ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ವಿದ್ಯಾರ್ಥಿಗಳಿಗೆ ಸ್ಪಷ್ಟವಾದ ಗುರಿ ಇರಬೇಕು. ಸ್ಪಷ್ಟತೆ ಇದ್ದಾಗ ಮಾತ್ರ ಗುರಿ ತಲುಪಲು ಸಾಧ್ಯವಾಗುತ್ತದೆ ಎಂದು ವಿಧಾನ ಪರಿಷತ್ ಸದಸ್ಯರಾದ ಮಂಜುನಾಥ ಭಂಡಾರಿ ಹೇಳಿದರು. ಅವರು ಶುಕ್ರವಾರ ಇಲ್ಲಿನ ಯಡಾಡಿ ಮತ್ಯಾಡಿಯಲ್ಲಿರುವ ಸುಜ್ಞಾನ ಪದವಿ ಪೂರ್ವ ಕಾಲೇಜಿನ ʼಕಂಪ್ಯೂಟರ್ ಲ್ಯಾಬ್ʼ ಉದ್ಘಾಟಿಸಿ ಮಾತನಾಡಿದರು. ಅತ್ಯುತ್ತಮ ವಿದ್ಯಾರ್ಥಿಯಾಗಬೇಕು ಎಂಬ ಛಲ ಇಟ್ಟುಕೊಳ್ಳಿ; ನಿಮ್ಮ ತಂದೆ-ತಾಯಿಗೆ ಒಳ್ಳೆಯ ಮಕ್ಕಳಾಗಿ; ಶಾಲೆಗೆ ಕೀರ್ತಿ ತರುವಂಥ ವಿದ್ಯಾರ್ಥಿಗಳಾಗಿ; ಹಾಗೆಯೇ ದೇಶದ ಉತ್ತಮ ಪ್ರಜೆಗಳಾಗಿ ಎಂದು ಕಿವಿಮಾತು ನುಡಿದರು. ಸುಜ್ಞಾನ ಎಜುಕೇಶನಲ್ ಟ್ರಸ್ಟ್ ನ ಅಧ್ಯಕ್ಷರಾದ ಡಾ. ರಮೇಶ್ ಶೆಟ್ಟಿ ಮಾತನಾಡಿ, “ವಿದ್ಯಾರ್ಥಿಗಳು ಈ ಕಂಪ್ಯೂಟರ್ ಲ್ಯಾಬ್‌ನ ಸದುಪಯೋಗಪಡಿಸಿಕೊಂಡು ಉತ್ತಮವಾದ ಭವಿಷ್ಯ ಕಟ್ಟಿಕೊಳ್ಳಬೇಕು ಎಂದು ಆಶಿಸಿದರು. ವೇದಿಕೆಯಲ್ಲಿ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಕಾನ್ಮಕ್ಕಿ ಹರಿಪ್ರಸಾದ್ ಶೆಟ್ಟಿ , ಟಿ.ಎ.ಪಿ.ಎಂ.ಎಸ್ ನ ಉಪಾಧ್ಯಕ್ಷ ಶರತ್ ಶೆಟ್ಟಿ, ಅಂಪಾರು ಕೋ ಅಪರೇಟಿವ್ ಸೊಸೈಟಿಯ ಅಧ್ಯಕ್ಷ ಪ್ರದೀಪ್ ಶೆಟ್ಟಿ, ನಿರಮಯಾ ಕೋ ಅಪರೇಟಿವ್ ಸೊಸೈಟಿಯ ಅಧ್ಯಕ್ಷ ಉದಯ್ ಕುಮಾರ್…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಶಂಕರನಾರಾಯಣ: ಗುರು ಅಬಾಕಸ್ ಮತ್ತು ವೇದಿಕ್ ಮಾಥ್ಸ್ ಸೆಂಟರ್ ಪುಣೆ, ಮಹಾರಾಷ್ಟ್ರ ಇದರ ವತಿಯಿಂದ ಇತ್ತೀಚೆಗೆ ಆಯೋಜಿಸಲಾದ ಅಂತರಾಷ್ಟ್ರೀಯ ಮಟ್ಟದ ವೇದಿಕ್ ಮಾಥ್ಸ್ ಪರೀಕ್ಷೆಯಲ್ಲಿ ಇಲ್ಲಿನ ಮದರ್ ತೆರೇಸಾ ಶಾಲೆಯ 7ನೇ ತರಗತಿಯ ಪ್ರತಿಭಾವಂತ ವಿದ್ಯಾರ್ಥಿಯಾದ ಸುಹಾಸ್ ವಿ. ಭಟ್ ಅವರಿಗೆ ಬೆಳ್ಳಿಯ ಪದಕ ಲಭಿಸಿದೆ. ಹಾಗೆಯೇ 7ನೇ ತರಗತಿಯ ಸೃಜನ್ ಅವರಿಗೆ ಕಂಚಿನ ಪದಕ ದೊರಕಿದೆ. ಸಾಧಕ ವಿದ್ಯಾರ್ಥಿಗಳಿಗೆ ಶಾಲಾ ಆಡಳಿತ ಮಂಡಳಿ, ಬೋಧಕ ಬೋಧಕೇತರ ವೃಂದದವರು ಅಭಿನಂದಿಸಿ ಉಜ್ವಲ ಭವಿಷ್ಯ ಹಾರೈಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಕೇಂದ್ರ ಸರ್ಕಾರದ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯದ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಭವಿಷ್ಯನಿಧಿ ಸಂಸ್ಥೆಯು, ಉದ್ಯೋಗಿಗಳಿಗೆ ನಿವೃತ್ತಿ ನಂತರ ಆರ್ಥಿಕ ಭದ್ರತೆ ಒದಗಿಸಲಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್ ಹೇಳಿದರು. ಅವರು ಶುಕ್ರವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಗ್ರಾಮ ಪಂಚಾಯತ್ ಸಿಬ್ಬಂದಿಗಳಾದ ಕ್ಲರ್ಕ್, ಕ್ಲರ್ಕ್ ಕಂ ಡಿಇಓ, ಕರವಸೂಲಿಗಾರ, ಪಂಪುಚಾಲಕ, ಜವಾನ, ಸ್ವಚ್ಛತಾಗಾರ ಹಾಗೂ ಗ್ರಂಥಾಲಯ ಮೇಲ್ವಿಚಾರಕರುಗಳಿಗೆ ಇ.ಎಸ್.ಐ ಮತ್ತು ಇ.ಪಿ.ಎಫ್ ಸೌಲಭ್ಯದ ಬಗ್ಗೆ ನಡೆದ ಮಾಹಿತಿ ಕಾರ್ಯಾಗಾರದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕೇಂದ್ರ ಹಾಗೂ ರಾಜ್ಯ ಸರ್ಕಾರ ಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿರುವ ಪ್ರತಿಯೊಬ್ಬ ನೌಕರರಿಗೆ ಆರ್ಥಿಕ ಸೌಲಭ್ಯವನ್ನು ವಿವಿಧ ಯೋಜನೆಗಳು ಹಾಗೂ ಕಾರ್ಯಕ್ರಮಗಳ ಮೂಲಕ ನೆರವನ್ನು ಒದಗಿಸುತ್ತಿದೆ. ಇದರ ಲಾಭವನ್ನು ಪ್ರತಿಯೊಬ್ಬರೂ ಹೊಂದುವುದರೊಂದಿಗೆ ಆರ್ಥಿಕವಾಗಿ ಸಬಲರಾಗಬೇಕು ಎಂದರು. ನೌಕರರ ಭವಿಷ್ಯನಿಧಿ ಯೋಜನೆಯಲ್ಲಿ ಮುಂಗಡ ಪಡೆಯುವ ನಿಯಮಗಳಲ್ಲಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಮಂಗಳೂರು ಇದರ ತೆಕ್ಕಟ್ಟೆ ಶಾಖೆಯ ನೇತೃತ್ವದಲ್ಲಿ NABARD ಸಹಾಯದೊಂದಿಗೆ ಗ್ರಾಹಕರಿಗೆ ಸಹಕಾರಿ ಸಾಕ್ಷರತಾ ಶಿಬಿರ ತೆಕ್ಕಟ್ಟೆ ಶಾಖಾ ವಠಾರದಲ್ಲಿ ನಡೆಯಿತು, ತೆಕ್ಕಟ್ಟೆ ಗ್ರಾಮಪಂಚಾಯತ್ ಅಭಿವೃದ್ಧಿ ಅಧಿಕಾರಿ ಸಂತೋಷ ಕುಮಾರ ಅಧ್ಯಕ್ಷತೆ ವಹಿಸಿ, ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಗ್ರಾಮೀಣ ಭಾಗಗಳಲ್ಲಿ ತನ್ನ ಶಾಖೆಗಳನ್ನು ತರೆಯುವುದರ ಮೂಲಕ ಗ್ರಾಮೀಣ ಜನರ ಆರ್ಥಿಕ ಅವಶ್ಯಕತೆಗಳನ್ನು ಇಡೇರಿಸಿರುವುದಲ್ಲದೇ, ತೆಕ್ಕಟ್ಟೆ ವ್ಯಾಪ್ತಿಯ ಗ್ರಾಹಕರಿಗೆ ಸಹಕಾರಿ ಸಾಕ್ಷರತೆ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮವನ್ನು ಹಮ್ಮಿಕೊಂಡಿರುವ ಬಗ್ಗೆ ತೆಕ್ಕಟ್ಟೆ ಶಾಖೆಯ ಶಾಖಾ ವ್ಯವಸ್ಥಾಪಕರು ಮತ್ತು ಸಿಬ್ಬಂದಿ ವರ್ಗದವರಿಗೆ ಈ ಸಂದರ್ಭದಲ್ಲಿ ತೆಕ್ಕಟ್ಟೆ ಗ್ರಾಮ ಪಂಚಾಯತ ಪರವಾಗಿ ಕೃತಜ್ಞತೆ ಸಲ್ಲಿಸಿದರು. ಎಸ್‌ಸಿಡಿಸಿಸಿ ಕುಂದಾಪುರ ಶಾಖಾ ವ್ಯವಸ್ಥಾಪಕರಾದ ಪ್ರವೀಣ ಶೆಟ್ಟಿ ಎಚ್.ಕೆ. ಹಾಗೂ ಉಪ್ಪುಂದ ಶಾಖೆಯ ಶಾಖಾ ವ್ಯವಸ್ಥಾಪಕರಾದ ಶಂಕರ ಶೆಟ್ಟಿ ಇವರು ತಮ್ಮ ಬ್ಯಾಂಕಿನಲ್ಲಿ ಸಿಗುವ ವಿವಿದ ಸೌಲಭ್ಯಗಳ ಬಗ್ಗೆ ಗ್ರಾಹಕರಿಗೆ ಮನವರಿಕೆ ಮಾಡಿದರು. ಸಂಪನ್ಮೂಲ ವ್ಯಕ್ತಿ ಆಶಾರವರು ಕೇಂದ್ರ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಬೈಂದೂರು ಉತ್ಸವ ಆಯೋಜನೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಅವರ ಅಧ್ಯಕ್ಷತೆಯಲ್ಲಿ ಶಾಸಕರಾದ ಗುರುರಾಜ್ ಗಂಟೆಹೊಳೆ ಅವರ ನೇತೃತ್ವದಲ್ಲಿ ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ವಿವಿಧ ಇಲಾಖೆ ಅಧಿಕಾರಿಗಳ ಮಹತ್ವದ ಸಭೆ ನಡೆಯಿತು. ಬೈಂದೂರು ಉತ್ಸವ ಕಾರ್ಯಕ್ರಮದಲ್ಲಿ ಸರಕಾರದ ಯೋಜನೆಗಳು ಹಾಗೂ ಕಾರ್ಯಕ್ರಮಗಳ ಮಾಹಿತಿಯನ್ನು ಪ್ರದರ್ಶಿಸುವುದರೊಂದಿಗೆ, ಗ್ರಾಮೀಣ ಭಾಗದ ಜನರಿಗೂ ಹಾಗೂ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಯೋಜನೆಯ ಲಾಭ ದೊರಕುವಂತಾಗಬೇಕು. ಬೈಂದೂರು ಉತ್ಸವವು ಜನವರಿ 24 ರಿಂದ 26 ರ ವರೆಗೆ ಬೈಂದೂರಿನಲ್ಲಿ ನಡೆಯಲಿದೆ. ಉತ್ಸವದಲ್ಲಿ ಕೇಂದ್ರ ಹಾಗೂ ರಾಜ್ಯ ಸರಕಾರದ ಜನಪರ ಕಾರ್ಯಕ್ರಮಗಳ ಮಾಹಿತಿಯನ್ನು ಅಚ್ಚುಕಟ್ಟಾಗಿ ಪ್ರದರ್ಶಿಸಿ, ಜನಸಾಮಾನ್ಯರಿಗೆ ತಲುಪುವಂತೆ ಮಾಡುವುದು ಇಲಾಖೆಗಳ ಜವಾಬ್ದಾರಿಯಾಗಿದೆ. ಗ್ರಾಮಾಂತರ ಪ್ರದೇಶಗಳಲ್ಲಿ ಉದ್ಯೋಗ ಸೃಷ್ಠಿಸುತ್ತಿರುವ ಸಂಜೀವಿನಿ ಸಂಘದ ಸದಸ್ಯರು ತಯಾರಿಸಿದ ಉತ್ಪನ್ನಗಳ ಪ್ರದರ್ಶನ ಹಾಗೂ ಮಾರಾಟ ಮೇಳಗಳು ಉತ್ಸವದಲ್ಲಿ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ. ತಿಳಿಸಿದರು. ಕ್ಷೇತ್ರ ವ್ಯಾಪ್ತಿಯ ಪ್ರತೀ 43 ಗ್ರಾಮ ಪಂಚಾಯತ್‌ಗಳಲ್ಲಿ ಗ್ರಾಮೋತ್ಸವ ಕಾರ್ಯಕ್ರಮವನ್ನು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಎಂಐಟಿ ಕುಂದಾಪುರದ ಇನ್ಫಾರ್ಮೇಶನ್ ಸೈನ್ಸ್ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿಗಳು ಇತ್ತೀಚೆಗೆ ಬೆಂಗಳೂರಿನ ನ್ಯೂ ಹೊರಿಜಾನ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ನಡೆದ ರಾಜ್ಯ ಮಟ್ಟದ ಐಡಿಯಾಥಾನ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿ ಕಾಲೇಜಿನ ಗೌರವವನ್ನು ಹೆಚ್ಚಿಸುತ್ತಾರೆ. ಆರ್. ನವೀನ್ ಪಾಟಿಲ್, ನೇತ್ರಾವತಿ, ಯಶಸ್ವಿನಿ, ನಿಹಾರಿಕಾ, ಮೇಘಶ್ರೀ ಮತ್ತು ಶಶಾಂಕ್ ಒಳಗೊಂಡ ತಂಡವು ತಮ್ಮ ಸೃಜನಶೀಲ ಚಿಂತನೆ, ನವೀನ ಕಲ್ಪನೆ ಹಾಗೂ ತಾಂತ್ರಿಕ ನೈಪುಣ್ಯದಿಂದ ತೀರ್ಪುಗಾರರನ್ನು ಮೆಚ್ಚಿಸಿ, ₹5000 ದೊಂದಿಗೆ ಪ್ರಥಮ ಬಹುಮಾನವನ್ನು ತಮ್ಮದಾಗಿಸಿಕೊಂಡಿದೆ. ವಿಭಾಗದ ಮುಖ್ಯಸ್ಥರಾದ ಡಾ. ಜೇ. ಪ್ರಕಾಶ ಅವರ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳು ಪಟ್ಟ ಶ್ರಮದಿಂದ ಈ ಸಾಧನೆ ಸಾಧ್ಯವಾಗಿದೆ. ಕಾಲೇಜಿನ ಆಡಳಿತ ಮಂಡಳಿ ಹಾಗೂ ಪ್ರಾಂಶುಪಾಲರು ಈ ಸಾಧನೆಗೆ ವಿದ್ಯಾರ್ಥಿಗಳನ್ನು ಮತ್ತು ಸಹಕಾರ ನೀಡಿದ ಎಲ್ಲ ಪ್ರಾಧ್ಯಾಪಕರನ್ನು ಅಭಿನಂದಿಸಿರುತ್ತಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಏಕತೆಯಲ್ಲಿ ಬಲವಿದೆ. ಏಕತೆಯಲ್ಲಿ ಬದುಕಿನ ಸಾರ್ಥಕತೆ ಇದೆ ಎಂದು ಎ.ಎಸ್. ಭಂಡಾರ್ಕರ್ ಅವರು ಮೊಮ್ಮಗಳು ಡಾ. ಗಾಯತ್ರಿ ಭಂಡಾರ್ಕರ್ ಮತ್ತು ಅಮೇರಿಕಾದಲ್ಲಿ ಚರ್ಮರೋಗ ವೈದ್ಯರಾಗಿರುವ ಡಾ. ಸುಲೋಚನಾ ಹೇಳಿದರು. ಅವರು ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಶುಕ್ರವಾರದಂದು ನಡೆದ ಸಂಸ್ಥಾಪಕರ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಇವರೀರ್ವರು ಜೊತೆಯಲ್ಲಿ ಮಾತನಾಡಿದರು. ಪರರ ಕುರಿತು ಟೀಕೆ ಮಾಡುವುದು, ಹೋಲಿಕೆ ಮಾಡುವುದು ಹಾಗು ದೂರು ಹೇಳುವುದು ಈ ಮೂರು ಅನಗತ್ಯ ಯೋಚನೆಗಳನ್ನು ತೊಡೆದುಹಾಕಿ ಏಕತೆಯ ಬೀಜವನ್ನು ನೆಟ್ಟು ಬೆಳೆಯೋಣ. ಇನ್ನೊಬ್ಬರ ಬದುಕಿನ ಯಶಸ್ಸು ಮತ್ತು ಸಂತೋಷ ನಾವು ಪಾಲ್ಗೊಳ್ಳುವಿಕೆಯಲ್ಲಿ ಶಕ್ತಿ ಇದೆ. ಪರಸ್ಪರ ಜೊತೆಯಲ್ಲಿ ಏಕತೆಯ ಕುರಿತು ಯೋಚಿಸೋಣ ಎಂದು ಕರೆ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಪರಮಪೂಜ್ಯ ಶಾಂತಾರಾಮ್ ಭಂಡಾರ್ಕಾರ್ ಮಾತನಾಡಿ, ದೇವರ ಭಯವೇ ಜ್ಞಾನದ ಮೂಲ. ಜ್ಞಾನದ ಜೊತೆಗೆ ಒಳ್ಳೆಯದನ್ನು ಯೋಚಿಸಬೇಕು ಎಂದು ಹೇಳಿದರು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಅಕಾಡೆಮಿ ಆಫ್ ಜನರಲ್…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕಾಲೇಜು ಆರಂಭಗೊಂಡ ದಿನಗಳಿಂದಲೂ ಕ್ರೀಡೆಗೆ ನಿರಂತರ ಪ್ರೋತ್ಸಾಹ ನೀಡಲಾಗುತ್ತಿದೆ. ವಿದ್ಯಾರ್ಥಿಗಳು ಕ್ರೀಡೆಯಲ್ಲಿ ವಿಶ್ವವಿದ್ಯಾನಿಲಯ ಮಟ್ಟದಲ್ಲಿ ತಮ್ಮ ಛಾಪನ್ನು ಮೂಡಿಸಿದ್ದಾರೆ. ದೈಹಿಕ ಸದೃಢತೆಯೊಂದಿಗೆ ಮಾನಸಿಕ ಸದೃಢತೆಗೆ ಕ್ರೀಡಾ ಚಟುವಟಿಕೆಗಳು ಸಹಕಾರಿ ಎಂದು ಕುಂದಾಪುರ ಎಜ್ಯುಕೇಶನ್ ಸೊಸೈಟಿಯ ಅಧ್ಯಕ್ಷರಾದ ಬಿ. ಎಮ್. ಸುಕುಮಾರ್ ಶೆಟ್ಟಿ ಹೇಳಿದರು. ಅವರು ಕುಂದಾಪುರದ ಗಾಂಧಿ ಮೈದಾನದಲ್ಲಿ ನಡೆದ ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾರ್ಷಿಕ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದರು. ಕುಂದಾಪುರ ಎಜ್ಯುಕೇಶನ್ ಸೊಸೈಟಿಯ ಕಾರ್ಯದರ್ಶಿಗಳಾದ ಸೀತಾರಾಮ ನಕ್ಕತ್ತಾಯ ಶುಭ ಹಾರೈಸಿದರು. ದೈಹಿಕ ಶಿಕ್ಷಣ ನಿರ್ದೇಶಕ ರಂಜಿತ್ ಟಿ. ಎನ್. ಉಪಸ್ಥಿತರಿದ್ದರು. ಪ್ರಾಂಶುಪಾಲ ಡಾ. ಕೆ. ಉಮೇಶ್ ಶೆಟ್ಟಿ ಪ್ರಸ್ತಾವಿಸಿ, ಕ್ರೀಡಾ ಕಾರ್ಯದರ್ಶಿ ಆರ್ಯ ಪುತ್ರನ್ ಕ್ರೀಡಾ ಪ್ರತಿಜ್ಞಾವಿಧಿ ಬೋಧಿಸಿದರು. ವಿದ್ಯಾರ್ಥಿ ಶ್ರೀಶಾಂತ್ ಪ್ರಾರ್ಥಿಸಿದರು. ಪೃಥ್ವಿಶ್ರೀ ಜಿ. ಶೆಟ್ಟಿ ಕಾರ್ಯಕ್ರಮ ನಿರೂಪಿಸಿ, ಉಪ-ಪ್ರಾಂಶುಪಾಲ ಡಾ| ಚೇತನ್ ಶೆಟ್ಟಿ ಕೋವಾಡಿ ಸ್ವಾಗತಿಸಿ, ವಾಣಿಜ್ಯ ವಿಭಾಗದ ಸಹಾಯಕ ಪ್ರಾಧ್ಯಾಪಕ ಯೋಗೀಶ್ ಶ್ಯಾನುಭೋಗ್ ವಂದಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ರಾಜ್ಯದ ಅಲ್ಪಸಂಖ್ಯಾತರ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಪಾರ್ಸಿ ಹಾಗೂ ಸಿಖ್ ಸಮುದಾಯದ 1 ರಿಂದ 8 ನೇ ತರಗತಿವರೆಗಿನ ವಿದ್ಯಾರ್ಥಿಗಳಿಂದ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನ ಯೋಜನೆಯ ಸೌಲಭ್ಯ ಪಡೆಯಲು ರಾಜ್ಯ ವಿದ್ಯಾರ್ಥಿವೇತನ ಪೋರ್ಟಲ್ – ಎಸ್.ಎಸ್.ಪಿ ತಂತ್ರಾಂಶ https://ssp.postmatric.karnataka.gov.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು 2026 ರ ಜನವರಿ 31 ರ ವರೆಗೆ ವಿಸ್ತರಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಸಹಾಯವಾಣಿ ಸಂಖ್ಯೆ: 8277799990 ಅಥವಾ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಮೌಲಾನಾ ಆಜಾದ್ ಭವನ, ಅಲೆವೂರು ರಸ್ತೆ, ಮಣಿಪಾಲ ದೂ.ಸಂಖ್ಯೆ: 0820-2573596, ಜಿಲ್ಲಾ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ, ನೆಲ ಮಹಡಿ, ಮೌಲಾನಾ ಅಜಾದ್ ಭವನ, ಅಲೆವೂರು ರಸ್ತೆ, ಶಿವಳ್ಳಿ ಗ್ರಾಮ, ಮಣಿಪಾಲ, ದೂರವಾಣಿ ಸಂಖ್ಯೆ: 0820-2574596 ಅಥವಾ ಕಾರ್ಕಳ ದೂರವಾಣಿ ಸಂಖ್ಯೆ: 08258-231101 ಹಾಗೂ ಕುಂದಾಪುರ ದೂರವಾಣಿ ಸಂಖ್ಯೆ: 08254-230370…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕರಾವಳಿಯ ವಿಶಿಷ್ಟ, ವಿಶೇಷ ಪರಂಪರೆ ಉಪ್ಪಿನಕುದ್ರು ಗೊಂಬೆಯಾಟ ರಂಗಭೂಮಿಯ ಹರಿಕಾರ, ಸೂತ್ರ ಕ್ರೀಡೆಯ ಗಾರುಡಿಗ ಶ್ರೀ ಕೊಗ್ಗ ದೇವಣ್ಣ ಕಾಮತ್‌ರ ಹೆಸರಿನಲ್ಲಿ ನೀಡುವ 2025-26ರ ಸಾಲಿನ ಪ್ರಶಸ್ತಿಯನ್ನು ಹಿರಿಯ ಯಕ್ಷಗಾನ ಕಲಾವಿದ ಆರ್ಗೋಡು ಮೋಹನ್‌ದಾಸ್ ಶೆಣೈ ಅವರಿಗೆ ನೀಡಲು ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿ ಸಮಿತಿ ಆಯ್ಕೆ ಮಾಡಿದೆ. ದಿ. ಗೋವಿಂದರಾಯ ಶೆಣೈ ಹಾಗೂ ದಿ. ಮುಕ್ತಾ ಶೆಣೈ ಅವರ ಸುಪುತ್ರರಾಗಿ 1950 ಫೆಬ್ರವರಿ 10 ರಂದು ಜನಿಸಿದ ಅವರು ಶಂಕರನಾರಾಯಣ ಜೂನಿಯರ್ ಕಾಲೇಜಿನಲ್ಲಿ ಪಿ.ಯು.ಸಿ ತನಕ ವಿದ್ಯಾಭ್ಯಾಸ ಪಡೆದರು. ನಂತರ ಮೆ. ಬೈಲೂರು ರಾಮರಾಯ ಮಂಜುನಾಥ ಶ್ಯಾನುಭಾಗ್ ರಲ್ಲಿ ಬರ್ಮಾಶೆಲ್ ಡಿಪೋದಲ್ಲಿ ಕ್ಲರ್ಕ್ ಆಗಿ ಸೇರ್ಪಡೆಗೊಂಡರು. ಶ್ರೀಯುತರಿಗೆ ತಂದೆಯವರೇ ಯಕ್ಷಗಾನದ ಪ್ರಪ್ರಥಮ ಗುರುಗಳು. ನಂತರ ಹಿರಿಯಡಕ, ಪೆರ್ಡೂರು, ಮೂಲ್ಕಿ, ಸಾಲಿಗ್ರಾಮ, ಕಮಲಶಿಲೆ, ಮಂದರ್ತಿ, ಅಮೃತೇಶ್ವರಿ ಮೇಳಗಳಲ್ಲಿ ವೇಷಧಾರಿಗಳಾಗಿ ತಿರುಗಾಟ ನಡೆಸಿದರು. ಸುಧನ್ವ, ಶ್ರೀ ರಾಮ, ಕೃಷ್ಣ, ಜಾಂಬವ, ಕೌರವ, ದಶರಥ, ವಾಲಿ, ರಾವಣ, ನಾರದ, ಅಕ್ರೂರ, ಋತುಪರ್ಣ, ಬಾಹುಕ…
