Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಬೈಕ್ ಅಪಘಾತದಲ್ಲಿ ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟ ಘಟನೆ ಶಿರೂರು ಇಂಡಿಯನ್‌ ಪೆಟ್ರೋಲ್‌ ಬಂಕ್‌ ಬಳಿ ಸೋಮವಾರ ರಾತ್ರಿ ನಡೆದಿದೆ. ಉಪ್ಪುಂದ ಜನತಾ ಕಾಲೋನಿಯ ಅಭಿಷೇಕ ಖಾರ್ವಿ (23) ಹಾಗೂ ಪ್ರವೀಣ ಖಾರ್ವಿ (23) ಮೃತಪಟ್ಟ ಯುವಕರು. ಪ್ರವೀಣ ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದು ಹಾಗೂ ಅಭಿಷೇಕ ಮೀನುಗಾರಿಕೆ ಕೆಲಸ ಮಾಡುತ್ತಿದ್ದರು. ಉಪ್ಪುಂದದ ಕೊಡಿ ಹಬ್ಬಕ್ಕೆ ಆಗಮಿಸಿದ್ದ ಯುವಕರು ಸೋಮವಾರ ರಾತ್ರಿ ಉಪ್ಪುಂದದಿಂದ ಶಿರೂರು ಟೋಲ್‌ಗೇಟ್‌ಗೆ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ತಲೆಯ ಭಾಗಕ್ಕೆ ಬಲವಾದ ಪೆಟ್ಟು ಬಿದ್ದು ರಕ್ತಸ್ರಾವದಿಂದ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಈ ಬಗ್ಗೆ ಬೈಂದೂರು ಆರಕ್ಷಕ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಗಂಗೊಳ್ಳಿ: ಬಡ ರೋಗಿಗಳ ಪಾಲಿಗೆ ಆಯುಷ್ಮಾನ್ ಯೋಜನೆ ಒಂದು ಅದ್ಭುತ ವರದಾನವಾಗಿದೆ. ಅದನ್ನು ಬಳಸಿಕೊಳ್ಳುವುದು ಹೇಗೆ ಎನ್ನುವ ಅರಿವು ನಮ್ಮೆಲ್ಲರಲ್ಲೂ ಸರಿಯಾಗಿ ಇದ್ದಾಗ ಮಾತ್ರ ಆ ಯೋಜನೆಯ ಫಲವನ್ನು ಪಡೆಯಲು ಸಾಧ್ಯವಿದೆ. ಈ ನಿಟ್ಟಿನಲ್ಲಿ ಆಯುಷ್ಮಾನ್ ಯೋಜನೆಯ ಬಗ್ಗೆ ತಿಳಿದು ಅದನ್ನು ಇತರರಿಗೂ ತಿಳಿಸುವಲ್ಲಿ ನಾವು ಮುಂದಾಗಬೇಕು ಎಂದು ಕೆ.ಎಂ.ಸಿಯ ಆರೋಗ್ಯ ಮಿತ್ರ ವಿಭಾಗದ ಸುಜನ್ಮಾಲಾ ಅಭಿಪ್ರಾಯಪಟ್ಟರು. ಅವರು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನಲ್ಲಿ ಇಲ್ಲಿನ ಎಸ್ ವಿ ಕಾಮರ್ಸ್ ಕ್ಲಬ್ ಆಶ್ರಯದಲ್ಲಿ ನಡೆದ ಆಯುಷ್ಮಾನ್ ಅರಿವು ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು. ಪ್ರಾಂಶುಪಾಲೆ ಕವಿತಾ ಎಂಸಿ ಅಧ್ಯಕ್ಷತೆ ವಹಿಸಿದ್ದರು. ಬಿಲ್ಲವರ ಸಮಾಜ ಸೇವಾ ಸಂಘದ ಅಧ್ಯಕ್ಷ ಗೋಪಾಲ ಬಿಲ್ಲವ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಉಪನ್ಯಾಸಕಿ ಅಕ್ಷಯ ಆರ್. ಖಾರ್ವಿ ಪ್ರಸ್ತಾವಿಕ ಮಾತುಗಳಾಡಿದರು. ಎಸ್. ವಿ ಕಾಮರ್ಸ್ ಕ್ಲಬ್ ಸಂಯೋಜಕ ನರೇಂದ್ರ ಎಸ್. ಗಂಗೊಳ್ಳಿ ಅತಿಥಿಗಳನ್ನು ಪರಿಚಯಿಸಿದರು. ಉಪನ್ಯಾಸಕಿ ಸುಗುಣ ಆರ್.ಕೆ. ಅಭಿಪ್ರಾಯಗಳನ್ನು ಹಂಚಿಕೊಂಡರು. ವಿದ್ಯಾರ್ಥಿ ಪ್ರತಿನಿಧಿಗಳಾದ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ರಾಜ್ಯಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಕಿರಿಮಂಜೇಶ್ವರದ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್‌ನ ವಿದ್ಯಾರ್ಥಿಗಳು ಕಂಚಿನ ಪದಕಗಳನ್ನು ಗೆದ್ದು ಶಾಲೆಗೆ ಕೀರ್ತಿ ತಂದಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ದೇವನಹಳ್ಳಿ ಟೌನ್‌ನ ಸರ್ಕಾರಿ ಪದವಿಪೂರ್ವ ಕಾಲೇಜು ಮೈದಾನದಲ್ಲಿ ಉಪ ನಿರ್ದೇಶಕರ ಕಚೇರಿ, ಶಾಲಾ ಶಿಕ್ಷಣ ಇಲಾಖೆ- ಬೆಂಗಳೂರು ಗ್ರಾಮಾಂತರ ಜಿಲ್ಲೆ ಇವರ ಆಶ್ರಯದಲ್ಲಿ ಆಯೋಜಿಸಲಾಗಿದ್ದ ರಾಜ್ಯಮಟ್ಟದ ಕರಾಟೆ ಸ್ಪರ್ಧೆಯ 14 ರ ವಯೋಮಾನದ ಬಾಲಕರ ವಿಭಾಗದಲ್ಲಿ ಜನತಾ ಶಾಲೆಯ 8ನೇ ತರಗತಿಯ ಸಾಕ್ಷಿತ್ ಹಾಗೂ 17 ರ ವಯೋಮಾನದ ಬಾಲಕರ ವಿಭಾಗದಲ್ಲಿ 10ನೇ ತರಗತಿಯ ಸಾಯಿನಾಥ್ ಅವರು ಅತ್ಯುತ್ತಮ ಪ್ರದರ್ಶನ ನೀಡಿ ಕಂಚಿನ ಪದಕಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. ರಾಜ್ಯದ ವಿವಿಧ ಜಿಲ್ಲೆಗಳಿಂದ ಆಗಮಿಸಿದ್ದ ಪ್ರತಿಭಾವಂತ ಸ್ಪರ್ಧಿಗಳ ನಡುವೆ ತಮ್ಮ ಕೌಶಲ್ಯ, ಧೈರ್ಯ, ಶಿಸ್ತು ಹಾಗೂ ಕ್ರೀಡಾ ಮನೋಭಾವವನ್ನು ಪ್ರದರ್ಶಿಸಿ ಈ ಸಾಧನೆ ಮಾಡಿರುವುದು ಶಾಲೆಗೆ ಹೆಮ್ಮೆಯ ಸಂಗತಿಯಾಗಿದೆ. ವಿದ್ಯಾರ್ಥಿಗಳ ಈ ಸಾಧನೆಗೆ ಜನತಾ ಸಮೂಹ ಸಂಸ್ಥೆಗಳ ಅಧ್ಯಕ್ಷರು,…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ʼಕುಂದಪ್ರಭʼ ಸಂಸ್ಥೆಯ ಆಶ್ರಯದಲ್ಲಿ ನೀಡಲಾಗುತ್ತಿರುವ ಕೋ. ಮ. ಕಾರಂತ ಪ್ರಶಸ್ತಿಗೆ ಬೆಂಗಳೂರಿನ ಸರಸ್ವತೀ ಸಂಗೀತ ವಿದ್ಯಾಲಯ ರಿ. ಸಂಸ್ಥೆಯ ಕಾರ್ಯ ನಿರ್ದೇಶಕ, ಹಿಂದುಸ್ತಾನಿ ಶಾಸ್ತ್ರೀಯ ಮತ್ತು ಭಕ್ತಿ ಸಂಗೀತ ಗಾಯಕ, ’ನಾದೋಪಾಸಕ’ ಪಂಡಿತ್ ವಾಗೀಶ ಭಟ್ ಕುಂದಾಪುರ ಆಯ್ಕೆಯಾಗಿದ್ದಾರೆ. ಕುಂದಾಪುರ ಪೇಟೆ ಶ್ರೀ ವೆಂಕಟರಮಣ ದೇವಸ್ಥಾನದ ತಂತ್ರಿಗಳಾಗಿರುವ ಇವರು, ವಿದ್ವತ್ ಪೂರ್ಣ ಭಕ್ತಿ ಗಾಯನದಲ್ಲಿ ಪರಿಣಿತರು. ದೇಶದ ವಿವಿಧ ಕೇಂದ್ರಗಳಲ್ಲಿ ತಮ್ಮ ಗಾಯನ ಕಾರ್ಯಕ್ರಮ ನೀಡಿರುವ ಇವರು ವಿದೇಶಗಳಲ್ಲೂ ಭಾರತೀಯ ಕಲಾ ಕೇಂದ್ರಗಳ ಆಹ್ವಾನದ ಮೇರೆಗೆ ಗಾಯನ ಕಾರ್ಯಕ್ರಮ ನೀಡಿದ್ದಾರೆ. ಇಂಗ್ಲೆಂಡಿನಲ್ಲಿ ನಡೆದ ಅಂತಾರಾಷ್ಟ್ರೀಯ ಶಾಂತಿ ಸಮ್ಮೇಳನದಲ್ಲಿ ಹಾಡಿರುವ ಇವರಿಗೆ ’ನಾದೋಪಾಸಕ’ ಬಿರುದು ನೀಡಿ ಪ್ರಶಸ್ತಿ ಪ್ರದಾನ ಮಾಡಲಾಗಿದೆ. ಇವರ ಗಾಯನದ ಹಲವು ಧ್ವನಿ ಸುರಳಿಗಳು ಬಿಡುಗಡೆಗೊಂಡಿವೆ. ರಾಜ್ಯದ ಹಾಗೂ ದೇಶದ ಹಲವು ಸಂಸ್ಥೆಗಳಿಂದ ಇವರಿಗೆ ಪ್ರಶಸ್ತಿ ಲಭ್ಯವಾಗಿದೆ. ರಾಷ್ಟ್ರೀಕೃತ ಬ್ಯಾಂಕ್ ಉದ್ಯೋಗಿಯಾಗಿದ್ದ ಇವರು, ಸ್ವಯಂ ನಿವೃತ್ತಿ ಹೊಂದಿ, ಸಂಗೀತದಲ್ಲಿ ಪೂರ್ಣ ಪ್ರಮಾಣದಲ್ಲಿ ತೊಡಗಿಸಿಕೊಂಡವರು. 1987…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಮೂಡುಬಿದಿರೆ: ಪತ್ರಿಕೋದ್ಯಮದ ವಿಶ್ವಾಸಾರ್ಹತೆ ಉಳಿಯಬೇಕಾದರೆ ಪತ್ರಕರ್ತರು ಸತ್ಯ, ನಿಷ್ಠೆ ಮತ್ತು ಸಾಮಾಜಿಕ ಬದ್ಧತೆಯನ್ನು ವೃತ್ತಿಯ ಮೂಲ ಮೌಲ್ಯಗಳನ್ನಾಗಿಸಿಕೊಂಡು, ಯಾವುದೇ ಒತ್ತಡ ಅಥವಾ ಪ್ರಭಾವಕ್ಕೆ ಒಳಗಾಗದೆ ವಾಸ್ತವಾಂಶಗಳನ್ನು ವರದಿ ಮಾಡಬೇಕು ಎಂದು ಟಿವಿ 5 ಕನ್ನಡದ ಮುಖ್ಯ ಸಂಪಾದಕ ರಮಾಕಾಂತ್ ತಿಳಿಸಿದರು.   ಅವರು ಆಳ್ವಾಸ್ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ಹಿರಿಯ ವಿದ್ಯಾರ್ಥಿಗಳ ಸಂಘದ ವತಿಯಿಂದ ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಆಯೋಜಿಸಿದ್ದ ‘ಆಳ್ವಾಸ್ ಸಮ್ಮಿಲನ 2026’ ಹಿರಿಯ ವಿದ್ಯಾರ್ಥಿಗಳ ಪುನರ್ಮಿಲನ ಕಾರ್ಯಕ್ರಮದಲ್ಲಿ ಅವರು ಮುಖ್ಯ ಅತಿಥಿಯಾಗಿ ಮಾತನಾಡಿದರು. ಪತ್ರಿಕೋದ್ಯಮ ನಶಿಸುತ್ತಿರುವ ವೃತ್ತಿಯಲ್ಲ. ಸುಳ್ಳು ಸುದ್ದಿಗಳನ್ನು ಪ್ರಸಾರ ಮಾಡುವ ಪತ್ರಿಕೋದ್ಯಮ ಮಾತ್ರ ತನ್ನ ವಿಶ್ವಾಸಾರ್ಹತೆಯನ್ನು ಕಳೆದುಕೊಳ್ಳುತ್ತಿದೆ. ಇಂದಿನ ಜನರು ಸ್ವತಂತ್ರ ಹಾಗೂ ಸತ್ಯಾಧಾರಿತ ಮಾಧ್ಯಮಗಳನ್ನು ಬಯಸುತ್ತಿದ್ದಾರೆ. ಪತ್ರಿಕೋದ್ಯಮ ಕ್ಷೇತ್ರದಲ್ಲಿ ಹೊಸ ಅವಕಾಶಗಳು ತೆರೆದುಕೊಳ್ಳುತ್ತಿದ್ದು, ವಿದ್ಯಾರ್ಥಿಗಳು ಭವಿಷ್ಯದ ಬಗ್ಗೆ ಆತಂಕಪಡುವ ಅಗತ್ಯವಿಲ್ಲ. ವೃತ್ತಿಯ ಮೇಲಿನ ಆಸಕ್ತಿ, ನೈತಿಕತೆ ಮತ್ತು ಬದ್ಧತೆಯನ್ನು ನಿರಂತರವಾಗಿ ಉಳಿಸಿಕೊಳ್ಳಬೇಕು, ದಕ್ಷಿಣ ಕನ್ನಡ ಮತ್ತು ಉಡುಪಿ ಹಾಗೂ ಉತ್ತರ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಕೋಟೇಶ್ವರ ಕಟ್ಕೆರೆಯಲ್ಲಿ ಕಾರು ಹಾಗೂ ಬೈಕಿನ ನಡುವೆ ನಡೆದ ಅಪಘಾತದಲ್ಲಿ ಬೈಕ್‌ ಸವಾರ ಮೃತಪಟ್ಟ ಘಟನೆ ಸೋಮವಾರ ಸಂಜೆ ನಡೆದಿದೆ. ಹೊಸನಗರ ತಾಲೂಕಿನ ಹುಂಚದ ಯುವಕ ಹರ್ಷ (35) ಮೃತ ದುರ್ದೈವಿ. ಹರ್ಷ ಹಾಗೂ ಸ್ನೇಹಿತರು ತನ್ನ ಕುಟುಂಬಿಕರ ಮದುವೆ ಕಾರ್ಯಕ್ರಮದಲ್ಲಿ ಭಾಗವಹಿಸಲು ಕಮಲಶಿಲೆಗೆ ಬಂದಿದ್ದರು. ಮದುವೆ ಮುಗಿಸಿ ಕೋಟೇಶ್ವರಕ್ಕೆ ತೆರಳಿ ಹಿಂದಿರುಗುವಾಗ ಈ ಘಟನೆ ನಡೆದಿದೆ.ಕೋಟೇಶ್ವರ ಹಾಲಾಡಿ ರಸ್ತೆಯ ಕಟ್ಕರೆ ಸಮೀಪ ತೆರಳುತ್ತಿದ್ದಾಗ ಓವರ್‌ಟೇಕ್‌ ಮಾಡುವ ಬರದಲ್ಲಿ ಮೊದಲು ಮುಂಭಾಗದಲ್ಲಿದ್ದ ಕಾರಿಗೆ ಬೈಕ್‌ ಡಿಕ್ಕಿಯಾಗಿದೆ. ಬಳಿಕ ಓವರ್‌ಟೇಕ್‌ ಮಾಡಿ ಅಭಿಮುಖವಾಗಿ ಬರುತ್ತಿದ್ದ ಕಾರಿಗೆ ಬೈಕ್‌ ಡಿಕ್ಕಿಹೊಡೆದಿದೆ ಎನ್ನಲಾಗಿದೆ. ಕಾರಿಗೆ ಬೈಕ್‌ ಡಿಕ್ಕಿಯಾಗಿ ಬೈಕ್‌ ಸವಾರ ಕೆಳಕ್ಕೆ ಬಿದ್ದಿದ್ದು, ಅಪಘಾತದ ತೀವ್ರತೆಗೆ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ಸ್ಥಳಕ್ಕೆ ಕುಂದಾಪುರ ಶಾಸಕ ಕಿರಣ್‌ ಕೊಡ್ಗಿ ಭೇಟಿ ನೀಡಿ ಘಟನೆಯ ಬಗ್ಗೆ ಮಾಹಿತಿ ಪಡೆದುಕೊಂಡರು. ಕುಂದಾಪುರ ನಗರ ಠಾಣೆಯ ಪೊಲೀಸ್ ನಿರೀಕ್ಷಕ ಜಯರಾಮ ಡಿ. ಗೌಡ, ಸಂಚಾರ ಠಾಣೆಯ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಸಮಾಜಕ್ಕಾಗಿ ನಾವು ಒಗ್ಗಟ್ಟಾಗಿ ಮುನ್ನೆಡೆದಾಗ ಯಶಸ್ಸು ಸಾಧ್ಯವಾಗುತ್ತದೆ. ಸಮಾಜದ ಏಳ್ಗೆಯ ಬಗ್ಗೆ ಆಲೋಚನೆ ಮಾಡಬೇಕು. ಸಮಾಜದ ಪ್ರತಿಯೊಂದು ಮಗುವೂ ಕೂಡಾ ಉತ್ತಮ ಶಿಕ್ಷಣ ಪಡೆದು ಶಕ್ತಿಯಾಗಿ ಬೆಳೆಯಬೇಕು, ಸಹಕಾರ ಸಂಘದ ಮೂಲಕ ವೈದ್ಯಕೀಯ, ಇಂಜಿನಿಯರ್, ವ್ಯಾಸಂಗ ಮಾಡುವ ವಿದ್ಯಾರ್ಥಿಗಳಿಗೆ 25ಸಾವಿರ ಪ್ರೋತ್ಸಾಹಧನ ನೀಡುವ ಕಾರ್ಯಕ್ರಮ ರೂಪಿಸಬೇಕು, ನೀವು ಮುಂದೆ ಹೆಜ್ಜೆ ಇಡಿ, ಹಿಂದೆ ನಾನು ಇರುತ್ತೇನೆ ಎಂದು ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ ಪ್ರವರ್ತಕರಾದ ನಾಡೋಜ ಡಾ. ಜಿ. ಶಂಕರ್ ಹೇಳಿದರು. ಅವರು ಹೆಮ್ಮಾಡಿಯ ಮತ್ಸ್ಯಸೌಧದಲ್ಲಿ ನಡೆದ ಹೆಮ್ಮಾಡಿ ಮೀನುಗಾರರ ಪ್ರಾಥಮಿಕ ಸಹಕಾರಿ ಸಂಘ ನಿ., ಹೆಮ್ಮಾಡಿ ವತಿಯಿಂದ 2025-26ನೇ ಶೈಕ್ಷಣಿಕ ಸಾಲಿನಲ್ಲಿ ಅತ್ಯಧಿಕ ಅಂಕ ಗಳಿಸಿದ ಸದಸ್ಯರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಹಾಗೂ ವಿದ್ಯಾರ್ಥಿ ವೇತನ ವಿತರಣಾ ಕಾರ್ಯಕ್ರಮ ಉದ್ಘಾಟಿಸಿ, ಪ್ರತಿಭಾ ಪುರಸ್ಕಾರ ನೆರವೇರಿಸಿ ಮಾತನಾಡಿದರು. ನಾನು ಕೂಡಾ ಬಡತನದಿಂದ ಬೆಳೆದು ಬಂದವರ. ಬಡತನದ ಅರಿವು ನನಗೆ ಸ್ಪಷ್ಟವಾಗಿ ಗೊತ್ತಿದೆ. ಶಿಕ್ಷಣಕ್ಕೆ ಬಡತನ ಅಡ್ಡಿಯಾಗಬಾರದು.…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಮಕ್ಕಳ ಪ್ರತಿಭೆ, ಆತ್ಮವಿಶ್ವಾಸ ಹಾಗೂ ಸೃಜನಶೀಲತೆಯನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಲಿಟಲ್ ರಾಕೆಟ್ಸ್ ವತಿಯಿಂದ ‘ರಾಕೆಟ್ಸ್ ಆನ್ ದಿ ರನ್‌ವೇʼ ಎಂಬ ವಿಶಿಷ್ಟ ಮಕ್ಕಳ ಫ್ಯಾಷನ್ ಶೋ ಕಾರ್ಯಕ್ರಮ ಇತ್ತೀಚಿಗೆ ಉಡುಪಿಯ ಒಸಿಯನ್ ಪಲ್೯ ನಲ್ಲಿ ಆಯೋಜಿಸಲಾಯಿತು. ಮೂರು ತಾಯಂದಿರಾದ ಬಬಿತಾ ಮಸ್ಕರೇನ್ಹಸ್, ವೈಷ್ಣವಿ ರಕ್ಷಿತ್ ಕುಂದರ್ ಹಾಗೂ ಡಾ. ಮೇಘಾ ಅಶ್ವತ್ ಶೆಟ್ಟಿ ಅವರ ಕನಸಿನ ಕೂಸಾಗಿ ರೂಪುಗೊಂಡಿರುವ ‘ಲಿಟಲ್ ರಾಕೆಟ್ಸ್’ ಮಕ್ಕಳ ಉಡುಪು ಬ್ರ್ಯಾಂಡ್, ಪ್ರತಿಯೊಂದು ಮಗುವಿಗೂ ಆರಾಮದಾಯಕ, ಆಕರ್ಷಕ ಹಾಗೂ ಆತ್ಮವಿಶ್ವಾಸವನ್ನು ಹೆಚ್ಚಿಸುವ ಉಡುಪುಗಳ ಹೊಂದಿರುವ ಮಳಿಗೆ ಲೋಕಾರ್ಪಣೆಗೊಂಡಿತು. ಕಾರ್ಯಕ್ರಮದಲ್ಲಿ ಪುಟಾಣಿಗಳು ವಿವಿಧ ಆಕರ್ಷಕ ಉಡುಪುಗಳನ್ನು ಧರಿಸಿ ರ್ಯಾಂಪ್‌ ಮೇಲೆ ಹೆಜ್ಜೆ ಹಾಕುವ ಮೂಲಕ ತಮ್ಮ ಪ್ರತಿಭೆ, ವ್ಯಕ್ತಿತ್ವ ಹಾಗೂ ಆತ್ಮವಿಶ್ವಾಸವನ್ನು ಅನಾವರಣಗೊಳಿಸಿದರು. ಮಳಿಗೆಯನ್ನು ಉದ್ಘಾಟಿಸಿದ ಗೀತಾನಂದ ಫೌಂಡೇಶನ್ ಟ್ರಸ್ಟಿ ಗೀತಾ ಎ ಕುಂದರ್ ಮಾತನಾಡಿ, ಕೇವಲ ಗೆಲುವು ಅಥವಾ ಸ್ಪರ್ಧೆಗೆ ಸೀಮಿತವಾಗದೆ, ಮಕ್ಕಳು ಧೈರ್ಯದಿಂದ ವೇದಿಕೆ ಏರುವುದು, ಸಂತೋಷದಿಂದ ತಮ್ಮನ್ನು ತಾವು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಶಿರಿಯಾರ ಗ್ರಾಮ ಪಂಚಾಯತ್‌ನಲ್ಲಿ ನಡೆದ ಪ್ರಜಾ ಸೇವಾ ಆಂದೋಲನದ ಸಭೆ ಹಾಗೂ ಸಾರ್ವಜನಿಕ ಅಹವಾಲು ಸ್ವೀಕಾರ ಕಾರ್ಯಕ್ರಮವನ್ನು ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ. ಕಿರಣ್ ಕುಮಾರ್ ಕೊಡ್ಗಿ ಅವರು ಉದ್ಘಾಟಿಸಿದರು. ನಂತರ ಮಾತನಾಡಿ, ಪ್ರಜಾ ಸೇವಾ ಕಾರ್ಯಕ್ರಮ ಆರಂಭಗೊಂಡು ಎರಡು ತಿಂಗಳು ಕಳೆದರೂ, ಆಯಾ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಜನರ ಯಾವುದೇ ಸಮಸ್ಯೆಗಳು ಬಗೆಹರಿದಿಲ್ಲ ಎಂದು ಶಾಸಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಕಾರ್ಯಕ್ರಮ ಕೇವಲ ಘೋಷಣೆಗೆ ಸೀಮಿತವಾಗಬಾರದು. ಗ್ರಾಮ ಪಂಚಾಯತ್ ಮಟ್ಟದಲ್ಲಿ ಜನರು ಎದುರಿಸುತ್ತಿರುವ ಕುಡಿಯುವ ನೀರು, ರಸ್ತೆ, ವಿದ್ಯುತ್, ಪಡಿತರ, ಪಿಂಚಣಿ, ಆಸ್ತಿ ದಾಖಲೆ ಸೇರಿದಂತೆ ಮೂಲಭೂತ ಸಮಸ್ಯೆಗಳಿಗೆ ತಕ್ಷಣ ಪರಿಹಾರ ಸಿಗಬೇಕು. ಆದರೆ ಇದುವರೆಗೆ ಯಾವುದೇ ಗ್ರಾಮ ಪಂಚಾಯತ್‌ನಲ್ಲಿಯೂ ಗಮನಾರ್ಹ ಪ್ರಗತಿ ಕಂಡುಬಂದಿಲ್ಲ ಎಂದು ಹೇಳಿದರು. ಜನರಿಗೆ ಸ್ಪಂದಿಸದಿದ್ದರೆ ಇಂತಹ ಕಾರ್ಯಕ್ರಮಗಳಿಗೆ ಅರ್ಥವಿಲ್ಲ. ಪ್ರತಿ ಗ್ರಾಮ ಪಂಚಾಯತ್‌ನಲ್ಲಿ ಬಗೆಹರಿದ ಸಮಸ್ಯೆಗಳ ಕುರಿತು ಸ್ಪಷ್ಟ ವರದಿ ನೀಡಬೇಕು ಎಂದು ಅಧಿಕಾರಿಗಳಿಗೆ ಶಾಸಕರು ಸೂಚಿಸಿದರು.…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಧಾರವಾಡದ  ಜೆಎಸ್‌ಎಸ್ ವಿದ್ಯಾಸಂಸ್ಥೆ ವಿದ್ಯಾಗಿರಿಯಲ್ಲಿ  ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ವತಿಯಿಂದ ನಡೆದ ರಾಜ್ಯಮಟ್ಟದ ಕುಸ್ತಿ ಸ್ಪರ್ಧೆಯಲ್ಲಿ ಉಡುಪಿ ಜಿಲ್ಲೆಯ ಕೋಟದ ವಿವೇಕ ಪ.ಪೂ. ಕಾಲೇಜಿನ ವಿದ್ಯಾರ್ಥಿ ದೃಶ್ಯ ಆರ್., 97 ಕೆ.ಜಿ ವಿಭಾಗದ ಕುಸ್ತಿ ಸ್ಪರ್ಧೆಯಲ್ಲಿ ರಾಜ್ಯಮಟ್ಟದಲ್ಲಿ ದ್ವಿತೀಯ ಸ್ಥಾನವನ್ನು ಗಳಿಸಿದರು. ವಿದ್ಯಾರ್ಥಿಯ ಸಾಧನೆಗೆ ವಿದ್ಯಾಸಂಸ್ಥೆಯ ಆಡಳಿತ ಮಂಡಳಿ ಹಾಗೂ ಕಾಲೇಜಿನ ಪ್ರಾಂಶುಪಾಲ ಉಪನ್ಯಾಸಕ ವೃಂದ ಅಭಿನಂದಿಸಿದೆ.

Read More