತ್ಸವ, ಶ್ರೀ ಕಾಲಬೈರವ ಸೇವಾ ಸಂಘದ 12ನೇ ವಾರ್ಷಿಕೋತ್ಸವ, ಶ್ರೀ ಶಿವಗೋರಕ್ಷನಾಥ ಸೇವಾ ಪ್ರಶಸ್ತಿ ಪ್ರದಾನ ಸಮಾರಂಭವು ಜ.26 ರಿಂದ ಜ.27ರ ತನಕ ನಡೆಯಲಿದೆ. ಜ. 26ರ ಬೆಳಿಗ್ಗೆ 9.30ರಿಂದ ಚಿತ್ರಕೂಟ ಸಹಿತ ಶ್ರೀ ನಾಗದೇವರಿಗೆ ಪಂಚವಿಂಶತಿ ಕಲಶ, ಅಧಿವಾಸ ಹೋಮ, ಕಲಶಾಭಿಷೇಕ, ಮಹಾ ಪೂಜೆ, ಶ್ರೀ ಮಾರಿಕಾಂಬಾ ದೇವಿಯ ಪ್ರತಿಷ್ಠಾ ವರ್ಧಂತ್ಯುತ್ಸವ, ನವಕ ಪ್ರಧಾನ ಕಲಶಾಭಿಷೇಕ, ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ಹಾಗೂ ಸಂಜೆ 6.00ರಿಂದ ವಿವಿಧ ಭಜನಾ ತಂಡಗಳಿಂದ ಭಜನಾ ಸಂಕಿರ್ತನೆ ನಡೆಯಲಿದೆ. ಜ.27ರ ಬೆಳಿಗ್ಗೆ 9.30ರಿಂದ ಶ್ರೀ ಕಾಲಭೈರವ ದೇವರಿಗೆ ತೃತೀಯ ವರ್ಧಂತ್ಯುತ್ಸವದ ಪ್ರಯುಕ್ತ ಅಷ್ಠೋತ್ತರ ಕಲಶ, ತತ್ವ ಹೋಮ, ಅಧಿವಾಸ ಹೋಮ, ವಿಶೇಷ ಪಂಚಾಮೃತಾಭಿಷೇಕ, ಕಲಾಶಭಿಷೇಕ,  ರೂಟ್‌…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಪ್ರಸಕ್ತ ಸಾಲಿನಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಪರಿಶಿಷ್ಟ ಜಾತಿಯ ಉಪ ಯೋಜನೆಯಡಿ ಯುವಜನರನ್ನು ಸ್ವಾವಲಂಬಿಯಾಗಲು ಉತ್ತೇಜಿಸುವ ನಿಟ್ಟಿನಲ್ಲಿ ಪರಿಶಿಷ್ಟ ಜಾತಿಯ ಯುವಕರಿಗೆ 45 ದಿನಗಳ ಉಚಿತ ಜಿಮ್ ತರಬೇತಿ ಶಿಬಿರವನ್ನು ಫೆಬ್ರವರಿ 1 ರಿಂದ ಮಾರ್ಚ್ 17 ರ ವರೆಗೆ ಬೆಂಗಳೂರಿನ ಶ್ರೀ ಕಂಠೀರವ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ. ಆಸಕ್ತ ಎಸ್.ಎಸ್.ಎಲ್.ಸಿ ಉತ್ತೀರ್ಣರಾದ 18 ರಿಂದ 35 ವರ್ಷದೊಳಗಿನ ಪರಿಶಿಷ್ಟ ಜಾತಿಯ ಅರ್ಹ ಯುವಕರು ಪ್ರಸ್ತಾವನೆಗಳನ್ನು ಸಲ್ಲಿಸಲು ಜನವರಿ 30 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ: 155265 ಅಥವಾ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಉಡುಪಿ ದೂ.ಸಂಖ್ಯೆ: 0820-2521324, ಮೊ.ನಂ: 9845432303 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಇಲಾಖೆಯ ಕಚೇರಿ ಪ್ರಕಟಣೆ ತಿಳಿಸಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೆಂಗಳೂರು: ಕುಂದಾಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿನ ನದಿ ದಂಡೆಯ ಸಂರಕ್ಷಣೆ ಮತ್ತು ತೋಡು ಬದಿಕಟ್ಟು ಕಾಮಗಾರಿಗಳಿಗೆ ಅನುದಾನದ ಮಂಜೂರಾತಿಗೆ ಅದರಲ್ಲೂ ಮುಖ್ಯವಾಗಿ ಕುಂಭಾಶಿ ಪರಿಶಿಷ್ಟ ಜಾತಿಯವರ ಕಾಲೋನಿಯ ತೋಡಿನ ಬದಿಕಟ್ಟು ಕಾಮಗಾರಿಗೆ ಅನುದಾನ ಮಂಜೂರಾತಿ ಮಾಡಲು ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ. ಕಿರಣ್ ಕುಮಾರ್ ಕೊಡ್ಗಿ ಅವರು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನದ ಸಚಿವರಾದ ಎನ್.ಎಸ್ ಬೋಸರಾಜು ಅವರನ್ನು ಬೆಂಗಳೂರಿನ ಕಚೇರಿಯಲ್ಲಿ ಭೇಟಿ ಮಾಡಿ ಪ್ರಸ್ತಾವನೆ ನೀಡಿದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಹಿಂದೂ ಸಂಗಮ ಆಯೋಜನ ಸಮಿತಿ ಕುಂದಾಪುರ ಇವರ ನೇತೃತ್ವದಲ್ಲಿ ಫೆಬ್ರವರಿ 01 ರಂದು ಕುಂದಾಪುರ ನಗರದಲ್ಲಿ ಬೃಹತ್ ಹಿಂದೂ ಸಂಗಮ ಕಾರ್ಯಕ್ರಮ ಆಯೋಜಿಸಲಾಗಿದ್ದು, ಇದರ ಪೂರ್ವಭಾವಿ ಸಭೆಯು ಕುಂದಾಪುರದ ಭಾರತೀಯ ಜನತಾ ಪಾರ್ಟಿಯ ಕಾರ್ಯಾಲಯದಲ್ಲಿ ನೆರವೇರಿತು. ಪೂರ್ವಭಾವಿ ಸಭೆಯಲ್ಲಿ ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ. ಕಿರಣ್ ಕುಮಾರ್ ಕೊಡ್ಗಿ ಮಾತನಾಡಿ, ಹಿಂದೂ ಜಾಗೃತಿ ಸಂಗಮ ದೇಶದಾದ್ಯಂತ ನಡೆಯುತ್ತಿದೆ. ಹಿಂದೂ ಸಮಾಜ ಬಾಂಧವರನ್ನು ಒಗ್ಗೂಡಿಸುವ ಜೊತೆಗೆ ಜಾಗ್ರತ ಸಮಾಜಕ್ಕೆ ಮುನ್ನಡಿ ಇಡುವ ದೃಷ್ಟಿಯಿಂದ ಎಲ್ಲರೂ ಒಂದೇ ಮನಸ್ಸಿನಿಂದ ಆಗಮಿಸಿ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಶಾಸಕರು ಕರೆ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಕುಂದಾಪುರ ಮಂಡಲ ಅಧ್ಯಕ್ಷ ಸುರೇಶ್ ಶೆಟ್ಟಿ ಗೋಪಾಡಿ ಮಾತನಾಡಿ, ಪಕ್ಷದ ಹಾಗೂ ಅನನ್ಯ ಜವಾಬ್ದಾರಿಯ ಪ್ರಮುಖರು ಮತ್ತು ಕಾರ್ಯಕರ್ತರು ಹಿಂದೂ ಸಂಗಮ ಕಾರ್ಯಕ್ರಮದಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ತಿಳಿಸಿದ್ದಾರೆ. ಹಿಂದೂ ಸಂಗಮ ಆಯೋಜನ ಸಮಿತಿ ಕುಂದಾಪುರ ತಾಲೂಕು ಸಂಯೋಜಿಕಿ ಸ್ವರ್ಣ ಕುಂದಾಪುರ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ರೋಟರಿ ಕ್ಲಬ್ ಬ್ರಹ್ಮಾವರ, ರೋಟರ್ಯಾಕ್ಟ್ ಕ್ಲಬ್ ಬ್ರಹ್ಮಾವರ, ಇಂಟರ್ಯಾಕ್ಟ್ ಕ್ಲಬ್, ಸರಕಾರಿ ಪ್ರೌಢ ಶಾಲೆ ಕರ್ಜೆ, ಜೇಸಿಐ ಕಲ್ಯಾಣಪುರ, ಸೀನಿಯರ್ ಛೇಂಬರ್ ಇಂಟರ್‌ನ್ಯಾಷನಲ್ ಉಡುಪಿ ಟೆಂಪಲ್ ಸಿಟಿ ಲೀಜನ್ ಇವರ ಸಂಯುಕ್ತ ಆಶ್ರಯದಲ್ಲಿ ಪರೀಕ್ಷೆ ಎದುರಿಸುವುದು ಹೇಗೆ? ಹಾಗೂ ಆರೋಗ್ಯ ಮಾಹಿತಿ ಕಾರ್ಯಕ್ರಮ ಸರಕಾರಿ ಪ್ರೌಢಶಾಲೆ ಕರ್ಜೆಯ ಶಾಲಾ ಸಭಾಂಗಣದಲ್ಲಿ ಜರುಗಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಶಾಲಾ ಮುಖ್ಯೋಪಾಧ್ಯಾಯಿನಿ ಲಕ್ಷಾಧಿನಿ ಉದ್ಘಾಟಿಸಿ, ಶುಭ ಹಾರೈಸಿದರು. ಸಭಾಧ್ಯಕ್ಷತೆಯನ್ನು ರೋಟರಿ ಕ್ಲಬ್ ಬ್ರಹ್ಮಾವರದ ಅಧ್ಯಕ್ಷರಾದ ಸತೀಶ್ ಶೆಟ್ಟಿ ಅವರು ವಹಿಸಿ ಸ್ವಾಗತಿಸಿದರು. ಸಂಪನ್ಮೂಲ ವ್ಯಕ್ತಿ ಜೇಸಿ ತರಬೇತುದಾರ ನರೇಂದ್ರ ಕುಮಾರ್ ಕೋಟರವರು ಪರೀಕ್ಷೆ ಎದುರಿಸುವುದು ಹೇಗೆ? ತರಬೇತಿಯನ್ನು ನಡೆಸಿಕೊಟ್ಟರು. ಕರ್ಜೆ ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯಾಧಿಕಾರಿ ಶ್ರೀಮತಿ ಪ್ರೇಮಾರವರು ವಿದ್ಯಾರ್ಥಿಗಳಲ್ಲಿ ಆರೋಗ್ಯ ಮತ್ತು ಶುಚಿತ್ವದ ಬಗ್ಗೆ ಮಾಹಿತಿ ನೀಡಿದರು. ವೇದಿಕೆಯಲ್ಲಿ ಸೀನಿಯರ್ ಛೇಂಬರ್ ಉಡುಪಿ ಟೆಂಪಲ್ ಸಿಟಿ ಲೀಜನ್‌ನ ಅಧ್ಯಕ್ಷ ಶಿವಾನಂದ ಶೆಟ್ಟಿಗಾರ್, ಜೇಸಿಐ ಕಲ್ಯಾಣಪುರದ ಅಧ್ಯಕ್ಷ ವಿರೇನ್ ವಿ.…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ. ಗಂಗೊಳ್ಳಿ: ಇಲ್ಲಿನ ಸರಸ್ವತಿ ವಿದ್ಯಾಲಯ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳ ತಾಯಂದಿರು ಸ್ವಯಂ ಅಡುಗೆಯನ್ನು ತಯಾರಿಸಿ  ತಮ್ಮ ಮಕ್ಕಳಿಗೆ ಶಾಲೆಯಲ್ಲಿ ಬಂದು ಕೈತುತ್ತು ನೀಡಿ ಉಣಿಸುವ “ಅಮೃತ ” ಕೈತುತ್ತಿನ ಮಾಧುರ್ಯ ಎನ್ನುವ ವಿಶಿಷ್ಟವಾದ ಕಾರ್ಯಕ್ರಮ ಇತ್ತೀಚೆಗೆ ಜರುಗಿತು.  ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದ ನಿವೃತ್ತ ಮುಖ್ಯೋಪಾಧ್ಯಾಯನಿ ಸುಮನ ಪಡಿಯಾರ್ ಮಾತನಾಡಿ, ಶಾಲೆಗಳಲ್ಲಿ ಇಂಥ ಕಾರ್ಯಕ್ರಮಗಳ ಮೂಲಕ ಕೌಟುಂಬಿಕ ಮತ್ತು ಸಾಮಾಜಿಕ ಬಾಂಧವ್ಯದ ಮೌಲ್ಯ ಮಕ್ಕಳಿಗೆ ಅರ್ಥವಾಗುತ್ತದೆ ಎಂದು ಅಭಿಪ್ರಾಯಪಟ್ಟರು. ಶಿಕ್ಷಕ-ರಕ್ಷಕ ಸಮಿತಿಯ ಉಪಾಧ್ಯಕ್ಷರಾಗಿರುವ ಅಜಿತ್ ಭಟ್ ಮತ್ತು  ಶಿಕ್ಷಕ-ರಕ್ಷಕ ಸಮಿತಿಯ ಕಾರ್ಯದರ್ಶಿಯಾಗಿರುವ ಅಶೋಕ್ ಎನ್‌ಡಿ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಅಕ್ಷರ ದಾಸೋಹ ಕೋಶಾಧಿಕಾರಿಯಾಗಿರುವ ಜಿ. ವೆಂಕಟೇಶ್ ನಾಯಕ್ ಪ್ರಸ್ತಾವಿಕ ಮಾತುಗಳನ್ನಾಡಿದರು. ಶಾಲಾ ಮುಖ್ಯೋಪಾಧ್ಯಾಯರಾದ ದೀಕ್ಷಿತ್ ಮೇಸ್ತ ಸ್ವಾಗತಿಸಿದರು. ಶಿಕ್ಷಕಿಯರಾದ ಲಕ್ಷ್ಮಿ ಖಾರ್ವಿ ನಿರೂಪಿಸಿ, ರೇಖಾ ಖಾರ್ವಿ ವಂದಿಸಿದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಅಸಂಘಟಿತ ವಲಯದ ಕಾರ್ಮಿಕರುಗಳು, ವ್ಯಾಪಾರಿಗಳು ಹಾಗೂ ಸ್ವಯಂ ಉದ್ಯೋಗಿಗಳಿಗೆ ವೃದ್ಧಾಪ್ಯದಲ್ಲಿ ಆರ್ಥಿಕ ಹಾಗೂ ಸಾಮಾಜಿಕ ಭದ್ರತೆ ಒದಗಿಸಲು ಕೇಂದ್ರ ಸರ್ಕಾರವು ಪ್ರಧಾನಮಂತ್ರಿ ಶ್ರಮಯೋಗಿ ಮಾನ್ ಧನ್ ಯೋಜನೆ ಹಾಗೂ ಎನ್.ಪಿ.ಎಸ್ ಟ್ರೇಡರ್ಸ್ ಎಂಬ ಮಹತ್ವಾಕಾಂಕ್ಷಿ ಪಿಂಚಣಿ ಯೋಜನೆಗಳನ್ನು ಜಾರಿಗೊಳಿಸಿದ್ದು, ಎಲ್ಲಾ ವರ್ಗದ ಅಸಂಘಟಿತ ಕಾರ್ಮಿಕರುಗಳು ಈ ಯೋಜನೆಗಳಡಿ ನೋಂದಾಯಿಸಿಕೊಳ್ಳುವಂತೆ ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಕರೆ ನೀಡಿದರು. ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಕೇಂದ್ರ ಸರ್ಕಾರದ ಪ್ರಧಾನಮಂತ್ರಿ ಶ್ರಮಯೋಗಿ ಮಾನ್ ಧನ್ ಯೋಜನೆ ಹಾಗೂ ವ್ಯಾಪಾರಿಗಳು ಹಾಗೂ ಸ್ವಯಂ ಉದ್ಯೋಗಿಗಳಿಗೆ ರಾಷ್ಟ್ರೀಯ ಪಿಂಚಣಿ ಯೋಜನೆಗಳಡಿ ಅಸಂಘಟಿತ ಕಾರ್ಮಿಕರನ್ನು ನೋಂದಾಯಿಸಲು ವಿಶೇಷ ನೋಂದಣಿ ಅಭಿಯಾನ ಹಮ್ಮಿಕೊಳ್ಳುವ ಕುರಿತು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕೇಂದ್ರ ಸರ್ಕಾರದ ಪ್ರಧಾನಮಂತ್ರಿ ಶ್ರಮಯೋಗಿ ಮಾನ್ ಧನ್ ಯೋಜನೆ, ವ್ಯಾಪಾರಿಗಳು ಹಾಗೂ ಸ್ವಯಂ ಉದ್ಯೋಗಿಗಳಿಗೆ ರಾಷ್ಟ್ರೀಯ ಪಿಂಚಣಿ ಯೋಜನೆಗಳಡಿ ಅಸಂಘಟಿತ ವಲಯದ ಕಾರ್ಮಿಕರನ್ನು, ವ್ಯಾಪಾರಿಗಳನ್ನು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ರೋಟರಿ ಕ್ಲಬ್ ಬ್ರಹ್ಮಾವರ, ರೋಟರ್ಯಾಕ್ಟ್ ಕ್ಲಬ್ ಬ್ರಹ್ಮಾವರ, ಇಂಟರ್ಯಾಕ್ಟ್ ಕ್ಲಬ್, ಕಳತ್ತೂರು ಸಂತೆಕಟ್ಟೆ ಪ್ರೌಢಶಾಲೆ, ಜೇಸಿಐ ಕಲ್ಯಾಣಪುರ, ಸೀನಿಯರ್ ಛೇಂಬರ್ ಇಂಟರ್‌ನ್ಯಾಷನಲ್ ಉಡುಪಿ ಟೆಂಪಲ್ ಸಿಟಿ ಲೀಜನ್ ಇವರ ಸಂಯುಕ್ತ ಆಶ್ರಯದಲ್ಲಿ ಪರೀಕ್ಷಾ ಸವಾಲುಗಳು, ವೃತ್ತಿ ಮಾರ್ಗದರ್ಶನ ಮತ್ತು ಆರೋಗ್ಯ – ನೈರ್ಮಲ್ಯ ಕಾರ್ಯಕ್ರಮ ಸರಕಾರಿ ಪ್ರೌಢಶಾಲೆ ಕಳತ್ತೂರು ಸಂತೆಕಟ್ಟೆಯ ಶಾಲಾ ಸಭಾಂಗಣದಲ್ಲಿ ಜರುಗಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಶಾಲಾ ಮುಖ್ಯೋಪಾಧ್ಯಾಯಿನಿ ಸಂಧ್ಯಾ ಅವರು ಉದ್ಘಾಟಿಸಿ ಶುಭ ಹಾರೈಸಿದರು. ಸಭಾಧ್ಯಕ್ಷತೆಯನ್ನು ರೋಟರಿ ಕ್ಲಬ್ ಬ್ರಹ್ಮಾವರದ ಅಧ್ಯಕ್ಷರಾದ ಸತೀಶ್ ಶೆಟ್ಟಿ ಅವರು ವಹಿಸಿ ಸ್ವಾಗತಿಸಿದರು. ಸಂಪನ್ಮೂಲ ವ್ಯಕ್ತಿ ಜೇಸಿ ತರಬೇತುದಾರ ನರೇಂದ್ರ ಕುಮಾರ್ ಕೋಟ ಅವರು ಪರೀಕ್ಷಾ ಸವಾಲುಗಳು ಹಾಗೂ ವೃತ್ತಿ ಮಾರ್ಗದರ್ಶನ ತರಬೇತಿಯನ್ನು ನಡೆಸಿಕೊಟ್ಟರು. ಕರ್ಜೆ ಪ್ರಾಥಮಿಕ ಆರೋಗ್ಯ ಕೇಂದ್ರದ ಸಮುದಾಯ ಆರೋಗ್ಯಾಧಿಕಾರಿ ಶ್ರೀಮತಿ ಧನುಶ್ರೀಯವರು ವಿದ್ಯಾರ್ಥಿಗಳಲ್ಲಿ ಆರೋಗ್ಯ ಹಾಗೂ ನೈರ್ಮಲ್ಯದ ಬಗ್ಗೆ ಮಾಹಿತಿ ನೀಡಿದರು. ವೇದಿಕೆಯಲ್ಲಿ ಸೀನಿಯರ್ ಛೇಂಬರ್ ಉಡುಪಿ ಟೆಂಪಲ್ ಸಿಟಿ ಲೀಜನ್‌ನ ಅಧ್ಯಕ್ಷ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಇಲ್ಲಿನ ಯಡ್ತರೆ ನಾಕಟ್ಟೆಯಲ್ಲಿ ಶ್ರೀ ಕೋಟಿ ಚೆನ್ನಯ್ಯ ಪಂಜುರ್ಲಿ ಪರಿವಾರ ಶಕ್ತಿಗಳ ದಿವ್ಯ ಸನ್ನಿಧಿಯಲ್ಲಿ ಚತುರ್ಥ ಪ್ರತಿಷ್ಠಾವರ್ಧಂತ್ಯುತ್ಸವ ಹಾಗೂ ಸಾನ್ನಿಧ್ಯ ಕಲಶೋತ್ಸವ – ಅನ್ನಸಂತರ್ಪಣೆ, ಬೈದರ್ಕಳ ಸಂದರ್ಶನ, ಅಗೇಲು ಸೇವಾ – ಶ್ರೀ ಪಂಜುರ್ಲಿ ಕೋಲ ಸೇವೆಯು ಜ.25 ರವಿವಾರದಂದು ನಡೆಯಲಿದೆ. ಬೆಳಿಗ್ಗೆ 8.30 ರಿಂದ ರಾತ್ರಿ 12.30 ರವರೆಗೆ ತನಕ ಕ್ಷೇತ್ರ ತಂತ್ರಿಗಳಾದ ವೇ.ಮೂ. ಕುತ್ಯಾರು ಕೇಂಜ ಶ್ರೀಧರ ತಂತ್ರಿಗಳ ನೇತೃತ್ವದಲ್ಲಿ ಸಾನ್ನಿಧ್ಯ ಕಲಶೋತ್ಸವ – ಅನ್ನಸಂತರ್ಪಣೆ ಹಾಗೂ ಸಾಯಂಕಾಲ 4.30ರಿಂದ ರಾತ್ರಿ 8.00 ರ ತನಕ ಶ್ರೀ ಬ್ರಹ್ಮ ಬೈದರ್ಕಳ ಸಹಿತ ಪರಿವಾರ ಶಕ್ತಿಗಳ ಪ್ರೀತ್ಯರ್ಥ, ಅಗೇಲು ಸೇವೆ – ಬೈದರ್ಕಳ ಸಂದರ್ಶನ – ಗೆಂಡ ಸೇವೆ – ಅನ್ನಸಂತರ್ಪಣೆ ನಡೆಯಲಿದೆ. ಅದೇ ದಿನ ರಾತ್ರಿ ಶ್ರೀ ಪಂಜುರ್ಲಿ ದೈವದ ಸಾನಿಧ್ಯವೃದ್ಧಿಗೋಸ್ಕರ ಸಿರಿ ಸಿಂಗಾರದ ಕೋಲ ಸೇವೆ ನಡೆಯಲಿದೆ ಎಂದು ಸಮಿತಿ ಅಧ್ಯಕ್ಷ ಎಸ್.‌ ರಾಜು ಪೂಜಾರಿ, ಕಾರ್ಯದರ್ಶಿ ಶಿವರಾಮ ಪೂಜಾರಿ, ಅರ್ಚಕ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಮಂಗಳೂರಿನ ಕೆಎಂಸಿ ಆಸ್ಪತ್ರೆಯ ಸಹಯೋಗದೊಂದಿಗೆ ಇತ್ತೀಚೆಗೆ ಐಎಂಜೆ ಸಂಸ್ಥೆಗಳಲ್ಲಿ ಆರೋಗ್ಯ ತಪಾಸಣಾ ಶಿಬಿರವನ್ನು ಯಶಸ್ವಿಯಾಗಿ ನಡೆಸಲಾಯಿತು. ಸಿಬ್ಬಂದಿಗಳಲ್ಲಿ ಆರೋಗ್ಯ ಜಾಗೃತಿ ಮತ್ತು ಹೃದಯ ಸಂಬಂಧಿತ ಸಮಸ್ಯೆಗಳನ್ನು ಮೊದಲೇ ಪತ್ತೆಹಚ್ಚುವ ಉದ್ದೇಶದಿಂದ ಈ ಶಿಬಿರವನ್ನು ಆಯೋಜಿಸಲಾಗಿತ್ತು.ಕಾರ್ಯಕ್ರಮವನ್ನು ಬೆಳಿಗ್ಗೆ 10:00 ರಿಂದ ಮಧ್ಯಾಹ್ನ 1:00 ರವರೆಗೆ ಐಎಂಜೆ ಸಂಸ್ಥೆಗಳ ಆರೋಗ್ಯ ವಿಜ್ಞಾನ ಬ್ಲಾಕ್‌ನಲ್ಲಿ ನಡೆಸಲಾಯಿತು. ಮಂಗಳೂರಿನ ಕೆಎಂಸಿ ಆಸ್ಪತ್ರೆಯ ಹೃದ್ರೋಗಶಾಸ್ತ್ರದಲ್ಲಿ ಜೂನಿಯರ್ ರೆಸಿಡೆಂಟ್ ಡಾ. ಸಮೃದ್ಧ ರೈ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಅವರು ಹೃದಯ ಆರೋಗ್ಯದ ಮಹತ್ವ, ತಡೆಗಟ್ಟುವ ಕ್ರಮಗಳು, ಆರೋಗ್ಯಕರ ಜೀವನಶೈಲಿ ಅಭ್ಯಾಸಗಳು ಮತ್ತು ಹೃದ್ರೋಗಶಾಸ್ತ್ರ ಮತ್ತು ಆರೋಗ್ಯಕರ ಹೃದಯವನ್ನು ಕಾಪಾಡಿಕೊಳ್ಳುವ ಕಲೆಯ ಕುರಿತು ಒಳನೋಟಗಳನ್ನು ಹಂಚಿಕೊಂಡರು. ಮತ್ತೊಬ್ಬ ವಿಶೇಷ ಅತಿಥಿ ಐಎಂಜೆ ಸಂಸ್ಥೆಗಳ ಶೈಕ್ಷಣಿಕ ನಿರ್ದೇಶಕ ಡಾ. ಎಸ್. ಎನ್. ಭಟ್ ಅವರು ಕಾರ್ಯಕ್ರಮಕ್ಕೆ ಹಾಜರಿದ್ದರು ಮತ್ತು ಸಿಬ್ಬಂದಿ ನಿಯಮಿತ ಆರೋಗ್ಯ ತಪಾಸಣೆಗಳಲ್ಲಿ ಸಕ್ರಿಯವಾಗಿ ಭಾಗವಹಿಸುವಂತೆ ಪ್ರೋತ್ಸಾಹಿಸಿದರು. ಕಾರ್ಯಕ್ರಮದಲ್ಲಿ ಐಎಂಜೆ ಸಂಸ್ಥೆಗಳ ಅಡಿಯಲ್ಲಿರುವ ಎಲ್ಲಾ…

Read More