ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಕುಂದಾಪುರ ಇದರ ವತಿಯಿಂದ ಕುಂದಾಪುರದ ಗಾಂಧಿ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದ್ದ ಜಿಲ್ಲಾಮಟ್ಟದ ಕ್ರಿಕೆಟ್ ಪಂದ್ಯಾಟದಲ್ಲಿ 14ರ ವಯೋಮಾನದ ಹುಡುಗರ ತಂಡವು ಅತ್ಯುತ್ತಮ ಪ್ರದರ್ಶನ ನೀಡಿ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದೆ. ಈ ಪಂದ್ಯಾಟದಲ್ಲಿ ಅತ್ಯುತ್ತಮ ಪ್ರತಿಭೆ ಮೆರೆದ ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಗಳಾದ ಸಾಯಿಶ್ ಜಿ. ಹೆಗ್ಡೆ, ಲಿಯೋನ್ ಡಿ. ಹಾಗೂ ಎಂ. ಆತ್ಮಯ್ ಅವರು ವಿಭಾಗ ಮಟ್ಟಕ್ಕೆ ಆಯ್ಕೆಯಾಗಿ ಶಾಲೆಗೆ ಕೀರ್ತಿ ತಂದಿದ್ದಾರೆ. ಸುಜ್ಞಾನ ಎಜುಕೇಶನಲ್ ಟ್ರಸ್ಟ್‌ನ ಅಧ್ಯಕ್ಷರಾದ ಡಾ. ರಮೇಶ್ ಶೆಟ್ಟಿ, ಕಾರ್ಯದರ್ಶಿ ಪ್ರತಾಪ್ ಚಂದ್ರ ಶೆಟ್ಟಿ, ಖಜಾಂಚಿ ಭರತ್ ಶೆಟ್ಟಿ ಹಾಗೂ ವಿದ್ಯಾರಣ್ಯ ಆಂಗ್ಲಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯರಾದ ಪ್ರದೀಪ್ ಕುಮಾರ್ ಅವರು ವಿಜೇತ ವಿದ್ಯಾರ್ಥಿಗಳನ್ನು ಹಾಗೂ ಅವರಿಗೆ ಮಾರ್ಗದರ್ಶನ ನೀಡಿದ ದೈಹಿಕ ಶಿಕ್ಷಣ ಶಿಕ್ಷಕರನ್ನು ಅಭಿನಂದಿಸಿದ್ದಾರೆ.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಸಮಾಜದ ಅಭಿವೃದ್ಧಿಯಲ್ಲಿ ಮಹಿಳೆಯರ ಪಾತ್ರ ಹಾಗೂ ಸಂಘಟಿತ ಪ್ರಯತ್ನಗಳ ಮಹತ್ವವನ್ನು ಸಾರುವ ನಿಟ್ಟಿನಲ್ಲಿ ಉಪ್ಪುಂದ ದೇವಾಡಿಗರ ಸಂಘ ರಿ. ಮಹಿಳಾ ಘಟಕದ ನೇತೃತ್ವದಲ್ಲಿ ಕೆರ್ಗಾಲ್‌ನ ಮಟ್ನಕಟ್ಟೆ ಶ್ರೀ ಮಹಾಗಣಪತಿ ದೇವಸ್ಥಾನದ ಸಭಾಭವನದಲ್ಲಿ ‘ಅರಿಶಿನ ಕುಂಕುಮ ಹಾಗೂ ಆರೋಗ್ಯ ಮಾಹಿತಿ ಕಾರ್ಯಾಗಾರ’ಯಶಸ್ವಿಯಾಗಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷರಾದ ರಾಮಚಂದ್ರ ದೇವಾಡಿಗ ವಹಿಸಿದ್ದರು. ಈ ಸಂದರ್ಭದಲ್ಲಿ ಮಹಿಳಾ ಘಟಕದ ಅಧ್ಯಕ್ಷರಾದ ಗಿರಿಜಾ ದೇವಾಡಿಗ ಮಾತನಾಡಿ, “ಅರಿಶಿನ ಕುಂಕುಮವು ಮಹಿಳೆಯರಿಗೆ ಸೌಭಾಗ್ಯದ ಸಂಕೇತವಾಗಿದೆ. ನಮ್ಮ ಹಿಂದೂ ಸಮಾಜದಲ್ಲಿ ಯಾರಾದರೂ ಅರಿಶಿನ ಕುಂಕುಮ ಕಾರ್ಯಕ್ರಮವನ್ನು ಆಯೋಜಿಸಿ ಆಹ್ವಾನಿಸಿದಾಗ ಮಹಿಳೆಯರು ಪ್ರೀತಿಯಿಂದ ಭಾಗವಹಿಸುತ್ತಾರೆ. ಇಂತಹ ಕಾರ್ಯಕ್ರಮಗಳು ಮಹಿಳೆಯರ ನಡುವೆ ಆತ್ಮೀಯತೆ ಹಾಗೂ ಒಗ್ಗಟ್ಟನ್ನು ಮತ್ತಷ್ಟು ಬಲಪಡಿಸುತ್ತವೆ” ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪ್ರಿಯದರ್ಶಿನಿ ದೇವಾಡಿಗ ಹಾಗೂ ಸಂಘದ ಗೌರವಾಧ್ಯಕ್ಷರಾದ ಶ್ರೀ ರವೀಂದ್ರ ಎಚ್. ದೇವಾಡಿಗ ಮಹಿಳಾ ಘಟಕದ ಕಾರ್ಯದರ್ಶಿ ಸೀತಾ ದೇವಾಡಿಗ ಮಹಾಬಲೇಶ್ವರ, ಉಪಾಧ್ಯಕ್ಷೆಯರಾದ ಸೀತು ದೇವಾಡಿಗ ಮೂರ್ತಿಮನೆ ಹಾಗೂ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಐಡಿಯಲ್ ಪ್ಲೆ ಅಬಾಕಸ್ ಇಂಡಿಯಾ ಪ್ರೈ. ಲಿಮಿಟೆಡ್ ಇವರು ನಡೆಸಿದ 21ನೇ ಕರ್ನಾಟಕ ರಾಜ್ಯಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿತ್ಮೆಟಿಕ್ 2026 ಸ್ಪರ್ಧೆಯಲ್ಲಿ ಪ್ರಶಸ್ತಿ ಪಡೆದ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆ ಕುಂದಾಪುರ ಇಲ್ಲಿಯ ವಿದ್ಯಾರ್ಥಿಗಳಾದ ಇಂಪನಾ ಆರ್ (4ನೇ ತರಗತಿ) ಪ್ರಥಮ ಸ್ಥಾನ, ಅಧ್ವಿಕ್ ಕ್ಷತ್ರೀಯ (4ನೇ ತರಗತಿ) ಐದನೆಯ ಸ್ಥಾನ ಹಾಗೂ ಕೌಸ್ತುಭ (6ನೇ ತರಗತಿ )ದ್ವಿತೀಯ ಸ್ಥಾನ ಪಡೆದಿರುತ್ತಾರೆ. ಇವರಿಗೆ, ಶಾಲಾ ಆಡಳಿತ ಮಂಡಳಿ, ಮುಖ್ಯ ಶಿಕ್ಷಕರು, ಬೋಧಕ-ಬೋಧಕೇತರ ವರ್ಗದವರು ಅಭಿನಂದನೆ ಸಲ್ಲಿಸಿರುತ್ತಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಗೋಕರ್ಣ: ಈಚಲ ಮರದಲ್ಲಿ ಮಾವಿನ ಹಣ್ಣು ಬಿಡುವುದಿಲ್ಲ. ಮಾವಿನ ಮರದಲ್ಲಿ ಬಿಟ್ಟ ಹಣ್ಣಿಗಷ್ಟೇ ಮಾವಿನ ಹಣ್ಣು ಎನ್ನುವುದು. ಹಾಗೆಯೇ ದೇಶೀ ಗೋವಿನ ಹಾಲಿನಿಂದ ತಯಾರಾದ ತುಪ್ಪಕ್ಕಷ್ಟೇ ತುಪ್ಪ ಎಂದು ಹೇಳಬಹುದು. ಮೂಲದಲ್ಲಿ ಗೋವು ಇಲ್ಲದ ಹಾಲು, ಮೊಸರು, ಬೆಣ್ಣೆ ಮತ್ತು ತುಪ್ಪಗಳು ನಕಲಿ ಎನಿಸಿಕೊಳ್ಳುತ್ತದೆ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು. ಅವರು ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ ನಡೆಯುತ್ತಿರುವ ‘ಅನ್ನಬ್ರಹ್ಮ ಚಾತುರ್ಮಾಸ್ಯ’ದ ಧರ್ಮಸಭೆಯಲ್ಲಿ ‘ಅನ್ನಂ ಬ್ರಹ್ಮ’ ಮಾಲಿಕೆಯಲ್ಲಿ ತುಪ್ಪದ ಕುರಿತಾಗಿ ಪ್ರವಚನ ಅನುಗ್ರಹಿಸಿದ ಶ್ರೀಗಳು, ಉತ್ಕೃಷ್ಟ ಮೂಲದ್ರವ್ಯ ಹಾಗೂ ಸಮರ್ಪಕವಾದ ಸಂಸ್ಕಾರದಿಂದ ಮಾತ್ರ ಶ್ರೇಷ್ಠ ತುಪ್ಪ ಲಭ್ಯವಾಗುತ್ತದೆ. ಹಸು ಹಾಗೂ ಎಮ್ಮೆ ಹೇಗೆ ಬೇರೆಬೇರೆಯೋ, ದೇಶಿ ಗೋವು ಹಾಗೂ ಮಿಶ್ರತಳಿ ಹಸು ಕೂಡ ಅಷ್ಟೇ ವಿಭಿನ್ನ. ಅವುಗಳು ಇಂದಿನ ವೈಜ್ಞಾನಿಕ ಪದ್ಧತಿಯಲ್ಲಿಯೂ ಸಂಪೂರ್ಣ ಭಿನ್ನವಾಗಿ ಗುರುತಿಸಲ್ಪಟ್ಟಿದೆ. ಮಿಶ್ರತಳಿಯ ಹಸುಗಳು ಮಾನವನ ಹಸ್ತಕ್ಷೇಪದ ಕಾರಣದಿಂದ ಗುಣಗಳನ್ನೇ ಕಳೆದುಕೊಂಡಿದ್ದು, ಅವುಗಳಿಂದ ಪಡೆಯುವ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಮಳೆ ಕೈಕೊಟ್ಟ ಕಾರಣ ಬೀಕರ ಬರಗಾಲಕ್ಕೆ ತುತ್ತಾಗಿರುವ ಕುಂದಾಪುರ ತಾಲ್ಲೂಕನ್ನು ರಾಜ್ಯ ಸರ್ಕಾರ ಬರ ಪೀಡಿತ ತಾಲ್ಲೂಕು ಎಂದು ಘೋಷಣೆ ಮಾಡಬೇಕಾಗಿ ಎಂದು ತಾಲ್ಲೂಕು ರೈತ ಸಂಘದ ಅಧ್ಯಕ್ಷ ಕೆ. ವಿಕಾಸ್ ಹೆಗ್ಡೆ ಆಗ್ರಹಿಸಿದ್ದಾರೆ. ಈ ರಾಜ್ಯದಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗಿ ಅಣೆಕಟ್ಟುಗಳಲ್ಲಿ ನೀರಿನ ಒಳ ಹರಿವು ಕಡಿಮೆಯಾಗಿರುವ ಈ ಕಾಲಘಟ್ಟದಲ್ಲಿ ಕುಂದಾಪುರ ತಾಲ್ಲೂಕಿನಲ್ಲೂ ಕೂಡ ಮಳೆ ಕೊರತೆಯಿಂದ ಬೀಕರ ಬರಗಾಲ ಪರಿಸ್ಥಿತಿ ಉಂಟಾಗಿದೆ. ಈಗಾಗಲೇ ಬತ್ತದ ಕೃಷಿ ಸಂಪೂರ್ಣ ಹಾನಿಯಾಗಿದ್ದು, ಮಳೆ ಕೊರತೆಯಿಂದ ಇತರೆ ವಾಣಿಜ್ಯ ಬೆಳೆಗಳೂ ಕೂಡ ಮಳೆ ಕೊರತೆಯಿಂದ ಹಾನಿಗೆ ಒಳಗಾಗಿವೆ. ಇನ್ನು ಕುಂದಾಪುರ ತಾಲ್ಲೂಕಿನ ಜೀವನದಿಯಾದ ವರಾಹಿ ನದಿಗೆ ಮೂಲವಾದ ಮಾಣಿ ಜಲಾಶಯದಲ್ಲಿ ನೀರಿನ ಮಟ್ಟ ಗಣನೀಯ ಕಡಿಮೆಯಾಗಿದ್ದು ಈ ವರ್ಷ ವರಾಹಿ ನದಿ ನೀರು ನಂಬಿರುವ ನಗರಸಭೆ, ಪುರಸಭೆ ಮತ್ತು ಗ್ರಾಮ ಪಂಚಾಯತುಗಳಿಗೆ ಅತೀವ ಕುಡಿಯುವ ನೀರಿನ ತೊಂದರೆ ಜನವರಿ ತಿಂಗಳಲ್ಲೇ ತಲೆದೋರುವುದು ಖಂಡಿತ. ಅದರ ಜೊತೆ ವರಾಹಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ವಿಶ್ವ ಹಿರಿಯ ನಾಗರಿಕ ದಿನಾಚರಣೆ ಹಾಗೂ ಹಿರಿಯ ನಾಗರಿಕರ ರಾಜ್ಯ ಕ್ರಿಯಾ ಯೋಜನೆಯಡಿಯಲ್ಲಿ ವಿವಿಧ ಕಾರ್ಯಕ್ರಮ ಆಯೋಜನೆ ಕುರಿತು ಚರ್ಚಿಸುವ ಸಲುವಾಗಿ ಪೂರ್ವಭಾವಿ ಸಭೆಯು ನಗರದ ರಜತಾದ್ರಿಯ ಜಿಲ್ಲಾಧಿಕಾರಿಗಳ ಕಚೇರಿ ಸಂಕೀರ್ಣದ ಕೆಸ್ವಾನ್ ವೀಡಿಯೋ ಕಾನ್ಫರೆನ್ಸ್ ಸಭಾಂಗಣದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಪ್ರೇಮಮೂರ್ತಿ ಕೆ. ಅಧ್ಯಕ್ಷತೆಯಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಕಾರ್ಯಕ್ರಮವನ್ನು ಜಿಲ್ಲಾ ಮಟ್ಟದಲ್ಲಿ ಅಕ್ಟೋಬರ್ 1 ರಂದು ನಗರದ ಬನ್ನಂಜೆ ನಾರಾಯಣ ಗುರು ಸಭಾಭವನದಲ್ಲಿ ಬೆಳಗ್ಗೆ 10 ಗಂಟೆಗೆ ನಡೆಯಲಿದ್ದು, ಅಂದು ಬೆಳಗ್ಗೆ 9 ರಿಂದ ಹಿರಿಯ ನಾಗರಿಕರ ಆರೋಗ್ಯ ತಪಾಸಣಾ ಶಿಬಿರ ನಡೆಯಲಿದೆ ಎಂದರು. ಹಿರಿಯ ನಾಗರಿಕರ ದಿನಾಚರಣೆಯ ಅಂಗವಾಗಿ ಕ್ರೀಡೆ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳು ಸೆಪ್ಟೆಂಬರ್ 28 ರಂದು ಬೆಳಗ್ಗೆ 9 ರಿಂದ ಅಜ್ಜರಕಾಡಿನ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಕ್ರೀಡಾ ವಿಭಾಗದಲ್ಲಿ ಬಿರುಸಿನ ನಡಿಗೆ, ಬಕೆಟ್‌ಗೆ ಬಾಲ್ ಎಸೆಯುವುದು,…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು, ಕುಂದಾಪುರದ ಲಲಿತ ಕಲಾ ಸಂಘದ ವತಿಯಿಂದ ಉಡುಪಿಯ ರಾಷ್ಟ್ರಕವಿ ಗೋವಿಂದ ಪೈ ಸಂಶೋಧನಾ ಕೇಂದ್ರಕ್ಕೆ ಶೈಕ್ಷಣಿಕ ಭೇಟಿ ಆಯೋಜಿಸಲಾಯಿತು. ಕಾಲೇಜಿನ ಪ್ರಥಮ ಹಾಗೂ ದ್ವಿತೀಯ ವರ್ಷದ ಲಲಿತ ಕಲಾ ಸಂಘದ ವಿದ್ಯಾರ್ಥಿಗಳು ಈ ಭೇಟಿಯಲ್ಲಿ ಭಾಗವಹಿಸಿದ್ದರು. ಈ ಸಂದರ್ಭ ರಾಷ್ಟ್ರಕವಿ ಗೋವಿಂದ ಪೈ ಸಂಶೋಧನಾ ಕೇಂದ್ರದ ಆಡಳಿತಾಧಿಕಾರಿ ಡಾ. ಬಿ. ಜಗದೀಶ್ ಶೆಟ್ಟಿ ಅವರು ವಿದ್ಯಾರ್ಥಿಗಳಿಗೆ ಅಲ್ಲಿನ ಪಾರಂಪರಿಕ ಕಲೆ, ಇತಿಹಾಸ, ಸಂಸ್ಕೃತಿ ಹಾಗೂ ಪರಂಪರೆಯ ವೈಶಿಷ್ಟ್ಯಗಳ ಕುರಿತು ವಿವರವಾದ ಮಾಹಿತಿಯನ್ನು ನೀಡಿದರು. ಛಾಯಾಚಿತ್ರಗಳು, ಶಿಲೆಗಳು ಹಾಗೂ ಅಲ್ಲಿನ ವಿವಿಧ ಐತಿಹಾಸಿಕ ಮತ್ತು ಕಲಾತ್ಮಕ ಅಂಶಗಳ ಮೂಲಕ ವಿಷಯಗಳನ್ನು ವಿದ್ಯಾರ್ಥಿಗಳಿಗೆ ಸುಲಭವಾಗಿ ಅರ್ಥವಾಗುವ ರೀತಿಯಲ್ಲಿ ಪರಿಚಯಿಸಿದರು. ವಿದ್ಯಾರ್ಥಿಗಳು ಅಲ್ಲಿನ ವಿವಿಧ ಕಲಾಕೃತಿಗಳು, ಐತಿಹಾಸಿಕ ಕುರುಹುಗಳು ಹಾಗೂ ಪಾರಂಪರಿಕ ವಸ್ತುಗಳನ್ನು ವೀಕ್ಷಿಸುವ ಮೂಲಕ ನಮ್ಮ ನಾಡಿನ ಕಲೆ, ಸಂಸ್ಕೃತಿ ಮತ್ತು ಇತಿಹಾಸದ ಬಗ್ಗೆ ಹೆಚ್ಚಿನ ಅರಿವು ಪಡೆದುಕೊಂಡರು. ಈ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಉದ್ಯೋಗದ ಸ್ಥಳಗಳಲ್ಲಿ ಪ್ರತಿಯೊಬ್ಬ ಮಹಿಳೆಯೂ ಗೌರವಯುತವಾಗಿ, ಸುರಕ್ಷಿತವಾಗಿ ಹಾಗೂ ಯಾವುದೇ ರೀತಿಯ ಕಿರುಕುಳವಿಲ್ಲದೆ ಕೆಲಸ ಮಾಡುವ ಹಕ್ಕನ್ನು ಹೊಂದಿದ್ದಾಳೆ. ಮಹಿಳೆಯರ ಸುರಕ್ಷತೆ ಮತ್ತು ಘನತೆಯನ್ನು ಕಾಪಾಡುವ ನಿಟ್ಟಿನಲ್ಲಿ 2013ರಲ್ಲಿ ಭಾರತದಲ್ಲಿ ಪೋಷ್ ಕಾಯ್ದೆಯನ್ನು ಜಾರಿಗೆ ತರಲಾಗಿದೆ ಎಂದು ಮಂಗಳೂರಿನ ‘ಡೀಡ್ಸ್’ ಸಂಸ್ಥೆಯ ನಿರ್ದೇಶಕಿ ಮರ್ಲಿನ್ ಮಾರ್ಟಿಸ್ ಹೇಳಿದರು. ಅವರು ಆಳ್ವಾಸ್ ಪದವಿ ಪೂರ್ವ ಕಾಲೇಜಿನ ಆಂತರಿಕ ಸಮಿತಿ ಆಯೋಜಿಸಿದ್ದ ‘ದುಡಿಯುವ ಸ್ಥಳಗಳಲ್ಲಿ ಮಹಿಳೆಯರ ಲೈಂಗಿಕ ದೌರ್ಜನ್ಯ ತಡೆ’ ಕುರಿತ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದರು. ಕೆಲಸದ ಸ್ಥಳದಲ್ಲಿ ಮಹಿಳೆಯರಿಗೆ ಎದುರಾಗುವ ಲೈಂಗಿಕ ಕಿರುಕುಳವನ್ನು ತಡೆಗಟ್ಟುವುದು ಕೇವಲ ಸಂಸ್ಥೆಯ ಜವಾಬ್ದಾರಿಯಲ್ಲ, ಪ್ರತಿಯೊಬ್ಬ ಉದ್ಯೋಗಿಯೂ ಈ ಕುರಿತು ಅರಿವು ಹೊಂದಿರಬೇಕು. ಲೈಂಗಿಕ ಕಿರುಕುಳಕ್ಕೆ ಒಳಗಾದ ಸಂದರ್ಭದಲ್ಲಿ ಭಯ ಅಥವಾ ಮುಜುಗರಕ್ಕೆ ಒಳಗಾಗದೆ, ತಕ್ಷಣವೇ ಸಂಬಂಧಪಟ್ಟವರಿಗೆ ದೂರು ನೀಡಬೇಕು. ದೂರು ನೀಡುವ ವ್ಯವಸ್ಥೆ, ಸಂತ್ರಸ್ತೆಯ ಗೌಪ್ಯತೆ ಹಾಗೂ ಆಂತರಿಕ ಸಮಿತಿಯ ಜವಾಬ್ದಾರಿಗಳ ಕುರಿತು ಪ್ರತಿಯೊಬ್ಬರೂ ತಿಳಿದುಕೊಳ್ಳುವುದು ಅಗತ್ಯ ಎಂದು ತಿಳಿಸಿದರು. ಹತ್ತಕ್ಕಿಂತ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಡುಪಿ ಇವರ ಜಂಟಿ ಆಶ್ರಯದಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟವನ್ನು ಶಾಸಕ ಯಶ್‌ಪಾಲ್ ಎ ಸುವರ್ಣ ರವಿವಾರ ಅಜ್ಜರಕಾಡು ಮಹಾತ್ಮಾ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕ್ರೀಡೆಗಳು ಕ್ರೀಡಾಪಟುಗಳ ಭವಿಷ್ಯಕ್ಕೆ ಭದ್ರ ಬುನಾದಿಯಾಗಬೇಕು. ಕ್ರೀಡಾಕೂಟಗಳು ಕ್ರೀಡಾಪಟುಗಳಿಗೆ ತಮ್ಮ ಪ್ರತಿಭೆ ಪ್ರದರ್ಶಿಸಲು ಉತ್ತಮ ವೇದಿಕೆಯಾಗಿದ್ದು, ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳುವಂತೆ ತಿಳಿಸಿದರು. ಕ್ರೀಡೆಯು ವಿದ್ಯಾರ್ಥಿಗಳಲ್ಲಿ ಶಿಸ್ತು, ಸಮಯಪ್ರಜ್ಞೆ, ಆತ್ಮವಿಶ್ವಾಸ ಹಾಗೂ ಸ್ಪರ್ಧಾತ್ಮಕ ಮನೋಭಾವ ಬೆಳೆಸುತ್ತದೆ. ಆರೋಗ್ಯಕರ ಜೀವನಶೈಲಿಗೂ ಕ್ರೀಡೆ ಸಹಕಾರಿಯಾಗಿದೆ. ವಿದ್ಯಾರ್ಥಿಗಳು ಕ್ರೀಡೆಗಳಲ್ಲಿ ಸಕ್ರಿಯವಾಗಿ ಭಾಗವಹಿಸಬೇಕು ಎಂದ ಅವರು, ಕ್ರೀಡಾಕೂಟಗಳಲ್ಲಿ ಕ್ರೀಡಾಪಟುಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿ ಜಿಲ್ಲೆಗೆ ಕೀರ್ತಿ ತರಬೇಕೆಂದು ಶಾಸಕರು ಶುಭ ಹಾರೈಸಿದರು. ಕರಾವಳಿ ಅಭಿವೃದ್ಧಿ ಮಂಡಳಿ ಅಧ್ಯಕ್ಷರಾದ ಎಂ.ಎ ಗಪೂರ್ ಮಾತನಾಡಿ, ಕ್ರೀಡೆಯಲ್ಲಿ ಸೋಲು- ಗೆಲುವಿಗಿಂತ ಮುಖ್ಯವಾಗಿ ಕ್ರೀಡಾಭಿಮಾನದಿಂದ ಪಾಲ್ಗೊಳ್ಳಬೇಕು. ಹೆಚ್ಚಿನ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಸಿಬ್ಬಂದಿ ಕ್ಷೇಮಪಾಲನಾ ಸಮಿತಿ ಆಶ್ರಯದಲ್ಲಿ ಸೆಪ್ಟೆಂಬರ್ 17,18 ಮತ್ತು 19ರಂದು ಕಾಲೇಜಿನ ಮೂಕಾಂಬಿಕಾ ಸಭಾಂಗಣದಲ್ಲಿ ಸಿಬ್ಬಂದಿಗಳಿಗೆ ಉಡುಪಿಯ ಹಾರ್ಟ್ಫುಲ್ನೆಸ್ ಸಂಸ್ಥೆಯವರು ಧ್ಯಾನದ ಕುರಿತು ಕಾರ್ಯಗಾರ ನಡೆಸಿದರು. ಉಡುಪಿಯ ಹಾರ್ಟ್ಫುಲ್ನೆಸ್ ಸಂಸ್ಥೆಯ ತರಬೇತುದರಾದ ವಿವೇಕಾನಂದ ಪೈ ಅವರು ಮೂರು ದಿನದ ತರಬೇತಿ ಕಾರ್ಯಗಾರವನ್ನು ನಡೆಸಿಕೊಟ್ಟರು. ಪ್ರಾಂಶುಪಾಲರಾದ ಡಾ. ಕೆ. ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭ ಹಾರ್ಟ್ಫುಲ್ನೆಸ್ ನ ತರಬೇತುದಾರ, ನಿವೃತ್ತ ಸರ್ಜನ್ ಡಾ. ಸುರೇಶ್ ಬಾಳಿಗ ಹಾಗೂ ಹಾರ್ಟ್ಫುಲ್ನೆಸ್ ನ ಸದಸ್ಯ ಪ್ರಭಾಕಿರಣ್ ಕೆ. ಶೆಟ್ಟಿ ಉಪಸ್ಥಿತರಿದ್ದರು. ಉಪ-ಪ್ರಾಂಶುಪಾಲ ಡಾ. ಚೇತನ್ ಶೆಟ್ಟಿ ಕೋವಾಡಿ ಹಾಗೂ ವಾಣಿಜ್ಯ ವಿಭಾಗದ ಸಹಾಯಕ ಪ್ರಾಧ್ಯಾಪಕಿ ತನುಜಾ ಮೂರು ದಿನದ ತರಬೇತಿಯ ಕುರಿತು ಅನುಭವ ಹಂಚಿಕೊಂಡರು. ಸಿಬ್ಬಂದಿ ಕ್ಷೇಮಪಾಲನಾ ಸಮಿತಿಯ ಕಾರ್ಯದರ್ಶಿ ಮಹೇಶ್ ನಾಯ್ಕ್ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.
